ಕರ್ನಾಟಕ ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್! ಯಶವಂತಪುರ-ತಾಳಗುಪ್ಪ ಸೇರಿದಂತೆ 19 ವಿಶೇಷ ರೈಲುಗಳು ಇನ್ನು ಮುಂದೆ ಖಾಯಂ
ಬೆಂಗಳೂರು, ಮಾರ್ಚ್ 24: ರಾಜ್ಯದ ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ ದೊರೆತಿದೆ. ಪ್ರಯಾಣಿಕರ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡ ರೈಲ್ವೇ ಮಂಡಳಿ (Railway Board) ಕರ್ನಾಟಕದಲ್ಲಿ ಸಂಚರಿಸುತ್ತಿದ್ದ 19 ವಿಶೇಷ ರೈಲುಗಳನ್ನು ಖಾಯಂ ಸೇವೆಗೆ ಪರಿವರ್ತಿಸಿದೆ. ಇದರಲ್ಲಿ 6 ಎಕ್ಸ್‌ಪ್ರೆಸ್, 9 ಮೆಮು/ಡೆಮು ಹಾಗೂ 4 ಪ್ಯಾಸೆಂಜರ್ ರೈಲುಗಳು ಸೇರಿವೆ. ಈ ನಿರ್ಧಾರದಿಂದ ಬೆಂಗಳೂರು, ಮೈಸೂರು, ಶಿವಮೊಗ್ಗ ಸೇರಿದಂತೆ 15ಕ್ಕೂ ಹೆಚ್ಚು ಜಿಲ್ಲೆಗಳ ಜನರಿಗೆ ಪ್ರಯಾಣ ಸೌಲಭ್ಯ ಹೆಚ್ಚಾಗಲಿದೆ. ವಿಶೇಷ ರೈಲುಗಳಾಗಿ ಓಡುತ್ತಿದ್ದ ಸೇವೆಗಳು ಸಾಮಾನ್ಯವಾಗಿ ಹೆಚ್ಚಿನ ದರ ಹಾಗೂ…