Headlines

ಹೊಸ ವರ್ಷದ ಹೊತ್ತಲ್ಲಿ ವೀರೇಂದ್ರ ಪಪ್ಪಿಗೆ ಬಿಗ್​​ ರಿಲೀಫ್​: ಇಡಿ ಪ್ರಕರಣದಲ್ಲಿ ಜಾಮೀನು – Kannada News | Chitradurga MLA Veerendra Pappy Gets Bail in ED Money Laundering Case

ಬೆಂಗಳೂರು, ಡಿಸೆಂಬರ್​​ 30: ಇಡಿ ಪ್ರಕರಣದಲ್ಲಿ ವೀರೇಂದ್ರ ಪಪ್ಪಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬಿಗ್​​ ರಿಲೀಫ್​​ ನೀಡಿದೆ. ಅಕ್ರಮ ಹಣ ವರ್ಗಾವಣೆ ಕೇಸ್​ನಲ್ಲಿ ಜೈಲು ಸೇರಿದ್ದ ಚಿತ್ರದುರ್ಗ ಕ್ಷೇತ್ರದ ಕಾಂಗ್ರೆಸ್ ಶಾಸಕನಿಗೆ ಕೋರ್ಟ್ ಜಾಮೀನು ನೀಡಿದ್ದು,​​ ಆ ಮೂಲಕ ಕಳೆದ 4 ತಿಂಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಶಾಸಕರಿಗೆ ಹೊಸ ವರ್ಷದ ಹೊತ್ತಲ್ಲಿ ಶುಭಸುದ್ದಿ ಸಿಕ್ಕಿದೆ. ಅಕ್ರಮ ಆನ್‌ಲೈನ್ ಮತ್ತು ಆಫ್‌ಲೈನ್ ಬೆಟ್ಟಿಂಗ್ ಪ್ರಕರಣ ವಿಚಾರವಾಗಿ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಗೆ ಸಂಬಂಧಿಸಿದ ಸ್ಥಳಗಳ…

Read More

Home Positivity: ಮನೆಯಲ್ಲಿ ಅಲೋವೆರಾ ಗಿಡ ಇಡುವ ಮುನ್ನ ಈ ವಾಸ್ತು ನಿಯಮ ತಿಳಿಯಿರಿ – Kannada News | Aloe Vera and Vastu: Enhancing Home Positivity and Prosperity

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಅಲೋವೆರಾ ಗಿಡದ ಮಹತ್ವದ ಬಗ್ಗೆ ವಿವರಿಸಿದ್ದಾರೆ. ಅಲೋವೆರಾ ಒಂದು ವಿಶಿಷ್ಟವಾದ ಗಿಡವಾಗಿದ್ದು, ಇದನ್ನು ಮನೆಯಲ್ಲಿ ಅಥವಾ ಕಚೇರಿಯಲ್ಲಿ ಇಟ್ಟುಕೊಳ್ಳುವುದು ಶುಭಕರವೇ ಎಂಬ ಪ್ರಶ್ನೆಗೆ ಉತ್ತರ ನೀಡಿದ್ದಾರೆ. ವಾಸ್ತುಶಾಸ್ತ್ರದ ಪ್ರಕಾರ, ಅಲೋವೆರಾವನ್ನು ಸರಿಯಾದ ರೀತಿಯಲ್ಲಿ ಇರಿಸಿದಾಗ, ಅದು ವೃತ್ತಿ ಜೀವನ, ಆರ್ಥಿಕ ಸ್ಥಿತಿ ಮತ್ತು ಆರೋಗ್ಯ – ಈ ಮೂರು ಪ್ರಮುಖ ಅಂಶಗಳ ಮೇಲೆ ಧನಾತ್ಮಕವಾಗಿ ಪ್ರಭಾವ ಬೀರುತ್ತದೆ. ಈ ಗಿಡವನ್ನು ಸಾಮಾನ್ಯವಾಗಿ…

Read More

ಡ್ರಗ್ಸ್​​ ದಂಧೆಕೋರರಿಗೆ ಭರ್ಜರಿ ಶಾಕ್​​ ಕೊಟ್ಟ ಬೆಂಗಳೂರು ಪೊಲೀಸರು: ವಿವಿಧ ಪ್ರಕರಣಗಳಲ್ಲಿ ಐವರು ಅಂದರ್​

ಬೆಂಗಳೂರು, ಏಪ್ರಿಲ್​​ 07: ಪೊಲೀಸರ ಹದ್ದಿನ ಕಣ್ಣಿನ ನಡುವೆಯೂ ರಾಜ್ಯದಲ್ಲಿ ಡ್ರಗ್ಸ್​​ ಹಾವಳಿ ಮುಂದುವರಿದಿದೆ. ಖಾಕಿ ಚಾಪೆ ಕೆಳಗೆ ತೂರಿದರೆ ದಂಧೆಕೋರರು ರಂಗೋಲಿ ಕೆಳಗೆ ನುಗ್ಗುವ ಕೆಲಸ ಮಾಡುತ್ತಿದ್ದಾರೆ. ಈ ನಡುವೆ ಡ್ರಗ್ಸ್​​ ಪೆಡ್ಲರ್​​ಗಳಿಗೆ ಬೆಂಗಳೂರು ಪೊಲೀಸರು ಭರ್ಜರಿ ಶಾಕ್​​ ಕೊಟ್ಟಿದ್ದಾರೆ. 12 ವರ್ಷಗಳಿಂದ ಡ್ರಗ್ಸ್​ ಪೆಡ್ಲಿಂಗ್ ನಡೆಸುತ್ತಿದ್ದ ಆರೋಪಿ ಸೇರಿ ವಿವಿಧ ಪ್ರಕರಣಗಲ್ಲಿ ಒಟ್ಟು ಐವರನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಕೋಟ್ಯಾಂತರ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ನೈಜೀರಿಯಾ ಪ್ರಜೆಯ ಬಂಧನ ಭಾರತೀಯ ಮಹಿಳೆ…

Read More

ಹುಡುಗಿಗಾಗಿ ಟವರ್ ಏರಿದ್ದ ಯವಕನನ್ನ ಮನವೊಲಿಸಿ ಕೆಳಗಿಳಿಸಿದ್ಹೇಗೆ? ಹೇಳಿ ನಿಟ್ಟುಸಿರು ಬಿಟ್ಟ ಅಧಿಕಾರಿ

ಬೆಂಗಳೂರು, (ಮೇ 21): ಆನೇಕಲ್ (Anekal) ತಾಲೂಕಿನ ಚಿನ್ನಯ್ಯನಪಾಳ್ಯದಲ್ಲಿ ಪ್ರೀತಿಸಿದ (Love) ಯುವತಿ ಮದುವೆಗೆ ನಿರಾಕರಿಸಿದ್ದಕ್ಕೆ ಮನನೊಂದ ಸೋಮಶೇಖರ್ ಎಂಬ ಯುವಕ ಟವರ್ ಹತ್ತಿ ಹೈಡ್ರಾಮಾ ಸೃಷ್ಟಿಸಿದ್ದ. ವಿಷಯ ತಿಳಿಯುತ್ತಿದ್ದಂತೆಯೇ ಕುಡಲೇ ಸ್ಥಳಕ್ಕೆ ದೌಡಾಯಿಸಿ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ, ಯುವಕನ್ನ ಕೆಳಗಿಳಿಸಲು ಹರಸಾಹಸವೇ ಪಟ್ಟರು. ಆರಂಭದಲ್ಲಿ ಎಷ್ಟು ಮನವೊಲಿಸಿದರೂ ಸಹ ಸೋಮಶೇಖರ್ ಕೆಳಗೆ ಇಳಿಯಲೇ ಇಲ್ಲ. ಅಂತಿಮವಾಗಿ ಅದ್ಹೇಗೋ ಕಸರತ್ತು ಮಾಡಿ ಮನವೊಲಿಸಿ ಸೋಮಶೇಖರ್ ನನ್ನು ಸುರಕ್ಷಿತವಾಗಿ ಕೆಳಗಿಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದ್ರೆ, ಸೋಮಶೇಖರ್ ಮನವೊಲಿಸಿ ಟವರ್…

Read More

‘ಸಿದ್ದರಾಮಯ್ಯ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ’: ಮಾಜಿ ಸಂಸದ ಪ್ರತಾಪಸಿಂಹ

ಬಾಗಲಕೋಟೆ, ಏ.3: ಉಪಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರ ಪ್ರಚಾರ ನಡೆಸಿದ ಮಾಜಿ ಸಂಸದ ಪ್ರತಾಪಸಿಂಹ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿದರು. ಸಿದ್ದರಾಮಯ್ಯ ಅವರ ಹೆಸರಷ್ಟೇ ಹಿಂದೂ, ಆದರೆ ಅವರ ಗುಣನಡತೆಗಳಲ್ಲಿ ಹಿಂದೂ ಧರ್ಮದ ಯಾವ ಲಕ್ಷಣವೂ ಕಾಣಿಸುತ್ತಿಲ್ಲ ಎಂದು ಪ್ರತಾಪಸಿಂಹ ಆರೋಪಿಸಿದರು. ಯುಗಾದಿ ಮತ್ತು ದೀಪಾವಳಿ ದಿನದಂದು ಮಾಂಸಾಹಾರ ಸೇವಿಸುವ ಬಗ್ಗೆಯೂ ಟೀಕೆ ಮಾಡಿದ್ದಾರೆ. ಈಗ ಕಾಂಗ್ರೆಸ್ ಪಕ್ಷದವರು ಹಿಂದುತ್ವವನ್ನು ಮಂತ್ರ ಜಪಿಸುತ್ತಿದ್ದಾರೆ ಎಂದು ಟೀಕಿಸಿದ ಪ್ರತಾಪಸಿಂಹ, ನಾಗಮಂಗಲದಲ್ಲಿ…

Read More

ಪೇಪರ್ ಪ್ಲೇಟ್‌ನಲ್ಲಿ ಊಟ ಮಾಡುವುದು ಒಳ್ಳೆಯದೋ, ಅಲ್ಲವೋ? ತಜ್ಞರು ನೀಡಿದ ಮಾಹಿತಿ ಇಲ್ಲಿದೆ

ಇತ್ತೀಚಿನ ದಿನಗಳಲ್ಲಿ ಪೇಪರ್ ಪ್ಲೇಟ್‌ಗಳ ಬಳಕೆ ಗಣನೀಯವಾಗಿ ಹೆಚ್ಚಾಗಿದೆ. ಮನೆಗಳಲ್ಲಿ ನಡೆಯುವ ಕಾರ್ಯಕ್ರಮ, ಹುಟ್ಟುಹಬ್ಬ, ಮದುವೆ ಸೇರಿದಂತೆ ವಿವಿಧ ರೀತಿಯ ಸಮಾರಂಭಗಳಲ್ಲಿ ಆಹಾರ ಸೇವನೆಗೆ ಬಾಳೆ ಎಲೆ ಅಥವಾ ಸ್ಟೀಲ್ ಪ್ಲೇಟ್ ಬದಲು ಜನ ಪೇಪರ್ ಪ್ಲೇಟ್‌ಗಳನ್ನು ಬಳಸುವುದಕ್ಕೆ ಆರಂಭಿಸಿದ್ದಾರೆ. ಆದರೆ ಆರೋಗ್ಯ ತಜ್ಞರು ಹೇಳುವ ಪ್ರಕಾರ, ಬಿಸಿ ಬಿಸಿ ಆಹಾರವನ್ನು ಇಂತಹ ಪ್ಲೇಟ್‌ಗಳಲ್ಲಿ ಸೇವಿಸುವುದು ಆರೋಗ್ಯಕ್ಕೆ ಹಾನಿಕಾರಕವಾಗಬಹುದು, ಅಷ್ಟೇಅಲ್ಲ, ಸಾಮಾಜಿಕ ಜಾಲತಾಣಗಳಲ್ಲಿ ಇತ್ತೀಚೆಗೆ ಈ ಬಗ್ಗೆ ಹಲವು ರೀತಿಯ ವಿಡಿಯೋ ವೈರಲ್ ಆಗುತ್ತಿದ್ದು, ಅದರಲ್ಲಿ ಡಾ….

Read More

ಕೆಪಿಸಿಸಿ ಕಚೇರಿಯಲ್ಲೇ ಯೂತ್​​ ಕಾಂಗ್ರೆಸ್​​ ಕಾರ್ಯಕರ್ತರ ಮಾರಾಮಾರಿ: ದೀಪಿಕಾ ರೆಡ್ಡಿ ಸೇರಿ ಹಲವರಿಗೆ ಶೋಕಾಸ್​​ ನೋಟಿಸ್​​ – Kannada News | KPCC Office Clash: Indian Youth Congress Issues Show Cause Notice to Deepika Reddy and Others

ದೀಪಿಕಾ ರೆಡ್ಡಿ ಬಣದ ಪದಾಧಿಕಾರಿಗಳಿಗೆ ಶೋಕಾಸ್ ನೋಟಿಸ್Image Credit source: Tv9 Kannada ಬೆಂಗಳೂರು, ಮೇ 19: ಯೂತ್ ಕಾಂಗ್ರೆಸ್ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಸೇರಿದಂತೆ 15 ಪದಾಧಿಕಾರಿಗಳನ್ನ ವಜಾ ಮಾಡಿರುವ ವಿಚಾರ ಸಂಬಂಧ ಯೂತ್​ ಕಾಂಗ್ರೆಸ್​​ ಕಾರ್ಯಕರ್ತರ ನಡುವೆ ನಿನ್ನೆ (ಮೇ 18) ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿಯೇ ಮಾರಾಮಾರಿ ನಡೆದಿತ್ತು. ಯೂತ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ ಹಾಗೂ ಅಮಾನತುಗೊಂಡಿರುವ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಬೆಂಬಲಿಗರು ಕೈ ಕೈ ಮಿಲಾಯಿಸಿದ್ದರು. ಈ ಬೆನ್ನಲ್ಲೇ ಭಾರತೀಯ ಯುವ…

Read More

ರಾಜ್ಯಸಭಾ ಉಪನಾಯಕನ ಹುದ್ದೆಯಿಂದ ವಜಾಗೊಳಿಸಿದ ಬೆನ್ನಲ್ಲೇ ರಾಘವ್ ಚಡ್ಡಾ ವಿಡಿಯೋ ರಿಲೀಸ್

ನವದೆಹಲಿ, ಏಪ್ರಿಲ್ 2: ಆಮ್ ಆದ್ಮಿ ಪಕ್ಷ (ಎಎಪಿ) ಸಂಸದ ರಾಘವ್ ಚಡ್ಡಾ (Raghav Chadha) ಅವರನ್ನು ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಹುದ್ದೆಯಿಂದ ವಜಾಗೊಳಿಸಿದೆ. ಅವರನ್ನು ತೆಗೆದುಹಾಕುವಂತೆ ಕೋರಿ ಎಎಪಿ ರಾಜ್ಯಸಭಾ ಸಚಿವಾಲಯಕ್ಕೆ ಪತ್ರ ಬರೆದಿದೆ. ಎಎಪಿಯ ವತಿಯಿಂದ ಅವರಿಗೆ ರಾಜ್ಯಸಭೆಯಲ್ಲಿ ಮಾತನಾಡುವ ಸಮಯವನ್ನು ನೀಡಬಾರದು ಎಂದು ಮನವಿ ಮಾಡಿದೆ. ಆದರೆ, ಈ ನಿರ್ಧಾರಕ್ಕೆ ಕಾರಣವೇನೆಂಬುದರ ಬಗ್ಗೆ ಪಕ್ಷ ಯಾವುದೇ ಮಾಹಿತಿ ನೀಡದಿರುವುದು ಕುತೂಹಲ ಮೂಡಿಸಿದೆ. ಇನ್ನೊಂದೆಡೆ ರಾಘವ್ ಚಡ್ಡಾ ಕೂಡ ಈ ಸುದ್ದಿಯ ಬಗ್ಗೆ…

Read More

ಜೈಲಿನೊಳಗೆ ಕುಳಿತು ಬರೋಬ್ಬರಿ ಐದು ವರ್ಷಗಳ ಕಾಲ ಸುರಂಗ ತೋಡಿದ ಕೈದಿ, ಕೊನೆಗೆ ಹೋಗಿದ್ದೆಲ್ಲಿಗೆ?

ಬ್ರೆಜಿಲ್, ಮಾರ್ಚ್​ 13: ಕೈದಿ(Prisoner)ಗಳು ಹೇಗಾದರೂ ಮಾಡಿ ಜೈಲಿನಿಂದ ತಪ್ಪಿಸಿಕೊಳ್ಳಬೇಕೆಂದು ಹಲವು ಸಾಹಸಗಳನ್ನು ಮಾಡುತ್ತಾರೆ. ಅದರಲ್ಲಿ ಇದು ಕೂಡ ಒಂದು. ಕೆಲವರು ಜೈಲಿನ ಗೋಡೆ ಹತ್ತಿ ಹಾರಿ ತಪ್ಪಿಸಿಕೊಳ್ಳುವ ಪ್ರಯತ್ನ ಮಾಡಿದರೆ, ಇನ್ನೂ ಕೆಲವರು ಆರೋಗ್ಯ ಸರಿಯಿಲ್ಲ ಎನ್ನುವ ನೆಪವೊಡ್ಡಿ ಆಸ್ಪತ್ರೆಗೆ ಹೋಗಿ ಅಲ್ಲಿಂದ ತಪ್ಪಿಸಿಕೊಳ್ಳುವವರಿದ್ದಾರೆ. ಕೈದಿಯೊಬ್ಬ ಬರೋಬ್ಬರಿ ಐದು ವರ್ಷಗಳ ಕಾಲ ಸುರಂಗ ತೋಡಿ ಅಲ್ಲಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ, ಪ್ರಯತ್ನವೇನೋ ಚೆನ್ನಾಗಿತ್ತು ಆದರೆ ಆ ಸುರಂಗ ಹೋಗಿದ್ದೆಲ್ಲಿಗೆ ಗೊತ್ತಾ, ಭದ್ರತಾ ಸಿಬ್ಬಂದಿ ಕೋಣೆಗೆ. ಜೈಲಿನಿಂದ ತಪ್ಪಿಸಿಕೊಳ್ಳುವ…

Read More

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬೆಂಗಳೂರು, ಮೇ 28: ಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಪ್ರಕ್ರಿಯೆ ಅಂತಿಮ ಹಂತ ತಲುಪಿದ್ದು, ಭಾರಿ ಮಹತ್ವದ ಹಾಗೂ ನಾಟಕೀಯ ಬೆಳವಣಿಗೆಗಳು ಜರುಗುತ್ತಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಇಂದು (ಮೇ 28) ಬೆಳಗ್ಗೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿರುವ ಬೆನ್ನಲ್ಲೇ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬುಧವಾರ ಮಧ್ಯರಾತ್ರಿ ದಿಢೀರನೆ ಮುಂಬೈಗೆ ಪ್ರಯಾಣ ಬೆಳೆಸಿರುವುದು ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಹಾಗೂ ಸಂಚಲನ ಮೂಡಿಸಿದೆ. ಸಂಬಂಧಿಕರ…

Read More