‘ಅಪ್ಪನೇ ಗರ್ಭಿಣಿ ಮಗಳನ್ನು ಕುರಿ ಕಡಿದಂಗೆ ಕಡಿದವ್ನೆ’: ಮರ್ಯಾದಾ ಹತ್ಯೆಯ ಭೀಕರತೆ ಬಿಚ್ಚಿಟ್ಟ ಯುವಕನ ದೊಡ್ಡಮ್ಮ – Kannada News | Dharwad Honour Killing Case: Victim’s Relative Reveals crime Details, Sparks Outrage

ಹುಬ್ಬಳ್ಳಿ, ಡಿಸೆಂಬರ್ 22: ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪುರ ಗ್ರಾಮದಲ್ಲಿ ನಡೆದ ಮರ್ಯಾದಾ ಹತ್ಯೆ ಇಡೀ ಧಾರವಾಡ ಜಿಲ್ಲೆಯನ್ನೇ ಬೆಚ್ಚಿಬೀಳಿಸಿದೆ. ದಲಿತ ಯುವಕನನ್ನು ಮದುವೆಯಾಗಿದ್ದಕ್ಕೆ 7 ತಿಂಗಳ ಗರ್ಭಿಣಿಯಾಗಿದ್ದ ಮಗಳನ್ನು ತಂದೆಯೇ ಕೊಲೆ ಮಾಡಿದ ಘಟನೆ ನಡೆದಿದೆ. ಘಟನೆಯ ಭೀಕರತೆಯನ್ನು ಯುವಕ ವಿವೇಕಾನಂದನ ದೊಡ್ಡಮ್ಮ ಜಯಶ್ರೀ ಬಹಿರಂಗಪಡಿಸಿದ್ದು, ಆ ಹುಡುಗಿಯನ್ನು ನಮ್ಮ ಹುಡುಗ ಮದುವೆಯಾಗಿದ್ದು ತಪ್ಪೇ? ನಮ್ಮ ಮಕ್ಕಳನ್ನು ಹೊಡೆದುಹಾಕಿದ್ದಾರೆ. ಮದುವೆಯಾಗಿ ತಿಂಗಳುಗಳೇ ಆಗಿದ್ದವು. ಹುಡುಗಿ ಏಳು ತಿಂಗಳ ಗರ್ಭಿಣಿಯಾಗಿದ್ದಳು ಎಂದು ಕಣ್ಣೀರು ಹಾಕಿದ್ದಾರೆ. ಅವರು ‘‘ದೊಡ್ಡ…

Read More

ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್ – Kannada News | ILT20: Desert Vipers have Qualified for Play off

ಯುಎಇನಲ್ಲಿ ನಡೆಯುತ್ತಿರುವ ಇಂಟರ್​ನ್ಯಾಷನಲ್ ಲೀಗ್ ಟಿ20 ಟೂರ್ನಿಯಲ್ಲಿ ಡೆಸರ್ಟ್ ವೈಪರ್ಸ್ ತಂಡ ಪ್ಲೇಆಫ್​ಗೇರಿದೆ. ದುಬೈ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಈ ಟೂರ್ನಿಯ 24ನೇ ಪಂದ್ಯದಲ್ಲಿ ಎಂಐ ಎಮಿರೇಟ್ಸ್ ಹಾಗೂ ಡೆಸರ್ಟ್ ವೈಪರ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನಲ್ಲಿ ಟಾಸ್ ಗೆದ್ದ ಎಂಐ ಎಮಿರೇಟ್ಸ್ ತಂಡದ ನಾಯಕ ಕೀರನ್ ಪೊಲಾರ್ಡ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಡೆಸರ್ಟ್ ವೈಪರ್ಸ್ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 124 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಈ ಗುರಿಯನ್ನು ಬೆನ್ನತ್ತಿದ ಎಂಐ…

Read More

ಇಂದಿನಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಿರುಷಷ್ಠಿ ಮಹೋತ್ಸವ: ಯುಟಿ ಖಾದರ್ ಸೇರಿ ಅನ್ಯಧರ್ಮೀಯ ನಾಯಕರ ಆಹ್ವಾನಿಸಿದ್ದಕ್ಕೆ ಆಕ್ರೋಶ – Kannada News | Kukke Subrahmanya Kitu Shashti: Controversy Over Invitation to Leaders of Other Faiths including UT Khader

ಮಂಗಳೂರು, ಡಿಸೆಂಬರ್ 22: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇಂದಿನಿಂದ ಕಿರುಷಷ್ಠಿ ಮಹೋತ್ಸವ ವಿಜ್ರಂಭಣೆಯಿಂದ ನಡೆಯುತ್ತಿದೆ. ಆದರೆ, ಈ ಮಹೋತ್ಸವಕ್ಕೆ ಅನ್ಯಧರ್ಮೀಯ ನಾಯಕರನ್ನು ಆಹ್ವಾನಿಸಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಕ್ಷೇತ್ರ ಸಂರಕ್ಷಣಾ ವೇದಿಕೆಯು ಇಂದು ಪ್ರತಿಭಟನೆ ನಡೆಸುತ್ತಿದ್ದು, ಅನ್ಯಧರ್ಮೀಯ ನಾಯಕರಿಗೆ ಕೊಟ್ಟಿರುವ ಆಹ್ವಾನಗಳನ್ನು ತಕ್ಷಣವೇ ವಾಪಸ್ ಪಡೆಯುವಂತೆ ಆಗ್ರಹಿಸಿದೆ. ಸ್ಪೀಕರ್ ಯು.ಟಿ. ಖಾದರ್, ಐವಾನ್ ಡಿಸೋಜ, ಬ್ಯಾ​ರಿ ಅಕಾಡೆಮಿ ಅಧ್ಯಕ್ಷ ಉಮರ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಗಫೂರ್, ಕನಿಷ್ಠ ವೇತನ ಸಲಹಾ ಮಂಡಳಿಯ ಶಹೀದ್ ತೆಕ್ಕಿಲ್, ಕೊಂಕಣಿ ಸಾಹಿತ್ಯ ಅಕಾಡೆಮಿಯ…

Read More

4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ – Kannada News | Ashes thrashing Ashes series decided the earliest in terms of balls

ಟೆಸ್ಟ್ ಕ್ರಿಕೆಟ್​ನ ಮದಗಜಗಳ ಕಾಳಗದಲ್ಲಿ ಮತ್ತೊಮ್ಮೆ ಇಂಗ್ಲೆಂಡ್ ತಂಡವನ್ನು ಬಗ್ಗು ಬಡಿಯುವಲ್ಲಿ ಆಸ್ಟ್ರೇಲಿಯಾ ತಂಡ ಯಶಸ್ವಿಯಾಗಿದೆ. ಈ ಬಾರಿ ಕೇವಲ 4719 ಎಸೆತಗಳಲ್ಲಿ ಆಂಗ್ಲರನ್ನು ಕಟ್ಟಿಹಾಕಲಾಗಿದೆ. ಅಂದರೆ 4719 ಎಸೆತಗಳಲ್ಲೇ ಈ ಬಾರಿಯ ಆ್ಯಶಸ್ ಸರಣಿಯ ಫಲಿತಾಂಶ ಹೊರಬಿದ್ದಿದೆ. ಈ ಸರಣಿಯ ಮೊದಲೆರಡು ಪಂದ್ಯಗಳಲ್ಲಿ 8 ವಿಕೆಟ್​ಗಳ ಜಯ ಸಾಧಿಸಿದ್ದ ಆಸ್ಟ್ರೇಲಿಯಾ ತಂಡವು ಮೂರನೇ ಟೆಸ್ಟ್ ಪಂದ್ಯದಲ್ಲಿ 82 ರನ್​ಗಳ ಗೆಲುವು ದಾಖಲಿಸಿದೆ. ಈ ಮೂಲಕ 3-0 ಅಂತರದಿಂದ ಆ್ಯಶಸ್ ಸರಣಿಯನ್ನು ವಶಪಡಿಸಿಕೊಂಡಿದೆ. ಈ ಮೂರು ಪಂದ್ಯಗಳಲ್ಲಿ…

Read More

ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ – Kannada News | Kichcha Sudeep convey thanks To Hubballi Fans In His Style

ಕಿಚ್ಚ ಸುದೀಪ್ ಅವರು ಶನಿವಾರ (ಡಿಸೆಂಬರ್ 20) ಹುಬ್ಬಳ್ಳಿಗೆ ತೆರಳಿದ್ದರು. ಈ ವೇಳೆ ‘ಮಾರ್ಕ್’ ಸಿನಿಮಾದ ಪ್ರೀರಿಲೀಸ್ ಇವೆಂಟ್ ನಡೆದಿದೆ. ಈ ವೇಳೆ ಸಾಕಷ್ಟು ಸಂಖ್ಯೆಯಲ್ಲಿ ಜನರು ನೆರೆದಿದ್ದರು. ಕೊನೆಯಲ್ಲಿ ಸುದೀಪ್ ಅವರು ವಿಡಿಯೋ ಮಾಡಿ ಹುಬ್ಬಳ್ಳಿಯ ಜನತೆಗೆ ಧನ್ಯವಾದ ಹೇಳಿದ್ದಾರೆ. ಆ ಸಂದರ್ಭದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಸ್ವತಃ ಸುದೀಪ್ ಅವರು ಇದನ್ನು ಹಂಚಿಕೊಂಡಿದ್ದಾರೆ. ಅಭಿಮಾನಿಗಳು ತೋರಿದ ಪ್ರೀತಿಗೆ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ – Kannada News | Karnataka Congress Power Sharing Talks: DK Shivakumar to Visit Delhi, Likely to Meet Rahul Gandhi

ಬೆಂಗಳೂರು, ಡಿಸೆಂಬರ್ 22: ಕರ್ನಾಟಕದಲ್ಲಿ ಮುಖ್ಯಮಂತ್ರಿ ಸ್ಥಾನದ ಅಧಿಕಾರ ಹಂಚಿಕೆ ಕುರಿತ ಬಿಕ್ಕಟ್ಟು ಮುಂದುವರಿದಿದ್ದು, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ದೆಹಲಿಗೆ ತೆರಳಲು ಅಣಿಯಾಗಿದ್ದಾರೆ. ಡಿಸೆಂಬರ್ 26 ಮತ್ತು 27 ರಂದು ನಡೆಯಲಿರುವ ಎಐಸಿಸಿ ಕಾರ್ಯಕಾರಿಣಿ ಸಭೆಯ ನೆಪದಲ್ಲಿ, ಅದಕ್ಕೂ ಮುನ್ನ ಶಿವಕುಮಾರ್ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲು ಯತ್ನಿಸುತ್ತಿದ್ದಾರೆ. ಮುಖ್ಯವಾಗಿ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿ ರಾಜ್ಯದ ನಾಯಕತ್ವ ವಿಚಾರವನ್ನು ಬಗೆಹರಿಸಿಕೊಳ್ಳುವ ಉದ್ದೇಶ ಹೊಂದಿದ್ದಾರೆ ಎನ್ನಲಾಗಿದೆ. ಆದರೆ, ದೆಹಲಿಯಿಂದ ಬುಲಾವ್ ಬಂದರೆ ಮಾತ್ರ ದೆಹಲಿಗೆ ಪ್ರಯಾಣ…

Read More

IPL 2026: ಈ ಆಟಗಾರನನ್ನು ಖರೀದಿಸಿದ್ದೇ ಕೆಎಲ್ ರಾಹುಲ್​ಗಾಗಿ..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಕ್ಕಾಗಿ ಡೆಲ್ಲಿ ಕ್ಯಾಪಿಟಲ್ಸ್​ ಬಲಿಷ್ಠ ಪಡೆಯನ್ನು ರೂಪಿಸಿದೆ. ಹರಾಜಿಗೂ ಮುನ್ನ 17 ಆಟಗಾರರನ್ನು ಉಳಿಸಿಕೊಂಡಿದ್ದ ಡೆಲ್ಲಿ ಫ್ರಾಂಚೈಸಿ, ಆಕ್ಷನ್​ ಮೂಲಕ 8 ಆಟಗಾರರನ್ನು ಖರೀದಿಸಿದ್ದಾರೆ. ಈ ಎಂಟು ಆಟಗಾರರಲ್ಲಿ ಐವರು ವಿದೇಶಿ ಪ್ಲೇಯರ್ಸ್ ಎಂಬುದು ವಿಶೇಷ. ಈ ಐವರು ವಿದೇಶಿ ಆಟಗಾರರಲ್ಲಿ ಬೆನ್ ಡಕೆಟ್ ಕೂಡ ಒಬ್ಬರು. ಇಂಗ್ಲೆಂಡ್ ತಂಡದ ಆರಂಭಿಕ ದಾಂಡಿಗ ಬೆನ್ ಡಕೆಟ್ ಇದೇ ಮೊದಲ ಬಾರಿಗೆ ಐಪಿಎಲ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅಂದರೆ ಕಳೆದ 18 ಸೀಸನ್​ಗಳಲ್ಲಿ…

Read More

ಜರ್ಮನಿಯಲ್ಲಿ ಕ್ರಿಸ್​ಮಸ್​ ಮಾರ್ಕೆಟ್ ರದ್ದು, ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ ಗಬ್ಬಾರ್ಡ್ ಕಳವಳ – Kannada News | Tulsi Gabbard Warns Against Islamist Ideology, Calls It a Threat to US Freedom

ವಾಷಿಂಗ್ಟನ್, ಡಿಸೆಂಬರ್ 22: ಅಮೆರಿಕದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅಮೆರಿಕದ ರಾಷ್ಟ್ರೀಯ ಗುಪ್ತಚರ ವಿಭಾಗದ ನಿರ್ದೇಶಕಿ ತುಳಸಿ ಗಬ್ಬಾರ್ಡ್​​ ಇಸ್ಲಾಮಿಸ್ಟ್​ ಸಿದ್ಧಾಂತಗಳ ಬಗ್ಗೆ ಕಟುವಾದ ಟೀಕೆಗಳನ್ನು ಮಾಡಿದ್ದಾರೆ. ಇಸ್ಲಾಮಿಕ್‌ ಮೂಲಭೂತವಾದವನ್ನ ಬುಡಸಮೇತ ಕಿತ್ತೆಸೆಯುವಂತೆ, ಜಾಗತಿಕ ಸರ್ಕಾರಗಳನ್ನು ಜನರು ಒತ್ತಾಯಿಸುತ್ತಿದ್ದಾರೆ. ಅವರು ಇಸ್ಲಾಂ ಅನ್ನು ಅಮೆರಿಕದ ಸ್ವಾತಂತ್ರ್ಯ ಮತ್ತು ರಾಷ್ಟ್ರೀಯ ಭದ್ರತೆಗೆ ಪ್ರಮುಖ ಬೆದರಿಕೆ ಎಂದು ಕರೆದಿದ್ದಾರೆ. ಅಮೆರಿಕದಲ್ಲಿ ಇಸ್ಲಾಮಿಕ್ ಸಿದ್ಧಾಂತವು ವೈಯಕ್ತಿಕ ಸ್ವಾತಂತ್ರ್ಯ ಮತ್ತು ಪ್ರಜಾಪ್ರಭುತ್ವ ಮೌಲ್ಯಗಳಿಗೆ ಅಪಾಯವನ್ನುಂಟುಮಾಡುತ್ತದೆ ಎಂದು ತುಳಸಿ ಗಬ್ಬಾರ್ಡ್ ಎಚ್ಚರಿಸಿದ್ದಾರೆ. ಈ ಬೆದರಿಕೆ ಇನ್ನು…

Read More

ಟಿ20 ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಸ್ಮೃತಿ ಮಂಧಾನ – Kannada News | Smriti Mandhana becomes first Indian to Reach 4000 runs in T20I

ಶ್ರೀಲಂಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ಮಹಿಳಾ ತಂಡ ಭರ್ಜರಿ ಜಯ ಸಾಧಿಸಿದೆ. ಈ ಜಯದೊಂದಿಗೆ ಟೀಮ್ ಇಂಡಿಯಾದ ಉಪನಾಯಕಿ ಸ್ಮೃತಿ ಮಂಧಾನ (Smriti Mandhana) ವಿಶೇಷ ದಾಖಲೆಯನ್ನು ಸಹ ನಿರ್ಮಿಸಿದ್ದಾರೆ. ಅಲ್ಲದೆ ಈ ವಿಶ್ವ ದಾಖಲೆ ಬರೆದ ವಿಶ್ವದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. Source link

Read More

ಕರ್ನಾಟಕ ಹವಾಮಾನ ವರದಿ: ಚಳಿಗೆ ನಲುಗಿದ ಉತ್ತರ ಕರ್ನಾಟಕ; 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​! – Kannada News | Bengaluru temperature: Extreme cold weather Karnataka, yellow alert for 5 districts

ಚಳಿಗೆ ನಲುಗಿದ ಉತ್ತರ ಕರ್ನಾಟಕ; 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​! ಬೆಂಗಳೂರು, ಡಿಸೆಂಬರ್ 22: ಕಳೆದ ಹಲವು ದಿನಗಳಿಂದ ರಾಜ್ಯದೆಲ್ಲೆಡೆ ಶೀತದಲೆ (Weather Forecast) ಅಬ್ಬರಿಸುತ್ತಿದ್ದು, ವಿಶೇಷವಾಗಿ ಉತ್ತರ ಕರ್ನಾಟಕ ಹೆಚ್ಚಿನ ಪ್ರಮಾಣದಲ್ಲಿ ಚಳಿ ಕಂಡಿದೆ. ನಿನ್ನೆ ವಿಜಯಪುರದಲ್ಲಿ ಅತಿ ಕಡಿಮೆ ಉಷ್ಣಾಂಶ ದಾಖಲಾಗಿತ್ತು. ಇಂದು ಕಲಬುರಗಿ, ಬೀದರ್ ಸರಿದಂತೆ 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಿದೆ. ಬೆಂಗಳೂರಿನಲ್ಲೂ ಮೈಕೊರೆಯುವ ಚಳಿ ಜನರನ್ನು ಬೆಂಬಿಡದೆ ಕಾಡುತ್ತಿದ್ದು, ಮೋಡ ಮುಸುಕಿದ ವಾತಾವರಣವಿರಲಿದೆ ಎಂದು ಇಲಾಖೆ ತಿಳಿಸಿದೆ. ಯಾವ ಜಿಲ್ಲೆಗಳಿಗೆ…

Read More