ಇದು ವಿನಾಶದ ಕಥೆಯಲ್ಲ,ಭಾರತದ ಸ್ವಾಭಿಮಾನದ ಗಾಥೆ, ಸೋಮನಾಥ ದೇವಾಲಯ ದಾಳಿಯ ಬಗ್ಗೆ ಮೋದಿ ಭಾವನಾತ್ಮಕ ಬ್ಲಾಗ್ – Kannada News | PM Modi Highlights Somnath Temple’s Millennium Long Legacy

ನವದೆಹಲಿ, ಜನವರಿ 05: ಸೋಮನಾಥ ದೇವಾಲಯ(Somnath Temple) ದ ಮೇಲಿನ ದಾಳಿಯು ಇತಿಹಾಸದ ಅತ್ಯಂತ ದೊಡ್ಡ ದುರಂತಗಳಲ್ಲಿ ಒಂದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬ್ಲಾಗ್​ನಲ್ಲಿ ಬರೆದಿದ್ದಾರೆ. ಮೊಹಮ್ಮದ್ ಘಜ್ನಿ ಲೂಟಿ ಮಾಡಿ ಹೊರಟುಹೋದ, ಆದರೆ ಅವನಿಗೆ ಸೋಮನಾಥನ ಮೇಲಿನ ನಮ್ಮ ಭಕ್ತಿಯನ್ನು ಕಸಿದುಕೊಳ್ಳಲು ಸಾಧ್ಯವಾಗಲಿಲ್ಲ. ಗುಜರಾತ್‌ನ ಪ್ರಭಾಸ್ ಪಟನ್‌ನಲ್ಲಿರುವ ಸೋಮನಾಥ ದೇವಾಲಯವು ಭಾರತೀಯ ನಂಬಿಕೆ ಮತ್ತು ನಾಗರಿಕತೆಯ ಶಾಶ್ವತ ಸಂಕೇತವಾಗಿದೆ. ಈ ದೇವಾಲಯವು ಪದೇ ಪದೇ ವಿದೇಶಿ ಆಕ್ರಮಣಗಳು ಮತ್ತು ವಿನಾಶಗಳನ್ನು ಎದುರಿಸಿದೆ, ಆದರೆ ಪ್ರತಿ ಬಾರಿಯೂ ಅದನ್ನು ಪುನರ್ನಿರ್ಮಿಸಿ ಅದರ ಪೂರ್ಣ ವೈಭವವನ್ನು ಪುನರುಜ್ಜೀವನಗೊಳಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗೆ ತಮ್ಮ ಬ್ಲಾಗ್‌ನಲ್ಲಿ ಸೋಮನಾಥದ 1,000 ವರ್ಷಗಳಷ್ಟು ಹಳೆಯದಾದ ಕಥೆಯನ್ನು ಹಂಚಿಕೊಂಡಿದ್ದಾರೆ, ಅದರ ಆಧ್ಯಾತ್ಮಿಕ ಮಹತ್ವ, ಪುನರಾವರ್ತಿತ ಆಕ್ರಮಣಗಳ ಸ್ಪೂರ್ತಿದಾಯಕ ಕಥೆ ಮತ್ತು ಸ್ವತಂತ್ರ ಭಾರತದಲ್ಲಿ ಅದರ ಪುನರ್ನಿರ್ಮಾಣವನ್ನು ವಿವರಿಸಿದ್ದಾರೆ. ಈ ದೇವಾಲಯವು ಲಕ್ಷಾಂತರ ಭಕ್ತರಿಗೆ ನಂಬಿಕೆಯ ಕೇಂದ್ರ ಮಾತ್ರವಲ್ಲ, ನಮ್ಮ ನಾಗರಿಕತೆ, ಶಕ್ತಿ ಮತ್ತು ಆತ್ಮ ವಿಶ್ವಾಸದ ಶಾಶ್ವತ ಸಂಕೇತವಾಗಿದೆ ಎಂದು ಬರೆದಿದ್ದಾರೆ.

ಗುಜರಾತ್‌ನ ಪ್ರಭಾಸ್ ಪಠಾಣ್‌ನಲ್ಲಿರುವ ಈ ದೇವಾಲಯವು ಹಿಂದೂ ಧರ್ಮದ 12 ಜ್ಯೋತಿರ್ಲಿಂಗಗಳಲ್ಲಿ ಮೊದಲನೆಯದು. ದ್ವಾದಶ ಜ್ಯೋತಿರ್ಲಿಂಗ ಸ್ತೋತ್ರದಲ್ಲಿ ಇದರ ವಿವರಣೆಯು ಸೌರಾಷ್ಟ್ರ ಸೋಮನಾಥಂ ಚ ಈ ಸಾಲಿನಿಂದ ಪ್ರಾರಂಭವಾಗುತ್ತದೆ. ಅಂದರೆ ಸೋಮನಾಥವು ಜ್ಯೋತಿರ್ಲಿಂಗಗಳಲ್ಲಿ ಅತ್ಯಂತ ಪ್ರಮುಖ ಸ್ಥಾನವನ್ನು ಹೊಂದಿದೆ ಎಂದರ್ಥ.

ಮತ್ತಷ್ಟು ಓದಿ: ಏಷ್ಯಾದ ಅತಿದೊಡ್ಡ ಗಣಪತಿ ದೇವಾಲಯವಿದು; 56 ಅಡಿ ಎತ್ತರದ ಗಣೇಶನಿಗೆ ಇಲ್ಲಿ ವಿಶೇಷ ಪೂಜೆ

ಸೋಮನಾಥಕ್ಕೆ ಭೇಟಿ ನೀಡುವುದರಿಂದ ಎಲ್ಲಾ ಪಾಪಗಳಿಂದ ಮುಕ್ತಿ ಸಿಗುತ್ತದೆ ಮತ್ತು ಆಸೆಗಳನ್ನು ಈಡೇರಿಸುತ್ತದೆ ಎಂದು ಪ್ರಧಾನಿ ಮೋದಿ ತಮ್ಮ ಬ್ಲಾಗ್‌ನಲ್ಲಿ ಬರೆದಿದ್ದಾರೆ.
ಸೋಮನಾಥ ದೇವಾಲಯವು ಇತಿಹಾಸದುದ್ದಕ್ಕೂ ಹಲವಾರು ವಿನಾಶಗಳನ್ನು ಕಂಡಿದೆ. ಮೊದಲ ಮತ್ತು ಅತ್ಯಂತ ಮಹತ್ವದ ದಾಳಿ ಕ್ರಿ.ಶ. 1026 ರಲ್ಲಿ ಮೊಹಮ್ಮದ್ ಘಜ್ನಿಯಿಂದ ನಡೆದಿತ್ತು. ಅವನು ದೇವಾಲಯದ ಪವಿತ್ರ ಜ್ಯೋತಿರ್ಲಿಂಗವನ್ನು ನಾಶಪಡಿಸಿ ಅದನ್ನು ಲೂಟಿ ಮಾಡಿದ್ದ.

ಇನ್ನೂ ಹಲವರ ದಾಳಿ
ಅಲಾವುದ್ದೀನ್ ಖಲ್ಜಿ (1299)

ಜಾಫರ್ ಖಾನ್ (1395)

ಔರಂಗಜೇಬ್ (1706)

ಈ ದಾಳಿಗಳು ಕೇವಲ ಧಾರ್ಮಿಕ ಸ್ಥಳಗಳನ್ನು ನಾಶಮಾಡುವ ಗುರಿಯನ್ನು ಹೊಂದಿಲ್ಲ, ಬದಲಾಗಿ ನಮ್ಮ ಸಮಾಜ ಮತ್ತು ನಾಗರಿಕತೆಯನ್ನು ದುರ್ಬಲಗೊಳಿಸುವ ಗುರಿಯನ್ನು ಹೊಂದಿವೆ ಎಂದು ಪ್ರಧಾನಿ ಮೋದಿ ಬರೆದಿದ್ದಾರೆ. ಪ್ರತಿ ಬಾರಿ ದೇವಾಲಯದ ಮೇಲೆ ದಾಳಿಯಾದಾಗ, ನಮ್ಮ ಪೂರ್ವಜರು ಅದನ್ನು ಪುನರ್ನಿರ್ಮಿಸಿ ಮತ್ತೆ ಜೀವಂತಗೊಳಿಸಿದರು.

ಮೋದಿ ಪೋಸ್ಟ್​

ಆಧ್ಯಾತ್ಮಿಕ ಮತ್ತು ಆರ್ಥಿಕ ಮಹತ್ವ

ಸೋಮನಾಥವು ಅಪಾರ ಆಧ್ಯಾತ್ಮಿಕ ಮತ್ತು ಆರ್ಥಿಕ ಮಹತ್ವವನ್ನು ಹೊಂದಿತ್ತು. ಈ ದೇವಾಲಯವು ಹೆಚ್ಚಿನ ಸಂಖ್ಯೆಯ ಜನರನ್ನು ಆಕರ್ಷಿಸಿತು. ಸಮುದ್ರಯಾನ ವ್ಯಾಪಾರಿಗಳು ಮತ್ತು ನಾವಿಕರು ಅದರ ವೈಭವ ಮತ್ತು ವೈಭವದ ಕಥೆಗಳನ್ನು ದೂರದವರೆಗೆ ಹರಡಿದರು.
ಈ ದಾಳಿಗಳ ಹೊರತಾಗಿಯೂ, ಸೋಮನಾಥ ದೇವಾಲಯವು ಕೇವಲ ವಿನಾಶದ ಸಂಕೇತವಲ್ಲ, ಇದು ಭಾರತ ಮಾತೆಯ ಲಕ್ಷಾಂತರ ಮಕ್ಕಳ ಸ್ವಾಭಿಮಾನ ಮತ್ತು ಅಚಲ ನಂಬಿಕೆಯ ಕಥಾವಸ್ತುವಾಗಿದೆ ಎಂದು ಪ್ರಧಾನಿ ಮೋದಿ ಬರೆದಿದ್ದಾರೆ.

ಸ್ವಾತಂತ್ರ್ಯ ನಂತರದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ನೇತೃತ್ವದಲ್ಲಿ ಸೋಮನಾಥ ದೇವಾಲಯವನ್ನು ಪುನರ್ನಿರ್ಮಿಸಲಾಯಿತು. 1947 ರ ದೀಪಾವಳಿಯ ಸಮಯದಲ್ಲಿ, ಸರ್ದಾರ್ ಪಟೇಲ್ ದೇವಾಲಯಕ್ಕೆ ಭೇಟಿ ನೀಡಿ ಅದನ್ನು ನವೀಕರಿಸಲು ಸಂಕಲ್ಪ ಮಾಡಿದ್ದರು.
ದೇವಾಲಯದ ಭವ್ಯ ಉದ್ಘಾಟನೆಯು ಮೇ 11, 1951 ರಂದು ಅಂದಿನ ರಾಷ್ಟ್ರಪತಿ ಡಾ. ರಾಜೇಂದ್ರ ಪ್ರಸಾದ್ ಅವರ ಸಮ್ಮುಖದಲ್ಲಿ ನಡೆಯಿತು. ಈ ದಿನ ಸರ್ದಾರ್ ಪಟೇಲ್ ಅವರ ಕನಸನ್ನು ನನಸಾಗಿಸಿದ ದಿನ ಎಂದು ಪ್ರಧಾನಿ ಮೋದಿ ಬರೆದಿದ್ದಾರೆ.

ನೆಹರು ಉತ್ಸಾಹ ತೋರಿರಲಿಲ್ಲ

ಆಗಿನ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರು ಈ ಸಮಾರಂಭದ ಬಗ್ಗೆ ಉತ್ಸಾಹ ತೋರಲಿಲ್ಲ, ಇದು ಭಾರತದ ಪ್ರತಿಷ್ಠೆಗೆ ಹಾನಿಕಾರಕ ಎಂದು ಕರೆದರೂ, ರಾಷ್ಟ್ರಪತಿ ಡಾ. ರಾಜೇಂದ್ರ ಪ್ರಸಾದ್ ಅವರು ದೃಢವಾಗಿ ನಿಂತು ಈ ಐತಿಹಾಸಿಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

1890 ರ ದಶಕದಲ್ಲಿ ಸ್ವಾಮಿ ವಿವೇಕಾನಂದರು ಸೋಮನಾಥಕ್ಕೆ ಭೇಟಿ ನೀಡಿದ್ದರು ಎಂದು ಪ್ರಧಾನಿ ಮೋದಿ ತಮ್ಮ ಬ್ಲಾಗ್‌ನಲ್ಲಿ ಉಲ್ಲೇಖಿಸಿದ್ದಾರೆ. ಈ ಅನುಭವ ಅವರ ಮೇಲೆ ತೀವ್ರ ಪರಿಣಾಮ ಬೀರಿತು. 1897 ರಲ್ಲಿ ಚೆನ್ನೈನಲ್ಲಿ ನಡೆದ ತಮ್ಮ ಉಪನ್ಯಾಸದಲ್ಲಿ, ಸೋಮನಾಥ ಮತ್ತು ದಕ್ಷಿಣ ಭಾರತದ ಪ್ರಾಚೀನ ದೇವಾಲಯಗಳು ಜ್ಞಾನದ ಬುತ್ತಿಯನ್ನು ಹೊಂದಿವೆ ಎಂದು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಬೆಂಗಳೂರಿಗರಿಗೆ ಮತ್ತೊಂದು ಶಾಕ್​​: ಇನ್ಮುಂದೆ ರಸ್ತೆ ಬದಿ ವಾಹನ ಪಾರ್ಕಿಂಗ್ ಮಾಡಬೇಕಾದರೆ ಶುಲ್ಕ ಪಾವತಿಸಬೇಕು – Kannada News | Bengaluru Shock: New Parking Charges in CBD, Hebbal, Yelahanka by GBA – Know Rules

ಬೆಂಗಳೂರು, ಜ.5: ಬೆಂಗಳೂರಿಗರಿಗೆ ಮತ್ತೊಂದು ಶಾಕ್ (Bengaluru parking fees)​​ ನೀಡಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಸಿದ್ಧತೆ ಮಾಡಿಕೊಳ್ಳುತ್ತಿದೆ, ಸಿಕ್ಕ ಸಿಕ್ಕ ಕಡೆ ವಾಹನ ನಿಲುಗಡೆ ಮಾಡುವ ಮುನ್ನ ಈ ವಿಚಾರವನ್ನು ತಿಳಿದುಕೊಳ್ಳಲೇಬೇಕು. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಜನರಿಗೆ ಶುಲ್ಕ ವಿಧಿಸುವ ಮೂಲಕ ಬೆಂಗಳೂರು ಜನರಿಗೆ ಪಾರ್ಕಿಂಗ್​​​​​ ರೂಲ್ಸ್​​​ ಮಾಡುವ ನಿಯಮವನ್ನು ಹೇಳಿಕೊಡುವ ಕೆಲಸವನ್ನು ಮಾಡುತ್ತಿದೆ.  ಇನ್ಮುಂದೆ ಸಿಬಿಡಿ, ಹೆಬ್ಬಾಳ ಮತ್ತು ಯಲಹಂಕದಂತಹ ಪ್ರದೇಶಗಳಲ್ಲಿನ ಬೀದಿಗಳಲ್ಲಿ ವಾಹನಗಳ ಪಾರ್ಕಿಂಗ್ ಶುಲ್ಕವನ್ನು ವಿಧಿಸಲು ಪ್ರಾರಂಭಿಸಲಿದೆ. ವಿವಿಧ ವಾಹನಗಳ ಪಾರ್ಕಿಂಗ್ ಶುಲ್ಕಗಳು ನಿಗದಿ ಮಾಡಿದೆ. ಅವುಗಳು ಈ ಕೆಳಂಗಿನಂತಿದೆ.

ನಾಲ್ಕು ಚಕ್ರಗಳ ವಾಹನಗಳ ಪಾರ್ಕಿಂಗ್‌ಗೆ ಗಂಟೆಗೆ 30 ರೂ. ಶುಲ್ಕ ವಿಧಿಸಲಾಗಿದೆ. ದ್ವಿಚಕ್ರ ವಾಹನ ಮಾಲೀಕರು ಗಂಟೆಗೆ 15 ರೂ. ಪಾವತಿಸಬೇಕಾಗುತ್ತದೆ. ದೈನಂದಿನ ಪಾಸ್‌ಗೂ ಅರ್ಜಿ ಸಲ್ಲಿಸಬಹುದು, ಇದು ನಾಲ್ಕು ಚಕ್ರದ ವಾಹನಗಳು ಮತ್ತು ದ್ವಿಚಕ್ರ ವಾಹನಗಳಿಗೆ 150 ಮತ್ತು 75 ರೂ. ಎಂದು ನಿಗದಿ ಮಾಡಿದೆ. ಮಾಸಿಕ ಪಾಸ್‌ಗಳಿಗೆ, ನಾಲ್ಕು ಚಕ್ರಗಳ ವಾಹನ ನಿಲುಗಡೆಗೆ 3,000 ರೂ. ಮತ್ತು ದ್ವಿಚಕ್ರ ವಾಹನಗಳಿಗೆ 1,500 ರೂ. ಪಾವತಿಸಬೇಕಾಗುತ್ತದೆ.

ಇದನ್ನೂ ಓದಿ: ಇನ್‌ಸ್ಟಾಗ್ರಾಮ್‌ನಲ್ಲಿ 2,000 ಫಾಲೋವರ್ಸ್‌ ಗಳಿಸಿದ ಮಹಿಳೆ: ಕೇಕ್​​ ಕಟ್​​ ಮಾಡಿ ಸಂಭ್ರಮಿಸಿದ ಬಾಸ್

ಎಕ್ಸ್​​​​ ವೈರಲ್​ ಪೋಸ್ಟ್​ ಇಲ್ಲಿದೆ ನೋಡಿ:

ಪಾರ್ಕಿಂಗ್ ಶುಲ್ಕ ಸಂಗ್ರಹ ಮಾಡುವ ಪ್ರದೇಶಗಳು:

ಹೆಬ್ಬಾಳ ವಿಭಾಗದ ಟ್ಯಾಂಕ್ ಬಂಡ್ ರಸ್ತೆ, ತರಳಬಾಳು ರಸ್ತೆ ಮತ್ತು ಭೂಪಸಂದ್ರ ಮುಖ್ಯ ರಸ್ತೆ. ಯಲಹಂಕ ಹೊಸ ಪಟ್ಟಣದ ವಾರ್ಡ್ ಸಂಖ್ಯೆ 05 ರಲ್ಲಿ 1 ನೇ ಎ, 13 ನೇ ಎ ಮುಖ್ಯ ರಸ್ತೆಗಳು ಮತ್ತು 3 ನೇ ಬಿ, 16 ನೇ ಬಿ, 15 ನೇ ಎ ಅಡ್ಡ ರಸ್ತೆಗಳು ಮತ್ತು ಸಂದೀಪ್ ಉನ್ನಿಕೃಷ್ಣ ರಸ್ತೆ ಹಾಗೂ ಇತರ ಪ್ರದೇಶಗಳಿಗೂ ಇದನ್ನು ಮುಂದುವರಿಸಲಾಗುವುದು. ಈ ಮೂಲಕ ಸಿಕ್ಕ ಸಿಕ್ಕ ಕಡೆ ಬೇಕಾಬಿಟ್ಟಿ ವಾಹನ ನಿಲುಗಡೆ ಮಾಡುವುದನ್ನು ತಡೆಯುವುದು ಇದರ ಉದ್ದೇಶವಾಗಿದೆ. ಈಗಾಗಲೇ ಜನರು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಕಿರುವ ತೆರಿಗೆ ಹೈರಾಣಾಗಿದ್ದಾರೆ.

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಉತ್ತರ ಕರ್ನಾಟಕದ ಜನಪದ ಕಲಾವಿದರು: ಕಾರಣ ಇಲ್ಲಿದೆ – Kannada News | Uttara Karnataka Artists Demand Ban on Obscene Words in Janapada Songs

ಬಾಗಲಕೋಟೆ, ಜನವರಿ 05: ಉತ್ತರ ಕರ್ನಾಟಕದ ಜನಪದ ಕಲೆಗಳು ತಮ್ಮ ಶ್ರೀಮಂತ ಪರಂಪರೆಗೆ ಹೆಸರುವಾಸಿಯಾಗಿವೆ. ಆದರೆ, ಇತ್ತೀಚೆಗೆ ಹಾಡು, ನೃತ್ಯ ಮತ್ತು ನಾಟಕಗಳಲ್ಲಿ ಅಶ್ಲೀಲ ಪದಗಳ ಬಳಕೆ ಹೆಚ್ಚಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಈ ಕುರಿತು ಉತ್ತರ ಕರ್ನಾಟಕದ ಕಲಾವಿದರೇ ಆಕ್ರೋಶ ವ್ಯಕ್ತಪಡಿಸಿದ್ದು, ಅಶ್ಲೀಲತೆಗೆ ಕಡಿವಾಣ ಹಾಕುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಮನವಿ ಸಲ್ಲಿಸಿದ್ದಾರೆ. ಮ್ಯೂಸಿಕ್ ಮೈಲಾರಿ ಬಂಧನದ ನಂತರ ಈ ವಿಷಯ ಮತ್ತಷ್ಟು ಪ್ರಾಮುಖ್ಯತೆ ಪಡೆದಿದೆ. ಅವರ ಕಾರ್ಯಕ್ರಮಗಳಲ್ಲಿ ವೇದಿಕೆ ಮೇಲೆ ಅಶ್ಲೀಲವಾಗಿ ಮಾತನಾಡಿ ನಿಂದಿಸಿದ ಘಟನೆಗಳು ನಡೆದಿರುವುದು ವರದಿಯಾಗಿತ್ತು. ಈ ಬಂಧನವು ಎಲ್ಲ ಕಲಾವಿದರಿಗೆ ಒಂದು ಪಾಠವಾಗಬೇಕು ಎಂದು ಸಮುದಾಯದ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ. ಆರ್ಕೆಸ್ಟ್ರಾ, ನಾಟಕ, ಆಲ್ಬಮ್ ಸಾಂಗ್, ನೃತ್ಯ ಮತ್ತು ಉಡುಪುಗಳಲ್ಲಿ ಅಶ್ಲೀಲತೆಗೆ ಅವಕಾಶ ನೀಡಬಾರದು ಎಂದು ಒತ್ತಾಯಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Gold Rate Today Bangalore: ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಹೆಚ್ಚಳ – Kannada News | Gold Price Today on 5th January 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಜನವರಿ 5: ವಾರಾಂತ್ಯದಲ್ಲಿ ಸ್ವಲ್ಪ ಇಳಿಕೆ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದು ಸೋಮವಾರ ಭರ್ಜರಿ ಹೆಚ್ಚಳ ಪಡೆದಿವೆ. ವೆನಿಜುವೆಲಾ ಅಧ್ಯಕ್ಷರನ್ನು ಅಮೆರಿಕ ಸೆರೆಹಿಡಿದು ಕರೆದೊಯ್ದ ಘಟನೆ ಬಳಿಕ ಚಿನಿವಾರಪೇಟೆಯಲ್ಲಿ ಸಂಚಲನ ಆದಂತಿದೆ. ಭಾರತದಲ್ಲಿ ಚಿನ್ನದ ಬೆಲೆ (Gold Rates) ಗ್ರಾಮ್​ಗೆ 145 ರೂ ಏರಿಕೆ ಆಗಿದೆ. ಬೆಳ್ಳಿ ಬೆಲೆ 6-8 ರೂ ಏರಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,25,950 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,37,400 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 24,700 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,25,950 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 24,700 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 26,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜನವರಿ 5ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,740 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,595 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,305 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 247 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,740 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,595 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 247 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 12,595 ರೂ
  • ಚೆನ್ನೈ: 12,680 ರೂ
  • ಮುಂಬೈ: 12,595 ರೂ
  • ದೆಹಲಿ: 12,610 ರೂ
  • ಕೋಲ್ಕತಾ: 12,595 ರೂ
  • ಕೇರಳ: 12,595 ರೂ
  • ಅಹ್ಮದಾಬಾದ್: 12,600 ರೂ
  • ಜೈಪುರ್: 12,610 ರೂ
  • ಲಕ್ನೋ: 12,610 ರೂ
  • ಭುವನೇಶ್ವರ್: 12,595 ರೂ

ಇದನ್ನೂ ಓದಿ: ವಾರಕ್ಕೆ ಎರಡು ರಜೆಗೆ ಆಗ್ರಹ: ಬ್ಯಾಂಕ್ ಉದ್ಯೋಗಿಗಳಿಂದ ಜ. 27ರಂದು ರಾಷ್ಟ್ರವ್ಯಾಪಿ ಮುಷ್ಕರ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 560 ರಿಂಗಿಟ್ (12,399 ರುಪಾಯಿ)
  • ದುಬೈ: 483.25 ಡಿರಾಮ್ (11,874 ರುಪಾಯಿ)
  • ಅಮೆರಿಕ: 134.50 ಡಾಲರ್ (12,138 ರುಪಾಯಿ)
  • ಸಿಂಗಾಪುರ: 173.50 ಸಿಂಗಾಪುರ್ ಡಾಲರ್ (12,159 ರುಪಾಯಿ)
  • ಕತಾರ್: 481.50 ಕತಾರಿ ರಿಯಾಲ್ (11,921 ರೂ)
  • ಸೌದಿ ಅರೇಬಿಯಾ: 491 ಸೌದಿ ರಿಯಾಲ್ (11,815 ರುಪಾಯಿ)
  • ಓಮನ್: 51.25 ಒಮಾನಿ ರಿಯಾಲ್ (12,013 ರುಪಾಯಿ)
  • ಕುವೇತ್: 39.34 ಕುವೇತಿ ದಿನಾರ್ (11,550 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 247 ರೂ
  • ಚೆನ್ನೈ: 265 ರೂ
  • ಮುಂಬೈ: 247 ರೂ
  • ದೆಹಲಿ: 247 ರೂ
  • ಕೋಲ್ಕತಾ: 247 ರೂ
  • ಕೇರಳ: 265 ರೂ
  • ಅಹ್ಮದಾಬಾದ್: 247 ರೂ
  • ಜೈಪುರ್: 247 ರೂ
  • ಲಕ್ನೋ: 247 ರೂ
  • ಭುವನೇಶ್ವರ್: 265 ರೂ
  • ಪುಣೆ: 247

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ರಾಜ್ಯದ ದೀರ್ಘಾವಧಿ ಸಿಎಂ ಆಗಲಿದ್ದಾರೆ ಸಿದ್ದರಾಮಯ್ಯ: ದೇವರಾಜ ಅರಸು​​ ದಾಖಲೆ ನಾಳೆ ಬ್ರೇಕ್​​ – Kannada News | Siddaramaiah Set to Break Devaraj Urs Record, Becoming Karnataka’s Longest Serving Chief Minister

ಬೆಂಗಳೂರು, ಜನವರಿ 05: ರಾಜ್ಯದ ದೀರ್ಘಾವಧಿ ಸಿಎಂ ಎಂಬ ಹೆಗ್ಗಳಿಕೆಗೆ ಸಿದ್ದರಾಮಯ್ಯ ಅವರು ಪಾತ್ರರಾಗಲು ಕೇವಲ ಒಂದೇ ದಿನ ಬಾಕಿ ಇದ್ದು, ದೇವರಾಜ ಅರಸು ದಾಖಲೆಯನ್ನು ನಾಳೆ ಮುರಿಯಲಿದ್ದಾರೆ. 7 ವರ್ಷ 239 ದಿನಗಳ ಕಾಲ ಡಿ. ದೇವರಾಜ ಅರಸು ಕರ್ನಾಟಕದ ಸಿಎಂ‌ ಆಗಿದ್ದ‌ರು. ಸಿದ್ದರಾಮಯ್ಯ ಕೂಡ ಇಂದಿಗೆ 7 ವರ್ಷ 239 ದಿನ ಪೂರೈಸಿದ್ದಾರೆ. ಮೂರನೇ ಸ್ಥಾನದಲ್ಲಿ ಎಸ್​. ನಿಜಲಿಂಗಪ್ಪ ಅವರಿದ್ದು, 7 ವರ್ಷ 175 ದಿನಗಳ ಕಾಲ ಅವರು ಮುಖ್ಯಮಂತ್ರಿಗಳಾಗಿ ಸೇವೆ ಸಲ್ಲಿಸಿದ್ದಾರೆ. ಬಳಿಕ 4ನೇ ಸ್ಥಾನದಲ್ಲಿ ರಾಮಕೃಷ್ಣ ಹೆಗಡೆ 5 ವರ್ಷ 216 ದಿನ ಮತ್ತು 5 ವರ್ಷ 82 ದಿ‌ನ ಸಿಎಂ ಆಗಿದ್ದ ಬಿ.ಎಸ್​. ಯಡಿಯೂರಪ್ಪ 5ನೇ ಸ್ಥಾನದಲ್ಲಿದ್ದಾರೆ.

ದೇವರಾಜ ಅರಸು ಅವರು ಸತತವಾಗಿ ಏಳೂವರೆ ವರ್ಷ ಅಧಿಕಾರದಲ್ಲಿದ್ದರೆ ಸಿದ್ದರಾಮಯ್ಯ ಮೊದಲ ಅವಧಿ ಪೂರ್ಣಗೊಂಡ ಬಳಿಕ ಮತ್ತೆ ಕಾಂಗ್ರೆಸ್​​ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರಲಿಲ್ಲ. 2018ರ ವಿಧಾನ ಸಭೆ ಚುನಾವಣೆ ಫಲಿತಾಂಶ ಅತಂತ್ರವಾಗಿದ್ದ ಕಾರಣಕ್ಕೆ ಜೆಡಿಎಸ್​​ ಜೊತೆ ಸೇರಿ ಕಾಂಗ್ರೆಸ್​​ ಮೈತ್ರಿ ಸರ್ಕಾರ ರಚಿಸಿತ್ತು. ಆದರೆ ಕುಮಾರಸ್ವಾಮಿ ಅವರ ನೇತೃತ್ವದ ಸರ್ಕಾರ 14 ತಿಂಗಳಿಗೇ ಪತನವಾಗಿತ್ತು. ಬಳಿಕ ಅಧಿಕಾರಕ್ಕೆ ಬಂದ ಬಿಜೆಪಿಯಿಂದ ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಕ್ರಮವಾಗಿ ಮುಖ್ಯಮಂತ್ರಿಗಳಾಗಿದ್ದರು. ಅದಾದ ಬಳಿಕ 2023ರ ಚುನಾವಣೆಯಲ್ಲಿ ಕಾಂಗ್ರೆಸ್​​ ಸ್ಪಷ್ಟ ಬಹುಮತ ಪಡೆದ ಕಾರಣ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು.

ಇದನ್ನೂ ಓದಿ: ಸಭೆಯನ್ನ ನಗೆ ಗಡಲಲ್ಲಿ ತೇಲಿಸಿದ ಸಿಎಂ ಕುರ್ಚಿ ಮಾತು, ಜೋರಾಗಿ ನಕ್ಕ ಡಿಕೆಶಿ

ಬಜೆಟ್​​ ಮಂಡನೆಯಲ್ಲೂ ದಾಖಲೆ

ಲೋಕದಳ, ಜನತಾ ದಳ ಪಕ್ಷಗಳಲ್ಲಿಯೂ ಈ ಹಿಂದೆ ಇದ್ದ ಸಿದ್ದರಾಮಯ್ಯ 2006ರಲ್ಲಿ ಕಾಂಗ್ರೆಸ್​​ ಸೇರಿ ವಿವಿಧ ಜವಾಬ್ದಾರಿಗಳನ್ನು ನಿಭಾಯಿಸಿದ್ದಾರೆ. ವಿಪಕ್ಷ ನಾಯಕನಿಂದ ಹಿಡಿದು ಮುಖ್ಯಮಂತ್ರಿ ಕುರ್ಚಿಯನ್ನೂ ಇದೀಗ ಎರಡನೇ ಬಾರಿ ಏರಿ ಸರ್ಕಾರ ನಡೆಸುತ್ತಿದ್ದಾರೆ. ರಾಜ್ಯ ಬಜೆಟ್ ಮಂಡನೆಯಲ್ಲೂ ಸಿಎಂ ಸಿದ್ದರಾಮಯ್ಯ ದಾಖಲೆ ಬರೆದಿದ್ದು, ಇದುವರೆಗೂ 16 ಬಜೆಟ್ ಮಂಡಿಸಿದ್ದಾರೆ. ಒಟ್ಟು 13 ಬಜೆಟ್​​ ಮಂಡಿಸಿರುವ ರಾಮಕೃಷ್ಣ ಹೆಗಡೆ ಎರಡನೇ ಸ್ಥಾನದಲ್ಲಿದ್ದಾರೆ.

ಶುಭಾಶಯ ಕೋರಿ ಬ್ಯಾನರ್​

ಸಿಎಂ ಸಿದ್ದರಾಮಯ್ಯನವರು ವಿಶಿಷ್ಠ ದಾಖಲೆ ಬರೆಯುತ್ತಿರುವ ಹಿನ್ನೆಲೆ ಅವರ ಅಭಿಮಾನಿಗಳು ಮತ್ತು ಬೆಂಬಲಿಗರಿಂದ ಸಂಭ್ರಮಾಚರಣೆಗೆ ಅದಾಗಲೇ ತಯಾರಿ ನಡೆದಿದೆ. ದೀರ್ಘವಧಿ ಸಿಎಂ ಆಗಿ ದಾಖಲೆ ಬರೆದ ಸಿದ್ದರಾಮಯ್ಯ ಎಂದು ಶುಭಾಶಯ ಕೋರಿರುವ ಪೋಸ್ಟರ್​​ನ ಅಭಿಮಾನಿಗಳು ಮುಖ್ಯಮಂತ್ರಿಗಳ ನಿವಾಸದ ಬಳಿ ಹಾಕಿದ್ದಾರೆ. ಕಾವೇರಿ ನಿವಾಸದ ಎದುರಿಗಿನ ಸರ್ಕಲ್ ಬಳಿ ಬ್ಯಾನರ್​​ ರಾರಾಜಿಸುತ್ತಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 11:54 am, Mon, 5 January 26

Source link

ಸರಣಿಗೂ ಮುನ್ನ ಟೀಮ್ ಇಂಡಿಯಾಗೆ 15 ದಿನಗಳ ಕ್ಯಾಂಪ್..! – Kannada News | Indian Test captain Shubman Gill has proposed a 15 day camp before each Test series

ಪ್ರತಿ ಟೆಸ್ಟ್ ಸರಣಿಗೂ ಮುನ್ನ ಭಾರತ ತಂಡದ ಆಟಗಾರರು 15 ದಿನಗಳ ಅಭ್ಯಾಸ ಶಿಬಿರದಲ್ಲಿ ಪಾಲ್ಗೊಳ್ಳಲಿದ್ದಾರೆ. ಇಂತಹದೊಂದು ವಿಶೇಷ ಯೋಜನೆಗೆ ಮನವಿ ಮಾಡಿರುವುದು ಟೀಮ್ ಇಂಡಿಯಾದ ನಾಯಕ ಶುಭ್​​ಮನ್ ಗಿಲ್. ಪ್ರತಿ ಟೆಸ್ಟ್ ಸರಣಿಗೂ ಮುನ್ನ ಕ್ಯಾಂಪ್​ ಆಯೋಜಿಸುವಂತೆ ಗಿಲ್ ಬಿಸಿಸಿಐಗೆ ಮನವಿ ಮಾಡಿದ್ದಾರೆ. ಭಾರತ ಟೆಸ್ಟ್ ತಂಡದ ನಾಯಕನ ಈ ಮನವಿಗೆ ಬಿಸಿಸಿಐ ಕಡೆಯಿಂದಲೂ ಗ್ರೀನ್ ಸಿಗ್ನಲ್ ಸಿಕ್ಕಿದೆ ಎಂದು ವರದಿಯಾಗಿದೆ.

ಅದರಂತೆ ಮುಂಬರುವ ಟೆಸ್ಟ್ ಸರಣಿಗಳಿಗೂ ಮುನ್ನ ಟೀಮ್ ಇಂಡಿಯಾ 15 ದಿನಗಳ ಅಭ್ಯಾಸ ಶಿಬಿರಗಳನ್ನು ಆಯೋಜಿಸಲಿದೆ. ಈ ಯೋಜನೆಗಳ ಮೂಲಕ ಬಲಿಷ್ಠ ಟೆಸ್ಟ್ ತಂಡವನ್ನು ರೂಪಿಸುವ ಇರಾದೆಯಲ್ಲಿದ್ದಾರೆ ಶುಭ್​ಮನ್ ಗಿಲ್.

ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ಗರಡಿಯಲ್ಲಿ ಭಾರತ ತಂಡವು ಏಕದಿನ ಮತ್ತು ಟಿ20 ಸರಣಿಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಾ ಬಂದಿದೆ. ಇದಾಗ್ಯೂ ಟೆಸ್ಟ್ ಸರಣಿಗಳಲ್ಲಿ ಟೀಮ್ ಇಂಡಿಯಾ ಪ್ರದರ್ಶನ ಅಷ್ಟಕ್ಕಷ್ಟೇ.

ಅದರಲ್ಲೂ ಇತ್ತೀಚೆಗೆ ನಡೆದ ಸೌತ್ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭಾರತ ತಂಡವು 2-0 ಅಂತರದಿಂದ ಸೋಲನುಭವಿಸಿತ್ತು. ಇದಕ್ಕೂ ಮುನ್ನ ನ್ಯೂಝಿಲೆಂಡ್ ವಿರುದ್ಧ 3-0 ಅಂತರದಿಂದ ಹೀನಾಯವಾಗಿ ಭಾರತ ತಂಡ ಸೋಲೊಪ್ಪಿಕೊಂಡಿತ್ತು.

ಅದು ಕೂಡ 93 ವರ್ಷಗಳ ಬಳಿಕ ಎಂಬುದು ಕಟು ವಾಸ್ತವ. ಅಂದರೆ 93 ವರ್ಷಗಳ ಟೆಸ್ಟ್ ಇತಿಹಾಸದಲ್ಲಿ ಭಾರತ ತಂಡವು ತವರಿನಲ್ಲಿ ಮೂರು ಪಂದ್ಯಗಳ ಸರಣಿಯನ್ನು 3-0 ಅಂತರದಿಂದ ಸೋತಿರಲಿಲ್ಲ. ಆದರೆ ಗಂಭೀರ್ ಕೋಚ್ ಆದ ಬಳಿಕ ಟೀಮ್ ಇಂಡಿಯಾ ನ್ಯೂಝಿಲೆಂಡ್ ವಿರುದ್ಧ 3-0 ಅಂತರದಿಂದ ತವರಿನಲ್ಲಿ ಅವಮಾನಕರ ಸೋಲನುಭವಿಸಿ ಭಾರೀ ಮುಖಭಂಗಕ್ಕೆ ಒಳಗಾಗಿತ್ತು.

ಅಷ್ಟೇ ಅಲ್ಲದೆ ಸೌತ್ ಆಫ್ರಿಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಸೋತಿರುವುದು ಬರೋಬ್ಬರಿ 408 ರನ್​ಗಳ ಅಂತರದಿಂದ. ಇದು ಭಾರತದ ಟೆಸ್ಟ್ ಇತಿಹಾಸದಲ್ಲೇ ಅತ್ಯಂತ ಹೀನಾಯ ಸೋಲು. ಅಂದರೆ ಇದಕ್ಕೂ ಮುನ್ನ ಟೀಮ್ ಇಂಡಿಯಾ ಟೆಸ್ಟ್ ಪಂದ್ಯದಲ್ಲಿ 400+ ರನ್​ಗಳ ಅಂತರದಿಂದ ಸೋತೇ ಇರಲಿಲ್ಲ.

ಈ ಸೋಲುಗಳಿಂದ ಭಾರೀ ಮುಖಭಂಗಕ್ಕೆ ಒಳಗಾಗಿರುವ ಟೀಮ್ ಇಂಡಿಯಾ ಇದೀಗ ಟೆಸ್ಟ್ ಕ್ರಿಕೆಟ್​ಗಾಗಿ ಹೊಸ ಯೋಜನೆ ರೂಪಿಸಿದೆ. ಅದರಂತೆ ಭಾರತ ತಂಡದ ಮುಂದಿನ ಟೆಸ್ಟ್ ಸರಣಿಗಳಿಗೂ ಮುನ್ನ 15 ದಿನಗಳ ಕ್ಯಾಂಪ್ ನಡೆಯಲಿದೆ.

ಈ ಅಭ್ಯಾಸ ಶಿಬಿರಗಳ ಮೂಲಕ ಭಾರತ ತಂಡದ ಯೋಜನೆಗಳನ್ನು ರೂಪಿಸಲು ಶುಭ್​ಮನ್ ಗಿಲ್​ಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲು ಬಿಸಿಸಿಐ ಸಿದ್ಧವಾಗಿದೆ. ಈ ಮೂಲಕ ಯುವ ಪಡೆಯ ಹೊಸ ಯೋಜನೆಗಳೊಂದಿಗೆ ಟೆಸ್ಟ್ ಕ್ರಿಕೆಟ್​ನಲ್ಲಿ ಮತ್ತೆ ಪ್ರಭಾವ ಬೀರಲು ಬಿಸಿಸಿಐ ಕೂಡ ಪ್ಲ್ಯಾನ್ ರೂಪಿಸುತ್ತಿದೆ.

Source link

ಇನ್‌ಸ್ಟಾಗ್ರಾಮ್‌ನಲ್ಲಿ 2,000 ಫಾಲೋವರ್ಸ್‌ ಗಳಿಸಿದ ಮಹಿಳೆ: ಕೇಕ್​​ ಕಟ್​​ ಮಾಡಿ ಸಂಭ್ರಮಿಸಿದ ಬಾಸ್ – Kannada News | Viral Video: Bengaluru Boss Hails Employee’s Instagram Milestone Celebration

ಬೆಂಗಳೂರು, ಜ.5: ಬೆಂಗಳೂರಿನ (Bengaluru) ಕಂಪನಿಯೊಂದರಲ್ಲಿ ನಡೆದ ಹೃದಯಸ್ಪರ್ಶಿ ಕ್ಷಣವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್​​ ಆಗಿದೆ. ಕಾರ್ಪೊರೇಟ್ ಕಂಪನಿಯ ಬಾಸ್​​​ ಒಬ್ಬರು ಇನ್‌ಸ್ಟಾಗ್ರಾಮ್‌ನಲ್ಲಿ ಈ ಬಗ್ಗೆ ಹಂಚಿಕೊಂಡಿದ್ದಾರೆ. ಚಿಕ್ಕ ಯಶಸ್ಸನ್ನು ದೊಡ್ಡದಾಗಿ ಆಚರಿಸಿಕೊಂಡಿರುವ ಕ್ಷಣಕ್ಕೆ ಕಂಪನಿಯೊಂದು ಸಾಕ್ಷಿಯಾಗಿದೆ. ಇನ್‌ಸ್ಟಾಗ್ರಾಮ್​​ನಲ್ಲಿ ಫಾಲೋರ್ವಸ್​​ ಹೆಚ್ಚು ಪಡೆದ ಸಹೋದ್ಯೋಗಿಗಾಗಿ ಈ ವಿಶೇಷ ದಿನವನ್ನು ಉತ್ತಮವಾಗಿ ಆಚರಣೆ ಮಾಡಿಕೊಂಡಿದ್ದಾರೆ. ಈ ವಿಡಿಯೋವನ್ನು ಐಶ್ವರ್ಯ ಎಂಬ ಮಹಿಳೆ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ. 2 ಸಾವಿರ ಫಾಲೋವರ್ಸ್​ಗಳನ್ನು ಪಡೆದುಕೊಂಡದ್ದಕ್ಕಾಗಿ ಕಂಪನಿ ಇದನ್ನು ಸಂಭ್ರಮಿಸಿದೆ.

ಐಶ್ವರ್ಯ ಈ ವಿಡಿಯೋದಲ್ಲಿ ಬಾಸ್​​ ಇರುವ ರೂಮ್​​​​ಗೆ ಹೋಗುವುದನ್ನು ಕಾಣಬಹುದು, ಜತೆಗೆ ಇತರ ಸಹದ್ಯೋಗಿಗಳು ಕೂಡ ಅಲ್ಲಿ ಇದ್ದರು. ಮೊದಲಿಗೆ ಐಶ್ವರ್ಯ ಅವರಿಗೆ ಇಲ್ಲಿ ಏನಾಗುತ್ತಿದೆ ಎಂಬುದು ಅರ್ಥ ಆಗಿಲ್ಲ. ಬಾಸ್​​ ರೂಮ್​​​ನಲ್ಲಿ ಇದ್ದ ಬೋರ್ಡ್​​ನ್ನು ನೋಡಿ ಅಚ್ಚರಿಯಿಂದ ನಗುತ್ತಾರೆ. ಜತೆಗೆ ಮೇಜಿನ ಮೇಲೆ ಇರಿಸಲಾದ ಕೇಕ್ ಅನ್ನು ಗಮನಿಸುತ್ತಾರೆ. ಈ ಕೇಕ್​​ನಲ್ಲಿ “2k ಅನುಯಾಯಿಗಳಿಗೆ ಶುಭಾಶಯಗಳು. ಅಭಿನಂದನೆಗಳು ಐಶು” ಎಂದು ಬರೆದಿದ್ದಾರೆ. ನಂತರ ಐಶ್ವರ್ಯ ತನ್ನ ಬಾಸ್ ಮತ್ತು ತಂಡದ ಸದಸ್ಯರೊಂದಿಗೆ ಕೇಕ್​​ನ್ನು ಕತ್ತರಿಸುತ್ತಾರೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಐಶ್ವರ್ಯ ತನ್ನ ವೃತ್ತಿಪರ ಪ್ರಯಾಣ ಮತ್ತು ಅದರಲ್ಲಿ ತನ್ನ ಬಾಸ್ ವಹಿಸಿದ ಜವಾಬ್ದಾರಿಯನ್ನು ಉತ್ತಮ ನಿಭಾಯಿಸಿದ್ದಾರೆ ಎಂಬುದನ್ನು ಇದು ಪ್ರತಿಬಿಂಬಿಸುತ್ತದೆ. ನನ್ನ ಕಾರ್ಪೊರೇಟ್ ಪ್ರಯಾಣದಲ್ಲಿ ನಾನು ನಿಜವಾಗಿಯೂ ಅದೃಷ್ಟಶಾಲಿ ಎಂದು ಈ ಪೋಸ್ಟ್​​ನಲ್ಲಿ ಹೇಳಿದ್ದಾರೆ. ಒಬ್ಬ ಉತ್ತಮ ಬಾಸ್ ಹೊಸ ವಿಷಯಗಳನ್ನು ಪ್ರಯತ್ನಿಸಲು ನಮ್ಮನ್ನು ಪ್ರೇರೇಪಿಸುತ್ತಾರೆ ಎಂದು ಬರೆದುಕೊಂಡಿದ್ದಾರೆ. ನಮ್ಮ ಬಾಸ್​​ ನಮಗೆ ಅಗತ್ಯವಿರುವ ಬೆಂಬಲವನ್ನು ನೀಡುತ್ತಾರೆ ಮತ್ತು ಬೆಳೆಯಲು ಪುಶ್ ನೀಡುತ್ತಾರೆ. ಅವರ ಈ ಬೆಂಬಲ ಇನ್ನಷ್ಟು ಕಲಿಯಲು, ವೃತ್ತಿಪರವಾಗಿ ಬೆಳೆಯಲು ಮತ್ತು ಹೊಸ ಅವಕಾಶಗಳು ಮತ್ತು ಕೌಶಲ್ಯಗಳನ್ನು ಪಡೆಯಲು ಸಹಾಯ ಮಾಡಿದೆ.

ಇದನ್ನೂ ಓದಿ: ಬೆಂಗಳೂರಿನ ಸಂಚಾರ ಉಲ್ಲಂಘನೆ ಗುರುತಿಸಲು ಹೆಲ್ಮೆಟ್​​ನ್ನು ಟ್ರಾಫಿಕ್ ಪೊಲೀಸ್ ಸಾಧನವಾಗಿ ಪರಿವರ್ತಿಸಿದ ಟೆಕ್ಕಿ

ಇನ್ನು ಈ ವಿಡಿಯೋವನ್ನು ನೋಡಿ ಅನೇಕ ನೆಟ್ಟಿಗರು ಕಮೆಂಟ್​ ಮಾಡಿದ್ದಾರೆ. ಬಾಸ್ ಮತ್ತು ಕೆಲಸದ ಸ್ಥಳದ ಸಂಸ್ಕೃತಿಯನ್ನು ಅನೇಕರು ಶ್ಲಾಘಿಸಿದ್ದಾರೆ. ಬಾಸ್​​ಗಳ ಒತ್ತಡದ ನಡುವೆ ಇಂತಹ ಕೆಲಸದ ಬೆಳವಣಿಗೆಯನ್ನು ಪೋತ್ಸಾಹಿಸುವುದು ಉತ್ತಮ ಎಂದು ಇನ್ನೊಬ್ಬರು ಹೇಳಿದ್ದಾರೆ. ಇದು ತುಂಬಾ ಹೃದಯಸ್ಪರ್ಶಿಯಾಗಿದೆ ಎಂದು ಮತ್ತೊಬ್ಬರು ಹೇಳಿದ್ದಾರೆ. ನನಗೆ ಈ ಕ್ಲಿಪ್ ನಿಜವಾಗಿಯೂ ಇಷ್ಟವಾಯಿತು, ಪ್ರತಿಯೊಬ್ಬರೂ ಅವರಂತಹ ಬಾಸ್ ಅನ್ನು ಬಯಸುತ್ತಾರೆ ಎಂದು ಮತ್ತೊಬ್ಬರು ಹೇಳಿದ್ದಾರೆ.

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ವಾರಕ್ಕೆ ಎರಡು ರಜೆಗೆ ಆಗ್ರಹ: ಬ್ಯಾಂಕ್ ಉದ್ಯೋಗಿಗಳಿಂದ ಜ. 27ರಂದು ರಾಷ್ಟ್ರವ್ಯಾಪಿ ಮುಷ್ಕರ – Kannada News | Bank employees decide nation wide strike on January 27th, demanding 5 day work week

ನವದೆಹಲಿ, ಜನವರಿ 5: ವಾರದ ಕಾರ್ಯದಿನಗಳನ್ನು ಐದಕ್ಕೆ ಮಿತಿಗೊಳಿಸಬೇಕೆಂದು (5 day work wek) ಆಗ್ರಹಿಸಿ ಬ್ಯಾಂಕ್ ಉದ್ಯೋಗಿಗಳು ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ. ಬ್ಯಾಂಕ್ ಉದ್ಯೋಗಿಗಳ ವಿವಿಧ ಒಕ್ಕೂಟಗಳ ವೇದಿಕೆಯಾದ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ (ಯುಎಫ್​ಬಿಯು) ಜನವರಿ 27ರಂದು ರಾಷ್ಟ್ರವ್ಯಾಪಿ ಮುಷ್ಕರ ನಡೆಸುತ್ತಿರುವುದಾಗಿ ಘೋಷಿಸಿದೆ. ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಮಹಾಒಕ್ಕೂಟ (ಎಐಬಿಒಸಿ) ಈ ನಿರ್ಧಾರವನ್ನು ತಿಳಿಸಿ ಜನವರಿ 4ರಂದು ಸುತ್ತೋಲೆ ಹೊರಡಿಸಿದೆ.

ಬ್ಯಾಂಕುಗಳಲ್ಲಿ ಈಗ ಭಾನುವಾರದ ಜೊತೆಗೆ ಎರಡನೇ ಶನಿವಾರ ಮತ್ತು ನಾಲ್ಕನೇ ಶನಿವಾರದ ರಜೆಗಳಿವೆ. ಆದರೆ, ವಾರದ ಅಷ್ಟೂ ಶನಿವಾರ ಮತ್ತು ಭಾನುವಾರಗಳು ವಾರದ ರಜೆಯಾಗಬೇಕು ಎಂಬುದು ಬ್ಯಾಂಕ್ ಉದ್ಯೋಗಿಗಳ ಸಂಘಟನೆಗಳು ಮಾಡುತ್ತಿರುವ ಆಗ್ರಹವಾಗಿದೆ.

ಬಹಳ ದಿನಗಳಿಂದಲೂ ಈ ಬೇಡಿಕೆ ಇದೆ. 2024ರ ಮಾರ್ಚ್​ನಲ್ಲಿ ಬ್ಯಾಂಕ್ ಉದ್ಯೋಗಿಗಳ ವೇತನ ಪರಿಷ್ಕರಣೆ ಸಂಬಂಧ ಬ್ಯಾಂಕ್ ಉದ್ಯೋಗಿಗಳ ಯೂನಿಯನ್​ಗಳು ಹಾಗೂ ಭಾರತೀಯ ಬ್ಯಾಂಕುಗಳ ಸಂಘಟನೆಯಾದ ಐಬಿಎ ನಡುವೆ ನಡೆದ ರಾಜಿಯ ವೇಳೆ ವಾರದ ರಜೆ ವಿಚಾರದ ಬಗ್ಗೆ ಸಮ್ಮತಿ ಕೊಡಲಾಗಿತ್ತು. ಆದರೆ, ಸರ್ಕಾರದಿಂದ ಇನ್ನೂ ಕೂಡ ತೀರ್ಮಾನ ಬಂದಿಲ್ಲ ಎನ್ನುವುದು ಬ್ಯಾಂಕ್ ಉದ್ಯೋಗಿಗಳ ಆಕ್ರೋಶವಾಗಿದೆ.

ಇದನ್ನೂ ಓದಿ: 2025ರಲ್ಲಿ 22,830 ಕೋಟಿ ಯುಪಿಐ ಟ್ರಾನ್ಸಾಕ್ಷನ್; ಡಿಸೆಂಬರ್​ನಲ್ಲಿ 2,160 ಕೋಟಿ ವಹಿವಾಟು

‘ಬ್ಯಾಂಕ್ ಯೂನಿಯನ್​ಗಳ ಮನವಿಗೆ ಸರ್ಕಾರ ಕಿವಿಗೊಡದ ಹಿನ್ನೆಲೆಯಲ್ಲಿ 2026ರ ಜನವರಿ 27ರಂದು ಎಲ್ಲಾ ಬ್ಯಾಂಕುಗಳ ದೇಶವ್ಯಾಪಿ ಮುಷ್ಕರಕ್ಕೆ ಕರೆ ಕೊಡಲು ನಿರ್ಧರಿಸಲಾಗಿದೆ. ಈ ಮುಷ್ಕರವನ್ನು ಯಶಸ್ವಿಗೊಳಿಸಿ’ ಎಂದು ಸುತ್ತೋಲೆಯಲ್ಲಿ ಮನವಿ ಮಾಡಲಾಗಿದೆ.

ದಿನಕ್ಕೆ ಹೆಚ್ಚು ಹೊತ್ತು ಕೆಲಸ ಮಾಡಲು ಸಿದ್ಧ

ಈ ಹಿಂದೆ ನಡೆದ ಸಂಧಾನದ ವೇಳೆ ಬ್ಯಾಂಕ್ ಉದ್ಯೋಗಿಗಳಿಗೆ ವಾರಕ್ಕೆ ಎರಡು ದಿನ ವೀಕಾಫ್ ಕೊಡುವುದಕ್ಕೆ ಬದಲಾಗಿ, ಉದ್ಯೋಗಿಗಳು ದಿನದಲ್ಲಿ 40 ನಿಮಿಷಗಳಷ್ಟು ಹೆಚ್ಚು ಅವಧಿ ಕೆಲಸ ಮಾಡಬೇಕು ಎಂದು ತೀರ್ಮಾನಿಸಲಾಗಿತ್ತು. ಅದಕ್ಕೆ ಯೂನಿಯನ್​ಗಳೂ ಒಪ್ಪಿದ್ದವು. ಬ್ಯಾಂಕ್ ಉದ್ಯೋಗಿಗಳ ವಾರದ ಕೆಲಸದಲ್ಲಿ ಕಡಿಮೆ ಆಗದ ರೀತಿಯಲ್ಲಿ ರಜೆ ಸಂಖ್ಯೆ ಹೆಚ್ಚಿಸುವ ಸೂತ್ರ ಅದಾಗಿತ್ತು.

ಇದನ್ನೂ ಓದಿ: ಎಟಿಎಂಗಳಲ್ಲಿ ಮಾರ್ಚ್ ನಂತರ 500 ರೂ ನೋಟು ಸಿಗಲ್ವಾ? ಸರ್ಕಾರದ ಸ್ಪಷ್ಟನೆ ಇದು

ವಿವಿಧ ಸರ್ಕಾರಿ ಕಚೇರಿಗಳಲ್ಲಿ ವಾರಕ್ಕೆ ಎರಡು ದಿನ ರಜೆ ಇದೆ. ಆರ್​ಬಿಐ, ಎಲ್​​ಐಸಿ, ಷೇರು ವಿನಿಮಯ ಕೇಂದ್ರ ಹೀಗೆ ಅನೇಕ ಕಡೆ ವಾರಕ್ಕೆ ಎರಡು ವೀಕಾಫ್​ಗಳಿವೆ. ಅದರಂತೆ ತಮಗೂ ಎರಡು ದಿನ ರಜೆ ಕೊಡಬೇಕು ಎಂಬುದು ಬ್ಯಾಂಕ್ ಉದ್ಯೋಗಿಗಳ ಆಗ್ರಹವಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

2020 Delhi Riots: ದೆಹಲಿ ಗಲಭೆ ಪ್ರಕರಣ, ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಜಾಮೀನು ಅರ್ಜಿ ವಜಾ – Kannada News | Delhi Riots 2020: Supreme Court Rejects Bail Pleas of Umar Khalid and Sharjeel Imam

ನವದೆಹಲಿ, ಜನವರಿ 05: ದೆಹಲಿಯಲ್ಲಿ 2020ರಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಸಾಮಾಜಿಕ ಕಾರ್ಯಕರ್ತ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಮತ್ತು ಇತರರ ಜಾಮೀನು ಅರ್ಜಿಗಳನ್ನು ಸುಪ್ರೀಂಕೋರ್ಟ್​ ಇಂದು ವಜಾಗೊಳಿಸಿದೆ.  ಡಿಸೆಂಬರ್ 10 ರಂದು, ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ಪೀಠವು, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್ಜಿ) ಎಸ್.ವಿ. ರಾಜು ಮತ್ತು ಹಿರಿಯ ವಕೀಲರಾದ ಕಪಿಲ್ ಸಿಬಲ್, ಅಭಿಷೇಕ್ ಸಿಂಘ್ವಿ, ಸಿದ್ಧಾರ್ಥ ದವೆ, ಸಲ್ಮಾನ್ ಖುರ್ಷಿದ್ ಮತ್ತು ಸಿದ್ಧಾರ್ಥ್ ಲೂಥ್ರಾ ಅವರ ವಾದಗಳನ್ನು ಆಲಿಸಿದ ನಂತರ ತೀರ್ಪನ್ನು ಕಾಯ್ದಿರಿಸಿತ್ತು.

ಮಾಹಿತಿ ಶೀಘ್ರ ಅಪ್​ಡೇಟ್ ಆಗಲಿದೆ

Source link

ದಾಖಲೆಯ ಶತಕದೊಂದಿಗೆ ವಿಶ್ವ ದಾಖಲೆಯತ್ತ ಮುನ್ನುಗ್ಗಿದ ಜೋ ರೂಟ್ – Kannada News | Joe Root goes level with Ricky Ponting on 41 Test hundreds

ಆ್ಯಶಸ್ ಸರಣಿಯ 5ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ಜೋ ರೂಟ್ ಭರ್ಜರಿ ಶತಕ ಸಿಡಿಸಿದ್ದಾರೆ. ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ಸ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಕೇವಲ 57 ರನ್ ಗಳಿಸುವಷ್ಟರಲ್ಲಿ ಅಗ್ರ ಕ್ರಮಾಂಕದ ಮೂವರು ಬ್ಯಾಟರ್ ಗಳು ಪೆವಿಲಿಯನ್ ಗೆ ಮರಳಿದ್ದರು.

ಈ ಹಂತದಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಜೋ ರೂಟ್, ಹ್ಯಾರಿ ಬ್ರೂಕ್ ಜೊತೆಗೂಡಿ ಇನಿಂಗ್ಸ್ ಕಟ್ಟಿದರು. ಪರಿಣಾಮ 5ನೇ ವಿಕೆಟ್‌ಗೆ 169 ರನ್ ಗಳ ಜೊತೆಯಾಟ ಮೂಡಿಬಂತು.

ಇದರ ನಡುವೆ 97 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 6 ಫೋರ್ ಗಳೊಂದಿಗೆ 84 ರನ್ ಬಾರಿಸಿದ ಹ್ಯಾರಿ ಬ್ರೂಕ್ ಔಟಾದರು. ಇದಾಗ್ಯೂ ಮತ್ತೊಂದೆಡೆ ಜವಾಬ್ದಾರಿಯುತ ಇನಿಂಗ್ಸ್ ಕಟ್ಟಿದ ಜೋ ರೂಟ್ ಆಕರ್ಷಕ ಶತಕ ಪೂರೈಸಿದರು.

ಈ ಶತಕದೊಂದಿಗೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ಸೆಂಚುರಿ ಸಿಡಿಸಿದ ವಿಶ್ವದ ಮೂರನೇ ಬ್ಯಾಟರ್ ಎನಿಸಿಕೊಂಡರು. ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್.

  • ಸಚಿನ್ ತೆಂಡೂಲ್ಕರ್ ಟೆಸ್ಟ್ ಕ್ರಿಕೆಟ್‌ನಲ್ಲಿ ಒಟ್ಟು 51 ಶತಕ ಬಾರಿಸಿದ್ದಾರೆ.
  • ಸೌತ್ ಆಫ್ರಿಕಾದ ಜಾಕ್ಸ್ ಕಾಲಿಸ್ ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದ್ದು, ಒಟ್ಟು 45 ಸೆಂಚುರಿ ಸಿಡಿಸಿದ್ದಾರೆ.
  • ಜೋ ರೂಟ್ 41 ಟೆಸ್ಟ್ ಶತಕಗಳೊಂದಿಗೆ ಇದೀಗ ಈ ಪಟ್ಟಿಯಲ್ಲಿ ಮೂರನೇ ಸ್ಥಾನ ಅಲಂಕರಿಸಿದ್ದಾರೆ.

ಇನ್ನು ಈ ಪಂದ್ಯದಲ್ಲಿ 242 ಎಸೆತಗಳನ್ನು ಎದುರಿಸಿದ ಜೋ ರೂಟ್ 15 ಫೋರ್ ಗಳೊಂದಿಗೆ ಒಟ್ಟು 160 ರನ್ ಕಲೆಹಾಕಿದರು. 160 ರನ್ ಗಳೊಂದಿಗೆ ಟೆಸ್ಟ್ ಕ್ರಿಕೆಟ್ ನ ರನ್ ಸಂಖ್ಯೆಯನ್ನು 13937 ಕ್ಕೇರಿಸಿದ್ದಾರೆ.

ಇದನ್ನೂ ಓದಿ: ಟಿ೨೦ ಕ್ರಿಕೆಟ್‌ನಲ್ಲಿ ಹಿಂದೆಂದೂ ಕಂಡರಿಯದ ವಿಶ್ವ ದಾಖಲೆ ನಿರ್ಮಿಸಿದ ಸ್ಪೇನ್

ಜೋ ರೂಟ್ ಇನ್ನು 1984 ರನ್ ಗಳಿಸಿದರೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ. ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ದಾಖಲೆಗಳ ಸರದಾರ ಸಚಿನ್ ತೆಂಡೂಲ್ಕರ್. ಸಚಿನ್ ಟೆಸ್ಟ್ ಕ್ರಿಕೆಟ್‌ನಲ್ಲಿ ಒಟ್ಟು 15921 ರನ್ ಗಳಿಸಿ ಈ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಇಂಗ್ಲೆಂಡ್ ಆಲೌಟ್:

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ತಂಡವು ಜೋ ರೂಟ್ ಅವರ ಶತಕದ ನೆರವಿನೊಂದಿಗೆ ಒಟ್ಟು 384 ರನ್ ಗಳಿಸಿ ಆಲೌಟ್ ಆಗಿದೆ. ಆಸ್ಟ್ರೇಲಿಯಾ ಪರ ಮೈಕೆಲ್ ನೇಸರ್ 4 ವಿಕೆಟ್ ಪಡೆದರೆ, ಮಿಚೆಲ್ ಸ್ಟಾರ್ಕ್ ಹಾಗೂ ಸ್ಕಾಟ್ ಬೋಲ್ಯಾಂಡ್ ತಲಾ 2 ವಿಕೆಟ್ ಕಬಳಿಸಿದ್ದಾರೆ.

Published On – 11:26 am, Mon, 5 January 26

Source link

Exit mobile version