Suvendu Adhikari: ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಆಯ್ಕೆ; ನಾಳೆಯೇ ಪ್ರಮಾಣವಚನ – Kannada News | Suvendu Adhikari selected as BJPs first Chief Minister in West Bengal Amit Shah Announces

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಐತಿಹಾಸಿಕ ಗೆಲುವಿನ ನಂತರ, ಸುವೇಂದು ಅಧಿಕಾರಿ ಅವರನ್ನು ರಾಜ್ಯದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಘೋಷಿಸಲಾಗಿದೆ. ಅವರು ನಾಳೆ (ಶನಿವಾರ) ಬೆಳಗ್ಗೆ 11 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅವರು ಮೊದಲು ನಂದಿಗ್ರಾಮದಲ್ಲಿ ಮತ್ತು ಈಗ ಭವಾನಿಪುರದಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು ಸೋಲಿಸಿ, ಬಂಗಾಳದಲ್ಲಿ ಬಿಜೆಪಿಯ ಅತ್ಯಂತ ಪ್ರಭಾವಿ ನಾಯಕನಾಗಿ ಹೊರಹೊಮ್ಮುವ ಮೂಲಕ ಟಿಎಂಸಿ ಸರ್ಕಾರಕ್ಕೆ ಸವಾಲು ಹಾಕಿದ್ದರು. Source link

Read More

ಮಲಬದ್ಧತೆಯನ್ನು ನಿರ್ಲಕ್ಷಿಸಬೇಡಿ: ಮೂಲವ್ಯಾಧಿ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು – Kannada News | Constipation And Gut Health: Hidden Complications You Need To Know

Constipation And Gut Health: Hidden Complications You Need To KnowImage Credit source: Getty Images ಮಲಬದ್ಧತೆ (Constipation) ಸಾಮಾನ್ಯ ಜೀರ್ಣಕ್ರಿಯೆಯ ಸಮಸ್ಯೆಯಾಗಿದ್ದರೂ, ದೀರ್ಘಕಾಲ ಮುಂದುವರಿದರೆ ಹಲವು ಆರೋಗ್ಯ ಸಮಸ್ಯೆಗೆ ಕಾರಣವಾಗಬಹುದು. ಮಲವಿಸರ್ಜನೆಗೆ ಕಷ್ಟವಾಗುವುದು, ಗಟ್ಟಿಯಾದ ಮಲ, ಹಲವು ದಿನಗಳವರೆಗೆ ಹೊಟ್ಟೆ ಸಂಪೂರ್ಣ ಖಾಲಿಯಾಗದಿರುವುದು ಇದರ ಪ್ರಮುಖ ಲಕ್ಷಣಗಳು. ಕಡಿಮೆ ಫೈಬರ್ ಇರುವ ಆಹಾರ, ನೀರು ಕಡಿಮೆ ಕುಡಿಯುವುದು, ವ್ಯಾಯಾಮದ ಕೊರತೆ ಮತ್ತು ಅನಾರೋಗ್ಯಕರ ಜೀವನಶೈಲಿ ಇದಕ್ಕೆ ಕಾರಣವಾಗಬಹುದು. ಹಾಗಾದರೆ ಮಲಬದ್ಧತೆಯಿಂದ ಉಂಟಾಗುವ ಸಮಸ್ಯೆಗಳು…

Read More

Breaking News Today Live: ವಿಧಾನ ಪರಿಷತ್‌ನ 7 ಸ್ಥಾನಗಳಿಗೆ ಇಂದು ಮತದಾನ: ಇಲ್ಲಿವೆ ಈ ಹೊತ್ತಿನ ಪ್ರಮುಖ ಸುದ್ದಿಗಳು

ರಾಜ್ಯ ವಿಧಾನಪರಿಷತ್​ನ 7 ಸ್ಥಾನಗಳಿಗೆ ಇಂದು ಮತದಾನ ನಡೆಯಲಿದ್ದು, ರಾಜಕೀಯ ಚಟುವಟಿಕೆ ತೀವ್ರಗೊಂಡಿದೆ. ಬಿಜೆಪಿಯ ಇಬ್ಬರು ಅಭ್ಯರ್ಥಿಗಳಿಗೆ ತಲಾ 29 ಮತ ನಿಗದಿಯಾಗಿದೆ. ಶಾಸಕರು ಬೆಳಗ್ಗೆ 8.30ಕ್ಕೆ ವಿಪಕ್ಷ ನಾಯಕ ಆರ್.ಅಶೋಕ್ ಕಚೇರಿಗೆ ಆಗಮಿಸಿ ಮತದಾನಕ್ಕೆ ತೆರಳಲಿದ್ದು, ಎನ್.ರವಿಕುಮಾರ್ ಚುನಾವಣಾ ಏಜೆಂಟ್ ಆಗಿದ್ದಾರೆ. ಜಾಗತಿಕವಾಗಿ, 110 ದಿನಗಳ ಸಂಘರ್ಷಕ್ಕೆ ಅಂತ್ಯ ಹಾಡಿ ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿವೆ. ಹಾರ್ಮುಜ್ ಜಲಸಂಧಿ ಮುಕ್ತವಾಗಿ ತೈಲ ಬೆಲೆ ಇಳಿಕೆಯಾಗುವ ನಿರೀಕ್ಷೆಯಿದ್ದು, ಅನುಷ್ಠಾನ ಪರೀಕ್ಷಿಸುವ ಸಮಯ ಎಂದು ಇರಾನ್…

Read More

ಬಜೆಟ್​ನಲ್ಲಿ ವಿತ್ತೀಯ ಶಿಸ್ತು ಕಾಯ್ದುಕೊಂಡು ಬಂಡವಾಳ ವೆಚ್ಚ ಹೆಚ್ಚಿಸಬಹುದು: ಜೆಎಂ ಫೈನಾನ್ಷಿಯಲ್ ನಿರೀಕ್ಷೆ – Kannada News | Capex growth along with fiscal discipline, Brokerage firm JM Financial expects from 2026 Budget

ನವದೆಹಲಿ, ಜನವರಿ 30: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಫೆಬ್ರುವರಿ 1ರಂದು ಪ್ರಸ್ತುತಪಡಿಸುತ್ತಿರುವ ಬಜೆಟ್ 2026-27 ಬಗ್ಗೆ ನಿರೀಕ್ಷೆಗಳು ಹಲವಿವೆ. ಮಾರುಕಟ್ಟೆಯ ಮೇಲೆ ಪ್ರಭಾವ ಬೀರುವ ಹೂಡಿಕೆದಾರರು ಈ ಬಜೆಟ್​ನಿಂದ ಏನು ನಿರೀಕ್ಷಿಸುತ್ತಾರೆ? ಆರ್ಥಿಕ ಬೆಳವಣಿಗೆಗೆ ನೀರೆರೆದು ಪೋಷಿಸಲು ಸರ್ಕಾರ ಯಾವ ಪ್ಲಾನ್ ಮಾಡಿದೆ? ವಿತ್ತೀಯ ಶಿಸ್ತು ಕಾಯ್ದುಕೊಳ್ಳುತ್ತಲೇ ಬಂಡವಾಳ ವೆಚ್ಚ ಹೆಚ್ಚಿಸಲು ಏನು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂಬುದು ಹೂಡಿಕೆದಾರರಿಗೆ ಇರುವ ಕುತೂಹಲ ಮತ್ತು ನಿರೀಕ್ಷೆ. ಕಳೆದ ಬಜೆಟ್​ನಲ್ಲಿ ಸರ್ಕಾರವು ಬಂಡವಾಳ ವೆಚ್ಚಕ್ಕಿಂತ ಅನುಭೋಗಕ್ಕೆ…

Read More

World Liver Day 2026: ಲಿವರ್‌ ಆರೋಗ್ಯಕರವಾಗಿರಬೇಕಂದ್ರೆ ತಪ್ಪದೇ ಈ ಆಹಾರಗಳನ್ನು ಸೇವನೆ ಮಾಡಲೇಬೇಕು – Kannada News | World Liver Day 2026: Know the history and significance of World Liver Day

ಯಕೃತ್ತು (Liver) ನಮ್ಮ ದೇಹದಲ್ಲಿನ ಒಂದು ಪ್ರಮುಖ ಅಂಗವಾಗಿದ್ದು, ಇದನ್ನು ದೇಹದ ಶಕ್ತಿಕೇಂದ್ರ ಎಂದೂ ಕರೆಯಲಾಗುತ್ತದೆ. ಇದು ದೇಹದಲ್ಲಿನ ವಿಷಕಾರಿ ವಸ್ತುಗಳನ್ನು ತೆಗೆದು ಹಾಕುವುದು, ರಕ್ತವನ್ನು ಶುದ್ಧೀಕರಿಸುವುದು, ಜೀರ್ಣಕ್ರಿಯೆಗೆ ಸಹಾಯ ಮಾಡುವುದು ಸೇರಿದಂತೆ ಅನೇಕ ಅಗತ್ಯ ಕಾರ್ಯಗಳನ್ನು ನಿರ್ವಹಿಸುವ ಮೂಲಕ ಇದು ನಮ್ಮ ದೇಹವು ಸರಿಯಾಗಿ ಕಾರ್ಯನಿರ್ವಹಿಸಲು ಸಹಾಯ ಮಾಡುತ್ತದೆ.  ಹಾಗಾಗಿ ಲಿವರ್‌ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ. ಆದರೆ ಇಂದಿನ ಕಳಪೆ ಜೀವನಶೈಲಿ, ಆನಾರೋಗ್ಯಕ ಆಹಾರ ಪದ್ಧತಿ ಯಕೃತ್ತಿನ ಆರೋಗ್ಯದ ಮೇಲೆ ಪ್ರತಿಕೂಲ…

Read More

Tv9 Kannada News Live: ಕಾರ್ಮಿಕರ ವೇತನ ಹೆಚ್ಚಳ, ತೆಲಂಗಾಣದಲ್ಲಿ ಉಷ್ಣ ಅಲೆ ಮತ್ತು ಚೇತನ್ ಅಹಿಂಸಾ ಹೇಳಿಕೆ ವಿವಾದ! ಇಲ್ಲಿವೆ ಈ ಹೊತ್ತಿನ ಪ್ರಮುಖ ಸುದ್ದಿಗಳು – Kannada News | Tv9 Kannada News Live: Karnataka Minimum Wage Hike, Telangana Heatwave Deaths and Actor Chetan Controversy

ಬೆಂಗಳೂರು, ಮೇ 24: ಕರ್ನಾಟಕದಲ್ಲಿ 81 ವಲಯಗಳ ಕಾರ್ಮಿಕರ ಕನಿಷ್ಠ ವೇತನವನ್ನು  (Minimum Wage) ಶೇ 60 ರಷ್ಟು ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ. ಮತ್ತೊಂದೆಡೆ, ನೆರೆರಾಜ್ಯ ತೆಲಂಗಾಣದಲ್ಲಿ ಭೀಕರ ಉಷ್ಣಗಾಳಿಗೆ 16 ಜನರು ಬಲಿಯಾಗಿದ್ದು ಹೈ ಅಲರ್ಟ್ ಘೋಷಿಸಲಾಗಿದೆ. ಇನ್ನು, ಬೆಂಗಳೂರಿನಲ್ಲಿ ನಟ ಚೇತನ್ ಅಹಿಂಸಾ ಅವರು ಡಾ. ರಾಜ್‌ಕುಮಾರ್ ಸಮಾಧಿ ಜಾಗದ ಕುರಿತು ತಾವು ನೀಡಿದ್ದ ವಿವಾದಾತ್ಮಕ ಹೇಳಿಕೆಯನ್ನು ಮತ್ತೊಮ್ಮೆ ಸಮರ್ಥಿಸಿಕೊಂಡು ಸುದ್ದಿಗೋಷ್ಠಿ ನಡೆಸಿದ್ದಾರೆ. ರಾಜ್ಯದ ಲಕ್ಷಾಂತರ ಕಾರ್ಮಿಕರಿಗೆ ಬಂಪರ್ ಕೊಡುಗೆ ಕರ್ನಾಟಕ ಸರ್ಕಾರವು 81…

Read More

ಭಾರತದಲ್ಲಿ ‘ಬಿಗ್ ಬ್ಯಾಷ್ ಲೀಗ್’

ಆಸ್ಟ್ರೇಲಿಯಾ ಕ್ರಿಕೆಟ್ ಬೋರ್ಡ್ ಆಯೋಜಿಸುವ ಟಿ20 ಟೂರ್ನಿ ಬಿಗ್ ಬ್ಯಾಷ್ ಲೀಗ್​ ಸೀಸನ್-16ರ ಮೊದಲ ಪಂದ್ಯವನ್ನು ಭಾರತದಲ್ಲಿ ಆಯೋಜಿಸಲು ಪ್ಲ್ಯಾನ್ ರೂಪಿಸಲಾಗುತ್ತಿದೆ. ಚೆನ್ನೈನ ಎಂ.ಎ. ಚಿದಂಬರಂ ಸ್ಟೇಡಿಯಂ (ಚೆಪಾಕ್) ಈ ಪಂದ್ಯಕ್ಕೆ ಅತಿಥ್ಯ ವಹಿಸುವ ಸಾಧ್ಯತೆಯಿದೆ. ಕ್ರಿಕೆಟ್ ಆಸ್ಟ್ರೇಲಿಯಾದ ಅಧಿಕಾರಿಗಳು ಈಗಾಗಲೇ ಚೆನ್ನೈಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ ಎಂದು ವರದಿಯಾಗಿದೆ. ಬಿಗ್ ಬ್ಯಾಷ್​ ಲೀಗ್​ ಪಂದ್ಯವನ್ನು ಭಾರತದಲ್ಲಿ ಆಯೋಜಿಸುತ್ತಿರುವುದೇಕೆ? ಆಸ್ಟ್ರೇಲಿಯಾ ಕ್ರಿಕೆಟ್ ಬೋರ್ಡ್​ ಕಳೆದ 15 ಸೀಸನ್​ಗಳನ್ನು ಆಸ್ಟ್ರೇಲಿಯಾದಲ್ಲೇ ಆಯೋಜಿಸಿದ್ದರು. ಇದೀಗ ಟೂರ್ನಿಯ ಉದ್ಘಾಟನಾ ಪಂದ್ಯವನ್ನು…

Read More

ರಶ್ಮಿಕಾ-ವಿಜಯ್ ದೇವರಕೊಂಡ ಮದುವೆ ಯಾವಾಗ? ಎಲ್ಲಿ? – Kannada News | Vijay Deverakonda and Rashmika Mandanna marrying in February at Jaipur

ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ವಿಜಯ್ ದೇವರಕೊಂಡ ಟಾಲಿವುಡ್​ನ ಯಶಸ್ವಿ ಜೋಡಿ. ಇಬ್ಬರೂ ಒಟ್ಟಿಗೆ ನಟಿಸಿರುವ ‘ಗೀತಾ ಗೋವಿಂದಂ’ ಸೂಪರ್ ಹಿಟ್ ಆದರೆ ‘ಡಿಯರ್ ಕಾಮ್ರೆಡ್’ ಸಹ ಯಶಸ್ವಿ ಆಗಿತ್ತು. ನಟಿಸಿದ ಮೊದಲ ಸಿನಿಮಾದಿಂದಲೂ ಈ ಜೋಡಿ ಆತ್ಮೀಯವಾಗಿತ್ತು. ಆರಂಭದಲ್ಲಿ ತಾವು ಒಳ್ಳೆಯ ಗೆಳೆಯರು ಎಂದು ಹೇಳಿಕೊಂಡಿದ್ದ ರಶ್ಮಿಕಾ ಮತ್ತು ವಿಜಯ್, ವರ್ಷಗಳು ಕಳೆದಂತೆ ಗೆಳೆತನವನ್ನು ಪ್ರೀತಿಯಾಗಿ ಬದಲಾಯಿಸಿಕೊಂಡಿದ್ದಾರೆ. ಕಳೆದ ಕೆಲ ವರ್ಷಗಳಿಂದ ಪರಸ್ಪರ ಪ್ರೀತಿಯಲ್ಲಿದ್ದಾರೆ ರಶ್ಮಿಕಾ ಮತ್ತು ವಿಜಯ್. ರಶ್ಮಿಕಾ ಅಂತೂ ಕಳೆದ ಕೆಲ…

Read More

Samudrika Shastra: ನಿಮ್ಮ ತೋರು ಬೆರಳಿನ ಆಕಾರವು ತಿಳಿಸುತ್ತೆ ನಿಮ್ಮ ವ್ಯಕ್ತಿತ್ವ ಮತ್ತು ಅದೃಷ್ಟ – Kannada News | The Astrological Significance of the Index Finger and Its Impact on Destiny

ಒಂದು ಕೈಯಲ್ಲಿ ಐದು ಬೆರಳುಗಳಿರುತ್ತವೆ. ಕೆಲವರಿಗೆ ಆರನೇ ಬೆರಳೂ ಇರುವುದುಂಟು, ಅದನ್ನು ಅದೃಷ್ಟದ ಸಂಕೇತವೆಂದು ಪರಿಗಣಿಸಲಾಗುತ್ತದೆ. ಈ ಐದು ಬೆರಳುಗಳಲ್ಲಿ ಪ್ರತಿಯೊಂದಕ್ಕೂ ಅದರದೇ ಆದ ಇತಿಹಾಸ ಮತ್ತು ಮಹತ್ವವಿದೆ. ಹಸ್ತ ಸಾಮುದ್ರಿಕ ಶಾಸ್ತ್ರದ ಪ್ರಕಾರ, ಹೆಬ್ಬೆರಳನ್ನು ಶುಕ್ರನಿಗೆ, ತೋರು ಬೆರಳನ್ನು ಗುರು (ಬೃಹಸ್ಪತಿ) ಗ್ರಹಕ್ಕೆ, ಮಧ್ಯದ ಬೆರಳನ್ನು ಶನಿಗೆ, ಉಂಗುರದ ಬೆರಳನ್ನು ರವಿಗೆ (ಸೂರ್ಯ) ಮತ್ತು ಕಿರು ಬೆರಳನ್ನು ಬುಧನಿಗೆ ಸಂಬಂಧಿಸಿದೆ ಎಂದು ಹೇಳಲಾಗುತ್ತದೆ. ತೋರು ಬೆರಳನ್ನು ಗುರು ಬೆರಳು ಎಂದು ಕರೆಯುತ್ತಾರೆ. ಸಾಮಾನ್ಯವಾಗಿ ಪುಷ್ಯರಾಗ ರತ್ನದ…

Read More

Numerology: ಈ ಮೂರು ದಿನಾಂಕಗಳಲ್ಲಿ ಹುಟ್ಟಿದವರಿಗೆ ಸಂಬಂಧದಲ್ಲಿ ಸವಾಲುಗಳು ಹೆಚ್ಚು ಯಾಕೆ ಗೊತ್ತಾ? – Kannada News | Numerology and Marriage: Root Numbers 4, 7, 8 Cause Relationship Challenges?

ಕೆಲವು ಜನರ ಜೀವನದಲ್ಲಿ ಎಷ್ಟೇ ಪ್ರಯತ್ನಿಸಿದರೂ ಸಂಬಂಧಗಳು ಹೆಚ್ಚು ಕಾಲ ಉಳಿಯುವುದಿಲ್ಲ ಅಥವಾ ದಾಂಪತ್ಯದಲ್ಲಿ ನಿರಂತರ ಮಾನಸಿಕ ಅಶಾಂತಿ ಕಾಡುತ್ತಿರುತ್ತದೆ. ಇದಕ್ಕೆ ಅವರ ಜಾತಕ ಮಾತ್ರವಲ್ಲ, ಜನ್ಮ ದಿನಾಂಕವೂ ಕಾರಣವಾಗಿರಬಹುದು ಎನ್ನುತ್ತದೆ ಸಂಖ್ಯಾಶಾಸ್ತ್ರ (Numerology). ನಾವು ಹುಟ್ಟಿದ ದಿನಾಂಕವು ನಮ್ಮ ಸ್ವಭಾವ, ವ್ಯಕ್ತಿತ್ವ ಮತ್ತು ಆಲೋಚನಾ ವಿಧಾನವನ್ನು ನಿರ್ಧರಿಸುತ್ತದೆ. ಸಂಖ್ಯಾಶಾಸ್ತ್ರದ ಪ್ರಕಾರ, ಮೂಲ ಸಂಖ್ಯೆ 4, 7 ಮತ್ತು 8 ಹೊಂದಿರುವವರು ತಮ್ಮ ವೈವಾಹಿಕ ಜೀವನದಲ್ಲಿ ಇತರರಿಗಿಂತ ಹೆಚ್ಚಿನ ಸವಾಲುಗಳನ್ನು ಎದುರಿಸುವ ಸಾಧ್ಯತೆ ಇರುತ್ತದೆ. ಮೂಲ ಸಂಖ್ಯೆ…

Read More