ಯುಗಾದಿ ಹೊಸತೊಡಕು: ನಾಟಿ ಕೋಳಿಗೆ ಭಾರೀ ಡಿಮ್ಯಾಂಡ್, ರೇಟ್ ಎಷ್ಟು ಗೊತ್ತಾ?
ಚಿಕ್ಕಬಳ್ಳಾಫುರ, ಮಾರ್ಚ್ 19: ಇಂದು ಯುಗಾದಿ (Ugadi) ಹೊಸತೊಡಕು, ನಾನ್ ವೆಜ್ ಪ್ರಿಯರು ಚಿಕನ್, ಮಟನ್ ತಿನ್ನದಿದ್ದರೇ ಸಮಾಧಾನವಾಗಲ್ಲ. ಆದರೆ ಫಾರಂ ಕೋಳಿ ಬದಲು ಈಗ ನಾಟಿ ಕೋಳಿ (Nati Koli) ಹಾಗೂ ನಾಟಿ ಕೋಳಿ ಮೊಟ್ಟೆ ಮೊರೆ ಹೋಗಿದ್ದಾರೆ. ಹೀಗಾಗಿ ನಾಟಿ ಕೋಳಿಗೆ ಸಖತ್ ಡಿಮ್ಯಾಂಡ್ ಬಂದಿದ್ದು, ಜನರು ಹುಡುಕಾಡಿ ಕೇಳಿದಷ್ಟು ಹಣ ನೀಡಿ ಖರೀದಿ ಮಾಡುತ್ತಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ನಾಟಿ ಕೋಳಿ ಸಾಕಾಣಿಕೆ ಆರೋಗ್ಯ ಕಾಳಜಿ ವಹಿಸುತ್ತಿರುವ ಕೆಲವರು, ಹೈಬ್ರಿಡ್ ಆಹಾರದ ಬದಲು ನಾಟಿ, ಜವಾರಿ…