ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಚಳಿಗಾಲದ ಪ್ರಭಾವ ಹೆಚ್ಚಳ; ಇಂದು ಕೂಡ ಹಲವೆಡೆ ಒಣ ಹವೆ – Kannada News | Bengaluru temperature: Dry weather all over karnataka, misty weather in bengaluru

ಬೆಂಗಳೂರು, ಜನವರಿ 05: ರಾಜ್ಯದಲ್ಲಿ ಚಳಿಗಾಲದ ಪ್ರಭಾವ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಹಲವೆಡೆ ಮಂಜು ಹಾಗೂ ಒಣ ಹವೆಯ (Weather Forecast) ವಾತಾವರಣ ಜನಜೀವನದ ಮೇಲೆ ಪ್ರಭಾವ ಬೀರುತ್ತಿದೆ. ಕಳೆದ ಕೆಲ ದಿನಗಳಿಂದ ಕೆಲವೆಡೆ ತುಂತುರು ಮಳೆಯಾದರೂ, ರಾಜ್ಯದ ಬಹುತೇಕ ಭಾಗಗಳಲ್ಲಿ ಒಣ ಹವೆಯೇ ಮುಂದುವರಿದಿದೆ. ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯಂತೆ, ನಿನ್ನೆಯಂತೆಯೇ ಇಂದೂ ದಕ್ಷಿಣ ಒಳನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ಎಲ್ಲೆಲ್ಲಿ ಒಣಹವೆ?

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಮಳೆಯ ಲಕ್ಷಣಗಳಿಲ್ಲದೆ ಒಣ ಹವೆಯ ವಾತಾವರಣವಿರಲಿದೆ.

ಇದೇ ವೇಳೆ ಕರಾವಳಿ ಭಾಗದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿಯೂ ಒಣ ಹವೆ ಮುಂದುವರಿಯಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿಯೂ ಕಳೆದ ಹಲವು ದಿನಗಳಿಂದ ಕಾಣಿಸಿಕೊಂಡಿರುವ ಒಣ ಹವೆಯ ವಾತಾವರಣ ಇಂದು ಸಹ ಮುಂದುವರಿಯಲಿದೆ.

ರಾಜಧಾನಿಯಲ್ಲಿ ಚಳಿ

ರಾಜಧಾನಿ ಬೆಂಗಳೂರಿನಲ್ಲಿ ಚಳಿಯ ತೀವ್ರತೆ ಹೆಚ್ಚಾಗಿದ್ದು, ಬೆಳಗಿನ ಜಾವ ಮಂಜು ಮುಸುಕಿದ ವಾತಾವರಣ ಕಂಡುಬರುತ್ತಿದೆ. ಇಂದು ನಗರದ ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ಹಾಗೂ ಗರಿಷ್ಠ 28 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ, ಬೆಚ್ಚಗಿನ ಉಡುಪು ಧರಿಸುವುದು ಹಾಗೂ ಬಿಸಿ ಆಹಾರ ಸೇವಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 7:33 am, Tue, 6 January 26

Source link

ಕೇವಲ ೨೪ ಎಸೆತಗಳಲ್ಲಿ ೧೦ ಸಿಕ್ಸ್ ಸಿಡಿಸಿದ ವೈಭವ್ ಸೂರ್ಯವಂಶಿ – Kannada News | Vaibhav suryavanshi Smashed 10 Sixes in Just 24 Balls

ವೈಭವ್ ಸೂರ್ಯವಂಶಿಯ ಈ ಸಿಡಿಲಬ್ಬರದ ನೆರವಿನೊಂದಿಗೆ ಭಾರತ ತಂಡವು 8 ಓವರ್​ಗಳಲ್ಲಿ 95 ರನ್ ಕಲೆಹಾಕಿತು. ಇದಾದ ಬಳಿಕ ಅಭಿಮನ್ಯು ಕುಂದು 42 ಎಸೆತಗಳಲ್ಲಿ 48 ರನ್ ಬಾರಿಸಿದರು. ಈ ಮೂಲಕ ಭಾರತ ತಂಡವು 23.2 ಓವರ್​ಗಳಲ್ಲಿ 176 ರನ್​ ಗಳಿಸಿತ್ತು. ಈ ವೇಳೆ ವೇಳೆ ಮಂದ ಬೆಳಕಿನ ಕಾರಣ ಪಂದ್ಯವನ್ನು ಕೆಲ ಕಾಲ ಸ್ಥಗಿತಗೊಳಿಸಲಾಯಿತು. ಅಷ್ಟೇ ಅಲ್ಲದೆ ಪಂದ್ಯದ ಫಲಿತಾಂಶ ನಿರ್ಣಯಕ್ಕಾಗಿ ಡಕ್​ವರ್ತ್ ಲೂಯಿಸ್ ನಿಯಮದ ಮೊರೆ ಹೋಗಲಾಗಿದ್ದು, ಈ ವೇಳೆಗೆ ಭಾರತ ತಂಡವು 23.2 ಓವರ್​ಗಳಲ್ಲಿ 176 ರನ್​ಗಳಿಸಿ ನಿಗದಿತ ಗುರಿಗಿಂತ ಮುಂದಿದ್ದರಿಂದ ಟೀಮ್ ಇಂಡಿಯಾವನ್ನು 8 ವಿಕೆಟ್​ಗಳ ವಿಜಯಿ ಎಂದು ಘೋಷಿಸಲಾಯಿತು.

Source link

‘ನಿನ್ನ ಟೈಮ್ ಸ್ಟಾರ್ಟ್ ಆಗಿದೆ’; ಗಿಲ್ಲಿಗೆ ವಾರ್ನ್ ಮಾಡಿ ಬಿಗ್ ಬಾಸ್ ಬಳಿ ಅಶ್ವಿನಿ ಗೌಡ ವಿಶೇಷ ಮನವಿ – Kannada News | Your Time Started in Big Boss Kannada Ashwini Gowda warns Gilli Nata

ಬಿಗ್ ಬಾಸ್ (Bigg Boss) ಮನೆಯಲ್ಲಿ ಅಶ್ವಿನಿ ಗೌಡ ಹಾಗೂ ಗಿಲ್ಲಿ ನಟ ಹಾವು ಮುಂಗುಸಿ ರೀತಿ ಯಾವಾಗಲೂ ಕಚ್ಚಾಡುತ್ತಾ ಇರುತ್ತಾರೆ. ಇವರ ಮಧ್ಯೆ ಆಗಾಗ ಕಿರಿಕ್​​ಗಳು ಆಗುತ್ತಲೇ ಇರುತ್ತವೆ. ಅಶ್ವಿನಿ ಗೌಡ ಅವರು ಈ ಮೊದಲು ಸಿಟ್ಟನ್ನು ಬಿಟ್ಟು ಮೌನಕ್ಕೆ ಶರಣಾಗುವ ನಿರ್ಧಾರಕ್ಕೆ ಬಂದಿದ್ದರು. ಆದರೆ, ಪರಿಸ್ಥಿತಿ ಹಾಗೂ ಗಿಲ್ಲಿ ನಟನ ಚುಚ್ಚು ಮಾತುಗಳು ಇದಕ್ಕೆ ಅವಕಾಶ ಕೊಡುತ್ತಿಲ್ಲ. ಅವರು ಮತ್ತೆ ಮತ್ತೆ ಕೆರಳುತ್ತಿದ್ದಾರೆ. ಈಗ ಗಿಲ್ಲಿಗೆ ಅಶ್ವಿನಿ ಗೌಡ ನೇರವಾಗಿ ಗಿಲ್ಲಿಗೆ ವಾರ್ನ್ ಮಾಡಿದ್ದಾರೆ. ಜನವರಿ 5ರ ಎಪಿಸೋಡ್​​ನಲ್ಲಿ ಇದು ಹೈಲೈಟ್ ಆಗಿದೆ.

ಗಿಲ್ಲಿ ಅವರು ಅಶ್ವಿನಿ ಅವರನ್ನು ನಾಮಿನೇಟ್ ಮಾಡಿದರು. ಈ ವೇಳೆ ಅಶ್ವಿನಿ ವಿರುದ್ಧ ಗಿಲ್ಲಿ ಒಂದಷ್ಟು ಆರೋಪಗಳನ್ನು ಮಾಡಿದರು. ಇತ್ತೀಚೆಗೆ ರಾಶಿಕಾ ವಿರುದ್ಧ ಆರೋಪ ಮಾಡುವಾಗ ಅಶ್ವಿನಿ ಅವರು, ‘ರಾಶಿಕಾಗೆ ಮಲಗೋಕೆ ರಘು ತೊಡೆ ಬೇಕು’ ಎಂದು ಆರೋಪಿಸಿದ್ದರು. ಇದನ್ನು ಗಿಲ್ಲಿ ಖಂಡಿಸಿದ್ದಾರೆ. ‘ಅಶ್ವಿನಿ ಗೌಡ 2.O’ ಬಗ್ಗೆಯೂ ಪ್ರಶ್ನೆ ಮಾಡಿದ್ದಾರೆ. ಗಿಲ್ಲಿಯನ್ನು ಕೊಚ್ಚೆ ಎಂದು ಕರೆದರು ಅಶ್ವಿನಿ.

ಆ ಬಳಿಕ ಅಶ್ವಿನಿ ಅವರು ಗಿಲ್ಲಿಯನ್ನು ನಾಮಿನೇಟ್ ಮಾಡಿದರು. ಈ ವೇಳೆಯೂ ಕಿತ್ತಾಟ ನಡೆದಿದೆ. ‘ನಿನ್ನ ಟೈಮ್ ಸ್ಟಾರ್ಟ್ ಆಗಿದೆ’ ಎಂದು ಅಶ್ವಿನಿ ಅವರು ಗಿಲ್ಲಿಗೆ ಎಚ್ಚರಿಕೆ ನೀಡಿದರು. ಇದಕ್ಕೆ ಗಿಲ್ಲಿ ತಲೆಕೆಡಿಸಿಕೊಳ್ಳಲಿಲ್ಲ.
ನಾಮಿನೇಷನ್ ಪ್ರಕ್ರಿಯೆ ಮುಗಿದ ಬಳಿಕೆ ಎಲ್ಲರೂ ಪದೇ ಪದೇ ಅಶ್ವಿನಿ ಅವರನ್ನು ಟ್ರಿಗರ್ ಮಾಡಿದರು. ಇದರಿಂದ ಅಶ್ವಿನಿ ಅವರಿಗೆ ಕೋಪ ಬಂದಿದೆ. ಆದರೂ ಅದನ್ನು ಅವರ ಅದುಮಿಟ್ಟುಕೊಂಡರು. ‘ಇದೆಲ್ಲವನ್ನೂ ಸಹಿಸಿಕೊಳ್ಳಲು ತಾಳ್ಮೆ ಕೊಡಿ’ ಎಂದು ಬಿಗ್ ಬಾಸ್ ಬಳಿ ವಿಶೇಷ ಮನವಿ ಮಾಡಿಕೊಂಡರು.

ಇದನ್ನೂ ಓದಿ: ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಬಿಗ್ ಬಾಸ್ ಬಾಗಿಲು?

ಅಶ್ವಿನಿ ಗೌಡ ಅವರು ಫಿನಾಲೆಗೆ ಏರುವ ಕನಸು ಕಾಣುತ್ತಿದ್ದಾರೆ. ಅವರು ಗೆಲ್ಲಬೇಕು ಎಂಬುದು ಅಭಿಮಾನಿಗಳ ಕೋರಿಕೆ. ಗಿಲ್ಲಿ ನಟ ಅವರು ಅವರಿಗೆ ಉತ್ತಮ ಪ್ರತಿಸ್ಪರ್ಧಿಯಾಗಿ ಕಾಣಿಸಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 6:59 am, Tue, 6 January 26

Source link

Daily Devotional: ಈ ಐದು ಜನರ ಸಹವಾಸ ಮಾಡಿದ್ರೆ ಸರ್ವನಾಶಕ್ಕೆ ದಾರಿ

ಬೆಂಗಳೂರು, ಜನವರಿ 06: ಮಾನವನ ಶ್ರೇಯಸ್ಸು, ಯಶಸ್ಸು ಮತ್ತು ಕೀರ್ತಿಗೆ ಸ್ನೇಹಿತರ ಪಾತ್ರ ಅತಿ ಮುಖ್ಯ. ಆದರೆ, ಕೆಲವೊಮ್ಮೆ ಸ್ನೇಹಿತರು ಶುಭವನ್ನು ತರುವ ಬದಲು ಅಶುಭವನ್ನು ಸಹ ತರಬಹುದು. ಮಹಾ ಮೇಧಾವಿ ಚಾಣಕ್ಯರು, ಜೀವನದಲ್ಲಿ ಪ್ರಗತಿ ಸಾಧಿಸಲು ಐದು ವಿಧದ ಮಿತ್ರರಿಂದ ದೂರವಿರಲು ಸಲಹೆ ನೀಡಿದ್ದಾರೆ.

ಚಾಣಕ್ಯರ ಪ್ರಕಾರ, ಈ ಐದು ಬಗೆಯ ಸ್ನೇಹಿತರು ನಮ್ಮ ಜೀವನಕ್ಕೆ ಮಾರಕವಾಗಬಹುದು: ಅಸೂಯೆ ಪಡುವವರು, ನಿಮ್ಮನ್ನು ಇಷ್ಟಪಡದವರು, ಅತಿಯಾಗಿ ಮಾತನಾಡುವವರು, ಸಂಕುಚಿತ ಭಾವನೆಯನ್ನು ಹೊಂದಿರುವವರು ಮತ್ತು ಸುಳ್ಳು ಹೇಳುವವರು. ಇಂತಹವರ ಸಹವಾಸವು ನಿಮ್ಮ ಅಭಿವೃದ್ಧಿಗೆ ಅಡ್ಡಿಯಾಗುವುದಲ್ಲದೆ, ನಿಮ್ಮ ಆಯುಷ್ಯವನ್ನು ಸಹ ವ್ಯರ್ಥ ಮಾಡುತ್ತದೆ. ಆದ್ದರಿಂದ, ನಿಮ್ಮ ಒಳಿತಿಗಾಗಿ ಇಂತಹವರ ಸಹವಾಸದಿಂದ ಜಾಗರೂಕರಾಗಿರುವುದು ಅತಿ ಅಗತ್ಯ ಎಂದು ಡಾ. ಬಸವರಾಜ ಗುರೂಜಿ ಹೇಳಿದ್ದಾರೆ.

Source link

Horoscope Today 06 January: ಇಂದು ಈ ರಾಶಿಯವರ ನಿರೀಕ್ಷೆಗಳು ಹುಸಿಯಾಗಬಹುದು – Kannada News | Daily Horoscope for January 6th 2025: Dr. Basavaraj Gurujis Predictions for Zodiac Signs

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಜನವರಿ 06, ಮಂಗಳವಾರದ ದಿನಭವಿಷ್ಯವನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ, ದಕ್ಷಿಣಾಯಣ ಪುಷ್ಯಮಾಸ ಹೇಮಂತಋತು ಕೃಷ್ಣಪಕ್ಷ ತದಿಗೆ ಆಶ್ಲೇಷ ನಕ್ಷತ್ರ, ಪ್ರೀತಿಯೋಗ ಭದ್ರ ಕರಣದ ಮಹತ್ವದ ದಿನವಾಗಿದೆ. ಇಂದು ಸುಬ್ರಹ್ಮಣ್ಯ ಮತ್ತು ಹನುಮನ ವಿಶೇಷ ಪರ್ವದಿನವಾಗಿದ್ದು, ಸಂಕಷ್ಟ ಚತುರ್ಥಿಯೂ ಇದೆ. ನರಗುಂದ ಶಿವಜ್ಜಯ್ಯನ ಪುಣ್ಯತಿಥಿ ಹಾಗೂ ಅಫಜಲಪುರದಲ್ಲಿ ಮಲ್ಲಿಕಾರ್ಜುನ ಸ್ವಾಮಿಗಳ ಜಾತ್ರಾ ಮಹೋತ್ಸವವೂ ನಡೆಯುತ್ತಿದೆ.

ಗುರೂಜಿ ಅವರು ಮೇಷದಿಂದ ಮೀನದವರೆಗಿನ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದರು. ಆಶ್ಲೇಷ ನಕ್ಷತ್ರದಲ್ಲಿ ಚಂದ್ರನ ಸಂಚಾರವು ಪ್ರತಿಯೊಂದು ರಾಶಿಯ ಮೇಲೆ ಹೇಗೆ ಪ್ರಭಾವ ಬೀರುತ್ತದೆ ಎಂಬುದನ್ನು ವಿವರಿಸಿದ್ದಾರೆ. ಕೆಲಸ-ಕಾರ್ಯಗಳು, ಆರ್ಥಿಕ ಸ್ಥಿತಿ, ಆರೋಗ್ಯ, ಕುಟುಂಬ ಸಂಬಂಧಗಳು ಮತ್ತು ಪ್ರಯಾಣದ ಕುರಿತು ಪ್ರಮುಖ ವಿವರಗಳನ್ನು ನೀಡಿದ್ದಾರೆ. ಅಲ್ಲದೆ, ಪ್ರತಿಯೊಂದು ರಾಶಿಯವರಿಗೆ ಶುಭಕರವಾದ ಬಣ್ಣ, ದಿಕ್ಕು, ಅದೃಷ್ಟ ಸಂಖ್ಯೆ ಮತ್ತು ಪಠಿಸಬೇಕಾದ ವಿಶೇಷ ಮಂತ್ರಗಳನ್ನು ಡಾ. ಬಸವರಾಜ ಗುರೂಜಿ ತಿಳಿಸಿದ್ದಾರೆ.

Source link

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಡಬಲ್​​ ಗುಡ್​​ನ್ಯೂಸ್​​ – Kannada News | Namma Metro Pink and Blue Lines will open in 2026

ಬೆಂಗಳೂರು, ಜನವರಿ 06: ಕೊರೊನಾ ಬಳಿಕ ಕೊಂಚ ಇಳಿಕೆಯಾಗಿದ್ದ ಬೆಂಗಳೂರಿನ ಟ್ರಾಫಿಕ್​​ ಸಮಸ್ಯೆ ಈಗ ಮತ್ತೆ ಹಳೆಯ ಸ್ಥಿತಿಗೆ ಮರಳಿದೆ. ಪ್ರತಿದಿನ ವಾಹನ ದಟ್ಟಣೆ ಸಮಸ್ಯೆಗೆ ಸಿಲುಕಿ ಒದ್ದಾಡುತ್ತಿರುವ ಸಿಲಿಕಾನ್​ ಸಿಟಿ ಮಂದಿಗೆ ನಮ್ಮ ಮೆಟ್ರೋ ಗುಡ್​​ನ್ಯೂಸ್​​ ಕೊಟ್ಟಿದ್ದು, ಒಂದಲ್ಲ ಎರಡು ಹೊಸ ಮಾರ್ಗಗಗಳು ಈ ವರ್ಷದಿಂದಲೇ ಕಾರ್ಯಾರಂಭ ಮಾಡಲಿವೆ. ಈಗಾಗಲೇ ಸೇವೆ ಒದಗಿಸುತ್ತಿರುವ ಹಸಿರು, ಗುಲಾಬಿ ಮತ್ತು ಹಳದಿ ಮಾರ್ಗಗಳ ಜೊತೆ ಮತ್ತೆರಡು ಮಾರ್ಗಗಳಲ್ಲಿ ಮೆಟ್ರೋ ರೈಲುಗಳ ಸಂಚಾರದಿಂದ ನಗರದ ಟ್ರಾಫಿಕ್​​ ಸಮಸ್ಯೆಗೆ ಬಹುತೇಕ ಪರಿಹಾರ ಸಿಗಬಹುದೆಂಬ ನಿರೀಕ್ಷೆಯಿದೆ.

ಯಾವೆಲ್ಲ ಹೊಸ ಮಾರ್ಗ ಓಪನ್​?

2026ರ ಅಂತ್ಯದ ಒಳಗೆ ಪಿಂಕ್​ ಮತ್ತು ಬ್ಲ್ಯೂ ಲೈನ್​​ಗಳಲ್ಲಿ ಮೆಟ್ರೋ ರೈಲುಗಳು ವಾಣಿಜ್ಯ ಸಂಚಾರ ನಡೆಸಲಿವೆ. ಮೇ ತಿಂಗಳಿನಲ್ಲಿ ಪಿಂಕ್ ಲೈನ್ ಮೊದಲ ಹಂತ ಓಪನ್ ಆದರೆ, ಡಿಸೆಂಬರ್​​ ವೇಳೆಗೆ ಬ್ಲ್ಯೂ ಲೈನ್​​ನ ಮೊದಲ ಹಂತವೂ ಕಾರ್ಯಾಚರಣೆ ಆರಂಭಿಸಿಲಿದೆ. ಕಾಳೇನ ಅಗ್ರಹಾರ ಟು ನಾಗವಾರ ಸಂಪರ್ಕಿಸುವ ಪಿಂಕ್ ಲೈನ್​​ 21.25 ಕಿ.ಮೀ. ವಿಸ್ತೀರ್ಣವಿದ್ದು, ಆ ಪೈಕಿ ಕಾಳೇನ ಅಗ್ರಹಾರ ಟು ತಾವರೆಕೆರೆ ವರೆಗಿನ 7.5 ಕಿ.ಮೀ.ಯ 6 ಎಲಿವೇಟೆಡ್ ಮೆಟ್ರೋ ಸ್ಟೇಷನ್​​ಗಳು ಮೇನಲ್ಲಿ ಓಪನ್ ಆಗಲಿದೆ. ನವೆಂಬರ್​​ನಲ್ಲಿ ತಾವರೆಕೆರೆ ಟು ನಾಗವಾರ 12 ಅಂಡರ್ ಗ್ರೌಂಡ್ ಮೆಟ್ರೋ ಸ್ಟೇಷನ್​​ಗಳ ಕಾರ್ಯಾಚರಣೆ ಶುರುವಾಗಲಿದೆ.  ಪಿಂಕ್ ಲೈನ್​​ಗಾಗಿ ಈಗಾಗಲೇ BEMLನಿಂದ ಒಂದು ಡ್ರೈವರ್ಲೆಸ್ ರೈಲು ಕೂಡ ಬಂದಿದೆ.

ಇದನ್ನೂ ಓದಿ: ನಮ್ಮ ಮೆಟ್ರೋ ಹಳದಿ ಮಾರ್ಗ ಪ್ರಯಾಣಿಕರಿಗೆ ಶುಭಸುದ್ದಿ; ಬೆಂಗಳೂರು ತಲುಪಿದ ಡ್ರೈವರ್ಲೆಸ್ 7ನೇ ರೈಲು

ಬ್ಲೂ ಲೈನ್​​ನ ಸಿಲ್ಕ್ ಬೋರ್ಡ್ ಟು ಕೆ.ಆರ್.ಪುರಂ ಮಾರ್ಗ ಈ ವರ್ಷ ಡಿಸೆಂಬರ್​​ ವೇಳೆಗೆ ಓಪನ್ ಆಗಲಿದೆ. ಇದು 17.75 ಕಿ.ಮೀ. ಮಾರ್ಗದಲ್ಲಿ, 13 ಸ್ಟೇಷನ್​​ಗಳಿವೆ. ನೀಲಿ ಮಾರ್ಗವು ಒಟ್ಟು 58.19 ಕಿ.ಮೀ. ವಿಸ್ತೀರ್ಣವಿದ್ದು, ಮೊದಲ ಹಂತ 2026ರ ವರ್ಷಾಂತ್ಯದ ವೇಳೆಗೆ ಕಾರ್ಯಾರಂಭವಾದರೆ, 2027ರಲ್ಲಿ ಎರಡನೇ ಹಂತ ಓಪನ್​​ ಆಗಲಿದೆ. ಈ ಎರಡು ಮಾರ್ಗಗಳು ಕಾರ್ಯಾಚರಣೆ ಆರಂಭಿಸಿದರೆ ನಗರದ ಟ್ರಾಫಿಕ್ ಇಳಿಕೆಗೆ ಇನ್ನಷ್ಟು ಸಹಕಾರಿಯಾಗಲಿದೆ ಎಂದು ಮೆಟ್ರೋ ಪ್ರಯಾಣಿಕರು ಕೂಡ ಅಭಿಪ್ರಾಯಪಟ್ಟಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Numerology Prediction: ಈ ಜನ್ಮಸಂಖ್ಯೆಯವರಿಗೆ ಪ್ರೀತಿ- ಪ್ರೇಮದಲ್ಲಿ ಲಾಭ ಖಂಡಿತ – Kannada News | Birth Number 7, 8, 9 Forecast: Your Daily Horoscope Guide

ಜನ್ಮಸಂಖ್ಯೆಗೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 6ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)

ಅತಿಯಾದ ಚಿಂತೆ ನಿಮಗೆ ಸುಸ್ತು ಮಾಡಲಿದೆ. ಭವಿಷ್ಯದ ಬಗ್ಗೆ ಆಲೋಚಿಸುವುದು ತಪ್ಪಲ್ಲ, ಆದರೆ ಅದರ ಬಗ್ಗೆಯೇ ಯೋಚಿಸುತ್ತಾ ನಿಮ್ಮ ದೈನಂದಿನ ಕೆಲಸ-ಕಾರ್ಯಗಳು ದಾರಿ ತಪ್ಪದಿರುವಂತೆ ನೋಡಿಕೊಳ್ಳಿ. ನೀವು ವಹಿಸಿಕೊಂಡ ಪ್ರಾಜೆಕ್ಟ್, ಜವಾಬ್ದಾರಿಗಳನ್ನು ಗಡುವಿನೊಳಗೆ ಮುಗಿಸುವುದಕ್ಕೆ ಎಲ್ಲ ಶಕ್ತಿಯನ್ನು ಒಟ್ಟುಗೂಡಿಸಿ ಹಾಕಲಿದ್ದೀರಿ. ನಿಮ್ಮದೇ ಕೆಲಸ ಎಂಬಷ್ಟು ಶ್ರದ್ಧೆಯಿಂದ ಸ್ನೇಹಿತರಿಗೆ ಕೆಲಸ ಮಾಡಿಕೊಟ್ಟ ನಂತರವೂ ಕೆಲವು ಆಕ್ಷೇಪದ ಮಾತುಗಳನ್ನು ಕೇಳಿಸಿಕೊಳ್ಳುವಂತೆ ಆಗಲಿದೆ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)

ರೈತರಿಗೆ ಬಹಳ ಉತ್ತಮವಾದ ದಿನ ಇದಾಗಿರುತ್ತದೆ. ಕೃಷಿ ಉತ್ಪನ್ನಗಳ ರಫ್ತು ವ್ಯವಹಾರದಲ್ಲಿ ತೊಡಗಿದವರಿಗೆ ಹೊಸ- ದೊಡ್ಡ ಪ್ರಮಾಣದ ಆರ್ಡರ್ ಹುಡುಕಿಕೊಂಡು ಬರಲಿದೆ. ಅಚಾನಕ್ ಆಗಿ ಪ್ರಯಾಣ ಮಾಡಬೇಕಾಗುತ್ತದೆ. ಆಲೋಚಿಸಿಯೇ ತೀರ್ಮಾನ ಮಾಡಬೇಕು ಎಂಬ ಸನ್ನಿವೇಶದಲ್ಲಿ ನಿಮ್ಮ ಧೈರ್ಯದ ಹೆಜ್ಜೆಯಿಂದ ಲಾಭ ಮಾಡಿಕೊಳ್ಳುವಿರಿ. ನಿಮ್ಮ ಬಳಿ ಸಹಾಯ ಕೇಳಿಕೊಂಡು ಬಂದವರ ಬಳಿ ಸಂಪೂರ್ಣವಾದ ವಿಚಾರ ತಿಳಿದುಕೊಳ್ಳದೆ, ಮಾತು ನೀಡುವುದಕ್ಕೆ ಹೋಗಬೇಡಿ. ಸಿಹಿ ಪದಾರ್ಥಗಳ ಸೇವನೆ ಕಡಿಮೆ ಮಾಡಿ.

ಇದನ್ನೂ ಓದಿ: ನಿಮ್ಮ ರಾಶಿಗನುಗುಣವಾಗಿ ಜನವರಿ ತಿಂಗಳ ಮೊದಲ ವಾರದ ಭವಿಷ್ಯ ತಿಳಿಯಿರಿ

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)

ಪ್ರೀತಿ- ಪ್ರೇಮದಲ್ಲಿ ಇರುವವರಿಗೆ ಉತ್ತಮವಾದ ದಿನ ಇದಾಗಿರುತ್ತದೆ. ನಿಮ್ಮ ಆಪ್ತರು ಉಡುಗೊರೆಗಳನ್ನು ನೀಡುವ ಸಾಧ್ಯತೆ ಇದೆ. ಹೋಲ್- ಸೇಲ್ ವ್ಯಾಪಾರಿಗಳು, ವಿತರಕರಾಗಿ ಕಾರ್ಯ ನಿರ್ವಹಿಸುವವರಿಗೆ ಲಾಭದ ಪ್ರಮಾಣದಲ್ಲಿ ಏರಿಕೆ ಆಗಲಿದೆ. ಸರ್ಕಾರದ ಕೆಲಸವೊಂದಕ್ಕೆ ಕನ್ಸಲ್ಟೇಷನ್ ಆಧಾರದಲ್ಲಿ ಬರುವಂತೆ ನಿಮ್ಮನ್ನು ಕೇಳುವಂಥ ಸಾಧ್ಯತೆ ಇದೆ. ಇನ್ನು ಉದ್ಯೋಗ ಸ್ಥಳದಲ್ಲಿ ನಿಮ್ಮ ನಿರ್ಧಾರ ಏನೇ ಆಗಿರಲಿ, ಅದನ್ನು ಎದುರಿಗೆ ಇರುವವರಿಗೆ ಬೇಸರ ಆಗದ ಧ್ವನಿಯಲ್ಲಿ ಹೇಳುವುದಕ್ಕೆ ಪ್ರಯತ್ನಿಸಿ.

ಲೇಖನ- ಎನ್‌.ಕೆ.ಸ್ವಾತಿ

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 6ರ ದಿನಭವಿಷ್ಯ – Kannada News | Numerology 4: Daily Predictions for Money, Work and Health

ಜನ್ಮಸಂಖ್ಯೆಗೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 6ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)

ಈಗಿಂದ ಈಗಲೇ ಕೆಲಸ ಆಗಬೇಕು, ಹೆಚ್ಚಿಗೆ ಹಣ ಆದರೂ ಕೊಡಲು ತಯಾರಾಗಿದ್ದೀವಿ ಅಂತ ನಿಮ್ಮ ಬಳಿ ಕೆಲಸಕ್ಕೆ ಒತ್ತಾಯ ಮಾಡುತ್ತಾ ನಿಂತಲ್ಲಿ ಒಂದಕ್ಕೆ ನಾಲ್ಕು ಬಾರಿ ಆಲೋಚಿಸಿದ ನಂತರ ಹೂಂ ಅನ್ನುವುದು ಒಳ್ಳೆಯದು. ಸುಲಭಕ್ಕೆ ಆಗದು ಎಂದುಕೊಂಡಿದ್ದ ಸರ್ಕಾರಿ ಕೆಲಸವೊಂದು ಸಲೀಸಾಗಿ ಮುಗಿಯಲಿದೆ. ಬಹಳ ದಿನಗಳಿಂದ ಬೆನ್ನಟ್ಟಿದ್ದಾರೆ ಎಂಬ ಕಾರಣಕ್ಕೆ ಸಾಲ ಕೊಡುವುದಕ್ಕೆ ಒಪ್ಪಿಕೊಂಡಲ್ಲಿ ಅದನ್ನು ವಾಪಸ್ ವಸೂಲಿ ಮಾಡುವುದರ ಒಳಗೆ ಹೈರಾಣಾಗಲಿದ್ದೀರಿ. ಹಲ್ಲಿನ ನೋವಿನ ಸಮಸ್ಯೆ ಇರುವವರು ಜಾಗ್ರತೆಯಿಂದ ಇರಿ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)

ಛಲದೊಳ್ ದುರ್ಯೋಧನ ಎಂಬ ಮಾತಿನಂತೆ ನಿಮ್ಮ ಹಿಂದಿನ ಸಿಟ್ಟು, ಪ್ರತೀಕಾರವನ್ನು ತೀರಿಸಿಕೊಳ್ಳುವ ಮನಸ್ಥಿತಿಯಲ್ಲಿ ಇರುತ್ತೀರಿ. ಹೊಸ ಬಟ್ಟೆ, ಫ್ಯಾಷನ್ ದಿರಿಸುಗಳ ಖರೀದಿಗೆ ಹಣ ಖರ್ಚು ಮಾಡುವ ಯೋಗ ಈ ದಿನ ಇದೆ. ಬಹಳ ದಿನಗಳಿಂದ ಬಾಕಿ ಉಳಿದುಹೋಗಿದ್ದ ಹಣವನ್ನು ನಾಜೂಕಾಗಿ ವಸೂಲಿ ಮಾಡುವುದಕ್ಕೆ ಸಾಧ್ಯ ಆಗಲಿದೆ. ಸರ್ಕಾರಿ ಕೆಲಸದಲ್ಲಿ ಇರುವವರಿಗೆ ಸ್ವಲ್ಪ ಮಟ್ಟಿಗೆ ಒತ್ತಡ ಇರಲಿದೆ. ಮುಖ್ಯವಾದ ಕೆಲಸವೊಂದನ್ನು ಪೂರ್ತಿ ಮಾಡಿಕೊಂಡು ಬರುವುದಕ್ಕೆ ನಿಮಗೆ ವಹಿಸಲಿದ್ದಾರೆ.

ಇದನ್ನೂ ಓದಿ: 2026ರಲ್ಲಿ ಎದುರಾಗುವ ಆಕಸ್ಮಿಕ ಕಷ್ಟಗಳಿಂದ ಪಾರಾಗುವ ವಿಧಾನ

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)

ಮೆಟ್ಟಿಲು ಹತ್ತುವಾಗ ಇಳಿಯುವಾಗ ಜಾಗ್ರತೆ ಇರಲಿ. ಮನೆಯಲ್ಲಿ ಆಗಬೇಕಾದ ಕೆಲಸ- ಕಾರ್ಯಗಳನ್ನು ಮುಗಿಸುವ ನಿಟ್ಟಿನಲ್ಲಿ ಸಂಬಂಧಿಸಿದ ವ್ಯಕ್ತಿಗಳನ್ನು ಕರೆಸಿ, ಮಾತನಾಡಲಿದ್ದೀರಿ. ಸಿನಿಮಾ ರಂಗದಲ್ಲಿ ಕಾರ್ಯ ನಿರ್ವಹಿಸುವವರಿಗೆ ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ. ದಾಕ್ಷಿಣ್ಯಕ್ಕೆ ಸಿಲುಕಿಕೊಂಡು ನೀವು ಒಪ್ಪಿಕೊಂಡ ಕೆಲಸಗಳಿಗೆ ಹೆಚ್ಚು ಸಮಯವನ್ನು ಎತ್ತಿಡಬೇಕಾದ ಸನ್ನಿವೇಶ ಎದುರಾಗಲಿದೆ. ಮದುವೆಗೆ ಪ್ರಯತ್ನಿಸುತ್ತಿರುವ ವಿವಾಹ ವಯಸ್ಕರಿಗೆ ಶುಭ ವಾರ್ತೆ ಕೇಳಲಿದೆ.

ಲೇಖನ- ಎನ್‌.ಕೆ.ಸ್ವಾತಿ

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಗೆ ಇಂದು ಲಾಭವೋ ಲಾಭ

ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 6ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)
ಒತ್ತಡ ತಂದು ನಿಮ್ಮಿಂದ ಕೆಲಸ ಮಾಡಿಸಿಕೊಳ್ಳಬಹುದು ಅಂದುಕೊಂಡವರಿಗೆ ಅಚ್ಚರಿ ಎದುರಾಗಲಿದೆ. ನೇರವಾಗಿ ಉತ್ತರ ನೀಡಿ, ಬಾಯಿ ಮುಚ್ಚಿಸುತ್ತೀರಿ. ರಿಯಲ್ ಎಸ್ಟೇಟ್ ವ್ಯವಹಾರ ಕೈ ಹಿಡಿಯಲಿದೆ. ಉದ್ಯೋಗವೋ- ವ್ಯವಹಾರವೋ ಕುಟುಂಬದ ವಿಚಾರವೋ ಒಟ್ಟಿನಲ್ಲಿ ನಿಮ್ಮ ತನಕ ಬಂದ ದೂರನ್ನು ಗಂಭೀರವಾಗಿಯೇ ತೆಗೆದುಕೊಳ್ಳಿ. ಮಕ್ಕಳ ವರ್ತನೆಯಲ್ಲಿ ಆಗುವ ಬದಲಾವಣೆಗಳನ್ನು ಸೂಕ್ಷ್ಮವಾಗಿ ಗಮನಿಸುವುದು ಮುಖ್ಯ. ಆದಾಯ ಮೂಲ ತೆರೆದುಕೊಳ್ಳಲಿದೆ. ನಿಮಗೆ ಹೊಸ ಉದ್ಯೋಗದ ಆಫರ್ ವೊಂದು ಸ್ನೇಹಿತರ ಮೂಲಕ ಬರಲಿದೆ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)
ಹೆಲ್ತ್ ಚೆಕಪ್ ಮಾಡಿಸಿಕೊಳ್ಳಲು ಆದ್ಯತೆ ನೀಡುತ್ತೀರಿ. ಭುಜ- ಬೆನ್ನಿನ ನೋವಿನ ಸಮಸ್ಯೆ ಇರುವವರಿಗೆ ಸೂಕ್ತವಾದ ವೈದ್ಯೋಪಚಾರ ಸಿಗುತ್ತದೆ. ಬೆಟ್ಟಿಂಗ್ ನಿಂದ ದೂರ ಇರುವುದು ಒಳ್ಳೆಯದು. ಆಕಸ್ಮಿಕವಾಗಿ ಸಿಗುವಂಥ ಅವಕಾಶಗಳನ್ನು ಚೆನ್ನಾಗಿ ಬಳಸಿಕೊಳ್ಳುತ್ತೀರಿ. ಉತ್ಸಾಹದ ಪರಿಸರದಲ್ಲಿ ಸಂತೋಷದ ಕ್ಷಣಗಳನ್ನು ಕಳೆಯಲಿದ್ದೀರಿ. ಬಾಯಿಯ ಮೇಲೆ ನಿಯಂತ್ರಣ ಇರಿಸಿಕೊಳ್ಳುವುದು ಮುಖ್ಯ. ಅದು ಮಾತಿಗೆ ಸಂಬಂಧಿಸಿದಂತೆಯೇ ಇರಲಿ, ರುಚಿಯ ಖಾದ್ಯವೇ ಇರಲಿ ಹತೋಟಿಯಲ್ಲಿ ಇರಿ. ಏಕಾಗ್ರತೆ ಈ ದಿನದ ನಿಮ್ಮ ಯಶಸ್ಸಿಗೆ ಸೂತ್ರ ಆಗಲಿದೆ.

ಇದನ್ನೂ ಓದಿ : ಜನವರಿ 04ರಿಂದ 10ರ ವರೆಗಿನ ವಾರದ ಪ್ರೇಮ – ಪ್ರೀತಿ ಭವಿಷ್ಯ ತಿಳಿಯಿರಿ

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)
ಸಂಬಂಧಿಗಳು ಮನೆಗೆ ಬರುವಂಥ ಸಾರ್ಥಕ ಅನಿಸುವ ರೀತಿಯ ಕೆಲವು ಕೆಲಸಗಳು ನಿಮ್ಮಿಂದ ಆಗಲಿವೆ. ಸ್ನೇಹಿತರು- ಸಂಬಂಧಿಗಳಿಗೆ ಹಲವು ಬಗೆಯಲ್ಲಿ ನಿಮ್ಮ ಸಹಕಾರ- ನೆರವು ದೊರೆಯಲಿದೆ. ನೀವು ಈಗಾಗಲೇ ಮಾಡಿದಂಥ ಹೂಡಿಕೆ ಹಿಂಪಡೆಯುವುದರಿಂದ ಲಾಭದಲ್ಲಿ ಇರುತ್ತೀರಿ. ದೂರ ಪ್ರದೇಶದಲ್ಲಿ ವಾಸ ಇರುವವರು ಪ್ರಾಣಿಗಳ ಕಡಿತದಿಂದ ತೊಂದರೆ ಅನುಭವಿಸುವಂತೆ ಆಗಬಹುದು. ಸಾಮಾನ್ಯ ದಿನಗಳಿಗಿಂತ ಹೆಚ್ಚು ಎಚ್ಚರ ವಹಿಸಿ. ಜ್ಯುವೆಲ್ಲರಿ ಮಳಿಗೆ ನಡೆಸುತ್ತಾ ಇರುವವರಿಗೆ ಉತ್ತಮವಾದ ದಿನ ಇದು.

ಲೇಖನ- ಎನ್‌.ಕೆ.ಸ್ವಾತಿ

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Horoscope Today 06 January: ಲಾಭ – ನಷ್ಟಗಳ ಏರಿಳಿತ, ಇಂದು ಈ ರಾಶಿಯವರಿಗೆ ಮಿಶ್ರ‌ ಫಲ – Kannada News | Tuesday Horoscope: Shalivahana 1948 RashiFluctuations in profit and loss, mixed results for these zodiac signs todayphala Marital, Income and Luck

ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಹೇಮಂತ ಋತುವಿನ ಪೌಷ ಮಾಸ ಕೃಷ್ಣ ಪಕ್ಷದ ದ್ವಿತೀಯ ತಿಥಿ ಮಂಗಳವಾರ ವಿವಾಹದಲ್ಲಿ ಕಲಹ, ಅರೂಪದ ಭೇಟಿ, ಆದಾಯಕ್ಕೆ ಆಲೋಚನೆ, ಸಿಟ್ಟಿಗೆ ಕ್ಷಮೆ, ಪ್ರೀತಿ ಬದಲಾವಣೆ ಇವೆಲ್ಲ ಇಂದಿನ ವಿಶೇಷ.

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಋತು : ಹೇಮಂತ, ಚಾಂದ್ರ ಮಾಸ : ಪೌಷ, ಸೌರ ಮಾಸ : ಧನು, ಮಹಾನಕ್ಷತ್ರ : ಶ್ರವಣಾ, ವಾರ : ಮಂಗಳ, ಪಕ್ಷ : ಕೃಷ್ಣ, ತಿಥಿ : ದ್ವಿತೀಯಾ ನಿತ್ಯನಕ್ಷತ್ರ : ಪುಷ್ಯಾ ಯೋಗ : ಶೋಭನ, ಕರಣ : ವಣಿಜ, ಸೂರ್ಯೋದಯ – 06 – 51 am, ಸೂರ್ಯಾಸ್ತ – 06 – 08 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 15-20 – 16:40, ಯಮಗಂಡ ಕಾಲ 09:41 – 11:06, ಗುಳಿಕ ಕಾಲ 12:30 – 13:55

ಮೇಷ ರಾಶಿ :

ಆಪ್ತರ ಜೊತೆಗಿನ ಮಾತುಕತೆಯು ನಿಮಗೆ ಆಹ್ಲಾದವನ್ನು ಉಂಟುಮಾಡುವುದು. ಭೂಮಿಯ ಮೇಲೆ ಸಾಲವನ್ನು ಮಾಡಬೇಕಾದೀತು. ಹಳೆಯ ಕೆಲಸದಲ್ಲಿ ಮಂದಗತಿ ಇರಲಿದೆ. ಒತ್ತಾಯದಿಂದ ನಿಮಗೆ ಗೌರವ ಪ್ರಾಪ್ತವಾಗಬಹುದು. ವ್ಯಾಪಾರದಲ್ಲಿ ಅಲ್ಪ ಲಾಭವೇ ಆದರೂ ನೆಮ್ಮದಿ ಇರಲಿದೆ. ಯಾರಿಗೋ ಸಹಾಯ ಮಾಡಲು ಹೋಗಿ ಆಪತ್ತಿನಲ್ಲಿ ಸಿಕ್ಕಿಕೊಳ್ಳಬಹುದು. ಸ್ನೇಹಿತರ ಜೊತೆ ನೋವನ್ನು ಹಂಚಿಕೊಂಡು ಸಮಾಧಾನ ತಂದುಕಳ್ಳುವಿರಿ. ತಂದೆಯ ಜೊತೆ ಅಪರೂಪದ ಸಮಾರಂಭಕ್ಕೆ ಹೋಗುವಿರಿ. ಖರೀದಿಯಲ್ಲಿ ನೀವು ಸ್ಥೂಲವಾಗಿ ಖರ್ಚನ್ನು ಅಂದಾಜಿಸಿಕೊಳ್ಳಿ. ಮಕ್ಕಳು ನಿಮ್ಮ ಬಳಿ ಹೊಸತನ್ನು ತಿಳಿದುಕೊಳ್ಳಲು ಬಯಸುವರು. ಸಂಗಾತಿಯ ಜೊತೆ ದೂರ ಪ್ರಯಾಣ ಮಾಡುವಿರಿ. ಸಿಕ್ಕ ಅಧಿಕಾರದ ಬಗ್ಗೆ ಕೀಳರಿಮೆ ಬೇಡ.

ವೃಷಭ ರಾಶಿ :

ಸರ್ಕಾರದ ನಿಮ್ಮ ಕೆಲಸವು ಬೇಗನೆ ಮುಗಿದುಹೋಗುವುದು. ಮಿತ್ರರ ಕಾರಣದಿಂದ ವೃಥಾ ಕಾಲಹರಣವಾಗಲಿದ್ದು ಕಛೇರಿಯ ಕೆಲಸದ ಬಗ್ಗೆಯೇ ಚಿಂತೆ ಇರುವುದು. ಮಾರಾಟದ ವಿಚಾರವಾಗಿ ನೀವು ಬೇರೆ ಊರಿಗೆ ಹೋಗಬೇಕಾಗಬಹುದು. ಅವಿವಾಹಿತರಾಗಿರುವವರಿಗೆ ಕೊರಗು ಕಾಣಿಸವಹುದು. ನಿಮ್ಮ ಸ್ವಭಾವಕ್ಕೆ ಹೊಂದಿಕೊಳ್ಳುವ ಸಂಗಾತಿಯು ಸಿಗುವುದು ಕಷ್ಟವಾದೀತು. ಇಂದು ಮಾಡುವ ಪ್ರಯಾಣದಲ್ಲಿ ಅಪರಿಚಿತರ ಗೆಳೆತನವಾಗಬಹುದು. ನಿಮ್ಮ ಎಲ್ಲ ವಿವರಗಳನ್ನು ಇನ್ನೊಬ್ಬರ ಜೊತೆ ಹೇಳಿಕೊಳ್ಳುವುದು ಬೇಡ. ಯಾರನ್ನೂ ಉಪಯೋಗಿಸಿಕೊಳ್ಳಲು ಹೋಗಬೇಡಿ. ಉದ್ಯೋಗದಲ್ಲಿ ಯಾವುದಾದರೊಂದು ರೀತಿಯಲ್ಲಿ ಪ್ರಗತಿಯನ್ನು ಸಾಧಿಸಲು ಹೆಜ್ಜೆ ಇಡಿ.

ಮಿಥುನ ರಾಶಿ :

ಸ್ಥಿರಾಸ್ತಿಗಾಗಿ ಹೆಚ್ಚು ಓಡಾಡುವಿರಿ. ವಿದೇಶ ಪ್ರಯಾಣವು ನಿಮಗೆ ಇಷ್ಟವಿಲ್ಲದಿದ್ದರೂ ಮಾಡುವುದು ಅನಿವಾರ್ಯವಾದೀತು. ಉದ್ಯಮವು ಬೆಳೆಯುತ್ತಿರುವುದು ಸಂತೋಷ ಕೊಡುವುದು. ಚಾಲಕರಿಗೆ ಕರ್ತವ್ಯಕ್ಕೆ ಪ್ರಶಂಸೆ ಸಿಗುವುದು. ಅಪರಿಚಿತರಿಗೆ ನೀವು ಹಣವನ್ನು ಕೊಡುವಿರಿ. ಅರಿವಿಲ್ಲದೆ ಇಂದಿನ ತುರ್ತು ಕಾರ್ಯವನ್ನು ಮರೆಯುವಿರಿ. ಅಸಹಜ ವರ್ತನೆಯಿಂದ ಸಂಗಾತಿಗೆ ಅನುಮಾನ ಬರುವುದು. ಮನೆಯ ಹಿರಿಯರನ್ನು ಅನಾದರದಿಂದ ನೋಡುವುದು ಯೋಗ್ಯವಾಗದು. ಅಧಿಕಾರದಿಂದ ಅಹಂಕಾರವು ಹೆಚ್ಚಾದೀತು. ಇಂದು ನೀವು ಬಹಳ ಸಿಟ್ಟಗೊಂಡರೂ ಬೇಗ ಶಾಂತರಾಗುವಿರಿ. ಸ್ವಾವಲಂಬನೆ ನಿಮಗೆ ಇಷ್ಟವಾಗುವುದು. ಕಛೇರಿಯಲ್ಲಿ ಕೆಲವರ ವರ್ತನೆಯು ಬದಲಾದಂತೆ ತೋರುವುದು.

ಕರ್ಕಾಟಕ ರಾಶಿ :

ಭೂಮಿಯ ಲಾಭದ ವಿಚಾರದಲ್ಲಿ ಸರಿಯಾದ ಮಾತುಕತೆಗಳು ಆಗಲಿ. ಆರೋಪ ಪ್ರತ್ಯಾರೋಪಗಳಿಂದ ಪರಸ್ಪರ ಕಲಹವೂ ಆಗುವುದು. ದುಸ್ಸಾಧ್ಯ ಎನಿಸಿದ ಕಾರ್ಯವನ್ನು ಮಾಡಲು ಪ್ರಯತ್ನಿಸುವುದು ಬೇಡ. ಸ್ಥಿರಾಸ್ತಿಯನ್ನು ಮಾರಾಟ ಮಾಡುವ ಪ್ರಯತ್ನದಲ್ಲಿ ಇರುವಿರಿ. ಇಂದಿನ ಮನೆಯ ಕೆಲಸದಿಂದ ನಿಮಗೆ ಶ್ರಮವಾಗುವುದು. ಹಳೆಯ ಆಸೆಯನ್ನು ನೀವು ತೀರಿಸಿಕೊಳ್ಳುವ ಅವಕಾಶವಿರಲಿದೆ. ‌ಇಂದು ನಿಮ್ಮ ಅನಗತ್ಯ ಮಾತುಗಳು ಕಲಹಕ್ಕೆ ಕಾರಣವಾಗಬಹುದು. ನಿಮ್ಮ ನಂಬಿಕೆಗೆ ಘಾಸಿಯಾಗಬಹುದು. ವಿದ್ಯಾಭ್ಯಾಸದ ಸಾಲವನ್ನು ನೀವು ತೀರಿಸುವಿರಿ. ಹಿರಿಯರ ಬಳಿ ಮಾತನಾಡುವಾಗ ವಿನಯವಿರಲಿ.

ಸಿಂಹ ರಾಶಿ :

ದಾಂಪತ್ಯದಲ್ಲಿ ಪರಸ್ಪರ ನೋವು ಹಂಚಿಕೊಂಡು ಸಮಾಧಾನವಾಗುವಿರಿ. ನಿಮ್ಮ ನಡವಳಿಕೆಗೆ ಬಂಧುಗಳಿಂದ ಪ್ರಶಂಸೆಯು ಸಿಗಲಿದೆ. ಅಂದುಕೊಂಡಂತೆ ಕಾರ್ಯವು ಸಾಗದು ಎಂಬ ಕೊರಗು ಇರುವುದು. ನಿಮ್ಮ ಬಲದ ಮೇಲೇ ಕೆಲಸವನ್ನು ಪ್ರಾರಂಭಿಸಿ. ಇನ್ನೊಬ್ಬರ ಗೊತ್ತಿಲ್ಲದ ವಿಚಾರವನ್ನು ಹೇಳುವುದು ಬೇಡ. ಅನೇಕ ದಿನಗಳಿಂದ ಉದ್ಯೋಗ ನಿರ್ವಹಣೆಯಲ್ಲಿ ಬೇಸರ ಉಂಟಾಗಿದ್ದು ಹೊರಗೆ ಸುತ್ತಾಡುವ, ವಿರಾಮವನ್ನು ಪಡೆಯುವ ಮನಸ್ಸು ಇರಲಿದೆ. ನಿಮ್ಮ ಮಾತಿಗೆ ಬೆಲೆ ಇಲ್ಲವಾದೀತು. ಅಪರಿಚಿತರ ಹಸಿವನ್ನು ನೀಗಿಸುವಿರಿ. ಖರೀದಿಯನ್ನು ನೀವು ಬಹಳ ಉತ್ಸಾಹದಿಂದ ಮಾಡಲಾಗದು.

ಕನ್ಯಾ ರಾಶಿ :

ವಿದ್ಯಾಭ್ಯಾಸದಲ್ಲಿ ಯಶಸ್ಸನ್ನು ಸಾಧಿಸಲು ಅನೇಕ ಮಾರ್ಗಗಳು ಇರಲಿದೆ. ನಿಮ್ಮನ್ನು ಬಳಸಿಕೊಳ್ಳಬಹುದು, ಯಾರನ್ನೂ ಅತಿಯಾಗಿ ನಂಬಿ ನೀವು ಮೋಸಹೋಗಬಹುದು.‌ ನ್ಯಾಯಾಲಯದ ವಿಚಾರವನ್ನು ಯಾರ ಬಳಿಯೂ ಹೇಳಲು ಇಚ್ಛಿಸುವುದಿಲ್ಲ. ವಿವಾಹಕ್ಕೆ ಸಂಬಂಧಿಸಿದಂತೆ ತುರ್ತಾಗಿ ತೀರ್ಮಾನವನ್ನು ತೆಗೆದುಕೊಳ್ಳುವುದು ಸೂಕ್ತ. ನಿಮ್ಮವರ ತಪ್ಪುಗಳನ್ನು ತಿದ್ದಿಕೊಳ್ಳಲು ಸಮಯವನ್ನು ಕೊಡಿ. ಭೂಮಿಯ ವ್ಯವಹಾರದಿಂದ ಅಲ್ಪ ಅಭಿವೃದ್ಧಿಯು ಆಗಲಿದೆ. ಆರ್ಥಿಕ ಒತ್ತಡದಿಂದ ಮನೆಯ ನೆಮ್ಮದಿಯು ಕದಡಬಹುದು. ಸಂಗಾತಿಯ ಬಗ್ಗೆ ಹೆಚ್ಚು ಕರುಣೆ ಬರಬಹುದು. ಕರ್ತವ್ಯಗಳನ್ನು ದೃಢ ಮನಸ್ಸಿನಿಂದ ಮಾಡುವಿರಿ.

ತುಲಾ ರಾಶಿ :

ತಜ್ಞರ ಜೊತೆ ಇಂದಿನ ಸಮಯವನ್ನು ಕಳೆಯುವಿರಿ. ಸಹನೆಯಿಂದ ಅದನ್ನು ಎದುರಿಸಬೇಕಾಗುವುದು. ದುಡುಕಿ ಏನನ್ನಾದರೂ ಮಾಡಿಕೊಳ್ಳುವುದು ಬೇಡ. ನ್ಯಾಯಾಲಯದ ವಿಚಾರದಲ್ಲಿ ನಿಮಗೆ ಹಿನ್ನಡೆಯ ಸಾಧ್ಯತೆ ಇದೆ. ನಿಮಗೆ ಬರಬೇಕಾದ ಹಣದ ವಿಚಾರದಲ್ಲಿಯೂ ನಿಮಗೆ ಸೋಲಾಗುವುದು. ಮನೆಯಲ್ಲಿಯೂ ನಿಮ್ಮ ಮಾತಿಗೆ ಸರಿಯಾದ ಬೆಲೆಯೂ ಸಿಗದು. ಕಛೇರಿಯಲ್ಲಿ ಇಂದು ನಿಮ್ಮಿಂದ ತಪ್ಪಾಗಿದ್ದು ಅದನ್ನು ನೀವು ಒಪ್ಪಿಕೊಳ್ಳಲಾರಿರಿ. ದುರ್ವ್ಯಸನದಿಂದ ಸಂಪತ್ತನ್ನು ನಷ್ಟ ಮಾಡಿಕೊಳ್ಳುವಿರಿ. ನಿಮ್ಮ ತಪ್ಪಿಗೆ ಪಶ್ಚಾತ್ತಾಪವಾದರೂ ಕೊನೆಯ ಹಂತವಾಗಿ ಇರಲಿ. ಏಕಾಗ್ರತೆಯ ಕೊರತೆಯನ್ನು ಸರಿ ಮಾಡಿಕೊಳ್ಳಿ. ನಿಮ್ಮ ಯೋಜನೆಗೆ ಸರಿಯಾದ ಚೌಕಟ್ಟು ಬೇಕು.

ವೃಶ್ಚಿಕ ರಾಶಿ :

ಎಲ್ಲವನ್ನೂ ನಂಬಿಕೆಯ ಆಧಾರದ ಮೇಲೆ ಸ್ವೀಕರಿಸಬೇಕಿಲ್ಲ. ಸರ್ಕಾರಿ ಉದ್ಯೋಗಿಗಳಿಗೆ ನಿಮ್ಮ ಚಾತುರ್ಯದ ಕಾರಣದಿಂದ ಹೆಚ್ಚಿನ ಅಧಿಕಾರವು ಪ್ರಾಪ್ತವಾಗುವುದು. ಧೈರ್ಯದಿಂದ ಮುನ್ನಡೆದರೆ ಯಾವ ತೊಂದರೆಯೂ ತೊಂದರೆಯಾಗಿ ಉಳಿಯದು. ಪ್ರಯಾಣದಲ್ಲಿ ಯಾವುದೇ ತೊಂದರೆಯು ಬಾರದಂತೆ ದೈವವನ್ನು ಪ್ರಾರ್ಥಿಸಿ. ದಾಂಪತ್ಯದಲ್ಲಿ ಉಂಟಾದ ಕಲಹವನ್ನು ನೀವೇ ಸರಿ ಮಾಡಿಕೊಳ್ಳಿ. ನಿಮ್ಮನ್ನೇ ನೀವು ವಂಚಿಸಿಕೊಳ್ಳುವಿರಿ. ಕಲಾವಿದರಿಗೆ ಸಿಕ್ಕ ಅವಕಾಶಗಳು ತಪ್ಪಿಹೋಗಬಹುದು. ಆಸ್ತಿಯ ವಿಚಾರದಲ್ಲಿ ದುಡುಕುವುದು ಬೇಡ, ಎಲ್ಲವೂ ಶಾಂತವಾಗುವ ತನಕ ಕಾಯಬೇಕಾಗುವುದು. ವ್ಯವಸ್ಥೆಯ ಸಣ್ಣ ಕೊರತೆಗಳು ಮುಖ್ಯವಾಗಬಾರದು. ಕುಟುಂಬದ ಬಗ್ಗೆ ನಿಮಗೆ ಅಭಿಮಾನದ ಕಾಣಿಸದು.

ಧನು ರಾಶಿ :

ಕಳೆದುಕೊಂಡ ಸಂಪತ್ತು ಮತ್ತಾವುದೋ ರೀತಿಯಲ್ಲಿ ಬರಬಹುದು. ಬಹಳ‌ ದಿನಗಳ‌ ಅನಂತರ ಕುಟುಂಬದವರನ್ನು ಭೇಟಿಯಾಗುತ್ತಿರುವುದು ನಿಮ್ಮ‌ ಮುಖದಲ್ಲಿ ಹರುಷ ಕಾಣುವುದು. ಸಣ್ಣ ಮಕ್ಕಳಿಂದ ನೆಮ್ಮದಿಯು ಸಿಗಲಿದೆ. ನಿಮ್ಮ ಯಶಸ್ಸನ್ನು ಮನೆಯವರು ಸಂಭ್ರಮಿಸಬಹುದು. ರಾಜಕಾರಣದತ್ತ ನಿಮ್ಮ ಒಲವು ಹೆಚ್ಚಾಗುವುದು. ಪ್ರಭಾವಿ ವ್ಯಕ್ತಿಗಳು ನಿಮ್ಮನ್ನು ಪರಿವರ್ತಿಸುವರು. ಆದಾಯದ ಮೂಲವು ಸರಿಯಾಗಿ ಇರಲಿದೆ. ನಿಮ್ಮ ಸಹೋದರನ ಆರೋಗ್ಯದಲ್ಲಿ ವ್ಯತ್ಯಾಸವು ಕಾಣಿಸಬಹುದು. ಹೂಡಿಕೆಯಬ್ಯಾಂಕ್ಲ್ಲಿ ನಿಮಗೆ ಆಸಕ್ತಿಯು ಇಂದು ಕಡಿಮೆ ಇರಲಿದೆ. ದೇವರ ಕಾರ್ಯದಲ್ಲಿ ಪಾಲ್ಗೊಳ್ಳುವಿರಿ.‌ ಆಪ್ತರ ಬಗ್ಗೆ ಇರುವ ನಕಾರತ್ಮಕ ಭಾವವನ್ನು ನೀವು ಅವರಿಗೆ ಹೇಳುವಿರಿ.

ಮಕರ ರಾಶಿ :

ಒತ್ತಡದಿಂದ ನಿಮ್ಮ ಕಾರ್ಯವು ಮಂದಗತಿಯಲ್ಲಿ ಸಾಗುವುದು. ಯಂತ್ರಜ್ಞರು ಇಂದು ಬಹಳ ಒತ್ತಡದಿಂದ ಇರುವರು. ಸ್ವಲ್ಪ ಮಾನಸಿಕ‌ ಆಲಸ್ಯವು ಇರುವುದು. ಗೊಂದಲವನ್ನು ಇನ್ನೊಬ್ಬರ ಬಳಿ ಹೇಳಿ. ಪರಿಹಾರವನ್ನು ಕಂಡುಕೊಳ್ಳಬಹುದು. ನಿಮ್ಮ ಜಾಣ್ಮೆಯಿಂದ ನಿಮ್ಮ‌ ಸಂಸ್ಥೆಯು ಹೆಚ್ಚಿನ ಯಶಸ್ಸನ್ನು ಗಳಿಸಬಹುದು. ನಿಮ್ಮ ಆಲೋಚನೆಗಳೇ ನಿಮ್ಮನ್ನು ನಿರೂಪಿಸುತ್ತವೆ. ಇಂದು ಸಂಗಾತಿಯ ನಡುವೆ ಭಿನ್ನಾಭಿಪ್ರಾಯಗಳು ಕಲಹವಾಗಿ ಪರಿಣಮಿಸೀತು. ಒಬ್ಬರಾದರೂ ತಟಸ್ಥರಾಗಿರುವುದು ವಿವಾದವು ಆಗದಂತೆ ನೋಡಿಕಳ್ಳಬಹುದು. ಯಾರೇ ಏನೇ ಹೇಳಿದರೂ ಕೇಳಿಕೊಳ್ಳುವ ತಾಳ್ಮೆ ಅಗತ್ಯವಾಗಿ ಬೇಕು. ನಿಮ್ಮ ಇಂದಿನ ಕಾರ್ಯದಿಂದ ಕಛೇರಿಯಲ್ಲಿ ನಿರೀಕ್ಷೆ ಮೀರಿ ಪ್ರಶಂಸೆ ಸಿಗುವುದು.

ಕುಂಭ ರಾಶಿ :

ವೈದ್ಯ ವೃತ್ತಿಯವರಿಗೆ ಅಪವಾದವು ಬರಬಹುದು. ಸಾಲಗಾರರಿಂದ ನಿಮ್ಮ ಮಾನಸಿಕ ಸ್ಥಿತಿಯು ಕೆಡಬಹುದು. ಯಾರದೋ ತಪ್ಪಿಗೆ ನೀವು ತಲೆಕೊಡಬೇಕಾದೀತು. ವಿವಾಹಕ್ಕೆ ಸಂಬಂಧಿಸಿದ ದೋಷಗಳನ್ನು ದೈವಜ್ಞರ ಬಳಿ ಕೇಳಿ ಸರಿಪಡಿಸಿಕೊಳ್ಳಿ. ಊಹಾಪೋಹಗಳಿಗೆ ಕಿವಿಗೊಡದೇ ನಿಮ್ಮ ಕಾರ್ಯದಲ್ಲಿ ಮುಂದುವರಿಯಿರಿ. ನೀವು ಇಂದು ಮಕ್ಕಳ ಜೊತೆ ಹೆಚ್ಚಿನ ಸಮಯವನ್ನು ಕಳೆಯುವಿರಿ. ಸಿಗಬೇಕಾದ ಲಾಭದಿಂದ ವಂಚಿತರಾಗಲಿದ್ದೀರಿ. ಅನಪೇಕ್ಷಿತ ವಿಚಾರದಲ್ಲಿ ಹೆಚ್ಚು ಮನಸ್ಸು ಇರುವುದು. ಉಸಿರಾಟ ತೊಂದರೆಯು ಸ್ವಲ್ಪ ಕಾಣಿಸಿಕೊಳ್ಳಬಹುದು. ನೆರೆಹೊರೆಯ ವಿಚಾರದಲ್ಲಿ ಅಸಮಾಧಾನ ಇರಲಿದೆ. ದಾಂಪತ್ಯದಲ್ಲಿನ ವಿರಸದಿಂದ ಮಾನಸಿಕ ಸ್ಥಿತಿ ತಪ್ಪಬಹುದು.

ಇದನ್ನೂ ಓದಿ: ನಿಮ್ಮ ರಾಶಿಗನುಗುಣವಾಗಿ ಜನವರಿ 4ರಿಂದ 10ರ ವರೆಗಿನ ಉದ್ಯೋಗ ಭವಿಷ್ಯ ತಿಳಿಯಿರಿ

ಮೀನ ರಾಶಿ :

ಯಾವುದೋ ಆಲೋಚನೆಯಲ್ಲಿ ನಿಮ್ಮ ಮನಸ್ಸು ಇರುವುದು. ಹೆಚ್ಚಿನ ಸೌಕರ್ಯದಿಂದ ನೀವು ಸೋಮಾರಿಯಾಗುವಿರಿ. ಕೇಳಿದವರಿಗೆ ನಿಮ್ಮ‌ ಸಹಾಯವು ಸಿಗಲಿದೆ.‌ ಕೇಳಿದ್ದಕ್ಕೆ ಮಾತ್ರ ನಿಮ್ಮ ಉತ್ತರವಿರಲಿ. ಕಳೆದ ಕೆಟ್ಟ ಕಾಲವನ್ನು‌ ನೆನಪಿಸಿಕೊಳ್ಳುವಿರಿ. ಉದ್ಯೋಗದಲ್ಲಿ ನಿಮ್ಮ ಕೇಂದ್ರವಾಗಿ ಇರಿಸಿಕೊಂಡು ಮಾತನಾಡುವರು. ಸಹೋದ್ಯೋಗಿಗಳ ಮಾತಿನ ಬಗ್ಗೆ ಅಧಿಕವಾಗಿ ಪ್ರತಿಕ್ರಿಯೆ ಬೇಡ. ನೌಕರರ ಮೇಲೆ ನಿಮ್ಮದೊಂದು ಲಕ್ಷ್ಯ ಇರಬೇಕಾಗುವುದು. ಏಕಾಗ್ರತೆಯು ಭಂಗವಾಗಲು ಅನೇಕ ಕಾರಣಗಳು ಇರಲಿವೆ. ಇಂದಿನ ಕಾರ್ಯವನ್ನು ಮುಂದೂಡುವುದು ಬೇಡ. ನಿಮ್ಮ ಗುಣಗಳನ್ನು ಇತರರು ಆಡಿಕೊಳ್ಳಬಹುದು.

-ಲೋಹಿತ ಹೆಬ್ಬಾರ್ – 8762924271 (what’s app only)

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version