ಬಳ್ಳಾರಿ ಬ್ಯಾನರ್​​ ಗಲಾಟೆಗೆ ಸ್ಫೋಟಕ ತಿರುವು​​: ರಾಜಶೇಖರ್​​ಗೆ ತಗುಲಿದ್ದ ಬುಲೆಟ್​​ ಸತ್ಯ ರಿವೀಲ್​​ – Kannada News | Bellary Banner Clash: Rajasekhar’s Death Linked to Satish Reddy Gunman

ರಾಜಶೇಖರ್​​ ಸಾವಿನ ಸತ್ಯ ರಿವೀಲ್​​

ಬಳ್ಳಾರಿ, ಜನವರಿ 04: ಬ್ಯಾನರ್​​ ಅಳವಡಿಕೆ ವಿಚಾರವಾಗಿ ಶಾಸಕರಾದ ಜನಾರ್ದನ ರೆಡ್ಡಿ ಮತ್ತು ಭರತ್​​ ರೆಡ್ಡಿ ಬೆಂಬಲಿಗರ ಮಾರಾಮಾರಿ ವೇಳೆ ಬುಲೆಟ್​​ ತಗುಲಿ ಮೃತಪಟ್ಟಿದ್ದ ಕಾಂಗ್ರೆಸ್​​ ಕಾರ್ಯಕರ್ತನ ಸಾವಿನ ಕೇಸ್​​ಗೆ ಸ್ಫೋಟಕ ತಿರುವು ಸಿಕ್ಕಿದೆ. ಸತೀಶ್ ರೆಡ್ಡಿ ಗನ್ ಮ್ಯಾನ್ ಫೈರ್​​ ಮಾಡಿದ್ದ ಬಂದೂಕಿನ ಬುಲೆಟ್​​ ತಗುಲಿಯೇ ಯುವಕ ರಾಜಶೇಖರ್​​ ಮೃತಪಟ್ಟಿದ್ದಾರೆ ಎಂಬುದು ದೃಢಪಟ್ಟಿದೆ ಎನ್ನಲಾಗಿದೆ. 12 ಎಂಎಂ ಬುಲೆಟ್​​ನಿಂದ ರಾಜಶೇಖರ್​​ ಜೀವ ಹೋಗಿದ್ದು, ಸತೀಶ್ ರೆಡ್ಡಿ ಖಾಸಗಿ ಗನ್​​ಮ್ಯಾನ್ ಕೂಡ ಬಳಸಿರೋದು ಇದೇ ಗನ್​​ ಆಗಿದೆ. ಪ್ರಕರಣ ಸಂಬಂಧ ಈಗಾಗಲೇ 5 ಗನ್​​ಗಳನ್ನು ಬ್ರೂಸ್​​ ಪೇಟೆ ಪೊಲೀಸರು ವಶಕ್ಕೆ ಪಡೆದಿದ್ದು, ತನಿಖೆ ಮುಂದುವರಿಸಿದ್ದಾರೆ. ಓರ್ವ ಗನ್​​ಮ್ಯಾನ್​​ನನ್ನು ವಶಕ್ಕೆ ಪಡೆಯಲಾಗಿದ್ದು, ಉಳಿದ ನಾಲ್ವರು ಎಸ್ಕೇಪ್​​ ಆಗಿದ್ದಾರೆ.

50ಕ್ಕೂ ಹೆಚ್ಚು ಮಂದಿಯ ವಿಚಾರಣೆ

ಗಲಾಟೆ ಪ್ರಕರಣ ಸಂಬಂಧ ಎರಡೂ ಗುಂಪುಗಳ ಮೇಲೂ ಪೊಲೀಸರು FIR ದಾಖಲಿಸಿಕೊಂಡಿದ್ದು, 50ಕ್ಕೂ ಹೆಚ್ಚು ಮಂದಿಯ ವಿಚಾರಣೆ ನಡೆಸಿದ್ದಾರೆ. ಇಂದು ಮಧ್ಯಾಹ್ನದ ಒಳಗೆ ಪ್ರಮುಖ ಆರೋಪಿಗಳು ಸೇರಿ ಹಲವರ ಬಂಧನ ಸಾಧ್ಯತೆ ಇದೆ. ಗಲಾಟೆ ಸಂದರ್ಭ ಸ್ಥಳದಲ್ಲಿದ್ದ ಶಾಸಕ ಭರತ್​​ ರೆಡ್ಡಿ ಆಪ್ತ ಸತೀಶ್ ರೆಡ್ಡಿಯೂ ಅರೆಸ್ಟ್​​ ಆಗಬಹುದು ಎನ್ನಲಾಗಿದೆ. ಸತೀಶ್ ರೆಡ್ಡಿ ಸ್ಥಳಕ್ಕೆ ಬಂದ ನಂತರವೇ ಗಲಾಟೆ ವಿಕೋಪಕ್ಕೆ ತಿರುಗಿದ್ದು, ಸತೀಶ್ ರೆಡ್ಡಿ ಮೇಲೆ ಹಲ್ಲೆಗೆ ಜನಾರ್ದನ್ ರೆಡ್ಡಿ ಕಡೆಯವರು ಮುಂದಾಗಿದ್ದರು. ಈ ವೇಳೆ ಸತೀಶ್​​ ರೆಡ್ಡಿ ಖಾಸಗಿ ಗನ್​​ಮ್ಯಾನ್​ಗಳು ಫೈರಿಂಗ್​ ಮಾಡಿದ್ದರು. ಇನ್ನು ಪ್ರಕರಣ ಸಂಬಂಧ ಭರತ್ ರೆಡ್ಡಿ ಹಾಗೂ ಜನಾರ್ದನ ರೆಡ್ಡಿಗೂ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಗಲಾಟೆಗೆ ಸಂಬಂಧಿಸಿದಂತೆ ಒಟ್ಟಾರೆ 6 ಪ್ರಕರಣಗಳು ಈವರೆಗೆ ದಾಖಲಾಗಿವೆ.

ಇದನ್ನೂ ಓದಿ: ಬಳ್ಳಾರಿ ಗಲಭೆ; ಜನಾರ್ದನರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ

ಭದ್ರತೆ ನೀಡುವಂತೆ ಜನಾರ್ದನ ರೆಡ್ಡಿ ಮನವಿ

ಬಳ್ಳಾರಿ ಗಲಾಟೆ ಬೆನ್ನಲ್ಲೇ ತಮಗೆ ಮತ್ತು ತಮ್ಮ ಕುಟುಂಬಕ್ಕೆ ಝೆಡ್ ಶ್ರೇಣಿಯ ಭದ್ರತೆ ಒದಗಿಸಬೇಕು ಎಂದು ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಆಗ್ರಹಿಸಿದ್ದಾರೆ. ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮತ್ತು ಡಿಜಿಪಿ ಡಾ. ಎಂ.ಎ. ಸಲೀಂ ಅವರಿಗೆ ಪತ್ರ ಬರೆದು ಶಾಸಕರು ಆಗ್ರಹಿಸಿದ್ದಾರೆ. ಶಾಸಕ ನಾರಾ ಭರತ್ ‌ರೆಡ್ಡಿ ಮತ್ತು ಸತೀಶ್ ರೆಡ್ಡಿಯನ್ನು ಬಂಧಿಸಬೇಕು. ಘಟನೆಯನ್ನು ನಿಭಾಯಿಸದ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ವಹಿಸಬೇಕು. ಭದ್ರತೆ ನೀಡದೇ ಇದ್ದರೆ ಮುಂದೆ ನನ್ನ ಮತ್ತು ಕುಟುಂಬದ ಮೇಲೆ ದಾಳಿ ನಡೆದರೆ ರಾಜ್ಯ ಸರ್ಕಾರವೇ ಹೊಣೆ ಎಂದು ಜನಾದನ ರೆಡ್ಡಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಫೀಲಿಂಗ್ಸ್: ಓಪನ್ ಆಗಿ ಹೇಳಿದ ಕಿಚ್ಚ ಸುದೀಪ್ – Kannada News | Kichcha Sudeep jokes about Gilli Nata Kavya Shaiva and Rakshitha Shetty bonding

ಬಿಗ್ ಬಾಸ್ ಆಟದಲ್ಲಿ ಗಿಲ್ಲಿ ನಟ (Gilli Nata) ಅವರು ವೀಕ್ಷಕರ ಫೇವರಿಟ್ ಆಗಿದ್ದಾರೆ. ಗಿಲ್ಲಿ ಬಗ್ಗೆ ಬಿಗ್ ಬಾಸ್ ಸ್ಪರ್ಧಿಗಳಿಗೆ ಕೆಲವು ಟೀಕೆಗಳು ಇದ್ದರೂ ಕೂಡ ಅವರ ಕಾಮಿಡಿಯನ್ನು ಎಲ್ಲರೂ ಎಂಜಾಯ್ ಮಾಡುತ್ತಾರೆ. ಗಿಲ್ಲಿ ಬಗ್ಗೆ ರಕ್ಷಿತಾ ಶೆಟ್ಟಿ (Rakshitha Shetty) ಅವರು ಮೊದಲಿನಿಂದಲೂ ಆಸಕ್ತಿ ಹೊಂದಿದ್ದಾರೆ. ಆ ಬಗ್ಗೆ ಜನವರಿ 4ರ ಸಂಚಿಕೆಯಲ್ಲಿ ಕಿಚ್ಚ ಸುದೀಪ್ ಚರ್ಚೆ ಮಾಡಿದ್ದಾರೆ. ‘ಕಾವ್ಯಾ ಯಾವಾಗಲೂ ಗಿಲ್ಲಿ ಪಕ್ಕನೇ ಕುಳಿತುಕೊಳ್ಳುತ್ತಾರೆ’ ಎಂದು ರಕ್ಷಿತಾ ಶೆಟ್ಟಿ ಹೇಳಿದ್ದಾರೆ. ‘ಇದನ್ನೆಲ್ಲ ನೋಡಿ ಕಾವ್ಯಾ ಎಂಜಾಯ್ ಮಾಡುತ್ತಾರೋ ಇಲ್ಲವೋ ಗೊತ್ತಿಲ್ಲ. ಆದರೆ ರಕ್ಷಿತಾಗಂತೂ ಸ್ವಲ್ಪ ಉರಿಯುತ್ತೆ. ಹೆಂಗಾದರೂ ಕಾವ್ಯಾನ ಹೊರಗೆ ಕಳಿಸಿದರೆ ನಾನು ಹೋಗಿ ಗಿಲ್ಲಿ ಪಕ್ಕ ಕೂರಬಹುದು ಅಂತ ಅಂದುಕೊಳ್ಳುತ್ತೀರಿ’ ಎಂದು ಕಿಚ್ಚ ಸುದೀಪ್ (Kichcha Sudeep) ಅವರು ಹೇಳಿದ್ದಾರೆ. ಜ.4ರ ಎಪಿಸೋಡ್ ಪ್ರೋಮೋ ಇಲ್ಲಿದೆ..

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಮದುವೆಗೆ ಒಪ್ಪದಿದ್ದಕ್ಕೆ ಮಹಿಳೆ ಕೊಲೆ ಕೇಸ್​​ಗೆ ಟ್ವಿಸ್ಟ್​​: ಆರೋಪಿ ಕೂಡ ನೇಣಿಗೆ ಶರಣು – Kannada News | Ranjitha Murder Case: Accused Found Dead in Forest Area of Yellapura

ಆತ್ಮಹತ್ಯೆಗೆ ಶರಣಾದ ರಂಜಿತಾಳ ಕೊಂದಿದ್ದ ರಫೀಕ್​​.

ಯಲ್ಲಾಪುರ, ಜನವರಿ 04: ಮದುವೆಗೆ ಒಪ್ಪದಿದ್ದಕ್ಕೆ ವಿಚ್ಛೇದಿತ ಮಹಿಳೆಯ ಬರ್ಬರ ಹತ್ಯೆ ಪ್ರಕರಣ ಸಂಬಂಧ ಕೊಲೆ ಆರೋಪಿ ರಫೀಕ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಿನ್ನೆ ರಂಜಿತಾ ಕೊಲೆಗೈದು ಅರಣ್ಯದಲ್ಲಿ ಪರಾರಿಯಾಗಿದ್ದ ರಫೀಕ್(30) ಮೃತದೇಹ ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರದ ಕಾಳಮ್ಮನಗರ ಅರಣ್ಯದಲ್ಲಿ ಪತ್ತೆಯಾಗಿದೆ. ಎಸ್ಕೇಪ್​​ ಆಗಿದ್ದ ಆರೋಪಿಗಾಗಿ ಇಂದು ಶ್ವಾನದಳದಿಂದ ಹುಡುಕಾಟ ನಡೆಸುವಾಗ ಘಟನೆ ಬೆಳಕಿಗೆ ಬಂದಿದೆ.

ಸುಮಾರು ಹತ್ತು ವರ್ಷಗಳ ಹಿಂದೆ ಗಂಡಿನಿಂದ ವಿಚ್ಛೇದನ ಪಡೆದಿದ್ದ ಮಹಿಳೆ ರಂಜಿತಾಳನ್ನು ರಫೀಕ್​​ ಪ್ರೀತಿಸುತ್ತಿದ್ದ. ಇಬ್ಬರ ಕುಟುಂಬಗಳ ನಡುವೆ ಒಳ್ಳೆಯ ಬಾಂಧವ್ಯ ಸಹ ಇದ್ದು, ರಫೀಕ್ ಆಗಾಗ ರಂಜಿತಾಳ ಮನೆಗೆ ಬಂದು ಊಟ ಮಾಡಿ ಹೋಗುತ್ತಿದ್ದ. ಒಂದು ಮಗು ಕೂಡ ಹೊಂದಿದ್ದ ರಂಜಿತಾ ತಂದೆ-ತಾಯಿ ಹಾಗೂ ಅಣ್ಣನೊಂದಿಗೆ ಯಲ್ಲಾಪುರದಲ್ಲಿ ವಾಸವಾಗಿದ್ದಳು. ಜೀವನೋಪಾಯಕ್ಕಾಗಿ ಸರ್ಕಾರಿ ಶಾಲೆಯೊಂದರಲ್ಲಿ ಬಿಸಿಯೂಟ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದಳು. ಈ ನಡುವೆ ಈತ್ತೀಚೆಗೆ ಮದುವೆಯಾಗುವಂತೆ ರಂಜಿತಾಳನ್ನು ರಫೀಕ್​​ ಒತ್ತಾಯಿಸಿದ್ದ. ಆದರೆ ಇದಕ್ಕೆ ರಂಜಿತಾ ವಿರೋಧ ವ್ಯಕ್ತಪಡಿಸಿದ್ದಳು. ನಮ್ಮ ಸಂಬಂಧ ಹೀಗೆ ಇರಲಿ, ಆದರೆ ಮದುವೆ ಆಗುವುದಿಲ್ಲ ಎಂದು ಹೇಳಿದ್ದಳು ಎನ್ನಲಾಗಿದೆ.

ಇದನ್ನೂ ಓದಿ: ವಿವಾಹಿತ ಮಹಿಳೆ ಜತೆ ಯುವಕನ ಲವ್, ಮದುವೆಯಾಗಲು ಒಪ್ಪದ್ದಕ್ಕೆ ನಡುರಸ್ತೆಯಲ್ಲೇ ಕೊಲೆ ಮಾಡಿ ಪರಾರಿ

ಇದರಿಂದ ಕೋಪಗೊಂಡಿದ್ದ ರಫೀಕ್​​ ಎಂದಿನಂತೆ ರಂಜಿತಾ ಶಾಲೆಯಿಂದ ಮನೆಗೆ ಹಿಂತಿರುಗುತ್ತಿದ್ದ ವೇಳೆ ರಸ್ತೆ ಮಧ್ಯೆ ಆಕೆಯನ್ನು ಅಡ್ಡಗಟ್ಟಿ, ಮತ್ತೆ ಮದುವೆ ಪ್ರಸ್ತಾಪ ಮಾಡಿದ್ದ. ಆದರೆ ಆ ವೇಳೆಯೂ ರಂಜಿತಾ ನಿರಾಕರಿಸಿದ ಕಾರಣ ಆಕೆಗೆ ಚಾಕುವಿನಿಂದ ಇರಿದು ಎಸ್ಕೇಪ್​​ ಆಗಿದ್ದ. ಆರೋಪಿ ರಫೀಕ್​​ ಮತ್ತು ಮೃತ ರಂಜಿತಾಳ ಅಣ್ಣ ಸ್ನೇಹಿತರಾಗಿದ್ದು, ಘಟನೆ ನಡೆಯುವ ಮುನ್ನ ರಾತ್ರಿ ಇಬ್ಬರು ಪಾರ್ಟಿ ಕೂಡ ಮಾಡಿದ್ದರು ಎಂಬುದು ಪೊಲೀಸ್​​ ತನಿಖೆ ವೇಳೆ ಬಯಲಾಗಿತ್ತು.

ಹಿಂದೂ ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಿರೋದನ್ನು ಖಂಡಿಸಿ ಇಂದು ಯಲ್ಲಾಪುರ ಬಂದ್​​ಗೆ ವಿಎಚ್​​ಪಿ ಕರೆ ಕೂಡ ಕೊಟ್ಟಿತ್ತು.ಅಂಗಡಿ ಮುಂಗಟ್ಟು ಮುಚ್ಚಿ ಬಂದ್​​ಗೆ ಸ್ಪಂದಿಸುವಂತೆ ಮನವಿ ಮಾಡಿತ್ತು. ಪಟ್ಟಣದ ಬಸವೇಶ್ವರ ಸರ್ಕಲ್​​ನಲ್ಲಿ ಪ್ರತಿಭಟನೆಗೆ ಸಿದ್ಧತೆ ನಡೆದಿತ್ತು. ಜೊತೆಗ ಆರೋಪಿ ಬಂಧಿಸೋವರೆಗೂ ರಂಜಿತಾಳ ಅಂತ್ಯಕ್ರಿಯೆ ಮಾಡಲ್ಲೆಂದು ಹಿಂದೂ ಸಂಘಟನೆಗಳ ಪಟ್ಟು ಹಿಡಿದಿದ್ದವು. ಆದ್ರೆ ಈ ನಡುವೆ ರಫೀಕ್​​ ಆತ್ಮಹತ್ಯೆಗೆ ಶರಣಾಗಿರುವ ವಿಚಾರ ಬೆಳಕಿಗೆ ಬಂದಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Video: ತಿರುಪತಿಯ ಗೋವಿಂದರಾಜಸ್ವಾಮಿ ದೇವಾಲಯ ಹತ್ತಿ ಮದ್ಯಕ್ಕೆ ಬೇಡಿಕೆ ಇಟ್ಟ ಕುಡುಕ ‘ತಿರುಪತಿ’ – Kannada News | Temple Security Alerted After Man Climbs Shrine Structure in Tirupati

ತಿರುಪತಿ, ಜನವರಿ 04: ಆಂಧ್ರಪ್ರದೇಶದ ತಿರುಪತಿ ದೇವಾಲಯದ ತಿರುಪತಿಯಲ್ಲಿ ಶುಕ್ರವಾರ ತಡರಾತ್ರಿ ಕುಡಿದ ಮತ್ತಿನಲ್ಲಿ ಯುವಕನೊಬ್ಬ ಶ್ರೀ ಗೋವಿಂದರಾಜಸ್ವಾಮಿ ದೇವಾಲಯದ ಮೇಲೆ ಹತ್ತಿ ಸುಮಾರು 3 ಗಂಟೆಗಳ ಕಾಲ ಅಲ್ಲೇ ಕುಳಿತು ಮದ್ಯಕ್ಕೆ ಬೇಡಿಕೆ ಇಟ್ಟಿರುವ ಘಟನೆ ನಡೆದಿದೆ.

ವಿಪರ್ಯಾಸವೆಂದರೆ ಆ ಕುಡುಕನ ಹೆಸರು ಕೂಡ ತಿರುಪತಿ. ಅಧಿಕಾರಿಗಳು ಮತ್ತು ಪೊಲೀಸರು ಆತನನ್ನು ಕೆಳಗೆ ಇಳಿಸಲು ಹರಸಾಹಸ ಪಟ್ಟರು. ದೇವಾಲಯ ಮುಚ್ಚಿದ ಸ್ವಲ್ಪ ಸಮಯದ ನಂತರ ಈ ಘಟನೆ ಸಂಭವಿಸಿದೆ, ಹೇಗೋ ದೇವಸ್ಥಾನದ ಗೋಡೆಯನ್ನು ಹಾರಿ ಆವರಣಕ್ಕೆ ಪ್ರವೇಶಿಸಿದ್ದಾನೆ ಎಂದು ಹೇಳಲಾಗಿದೆ. ಅವನು ಮದ್ಯದ ಅಮಲಿನಲ್ಲಿದ್ದ ಎಂದು ವರದಿಯಾಗಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

138 ವರ್ಷಗಳ ಬಳಿಕ ವಿಭಿನ್ನ ಪ್ಲೇಯಿಂಗ್ ಇಲೆವೆನ್ ರೂಪಿಸಿದ ಆಸ್ಟ್ರೇಲಿಯಾ – Kannada News | AUS vs ENG: Australia drops spinner for first time in 138 years at SCG

ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ನಡುವಣ ಪ್ರತಿಷ್ಠಿತ ಆ್ಯಶಸ್ ಸರಣಿಯ ಕೊನೆಯ ಪಂದ್ಯ ಶುರುವಾಗಿದೆ. ಸಿಡ್ನಿ ಕ್ರಿಕೆಟ್​ ಗ್ರೌಂಡ್​ನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ವಿಭಿನ್ನ ಪ್ಲೇಯಿಂಗ್ ಇಲೆವೆನ್​ ಅನ್ನು ಕಣಕ್ಕಿಳಿಸುವ ಮೂಲಕ ಆಸ್ಟ್ರೇಲಿಯಾ ತಂಡ ಹೊಸ ಇತಿಹಾಸ ನಿರ್ಮಿಸಿದೆ.

ಅಂದರೆ ಆಸ್ಟ್ರೇಲಿಯಾ ತಂಡವು 138 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಸಿಡ್ನಿ ಕ್ರಿಕೆಟ್ ಗ್ರೌಂಡ್​ನಲ್ಲಿ ಪ್ರಮುಖ ಸ್ಪಿನ್ನರ್ ಇಲ್ಲದೆ ಕಣಕ್ಕಿಳಿದಿದೆ. ಅಂದರೆ ಕಳೆದೊಂದು ಶತಮಾನದಲ್ಲಿ ಆಸ್ಟ್ರೇಲಿಯಾ ತಂಡವು ಸ್ಪಿನ್ನರ್ ಇಲ್ಲದೆ ಒಮ್ಮೆಯೂ ಎಸ್​ಸಿಜಿ ಮೈದಾನದಲ್ಲಿ ಪಂದ್ಯವಾಡಿರಲಿಲ್ಲ.

ಆದರೆ ಈ ಬಾರಿ ಸ್ಪಿನ್ನರ್​ನನ್ನು ಹೊರಗಿಟ್ಟು ಆಲ್​ರೌಂಡರ್ ಬ್ಯೂ ವೆಬ್​ಸ್ಟರ್​ಗೆ ಪ್ಲೇಯಿಂಗ್ ಇಲೆವೆನ್​ನಲ್ಲಿ ಅವಕಾಶ ನೀಡಲಾಗಿದೆ. ಈ ಮೂಲಕ 138 ವರ್ಷಗಳ ನಂತರ ಪರಿಪೂರ್ಣ ಸ್ಪಿನ್ ಬೌಲರ್ ಇಲ್ಲದೆ ಆಸ್ಟ್ರೇಲಿಯಾ ಸಿಡ್ನಿ ಕ್ರಿಕೆಟ್​ ಗ್ರೌಂಡ್​ನಲ್ಲಿ ಕಣಕ್ಕಿಳಿದಿದೆ.

ಆಸ್ಟ್ರೇಲಿಯಾ ಪ್ಲೇಯಿಂಗ್ 11:  ಸ್ಟೀವ್ ಸ್ಮಿತ್ (ನಾಯಕ), ಟ್ರಾವಿಸ್ ಹೆಡ್, ಜೇಕ್ ವೆದರಾಲ್ಡ್​, ಮಾರ್ನಸ್ ಲ್ಯಾಬುಶೇನ್, ಉಸ್ಮಾನ್ ಖ್ವಾಜಾ, ಅಲೆಕ್ಸ್ ಕ್ಯಾರಿ, ಕ್ಯಾಮರೂನ್ ಗ್ರೀನ್, ಬ್ಯೂ ವೆಬ್‌ಸ್ಟರ್, ಮೈಕೆಲ್ ನೇಸರ್, ಮಿಚೆಲ್ ಸ್ಟಾರ್ಕ್, ಸ್ಕಾಟ್ ಬೋಲ್ಯಾಂಡ್.

ಇಂಗ್ಲೆಂಡ್ ಪ್ಲೇಯಿಂಗ್ 11: ಝಾಕ್ ಕ್ರಾಲಿ, ಬೆನ್ ಡಕೆಟ್, ಜೇಕಬ್ ಬೆಥೆಲ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್ (ನಾಯಕ), ಜೇಮಿ ಸ್ಮಿತ್ (ವಿಕೆಟ್ ಕೀಪರ್), ವಿಲ್ ಜ್ಯಾಕ್ಸ್, ಬ್ರೈಡನ್ ಕಾರ್ಸ್, ಮ್ಯಾಥ್ಯೂ ಪಾಟ್ಸ್, ಜೋಶ್ ಟಂಗ್.

Published On – 9:00 am, Sun, 4 January 26

Source link

Mysuru: ಚುನಾವಣಾ ರಾಜಕೀಯಕ್ಕೆ ರಾಮದಾಸ್​​ ನಿವೃತ್ತಿ: ಕಾರಣ ಬಿಚ್ಚಿಟ್ಟ ಮಾಜಿ ಸಚಿವ – Kannada News | Former minister A. S. Ramadas announced his retirement from electoral politics

ಮೈಸೂರು, ಜನವರಿ 04: ಚುನಾವಣಾ ರಾಜಕೀಯಕ್ಕೆ ಬಿಜೆಪಿ ನಾಯಕ, ಮಾಜಿ ಸಚಿವ ಎಸ್. ಎ. ರಾಮದಾಸ್ ನಿವೃತ್ತಿ ಘೋಷಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿರುವ ಅವರು, ಎಲ್ಲರೂ ನನ್ನನ್ನು ಸಕ್ರಿಯ ರಾಜಕೀಯದಲ್ಲಿ ಇರಿ ಅಂತಾರೆ. ಆದರೆ ನನಗೆ ಚುನಾವಣೆ ರಾಜಕಾರಣ ಸಾಕಾಗಿದೆ. ಈ ಹಿಂದೆ ರಾಮನಿಗೆ ಪಟ್ಟಾಭಿಷೇಕ ಆಗಬೇಕಿತ್ತು. ಆದರೆ ದಶರಥನ ಮೂಲಕ ರಾಮನನ್ನು ಕಾಡಿಗೆ ಕಳುಹಿಸಬೇಕಾಯಿತು. ಶ್ರೀರಾಮನೇ ಮರು ಮಾತನಾಡದೆ ಕಾಡಿಗೆ ಹೋದ. ಇನ್ನು ನಾನು ರಾಮದಾಸ, ನಾನೇನು ಮಾಡಲಿ? ಎಂದು ಹೇಳುವ ಮೂಲಕ ಟಿಕೆಟ್​​ ಕೈತಪ್ಪಿದ್ದನ್ನು ಮಾಜಿ ಸಚಿವರು ನೆನಪಿಸಿಕೊಂಡರು. ಊಟಕ್ಕೆ ಕೂತ ನನ್ನನು ಅರ್ಧದಿಂದ ಎಬ್ಬಿಸಿ, ಬೇರೆಯವರನ್ನು ಕೂರಿಸಿದರು. ನಾನೇ ಊಟ ಬಡಿಸಿದ್ದು, ನನಗೇನೂ ದುಃಖವಿಲ್ಲ. ಆಕಸ್ಮಿಕವಾಗಿ ರಾಜಕೀಯಕ್ಕೆ ಬಂದವನ್ನು, 30 ವರ್ಷ ರಾಜಕೀಯ ಮಾಡಿದ್ದೇನೆ. ಎಲ್ಲೂ ಕೈಯನ್ನು ಅಶುದ್ಧ ಮಾಡಿಕೊಂಡಿಲ್ಲ. ಬಿಜೆಪಿ ನನಗೆ ತಾಯಿ ಇದ್ದಂತೆ, ಯಾವುದೇ ಕಾರಣಕ್ಕೂ ಪಕ್ಷಕ್ಕೆ ದ್ರೋಹ ಮಾಡಲ್ಲ ಎಂದೂ ರಾಮದಾಸ್​​ ಇದೇ ವೇಳೆ ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Video: ಶರ್ಟ್​ ಬಿಚ್ಚಿ, ಕಾರಿನ ಮೇಲೆ ಡ್ಯಾನ್ಸ್ ಮಾಡಿದ ಯುವಕರು, ಬಿತ್ತು 67 ಸಾವಿರ ರೂ. ದಂಡ – Kannada News | New Year Revelry Turns Costly as Noida Police Fine Car Top Dancers

ನೋಯ್ಡಾ, ಜನವರಿ 04: ಯುವಕರು ಶರ್ಟ್​ ಬಿಚ್ಚಿ ಕಾರಿನ ಮೇಲೆ ವಿಚಿತ್ರವಾಗಿ ಡ್ಯಾನ್ಸ್​ ಮಾಡಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ನೋಯ್ಡಾದಲ್ಲಿ ನಡೆದಿದೆ. ಅಷ್ಟೇ ಅಲ್ಲದೆ ರಸ್ತೆಯಲ್ಲಿ ನಡೆದುಕೊಂಡು ಹೋಗುವವರಿಗೂ ಮುಜುಗರ ಉಂಟು ಮಾಡಿದ್ದಾರೆ. ನೋಯ್ಡಾ ಸಂಚಾರ ಪೊಲೀಸರು 67,000 ರೂ.ಗಳ ಇ-ಚಲನ್ ಜಾರಿ ಜಾರಿ ಮಾಡಿದ್ದಾರೆ. ಕುಡಿದ ಮತ್ತಿನಲ್ಲಿದ್ದ ಗುಂಪು ಸಂಚಾರಕ್ಕೆ ಅಡ್ಡಿಪಡಿಸಿತ್ತು ಮತ್ತು ಕಾರಿನ ಇತರ ಪ್ರಯಾಣಿಕರು ಇಡೀ ಘಟನೆಯನ್ನು ರೆಕಾರ್ಡ್ ಮಾಡಿದ್ದರಿಂದ ಅವರ ವರ್ತನೆಗಳು ಭಾರಿ ಅಡಚಣೆಯನ್ನುಂಟುಮಾಡಿದ್ದವು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ರಸ್ತೆ ಅಪಘಾತ: ನಟ ಆಶಿಷ್ ವಿದ್ಯಾರ್ಥಿ, ರೂಪಾಲಿ ದಂಪತಿ ಪರಿಸ್ಥಿತಿ ಹೇಗಿದೆ? – Kannada News | Ashish Vidyarthi gives health update of Wife Rupali after road accident

ಖ್ಯಾತ ನಟ ಆಶಿಷ್ ವಿದ್ಯಾರ್ಥಿ (Ashish Vidyarthi) ಅವರ ಅಭಿಮಾನಿಗಳಿಗೆ ಆತಂಕ ಆಗುವಂತಹ ಸುದ್ದಿ ಇತ್ತೀಚೆಗೆ ಕೇಳಿಬಂತು. ರಸ್ತೆ ದಾಟುವಾಗ ಆಶಿಷ್ ವಿದ್ಯಾರ್ಥಿ ಮತ್ತು ಅವರ ಪತ್ನಿ ರೂಪಾಲಿ ಅವರಿಗೆ ಬೈಕ್ ಡಿಕ್ಕಿ ಹೊಡೆದಿತ್ತು. ಆ ಸುದ್ದಿ ಕೇಳಿದ ನಂತರ ಆಪ್ತರು ಮತ್ತು ಅಭಿಮಾನಿಗಳಿಗೆ ಬೇಸರ ಆಗಿತ್ತು. ಬಳಿಕ ಸ್ವತಃ ಆಶಿಷ್ ವಿದ್ಯಾರ್ಥಿ ಅವರು ಈ ರಸ್ತೆ ಅಪಘಾತದ (Road Accident) ಬಗ್ಗೆ ಮಾಹಿತಿ ನೀಡಿದ್ದಾರೆ. ತಮ್ಮಿಬ್ಬರ ಪರಿಸ್ಥಿತಿ ಹೇಗಿದೆ ಎಂಬುದನ್ನು ಅವರು ವಿವರಿಸಿದ್ದಾರೆ. ಇನ್​ಸ್ಟಾಗ್ರಾಮ್ ಲೈವ್ ಮೂಲಕ ಅವರು ಸ್ಪಷ್ಟನೆ ನೀಡಿದ್ದಾರೆ. ಆಶಿಷ್ ವಿದ್ಯಾರ್ಥಿ ಪತ್ನಿ ರೂಪಾಲಿ (Rupali) ಅವರಿಗೆ ಈಗ ಪ್ರಜ್ಞೆ ಬಂದಿದೆ.

ಗುಹವಾಟಿಯಲ್ಲಿ ಈ ಅಪಘಾತ ಸಂಭವಿಸಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಡಿಕ್ಕಿ ಹೊಡೆದ ಬೈಕ್ ಸವಾರನಿಗೂ ಪೆಟ್ಟಾಗಿದ್ದು, ಆತನನ್ನೂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈಗ ಎಲ್ಲರೂ ಚೇತರಿಸಿಕೊಳ್ಳುತ್ತಿದ್ದಾರೆ. ಈ ಅಪಘಾತದಲ್ಲಿ ಯಾರಿಗೂ ಗಂಭೀರ ಗಾಯಗಳು ಆಗಿಲ್ಲ ಎಂಬುದನ್ನು ಆಶಿಷ್ ವಿದ್ಯಾರ್ಥಿ ಅವರು ಸ್ಪಷ್ಟಪಡಿಸಿದ್ದಾರೆ.

‘ನಾನು ಒಂದು ವಿಚಿತ್ರ ಸಂದರ್ಭದಲ್ಲಿ ಈ ಲೈವ್ ವಿಡಿಯೋ ಮಾಡುತ್ತಿದ್ದೇನೆ. ಯಾಕೆಂದರೆ ಹಲವು ನ್ಯೂಸ್ ಚಾನೆಲ್​​ಗಳಲ್ಲಿ ಏನೇನೋ ಬರುತ್ತಿದೆ. ಅದನ್ನು ನಾನು ನೋಡುತ್ತಿದ್ದೇನೆ. ನಾನು ಮತ್ತು ರೂಪಾಲಿ ನಿನ್ನೆ ರಸ್ತೆ ದಾಟುವಾಗ ಬೈಕ್ ಬಂದು ಡಿಕ್ಕಿ ಹೊಡೆಯಿತು. ಆದರೆ ನಾವೀಗ ಆರಾಮಾಗಿದ್ದೇವೆ. ರೂಪಾಲಿ ಅವರನ್ನು ನೋಡಿಕೊಳ್ಳಲಾಗುತ್ತಿದೆ. ಎಲ್ಲವೂ ಸರಿಯಾಗಿದೆ. ನಾನು ಕೂಡ ಕ್ಷೇಮವಾಗಿದ್ದೇನೆ. ಚಿಕ್ಕ ಗಾಯ ಆಗಿದೆ ಅಷ್ಟೇ’ ಎಂದು ಆಶಿಷ್ ವಿದ್ಯಾರ್ಥಿ ಅವರು ಹೇಳಿದ್ದಾರೆ.

‘ನಮಗೆ ಅಪಘಾತ ಆಗಿದ್ದು ನಿಜ. ಆದರೆ ಅದನ್ನು ವೈಭವೀಕರಿಸುವ ಅಗತ್ಯ ಇಲ್ಲ. ಬೈಕ್ ಓಡಿಸುತ್ತಿದ್ದವನ ಬಗ್ಗೆಯೂ ನಾನು ಪೊಲೀಸರಿಂದ ಮಾಹಿತಿ ಪಡೆದಿದ್ದೇನೆ. ಆತನಿಗೂ ಈಗ ಪ್ರಜ್ಞೆ ಬಂದಿದೆ. ಎಲ್ಲರಿಗೂ ಒಳ್ಳೆಯದಾಗಲಿ. ಎಲ್ಲವೂ ಸರಿಯಾಗಿರಲಿ. ನಿಮಗೆಲ್ಲ ಇದನ್ನೇ ಹೇಳುತ್ತೇನೆ. ನಾನು ಕಾಳಜಿ ವಹಿಸುತ್ತಿದ್ದೇವೆ’ ಎಂದಿದ್ದಾರೆ ಆಶಿಷ್ ವಿದ್ಯಾರ್ಥಿ.

ಇದನ್ನೂ ಓದಿ: ಖುಷಿ ಇಲ್ಲದೇ ಸಾಯಬೇಕಾ? 57ನೇ ವಯಸ್ಸಿನಲ್ಲಿ ಮದುವೆ ಆಗಿದ್ದಕ್ಕೆ ಟ್ರೋಲ್​ ಮಾಡಿದವರಿಗೆ ಆಶಿಷ್​ ವಿದ್ಯಾರ್ಥಿ ಪ್ರಶ್ನೆ

ಆಶಿಷ್ ವಿದ್ಯಾರ್ಥಿ ಅವರು ಬಹುಭಾಷಾ ನಟ. ಬಾಲಿವುಡ್ ಮತ್ತು ದಕ್ಷಿಣ ಭಾರತದ ಚಿತ್ರರಂಗದಲ್ಲಿ ಅವರು ಹೆಸರು ಮಾಡಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಅವರು ಸಿನಿಮಾಗಳನ್ನು ಒಪ್ಪಿಕೊಳ್ಳುವುದು ಕಡಿಮೆ ಆಗಿದೆ. ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ಆ್ಯಕ್ಟೀವ್ ಆಗಿದ್ದಾರೆ. ಊರೂರು ಸುತ್ತುತ್ತ, ಎಲ್ಲ ಕಡೆಗಳಲ್ಲಿ ಆಹಾರ ಸವಿಯುತ್ತಾ ಬದುಕನ್ನು ಅವರು ಎಂಜಾಯ್ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಭಾರತದಿಂದ ಬಾಂಗ್ಲಾದೇಶ್ ಟಿ20 ವಿಶ್ವಕಪ್​ ಪಂದ್ಯಗಳು ಶಿಫ್ಟ್? – Kannada News | Bangladesh wants its T20 World Cup 2026 games out of India

ಭಾರತದಲ್ಲಿ ನಡೆಯಲಿರುವ ಬಾಂಗ್ಲಾದೇಶ್ ತಂಡದ ಟಿ20 ವಿಶ್ವಕಪ್​ ಪಂದ್ಯಗಳನ್ನು ಸ್ಥಳಾಂತರಿಸುವಂತೆ ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್​ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಗೆ ಮನವಿ ಮಾಡಲಿದೆ. ಇಂಡಿಯನ್ ಪ್ರೀಮಿಯರ್ ಲೀಗ್​ನಿಂದ ಬಾಂಗ್ಲಾ ಆಟಗಾರ ಮುಸ್ತಫಿಝುರ್ ರೆಹಮಾನ್ ಅವರನ್ನು ಹೊರಗಿಟ್ಟ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದ್ದು, ಹೀಗಾಗಿ ಬಾಂಗ್ಲಾದೇಶ್ ತಂಡದ ಟಿ20 ವಿಶ್ವಕಪ್ ಪಂದ್ಯಗಳು ಭಾರತದಲ್ಲಿ ನಡೆಯುವುದು ಅನುಮಾನ.

ಈ ಬಗ್ಗೆ ಸೋಷಿಯಲ್ ಮೀಡಿಯಾ ಪೋಸ್ಟ್ ಮೂಲಕ ಪ್ರತಿಕ್ರಿಯಿಸಿರುವ ಬಾಂಗ್ಲಾದೇಶದ ಕ್ರೀಡಾ ಸಲಹೆಗಾರ ಆಸಿಫ್ ನಜ್ರುಲ್, ಬಾಂಗ್ಲಾ ತಂಡದ ಪಂದ್ಯಗಳಿಗೆ ಪರ್ಯಾಯ ಸ್ಥಳವಾಗಿ ಶ್ರೀಲಂಕಾವನ್ನು ಪ್ರಸ್ತಾಪಿಸಲು ಮಧ್ಯಂತರ ಸರ್ಕಾರವು ಬಿಸಿಬಿಗೆ ನಿರ್ದೇಶನ ನೀಡಿದೆ ಎಂದು ತಿಳಿಸಿದ್ದಾರೆ. 

ಬಾಂಗ್ಲಾದೇಶ್, ಬಾಂಗ್ಲಾದೇಶ್ ಕ್ರಿಕೆಟ್ ಅಥವಾ ಬಾಂಗ್ಲಾದೇಶ್ ಕ್ರಿಕೆಟಿಗರ ಅವಮಾನವನ್ನು ನಾವು ಸಹಿಸುವುದಿಲ್ಲ. ತೀವ್ರವಾದಿ ಕೋಮುವಾದಿ ಶಕ್ತಿಗಳಿಗೆ ಮಣಿದು, ಭಾರತೀಯ ಕ್ರಿಕೆಟ್ ಮಂಡಳಿಯು ಬಾಂಗ್ಲಾದೇಶದ ಕ್ರಿಕೆಟಿಗ ಮುಸ್ತಾಫಿಝುರ್ ರೆಹಮಾನ್ ಅವರನ್ನು ತಂಡದಿಂದ ಕೈಬಿಡುವಂತೆ ಕೋಲ್ಕತ್ತಾ ನೈಟ್ ರೈಡರ್ಸ್‌ಗೆ ನಿರ್ದೇಶನ ನೀಡಿದೆ. ಇದನ್ನು ನಾನು ಬಲವಾಗಿ ಖಂಡಿಸುತ್ತೇನೆ ಮತ್ತು ಪ್ರತಿಭಟಿಸುತ್ತೇನೆ ಎಂದು ಆಸಿಫ್ ನಜ್ರುಲ್ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಕ್ರೀಡಾ ಸಚಿವಾಲಯದ ಉಸ್ತುವಾರಿ ಸಚಿವನಾಗಿ, ಇಡೀ ವಿಷಯವನ್ನು ವಿವರಿಸಿ ಐಸಿಸಿಗೆ ಪತ್ರ ಬರೆಯುವಂತೆ ನಾನು ಕ್ರಿಕೆಟ್ ಮಂಡಳಿಗೆ ಸೂಚಿಸಿದ್ದೇನೆ. ಬಾಂಗ್ಲಾದೇಶದ ಕ್ರಿಕೆಟಿಗನೊಬ್ಬ ಮಾನ್ಯ ಒಪ್ಪಂದವನ್ನು ಹೊಂದಿದ್ದರೂ ಭಾರತದಲ್ಲಿ ಆಡಲು ಸಾಧ್ಯವಾಗದಿದ್ದರೆ, ಬಾಂಗ್ಲಾದೇಶ್ ತನ್ನ ಇಡೀ ಕ್ರಿಕೆಟ್ ತಂಡವು ವಿಶ್ವಕಪ್ ಆಡಲು ಭಾರತಕ್ಕೆ ಪ್ರಯಾಣಿಸುವುದು ಸುರಕ್ಷಿತವೆಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಮಂಡಳಿಯು ಸ್ಪಷ್ಟವಾಗಿ ಹೇಳಬೇಕು. ಬಾಂಗ್ಲಾದೇಶದ ವಿಶ್ವಕಪ್ ಪಂದ್ಯಗಳನ್ನು ಶ್ರೀಲಂಕಾದಲ್ಲಿ ನಡೆಸುವಂತೆ ಔಪಚಾರಿಕವಾಗಿ ವಿನಂತಿಸುವಂತೆ ನಾನು ಮಂಡಳಿಗೆ ನಿರ್ದೇಶನ ನೀಡಿದ್ದೇನೆ” ಎಂದು ಆಸಿಫ್ ನಜ್ರುಲ್ ಹೇಳಿದ್ದಾರೆ.

ಅಷ್ಟೇ ಅಲ್ಲದೆ ಬಾಂಗ್ಲಾದೇಶದಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್​ನ ಪಂದ್ಯಗಳ ಪ್ರಸಾರವನ್ನು ನಿಲ್ಲಿಸುವಂತೆ ನಾನು ಮಾಹಿತಿ ಮತ್ತು ಪ್ರಸಾರ ಸಚಿವರನ್ನು ವಿನಂತಿಸಿದ್ದೇನೆ. ಯಾವುದೇ ಸಂದರ್ಭದಲ್ಲೂ ಬಾಂಗ್ಲಾದೇಶ್, ಬಾಂಗ್ಲಾದೇಶ್ ಕ್ರಿಕೆಟ್ ಅಥವಾ ಬಾಂಗ್ಲಾದೇಶ ಕ್ರಿಕೆಟಿಗರ ಅವಮಾನವನ್ನು ನಾವು ಸಹಿಸುವುದಿಲ್ಲ. ಗುಲಾಮಗಿರಿಯ ದಿನಗಳು ಮುಗಿದಿವೆ” ಎಂದು ಆಸಿಫ್ ನಜ್ರುಲ್ ಹೇಳಿದ್ದಾರೆ.

ಕ್ರೀಡಾ ಸಚಿವಾಲಯದ ಉಸ್ತುವಾರಿ ಸಚಿವನಾಗಿರುವ ಆಸಿಫ್ ನಜ್ರುಲ್ ಅವರ ನಿರ್ದೇಶನದ ಬೆನ್ನಲ್ಲೇ ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್ ತನ್ನ ಪಂದ್ಯಗಳನ್ನು ಭಾರತದಿಂದ ಸ್ಥಳಾಂತರಿಸುವಂತೆ ಐಸಿಸಿಗೆ ಪತ್ರ ಬರೆಯಲು ಮುಂದಾಗಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಟೀಮ್ ಇಂಡಿಯಾದಿಂದ ಮೂವರು ಆಟಗಾರರು ಔಟ್

ಹೀಗಾಗಿ ಮುಂಬರುವ ಟಿ20 ವಿಶ್ವಕಪ್​ನಲ್ಲಿ ಬಾಂಗ್ಲಾದೇಶ್ ತಂಡವು ತನ್ನೆಲ್ಲಾ ಪಂದ್ಯಗಳನ್ನು ಶ್ರೀಲಂಕಾದಲ್ಲಿ ಆಡುವ ಸಾಧ್ಯತೆಯಿದೆ. ಈಗಾಗಲೇ ಪಾಕಿಸ್ತಾನದ ಪಂದ್ಯಗಳಿಗೆ ಶ್ರೀಲಂಕಾದ ಮೈದಾನಗಳನ್ನು ನಿಗದಿ ಮಾಡಲಾಗಿದ್ದು, ಅದೇ ರೀತಿ ಬಾಂಗ್ಲಾ ತಂಡದ ಮ್ಯಾಚ್​ಗಳಿಗೂ ಶ್ರೀಲಂಕಾ ಆತಿಥ್ಯವಹಿಸಬಹುದು.

Source link

ನಿಧಿ ಆಸೆಗೆ ಪೋಷಕರಿಂದಲೇ ಮಗು ಬಲಿಗೆ ಯತ್ನ? 8 ತಿಂಗಳ ಕಂದಮ್ಮನ ರಕ್ಷಣೆ – Kannada News | Eight Month Old Baby Rescued After Parents Attempt Treasure Sacrifice in Hosakote

ಮನೆಯ ಕೋಣೆಯಲ್ಲಿ ತೆಗೆದಿರುವ ಗುಂಡಿ.

ದೇವನಹಳ್ಳಿ, ಜನವರಿ 04: ನಿಧಿ ಆಸೆಗಾಗಿ ನಡೆಸಿದ ಪೂಜೆಗಾಗಿ ಪೋಷಕರು ಮಗುವನ್ನೇ ಬಲಿ ಕೊಡಲು ಹೋಗಿರುವ ಘಟನೆ ನಡೆದ ಆರೋಪ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆಯ ಜನತಾ ಕಾಲೋನಿಯಲ್ಲಿ ಕೇಳಿಬಂದಿದೆ. ಮನೆಯಲ್ಲಿ ಗುಂಡಿ ತೆಗೆದು ಮಗು ಬಲಿಗಾಗಿ ಪೂಜೆ‌ ಮಾಡಲಾಗುತ್ತಿತ್ತು ಎನ್ನಲಾಗಿದ್ದು, ಈ ವೇಳೆ ನಿಖರ ಮಾಹಿತಿ ಆಧಾರದಲ್ಲಿ ದಾಳಿ ನಡೆಸಿದ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಮಗುವನ್ನು ರಕ್ಷಿಸಿದ್ದಾರೆ.

ಮನೆಯ ಕೋಣೆಯಲ್ಲಿ ಗುಂಡಿ ತೆಗೆದು ಪೂಜೆ

ಸೈಯದ್ ಇಮ್ರಾನ್ ಎಂಬುವರ ಮನೆಯಲ್ಲಿ ನಿಧಿಗಾಗಿ ಮಗು ಬಲಿ ಪೂಜೆ ನಡೆದಿದ್ದು, ಬೇರೆಯವರಿಂದ ಗಂಡು ಮಗುವನ್ನು ಇವರು ಖರೀದಿಸಿದ್ದರು ಎನ್ನಲಾಗಿದೆ. ನಿನ್ನೆ ಹುಣ್ಣಿಮೆ ಹಿನ್ನೆಲೆ ಮಗು ಬಲಿ ಕೊಡ್ತಿದ್ದಾರೆ ಎಂಬ ಬಗ್ಗೆ ಸಹಾಯವಾಣಿಗೆ ಅಪರಿಚಿತ ಕರೆ ಬಂದ ಹಿನ್ನೆಲೆ ಅಧಿಕಾರಿಗಳು ದಾಳಿ ನಡೆಸಿ ಮನೆ ಪರಿಶೀಲನೆ ಮಾಡಿದ್ದಾರೆ. ಈ ಮೇಳೆ ಮನೆಯ ಕೋಣೆಯೊಂದರಲ್ಲಿ ಗುಂಡಿ ತೆಗೆದು ಪೂಜೆ ನಡೆಸುತ್ತಿರೋದು ಬೆಳಕಿಗೆ ಬಂದಿದೆ. ಅಧಿಕಾರಿಗಳು 8 ತಿಂಗಳ ಗಂಡು ಮಗುವನ್ನು ರಕ್ಷಿಸಿದ್ದು, ಶಿಶು ಕೇಂದ್ರಕ್ಕೆ ಅದನ್ನು ರವಾನಿಸಿದ್ದಾರೆ. ಮಕ್ಕಳ ರಕ್ಷಣಾ ಕಲ್ಯಾಣ ಸಮಿತಿಯಿಂದ ಬಲಿ ಪೂಜೆ‌ ಆರೋಪದ ಬಗ್ಗೆ ತನಿಖೆ ನಡೆಯುತ್ತಿದ್ದು, ಸೂಲಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ವಿವಾಹಿತ ಮಹಿಳೆ ಜತೆ ಯುವಕನ ಲವ್, ಮದುವೆಯಾಗಲು ಒಪ್ಪದ್ದಕ್ಕೆ ನಡುರಸ್ತೆಯಲ್ಲೇ ಕೊಲೆ ಮಾಡಿ ಪರಾರಿ

8 ತಿಂಗಳ ಹಿಂದೆ ಕೂಲಿ ಕಾರ್ಮಿಕರಿಂದ ಸೈಯದ್ ಇಮ್ರಾನ್ ಮಗುವನ್ನ ದತ್ತು ಪಡೆದುಕೊಂಡಿದ್ದರು. ದತ್ತು ನಂತರ ತಮ್ಮ ಹೆಸರಿನಲ್ಲೆ ನಕಲಿ ಜನನ ಪ್ರಮಾಣ ಪತ್ರವನ್ನು ಸೈಯದ್ ಇಮ್ರಾನ್ ಮತ್ತು ಆತನ ಪತ್ನಿ ಮಾಡಿಸಿಕೊಂಡಿದ್ದರು. ಮಗು ದತ್ತು ಪಡೆದು ಅಗ್ರಿಮೆಂಟ್ ಸಹ ಮಾಡಿಕೊಂಡಿರುವುದಾಗಿ ದಾಳಿ ವೇಳೆ ದಂಪತಿ ಅಧಿಕಾರಿಗಳಿಗೆ ಪತ್ರ ನೀಡಿದ್ದಾರೆ. ಆದ್ರೆ ಕಾನೂನುಬದ್ದವಾಗಿ  ದತ್ತು ಪಡೆದಿಲ್ಲ ಎಂದು ಮಗುವನ್ನ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Exit mobile version