ಒಂದೇ ಧಾರಾವಾಹಿಯಲ್ಲಿ ಅಮೃತಾ ರಾಮಮೂರ್ತಿ ಹಾಗೂ ಅಮೂಲ್ಯ ಗೌಡ
ಕಿರುತೆರೆ ನಟಿ ಅಮೂಲ್ಯ ಗೌಡ ಅವರು ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಅದೇ ರೀತಿ ಅಮೃತಾ ರಾಮಮೂರ್ತಿ (Amrutha Ramamoorthi) ಕೂಡ ಸಾಕಷ್ಟು ಹೆಸರು ಮಾಡಿದ್ದಾರೆ. ಇಬ್ಬರಿಗೂ ದೊಡ್ಡ ಫ್ಯಾನ್ ಬೇಸ್ ಇದೆ. ಈಗ ಇಬ್ಬರೂ ಒಂದೇ ಧಾರಾವಾಹಿ ಮೂಲಕ ಬರಲು ರೆಡಿ ಆಗಿದ್ದಾರೆ ಎಂಬುದು ವಿಶೇಷ. ಉದಯ ಟಿವಿಯಲ್ಲಿ ಪ್ರಸಾರ ಆಗಲಿರುವ ಸೀರಿಯಲ್ನ ಭಾಗವಾಗಿ ಅಮೂಲ್ಯ ಗೌಡ ಹಾಗೂ ಅಮೃತಾ ರಾಮಮೂರ್ತಿ ಕಾಣಿಸಿಕೊಳ್ಳಲಿದ್ದಾರೆ. ಇದು ಅಭಿಮಾನಿಗಳ ಪಾಲಿಗೆ ಖುಷಿಯ ವಿಷಯ. ಅಮೂಲ್ಯ ಗೌಡ ಕನ್ನಡ ಕಿರುತೆರೆ…