ಬಳ್ಳಾರಿ ಗಲಭೆ: ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್ – Kannada News | Bellari Violence: Minister Zameer Hands Over 25 Lakh Compensation to Rajashekhar Family

ಬಳ್ಳಾರಿ, ಜನವರಿ 03: ಬಳ್ಳಾರಿಯಲ್ಲಿ ನಡೆದ ಬ್ಯಾನರ್ ಗಲಾಟೆಯಲ್ಲಿ ಮೃತಪಟ್ಟ ರಾಜಶೇಖರ್​​ ಮನೆಗೆ ಇಂದು ಸಚಿವ ಜಮೀರ್ ಅಹ್ಮದ್ ಖಾನ್ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಈ ವೇಳೆ ಮೃತನ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಿದ್ದಾರೆ. ನಿಮ್ಮೊಂದಿಗೆ ನಮ್ಮ ಸರ್ಕಾರ ಇರುತ್ತೆ, ನಮ್ಮ ಶಾಸಕರು ಇದ್ದಾರೆ ಎಂದು ಧೈರ್ಯ ತುಂಬಿದ್ದಾರೆ. ಸಚಿವ ಜಮೀರ್‌ಗೆ ಶಾಸಕರಾದ ಭರತ್ ರೆಡ್ಡಿ ಮತ್ತು ಗಣೇಶ್​ ಸಾಥ್ ನೀಡಿದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

62 ಎಸೆತಗಳಲ್ಲಿ 66 ರನ್, 68 ಎಸೆತಗಳಲ್ಲಿ 100 ರನ್..! ಹಾರ್ದಿಕ್ ಅಬ್ಬರ ಹೇಗಿತ್ತು ನೋಡಿ – Kannada News | Hardik Pandya Century: 133 Runs, 34 in Over for Baroda in Vijay Hazare 2026

2025-26 ರ ವಿಜಯ್ ಹಜಾರೆ ಟ್ರೋಫಿಯಲ್ಲಿ ಬರೋಡಾ ಮತ್ತು ವಿದರ್ಭ ಪರಸ್ಪರ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಬರೋಡಾ ತಂಡ ಸೋತಿತ್ತಾದರೂ ತಂಡದ ಪರ ಹಾರ್ದಿಕ್ ಪಾಂಡ್ಯ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಬರೋಡಾ 71 ರನ್​ಗಳಿಗೆ ಪ್ರಮುಖ 5 ವಿಕೆಟ್‌ಗಳನ್ನು ಕಳೆದುಕೊಂಡಿತ್ತು. ಈ ವೇಳೆ ಕಣಕ್ಕಿಳಿದ ಹಾರ್ದಿಕ್ ತಮ್ಮ ಸಹೋದರ ಕೃನಾಲ್ ಪಾಂಡ್ಯ ಅವರೊಂದಿಗೆ ಆರನೇ ವಿಕೆಟ್‌ಗೆ 65 ರನ್‌ಗಳ ಪಾಲುದಾರಿಕೆಯನ್ನು ಹಂಚಿಕೊಂಡರು.

ಇದರ ಜೊತೆಗೆ ಹಾರ್ದಿಕ್ ಪಾಂಡ್ಯ 92 ಎಸೆತಗಳಲ್ಲಿ 133 ರನ್​ಗಳ ಇನ್ನಿಂಗ್ಸ್ ಅಡಿದರು. ಇದರಲ್ಲಿ 11 ಸಿಕ್ಸರ್‌ಗಳು ಮತ್ತು 8 ಬೌಂಡರಿಗಳು ಸೇರಿದ್ದವು. 144.57 ರ ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿದ ಪಾಂಡ್ಯಗೆ ಲಿಸ್ಟ್ ಎ ಕ್ರಿಕೆಟ್‌ನಲ್ಲಿ ಇದು ಚೊಚ್ಚಲ ಶತಕವೂ ಆಗಿತ್ತು. ಇದು ಪಾಂಡ್ಯರ ಶತಕದ ಹೈಲೇಟ್ ಆಗಿದ್ದರೆ, ಇನ್ನು ಇದೇ ಪಂದ್ಯದಲ್ಲಿ ಪಾಂಡ್ಯ ಒಂದೇ ಓವರ್​ನಲ್ಲಿ 34 ರನ್ ಚಚ್ಚಿ ಅಬ್ಬರಿಸಿದರು.

ತಂಡದ 38 ನೇ ಓವರ್ ಮುಕ್ತಾಯಕ್ಕೆ 62 ಎಸೆತಗಳಲ್ಲಿ 66 ರನ್ ಕಲೆಹಾಕಿ ಬ್ಯಾಟಿಂಗ್‌ ಮುಂದುವರೆಸಿದ್ದ ಪಾಂಡ್ಯ, 39 ನೇ ಓವರ್​ನಲ್ಲಿ ಉಗ್ರರೂಪ ತಾಳಿದರು. ಈ ಓವರ್​ನಲ್ಲಿ ಪಾಂಡ್ಯ ಸತತ 5 ಸಿಕ್ಸರ್​ಗಳು ಹಾಗೂ 1 ಬೌಂಡರಿ ಬಾರಿಸಿದರು. ಅಂದರೆ ಕೇವಲ 6 ಎಸೆತಗಳಲ್ಲಿ 34 ರನ್ ಕಲೆಹಾಕಿದ ಪಾಂಡ್ಯ ತಮ್ಮ ಶತಕವನ್ನು ಪೂರೈಸಿದರು.

Source link

ತೈಲ ಸಂಪತ್ತಿನ ಮೇಲೆ ಕಣ್ಣಿಟ್ಟರಾ ಟ್ರಂಪ್? ವೆನೆಜುವೆಲಾ ಮೇಲಿನ ಅಮೆರಿಕ ದಾಳಿ ಕುರಿತ ಕುತೂಹಲಕಾರಿ ಸಂಗತಿ ಇಲ್ಲಿದೆ – Kannada News | Why US Attacked Venezuela and Captured President Nicolas Maduro here is interesting Facts

ನವದೆಹಲಿ, ಜನವರಿ 3: ಶನಿವಾರ ರಾತ್ರಿ ವೆನೆಜುವೆಲಾದ ರಾಜಧಾನಿ ಕ್ಯಾರಕಾಸ್‌ನಲ್ಲಿ ಅಮೆರಿಕ ಬೃಹತ್ ವೈಮಾನಿಕ ದಾಳಿ ನಡೆಸಿತು. ಸ್ಥಳೀಯ ಸಮಯದ ಪ್ರಕಾರ ಮಧ್ಯರಾತ್ರಿಯಲ್ಲಿ ಸಂಭವಿಸಿದ ಭಾರೀ ಸ್ಫೋಟಗಳಿಂದ ಇಡೀ ನಗರವು ನಡುಗಿತು. ಆದರೆ ಈ ಯುದ್ಧದಂತಹ ಪರಿಸ್ಥಿತಿಯ ನಡುವೆ ಒಂದು ಪ್ರಮುಖವಾದ ಪ್ರಶ್ನೆ ನಮ್ಮನ್ನು ಕಾಡುವುದು ಸಹಜ. ವಿಶ್ವದ ಅತಿದೊಡ್ಡ ತೈಲ ನಿಕ್ಷೇಪಗಳನ್ನು ಹೊಂದಿದ್ದರೂ ವೆನೆಜುವೆಲಾ (Venezuela) ದೇಶವು ಏಕೆ ಬಡ ರಾಷ್ಟ್ರವಾಗಿದೆ? ಈ ದೇಶದ ಮೇಲೆ ವಿಶ್ವದ ದೊಡ್ಡಣ್ಣ ಅಮೆರಿಕದ ಕಣ್ಣು ಬೀಳಲು ಕಾರಣವೇನು?

ಈಗಾಗಲೇ ವೆನೆಜುವೆಲಾದ ಮೇಲೆ ದಾಳಿ ನಡೆಸಿರುವ ಅಮೆರಿಕ ಅಲ್ಲಿನ ಅಧ್ಯಕ್ಷ ಹಾಗೂ ಅವರ ಪತ್ನಿಯನ್ನು ಸೆರೆಹಿಡಿದು, ವೆನೆಜುವೆಲಾದಿಂದ ಹೊರಕ್ಕೆ ಕರೆದುಕೊಂಡು ಹೋಗಿದ್ದಾರೆ. ಅಮೆರಿಕ ಇಷ್ಟು ಗೌಪ್ಯವಾಗಿ ವೆನೆಜುವೆಲಾ ಮೇಲೆ ವೈಮಾನಿಕ ದಾಳಿ ನಡೆಸುವಷ್ಟು ದ್ವೇಷವಾದರೂ ಏನಿದೆ? ಎಂಬ ಅನುಮಾನಕ್ಕೆ ಉತ್ತರ ಇಲ್ಲಿದೆ.

ಕಳೆದ ಕೆಲವು ತಿಂಗಳುಗಳಿಂದ ಅಮೆರಿಕ ಅಧ್ಯಕ್ಷ ಟ್ರಂಪ್ ಮಡುರೊ ಅವರನ್ನು “ಕಾರ್ಟೆಲ್ ಡಿ ಲಾಸ್ ಸೋಲ್ಸ್” ಎಂಬ ಮಾದಕವಸ್ತು ಕಾರ್ಟೆಲ್‌ನ ಉನ್ನತ ಮಟ್ಟದ ಸದಸ್ಯ ಎಂದು ಆರೋಪಿಸಿದ್ದರು. ಇದು ಅಮೆರಿಕಕ್ಕೆ ಮಾದಕವಸ್ತುಗಳನ್ನು ಸಾಗಿಸುತ್ತಿದೆ ಎಂದು ಅವರು ಹೇಳಿದ್ದರು. ಆದರೆ, ಇದಕ್ಕೆ ಟ್ರಂಪ್ ಯಾವುದೇ ಪುರಾವೆಗಳನ್ನು ನೀಡಿರಲಿಲ್ಲ. ಆದರೆ, ವೆನೆಜುವೆಲಾದ ವಿರುದ್ಧದ ತಮ್ಮ ಮಾರಕ ಮಿಲಿಟರಿ ಕಾರ್ಯಾಚರಣೆಗಳನ್ನು ಸಮರ್ಥಿಸಲು ಈ ಆರೋಪಗಳನ್ನು ಟ್ರಂಪ್ ಬಳಸಿಕೊಂಡಿದ್ದರು.

ಇದನ್ನೂ ಓದಿ: ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ

ವೆನೆಜುವೆಲಾದಲ್ಲಿ ಬಹಳ ಹೇರಳವಾದ ನೈಸರ್ಗಿಕ ಸಂಪತ್ತು ಇದೆ. ವೆನೆಜುವೆಲಾ ತೈಲ ಮತ್ತು ಅಪರೂಪದ ಭೂಮಿಯ ಖನಿಜಗಳಿಂದ ಸಮೃದ್ಧವಾಗಿದೆ. ಇದು ಅತ್ಯಂತ ಅಮೂಲ್ಯವಾದ ಸರಕುಗಳಾಗಿ ಕಾರ್ಯನಿರ್ವಹಿಸುತ್ತದೆ. ಮಡುರೊ ಪ್ರಕಾರ, ದಕ್ಷಿಣ ಅಮೆರಿಕಾದ ದೇಶವಾದ ವೆನೆಜುವೆಲಾ 1.36 ಟ್ರಿಲಿಯನ್ ಡಾಲರ್ ಮೌಲ್ಯದ ಖನಿಜ ಸಂಪತ್ತನ್ನು ಹೊಂದಿದೆ. ಡಿಸೆಂಬರ್‌ನಲ್ಲಿ ಅಮೆರಿಕ ತೈಲ ಟ್ಯಾಂಕರ್ ಅನ್ನು ವಶಪಡಿಸಿಕೊಂಡ ನಂತರ, ಕ್ಯಾರಕಾಸ್ ತನ್ನಲ್ಲಿರುವ ನೈಸರ್ಗಿಕ ಸಂಪನ್ಮೂಲಗಳಿಗಾಗಿ ಅಮೆರಿಕ ವೆನೆಜುವೆಲಾವನ್ನು ಲೂಟಿ ಮಾಡಲು ಪ್ರಯತ್ನಿಸುತ್ತಿದೆ ಎಂದು ನೇರವಾಗಿ ಆರೋಪಿಸಿತ್ತು. ಅದರ ಬೆನ್ನಲ್ಲೇ ಈ ದಾಳಿ ನಡೆದಿದೆ.

ಕಳೆದ ತಿಂಗಳು ವೆನೆಜುವೆಲಾದ ಕರಾವಳಿಯಲ್ಲಿ ವಶಪಡಿಸಿಕೊಂಡ ತೈಲ ಟ್ಯಾಂಕರ್ ಇರಾನ್‌ಗೆ ಅನುಮೋದಿತ ತೈಲವನ್ನು ಸಾಗಿಸುತ್ತಿತ್ತು ಎನ್ನಲಾಗಿದೆ. ವೆನೆಜುವೆಲಾ ಈ ಆರೋಪವನ್ನು ನಿರಾಕರಿಸಿದೆ. ಡೊನಾಲ್ಡ್ ಟ್ರಂಪ್ ಅವರ ಈ ಕ್ರಮಗಳನ್ನು “ಅಂತಾರಾಷ್ಟ್ರೀಯ ಕಡಲ್ಗಳ್ಳತನದ ಕೃತ್ಯ” ಎಂದು ವೆನೆಜುವೆಲಾ ಟೀಕಿಸಿತ್ತು.

ಇದನ್ನೂ ಓದಿ: ವೆನೆಜುವೆಲಾ ಅಧ್ಯಕ್ಷ ಮಡುರೊ, ಅವರ ಪತ್ನಿಯನ್ನು ಸೆರೆಹಿಡಿದಿದ್ದೇವೆ; ದಾಳಿಯ ಬಳಿಕ ಟ್ರಂಪ್ ಘೋಷಣೆ

ಈ ದಾಳಿಗೆ ಎರಡನೆಯದಾಗಿ ಹೇಳಲಾಗುತ್ತಿರುವ ಕಾರಣವೆಂದರೆ ಮಾದಕ ವಸ್ತುಗಳು. ವೆನೆಜುವೆಲಾ ಕೊಕೇನ್‌ಗೆ ಪ್ರಮುಖ ಸಾಗಣೆ ಮಾರ್ಗವಾಗಿದೆ.

ಅಮೆರಿಕಕ್ಕಿಂತ 5 ಪಟ್ಟು ಹೆಚ್ಚು ತೈಲ ನಿಕ್ಷೇಪಗಳಿದ್ದರೂ ವೆನೆಜುವೆಲಾ ಯಾಕೆ ಶ್ರೀಮಂತ ದೇಶವಾಗಿಲ್ಲ? ಎಂಬ ಪ್ರಶ್ನೆ ಕಾಡುವುದು ಸಹಜ. ವೆನೆಜುವೆಲಾದಲ್ಲಿ ಭಾರೀ ತೈಲ ನಿಕ್ಷೇಪಗಳಿದ್ದರೂ ಅದರ ಹೆಚ್ಚಿನ ತೈಲವು ಪೂರ್ವ ಪ್ರದೇಶದ ಒರಿನೊಕೊ ಬೆಲ್ಟ್‌ನಲ್ಲಿ ಕಂಡುಬರುತ್ತದೆ. ಸಮಸ್ಯೆಯೆಂದರೆ ಅದು ಭಾರೀ ಕಚ್ಚಾ ತೈಲವಾಗಿದೆ. ಈ ತೈಲವು ಜೇನುತುಪ್ಪದಂತೆ ಅತ್ಯಂತ ದಪ್ಪವಾಗಿರುತ್ತದೆ.

ಈ ರೀತಿಯ ತೈಲವನ್ನು ಹೊರತೆಗೆಯುವುದು ಮತ್ತು ಸಂಸ್ಕರಿಸುವುದು ಸಾಂಪ್ರದಾಯಿಕ ತೈಲಕ್ಕಿಂತ ಹೆಚ್ಚು ಕಷ್ಟಕರ ಮತ್ತು ದುಬಾರಿಯಾಗಿದೆ. ಇದರಲ್ಲಿ ಹೆಚ್ಚಿನ ಸಲ್ಫರ್ ಅಂಶವಿದ್ದು, ಅದನ್ನು ತೆಗೆದುಹಾಕಲು ಸುಧಾರಿತ ತಂತ್ರಜ್ಞಾನ ಮತ್ತು ಗಮನಾರ್ಹ ಹೂಡಿಕೆಯ ಅಗತ್ಯವಿದೆ. ಈ ತೈಲವು ಹೆಚ್ಚು ದಪ್ಪವಾಗಿರುವುದರಿಂದ ಮತ್ತು ಸಂಸ್ಕರಿಸಲು ಹೆಚ್ಚು ಕಷ್ಟಕರವಾಗಿರುವುದರಿಂದ, ಇದು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇತರ ದೇಶಗಳ ಕಚ್ಚಾ ತೈಲಕ್ಕಿಂತ ಗಮನಾರ್ಹವಾಗಿ ಕಡಿಮೆ ಬೆಲೆಗೆ ಮಾರಾಟವಾಗುತ್ತದೆ. ಇದರರ್ಥ ಹೆಚ್ಚಿನ ಶ್ರಮ ಮತ್ತು ಕಡಿಮೆ ಲಾಭ. ಇದೇ ಕಾರಣಕ್ಕೆ ವೆನೆಜುವೆಲಾ ಬಡ ರಾಷ್ಟ್ರವಾಗಿಯೇ ಮುಂದುವರೆದಿದೆ. ಆದರೆ, ಈ ತೈಲ ನಿಕ್ಷೇಪಗಳ ಲಾಭ ಪಡೆಯಲು ಅಮೆರಿಕ ಪ್ಲಾನ್ ಮಾಡಿದೆ ಎನ್ನಲಾಗಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಯಶ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಸಿಗಲಿದೆ ದೊಡ್ಡ ಸರ್ಪ್ರೈಸ್ – Kannada News | Toxic movie trailer or teaser to be released on Yash’s Birthday

ಯಶ್ (Yash) ಭಾರತದ ಬಲು ಜನಪ್ರಿಯ ಸ್ಟಾರ್ ನಟ. ‘ಕೆಜಿಎಫ್’ ಸಿನಿಮಾ ಸರಣಿಯಿಂದಾಗಿ ಯಶ್ ಅವರ ಜನಪ್ರಿಯತೆ ಸಾಗರ ದಾಟಿ ಹಬ್ಬಿದೆ. ಇದೀಗ ಯಶ್ ಅವರು ‘ಟಾಕ್ಸಿಕ್’ ಸಿನಿಮಾನಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದು, ಕಳೆದ ಕೆಲವ ವರ್ಷಗಳಿಂದಲೂ ‘ಟಾಕ್ಸಿಕ್’ನಲ್ಲಿ ಯಶ್ ಬ್ಯುಸಿಯಾಗಿದ್ದಾರೆ. ಸಿನಿಮಾ ಬಿಡುಗಡೆಗೆ ಕೆಲವೇ ತಿಂಗಳು ಬಾಕಿ ಇದೆ. ಇದೀಗ ಸಿನಿಮಾದ ಪಾತ್ರಗಳ ಪೋಸ್ಟರ್​​ಗಳನ್ನು ಒಂದೊಂದಾಗಿ ಹಂಚಿಕೊಳ್ಳಲಾಗುತ್ತಿದೆ. ಇದೀಗ ಹರಿದಾಡುತ್ತಿರುವ ಸುದ್ದಿಯೆಂದರೆ ಯಶ್ ಅವರ ಹುಟ್ಟುಹಬ್ಬಕ್ಕೆ ‘ಟಾಕ್ಸಿಕ್’ ಸಿನಿಮಾ ತಂಡದಿಂದ ದೊಡ್ಡ ಉಡುಗೊರೆಯೇ ಸಿನಿಮಾ ಪ್ರೇಮಿಗಳಿಗೆ ಸಿಗಲಿದೆ ಎಂಬುದು.

ಯಶ್ ಅವರ ಹುಟ್ಟುಹಬ್ಬ ಜನವರಿ 8ಕ್ಕಿದೆ. ಅದೇ ದಿನ ‘ಟಾಕ್ಸಿಕ್’ ಸಿನಿಮಾದ ಟ್ರೈಲರ್ ಬಿಡುಗಡೆ ಆಗಲಿದೆ ಎನ್ನಲಾಗುತ್ತಿದೆ. ಈ ವರೆಗೆ ‘ಟಾಕ್ಸಿಕ್’ ಸಿನಿಮಾದ ಪೋಸ್ಟರ್​​ಗಳು ಮಾತ್ರವೇ ಹೊರಬಿಡಲಾಗಿದೆ. ಆದರೆ ಸಿನಿಮಾದ ಟೀಸರ್ ಅಥವಾ ಟ್ರೈಲರ್​​ಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಯಶ್ ಹುಟ್ಟುಹಬ್ಬ ಹತ್ತಿರದಲ್ಲೇ ಇದ್ದು, ಅದೇ ದಿನ ‘ಟಾಕ್ಸಿಕ್’ ಸಿನಿಮಾದ ಟೀಸರ್ ಬಿಡುಗಡೆ ಮಾಡಲು ಚಿತ್ರತಂಡ ಯೋಜಿಸಿದೆ.

‘ಟಾಕ್ಸಿಕ್’ ಸಿನಿಮಾದ ಫಸ್ಟ್ ಲುಕ್ ಟೀಸರ್ ಯಶ್ ಅವರ ಹುಟ್ಟುಹಬ್ಬದಂದೇ ಬಿಡುಗಡೆ ಆಗಿತ್ತು. ಇದೀಗ ಮತ್ತೊಮ್ಮೆ ಯಶ್ ಹುಟ್ಟುಹಬ್ಬದಂದೇ ಸಿನಿಮಾದ ಟೀಸರ್ ಅಥವಾ ಟ್ರೈಲರ್ ಬಿಡುಗಡೆ ಆಗುವ ಸಾಧ್ಯತೆ ಇದೆ. ಸಿನಿಮಾದ ನಾಯಕಿಯರಾದ ನಯನತಾರಾ, ಕಿಯಾರಾ ಅಡ್ವಾಣಿ, ಹುಮಾ ಖುರೇಷಿ ಮತ್ತು ತಾರಾ ಸುತಾರಿಯಾ ಅವರ ಪಾತ್ರಗಳ ಪೋಸ್ಟರ್​​ಗಳನ್ನು ಚಿತ್ರತಂಡ ಈಗಾಗಲೇ ಹಂಚಿಕೊಂಡಿದೆ. ಈಗ ಸಿನಿಮಾದ ಟೀಸರ್ ಅಥವಾ ಟ್ರೈಲರ್ ಅನ್ನು ಬಿಡುಗಡೆ ಮಾಡುವ ಸಮಯ ಸನ್ನಿಹಿತವಾಗಿದೆ. ಯಶ್ ಹುಟ್ಟುಹಬ್ಬಕ್ಕಿಂತಲೂ ಒಳ್ಳೆಯ ಸಮಯ ಸಿಗಲಿಕ್ಕಿಲ್ಲವೇನೊ.

ಇದನ್ನೂ ಓದಿ:ನನ್ನ ಬರವಣಿಗೆಯನ್ನೂ ಮೆಚ್ಚಬೇಕು; ಸಿಲ್ಲಿ ಲಲ್ಲಿಯಲ್ಲಿ ಹೇಳಿದ್ದ ಯಶ್

‘ಟಾಕ್ಸಿಕ್’ ಸಿನಿಮಾವನ್ನು ಮಲಯಾಳಂ ನಿರ್ದೇಶಕಿ ಗೀತು ಮೋಹನ್​​ದಾಸ್ ನಿರ್ದೇಶನ ಮಾಡುತ್ತಿದ್ದಾರೆ. ಸಿನಿಮಾದ ನಾಯಕನಾಗಿ ಯಶ್ ನಟಿಸಿರುವುದು ಮಾತ್ರವಲ್ಲದೆ ಸಿನಿಮಾದ ಕತೆ ಸಹ ರಚಿಸಿದ್ದಾರೆ. ಕೆವಿಎನ್ ಮತ್ತು ಯಶ್ ಅವರ ಮಾನ್ಸ್​ಸ್ಟರ್ ಮೈಂಡ್ ನಿರ್ಮಾಣ ಸಂಸ್ಥೆಗಳು ಜಂಟಿಯಾಗಿ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದು, ಸಿನಿಮಾ ಕನ್ನಡ ಮಾತ್ರವಲ್ಲದೆ ಭಾರತದ ಇತರೆ ಭಾಷೆಗಳ ಜೊತೆಗೆ ಇಂಗ್ಲೀಷ್​​ನಲ್ಲಿಯೂ ಏಕಕಾಲಕ್ಕೆ ನಿರ್ಮಾಣ ಆಗುತ್ತಿದೆ. ಕೆಲವು ಹಾಲಿವುಡ್ ತಂತ್ರಜ್ಞರು ಸಹ ಈ ಸಿನಿಮಾನಲ್ಲಿ ಕೆಲಸ ಮಾಡುತ್ತಿದ್ದಾರೆ. ಸಿನಿಮಾ ಮಾರ್ಚ್ 19 ರಂದು ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

VHT 2025-26: ಸತತ 5ನೇ ಜಯ; ಕರ್ನಾಟಕಕ್ಕೆ ಸುಲಭ ತುತ್ತಾದ ತ್ರಿಪುರ – Kannada News | Vijay Hazare Trophy: Karnataka Beats Tripura by 80 Runs, 5th Straight Win

ಅಹಮದಾಬಾದ್​ನ ನರೇಂದ್ರ ಮೋದಿ ಮೈದಾನದಲ್ಲಿ ನಡೆದ ವಿಜಯ್ ಹಜಾರೆ ಟ್ರೋಫಿ ಐದನೇ ಸುತ್ತಿನ ಪಂದ್ಯದಲ್ಲಿ ಕರ್ನಾಟಕ ಹಾಗೂ ತ್ರಿಪುರ ತಂಡಗಳು ಮುಖಾಮುಖಿಯಾಗಿದ್ದವು. ಎಂದಿನಂತೆ ಈ ಪಂದ್ಯದಲ್ಲೂ ತನ್ನ ಸಾಂಘೀಕ ಪ್ರದರ್ಶನ ತೋರಿದ ಕರ್ನಾಟಕ ತಂಡ ತ್ರಿಪುರ ತಂಡವನ್ನು 80 ರನ್​ಗಳಿಂದ ಸೋಲಿಸಿ ಈ ಟೂರ್ನಿಯಲ್ಲಿ ಸತತ ಐದನೇ ಗೆಲುವು ದಾಖಲಿಸಿದೆ. ಅಂದರೆ ಈ ಟೂರ್ನಿಯಲ್ಲಿ ಕರ್ನಾಟಕ ತಂಡ ಆಡಿರುವ ಐದಕ್ಕೆ ಐದು ಪಂದ್ಯಗಳು ಗೆಲುವು ಸಾಧಿಸಿದೆ. ಈ ಮೂಲಕ ಎಲೈಟ್ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿ ಮುಂದುವರೆದಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಕರ್ನಾಟಕ 332 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ತ್ರಿಪುರ ತಂಡ 252 ರನ್​ಗಳಿಗೆ ಆಲೌಟ್ ಆಯಿತು.

Source link

ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಕೂದಲೆಳೆ ಅಂತರದಲ್ಲಿ ಸಚಿವ ಸತೀಶ್​ ಜಾರಕಿಹೊಳಿ ಪಾರು – Kannada News | Haveri: minister Satish Jarkiholi Narrowly Escapes Pendal Collapse

ಹಾವೇರಿ, ಜನವರಿ 03: ಏಕಾಏಕಿ ಜೋರಾಗಿ ಬೀಸಿದ ಸುಂಟರಗಾಳಿಗೆ ಪೆಂಡಾಲ್​​ ಕುಸಿದಿದ್ದು, ಸಚಿವ ಸತೀಶ್ ಜಾರಕಿಹೊಳಿ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿರುವಂತಹ ಘಟನೆ ಜಿಲ್ಲೆಯ ರಾಣೆಬೆನ್ನೂರು ನಗರದಲ್ಲಿ ನಡೆದಿದೆ. ಅಂಬೇಡ್ಕರ್ ಕಂಚಿನ ಪ್ರತಿಮೆ ಅನಾವರಣ ಕಾರ್ಯಕ್ರಮ ಹಿನ್ನೆಲೆ ಪೆಂಡಾಲ್ ಹಾಕಲಾಗಿತ್ತು. ಸಚಿವ ಸತೀಶ್ ಜಾರಕಿಹೊಳಿ ಕಾರ್ಯಕ್ರಮ ಮುಗಿಸಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡುತ್ತಿದ್ದರು. ಈ ವೇಳೆ ಬೀಸಿದ ಸುಂಟರಗಾಳಿಗೆ ಸತೀಶ್ ಜಾರಕಿಹೊಳಿ ಹಿಂದೆ ಇದ್ದ ಪೆಂಡಾಲ್ ಹಾರಿ ಬಿದ್ದಿದೆ. ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದು, ಜಾರಕಿಹೊಳಿ ಸೇರಿದಂತೆ ಕ್ಷಣ ಕಾಲ ಎಲ್ಲರೂ ವಿಚಲಿತಗೊಂಡರು.

ವರದಿ: ಅಣ್ಣಪ್ಪ ಬಾರ್ಕಿ

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

ವೆನೆಜುವೆಲಾ ಅಧ್ಯಕ್ಷ ಮಡುರೊ, ಅವರ ಪತ್ನಿಯನ್ನು ಸೆರೆಹಿಡಿದಿದ್ದೇವೆ; ದಾಳಿಯ ಬಳಿಕ ಟ್ರಂಪ್ ಘೋಷಣೆ – Kannada News | Venezuela President Maduro and wife captured after US airstrikesTrump Confirms

ನವದೆಹಲಿ, ಜನವರಿ 3: ವೆನೆಜುವೆಲಾ ಮೇಲಿನ ದಾಳಿಯ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆಯಾದ ಟ್ರೂತ್ ಸೋಷಿಯಲ್‌ನಲ್ಲಿ ಪೋಸ್ಟ್‌ ಮಾಡುವ ಮೂಲಕ ಈ ದಾಳಿಯನ್ನು ದೃಢಪಡಿಸಿದ್ದಾರೆ. ಟ್ರಂಪ್ ಪ್ರಕಾರ, ಅಮೆರಿಕ ಶನಿವಾರ ರಾತ್ರಿ (ಸ್ಥಳೀಯ ಕಾಲಮಾನದ ಪ್ರಕಾರ) ವೆನೆಜುವೆಲಾದ ರಾಜಧಾನಿ ಕ್ಯಾರಕಾಸ್ ಸೇರಿದಂತೆ 4 ಪ್ರಮುಖ ನಗರಗಳನ್ನು ಗುರಿಯಾಗಿಸಿಕೊಂಡು ಕಾರ್ಯಾಚರಣೆ ನಡೆಸಿತು. ಈ ದಾಳಿಯ ಬಳಿಕ ವೆನೆಜುವೆಲಾದ ಅಧ್ಯಕ್ಷ ನಿಕೋಲಸ್ ಮಡುರೊ ಮತ್ತು ಅವರ ಪತ್ನಿಯನ್ನು ಬಂಧಿಸಿ ದೇಶದಿಂದ ಹೊರಗೆ ಕರೆದೊಯ್ಯಲಾಗಿದೆ ಎಂದು ಟ್ರಂಪ್ ಮಾಹಿತಿ ನೀಡಿದ್ದಾರೆ.

ಅಮೆರಿಕದ ಸಮಯದ ಪ್ರಕಾರ ಶನಿವಾರ ರಾತ್ರಿ ಅಮೆರಿಕವು ವೆನೆಜುವೆಲಾದ ರಾಜಧಾನಿ ಕ್ಯಾರಕಾಸ್ ಸೇರಿದಂತೆ 4 ನಗರಗಳನ್ನು ಗುರಿಯಾಗಿಸಿಕೊಂಡಿತು. ಇವುಗಳಲ್ಲಿ ಕ್ಯಾರಕಾಸ್, ಮಿರಾಂಡಾ, ಅರಾಗುವಾ ಮತ್ತು ಲಾ ಗೈರಾ ಸೇರಿವೆ. ಈ ರಾಜ್ಯಗಳಲ್ಲಿನ ಮಿಲಿಟರಿ ನೆಲೆಗಳ ವಿರುದ್ಧ ಅಮೆರಿಕ 7 ವೈಮಾನಿಕ ದಾಳಿಗಳನ್ನು ನಡೆಸಿತು. ಮೊದಲ ದಾಳಿ ಸ್ಥಳೀಯ ಸಮಯ ಬೆಳಗಿನ ಜಾವ 2 ಗಂಟೆಗೆ ಸಂಭವಿಸಿತು.

ಇದನ್ನೂ ಓದಿ: ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ

ವೆನೆಜುವೆಲಾ ಅಧ್ಯಕ್ಷ ನಿಕೋಲಸ್ ಮಡುರೊ ಮತ್ತು ಅವರ ಪತ್ನಿಯನ್ನು ಬಂಧಿಸಿ ದೇಶದಿಂದ ಹೊರಗೆ ಕರೆದೊಯ್ಯಲಾಗಿದೆ ಎಂದು ಟ್ರಂಪ್ ಹೇಳಿದ್ದಾರೆ. ಸಂಪೂರ್ಣ ಕಾರ್ಯಾಚರಣೆಯನ್ನು ಅಮೆರಿಕದ ಕಾನೂನು ಜಾರಿ ಸಂಸ್ಥೆಗಳ ಸಹಯೋಗದೊಂದಿಗೆ ನಡೆಸಲಾಯಿ. ಇದನ್ನು ಅತ್ಯಂತ ಗೌಪ್ಯ ಮತ್ತು ಕಾರ್ಯತಂತ್ರದ ರೀತಿಯಲ್ಲಿ ಕಾರ್ಯಗತಗೊಳಿಸಲಾಯಿತು. ಈ ದಾಳಿಯ ಬಳಿಕ ವೆನೆಜುವೆಲಾದಲ್ಲಿ ರಾಷ್ಟ್ರವ್ಯಾಪಿ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On – 6:03 pm, Sat, 3 January 26

Source link

ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ – Kannada News | US military strikes in Venezuela national emergency declared

ನವದೆಹಲಿ, ಜನವರಿ 3: ಇಂದು ಮುಂಜಾನೆ ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ವೆನೆಜುವೆಲಾದ ಮೇಲೆ ದೊಡ್ಡ ಪ್ರಮಾಣದ ದಾಳಿಗಳನ್ನು ಪ್ರಾರಂಭಿಸಿತು. ಇದು ಕ್ಯಾರಕಾಸ್ ಮತ್ತು ಇತರ ನಗರಗಳಲ್ಲಿ ಸ್ಫೋಟಗಳನ್ನು ಉಂಟುಮಾಡಿತು. ಇದರಿಂದ ವೆನೆಜುವೆಲಾದಲ್ಲಿ ರಾಜಕೀಯ ಮತ್ತು ಮಿಲಿಟರಿ ಬಿಕ್ಕಟ್ಟು ಉಂಟಾಯಿತು. ಅಮೆರಿಕದ (US Airstrike) ದಾಳಿಯ ಹಿನ್ನೆಲೆಯಲ್ಲಿ ವೆನೆಜುವೆಲಾ ರಾಷ್ಟ್ರೀಯ ತುರ್ತು ಪರಿಸ್ಥಿತಿಯನ್ನು ಘೋಷಿಸಿದೆ. ರಾಜಧಾನಿ ಕ್ಯಾರಕಾಸ್‌ನಲ್ಲಿ 7 ಸ್ಫೋಟಗಳು ಕೇಳಿಬಂದ ನಂತರ ವೆನೆಜುವೆಲಾ ಸರ್ಕಾರವು ಅಮೆರಿಕ ತಮ್ಮ ದೇಶದ ಅನೇಕ ರಾಜ್ಯಗಳಲ್ಲಿನ ನಾಗರಿಕ ಮತ್ತು ಮಿಲಿಟರಿ ಸ್ಥಾಪನೆಗಳ ಮೇಲೆ ದಾಳಿ ಮಾಡಿದೆ ಎಂದು ಆರೋಪಿಸಿದೆ.

ಕ್ಯಾರಕಾಸ್‌ನಲ್ಲಿ ಸ್ಫೋಟಗಳು ಸಂಭವಿಸುವ ಮೊದಲು ನಡೆಯುತ್ತಿರುವ ಮಿಲಿಟರಿ ಚಟುವಟಿಕೆಯ ಕಾರಣದಿಂದ ಫೆಡರಲ್ ಏವಿಯೇಷನ್ ​​ಅಥಾರಿಟಿ ವೆನೆಜುವೆಲಾದ ವಾಯುಪ್ರದೇಶದಲ್ಲಿ ಅಮೆರಿಕದ ಕಮರ್ಷಿಯಲ್ ವಿಮಾನಗಳನ್ನು ನಿಷೇಧಿಸಿದೆ. ಕ್ಯಾರಕಾಸ್‌ನಲ್ಲಿರುವ ಮಿಲಿಟರಿ ನೆಲೆಯ ಹ್ಯಾಂಗರ್‌ನಿಂದ ಹೊಗೆ ಏರುತ್ತಿರುವುದನ್ನು ಕಾಣಬಹುದು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

IND vs NZ: ಏಕದಿನ ಸರಣಿಯಿಂದ ಹಾರ್ದಿಕ್ ಪಾಂಡ್ಯ ಔಟ್; ಸೂಕ್ತ ಕಾರಣ ನೀಡಿದ ಬಿಸಿಸಿಐ – Kannada News | Hardik Pandya Dropped from India ODI Squad vs NZ: BCCI Explains Reason

ಏಕದಿನ ಸರಣಿಗೆ ಭಾರತ ತಂಡ: ಶುಭ್​ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಮೊಹಮ್ಮದ್ ಸಿರಾಜ್, ಹರ್ಷಿತ್ ರಾಣಾ, ಪ್ರಸಿದ್ಧ್ ಕೃಷ್ಣ, ಕುಲ್ದೀಪ್ ಯಾದವ್, ರಿಷಭ್ ಪಂತ್, ನಿತೀಶ್ ಕುಮಾರ್ ರೆಡ್ಡಿ, ಅರ್ಶ್ದೀಪ್ ಸಿಂಗ್ ಮತ್ತು ಯಶಸ್ವಿ ಜೈಸ್ವಾಲ್.

Source link

ತಪ್ಪಿಯೂ ಚಹಾದೊಂದಿಗೆ ಈ ಆಹಾರಗಳನ್ನು ಸೇವನೆ ಮಾಡಬಾರದಂತೆ – Kannada News | The habit of eating these foods with tea can have a negative impact on health

ಚಹಾ (tea) ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ. ಅದರಲ್ಲೂ ಭಾರತೀಯರಿಗಂತೂ ಬಿಸಿ ಬಿಸಿ ಚಹಾ ಹಾಟ್‌ ಫೇವರೇಟ್‌. ಅದೆಷ್ಟೋ ಜನಕ್ಕೆ ಒಂದು ಕಪ್‌ ಚಹಾ ಕುಡಿಯದೆ ದಿನವೇ ಆರಂಭವಾಗುವುದಿಲ್ಲ, ಇನ್ನೂ ಕೆಲವರಿಗೆ ದಿನಕ್ಕೆ ನಾಲ್ಕೈದು ಬಾರಿ ಚಹಾ ಕುಡಿಯದಿದ್ದರೇ ತಲೆಯೇ ಓಡುವುದಿಲ್ಲ. ಹೆಚ್ಚಾಗಿ ಟೀ, ಬಿಸ್ಕೆಟ್‌, ಪಕೋಡಾ ಇತ್ಯಾದಿ ತಿನಿಸುಗಳೊಂದಿಗೆ ಸವಿಯಲಾಗುತ್ತದೆ. ಇದು ಬಾಯಿ ರುಚಿ ಹೆಚ್ಚಿಸಬಹುದು. ಆದರೆ ಕೆಲವು ಆಹಾರಗಳನ್ನು ಚಹಾದೊಂದಿಗೆ ಸೇವನೆ ಮಾಡುವುದರಿಂದ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮಗಳು ಉಂಟಾಗಬಹುದು. ಹಾಗಿದ್ದರೆ ಯಾವೆಲ್ಲಾ ಆಹಾರಗಳನ್ನು ಚಹಾದೊಂದಿಗೆ ಸೇವನೆ ಮಾಡಬಾರದು ಎಂಬುವುದನ್ನು ತಿಳಿಯಿರಿ.

ಚಹಾದೊಂದಿಗೆ ಈ ಆಹಾರಗಳನ್ನು ಸೇವನೆ ಮಾಡಬಾರದು:

ಬಿಸ್ಕೆಟ್‌: ಹೆಚ್ಚಿನವರು ಚಹಾದೊಂದಿಗೆ ಬಿಸ್ಕೆಟ್ ಅಥವಾ ರಸ್ಕ್‌ಗಳನ್ನು ತಿನ್ನುತ್ತಾರೆ. ಈ ಸಂಯೋಜನೆಯು ಆರೋಗ್ಯಕ್ಕೆ ಹಾನಿಕಾರಕವಾಗಿದೆ. ಇದರಲ್ಲಿ ಸಂಸ್ಕರಿಸಿದ ಹಿಟ್ಟು, ಟ್ರಾನ್ಸ್ ಫ್ಯಾಟ್ ಮತ್ತು ಹೆಚ್ಚಿನ ಸಕ್ಕರೆ ಇದ್ದು, ಇದು ಜೀರ್ಣಾಂಗ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತದೆ. ಮತ್ತು‌ ಇದು ತೂಕ ಹೆಚ್ಚಳ, ಗ್ಯಾಸ್ ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟ ಹೆಚ್ಚಳ ಸೇರಿದಂತೆ ಇತ್ಯಾದಿ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡಬಹುದು.

ಎಣ್ಣೆಯಲ್ಲಿ ಕರಿದ ತಿಂಡಿ: ಚಹಾದೊಂದಿಗೆ ಸಮೋಸಾ, ಪಕೋಡದಂತಹ ಎಣ್ಣೆಯಲ್ಲಿ ಕರಿದ ತಿಂಡಿಗಳನ್ನು ತಿನ್ನಲು ಬಲು ರುಚಿಯಾಗಿರಬಹುದು, ಆದರೆ ಆರೋಗ್ಯದ ದೃಷ್ಟಿಯಿಂದ ಇದು ಒಳ್ಳೆಯದಲ್ಲ. ಇದು ಹೃದಯ ಮತ್ತು ಹೊಟ್ಟೆ ಎರಡಕ್ಕೂ ಹಾನಿಕಾರಕವಾಗಿದೆ. ಈ ತಿಂಡಿಗಳಲ್ಲಿರುವ  ಹೆಚ್ಚುವರಿ ಎಣ್ಣೆ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸುತ್ತದೆ.

ಸಿಹಿತಿಂಡಿಗಳು: ಕೇಕ್, ಪೇಸ್ಟ್ರಿ ಅಥವಾ ಇತರ ಸಿಹಿತಿಂಡಿಗಳನ್ನು ಚಹಾದೊಂದಿಗೆ ಸೇವಿಸುವುದು ಒಳ್ಳೆಯದಲ್ಲ.  ಇವುಗಳನ್ನು ಚಹಾದೊಂದಿಗೆ ಸೇವನೆ ಮಾಡುವುದು ಜೀರ್ಣಕ್ರಿಯೆಯ ಮೇಲೆ ಪರಿಣಾಮ ಬೀರುತ್ತದೆ. ಜೀರ್ಣಕ್ರಿಯೆಯ ಪ್ರಕ್ರಿಯೆಯನ್ನು ನಿಧಾನಗೊಳಿಸುತ್ತದೆ, ಇದು ಹೊಟ್ಟೆ ಭಾರ ಮತ್ತು ಆಮ್ಲೀಯತೆಯನ್ನು ಉಂಟುಮಾಡುತ್ತದೆ. ಅಲ್ಲದೆ ಚಹಾದೊಂದಿಗೆ ಅತಿಯಾದ ಸಕ್ಕರೆಯುಕ್ತ ಆಹಾರವನ್ನು ಸೇವಿಸುವುದರಿಂದ ದೇಹದಲ್ಲಿ ಇನ್ಸುಲಿನ್ ಪ್ರತಿರೋಧ ಕ್ರಮೇಣ ಹೆಚ್ಚಾಗುತ್ತದೆ. ಇದು ಬೊಜ್ಜು, ಮಧುಮೇಹ ಮತ್ತು ಆಯಾಸಕ್ಕೆ ಕಾರಣವಾಗಬಹುದು.

ಚಹಾ ಕುಡಿದ ತಕ್ಷಣ ಹಣ್ಣು ತಿನ್ನುವುದು: ಅನೇಕ ಜನರು ಇದನ್ನು ಆರೋಗ್ಯಕರವೆಂದು ಪರಿಗಣಿಸುತ್ತಾರೆ ಆದರೆ ಈ ಅಭ್ಯಾಸವು ಹಾನಿಕಾರಕವಾಗಿದೆ. ಚಹಾದಲ್ಲಿರುವ ಟ್ಯಾನಿನ್ ದೇಹ ಹಣ್ಣಿನಿಂದ ಕಬ್ಬಿಣ ಮತ್ತು ಪೋಷಕಾಂಶಗಳನ್ನು ಹೀರಿಕೊಳ್ಳುವುದನ್ನು ತಡೆಯುತ್ತದೆ, ಇದರಿಂದಾಗಿ ದೇಹವು ಸಂಪೂರ್ಣ ಪೋಷಣೆಯನ್ನು ಪಡೆಯುವುದಿಲ್ಲ. ಚಹಾ ಕುಡಿಯುವ ಅರ್ಧ ಗಂಟೆ ಮೊದಲು ಅಥವಾ ನಂತರ ಹಣ್ಣು ತಿನ್ನಿರಿ.

ಇದನ್ನೂ ಓದಿ: ಆಲಸ್ಯವನ್ನು ಹೋಗಲಾಡಿಸಿ ದಿನವಿಡೀ ಆಕ್ಟಿವ್‌ ಆಗಿರಲು ಅಹಾರಗಳನ್ನು ಸೇವನೆ ಮಾಡಿ

ಚಾಕೊಲೇಟ್: ಚಾಕೊಲೇಟ್ ಮತ್ತು ಚಹಾ ಎರಡರಲ್ಲೂ ಕೆಫೀನ್ ಇರುತ್ತದೆ. ಅವುಗಳನ್ನು ಒಟ್ಟಿಗೆ ಸೇವಿಸುವುದರಿಂದ ಹೃದಯ ಬಡಿತ ಹೆಚ್ಚಾಗುತ್ತದೆ, ಚಡಪಡಿಕೆ ಉಂಟಾಗುತ್ತದೆ ಮತ್ತು ನಿದ್ರೆಯ ಸಮಸ್ಯೆ ಉಂಟಾಗುತ್ತದೆ. ಚಹಾದೊಂದಿಗೆ ಚಾಕೊಲೇಟ್ ತಿನ್ನುವುದರಿಂದ ನಿದ್ರಾ ಹೀನತೆ ಸಮಸ್ಯೆ ಉಂಟಾಗಬಹುದು.

ಚಹಾದೊಂದಿಗೆ ಔಷಧಿಗಳನ್ನು ತೆಗೆದುಕೊಳ್ಳುವುದು: ಕೆಲವರು ಚಹಾದೊಂದಿಗೆ ಔಷಧಿಗಳನ್ನು ನುಂಗುತ್ತಾರೆ, ಇದು ದೊಡ್ಡ ತಪ್ಪು. ಚಹಾದಲ್ಲಿರುವ ಕೆಫೀನ್ ಮತ್ತು ಟ್ಯಾನಿನ್‌ಗಳು ಔಷಧಿಗಳ ಪರಿಣಾಮಕಾರಿತ್ವವನ್ನು ಕಡಿಮೆ ಮಾಡಬಹುದು ಮತ್ತು ಕೆಲವು ಸಂದರ್ಭಗಳಲ್ಲಿ, ಅಡ್ಡಪರಿಣಾಮಗಳನ್ನು ಉಂಟು ಮಾಡಬಹುದು. ಹಾಗಾಗಿ ಔಷಧಿಗಳನ್ನು ಯಾವಾಗಲೂ ನೀರಿನೊಂದಿಗೆ ತೆಗೆದುಕೊಳ್ಳಬೇಕು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version