ಮಹೇಶ್ ಬಾಬು ನಟನೆಯ ‘ಪೋಕಿರಿ’ ಮರು ಬಿಡುಗಡೆಗೆ ತೊಂದರೆ; ವಿಲನ್ ಆದ ಪುರಿ ಜಗನ್ನಾಥ್
ತೆಲುಗು ಚಿತ್ರರಂಗದಲ್ಲಿ ಹಳೆಯ ಬ್ಲಾಕ್ಬಸ್ಟರ್ ಸಿನಿಮಾಗಳನ್ನು ಮರು-ಬಿಡುಗಡೆ ಮಾಡುವ ಟ್ರೆಂಡ್ ಜೋರಾಗಿದೆ. ಸೂಪರ್ ಸ್ಟಾರ್ ಮಹೇಶ್ ಬಾಬು (Mahesh Babu) ಅವರ ಸಿನಿಮಾಗಳಿಗೆ ರೀ-ರಿಲೀಸ್ ಸಮಯದಲ್ಲಿ ಭಾರಿ ಬೇಡಿಕೆ ಇರುತ್ತದೆ. ಇದೇ ಕಾರಣಕ್ಕೆ ಮೇ ತಿಂಗಳಲ್ಲಿ ‘ಪೋಕಿರಿ’ (Pokiri) ಸಿನಿಮಾವನ್ನು ಮತ್ತೆ ಅದ್ದೂರಿಯಾಗಿ ಬಿಡುಗಡೆ ಮಾಡಲು ಸಿದ್ಧತೆ ನಡೆಸಲಾಗಿತ್ತು. ಆದರೆ, ಈಗ ಈ ಬಿಡುಗಡೆಗೆ ಅನಿರೀಕ್ಷಿತ ವಿಘ್ನ ಎದುರಾಗಿದೆ. ಅದಕ್ಕೆಲ್ಲ ಕಾರಣ ಆಗಿರುವುದು ನಿರ್ದೇಶಕ, ನಿರ್ಮಾಪಕ ಪುರಿ ಜಗನ್ನಾಥ್. ಮಹೇಶ್ ಬಾಬು ಸಿನಿಮಾ ಬಿಡುಗಡೆಗೂ ಪುರಿ ಜಗನ್ನಾಥ್…