ದಿಗ್ಗಜರೊಂದಿಗೆ ಹೋಲಿಸಿ, ವೈಭವ್ಗೆ ಕಿವಿಮಾತು ಹೇಳಿದ ಕಪಿಲ್ ದೇವ್! – Kannada News | Kapil Dev believes Vaibhav Sooryavanshi has extraordinary talent
ಟೀಮ್ ಇಂಡಿಯಾದ ಮಾಜಿ ನಾಯಕ ಕಪಿಲ್ ದೇವ್ ಅವರು ಇತ್ತೀಚೆಗೆ ಯುವ ದಾಂಡಿಗ ವೈಭವ್ ಸೂರ್ಯವಂಶಿ ಅವರ ಸಾಮರ್ಥ್ಯವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಅಷ್ಟೇ ಅಲ್ಲದೆ, ವೈಭವ್ ಆಟವು ಸಚಿನ್ ತೆಂಡೂಲ್ಕರ್ ಮತ್ತು ವಿರಾಟ್ ಕೊಹ್ಲಿ ಅವರ ಮಟ್ಟದಲ್ಲಿದೆ ಎಂದು ಮೆಚ್ಚುಗೆಗಳನ್ನು ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೆ ಯುವ ದಾಂಡಿಗನಿಗೆ ಕಿವಿಮಾತು ಕೂಡ ಹೇಳಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಕಪಿಲ್ ದೇವ್, ವೈಭವ್ ಸೂರ್ಯವಂಶಿ ಅವರಲ್ಲಿರುವ ಪ್ರತಿಭೆ ಸಚಿನ್ ತೆಂಡೂಲ್ಕರ್ ಮತ್ತು ವಿರಾಟ್ ಕೊಹ್ಲಿ ಅವರ ಮಟ್ಟದಲ್ಲಿದೆ. ಆತನ ನೈಸರ್ಗಿಕ ಆಟವೇ ಆತನ…