ಚಿಂದ್ವಾರ, ಮಾರ್ಚ್ 27: ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಭಾಗವಹಿಸಿದ್ದ ಕಾರ್ಯಕ್ರಮದಿಂದ ಹಿಂದಿರುಗುತ್ತಿದ್ದ ಬಸ್ ಅಪಘಾತ(Accident)ಕ್ಕೀಡಾಗಿದ್ದು, ಮೂವರು ಮಹಿಳೆಯರು ಸೇರಿ 10 ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ಚಿಂದ್ವಾರದಲ್ಲಿ ನಡೆದಿದೆ. ಜಿಲ್ಲಾ ಕೇಂದ್ರದಿಂದ ಸುಮಾರು 25 ಕಿ.ಮೀ ದೂರದಲ್ಲಿರುವ ನಾಗ್ಪುರ ರಸ್ತೆಯ ಸಿಮಾರಿಯಾ ಬಳಿ ಬಸ್ ಪಿಕ್-ಅಪ್ ವಾಹನಕ್ಕೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಅಪಘಾತ ಸಂಭವಿಸಿದಾಗ ಬಸ್‌ನಲ್ಲಿ 47 ಪ್ರಯಾಣಿಕರಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ, ಮೃತರಲ್ಲಿ ಆರು ಪುರುಷರು, ಮೂವರು ಮಹಿಳೆಯರು ಮತ್ತು ಒಂದು ಮಗು ಸೇರಿದ್ದಾರೆ. ಘಟನೆಯಲ್ಲಿ 35 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಅವರನ್ನು ಈಗ ಜಿಲ್ಲಾ ಆಸ್ಪತ್ರೆ ಮತ್ತು ಇತರ ವೈದ್ಯಕೀಯ ಸೌಲಭ್ಯಗಳಿಗೆ ಕರೆದೊಯ್ಯಲಾಗಿದೆ. ಆರು ಜನರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.
ವಿಡಿಯೋ
मुख्यमंत्री के कार्यक्रम से लौट रही छिंदवाड़ा में बस एवं पिकअप की सीधी टक्कर में कई लोगो की दुःखद की मौत, और दर्जनों घायल बताए जा रहे हैं!
भीड़ इक्कठी करने के लिए नेताओं के चक्कर में अधिकारी और प्रशासन लगा रहता है अब इस घटना की जिम्मेदारी कौन लेगा? pic.twitter.com/OOPhryW9LX
ಬಸ್‌ನಲ್ಲಿದ್ದ ಬಹುತೇಕ ಎಲ್ಲರೂ ಗಾಯಗೊಂಡರು. ಗಾಯಾಳುಗಳಲ್ಲಿ ಒಬ್ಬರನ್ನು ನಾಗ್ಪುರಕ್ಕೆ ಕಳುಹಿಸಲಾಗಿದೆ. ಮೃತರ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ ಮತ್ತು ಗಾಯಾಳುಗಳಿಗೆ ತಲಾ 1 ಲಕ್ಷ ರೂ. ಆರ್ಥಿಕ ನೆರವು ನೀಡುವುದಾಗಿ ಮುಖ್ಯಮಂತ್ರಿ ಮೋಹನ್ ಯಾದವ್ ಘೋಷಿಸಿದ್ದಾರೆ. ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ಭೋಪಾಲ್‌ನಲ್ಲಿರುವ ರಾಜ್ಯ ಆರೋಗ್ಯ ಇಲಾಖೆಯಲ್ಲಿ ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ ಎಂದು ಹೇಳಿದರು.
ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಯಾದವ್ ಹೇಳಿದರು. ಜಬಲ್ಪುರದ ವೈದ್ಯರ ತಂಡವನ್ನು ಚಿಂದ್ವಾರ ಮತ್ತು ನಾಗ್ಪುರಕ್ಕೆ ಕಳುಹಿಸಲು ಸೂಚಿಸಲಾಗಿದೆ. ಚಿಂದ್ವಾರದ ಉಸ್ತುವಾರಿ ಸಚಿವ ರಾಕೇಶ್ ಸಿಂಗ್ ಅವರಿಗೂ ತಮ್ಮ ವೇಳಾಪಟ್ಟಿಯನ್ನು ಬದಲಾಯಿಸಿಕೊಂಡು ಚಿಂದ್ವಾರ ತಲುಪಲು ಸೂಚಿಸಲಾಗಿದೆ ಎಂದು ಯಾದವ್ ಹೇಳಿದರು.
ಪಾಕಿಸ್ತಾನ ಸೂಪರ್ ಲೀಗ್ (PSL) ಆರಂಭ ಆಗಿದೆ. ಮಾರ್ಚ್ 26ರಂದು ಓಪನಿಂಗ್ ಮ್ಯಾಚ್ ನಡೆದಿದೆ. ಆದರೆ, ಈ ಪಂದ್ಯವನ್ನು ನೋಡಲು ಒಬ್ಬೇ ಒಬ್ಬರೂ ಬಂದಿರಲಿಲ್ಲ. ಹಾಗಂತ ಇದರ ಮೇಲೆ ಯಾರೊಬ್ಬರಿಗೂ ಆಸಕ್ತಿ ಇಲ್ಲ ಎಂದಲ್ಲ. ಇದಕ್ಕೆ ಕಾರಣ ಆಗಿದ್ದು ಇಸ್ರೇಲ್-ಅಮೆರಿಕ್ ಹಾಗೂ ಇರಾನ್ ಮಧ್ಯೆ ನಡೆಯುತ್ತಿರುವ ಯುದ್ಧ. ಈ ಯುದ್ಧ ಪಿಎಸ್ಎಲ್ ಮೇಲೆ ನೇರ ಪರಿಣಾಮ ಬೀರಿದೆ.
ಪಾಕಿಸ್ತಾನ್ ಸೂಪರ್ ಲೀಗ್ನಲ್ಲಿ ಒಟ್ಟೂ 8 ತಂಡಗಳು ಆಡುತ್ತಿವೆ. ಮಾರ್ಚ್ 26ರಿಂದ ಆರಂಭ ಆಗಿ ಮೇ 3ರಂದು ಫೈನಲ್ ನಡೆಯಲಿದೆ. ಯುದ್ಧದ ಪರಿಸ್ಥಿತಿಯಿಂದ ಇರಾನ್ ಹಾರ್ಮೂಜ್ ಜಲಸಂಧಿಯನ್ನು ನಿರ್ಬಂಧಿಸಿದೆ. ಹೀಗಾಗಿ, ತೈಲ ಹಾಗೂ ಗ್ಯಾಸ್ ಹಡಗು ಇಲ್ಲಿಂದ ಹೊರ ಹೋಗಲು ಸಾಧ್ಯವಾಗುತ್ತಿಲ್ಲ. ಹೀಗಾಗಿ, ಪಾಕಿಸ್ತಾನದಲ್ಲಿ ತೈಲದ ಕೊರತೆ ಉಂಟಾಗಿದೆ.
ಸದ್ಯದ ಪರಿಸ್ಥಿತಿಯನ್ನು ಗಮನಿಸಿ ಪಿಎಸ್ಎಲ್ಗೆ ಅಭಿಮಾನಿಗಳು ಬರದಂತೆ ತಡೆ ಹಾಕಲಾಗಿದೆ. ಅಲ್ಲದೆ, ಎಲ್ಲಾ ಪಂದ್ಯಗಳು ಕೇವಲ ಕರಾಚಿ ಹಾಗೂ ಲಾಹೋರ್ನಲ್ಲಿ ಮಾತ್ರ ನಡೆಯಲಿವೆ. ಈ ಬಗ್ಗೆ ಇತ್ತೀಚೆಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಮಾಹಿತಿ ನೀಡಿತ್ತು.
ಒಂದೊಮ್ಮೆ ಮೇ 3ರ ಒಳಗೆ ಸದ್ಯದ ಯುದ್ಧದ ಪರಿಸ್ಥಿತಿ ಕೊನೆಯಾಗಿ ತೈಲ ಹಾಗೂ ಗ್ಯಾಸ್ ಮತ್ತೆ ಪೂರೈಕೆ ಆದರೆ, ಫ್ಯಾನ್ಸ್ನ ಮತ್ತೆ ಕರೆಸಿಕೊಳ್ಳಲಾಗುವುದು ಎಂದು ಪಾಕ್ ಕ್ರಿಕೆಟ್ ಮಂಡಳಿ ಹೇಳಿದೆ. ಸದ್ಯ ಖಾಲಿ ಸ್ಟೇಡಿಯಂ ಹಾಗೂ ಫೋಟೋ ಹಾಗೂ ವಿಡಿಯೋಗಳನ್ನು ಕೆಲವರು ಪೋಸ್ಟ್ ಮಾಡುತ್ತಿದ್ದಾರೆ. ‘ಪಾಕಿಸ್ತಾನಕ್ಕೆ ಅವಮಾನ. ಪಿಎಸ್ಎಲ್ ಪಂದ್ಯ ನೋಡಲು ಯಾರೊಬ್ಬರೂ ಬಂದಿಲ್ಲ’ ಎಂದು ಪೋಸ್ಟ್ ಹಂಚಿಕೊಳ್ಳುತ್ತಿದ್ದಾರೆ. ಆದರೆ, ಇದರ ಅಸಲಿಯತ್ತು ಬೇರೆಯೇ ಇದೆ ಎಂಬುದು ಕೆಲವರಿಗೆ ಗೊತ್ತಾಗಿದೆ.
ANOTHER GLOBAL HUMILIATION FOR PAKISTAN
– The Pakistan Cricket Board and Pakistan’s former players all call the PSL the number one league in the world and even rank it above the IPL. Yet, at the same time, there is no branding at all in the stands.
ಬೆಂಗಳೂರು, ಮಾರ್ಚ್ 27: ರಾಜ್ಯದ ಹಲವೆಡೆ ಕಳೆದ ಮೂರು-ನಾಲ್ಕು ದಿನಗಳಿಂದ ಗುಡುಗು ಸಹಿತ ಮಳೆಯಾಗಿದೆ. ಇಂದೂ ಸಹ ಹಲವೆಡೆ ಮಳೆಯಾಗುವ (Weather Forecast) ಸೂಚನೆಯಿದ್ದು, ಹವಾಮಾನ ಇಲಾಖೆ ನಾಲ್ಕು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಗುಡುಗು, ಆಲಿಕಲ್ಲು ಸಹಿತ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಯಾವೆಲ್ಲಾ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
ಕಲಬುರ್ಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ ಈ ಎಲ್ಲಾ ಜಿಲ್ಲೆಗಳಲ್ಲಿ ಗುಡುಗು-ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆಯಿರುವುದರಿಂದ ಆರೆಂಜ್ ಅಲರ್ಟ್ ನೀಡಲಾಗಿದೆ. ಬೀದರ್, ಯಾದಗಿರಿ, ರಾಯಚೂರು ಸೇರಿದಂತೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಎಲ್ಲೆಲ್ಲಿ ಮಳೆಯಾಗುವ ಸಾಧ್ಯತೆ?
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವವಿದ್ದು, ಉಳಿದೆಡೆ ಒಣ ಹವೆಯಿರಲಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಮೈಸೂರಿನಲ್ಲೂ ಗುಡುಗು ಸಹಿತ ಮಳೆಯಾಗಲಿದ್ದು, ಉಳಿದ ಜಿಲ್ಲೆಗಳಲ್ಲಿ ಶುಷ್ಕ ವಾತಾವರಣವಿರಲಿದೆ
ಚಾಮರಾಜನಗರ, ಮಾರ್ಚ್ 27: ಉಪಯೋಗಿಸದೇ ಇದ್ದ ಟಿವಿಯೊಳಗೆ ಭಾರೀ ಹಾವು ಅಡಗಿದ್ದ ಘಟನೆ ಚಾಮರಾಜನಗರ ತಾಲೂಕಿನ ಮಲ್ಲಯ್ಯನಪುರ ಗ್ರಾಮದ ದೊಡ್ಡಮಾದಪ್ಪ ಎಂಬವರ ಮನೆಯಲ್ಲಿ ನಡೆದಿದೆ. ಈ ದೃಶ್ಯ ಕಂಡು ಮನೆಮಂದಿ ಬೆಚ್ಚಿಬಿದ್ದಿದ್ದು, ಬಳಿಕ ಉರಗ ತಜ್ಞರ ಸಹಾಯದಿಂದ ಹಾವನ್ನು ಸುರಕ್ಷಿತವಾಗಿ ರಕ್ಷಿಸಿ ಕಾಡಿಗೆ ಬಿಡಲಾಗಿದೆ. ಹಳೆಯ ಟಿವಿಯೊಳಗೆ ಸುಮಾರು 8 ಅಡಿ ಉದ್ದದ ಕೇರೆಹಾವು ಸೇರಿಕೊಂಡಿತ್ತು. ಟಿವಿಯೊಳಗೆ ಹಾವು ಇರುವುದನ್ನು ಗಮನಿಸಿದ ಮನೆಮಂದಿ ಭಯಗೊಂಡು ತಕ್ಷಣವೇ ಉರಗ ತಜ್ಞರಾದ ಸ್ನೇಕ್ ಚಾಂಪ್ ಅವರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಸ್ನೇಕ್ ಚಾಂಪ್, ಎಚ್ಚರಿಕೆಯಿಂದ ಕಾರ್ಯಾಚರಣೆ ನಡೆಸಿ ಹಾವನ್ನು ಸುರಕ್ಷಿತವಾಗಿ ಹಿಡಿದು ಹೊರತೆಗೆದರು. ಬಳಿಕ ಹಾವನ್ನು ಯಾವುದೇ ಹಾನಿಯಾಗದಂತೆ ಸಮೀಪದ ಕಾಡಿಗೆ ಬಿಡಲಾಗಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿಕ್ಲಿಕ್ ಮಾಡಿ
ವಾಷಿಂಗ್ಟನ್, ಮಾರ್ಚ್ 27: ಹಾರ್ಮುಜ್ ಜಲಸಂಧಿ(Hormuz Strait) ತೆರೆಯಲು ಇರಾನ್‌ಗೆ ಏಪ್ರಿಲ್ 6ರವರೆಗೆ ಅಮೆರಿಕವು ಗಡುವು ವಿಸ್ತರಿಸಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಏಪ್ರಿಲ್ 27 ರಂದು ಇರಾನ್‌ಗೆ ಹಾರ್ಮುಜ್ ಜಲಸಂಧಿಯನ್ನು ತೆರೆಯಲು ಗಡುವು ವಿಧಿಸಿದ್ದರು. ಇರಾನ್ ಹಾರ್ಮುಜ್ ಜಲಸಂಧಿಯನ್ನು ತೆರೆಯದಿದ್ದಾಗ ಅಥವಾ ಅದಕ್ಕೆ ಮಣಿಯದಿದ್ದಾಗ, ಅಮೆರಿಕವು ಹೊಸ ದಿನಾಂಕವನ್ನು ನಿಗದಿಪಡಿಸಿತು.
ಅಮೆರಿಕ ಈಗ ಮತ್ತೊಮ್ಮೆ ಈ ಗಡುವನ್ನು ವಿಸ್ತರಿಸಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್‌ಗೆ ಹಾರ್ಮುಜ್ ಜಲಸಂಧಿಯನ್ನು ತೆರೆಯಲು ತಮ್ಮ ಗಡುವನ್ನು ಏಪ್ರಿಲ್ 6 ರವರೆಗೆ ವಿಸ್ತರಿಸಿದ್ದಾರೆ.
ಡೊನಾಲ್ಡ್ ಟ್ರಂಪ್ ಗುರುವಾರ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಈ ಮಾಹಿತಿಯನ್ನು ನೀಡಿದ್ದಾರೆ.
ಏಪ್ರಿಲ್ 6 ರವರೆಗೆ ಇರಾನ್‌ನ ಇಂಧನ ಸ್ಥಾವರದ ಮೇಲೆ ಬಾಂಬ್ ಹಾಕುವುದಿಲ್ಲ, ಅಮೆರಿಕ ಮತ್ತು ಇರಾನ್ ನಡುವಿನ ಮಾತುಕತೆಗಳು ಉತ್ತಮವಾಗಿ ಮುಂದುವರೆದಿವೆ ಎಂದು ಟ್ರಂಪ್ ಹೇಳಿದ್ದಾರೆ.
ಅವರ ಸರ್ಕಾರವು ಇರಾನ್‌ನ ಇಂಧನ ಮೂಲಸೌಕರ್ಯದ ಮೇಲಿನ ದಾಳಿಯನ್ನು ಇನ್ನೂ 10 ದಿನಗಳವರೆಗೆ ನಿಲ್ಲಿಸುತ್ತದೆ. ಇದಕ್ಕೂ ಮೊದಲು, ಅಮೆರಿಕ ಅಧ್ಯಕ್ಷರು ಇರಾನ್‌ಗೆ ಐದು ದಿನಗಳ ವಿಸ್ತರಣೆಯನ್ನು ನೀಡಿದ್ದರು. ಹಾರ್ಮುಜ್ ಜಲಸಂಧಿ ಐದು ದಿನಗಳಲ್ಲಿ ತೆರೆಯದಿದ್ದರೆ ಮತ್ತು ಇರಾನ್ ಮಾತುಕತೆಗೆ ಬಾರದಿದ್ದರೆ ಅದು ಇದುವರೆಗಿನ ಅತಿದೊಡ್ಡ ದಾಳಿಯನ್ನು ಎದುರಿಸಬೇಕಾಗುತ್ತದೆ ಎಂದು ಡೊನಾಲ್ಡ್ ಟ್ರಂಪ್ ಎಚ್ಚರಿಸಿದ್ದರು.
ಎರಡೂ ದೇಶಗಳ ನಡುವಿನ ಕದನ ವಿರಾಮ ಮಾತುಕತೆಗಳ ಕುರಿತು ಭಿನ್ನಾಭಿಪ್ರಾಯಗಳಿರುವ ಸಮಯದಲ್ಲಿ ಈ ಹೇಳಿಕೆ ಬಂದಿದೆ. ಫೆಬ್ರವರಿ 28 ರಂದು ಅಮೆರಿಕ ಮತ್ತು ಇಸ್ರೇಲ್ ಇರಾನ್ ಮೇಲೆ ದಾಳಿ ಮಾಡಿದ ನಂತರ ಇರಾನ್ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕ ಮತ್ತು ಇಸ್ರೇಲಿ ನೆಲೆಗಳ ಮೇಲೆ ದಾಳಿ ಮಾಡಿದೆ ಮತ್ತು ಹಾರ್ಮುಜ್ ಜಲಸಂಧಿಯ ಮೂಲಕ ಇಂಧನ ರಫ್ತುಗಳನ್ನು ಪರಿಣಾಮಕಾರಿಯಾಗಿ ನಿರ್ಬಂಧಿಸಿದೆ.
ಯುದ್ಧವನ್ನು ಕೊನೆಗೊಳಿಸಲು 15 ಅಂಶಗಳ ಕಾರ್ಯಸೂಚಿಯನ್ನು ಇರಾನ್‌ಗೆ ಕಳುಹಿಸಲಾಗಿದೆ ಎಂದು ಅಮೆರಿಕದ ವಿಶೇಷ ರಾಯಭಾರಿ ಸ್ಟೀವ್ ವಿಟ್ಕಾಫ್ ದೃಢಪಡಿಸಿದರು, ಆದರೆ ಇರಾನ್ ಅದನ್ನು ಏಕಪಕ್ಷೀಯವೆಂದು ತಿರಸ್ಕರಿಸಿದೆ.
ಎರಡೂ ಕಡೆಯವರು ಕದನ ವಿರಾಮ ಅಥವಾ ರಾಜಿ ಕುರಿತು ಮಾತುಕತೆ ನಡೆಸುವ ವದಂತಿಗಳಿದ್ದರೂ, ಎರಡೂ ಕಡೆಯವರು ಕಟ್ಟುನಿಟ್ಟಿನ ನಿಲುವುಗಳನ್ನು ಹೊಂದಿದ್ದಾರೆ. ಯಾವುದೇ ಔಪಚಾರಿಕ ಮಾತುಕತೆಗಳು ನಡೆಯುತ್ತಿಲ್ಲ ಎಂದು ಹೇಳುವ ಮೂಲಕ ಇರಾನ್ ಈ ಮಾತುಕತೆಗಳನ್ನು ಪದೇ ಪದೇ ನಿರಾಕರಿಸಿದೆ.
ಬೆಂಗಳೂರು, ಮಾರ್ಚ್ 27: ಬ್ಯಾಟರಾಯನಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಪುರಾಣ ಪ್ರಸಿದ್ಧ ಶ್ರೀ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನದ (Gali Anjaneya Swamy Temple) ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮ ರಥೋತ್ಸವವು ಮಾರ್ಚ್ 27 ರಿಂದ ಮಾರ್ಚ್ 29 ರವರೆಗೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸಾವಿರಾರು ಭಕ್ತರು ಆಗಮಿಸುವ ಸಾಧ್ಯತೆ ಇರುವುದರಿಂದ ಮೈಸೂರು ರಸ್ತೆಯಲ್ಲಿ (Mysore Road) ಸಂಚಾರ ದಟ್ಟಣೆ ತಪ್ಪಿಸಲು ಬೆಂಗಳೂರು ಸಂಚಾರಿ ಪೊಲೀಸರು ಮಹತ್ವದ ಸಂಚಾರ ಮಾರ್ಪಾಡುಗಳನ್ನು ಮಾಡಿದ್ದಾರೆ.
ಸಂಚಾರ ನಿರ್ಬಂಧ ಎಲ್ಲೆಲ್ಲಿ?
ಮಜೆಸ್ಟಿಕ್ ಮತ್ತು ಸಿಟಿ ಮಾರ್ಕೆಟ್ ಕಡೆಯಿಂದ: ಮೈಸೂರು ರಸ್ತೆ ಮುಖಾಂತರ ಕೆಂಗೇರಿ ಕಡೆಗೆ ಹೋಗುವ ಎಲ್ಲಾ ಮಾದರಿಯ ವಾಹನಗಳನ್ನು ಹೊಸಗುಡ್ಡದಹಳ್ಳಿ ಜಂಕ್ಷನ್‌ನಿಂದ ಕಿಂಕೋ ಜಂಕ್ಷನ್‌ವರೆಗೆ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.
ಭಾರೀ ವಾಹನಗಳಿಗೆ ಸೂಚನೆ: ಕೆಂಗೇರಿ ಕಡೆಯಿಂದ ನಗರಕ್ಕೆ ಪ್ರವೇಶಿಸುವ ಭಾರೀ ವಾಹನಗಳನ್ನು ಹೊರತುಪಡಿಸಿ, ಉಳಿದ ವಾಹನಗಳಿಗೆ ಎಂದಿನಂತೆ ಸಂಚರಿಸಲು ಅವಕಾಶ ನೀಡಲಾಗಿದೆ.
ಮಾರ್ಚ್ 27ರ ಬೆಳಿಗ್ಗೆ 07 ಗಂಟೆಯಿಂದ ಕಾರ್ಯಕ್ರಮ ಮುಗಿಯುವವರೆಗೆ ಈ ಸಂಚಾರ ನಿರ್ಬಂಧಗಳು ಜಾರಿಯಲ್ಲಿರುತ್ತವೆ.
ವಾಹನ ಸವಾರರಿಗೆ ಪರ್ಯಾಯ ಮಾರ್ಗಗಳು
ಮಜೆಸ್ಟಿಕ್ ಮತ್ತು ಸಿಟಿ ಮಾರ್ಕೆಟ್‌ನಿಂದ ಮೈಸೂರು ರಸ್ತೆ ಕಡೆಗೆ ಹೋಗುವವರು ಹೊಸಗುಡ್ಡದಹಳ್ಳಿ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದು ಅವಲಹಳ್ಳಿ ಮುಖ್ಯ ರಸ್ತೆ ಮೂಲಕ ಬೆಂಗಳೂರು ಒನ್ ಜಂಕ್ಷನ್ ತಲುಪಬೇಕು. ಅಲ್ಲಿಂದ ಎಡ ತಿರುವು ಪಡೆದು ಕೆ.ಇ.ಬಿ. ಜಂಕ್ಷನ್ ಬಳಿ ಬಲ ತಿರುವು ಪಡೆದು ಪಿ.ಇ.ಎಸ್.ಐ.ಟಿ. ಕಾಲೇಜು (ದೇವೇಗೌಡ ಸರ್ಕಲ್) ಮುಖಾಂತರ ನಾಯಂಡಹಳ್ಳಿ ಹತ್ತಿರ ಮೈಸೂರು ರಸ್ತೆಯನ್ನು ಸೇರಬಹುದು.
ಮೈಸೂರು ರಸ್ತೆ ಮೇಲ್ಸೇತುವೆ ಬಳಸುವ ಸರಕು ವಾಹನಗಳು ಮೈಸೂರು ರಸ್ತೆ ವೆಟನರಿ ಜಂಕ್ಷನ್ ಬಳಿ ಬಲ ತಿರುವು ಪಡೆದು ಗುಡ್ ಶೆಡ್ ರಸ್ತೆ ಮೂಲಕ ಶಾಂತಲಾ ಜಂಕ್ಷನ್ – ಕೋಡೆ ಸರ್ಕಲ್ – ಲುಲು ಮಾಲ್ – ಹುಣಸೇಮರ ಜಂಕ್ಷನ್ ಮೂಲಕ ಮಾಗಡಿ ರಸ್ತೆಯತ್ತ ಸಂಚರಿಸಬಹುದು.
ಕೆಂಗೇರಿ ಕಡೆಯಿಂದ ನಗರಕ್ಕೆ ಪ್ರವೇಶಿಸುವವರು (ಮಾರ್ಚ್ 28-29ರ ವಿಶೇಷ ಸೂಚನೆ) ನಾಯಂಡಹಳ್ಳಿ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದು ನಾಗರಭಾವಿ ಜಂಕ್ಷನ್ ಹತ್ತಿರ ಬಲ ತಿರುವು ಪಡೆಯಬೇಕು. ಚಂದ್ರಾ ಲೇಔಟ್ 80 ಅಡಿ ರಸ್ತೆಯಲ್ಲಿ ಚಲಿಸಿ ವೆಸ್ಟ್ ಆಫ್ ಕಾರ್ಡ್ ರಸ್ತೆ ಮುಖಾಂತರ ಎಂ.ಸಿ. ಸರ್ಕಲ್ ತಲುಪಿ ಮಾಗಡಿ ರಸ್ತೆ ಸೇರಬಹುದು.
— ಬೆಂಗಳೂರು ಸಂಚಾರ ಪೊಲೀಸ್ BengaluruTrafficPolice (@blrcitytraffic) March 26, 2026
ಸಾರ್ವಜನಿಕರಿಗೆ ಸಂಚಾರಿ ಪೊಲೀಸರ ಮನವಿ
ರಥೋತ್ಸವದ ಸಮಯದಲ್ಲಿ ಸುಗಮ ಸಂಚಾರಕ್ಕೆ ಸಹಕರಿಸುವಂತೆ ಹಾಗೂ ಅನಿವಾರ್ಯವಿದ್ದಲ್ಲಿ ಮಾತ್ರ ಈ ರಸ್ತೆಯನ್ನು ಬಳಸುವಂತೆ ಬ್ಯಾಟರಾಯನಪುರ ಸಂಚಾರಿ ಪೊಲೀಸರು ತಿಳಿಸಿದ್ದಾರೆ. ಮೈಸೂರು ರಸ್ತೆಯಲ್ಲಿ ಸಂಚರಿಸುವ ಮುನ್ನ ಗೂಗಲ್ ಮ್ಯಾಪ್ ಅಥವಾ ಸಂಚಾರಿ ಪೊಲೀಸರ ಅಧಿಕೃತ ಸೂಚನೆಗಳನ್ನು ಗಮನಿಸುವುದು ಉತ್ತಮ.
ಮಾರತ್ತಹಳ್ಳಿ ಬ್ರಿಡ್ಜ್ನಲ್ಲೂ ಸಂಚಾರ ಬದಲಾವಣೆ
ಮಾರತ್ತಹಳ್ಳಿ ಬ್ರಿಡ್ಜ್ ಮೇಲೆ ಮೆಟ್ರೋ ಕಾಮಗಾರಿ ಹಿನ್ನೆಲೆ ಮಾರ್ಚ್ 27 ರಿಂದ ಇಂದಿನಿಂದ 3 ದಿನಗಳ ಕಾಲ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. ರಾತ್ರಿ 12ರಿಂದ ಮುಂಜಾನೆ 3 ಗಂಟೆಯವರೆಗೆ ಮಾರ್ಗ ಬದಲಾವಣೆ ಮಾಡಲಾಗಿದ್ದು, HAL ಕಡೆಯಿಂದ ವರ್ತೂರು ಮುಖ್ಯರಸ್ತೆ, ಮಾರತ್ತಹಳ್ಳಿ ಬ್ರಿಡ್ಜ್ ಮೂಲಕ ವರ್ತೂರು, ವೈಟ್ ಫೀಲ್ಡ್ ಕಡೆ ಹೋಗುವ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ. ವರ್ತೂರು ಮತ್ತು ವೈಟ್ ಫೀಲ್ಡ್ ಕಡೆಯಿಂದ ವರ್ತೂರು ಮುಖ್ಯರಸ್ತೆ, ಮಾರತ್ತಹಳ್ಳಿ ಬ್ರಿಡ್ಜ್ ಮೂಲಕ HAL ಕಡೆಗೂ ಸಂಚಾರ ನಿರ್ಬಂಧ ಮಾಡಲಾಗಿದೆ. ನಿರ್ಬಂಧಿಸಲಾದ ಸಂಚಾರಕ್ಕೆ ಪರ್ಯಾಯ ಮಾರ್ಗ ಬಳಸಲು ಸೂಚನೆ ನೀಡಲಾಗಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿಕ್ಲಿಕ್ ಮಾಡಿ
ಪವನ್ ಕಲ್ಯಾಣ್ ಅವರು ರಾಜಕೀಯದಲ್ಲಿ ಬ್ಯುಸಿ ಇರುವುದರಿಂದ ಅವರ ಸಿನಿಮಾ ಅಭಿಮಾನಿಗಳಿಗೆ ಅಷ್ಟು ಸಂತೋಷ ಸಿಗುತ್ತಿಲ್ಲ. ಅವರು ಒಪ್ಪಿಕೊಂಡ ಮೂರು ಸಿನಿಮಾಗಳನ್ನು ಹೇಗೋ ಮುಗಿಸಿಕೊಟ್ಟರು. ಆದರೆ, ಯಾವ ಸಿನಿಮಾದಲ್ಲೂ ಬದ್ಧತೆ ಕಾಣಿಸಿಲ್ಲ. ಕಾಟಾಚಾರಕ್ಕೆ ಅವರು ಸಿನಿಮಾ ಶೂಟ್ ಮುಗಿಸಿಕೊಟ್ಟರು. ‘ಓಜಿ’, ‘ಹರಿ ಹರ ವೀರ ಮಲ್ಲು’ ಸಿನಿಮಾ ಸಾಧಾರಣ ಪ್ರದರ್ಶನ ನೀಡಿದ ಬಳಿಕ ಅವರ ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಚಿತ್ರವು ‘ಧುರಂಧರ್ 2’ (Dhurandhar 2) ಅಬ್ಬರದಿಂದ ತತ್ತರಿಸಿದೆ.
‘ಧುರಂಧರ್ 2’ ಸಿನಿಮಾ ಅಬ್ಬರದ ಕಲೆಕ್ಷನ್ ಮಾಡುತ್ತಿದೆ. ಗುರುವಾರ (ಮಾರ್ಚ್ 26) 49 ಕೋಟಿ ರೂಪಾಯಿ ಗಳಿಕೆ ಮಾಡಿದೆ. ವಾರದ ದಿನವೂ ಇಷ್ಟು ಅಬ್ಬರದ ಗಳಿಕೆ ಆಗುತ್ತಿರುವುದು ನಿಜಕ್ಕೂ ಶಾಕಿಂಗ್ ಎನಿಸಿದೆ. ಈ ಸಿನಿಮಾಗೆ ಗುರುವಾರ ಬರೋಬ್ಬರಿ 19,493 ಶೋಗಳನ್ನು ನೀಡಲಾಗಿತ್ತು. ಈ ಚಿತ್ರದ ಭಾರತದ ನೆಟ್ ಕಲೆಕ್ಷನ್ 674 ಕೋಟಿ ರೂಪಾಯಿ ಆಗಿದೆ. ಭಾರತದ ಗ್ರಾಸ್ ಕಲೆಕ್ಷನ್ 805 ಕೋಟಿ ರೂಪಾಯಿ ಆಗಿದೆ. ಈ ಸಿನಿಮಾಗೆ ವಿಶ್ವ ಮಟ್ಟದಲ್ಲಿ 1067 ಕೋಟಿ ರೂಪಾಯಿ ಗಳಿಕೆ ಆಗಿದೆ.
ಗುರುವಾರ ‘ಧುರಂಧರ್ 2’ ಸಿನಿಮಾದ ತೆಲುಗು ವರ್ಷನ್ಗೆ 2.50 ಕೋಟಿ ರೂಪಾಯಿ ಗಳಿಕೆ ಆಗಿದೆ. ಆದರೆ, ಇದೇ ದಿನ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಗಳಿಕೆ ಮಾಡಿದ್ದು ಕೇವಲ 1 ಕೋಟಿ ರೂಪಾಯಿ ಮಾತ್ರ. ಇದು ಚಿತ್ರಕ್ಕೆ ಭಾರೀ ಹಿನ್ನಡೆ ತಂದಿದೆ.
ಪವನ್ ಕಲ್ಯಾಣ್ ಸಿನಿಮಾ ಭಾರತದಲ್ಲಿ 66 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಇದರಲ್ಲಿ ಅರ್ಧದಷ್ಟು ಗಳಿಕೆ ಮೊದಲ ದಿನವೇ ಬಂದಿತ್ತು. ಆ ಬಳಿಕ ಸಿನಿಮಾದ ಗಳಿಕ ಸಂಪೂರ್ಣವಾಗಿ ತಗ್ಗಿ ಹೋಗಿದೆ. ಮುಂದಿನ ದಿನಗಳಲ್ಲಿ ‘ಉಸ್ತಾದ್ ಭಗತ್ ಸಿಂಗ್’ ಪರಿಸ್ಥಿತಿ ಮತ್ತಷ್ಟು ಹೀನಾಯ ಆಗಬಹುದು.
ಪವನ್ ಕಲ್ಯಾಣ್ ಅವರು ಸದ್ಯಕ್ಕಂತೂ ಸಿನಿಮಾ ಮಾಡುತ್ತಿಲ್ಲ. ಅವರು ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿ ಆಗಿದ್ದು, ತಮ್ಮ ಕೆಲಸವನ್ನು ಮುಂದುವರಿಸಿಕೊಂಡು ಹೋಗುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ಗೆದ್ದು ಮತ್ತೆ ಅಧಿಕಾರಕ್ಕೆ ಬಂದರೆ ಅವರು ಸಿನಿಮಾ ರಂಗದಿಂದಲೇ ದೂರ ಆಗಬಹುದು.
ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಶ್ರೀರಾಮನವಮಿಯನ್ನು ಆಚರಿಸುವುದು ಹೇಗೆ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಪ್ರತಿ ವರ್ಷ ಚೈತ್ರ ಮಾಸದ ಶುಕ್ಲ ಪಕ್ಷದ ಒಂಬತ್ತನೇ ದಿನದಂದು ಆಚರಿಸಲಾಗುವ ಶ್ರೀರಾಮ ನವಮಿಯು ಹಿಂದೂ ಧರ್ಮದ ಅತ್ಯಂತ ಪವಿತ್ರ ಹಬ್ಬಗಳಲ್ಲಿ ಒಂದಾಗಿದೆ. ತ್ರೇತಾಯುಗದಲ್ಲಿ ಶ್ರೀ ಮಹಾವಿಷ್ಣುವು ಮರ್ಯಾದಾ ಪುರುಷೋತ್ತಮ ಶ್ರೀರಾಮನಾಗಿ ಜನಿಸಿದ ಶುಭ ದಿನವಿದು. ಸೂರ್ಯೋದಯದಲ್ಲಿ ನವಮಿ ತಿಥಿ ಇರುವುದರಿಂದ ಇಡೀ ದಿನವನ್ನು ರಾಮನವಮಿ ಎಂದು ಆಚರಿಸಲಾಗುತ್ತದೆ. ಈ ದಿನ ಪುನರ್ವಸು ನಕ್ಷತ್ರವೂ ಇರುತ್ತದೆ.
ಈ ಹಬ್ಬವನ್ನು ದೇಶಾದ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಆಂಜನೇಯ ಮತ್ತು ಶ್ರೀರಾಮ ದೇವಸ್ಥಾನಗಳಲ್ಲಿ ಅಭಿಷೇಕ, ಕಲ್ಯಾಣೋತ್ಸವಗಳನ್ನು ನಡೆಸಲಾಗುತ್ತದೆ. ಪಾನಕ ಮತ್ತು ಹೆಸರುಬೇಳೆ ವಿತರಿಸುವುದು ಈ ಆಚರಣೆಯ ಪ್ರಮುಖ ಭಾಗ. ಇವು ದೇಹಕ್ಕೆ ತಂಪನ್ನು ನೀಡುತ್ತವೆ. ರಾಮಾಯಣ ಪಾರಾಯಣ, ಭಜನೆಗಳನ್ನು ಮಾಡಲಾಗುತ್ತದೆ. “ಶ್ರೀ ರಾಮ ಜಯ ರಾಮ ಜಯ ಜಯ ರಾಮ” ಎಂಬ ಮಹಾಮಂತ್ರವನ್ನು ಪಠಿಸುವುದರಿಂದ ಉತ್ತಮ ಆರೋಗ್ಯ, ಮಾನಸಿಕ ನೆಮ್ಮದಿ, ಶತ್ರು ಕಾಟ ಮತ್ತು ಗ್ರಹ ದೋಷಗಳಿಂದ ಮುಕ್ತಿ ದೊರೆಯುತ್ತದೆ ಎಂದು ಡಾ.ಬಸವರಾಜ ಗುರೂಜಿ ಹೇಳಿದ್ದಾರೆ.
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್ 27, ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ನವಮಿ ತಿಥಿಯಾಗಿದ್ದು, ಶ್ರೀರಾಮನವಮಿಯ ಶುಭದಿನವಾಗಿದೆ. ಬೆಂಗಳೂರಿನ ಗಾಳಿ ಆಂಜನೇಯ ಸ್ವಾಮಿಯ ರಥೋತ್ಸವವೂ ಇಂದು ನಡೆಯಲಿದೆ. ಸೂರ್ಯನು ಮೀನ ರಾಶಿಯಲ್ಲಿ ಮತ್ತು ಚಂದ್ರನು ಮಿಥುನ ರಾಶಿಯಲ್ಲಿ ಸಂಚರಿಸುತ್ತಾನೆ. ಈ ಶ್ರೀರಾಮ ನವಮಿಯಂದು ಪಾನಕ, ಹೆಸರುಬೇಳೆ ಮತ್ತು ಮಜ್ಜಿಗೆಯನ್ನು ನೀಡುವುದರಿಂದ ರಾಮನ ಕೃಪೆಗೆ ಪಾತ್ರರಾಗಬಹುದು ಎಂದು ಗುರೂಜಿ ತಿಳಿಸಿದ್ದಾರೆ.
ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಮಾರ್ಚ್ 27ರ ಶುಕ್ರವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.
ಸಕಾರಾತ್ಮಕವಾದ ಸನ್ನಿವೇಶ ಇರಲಿದ್ದು, ನಿಮಗೆ ಒಳ್ಳೆಯದೇನೋ ಸಂಭವಿಸಲಿದೆ ಎಂಬ ಸೂಚನೆ ಈ ದಿನ ದೊರೆಯಲಿದೆ. ಒಂದು ವೇಳೆ ವಿದೇಶದಲ್ಲಿ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿದ್ದಲ್ಲಿ ಶುಭ ಸುದ್ದಿ ಕೇಳಿಬರುವಂಥ ಯೋಗ ಇದೆ. ಅದೇ ರೀತಿ ಈಗಾಗಲೇ ವಿದೇಶದಲ್ಲಿ ಉದ್ಯೋಗ ಮಾಡುತ್ತಿದ್ದೀರಿ ಅಂತಾದಲ್ಲಿ ಅಲ್ಲಿ ವೇತನ ಹೆಚ್ಚಳ ಅಥವಾ ಈಗ ಮಾಡುತ್ತಿರುವಂಥ ಉತ್ತಮ ಸಂಸ್ಥೆಯಲ್ಲಿ ಉದ್ಯೋಗಾವಕಾಶ ಹುಡುಕಿಕೊಂಡು ಬರಬಹುದು. ಮನೆ ಖರೀದಿಗೆ ಪ್ರಯತ್ನ ಮಾಡುತ್ತಿರುವವರಿಗೆ ಮನಸ್ಸಿಗೆ ಒಪ್ಪುವಂಥದ್ದು ದೊರೆಯುವ ಸಾಧ್ಯತೆ ಇದೆ.
ಗೃಹಾಲಂಕಾರ ವಸ್ತುಗಳು, ಟೀವಿ, ಕರ್ಟನ್ ಇಂಥವುಗಳಿಗೆ ಹೆಚ್ಚು ಖರ್ಚು ಮಾಡಲಿದ್ದೀರಿ. ಬಜೆಟ್ ಹಾಕಿಕೊಂಡಂತೆ ಯಾವುದೂ ಸಾಗುವುದಿಲ್ಲ. ಆರಂಭದಲ್ಲಿಯೇ ಹೇಳಿದಂತೆ ನಿಮಗೆ ಬೇಕಾದವರು ಸಹ ನಡೆದುಕೊಳ್ಳುವುದಿಲ್ಲ. ಆ ಕಾರಣಕ್ಕೆ ಹೆಚ್ಚುತ್ತಿರುವ ಖರ್ಚು ಹಾಗೂ ವೆಚ್ಚ ನಿಮ್ಮನ್ನು ಆತಂಕಕ್ಕೆ ಗುರಿ ಮಾಡಲಿದೆ. ನಿಮಗೆ ಅರಿವಿಲ್ಲದಂತೆಯೂ ಅಥವಾ ಯಾವುದೋ ಉತ್ಸಾಹದಲ್ಲಿ ಒಪ್ಪಿಕೊಂಡ ಕೆಲಸವು ಬಹಳ ಕಷ್ಟ ಎಂಬುದು ಆ ನಂತರ ಅರಿವಿಗೆ ಬರಲಿದೆ. ಸ್ವಂತ ಉದ್ಯಮ ಅಥವಾ ವ್ಯವಹಾರವನ್ನು ಮಾಡುತ್ತಿರುವಂತಹವರಿಗೆ ಆದಾಯದಲ್ಲಿನ ಇಳಿಕೆ ಆತಂಕಕ್ಕೆ ಕಾರಣ ಆಗಲಿದೆ.
ಸಂಭ್ರಮದ ವಾತಾವರಣ ಇರುತ್ತದೆ. ಮಕ್ಕಳು ಅಥವಾ ನಿಮಗಿಂತ ಚಿಕ್ಕ ವಯಸ್ಸಿನವರ ಜತೆಗೆ ಉತ್ತಮವಾದ ಸಮಯ ಕಳೆಯುವಂಥ ಅವಕಾಶ ನಿಮಗಿದೆ. ಈ ದಿನ ನೀವು ರುಚಿಕಟ್ಟಾದ ಊಟ ತಿಂಡಿಗಳನ್ನು ಸವಿಯುವಂಥ ಯೋಗ ಇದೆ. ಮನೆ ಜಮೀನು ಅಥವಾ ಅಪಾರ್ಟ್ ಮೆಂಟ್ ಖರೀದಿ ಮಾಡಬೇಕು ಎಂದು ಹುಡುಕುತ್ತಿರುವವರಿಗೆ ಮನಸ್ಸಿಗೆ ಒಪ್ಪುವಂಥದ್ದು ದೊರೆಯುವ ಯೋಗ ಇದೆ. ಕೆಲವು ಕೆಲಸಗಳು ನೀವು ಅಂದುಕೊಂಡಿದ್ದಕ್ಕಿಂತ ಬಹಳ ವೇಗವಾಗಿ ನಡೆದು ಹೋಗಲಿವೆ. ನಿಮಗೆ ಬಹಳ ಮುಖ್ಯ ಎನಿಸಿದ ಕೆಲಸಗಳನ್ನು ಸಾಧ್ಯವಾದಷ್ಟೂ ನೀವೇ ಮಾಡುವುದಕ್ಕೆ ಪ್ರಯತ್ನಿಸಿ.
ಏಕಕಾಲಕ್ಕೆ ಹಲವು ಕೆಲಸ- ಜವಾಬ್ದಾರಿ ನಿರ್ವಹಿಸಬೇಕಾಗಲಿದೆ. ಆತ್ಮವಿಶ್ವಾಸ ಇರುವುದು ಒಳ್ಳೆಯದೇ. ಆದರೆ ನಿಮಗೆ ಗೊತ್ತಿರಬೇಕಾದದ್ದು ಏನೆಂದರೆ, ಈ ದಿನ ಯಾವುದೇ ಕೆಲಸವನ್ನು ಸರಳವಾಗಿ ತೆಗೆದುಕೊಳ್ಳಬಾರದು. ನಿಮ್ಮಲ್ಲಿ ಯಾರು ಪಿತ್ರಾರ್ಜಿತ ಆಸ್ತಿಯ ನಿರೀಕ್ಷೆಯಲ್ಲಿ ಇರುವಿರೋ ಅಂತಹವರಿಗೆ ಅಂದುಕೊಂಡಂತೆ ಕೆಲವು ಬೆಳವಣಿಗೆಗಳು ಆಗಲಿವೆ. ಬಹಳ ಮುಖ್ಯವಾದ ಕಾಗದಪತ್ರಗಳು ಅಥವಾ ವಸ್ತುಗಳನ್ನು ಒಂದು ಕಡೆಯಿಂದ ಮತ್ತೊಂದು ಕಡೆಗೆ ತೆಗೆದುಕೊಂಡು ಹೋಗುತ್ತಿದ್ದೀರಿ ಎಂದಾದಲ್ಲಿ ಸಾಮಾನ್ಯ ದಿನಗಳಿಗಿಂತ ಇರಬೇಕಾದ ಎಚ್ಚರಿಕೆಗಿಂತ ಹೆಚ್ಚು ಜಾಗ್ರತೆಯನ್ನು ವಹಿಸಿ.
ನಿಮಗಾಗುವ ಖರ್ಚಿನಿಂದ ಸಂತೋಷ, ತೃಪ್ತಿ ನಿಮಗೆ ದೊರೆಯಲಿದೆ. ಕುಟುಂಬದ ಜತೆಗೆ ಕೂಡಿ ಪ್ರವಾಸಕ್ಕೆ ತೆರಳುವುದಕ್ಕೆ ಯೋಜನೆ ರೂಪಿಸಲಿದ್ದೀರಿ. ಯಾರು ನಿಮ್ಮನ್ನು ಬೇಕೆಂತಲೇ ನಂಬಿಸಿ, ಅವಮಾನಕ್ಕೆ ಗುರಿ ಮಾಡಿದರೋ ಅವರಿಗೆ ಸರಿಯಾದ ರೀತಿಯಲ್ಲಿ ಪ್ರತೀಕಾರ ಹೇಳುವುದಕ್ಕೆ ಬೇಕಾದ ಸಿದ್ಧತೆಯನ್ನು ಮಾಡಿಕೊಳ್ಳಲಿದ್ದೀರಿ. ನಿಮ್ಮಲ್ಲಿ ಕೆಲವರು ಮನೆಗೆ ಸೋಲಾರ್ ಉಪಕರಣಗಳನ್ನು ಖರೀದಿ ಮಾಡುವುದಕ್ಕೆ ತೀರ್ಮಾನ ಮಾಡಲಿದ್ದೀರಿ. ಅಥವಾ ಎಲೆಕ್ಟ್ರಿಕಲ್ ವಾಹನವನ್ನು ಖರೀದಿ ಮಾಡುವುದಕ್ಕಾದರೂ ಅಡ್ವಾನ್ಸ್ ಪಾವತಿಸಲಿದ್ದೀರಿ.
ನಾನಾ ಕಾರಣಗಳಿಗೆ ಸಾಮಾನ್ಯ ದಿನಗಳಂತೆ ಈ ದಿನ ಇರುವುದಿಲ್ಲ. ತಾಳ್ಮೆ, ಸಮಾಧಾನ, ನಿಧಾನ, ಆಲೋಚಿಸಿ ನಿರ್ಧಾರ ಮಾಡುವುದು ಇಂಥ ಯಾವುದನ್ನೂ ಈ ದಿನ ನಿಮ್ಮಿಂದ ಮಾಡುವುದು ಸಾಧ್ಯವಾಗುವುದಿಲ್ಲ. ಆದ್ದರಿಂದ ಮುಖ್ಯ ಸಂಗತಿಗಳು ಎಂದಾಗ ತಕ್ಷಣವೇ ಅಥವಾ ಆವೇಶದಲ್ಲಿ ಏನನ್ನೂ ಹೇಳದಿರುವುದು ಉತ್ತಮ. ನಿಮಗೆ ತಾತ್ಕಾಲಿಕವಾಗಿ ಅನುಕೂಲ ಆಗಲಿದೆ ಎಂಬ ಕಾರಣಕ್ಕೆ ದೀರ್ಘಾವಧಿ ವಿಚಾರಗಳನ್ನು ನಿರ್ಲಕ್ಷ್ಯ ಮಾಡುವುದಕ್ಕೆ ಹೋಗಬೇಡಿ. ಕುಟುಂಬದ ವ್ಯವಹಾರವನ್ನು ಮಾಡುತ್ತಾ ಬರುತ್ತಿರುವವರಿಗೆ ಈಗ ಮಾಡುತ್ತಿರುವುದರ ಜತೆಗೆ ಇನ್ನಷ್ಟು ವ್ಯವಹಾರವನ್ನು ಸೇರಿಸಿಕೊಳ್ಳಬೇಕು ಎಂಬ ಆಲೋಚನೆ ಮೂಡಬಹುದು.
ವಿರಾಮವಾದ ಮನಸ್ಥಿತಿಯಲ್ಲಿ ಇರಲಿದ್ದೀರಿ. ಪಾರ್ಟಿ, ಗೆಟ್ ಟು ಗೆದರ್ ಗಳಲ್ಲಿ ಭಾಗವಹಿಸುವ ಸಾಧ್ಯತೆ ಈ ದಿನ ಇದೆ. ಸಂಬಂಧಿಗಳು, ಸ್ನೇಹಿತರು ಹಾಗೂ ಪರಿಚಯಸ್ಥರು ಹಲವರನ್ನು ಭೇಟಿ ಆಗಲಿದ್ದೀರಿ. ನಿಮ್ಮ ಮನಸ್ಸು ಉಲ್ಲಾಸದಿಂದ ಕೂಡಿರುತ್ತದೆ. ಹಣಕಾಸಿನ ವಿಚಾರಕ್ಕೆ ಸ್ನೇಹಿತರು ಅಥವಾ ಆಪ್ತರ ಜತೆಗೆ ಚರ್ಚೆಯನ್ನು ಮಾಡಲಿದ್ದೀರಿ. ನಿಮ್ಮಲ್ಲಿ ಕೆಲವರು ಈಗಿರುವ ಮನೆಯನ್ನು ಬದಲಾಯಿಸಿ, ಬೇರೆ ಸ್ಥಳಕ್ಕೆ ತೆರಳಬೇಕು ಎಂದೇನಾದರೂ ಆಲೋಚನೆ ಮಾಡುತ್ತಿದ್ದಲ್ಲಿ ಅಗತ್ಯ ಇರುವಂಥ ಮಾಹಿತಿ ದೊರೆಯಲಿದೆ. ಇನ್ನು ನೀವು ನಿರೀಕ್ಷೆ ಕೂಡ ಮಾಡದ ರೀತಿಯಲ್ಲಿ ಉದ್ಯೋಗ ಬದಲಾವಣೆ ಅವಕಾಶಗಳು ತೆರೆದುಕೊಳ್ಳುವಂತೆ ಕಾಣುತ್ತವೆ.
ತೀರಾ ಅಗತ್ಯ ಎಂದು ನೀವಾಗಿಯೇ ಕೇಳಿದ್ದಲ್ಲಿ ನಿಮ್ಮ ಸಂಬಂಧಿಕರು, ಸ್ನೇಹಿತರು ಅಥವಾ ಪೋಷಕರು ಹಣಕಾಸಿನ ನೆರವು ನೀಡುವ ಬಗ್ಗೆ ಖಚಿತವಾಗಿ ಹೇಳುವ ಸಾಧ್ಯತೆ ಇದೆ. ಈ ಹಿಂದೆ ನೀವು ಹೇಳಿದ್ದ ಪ್ರಾಜೆಕ್ಟ್ ಗಾಗಿಯೋ ಅಥವಾ ವ್ಯವಹಾರದ ಮೇಲಿನ ನಂಬಿಕೆಯಿಂದಲೋ ಹಣ ಹಾಕುವುದಕ್ಕೆ ಒಪ್ಪಿಗೆ ಸೂಚಿಸುವ ಅವಕಾಶಗಳು ಹೆಚ್ಚಿಗೆ ಇವೆ. ಇನ್ನು ಈ ದಿನ ರೆಸ್ಟೋರೆಂಟ್, ಸಿನಿಮಾ ಅಥವಾ ಮನರಂಜನೆಗಾಗಿ ಅಂತಲೇ ಕೆಲವು ಸ್ಥಳಗಳಿಗೆ ಕುಟುಂಬ ಸಮೇತ ತೆರಳುವಂಥ ಯೋಗ ಕಂಡುಬರುತ್ತಿದೆ. ವಾಹನವನ್ನು ಪಾರ್ಕಿಂಗ್ ಮಾಡುವಾಗ ಸಾಮಾನ್ಯ ದಿನಗಳಿಗಿಂತ ಎಚ್ಚರಿಕೆಯಿಂದ ಇರುವುದು ಮುಖ್ಯ.
ಈ ದಿನ ಸಾಧ್ಯವಾದಲ್ಲಿ ಹತ್ತು ನಿಮಿಷಗಳ ಕಾಲ ಧ್ಯಾನ ಮಾಡುವುದು ಒಳ್ಳೆಯದು. ಕೆಲವು ಸಂಗತಿಗಳನ್ನು ಯಾಕಾದರೂ ಹೇಳಿದೆನೋ ಎಂಬ ಪರಿಸ್ಥಿತಿ ನಿಮ್ಮದಾಗುತ್ತದೆ. ಒಂದೇ ವಿಚಾರಕ್ಕೆ ಒಬ್ಬ ವ್ಯಕ್ತಿ ಅಥವಾ ಹಲವರು ನಿಮ್ಮ ಬಳಿ ವಿಚಾರಿಸುವುದಕ್ಕೆ ಆರಂಭಿಸಬಹುದು ಅಥವಾ ತಮ್ಮ ಪರವಾಗಿ ಶಿಫಾರಸು ಮಾಡುವಂತೆ ಕೇಳಿಕೊಳ್ಳಬಹುದು. ಮಾನಸಿಕ ಹಿಂಸೆ ಆಯಿತೋ ಅಂತಲೋ ಕಿರಿಕಿರಿ ಮಾಡುತ್ತಿದ್ದಾರೆ ಎಂಬ ಕಾರಣಕ್ಕೋ ಕೋಪವನ್ನು ಹೊರ ಹಾಕುವುದಕ್ಕೆ ಹೋಗಬೇಡಿ. ಸಂಗಾತಿ ಕಡೆಯ ಸಂಬಂಧಿಕರು ಮನೆಗೆ ಬರುವಂಥ ಯೋಗ ಇದೆ.