IND vs NZ: ಏಕದಿನ ಸರಣಿಗೆ ಭಾರತ ತಂಡ ಪ್ರಕಟ; ಮೂವರಿಗೆ ಅನ್ಯಾಯ, ಒಬ್ಬರ ವೃತ್ತಿಜೀವನ ಅಂತ್ಯ – Kannada News | India Squad for NZ ODIs: Gaikwad Dropped, Iyer Returns Amidst Controversial Selections

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾವನ್ನು ಘೋಷಿಸಲಾಗಿದೆ. ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಸರಣಿ ಆಡಿದ್ದ ತಂಡದಲ್ಲಿದ್ದ ಆಟಗಾರರಿಗೆ ಈ ಸರಣಿಯಲ್ಲಿ ಆಡಲು ಅವಕಾಶ ನೀಡಲಾಗಿದೆ. ಆದಾಗ್ಯೂ ತಂಡದಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದ್ದು, ಕೆಲವರಿಗೆ ಅವಕಾಶ ನೀಡುವ ಸಲುವಾಗಿ ಕೆಲವರಿಗೆ ತಂಡದಿಂದ ಗೇಟ್​ಪಾಸ್ ನೀಡಲಾಗಿದೆ.

Source link

ಕರ್ನಾಟಕ ಗೂಂಡಾ ರಾಜ್ಯವಾಗುತ್ತಿದೆ, ರಾಜ್ಯಪಾಲರ ಮಧ್ಯಪ್ರವೇಶವಾಗಲಿ; ಬಿಜೆಪಿ ನಾಯಕ ರವಿಕುಮಾರ್ ಆಗ್ರಹ – Kannada News | Karnataka BJP Leader N Ravikumar expressed angry on Bellary Banner Riots

ಬೆಂಗಳೂರು, ಜನವರಿ 3: ಬಳ್ಳಾರಿಯಲ್ಲಿ ನಡೆದ ಬ್ಯಾನರ್ ಗಲಭೆಯ (Bellary Riots) ವಿರುದ್ಧ ಬಿಜೆಪಿ ನಾಯಕ ಎನ್​. ರವಿಕುಮಾರ್ (N Ravikumar) ಆಕ್ರೋಶ ಹೊರಹಾಕಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಗೂಂಡಾ ರಾಜ್ಯ ಆಗುತ್ತಿದೆ. ರಾಜ್ಯಪಾಲರು ಕೂಡಲೇ ಮಧ್ಯಪ್ರವೇಶ ಮಾಡಬೇಕು. ನಾವು ಸಿಬಿಐ ತನಿಖೆಗೆ ಆಗ್ರಹಿಸುತ್ತೇವೆ. ಸಿಬಿಐಗೆ ಕೊಡಲು ಆಗದಿದ್ದರೆ ಹಾಲಿ ನ್ಯಾಯಾಧೀಶರ ನೇತೃತ್ವದ ತನಿಖೆ ನಡೆಸಲಿ ಎಂದು ಬೆಂಗಳೂರಿನಲ್ಲಿ ವಿಧಾನ ಪರಿಷತ್ ವಿಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಹೇಳಿಕೆ ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯನವರು ಕೋಗಿಲು ಲೇಔಟ್​ ಧ್ವಂಸ ಕಾರ್ಯಾಚರಣೆಯಲ್ಲಿ ಮನೆ ಕಳೆದುಕೊಂಡವರಿಗೆ ಮನೆ ಕೊಡುತ್ತೇವೆ ಎಂದು ಹೇಳುತ್ತಾರೆ. ಈಗಾಗಲೇ ಅರ್ಜಿ ಹಾಕಿರುವವರಿಗೆ ಮನೆಯೇ ಕೊಟ್ಟಿಲ್ಲ. ತುಂಬಾ ಅನುಭವಿ ಸಿಎಂ ನೀವು. ದೇವರಾಜ ಅರಸು ಅವರ ದಾಖಲೆ ಮುರಿಯಲು ಹೊರಟಿದ್ದೀರಿ ಎಂದು ಎನ್. ರವಿಕುಮಾರ್ ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಬಳ್ಳಾರಿ ಗಲಭೆ: ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್

ಇವಿಎಂ ಕುರಿತ ಸಮೀಕ್ಷೆ ಸರ್ಕಾರದ ವೆಬ್‌ಸೈಟ್‌ನಿಂದ ಡಿಲೀಟ್ ಆಗಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಕರ್ನಾಟಕದಲ್ಲಿ 5 ಸಾವಿರಕ್ಕೂ ಹೆಚ್ಚು ಜನರನ್ನು ಮಾತಾಡಿಸಿ ಸಮೀಕ್ಷೆ ಮಾಡಲಾಗಿತ್ತು. ಶೇ. 84ರಷ್ಟು ಜನ ಇವಿಎಂ ಪರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಆದರೆ, ಈ ವರದಿ ಕಾಂಗ್ರೆಸ್ ಪಕ್ಷಕ್ಕೆ ಭಾರೀ ಮುಖಭಂಗ ಉಂಟುಮಾಡಿದೆ. ಹೀಗಾಗಿ, ಈಗ ಸಮೀಕ್ಷೆಯನ್ನೇ ಸರ್ಕಾರ ಡಿಲೀಟ್ ಮಾಡಿದೆ ಎಂದು ಟೀಕಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ – Kannada News | Here is the detail about legendary actor Vajramuni

ವಜ್ರಮುನಿ (Vajramuni) ಅವರು ಕನ್ನಡ ಚಿತ್ರರಂಗದ ಲಿಜೆಂಡರಿ ನಟ. ನೂರಾರು ಸಿನಿಮಾಗಳಲ್ಲಿ ಖಳನಟನಾಗಿ ಅಬ್ಬರಿಸಿದ್ದಾರೆ. ಕನ್ನಡ ಚಿತ್ರರಂಗಕ್ಕೆ ಹಲವಾರು ಅದ್ಭುತ ಸಿನಿಮಾಗಳನ್ನು, ಪಾತ್ರಗಳನ್ನು ನೀಡಿದ್ದಾರೆ. ವಜ್ರಮುನಿ ಅವರು ನಿಧನರಾಗಿ 20 ವರ್ಷಗಳಾಗಿವೆ. ಹಲವು ಸಿನಿಮಾಗಳಲ್ಲಿ ಅಬ್ಬರಿಸಿರುವ ವಜ್ರಮುನಿ ಅವರು ಕೊನೆಯ ದಿನಗಳು ಬಹಳ ಕಷ್ಟಕರವಾಗಿತ್ತು, ಕರುಣಾಜನಕವಾಗಿತ್ತು. ವಜ್ರಮುನಿ ಅವರ ವೈಯಕ್ತಿಕ ಜೀವನ ಹೇಗಿತ್ತು? ಅವರ ಜೀವನದ ಕೊನೆಯ ದಿನಗಳು ಹೇಗಿದ್ದವು? ಮಾಹಿತಿ ಇಲ್ಲಿ ತಿಳಿಯಿರಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Source link

Wolf Moon: ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್ – Kannada News | Wolf Moon 2026 First supermoon of the year witnessed in Guwahati

ಗುವಾಹಟಿ, ಜನವರಿ 3: ವುಲ್ಫ್ ಮೂನ್ (Wolf Moon) ಎಂದು ಕರೆಯಲ್ಪಡುವ 2026ರ ಮೊದಲ ಸೂಪರ್ ಮೂನ್ ಇಂದು ಭಾರತದ ಕೋಲ್ಕತ್ತಾ ಮತ್ತು ಲಕ್ನೋ, ಗುವಾಹಟಿ ಸೇರಿದಂತೆ ಹಲವಾರು ನಗರಗಳಲ್ಲಿ ಕಂಡುಬಂದಿತು. ಗುವಾಹಟಿಯ (Guwahati) ಆಕಾಶದಲ್ಲಿ ಕಂಡುಬಂದ ಸೂಪರ್ ಮೂನ್ ವಿಡಿಯೋ ಇಲ್ಲಿದೆ. ಈ ವೇಳೆ ಚಂದ್ರನು ಸರಾಸರಿ ಹುಣ್ಣಿಮೆಗಿಂತ ಶೇ. 30ರಷ್ಟು ಹೆಚ್ಚು ಪ್ರಕಾಶಮಾನವಾಗಿ ಕಾಣಿಸಿಕೊಂಡಿದ್ದನು. ಸೂರ್ಯಾಸ್ತದ ನಂತರ ಸ್ವಲ್ಪ ಸಮಯದ ನಂತರ ಈ ದೃಶ್ಯವು ಗೋಚರಿಸಿದೆ.

ಇದು ವುಲ್ಫ್ ಮೂನ್. 2026ರ ವರ್ಷದ ಮೊದಲ ಹುಣ್ಣಿಮೆ. ಖಗೋಳಶಾಸ್ತ್ರಜ್ಞರು ಇದನ್ನು ಸೂಪರ್‌ ಮೂನ್ ಎಂದು ಕರೆಯುತ್ತಾರೆ. ಏಕೆಂದರೆ ಚಂದ್ರನು ಸಾಮಾನ್ಯಕ್ಕಿಂತ ಭೂಮಿಗೆ ಹತ್ತಿರದಲ್ಲಿರುತ್ತಾನೆ. ಇದು ಸಂಭವಿಸಿದಾಗ ಚಂದ್ರನು ಸಾಮಾನ್ಯ ಹುಣ್ಣಿಮೆಗಿಂತ ಶೇ. 30ರಷ್ಟು ಪ್ರಕಾಶಮಾನವಾಗಿ ಕಾಣಿಸಿಕೊಳ್ಳುತ್ತಾನೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪ್ರತ್ಯೇಕ ಘಟನೆ: 3 ಅಪ್ರಾಪ್ತ ಬಾಲಕರಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ಅಪ್ರಾಪ್ತ ಬಾಲಕಿಗೆ ಕಿರುಕುಳ – Kannada News | Hubballi: Three Minor Boys Assault Minor Girl; Minor girl molested by minor boys

ಹುಬ್ಬಳ್ಳಿ, ಜನವರಿ 03: ನಗರದಲ್ಲಿ ಕಳೆದ ವರ್ಷ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ (Assaulted) ಮತ್ತು ಕೊಲೆ ಘಟನೆ ನಂತರ ನಡೆದ ಎನಕೌಂಟರ್ ದೇಶದಲ್ಲಿ ದೊಡ್ಡ ಸುದ್ದಿಯಾಗಿತ್ತು. ಇದೀಗ ಇದೇ ಹುಬ್ಬಳ್ಳಿಯಲ್ಲಿ (hubballi) ಮತ್ತೆ ಅಪ್ರಾಪ್ತ ಬಾಲಕಿ ಮೇಲೆ ಮೂವರು ಅಪ್ರಾಪ್ತ ಬಾಲಕರು ಅತ್ಯಾಚಾರ ಮಾಡಿದ್ದಾರೆ. ಅಷ್ಟೇ ಅಲ್ಲಾ ವಿಡಿಯೋ ಕೂಡ ಮಾಡಿಟ್ಟಿಕೊಂಡು ತಮ್ಮ ವಿಕೃತಿ ಮೆರದಿದ್ದಾರೆ. ಇನ್ನೊಂದೆಡೆ ಶಾಲಾ ಬಾಲಕಿಗೆ ಅಪ್ರಾಪ್ತರು ಕಿರುಕುಳ ನೀಡಿ ಹಲ್ಲೆ ಮಾಡಿದ ಘಟನೆ ಕೂಡ ನಡೆದಿದೆ. ಎರಡು ಪ್ರತ್ಯೇಕ ಪ್ರಕರಣಗಳ ಆರೋಪಿಗಳೆಲ್ಲಾ ಅಪ್ರಾಪ್ತರೇ ಆಗಿದ್ದು, ಹುಬ್ಬಳ್ಳಿ ಜನರನ್ನು ಬೆಚ್ಚಿಬೀಳಿಸಿದೆ.

ನಡೆದದ್ದೇನು?

ಹೌದು ಕಳೆದ ವರ್ಷವಷ್ಟೇ ಹುಬ್ಬಳ್ಳಿಯಲ್ಲಿ ಐದು ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಬಿಹಾರ್ ಮೂಲದ ವ್ಯಕ್ತಿ ಅತ್ಯಾಚಾರ ನಡೆಸಿ ಕೊಲೆ ಮಾಡಿದ್ದ. ನಂತರ ಆರೋಪಿಯನ್ನು ಎನಕೌಂಟರ್ ಮಾಡಲಾಗಿತ್ತು. ಈ ಪ್ರಕರಣದಿಂದ ಹುಬ್ಬಳ್ಳಿ ಮಾತ್ರವಲ್ಲ, ಇಡೀ ರಾಜ್ಯದ ಜನರು ಬೆಚ್ಚಿಬಿದ್ದಿದ್ದರು. ಆದರೆ ಇದೀಗ ಮತ್ತೆ ಹುಬ್ಬಳ್ಳಿಯ ಜನರು ಬೆಚ್ಚಿಬಿದ್ದಿದ್ದಾರೆ. ಯಾಕಂದ್ರೆ ಏಳನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿ ಮೇಲೆ ಮೂವರು ಅಪ್ರಾಪ್ತ ಬಾಲಕರು ಅತ್ಯಾಚಾರ ಮಾಡಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿ ಮರ್ಯಾದೆ ಹತ್ಯೆ: ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ

ಹುಬ್ಬಳ್ಳಿ ನಗರದ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂತಹದೊಂದು ಘಟನೆ ನಡೆದಿದೆ. ಒಂದೇ ಏರಿಯಾದಲ್ಲಿ ವಾಸವಾಗಿರುವ ಬಾಲಕಿ ಮತ್ತು ಮೂವರು ಅಪ್ರಾಪ್ತ ಬಾಲಕರು ಪರಿಚಿತರೇ. ಓರ್ವ ಬಾಲಕನ ಮನೆಯಲ್ಲಿ ಯಾರು ಇಲ್ಲದೇ ಇದ್ದಾಗ, ಬಾಲಕಿಯನ್ನು ಕರೆದುಕೊಂಡು ಹೋಗಿ ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದ. ನಂತರ ಅದನ್ನ ವಿಡಿಯೋ ಮಾಡಿಟ್ಟುಕೊಂಡಿದ್ದ. ಆತ ತನ್ನ ಇನ್ನೊಬ್ಬ ಸ್ನೇಹಿತನಿಗೆ ಹೇಳಿದ್ದ. ಆತ ಮಾರನೇ ದಿನ ಬಾಲಕಿಯನ್ನು ಕರೆದುಕೊಂಡು ಹೋಗಿ ಬೆದರಿಕೆ ಹಾಕಿ ಅತ್ಯಾಚಾರ ಮಾಡಿದ್ದಾನೆ. ಜೊತೆಗೆ ತನ್ನ ಮತ್ತೊಬ್ಬ ಸ್ನೇಹಿತನಿಗೆ ಹೇಳಿದ್ದಾನೆ. ಆತ ಕೂಡ ಬಾಲಕಿಗೆ ಬೆದರಿಕೆ ಹಾಕಿ ಮತ್ತೊಂದು ದಿನ ಬಾಲಕಿಯನ್ನು ಕರೆದುಕೊಂಡು ಹೋಗಿ ಅಚ್ಯಾಚಾರ ಮಾಡಿದ್ದಾನೆ.

ಮೂವರು ದುರುಳರು ವಿಡಿಯೋ ಇಟ್ಟುಕೊಂಡು ಬಾಲಕಿಗೆ ಹೆದರಿಸಿದ್ದಾರೆ. ಹೀಗಾಗಿ ಬಾಲಕಿ, ತನ್ನ ಮೇಲೆ ಅತ್ಯಾಚಾರ ನಡೆದ್ರು ಮನೆಯವರಿಗೆ ಈ ಬಗ್ಗೆ ಹೇಳಿರಲಿಲ್ಲ. ಆದರೆ ನಿನ್ನೆ ಬಾಲಕಿಗೆ ಹೊಟ್ಟೆ ನೋವು ಸೇರಿದಂತೆ ಕೆಲ ಭಾಗಗಳಲ್ಲಿ ನೋವು ಕಾಣಿಸಿಕೊಂಡಾಗ, ತಾಯಿ ವಿಚಾರಿಸಿದಾಗ ಬಾಲಕಿ ತನ್ನ ಮೇಲೆ ನಡೆದಿರೋ ಅತ್ಯಾಚಾರ ಬಗ್ಗೆ ಹೇಳಿದ್ದಾಳೆ. ಈ ಹಿನ್ನೆಲೆಯಲ್ಲಿ ಇಂದು ಬಾಲಕಿ ಮತ್ತು ಬಾಲಕಿಯ ತಾಯಿ ಶಹರ ಠಾಣೆಗೆ ಆಗಮಿಸಿ ದೂರು ನೀಡಿದ್ದಾರೆ. ಇನ್ನು ಮೂವರು ಆರೋಪಿಗಳು ಕೂಡ ಹದಿನಾಲ್ಕರಿಂದ ಹದಿನೈದು ವರ್ಷದವರಾಗಿದ್ದು, ಒಂಬತ್ತನೇ ತರಗತಿಯಲ್ಲಿ ಓದುತ್ತಿದ್ದಾರಂತೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಶಹರ ಠಾಣೆಯ ಪೊಲೀಸರು ಮೂವರು ಅಪ್ರಾಪ್ತ ಬಾಲಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇನ್ನು ಬಾಲಕಿಗೆ ವೈದ್ಯಕೀಯ ಪರೀಕ್ಷೆ ನಡೆಸಿದ್ದು, ಬಾಲಕಿ ಗುಣಮುಖಳಾಗಿದ್ದಾಳೆ.

ಅಪ್ರಾಪ್ತ ಬಾಲಕಿ ಚುಡಾಯಿಸಿದ ವಿದ್ಯಾರ್ಥಿಗಳು 

ಒಂದಡೇ ಮೂವರು ಅಪ್ರಾಪ್ತ ಬಾಲಕರು, ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ ಪ್ರಕರಣ ಇಂದು ಶಹರ ಠಾಣೆಯಲ್ಲಿ ದಾಖಲಾಗಿದ್ದರೆ, ಇಂದು ಹುಬ್ಬಳ್ಳಿ ನಗರದ ಅಶೋಕ ನಗರ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ. ನಗರದ ಖಾಸಗಿ ಶಾಲೆಯಲ್ಲಿ ಏಳನೇ ತರಗತಿ ಓದುತ್ತಿರುವ ವಿದ್ಯಾರ್ಥಿನಿ ನಿನ್ನೆ ಶಾಲಾ ವಾರ್ಷಿಕೋತ್ಸವ ಮುಗಿಸಿಕೊಂಡು ಮನೆಗೆ ಹೋಗುವಾಗ, ಅದೇ ಶಾಲೆಯ ಒಂಬತ್ತನೇ ತರಗತಿಯ ಇಬ್ಬರು ವಿದ್ಯಾರ್ಥಿಗಳು ಚುಡಾಯಿಸಿದ್ದಾರೆ. ಈ ಬಗ್ಗೆ ಕೇಳಿದ್ದಕ್ಕೆ ಬಾಲಕಿಗೆ ಕಪಾಳಕ್ಕೆ ಹೊಡೆದಿದ್ದರಂತೆ. ಹೀಗಾಗಿ ಬಾಲಕಿ ತನ್ನ ಹೆತ್ತವರನ್ನು ಕರೆಸಿದ್ದಾಳೆ.

ಬಾಲಕಿ ಹೆತ್ತವರು ಹಲ್ಲೆ ಮಾಡಿದ ಬಾಲಕರಿಗೆ ಬುದ್ದಿ ಹೇಳಿದ್ದರಂತೆ. ಇದರಿಂದ ಕುಪಿತಗೊಂಡ ಇಬ್ಬರು ಬಾಲಕರು, ತಮ್ಮ ಏರಿಯಾದಲ್ಲಿರುವ ಇಬ್ಬರು ಪುಡಿ ರೌಡಿಗಳನ್ನು ಕರೆದುಕೊಂಡು ಬಂದು ಬಾಲಕಿ ಮತ್ತು ಬಾಲಕಿಯ ತಂದೆ ಮೇಲೆ ಹಲ್ಲೆ ಮಾಡಿಸಿದ್ದಾರಂತೆ. ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತ ಬಾಲಕರು ಸೇರಿ ನಾಲ್ವರ ವಿರುದ್ದ ಅಶೋಕ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ನಾಲ್ವರನ್ನು ಕೂಡ ವಶಕ್ಕೆ ಪಡೆದಿದ್ದಾರೆ.

ಪೊಲೀಸ ಆಯುಕ್ತ ಎನ್ ಶಶಿಕುಮಾರ್ ಹೇಳಿದ್ದಿಷ್ಟು

ಈ ಎರಡು ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರೋ ಹುಬ್ಬಳ್ಳಿ ಧಾರವಾಡ ನಗರ ಪೊಲೀಸ ಆಯುಕ್ತ ಎನ್ ಶಶಿಕುಮಾರ್, ಪಾಲಕರು ಮಕ್ಕಳ‌ ಬಗ್ಗೆ ಜಾಗೃತಿ ವಹಿಸಬೇಕು. ತಾವು ಮನೆಯಲ್ಲಿ ಇಲ್ಲದೇ ಇದ್ದಾಗ ಮಕ್ಕಳು ಏನು ಮಾಡ್ತಾರೆ ಅನ್ನೋ ಬಗ್ಗೆ ಹೆಚ್ಚು ಗಮನಹರಿಸಬೇಕು ಅಂತ ಹೇಳಿದ್ದಾರೆ.

ಇದನ್ನೂ ಓದಿ: ಯಲ್ಲಾಪುರ: ವಿವಾಹಿತ ಮಹಿಳೆ ಜತೆ ಯುವಕನ ಲವ್, ಮದುವೆಯಾಗಲು ಒಪ್ಪದ್ದಕ್ಕೆ ನಡುರಸ್ತೆಯಲ್ಲೇ ಕೊಲೆ ಮಾಡಿ ಪರಾರಿ

ಅಪ್ರಾಪ್ತರೇ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದು ನಂತರ ವಿಡಿಯೋ ಮಾಡಿಟ್ಟುಕೊಂಡಿದ್ದ ಪ್ರಕರಣ, ಮತ್ತೊಂದೆಡೆ ಅಪ್ರಾಪ್ತ ಬಾಲಕಿಗೆ ಅಪ್ರಾಪ್ತ ಬಾಲಕರೇ ಕಿರುಕುಳ ನೀಡಿ ಹಲ್ಲೆ ಮಾಡಿದ್ದ ಘಟನೆಯಿಂದ ಹುಬ್ಬಳ್ಳಿ ಜನರು ಶಾಕ್ ಆಗಿದ್ದಾರೆ. ಈ ನಿಟ್ಟಿನಲ್ಲಿ ಹೆತ್ತವರು ತಮ್ಮ ಮಕ್ಕಳ ಚಲನವಲನಗಳ ಬಗ್ಗೆ ಗಮನಹರಿಸಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಮುಸ್ತಾಫಿಜುರ್ ಐಪಿಎಲ್​ನಿಂದ ಔಟ್; ಭಾರತದಲ್ಲಿ ಟಿ20 ವಿಶ್ವಕಪ್ ಆಡುವುದಿಲ್ಲ ಎಂದ ಬಾಂಗ್ಲಾ – Kannada News | Mustafizur IPL 2026 Exclusion: Bangladesh Threatens T20 World Cup Boycott in India

ಬಾಂಗ್ಲಾದೇಶದ ಎಡಗೈ ವೇಗಿ ಮುಸ್ತಾಫಿಜುರ್ ರೆಹಮಾನ್ ಅವರನ್ನು ಐಪಿಎಲ್ 2026 ರಿಂದ ಹೊರಗಿಟ್ಟಿರುವುದು ಈಗ ದೊಡ್ಡ ಕೋಲಾಹಲಕ್ಕೆ ಕಾರಣವಾಗಿದೆ. ಮುಸ್ತಾಫಿಜುರ್ ಅವರನ್ನು ಐಪಿಎಲ್​ನಿಂದ ಹೊರಗಿಟ್ಟ ನಂತರ, ಭಾರತ ಮತ್ತು ಬಾಂಗ್ಲಾದೇಶ ನಡುವಿನ ದ್ವಿಪಕ್ಷೀಯ ಸರಣಿಯನ್ನು ರದ್ದುಗೊಳಿಸಬಹುದು ಎಂಬ ಸುದ್ದಿ ಹರಿದಾಡುತ್ತಿದೆ. ಇದೆಲ್ಲದರ ನಡುವೆ ಈ ವರ್ಷ ಭಾರತದಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ನಲ್ಲಿ ಪಾಲ್ಗೊಳ್ಳಲು ಬಾಂಗ್ಲಾದೇಶ ತಂಡ ಭಾರತಕ್ಕೆ ಪ್ರಯಾಣಿಸದಿರಲು ನಿರ್ಧರಿಸಿದ್ದು, ಈ ವಿಚಾರವನ್ನು ಐಸಿಸಿಗೆ ಮುಟ್ಟಿಸುವುದಾಗಿ ಬಿಸಿಬಿ ಮುಖ್ಯಸ್ಥ ಅಮೀನುಲ್ ಇಸ್ಲಾಂ ಬುಲ್ಬುಲ್ ಹೇಳಿಕೆ ನೀಡಿದ್ದಾರೆ.

ಭಾರತಕ್ಕೆ ಬರುವುದಿಲ್ಲ ಬಾಂಗ್ಲಾ ತಂಡ?

ಮುಸ್ತಾಫಿಜುರ್ ರೆಹಮಾನ್ ಅವರನ್ನು ಐಪಿಎಲ್​ನಿಂದ ಕೈಬಿಟ್ಟ ನಂತರ ಮಾಧ್ಯಮಗಳಿಗೆ ಮಾತನಾಡಿರುವ ಬಿಸಿಬಿ ಮುಖ್ಯಸ್ಥ ಅಮೀನುಲ್ ಇಸ್ಲಾಂ ಬುಲ್ಬುಲ್, ಟಿ20 ವಿಶ್ವಕಪ್ ಬಗ್ಗೆ ಐಸಿಸಿ ಜೊತೆ ಚರ್ಚಿಸುವುದಾಗಿ ಹೇಳಿದ್ದಾರೆ. ‘ಐಸಿಸಿ ಟಿ20 ವಿಶ್ವಕಪ್ ಆಯೋಜಿಸುತ್ತದೆ ಮತ್ತು ಭಾರತ ಅದರ ಆತಿಥೇಯವಾಗಿದೆ. ನಾವು ಏನಾದರೂ ಚರ್ಚಿಸಬೇಕಾದರೆ, ನಾವು ಐಸಿಸಿ ಜೊತೆ ಚರ್ಚಿಸುತ್ತೇವೆ’ ಎಂದಿದ್ದಾರೆ. ಬಾಂಗ್ಲಾದೇಶದ ಮಾಜಿ ಕ್ರೀಡಾ ಸಚಿವಾಲಯದ ಸಲಹೆಗಾರ ಆಸಿಫ್ ಮಹಮೂದ್ ಕೂಡ ಮುಸ್ತಾಫಿಜುರ್ ರೆಹಮಾನ್ ಅವರನ್ನು ಐಪಿಎಲ್​ನಿಂದ ಹೊರಗಿಟ್ಟಿರುವ ಬಗ್ಗೆ ಹೇಳಿಕೆ ನೀಡಿದ್ದು, ‘ಭಾರತ ಐಸಿಸಿ ಕಾರ್ಯಕ್ರಮವನ್ನು ಆಯೋಜಿಸಲು ಸಂಪೂರ್ಣವಾಗಿ ಅನರ್ಹ. ಇಂತಹ ಧರ್ಮಾಂಧ ದೇಶವು ಎಂದಿಗೂ ಅಂತರರಾಷ್ಟ್ರೀಯ ಕ್ರೀಡಾಕೂಟವನ್ನು ಆಯೋಜಿಸಬಾರದು. ಬಿಸಿಸಿಐ ವಿರುದ್ಧ ಹೋರಾಡಲು ಬಿಸಿಸಿಬಿ ಸರ್ಕಾರ ಮತ್ತು ಇತರ ಕ್ರಿಕೆಟ್ ಮಂಡಳಿಗಳೊಂದಿಗೆ ತೊಡಗಿಸಿಕೊಳ್ಳಬೇಕು. ಭಾರತವನ್ನು ಅಂತರರಾಷ್ಟ್ರೀಯ ಕ್ರೀಡಾಕೂಟಗಳಿಗೆ ಅನರ್ಹವೆಂದು ಘೋಷಿಸಬೇಕು’ ಎಂದು ಆಸಿಫ್ ಮಹಮೂದ್ ಹೇಳಿದ್ದಾರೆ.

ಐಪಿಎಲ್​ನಿಂದ ಮುಸ್ತಾಫಿಜುರ್ ಔಟ್

ವಾಸ್ತವವಾಗಿ 2026 ರ ಐಪಿಎಲ್ ಹರಾಜಿನಲ್ಲಿ ಮುಸ್ತಾಫಿಜುರ್ ರೆಹಮಾನ್ ಅವರನ್ನು ಕೆಕೆಆರ್ 9.2 ಕೋಟಿಗೆ ಖರೀದಿಸಿತ್ತು. ಆದರೆ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯವನ್ನು ಖಂಡಿಸಿ, ಕೆಕೆಆರ್ ಫ್ರಾಂಚೈಸಿ ವಿರುದ್ಧ ಭಾರತೀಯರು ಆಕ್ರೋಶ ಹೊರಹಾಕುತ್ತಿದ್ದರು. ಮುಸ್ತಾಫಿಜುರ್ ರೆಹಮಾನ್ ಅವರನ್ನು ಐಪಿಎಲ್​ನಿಂದ ಹೊರಹಾಕಬೇಕು, ಇಲ್ಲದಿದ್ದರೆ ಐಪಿಎಲ್ ನಡೆಯಲು ಬಿಡುವುದಿಲ್ಲ ಎಂಬ ಕೂಗು ಜೋರಾಗಿ ಕೇಳಿಬಂದಿತ್ತು. ಅಂತಿಮವಾಗಿ ಬಿಸಿಸಿಐ, ಮುಸ್ತಾಫಿಜುರ್ ರೆಹಮಾನ್ ಅವರನ್ನು ತಂಡದಿಂದ ಕೈಬಿಡುವಂತೆ ಕೆಕೆಆರ್​ಗೆ ಆದೇಶಿಸಿತ್ತು. ಆ ಪ್ರಕಾರ, ಮುಸ್ತಾಫಿಜುರ್ ರೆಹಮಾನ್ ಅವರನ್ನು ಐಪಿಎಲ್​ನಿಂದ ಹೊರಹಾಕಲಾಗಿದೆ. ಇದರಿಂದ ಕೆರಳಿರುವ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ನಮ್ಮ ತಂಡ ಭಾರತದಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ನಲ್ಲಿ ಪಾಲ್ಗೊಳ್ಳಲು ಭಾರತಕ್ಕೆ ಪ್ರಯಾಣಿಸುವ ಬಗ್ಗೆ ಐಸಿಸಿ ಬಳಿ ಮಾತನಾಡಿ ತೀರ್ಮಾನ ತೆಗೆದುಕೊಳ್ಳುವುದಾಗಿ ಹೇಳಿಕೊಂಡಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಜನ ನಾಯಗನ್’ ಟ್ರೈಲರ್ ಬಿಡುಗಡೆ: ರೀಮೇಕಾ? ಸ್ವಮೇಕಾ? – Kannada News | Thalapathy Vijay starrer Jana Nayagan movie trailer released

ತಮಿಳಿನ ಸೂಪರ್ ಸ್ಟಾರ ನಟ ದಳಪತಿ ವಿಜಯ್ (Thalapathy Vijay) ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದು, ‘ಜನ ನಾಯಗನ್’ ತಮ್ಮ ಕೊನೆಯ ಸಿನಿಮಾ ಎಂದು ಈಗಾಗಲೇ ಘೋಷಿಸಿದ್ದಾರೆ. ಇದೇ ಕಾರಣಕ್ಕೆ ‘ಜನ ನಾಯಗನ್’ ಸಿನಿಮಾ ಬಗ್ಗೆ ಭಾರಿ ನಿರೀಕ್ಷೆ ಇದೆ. ಸಿನಿಮಾವನ್ನು ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಾಣ ಮಾಡಿದ್ದು, ಸಿನಿಮಾದ ಟ್ರೈಲರ್ ಇಂದು (ಜನವರಿ 03) ಬಿಡುಗಡೆ ಆಗಿದೆ. ‘ಜನ ನಾಯಗನ್’ ಸಿನಿಮಾ ತೆಲುಗು ಸಿನಿಮಾ ಒಂದರ ರೀಮೇಕ್ ಎಂಬ ಸುದ್ದಿ ಹರಿದಾಡುತ್ತಿತ್ತು. ಇದೀಗ ಟ್ರೈಲರ್​​ನಲ್ಲಿ ಆ ಪ್ರಶ್ನೆಗೆ ಉತ್ತರ ದೊರೆತಿದೆ.

ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾ ಟ್ರೈಲರ್, ವಿಜಯ್ ಅವರ ಈ ಹಿಂದಿನ ಸಿನಿಮಾಗಳ ಟೆಂಪ್ಲೆಟ್​​ನಲ್ಲಿಯೇ ಇದೆ. ಭರಪೂರ ಆಕ್ಷನ್, ಸ್ಲೋ ಮೋಷನ್ ವಾಕ್, ಎದುರು ನಿಂತಿರುವ ಪಾತ್ರಗಳಿಗಲ್ಲದೆ, ಅಭಿಮಾನಿಗಳಿಗಾಗಿ ಡೈಲಾಗ್​​ಗಳು, ಕೆಲವು ಹಾಸ್ಯ ದೃಶ್ಯಗಳು, ನಾಯಕಿಯೊಂದಿಗಿನ ಹಾಡಿನ ತುಣುಕು, ವಿನಾಕರಾಣ ಹಿಂಸೆಗಿಳಿವ ಬಾಲಿವುಡ್​ನಿಂದ ತಂದ ವಿಲನ್ ಹೀಗೆ ಎಲ್ಲವೂ ‘ಜನ ನಾಯಗನ್’ ಸಿನಿಮಾದ ಟ್ರೈಲರ್​​ನಲ್ಲಿಯೂ ಇದೆ.

‘ಜನ ನಾಯಗನ್’ ಸಿನಿಮಾ ತೆಲುಗಿನ ‘ಭಗವಂತ ಕೇಸರಿ’ ಸಿನಿಮಾದ ರೀಮೇಕ್ ಎಂಬ ಸುದ್ದಿ ಆರಂಭದಿಂದಲೂ ಹರಿದಾಡುತ್ತಿತ್ತು, ಸಿನಿಮಾದ ನಿರ್ದೇಶಕ ಎಚ್ ವಿನೋದ್, ‘ಇದು ರಿಮೇಕ್ ಎಂದು ಹೇಳಲಾಗದು, ಸಿನಿಮಾ ಬಿಡುಗಡೆ ಆದ ಮೇಲೆ ನಿಮಗೇ ಗೊತ್ತಾಗುತ್ತದೆ’ ಎಂದು ಅಡ್ಡ ಗೋಡೆ ಮೇಲೆ ದೀಪವಿಟ್ಟಿದ್ದರು. ಇದೀಗ ಟ್ರೈಲರ್ ನೋಡಿದವರಿಗೆ ಇದು ‘ಭಗವಂತ ಕೇಸರಿ’ ಸಿನಿಮಾದ್ದೇ ರೀಮೇಕ್ ಎಂಬುದು ಖಾತ್ರಿ ಆಗಿದೆ.

‘ಭಗವಂತ ಕೇಸರಿ’ ಸಿನಿಮಾನಲ್ಲಿ ಬಾಲಕೃಷ್ಣ ತಮ್ಮ ಸಾಕುಮಗಳನ್ನು ಸೈನ್ಯಕ್ಕೆ ಸೇರಿಸುವ ಪ್ರಯತ್ನದಲ್ಲಿರುತ್ತಾರೆ, ಅದಕ್ಕೆ ಕಾರಣವೂ ಇರುತ್ತದೆ. ‘ಜನ ನಾಯಗನ್’ ಸಿನಿಮಾನಲ್ಲಿಯೂ ಸಹ ವಿಜಯ್ ತಮ್ಮ ಮಗಳನ್ನು ಸೈನ್ಯಕ್ಕೆ ಸೇರಿಸುವ ಪ್ರಯತ್ನದಲ್ಲಿದ್ದಾರೆ. ತೆಲುಗಿನಲ್ಲಿ ಶ್ರೀಲೀಲಾ ನಟಿಸಿದ್ದ ಪಾತ್ರದಲ್ಲಿ ‘ಜನ ನಾಯಗನ್’ ಸಿನಿಮಾನಲ್ಲಿ ಮಮಿತಾ ಬಿಜು ನಟಿಸಿದ್ದಾರೆ. ಆದರೆ ಭಗವಂತ್ ಕೇಸರಿ ಸಿನಿಮಾನಲ್ಲಿ ಇಲ್ಲದ ರಾಜಕೀಯದ ಆಂಗಲ್ ಅನ್ನು ಎಳೆದು ತಂದಿದ್ದಾರೆ ನಿರ್ದೇಶಕ ಎಚ್ ವಿನೋದ್.

ವಿಜಯ್ ಅವರ ರಾಜಕೀಯ ಪಯಣಕ್ಕೆ ಬೇಕಾಗುವ ಸನ್ನಿವೇಶಗಳನ್ನು, ಸಂಭಾಷಣೆಗಳನ್ನು ನಿರ್ದೇಶಕ ವಿನೋದ್ ಸೃಷ್ಟಿಸಿರುವುದು ಟ್ರೈಲರ್​​ನಲ್ಲಿಯೇ ಕಾಣುತ್ತದೆ. ರಾಜಕಾರಣಿಗಳನ್ನೆಲ್ಲ ಅಪಹರಿಸಿ, ಕಟ್ಟಿ ಹಾಕಿ ಅವರನ್ನು ಹೊಡೆಯುತ್ತಾ ಬಡಿಯುತ್ತಾ ಅವರೆಲ್ಲ ಎಷ್ಟು ಭ್ರಷ್ಟರು ಎಂದು ತೆಗಳುತ್ತಾ, ಜನ ಸೇವೆ ಹೇಗೆ ಮಾಡಬೇಕೆಂದು ವಿಜಯ್ ಭಾಷಣ ಮಾಡುವ ದೃಶ್ಯವೂ ಸಹ ಟ್ರೈಲರ್​​ನಲ್ಲಿದೆ. ಇದರಿಂದಲೇ ತಿಳಿಯುತ್ತದೆ, ‘ಜನ ನಾಯಗನ್’ ಸಿನಿಮಾದ ಹಿಡನ್ ಅಜೆಂಡ.

‘ಜನ ನಾಯಗನ್’ ಸಿನಿಮಾನಲ್ಲಿ ಮಮಿತಾ ಬಿಜು ಮಗಳ ಪಾತ್ರದಲ್ಲಿ ನಟಿಸಿದ್ದಾರೆ. ಪೂಜಾ ಹೆಗ್ಡೆ ಸಿನಿಮಾದ ನಾಯಕಿ. ಪ್ರಕಾಶ್ ರೈ ಮತ್ತು ಬಾಬಿ ಡಿಯೋಲ್ ಸಿನಿಮಾದ ವಿಲನ್​​ಗಳು. ಸಿನಿಮಾನಲ್ಲಿ ಇನ್ನೂ ಕೆಲವು ಪ್ರಮುಖ ನಟ, ನಟಿಯರು ಸಹ ನಟಿಸಿದ್ದಾರೆ. ಸಿನಿಮಾ ಜನವರಿ 09 ರಂದು ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಸರ್ಕಾರದ ವಿರುದ್ಧ ಜೋಶಿ ಕಿಡಿ – Kannada News | Pralhad Joshi spraks Karnataka Government Over Ballari Violence: Accuses of Protecting MLA

ಬೆಂಗಳೂರು, ಜನವರಿ 03: ಬಳ್ಳಾರಿ ಗಲಭೆ ವಿಚಾರವಾಗಿ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಕೆಂಡಕಾರುತ್ತಿದ್ದಾರೆ. ಈ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್​​ ಜೋಶಿ ಮಾತನಾಡಿದ್ದು, ಬಳ್ಳಾರಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದನ್ನು ಬಿಟ್ಟು ಶಾಸಕ ಭರತ್ ರೆಡ್ಡಿಯನ್ನು ಕಾಪಾಡಲು ಸರ್ಕಾರ ಮುಂದಾಗಿದೆ. ಕಾಂಗ್ರೆಸ್ ಕಾರ್ಯಕರ್ತ ಸತ್ತಿರುವುದು ಪೊಲೀಸರ ಗುಂಡಿನಿಂದ ಅಲ್ಲ ಎಂಬುದು ಸ್ಪಷ್ಟವಾಗಿದೆ. ಜನಾರ್ದನ ರೆಡ್ಡಿಯನ್ನು ಕೊಲ್ಲುವ ಉದ್ದೇಶ ಇತ್ತಾ? ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಪ್ರಕರಣವನ್ನು ಸಿಬಿಐ ಅಥವಾ ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕೆಂದು ಆಗ್ರಹಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

ಆಪರೇಷನ್ ಸಿಂಧೂರ್ ವೇಳೆ ಬೀಜಿಂಗ್ ಮಧ್ಯಸ್ಥಿಕೆ; ಲಜ್ಜೆಗೆಟ್ಟು ಚೀನಾದ ಬೆಂಬಲಕ್ಕೆ ನಿಂತ ಪಾಕಿಸ್ತಾನ – Kannada News | China was in constant touch Pakistan now backs Beijings mediation claims on Operation Sindoor

ನವದೆಹಲಿ, ಜನವರಿ 3: ಪಾಕಿಸ್ತಾನದಲ್ಲಿ ಆಶ್ರಯ ಪಡೆದಿರುವ ಭಯೋತ್ಪಾದನಾ ಸಂಘಟನೆಗಳು ಇದೀ ಜಗತ್ತಿಗೆ ಆತಂಕ ತಂದೊಡ್ಡುತ್ತಿವೆ ಎಂಬುದು ಎಲ್ಲ ದೇಶಗಳಿಗೂ ತಿಳಿದಿರುವ ವಿಚಾರ. ಇದೇ ಕಾರಣದಿಂದ ಹಲವು ದೇಶಗಳು ‘ದುಷ್ಟರಿಂದ ದೂರವಿರು’ ಎಂಬ ಗಾದೆಯನ್ನು ಗಂಭೀರವಾಗಿ ಪರಿಗಣಿಸಿ ಪಾಕಿಸ್ತಾನದಿಂದ ಅಂತರ ಕಾಯ್ದುಕೊಂಡಿವೆ. ಆದರೆ, ಚೀನಾ, ನೇಪಾಳ, ಬಾಂಗ್ಲಾದೇಶದಂತಹ ಕೆಲವು ದೇಶಗಳು ಪಾಕಿಸ್ತಾನದ (Pakistan) ಜೊತೆ ಬಹಳ ಆತ್ಮೀಯ ಸಂಬಂಧ ಹೊಂದಿವೆ. ಅಮೆರಿಕ ಅತ್ತ ಪಾಕಿಸ್ತಾನದ ಕಡೆಗೂ ಮೋಹವಿಟ್ಟುಕೊಂಡು ಇತ್ತ ಮೋದಿಯನ್ನೂ ಸಂಪೂರ್ಣವಾಗಿ ಎದುರು ಹಾಕಿಕೊಳ್ಳಲಾಗದೆ ಡಬಲ್ ಗೇಮ್ ಆಡುತ್ತಿದೆ.

ಒಂದೆಡೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಾನೇ ಭಾರತ ಮತ್ತು ಪಾಕಿಸ್ತಾನದ ನಡುವಿನ ಯುದ್ಧ ನಿಲ್ಲಿಸಿದ್ದು ಎಂದು ಅವಕಾಶ ಸಿಕ್ಕಾಗಲೆಲ್ಲ ಡಂಗುರ ಸಾರಿಕೊಳ್ಳುತ್ತಲೇ ಇದ್ದಾರೆ. ಇದು ಸುಳ್ಳು ಎಂದು ಭಾರತಕ್ಕೂ ಸ್ಪಷ್ಟನೆ ನೀಡಿ ಸಾಕಾಗಿದೆ. ಇನ್ನೊಂದೆಡೆ ಇದೀಗ ಚೀನಾ ಕೂಡ ತಾನೇ ಈ ಯುದ್ಧ ನಿಲ್ಲಿಸಿದ್ದು ಎಂದು ಹೇಳುತ್ತಿದೆ. ಇದಕ್ಕೆ ಪಾಕಿಸ್ತಾನವೂ ಕೋರಸ್ ನೀಡುತ್ತಿರುವುದು ವಿಪರ್ಯಾಸ!

ಇದನ್ನೂ ಓದಿ: ಪಾಕ್-ಭಾರತ ನಡುವಿನ ಯುದ್ಧ ಕೊನೆಗೊಳಿಸಿದ್ದು ನಾವೇ, ಟ್ರಂಪ್ ಬಳಿಕ ಚೀನಾದ ಅಚ್ಚರಿಯ ಹೇಳಿಕೆ

ಮೇ 6-10ರವರೆಗೆ ಚೀನಾ ಭಾರತದೊಂದಿಗೆ ನಿಕಟ ಸಂಪರ್ಕದಲ್ಲಿತ್ತು. ಪಾಕಿಸ್ತಾನದ ಜೊತೆಗಿನ ಯುದ್ಧ ನಿಲ್ಲಿಸಲು ಚೀನಾ ಮಧ್ಯಸ್ಥಿಕೆ ವಹಿಸಿತ್ತು ಎಂದು ಆಪರೇಷನ್ ಸಿಂಧೂರ್ ದಾಳಿಯ ಕುರಿತು ಚೀನಾ ಹೇಳಿಕೆ ನೀಡಿತ್ತು. ಆ ಹೇಳಿಕೆಗೆ ಪಾಕಿಸ್ತಾನ ಬೆಂಬಲ ನೀಡಿದೆ.

ಪಾಕಿಸ್ತಾನದ ವಿದೇಶಾಂಗ ಕಚೇರಿಯ ವಕ್ತಾರ ತಾಹಿರ್ ಅಂದ್ರಾಬಿ, “ಮೇ 6ರಿಂದ ಮೇ 10ರವರೆಗಿನ ಆ 3-4 ದಿನಗಳಲ್ಲಿ ಚೀನಾದ ನಾಯಕರು ಪಾಕಿಸ್ತಾನದ ನಾಯಕರೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದರು ಮತ್ತು ಭಾರತೀಯ ನಾಯಕರೊಂದಿಗೂ ಸಂಪರ್ಕ ಹೊಂದಿದ್ದರು” ಎಂದು ಹೇಳಿದ್ದಾರೆ. ಈ ರಾಜತಾಂತ್ರಿಕ ಸಂಪರ್ಕಗಳು ಫಲಪ್ರದವಾಗಿತ್ತು. ನಮ್ಮೆರಡು ದೇಶಗಳಲ್ಲಿ ಶಾಂತಿ ಮತ್ತು ಭದ್ರತೆಯನ್ನು ತರಲು ಚೀನಾದ ಈ ರಾಜತಾಂತ್ರಿಕತೆ ಸಹಾಯ ಮಾಡಿತು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಅಲ್ಪಸಂಖ್ಯಾತರ ಮೇಲಿನ ದಾಳಿ ಬಗ್ಗೆ ಪಾಕಿಸ್ತಾನದ ಹೇಳಿಕೆಗೆ ಭಾರತ ತಿರುಗೇಟು

ಆದರೆ, ಭಾರತ ಮತ್ತು ಪಾಕಿಸ್ತಾನದ ನಡುವೆ ಶಾಂತಿ ಮಾತುಕತೆಯಲ್ಲಿ ಚೀನಾದ ಪಾಲ್ಗೊಳ್ಳುವಿಕೆಯನ್ನು ಪಾಕಿಸ್ತಾನ ಇಷ್ಟು ತಡವಾಗಿ ಒಪ್ಪಿಕೊಂಡಿರುವುದು ಅಚ್ಚರಿ ಮೂಡಿಸಿದೆ ಮತ್ತು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಏಕೆಂದರೆ, ಇಲ್ಲಿಯವರೆಗೆ ಆಪರೇಷನ್ ಸಿಂಧೂರ್ ಸಮಯದಲ್ಲಿ ಭಾರತದೊಂದಿಗಿನ ಯುದ್ಧವನ್ನು ಕೊನೆಗೊಳಿಸಿದ್ದಕ್ಕಾಗಿ ಚೀನಾ ವಿಶೇಷವಾಗಿ ಅಮೆರಿಕ ಮತ್ತು ಡೊನಾಲ್ಡ್ ಟ್ರಂಪ್ ಅವರನ್ನು ಪ್ರಶಂಸಿಸಿತ್ತು. ಇದೀಗ ಚೀನಾ ತಾನೇ ಈ ಕದನವಿರಾಮಕ್ಕೆ ಕಾರಣ ಎಂದು ಬಿಂಬಿಸಿಕೊಳ್ಳುತ್ತಿದೆ.

ಏಪ್ರಿಲ್ 22 ರಂದು ನಡೆದ ಪಹಲ್ಗಾಮ್ ದಾಳಿಯ ನಂತರ 26 ಜನರು ಸಾವನ್ನಪ್ಪಿದರು, ಅದರಲ್ಲಿ 25 ಭಾರತೀಯರು. ಪ್ರವಾಸಿಗರ ಮೇಲಿನ ದಾಳಿಯ ನಂತರ, ಆ ದಾಳಿಗೆ ಕಾರಣರಾದ ಪಾಕಿಸ್ತಾನದಲ್ಲಿರುವ ಭಯೋತ್ಪಾದಕರನ್ನು ಹೊರಹಾಕಲು ಭಾರತ ಆಪರೇಷನ್ ಸಿಂಧೂರ್ ಅನ್ನು ಘೋಷಿಸಿತು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

Madras Eye: ಶೀತಗಾಳಿ ಪ್ರಭಾವ ಬೆನ್ನಲ್ಲೇ ಮದ್ರಾಸ್ ಐ ಸೋಂಕು ಹೆಚ್ಚಳ: ಮಕ್ಕಳೇ ಟಾರ್ಗೆಟ್​ – Kannada News | Madras Eye Alert: Bangaluru Cold Wave Fuels Eye Infections in Kids

ಬೆಂಗಳೂರು, ಜನವರಿ 03: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಈ ವರ್ಷ ಚಳಿಗಾಲ (Cold Wave) ಜೊತೆ ಕೆಲ ದಿನಗಳಿಂದ ಶೀತಗಾಳಿ ಹೆಚ್ಚಳವಾಗಿದ್ದು, ತೇವಾಂಶದ ವಾತಾವರಣದಿಂದಾಗಿ ಚಿಕ್ಕ ಮಕ್ಕಳಿಂದ ಹಿಡಿದು ಅನೇಕರಿಗೆ ಮದ್ರಾಸ್‌ ಐ (Madras Eye) ಕಣ್ಣಿನ ಸೋಂಕು ಹೆಚ್ಚಳವಾಗಿದೆ. ಹೀಗಾಗಿ ವೈದ್ಯರು ಪೋಷಕರಿಗೆ ಮಕ್ಕಳ ಕಣ್ಣಿನ ಸೋಂಕಿನ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.

ಪೋಷಕರಿಗೆ ಎಚ್ಚರಿಕೆ ನೀಡಿದ ವೈದ್ಯರು

ಬೆಂಗಳೂರಿನಲ್ಲಿ ಚಳಿಯಿಂದ ಹಾಗೂ ತೇವಾಂಶದ ವಾತಾವರಣದಿಂದಾಗಿ ಮದ್ರಾಸ್‌ ಐ ಕಣ್ಣಿನ ಸೋಂಕು ಹೆಚ್ಚಳವಾಗಿದೆ. ಶಾಲಾ ಮಕ್ಕಳಲ್ಲಿಯೇ ಇದು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಬದಲಾದ ಹವಮಾನ, ಚಳಿ ಹೆಚ್ಚಾಗಿರುವ ಕಾರಣ ಮಕ್ಕಳಿಗೆ ಮದ್ರಾಸ್ ಐ ಶುರುವಾಗಿದೆ. ಹೆಚ್ಚಾಗಿ ಮಕ್ಕಳಲ್ಲಿ ಕಾಣಿಸಿಕೊಳ್ಳುತ್ತಿದ್ದು, ಒಬ್ಬರಿಂದ ಒಬ್ಬರಿಗೆ ವೇಗವಾಗಿ ಹರಡುತ್ತಿದೆ. ಹೀಗಾಗಿ ವೈದ್ಯರು ಪೋಷಕರಿಗೆ ಎಚ್ಚರಿಕೆ ನೀಡಿದ್ದಾರೆ. ಮಕ್ಕಳ ಕಣ್ಣಿನ ಸೋಂಕಿನ ಬಗ್ಗೆ ನಿರ್ಲಕ್ಷ್ಯ ವಹಿಸದಂತೆ ಸಲಹೆ ನೀಡಿದ್ದಾರೆ. ಆರೊಗ್ಯ ಇಲಾಖೆ ಕೂಡ ಮದ್ರಾಸ್ ಐ ಬಗ್ಗೆ ಕೆಲವು ಸಲಹೆಗಳನ್ನ ನೀಡಿದೆ.

ಮದ್ರಾಸ್ ಐ ಲಕ್ಷಣಗಳು ಏನು?

  • ಬ್ಯಾಕ್ಟೀರಿಯಾ ಅಥವಾ ವೈರಸ್‌ಗಳಿಂದ ಕಣ್ಣಿನಲ್ಲಿ ಉರಿ, ಸೋಂಕು ಉಂಟಾಗುತ್ತದೆ.
  • ಧೂಳು, ಅಲರ್ಜಿಗಳು, ಮಾಲಿನ್ಯ ಇವುಗಳಿಂದಲೂ ಈ ಅಲರ್ಜಿ ಸಮಸ್ಯೆ ಬರಬಹುದು.
  • ಇದು ಒಬ್ಬರಿಂದ ಮತ್ತೊಬ್ಬರಿಗೆ ಸುಲಭವಾಗಿ ಹರಡುವ ಸೋಂಕಾಗಿದೆ.
  • ಕಣ್ಣುಗಳು ಕೆಂಪಾಗುವುದು, ಸುಡುವಂತಾಗುವುದು.
  • ಕಣ್ಣಿನಲ್ಲಿ ಮುರಳು, ಕಿಚ್ಚು ಹಾಗೂ ಜಲಸ್ರಾವವಾಗುವುದು.
  • ರೆಪ್ಪೆಗಳು ಅಂಟಿಕೊಳ್ಳುವುದು (ಬೆಳಿಗ್ಗೆ ವಿಶೇಷವಾಗಿ)
  • ಬೆಳಕಿಗೆ ನೋವು, ಕಣ್ಣು ಮಿಡಿಯುವುದು.

ಪರಿಹಾರ ಏನು?

  • ಗುಣಮುಖವಾಗುವವರೆಗೂ ಸಾಬೂನು ಬಳಸಿ ಕೈಗಳನ್ನು ಪದೇಪದೇ ತೊಳೆಯಿರಿ.
  • ಕಣ್ಣಿನ ವೈದ್ಯರು ಸೂಚಿಸಿದ ಔಷಧಿ, ಐಡ್ರಾಪ್ಸ್ ನಿಯಮಿತವಾಗಿ ಬಳಸುವುದು.
  • ಕಣ್ಣುಗಳನ್ನು ಸ್ವಚ್ಛವಾಗಿಡುವುದು.
  • ಬಳಸಿದ ಟಿಶ್ಯೂ, ಕಾಟನ್‌ನ್ನು ತಕ್ಷಣ ತ್ಯಜಿಸುವುದು.
  • ಸೋಂಕಿತ ವ್ಯಕ್ತಿಯಿಂದ ಸ್ವಲ್ಪ ದೂರವಿರುವುದು.

ಏನು ಮಾಡಬಾರದು? 

  • ಗುಣಮುಖರಾಗುವವರೆಗೂ ಸಾರ್ವಜನಿಕ ಸ್ಥಳಗಳಿಗೆ ಹೋಗದಿರಿ.
  • ಕಣ್ಣಿಗೆ ವಿಶ್ರಾಂತಿ ಇಲ್ಲದೆ ಮೊಬೈಲ್ ಅಥವಾ ಟಿವಿ ವೀಕ್ಷಣೆ ಬೇಡ.
  • ಅನಗತ್ಯ ಕಣ್ಣುಗಳ ಉಜ್ಜುವುದು, ಮುಟ್ಟುವುದು ಬೇಡ.
  • ಸೋಂಕತರು ಬಳಸಿದ ಮೇಕಪ್, ಕಾಜಲ್, ಲೆನ್ಸ್ ಟವಲ್ ಬಳಕೆ ತಪ್ಪಿಸಿ.
  • ಮನೆ ಮದ್ದು ಬೇಡ.
  • ವೈದ್ಯರ ಸಲಹೆ ಇಲ್ಲದೆ ಔಷಧಿ ಬಳಸಬೇಡಿ.

ಶೀತಗಾಳಿಯಿಂದ ವಾತಾವರಣದಲ್ಲಿ ತೇವಾಂಶ ಹೆಚ್ಚಾಗಿದ್ದು, ಚಳಿ ವಾತಾವರಣದಿಂದ ಈ ವೈರಾಣು ನೇರವಾಗಿ ಕಣ್ಣಿನ ಮೇಲೆ ಪರಿಣಾಮ ಉಂಟು ಮಾಡುತ್ತಿದೆ. ಹೀಗಾಗಿ ಮದ್ರಾಸ್ ಐ ಏರಿಕೆಯಾಗಿದೆ. ನಿರ್ಲಕ್ಷ್ಯ ವಹಿಸದಂತೆ ಪೋಷಕರು ಎಚ್ಚರ ವಹಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡರೆ ಶಾಲೆಗೆ ಕಳಿಸದ್ದಂತೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿಗರಿಗೆ ಬಿಗ್​​ ಶಾಕ್​​​​​: ಚಳಿಗಾಲದಲ್ಲಿ ಹೊರಗೆ ಹೋಗುವ ಮುನ್ನ ಎಚ್ಚರ

ಕಳೆದ ಎರಡು ವಾರದಿಂದ ನಿರಂತರವಾಗಿ ವಾತವರಣದ ತೇವಾಂಶ ಹಾಗೂ ಚಳಿಯಿಂದ ಕಣ್ಣಿನ ಸೋಂಕು ಹೆಚ್ಚಾಗಿದೆ, ಅದರಲ್ಲೂ ಮದ್ರಾಸ್ ಐಗೆ ಮಕ್ಕಳು ಟಾರ್ಗೆಟ್ ಆಗಿದ್ದು, ಮಳೆಗಾಲ ಮುಗಿಯುವರೆಗೂ ಪೋಷಕರು ಮಕ್ಕಳ ಆರೋಗ್ಯದ ಬಗ್ಗೆ ಎಚ್ಚರ ವಹಿಸಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

Exit mobile version