ದಾವಣಗೆರೆ (ಮಾರ್ಚ್ 23): ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ರಂಗೇರಿದ್ದು, ಇಂದು (ಮಾರ್ಚ್ 23) ಕಾಂಗ್ರೆಸ್ ಅಧಿಕೃತ ಅಭ್ಯರ್ಥಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರೊಂದಿಗೆ ಅಧಿಕೃತವಾಗಿ ನಾಮಪತ್ರ ಸಲ್ಲಿಸಿದರು. ಆದರೆ, ಈ ಪ್ರಮುಖ ಕಾರ್ಯಕ್ರಮದಿಂದ ಸಚಿವ ಜಮೀರ್ ಅಹಮದ್ ಖಾನ್ ದೂರ ಉಳಿದಿರುವುದು ಕಾಂಗ್ರೆಸ್ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಇದರ ಮಧ್ಯೆ ಕಾಂಗ್ರೆಸ್ ಬಂಡಾಯದ ಅಭ್ಯರ್ಥಿಯಾಗಿ ಮುಸ್ಲಿಂ ಸಮುದಾಯದ ಸಾದಿಕ್ ಪೈಲ್ವಾನ್ ಸಹ ನಾಮಪತ್ರ ಸಲ್ಲಿಸಿದ್ದಾರೆ. ಈ ಮೂಲಕ ಮುಸ್ಲಿಂ ಸಮುದಾಯ ಕಾಂಗ್ರೆಸ್ ವಿರುದ್ಧ ಸಿಡಿದೆದ್ದಿದೆ.
ಮುಸ್ಲಿಮ್ ಸಮುದಾಯದ ಟಿಕೆಟ್ಗೆ ಬೇಡಿಕೆ ಇಟ್ಟಿತ್ತು. ಆದ್ರೆ, ಟಿಕೆಟ್ ಕೈತಪ್ಪಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಸಾದಿಕ್ ಪೈಲ್ವಾನ್, ಸ್ವಪಕ್ಷದ ವಿರುದ್ಧವೇ ತೊಡೆತಟ್ಟಿದ್ದು, ಯಾವುದೇ ಕಾರಣಕ್ಕೂ ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಸವಾಲು ಹಾಕಿದ್ದಾರೆ.
ಬೆಳಗಾವಿ, ಮಾರ್ಚ್ 23: ಹೆಂಡತಿ ಮಲಗಿರುವಾಗಲೇ ಎಳೆದೊಯ್ದು ನಡುರಸ್ತೆಯಲ್ಲಿ ಕಲ್ಲಿನಿಂದ ಜಜ್ಜಿ ಗಂಡ ಬರ್ಬರವಾಗಿ ಹತ್ಯೆ (kill) ಮಾಡಿರುವಂತಹ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಗೋವನಕೊಪ್ಪ ಗ್ರಾಮದಲ್ಲಿ ನಡೆದಿದೆ. ತಾಯಿಗೆ ಬೈದಿದ್ದಕ್ಕೆ ಮತ್ತು ಪತ್ನಿ ಶೀಲ ಶಂಕಿಸಿ ಕೊಲೆ ಬಸವರಾಜ ಜೋಡಳ್ಳಿಯಿಂದ ಶಿವಕ್ಕ ಜೋಡಳ್ಳಿ( 33)ಯ ಕೊಲೆ ಮಾಡಲಾಗಿದೆ. ಈ ಭಯಾನಕ ಘಟನೆಗೆ ಗೋವನಕೊಪ್ಪ ಗ್ರಾಮವೇ ಬೆಚ್ಚಿಬಿದ್ದಿದೆ. ದೊಡವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರೀತಿಸಿ ಮದುವೆಯಾದ ಹೆಂಡತಿಗೆ ಚಟ್ಟಕಟ್ಟಿದ ಪತಿ
ಮೊದಲ ಗಂಡ ಅಕಾಲಿಕ ಮರಣದ ನಂತರ ಶಿವಕ್ಕ ಬಸವರಾಜ ಜೋಡಳ್ಳಿಯನ್ನ ಪ್ರೀತಿಸಿ ರಿಜಿಸ್ಟರ್ ಮ್ಯಾರೇಜ್ ಆಗಿದ್ದರು. ಇಬ್ಬರು 15 ವರ್ಷಗಳ ಹಿಂದೆ ಪರಸ್ಪರ ಪ್ರೀತಿಸಿ ಅಂತರ್ಜಾತಿ ವಿವಾಹ ಮಾಡಿಕೊಂಡಿದ್ದರು. ಆದರೆ ಗಂಡನ ಕಿರುಕುಳಕ್ಕೆ ಬೇಸತ್ತ ಶಿವಕ್ಕ ತನ್ನಿಬ್ಬರು ಮಕ್ಕಳ ಜೊತೆಗೆ ಪ್ರತ್ಯೇಕವಾಗಿ ಮಠವೊಂದರಲ್ಲಿ ವಾಸವಾಗಿದ್ದರು.
ಇಬ್ಬರು ಮಕ್ಕಳ ಜೊತೆಗೆ ವಾಸವಾಗಿದ್ದ ಶಿವಕ್ಕ, ಮೊದಲ ಮಗಳನ್ನ ಗಂಡನ ಮನೆಯಲ್ಲಿ ಬಿಟ್ಟಿದ್ದಳು. ಮಗಳನ್ನ ಸರಿಯಾಗಿ ನೋಡಿಕೊಳ್ಳುತ್ತಿಲ್ಲ ಅಂತಾ ಅತ್ತೆ ಜೊತೆಗೆ ಫೊನ್ನಲ್ಲಿ ಜಗಳವಾಡಿದ್ದಾರೆ. ತಾಯಿಗೆ ಬೈದಿದ್ದಕ್ಕೆ ಮತ್ತು ಪತ್ನಿ ಶೀಲ ಶಂಕಿಸಿ ಶಿವಕ್ಕ ಮಲಗಿದಾಗಲೇ ಎಳೆದೊಯ್ದು ನಡುರಸ್ತೆಯಲ್ಲಿ ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಆ ಮೂಲಕ ಪ್ರೀತಿಸಿ ಮದುವೆಯಾದ ಹೆಂಡತಿಗೆ ಪತಿ ಚಟ್ಟ ಕಟ್ಟಿದ್ದಾನೆ.
ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
ಇನ್ನು ಘಟನೆ ಬಗ್ಗೆ ಪ್ರತ್ಯಕ್ಷದರ್ಶಿಯೊಬ್ಬರು ಪ್ರತಿಕ್ರಿಯಿಸಿದ್ದು, ಬೆಳಗ್ಗೆ ಸುಮಾರು 7:30ರ ಸುಮಾರಿಗೆ ಘಟನೆ ನಡೆದಿದೆ. ಮೊದಲು ಪತ್ನಿ ಮೇಲೆ ಹಲ್ಲೆ ಮಾಡಿದ್ದು, ನಂತರ ಚಾಕುವಿನಿಂದ ಇರಿದಿದ್ದಾನೆ. ಬಳಿಕ ಕಲ್ಲಿನಿಂದ ಬಜ್ಜಿ ಕೊಂದಿದ್ದಾನೆ. ಈ ದಂಪತಿಗೆ ಇಬ್ಬರು ಗಂಡು ಹಾಗೂ ಒಬ್ಬಳು ಹೆಣ್ಣು ಮಗಳಿದ್ದಾಳೆ. ಹೆಣ್ಣು ಮಗಳು ಸದ್ಯ ಅವರ ತಾಯಿಯ ಸಹೋದರನ ಬಳಿ ಇದ್ದಾಳೆ.
ಪತಿ ಬಸವರಾಜ್ ಜೋಡಳ್ಳಿ ವೃತ್ತಿಯಲ್ಲಿ ಡ್ರೈವರ್ ಆಗಿದ್ದಾನೆ. ಈ ದಂಪತಿ ಆಗಾಗ ಜಗಳವಾಡುತ್ತಿದ್ದು, ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ಜಗಳದಿಂದಾಗಿ ಪತಿ ಊರು ಬಿಟ್ಟು ಹೋಗಿದ್ದ. ಇತ್ತೀಚೆಗಷ್ಟೇ ಗ್ರಾಮಕ್ಕೆ ಮರಳಿದ್ದ. ಕಳೆದ ಎರಡು-ಮೂರು ವರ್ಷಗಳಿಂದ ಇಬ್ಬರೂ ಬೇರೆ ಬೇರೆಯಾಗಿ ವಾಸಿಸುತ್ತಿದ್ದರು ಎಂದು ಹೇಳಿದ್ದಾರೆ.
ಪವನ್ ಕಲ್ಯಾಣ್ ನಟನೆಯ ‘ಉಸ್ತಾದ ಭಗತ್ ಸಿಂಗ್’ ಸಿನಿಮಾದ ಗಳಿಕೆ ಹೀನಾಯ ಮಟ್ಟ ತಲುಪಿದೆ. ನಾಲ್ಕು ದಿನಕ್ಕೆ ಚಿತ್ರ ಅಂದುಕೊಂಡಷ್ಟು ಗಳಿಕೆ ಮಾಡಿಲ್ಲ. ನಾಲ್ಕು ದಿನಕ್ಕೆ 60 ಕೋಟಿ ರೂಪಾಯಿ ಗಳಿಕೆ ದಾಟಲು ಕೂಡ ಚಿತ್ರದ ಬಳಿ ಸಾಧ್ಯವಾಗಿಲ್ಲ. ಇನ್ನು, ಎರಡನೇ ದಿನದಿಂದ ಸಿಂಗಲ್ ಡಿಜಿಟಲ್ನಲ್ಲೇ ಸಿನಿಮಾ ಕುಂಟುತ್ತಾ ಸಾಗುತ್ತಿದೆ. ಈ ಮೊದಲು ರಿಲೀಸ್ ಆಗಿ ಸೋತ ‘ಹರಿ ಹರ ವೀರ ಮಲ್ಲು’ ಚಿತ್ರಕ್ಕಿಂತ ಈ ಸಿನಿಮಾದ ಸ್ಥಿತಿ ಹೀನಾಯವಾಗಿದೆ.
‘ಧುರಂಧರ್ 2’ ಸಿನಿಮಾ ಸೂಪರ್ ಹಿಟ್ ಆಗಿದೆ. ಉತ್ತರ ಭಾರತ ಮಾತ್ರವಲ್ಲದೆ, ದಕ್ಷಿಣ ಭಾರತದಲ್ಲೂ ಸಿನಿಮಾ ಅಬ್ಬರಿಸುತ್ತಿದೆ. ಈ ಸಿನಿಮಾ ರಿಲೀಸ್ ಆದ ದಿನವೇ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ತೆರೆಗೆ ಬಂತು.‘ಧುರಂಧರ್ 2’ ಪ್ರಭಾವ ‘ಉಸ್ತಾದ್ ಭಗತ್ ಸಿಂಗ್’ ಮೇಲೆ ಆಗುತ್ತಿದೆ. ಪವನ್ ಚಿತ್ರ ಮೊದಲ ದಿನ 34 ಕೋಟಿ ರೂಪಾಯಿ ಗಳಿಕೆ ಮಾಡಿತು. ಆದರೆ, ದಿನ ಕಳೆದಂತೆ ಸಿನಿಮಾದ ಅಬ್ಬರ ಕಡಿಮೆ ಆಗಿದೆ. ಭಾನುವಾರವೂ ಚಿತ್ರ ಡಬಲ್ ಡಿಜಿಟ್ ಗಳಿಸಲು ಸಾಧ್ಯವಾಗುತ್ತಿಲ್ಲ.
ಭಾರತದಲ್ಲಿ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ 60 ಕೋಟಿ ರೂಪಾಯಿ ಗಳಿಸಿದೆ. ಮೊದಲ ದಿನ ಈ ಚಿತ್ರ 34 ಕೋಟಿ ರೂಪಾಯಿ ಗಳಿಸಿದ್ದಷ್ಟೇ ಬಂತು. ಶುಕ್ರವಾರ ಸಿನಿಮಾ 9 ಕೋಟಿ ರೂಪಾಯಿ ಗಳಿಸಿತು. ಶನಿವಾರ ಕೂಡ 9 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ವಿಚಿತ್ರ ಎಂದರೆ, ಭಾನುವಾರ ಕೂಡ ಚಿತ್ರಕ್ಕೆ 8 ಕೋಟಿ ರೂಪಾಯಿ ಗಳಿಕೆ ಆಗಿದೆ.
ಸಿನಿಮಾಗೆ ಮೊದಲ ದಿನ 4,607 ಶೋ ನೀಡಲಾಗಿದೆ. ಎರಡನೇ ದಿನ 3,447, ಮೂರನೇ ದಿನ 3,340 ಹಾಗೂ ಭಾನುವಾರ 3200 ಶೋಗಳನ್ನು ಮಾತ್ರ ನೀಡಲಾಗಿದೆ. ದಿನಕಳೆದಂತೆ ಸಿನಿಮಾಗೆ ಶೋಗಳ ಸಂಖ್ಯೆ ಕಡಿಮೆ ಮಾಡಲಾಗಿದೆ. ಇದನ್ನು ‘ಧುರಂಧರ್ 2’ ಚಿತ್ರಕ್ಕೆ ನೀಡಲಾಗಿದೆ ಎನ್ನಲಾಗಿದೆ.
ಇತ್ತೀಚೆಗೆ ರಿಲೀಸ್ ಆದ ‘ಹರಿ ಹರ ವೀರ ಮಲ್ಲು’ ಚಿತ್ರ ಹೀನಾಯವಾಗಿ ಸೋತಿತ್ತು. ಈ ಸಿನಿಮಾ ಕೂಡ ಮೊದಲ ದಿನ 34 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು. ಭಾನುವಾರ ರೀ ಚಿತ್ರದ ಗಳಿಕೆ ಕೊಂಚವಾದರೂ ಏರಿತ್ತು. ಆದರೆ, ‘ಉಸ್ತಾದ್ ಭಗತ್ ಸಿಂಗ್’ ಚಿತ್ರಕ್ಕೆ ಹಾಗಾಗುತ್ತಿಲ್ಲ.
ಆದಿತ್ಯ ಧರ್ ನಿರ್ದೇಶನದ ‘ಧುರಂಧರ್ 2’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿರುವುದಷ್ಟೇ ಅಲ್ಲದೆ, ಅದರ ‘ಪೀಕ್ ಡಿಟೇಲಿಂಗ್’ (Peak Detailing) ನಿಂದಾಗಿ ಸಿನೆಮಾ ಪ್ರೇಮಿಗಳ ಮೆಚ್ಚುಗೆಗೆ ಪಾತ್ರವಾಗಿದೆ. ಅದರಲ್ಲೂ ಎಸ್‌ಪಿ ಅಸ್ಲಾಂ ಅವರ ಹತ್ಯೆಯ ದೃಶ್ಯವು 2014ರಲ್ಲಿ ನಡೆದ ನೈಜ ಘಟನೆಯನ್ನು ಯಥಾವತ್ತಾಗಿ ಪ್ರತಿಬಿಂಬಿಸಿದೆ ಎಂಬುದು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಸಿನಿಮಾದಲ್ಲಿ ಎಸ್‌ಪಿ ಅಸ್ಲಾಂ ಅವರನ್ನು ಗುರಿಯಾಗಿಸಿಕೊಂಡು ನಡೆದ ದಾಳಿಯ ಪ್ರತಿಯೊಂದು ಹಂತವು 2014ರ ಸಿಸಿಟಿವಿ/ಡ್ಯಾಶ್‌ಕ್ಯಾಮ್ ದೃಶ್ಯಗಳನ್ನೇ ಹೋಲುತ್ತದೆ. ನಿರ್ದೇಶಕ ಆದಿತ್ಯ ಧರ್ ಅವರು ಈ ದೃಶ್ಯಕ್ಕಾಗಿ ತಿಂಗಳುಗಟ್ಟಲೆ ಸಂಶೋಧನೆ ನಡೆಸಿದ್ದಾರೆ. ವಾಸ್ತವದಲ್ಲಿ ನಡೆದ ಗುಂಡಿನ ಚಕಮಕಿ, ದಾಳಿಕೋರರ ಚಲನವಲನ ಮತ್ತು ಅಂದಿನ ಭೀಕರ ವಾತಾವರಣವನ್ನು ಸಿನಿಮಾದಲ್ಲಿ ಮರುಸೃಷ್ಟಿಸಲಾಗಿದೆ. 2014ರ ಆ ನೈಜ ವಿಡಿಯೋ ಮತ್ತು ಸಿನಿಮಾದ ಕ್ಲಿಪ್‌ಗಳನ್ನು ಒಟ್ಟಾಗಿ ಸೇರಿಸಿ ನೆಟ್ಟಿಗರು “Masterpiece Research” ಎಂದು ಶ್ಲಾಘಿಸುತ್ತಿದ್ದಾರೆ. ಇದೀಗ ಈ ಬಗ್ಗೆ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಗದಗ, ಮಾರ್ಚ್ 23: ಬಡತನದ ಕಾರಣದಿಂದ ಹಲವಡೆ ವಿದ್ಯಾರ್ಥಿಗಳು ಶಾಲಾ ಕಾಲೇಜುಗಳನ್ನು ಬಿಟ್ಟು ಕೂಲಿ ಕೆಲಸಕ್ಕೆ ಹೋಗುತ್ತಾರೆ. ಓದಿ, ಪರೀಕ್ಷೆ ಬರೆದು ವಿದ್ಯಾವಂತರಾಗಬೇಕಾದ ಸಮಯದಲ್ಲಿ ಕುಟುಂಬಕ್ಕೆ ನೆರವಾಗಿ ಶಿಕ್ಷಣದಿಂದ (Education)ವಂಚಿತರಾಗುತ್ತಾರೆ. ಇದೇ ರೀತಿಯ ಘಟನೆ ಗದಗದಲ್ಲೂ ನಡೆದಿದ್ದು, ಶಿಕ್ಷಣ ಇಲಾಖೆಯ ಅಧಿಕಾರಿಗಳ ನಡೆಗೆ ಈಗ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ವಿಜ್ಞಾನ ಪರೀಕ್ಷೆಯನ್ನು ಯಶಸ್ವಿಯಾಗಿ ಬರೆದ ವಿದ್ಯಾರ್ಥಿನಿ
ಜಿಲ್ಲೆಯ ಮುಂಡರಗಿ ತಾಲೂಕಿನ ಪೇಠಾಲೂರು ಗ್ರಾಮದಲ್ಲಿ ಬಡತನದ ಕಾರಣ ಎಸ್‌ಎಸ್‌ಎಲ್‌ಸಿ ಪರೀಕ್ಷೆ ತ್ಯಜಿಸಿ ಕೂಲಿ ಕೆಲಸಕ್ಕೆ ತೆರಳಿದ್ದ ವಿದ್ಯಾರ್ಥಿನಿಯನ್ನು ಶಿಕ್ಷಣ ಇಲಾಖೆ ಅಧಿಕಾರಿಗಳು ಹುಡುಕಿ ಕರೆತಂದು ಪರೀಕ್ಷೆ ಬರೆಸಿದ ಘಟನೆ ನಡೆದಿದೆ.
ಪಲ್ಲವಿ ಹಳ್ಳಿಕೇರಿ ಎಂಬ ವಿದ್ಯಾರ್ಥಿನಿ ಮುಂಡರಗಿ ತಾಲೂಕಿನ ಬರದೂರು ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ವ್ಯಾಸಂಗ ಮಾಡುತ್ತಿದ್ದಳು. ಮುಂಡರಗಿ ಪಟ್ಟಣದ ವಿಜಿ ಲಿಂಬಿಕಾಯಿ ಶಿಕ್ಷಣ ಸಂಸ್ಥೆಯಲ್ಲಿ ಪರೀಕ್ಷಾ ಕೇಂದ್ರ ನಿಗದಿಯಾಗಿತ್ತು. ಆದರೆ ಮನೆಯ ಆರ್ಥಿಕ ಸಂಕಷ್ಟದಿಂದ ಪಲ್ಲವಿ ದ್ರಾಕ್ಷಿ ತೋಟಕ್ಕೆ ಕೂಲಿ ಕೆಲಸಕ್ಕೆ ತೆರಳಿದ್ದಳು.
ಈ ವಿಚಾರ ತಿಳಿದ ಕ್ಷೇತ್ರ ಶಿಕ್ಷಣಾಧಿಕಾರಿ ಗಂಗಾಧರ ಅಣ್ಣಿಗೇರಿ ಅವರು ತಕ್ಷಣ ಕ್ರಮ ಕೈಗೊಂಡು, ವಿದ್ಯಾರ್ಥಿನಿಯನ್ನು ಮನವೊಲಿಸಿ ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ನಂತರ ಆಕೆ ವಿಜ್ಞಾನ ಪರೀಕ್ಷೆಯನ್ನು ಯಶಸ್ವಿಯಾಗಿ ಬರೆದಿದ್ದಾಳೆ.ಅಧಿಕಾರಿಗಳ ಈ ಮಾನವೀಯ ನಡೆಗೆ ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.
ನವದೆಹಲಿ, ಮಾರ್ಚ್ 23: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡೆಯುತ್ತಿರುವ ಕಾರಣ ಎಲ್ಪಿಜಿ, ಪೆಟ್ರೋಲ್ ಹಾಗೂ ರಸಗೊಬ್ಬರಗಳ ಮೇಲೆ ಸ್ವಲ್ಪ ಪ್ರಮಾಣದ ಪರಿಣಾಮ ಬೀರಿದೆ. ಆದರೆ ದೇಶದಲ್ಲಿ ರಸಗೊಬ್ಬರಗಳ ಸಾಕಷ್ಟು ಸಂಗ್ರಹವಿದ್ದು, ಯಾವುದೇ ಕಾರಣಕ್ಕೂ ರೈತರಿಗೆ ತೊಂದರೆಯಾಗಲು ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಭರವಸೆ ನೀಡಿದ್ದಾರೆ. ಲೋಕಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ರೈತರು ಈಗ ಡೀಸೆಲ್ ಮೇಲಿನ ಅವಲಂಬನೆ ಕಡಿಮೆಯಾಗಿದೆ ಎಂದು ಹೇಳಿದ್ದಾರೆ.
ಜಾಗತಿಕ ಆರ್ಥಿಕತೆ ಮೇಲೆ ದುಷ್ಪರಿಣಾಮ
ಯುದ್ಧವು ಇಡೀ ಜಾಗತಿಕ ಆರ್ಥಿಕತೆಯ ಮೇಲೆ ಪರಿಣಾಮ ಬೀರುತ್ತಿದೆ, ಹೆಚ್ಚಿನ ಪ್ರಮಾಣದ ಕಚ್ಚಾ ತೈಲ ಮತ್ತು ಅನಿಲ ಮಧ್ಯಪ್ರಾಚ್ಯದಿಂದ ಬರುತ್ತಿದೆ, ಆದ್ದರಿಂದ ಈ ಯುದ್ಧದ ಬಗ್ಗೆ ಭಾರತದ ಕಳವಳ ಸಹಜ. ಯುದ್ಧ ಪ್ರಾರಂಭವಾದಾಗಿನಿಂದ, ಪೀಡಿತ ದೇಶಗಳಲ್ಲಿರುವ ಪ್ರತಿಯೊಬ್ಬ ಭಾರತೀಯರಿಗೂ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲಾಗಿದೆ ಎಂದರು.
ಪಶ್ಚಿಮ ಏಷ್ಯಾದ ಪರಿಸ್ಥಿತಿ ಚಿಂತಾಜನಕವಾಗಿದೆ, ಈ ಬಿಕ್ಕಟ್ಟನ್ನು ಆದಷ್ಟು ಬೇಗ ಕೊನೆಗೊಳಿಸಲು ಪರಿಹಾರ ಕಂಡುಕೊಳ್ಳುವಂತೆ ಇಡೀ ಜಗತ್ತಿಗೆ ಮನವಿ ಮಾಡಲಾಗಿದೆ.
ಪಶ್ಚಿಮ ಏಷ್ಯಾದ ಸ್ಥಿತಿ ಚಿಂತಾಜನಕ
ಪಶ್ಚಿಮ ಏಷ್ಯಾದ ಪ್ರಸ್ತುತ ಪರಿಸ್ಥಿತಿ ಚಿಂತಾಜನಕವಾಗಿದೆ, ಕಳೆದ ಎರಡು ಮೂರು ವಾರಗಳಲ್ಲಿ, ವಿದೇಶಾಂಗ ಸಚಿವ ಜೈಶಂಕರ್ ಮತ್ತು ಸಚಿವ ಹರ್ದೀಪ್ ಪುರಿ ಈ ವಿಷಯದ ಬಗ್ಗೆ ಸಂಸತ್ತಿಗೆ ಪ್ರಮುಖ ಮಾಹಿತಿಯನ್ನು ಒದಗಿಸಿದ್ದಾರೆ. ಈ ಬಿಕ್ಕಟ್ಟು ಈಗ ಮೂರು ವಾರಗಳಿಗೂ ಹೆಚ್ಚು ಕಾಲ ಮುಂದುವರೆದಿದೆ. ಇದು ಜಾಗತಿಕ ಆರ್ಥಿಕತೆ ಮತ್ತು ಜನರ ಜೀವನದ ಮೇಲೆ ವಿನಾಶಕಾರಿ ಪರಿಣಾಮವನ್ನು ಬೀರುತ್ತಿದೆ. ಆದ್ದರಿಂದ, ಇಡೀ ಜಗತ್ತು ಎಲ್ಲಾ ಪಕ್ಷಗಳು ಈ ಬಿಕ್ಕಟ್ಟನ್ನು ಸಾಧ್ಯವಾದಷ್ಟು ಬೇಗ ಪರಿಹರಿಸುವಂತೆ ಒತ್ತಾಯಿಸುತ್ತಿದೆ.
ಹಾರ್ಮುಜ್ ಜಲಸಂಧಿ
ಕಚ್ಚಾ ತೈಲ, ಅನಿಲ ಮತ್ತು ರಸಗೊಬ್ಬರಗಳು ಹಾರ್ಮುಜ್ ಜಲಸಂಧಿಯ ಮೂಲಕ ಭಾರತಕ್ಕೆ ಬರುತ್ತವೆ, ಈ ಪ್ರದೇಶದ ಮೂಲಕ ಹಡಗುಗಳು ಪ್ರಯಾಣಿಸಲು ಕಷ್ಟಪಡುತ್ತಿವೆ. ಇಂತಹ ಪರಿಸ್ಥಿತಿಯಲ್ಲಿ, ಸರಬರಾಜುಗಳಿಗೆ ಅಡ್ಡಿಯಾಗದಂತೆ ಭಾರತ ಸರ್ಕಾರ ಪ್ರಯತ್ನಗಳನ್ನು ಮಾಡುತ್ತಿದೆ. ದೇಶದ ಸಾಮಾನ್ಯ ನಾಗರಿಕರು ಯಾವುದೇ ಸಮಸ್ಯೆಗಳನ್ನು ಎದುರಿಸಬಾರದು. ಭಾರತವು ತನ್ನ ಎಲ್‌ಪಿಜಿಯ 60 ಪ್ರತಿಶತವನ್ನು ಆಮದು ಮಾಡಿಕೊಳ್ಳುತ್ತದೆ. ಆದ್ದರಿಂದ, ದೇಶದಲ್ಲಿ ಅದರ ಉತ್ಪಾದನೆಗೆ ಆದ್ಯತೆ ನೀಡಲಾಗುತ್ತಿದೆ.
ಸರ್ಕಾರವು ವಿವಿಧ ದೇಶಗಳ ಪೂರೈಕೆದಾರರೊಂದಿಗೆ ಸಂಪರ್ಕದಲ್ಲಿದೆ ಎಂದು ಪ್ರಧಾನಿ ಮೋದಿ ಹೇಳಿದರು. ತೈಲ ಮತ್ತು ಅನಿಲ ಸರಬರಾಜು ಸಾಧ್ಯವಾದಲ್ಲೆಲ್ಲಾ ಹರಿಯುವಂತೆ ನೋಡಿಕೊಳ್ಳಲು ಪ್ರಯತ್ನಗಳು ನಡೆಯುತ್ತಿವೆ. ಕೊಲ್ಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪರ್ಯಾಯ ಮಾರ್ಗಗಳ ಮೇಲೆ ಸರ್ಕಾರ ನಿಗಾ ಇಡುತ್ತಿದೆ. ಎಲ್ಲಾ ಅಗತ್ಯ ವಸ್ತುಗಳು ಭಾರತವನ್ನು ಸುರಕ್ಷಿತವಾಗಿ ತಲುಪುವುದನ್ನು ಖಚಿತಪಡಿಸಿಕೊಳ್ಳಲು ನಾವು ಶ್ರಮಿಸುತ್ತಿದ್ದೇವೆ. ಇತ್ತೀಚಿನ ದಿನಗಳಲ್ಲಿ ಹಲವಾರು ಹಡಗುಗಳು ಭಾರತಕ್ಕೆ ಬಂದಿವೆ.
ಯುದ್ಧಪೀಡಿತ ರಾಷ್ಟ್ರಗಳೊಂದಿಗೆ ಭಾರತ ವ್ಯಾಪಕ ವ್ಯಾಪಾರ ಸಂಬಂಧ ಹೊಂದಿದೆ
ಈ ಯುದ್ಧವು ಭಾರತಕ್ಕೆ ಅಭೂತಪೂರ್ವ ಸವಾಲುಗಳನ್ನು ಒಡ್ಡಿದೆ. ಈ ಸವಾಲುಗಳು ಆರ್ಥಿಕ, ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಮತ್ತು ಮಾನವೀಯವಾಗಿವೆ. ಯುದ್ಧದಲ್ಲಿರುವ ಮತ್ತು ಯುದ್ಧದಿಂದ ಪ್ರಭಾವಿತವಾಗಿರುವ ದೇಶಗಳೊಂದಿಗೆ ಭಾರತವು ವ್ಯಾಪಕವಾದ ವ್ಯಾಪಾರ ಸಂಬಂಧವನ್ನು ಹೊಂದಿದೆ. ಈ ಯುದ್ಧ ನಡೆಯುತ್ತಿರುವ ಪ್ರದೇಶವು ಪ್ರಪಂಚದಾದ್ಯಂತದ ಇತರ ದೇಶಗಳೊಂದಿಗೆ ನಮ್ಮ ವ್ಯಾಪಾರಕ್ಕೆ ಪ್ರಮುಖ ಮಾರ್ಗವಾಗಿದೆ. ನಿರ್ದಿಷ್ಟವಾಗಿ ಹೇಳುವುದಾದರೆ, ಈ ಪ್ರದೇಶವು ನಮ್ಮ ಕಚ್ಚಾ ತೈಲ ಮತ್ತು ಅನಿಲ ಅಗತ್ಯಗಳಲ್ಲಿ ಹೆಚ್ಚಿನ ಭಾಗವನ್ನು ಪೂರೈಸುತ್ತದೆ.
ಯುದ್ಧದಲ್ಲಿ ಮೃತಪಟ್ಟ ಭಾರತೀಯರ ಕುಟುಂಬಗಳಿಗೆ ಸಹಾಯ
ಈ ಯುದ್ಧ ಪ್ರಾರಂಭವಾದಾಗಿನಿಂದ, ಪೀಡಿತ ಪ್ರದೇಶಗಳಲ್ಲಿರುವ ಪ್ರತಿಯೊಬ್ಬ ಭಾರತೀಯನಿಗೂ ಅಗತ್ಯ ನೆರವು ನೀಡಲಾಗಿದೆ. ನಾನು ವೈಯಕ್ತಿಕವಾಗಿ ಪಶ್ಚಿಮ ಏಷ್ಯಾದ ಹೆಚ್ಚಿನ ರಾಷ್ಟ್ರಗಳ ಮುಖ್ಯಸ್ಥರೊಂದಿಗೆ ಎರಡು ಸುತ್ತಿನ ಫೋನ್ ಕರೆಗಳ ಮೂಲಕ ಮಾತನಾಡಿದ್ದೇನೆ. ಎಲ್ಲರೂ ಭಾರತೀಯರ ಸುರಕ್ಷತೆಯ ಸಂಪೂರ್ಣ ಭರವಸೆ ನೀಡಿದ್ದಾರೆ. ದುರದೃಷ್ಟವಶಾತ್, ಈ ಸಮಯದಲ್ಲಿ ಕೆಲವರು ದುರಂತವಾಗಿ ಸಾವನ್ನಪ್ಪಿದ್ದಾರೆ ಮತ್ತು ಇತರರು ಗಾಯಗೊಂಡಿದ್ದಾರೆ. ಇಂತಹ ಕಠಿಣ ಸಂದರ್ಭಗಳಲ್ಲಿ, ಅವರ ಕುಟುಂಬಗಳಿಗೆ ಸಹಾಯವನ್ನು ನೀಡಲಾಗುತ್ತಿದೆ.
ಪೂರೈಕೆಯ ಮೇಲೆ ಪರಿಣಾಮ ಬೀರದಂತೆ ನೋಡಿಕೊಳ್ಳುವುದು ನಮ್ಮ ಆದ್ಯತೆ
ಸರ್ಕಾರವು ಸೂಕ್ಷ್ಮ, ಜಾಗರೂಕ ಮತ್ತು ಎಲ್ಲಾ ಸಹಾಯವನ್ನು ನೀಡಲು ಸಿದ್ಧವಾಗಿದೆ. ಭಾರತವು ಹಾರ್ಮುಜ್ ಜಲಸಂಧಿಯ ಮೂಲಕ ಕಚ್ಚಾ ತೈಲ, ಅನಿಲ ಮತ್ತು ರಸಗೊಬ್ಬರಗಳು ಸೇರಿದಂತೆ ಹೆಚ್ಚಿನ ಪ್ರಮಾಣದ ಅಗತ್ಯ ಸರಕುಗಳನ್ನು ಪಡೆಯುತ್ತದೆ. ಯುದ್ಧದ ನಂತರ, ಜಲಸಂಧಿಯ ಮೂಲಕ ಸಾಗಣೆ ಹೆಚ್ಚು ಸವಾಲಿನದಾಗಿದೆ. ಇದರ ಹೊರತಾಗಿಯೂ, ನಮ್ಮ ಸರ್ಕಾರವು ಪೆಟ್ರೋಲ್, ಡೀಸೆಲ್ ಮತ್ತು ಅನಿಲದ ಸರಬರಾಜಿನ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರದಂತೆ ನೋಡಿಕೊಳ್ಳುವತ್ತ ಗಮನಹರಿಸಿದೆ. ಕೊರೊನಾ ಸಮಯದಲ್ಲಿ ಎಲ್ಲರೂ ಒಗ್ಗಟ್ಟಾಗಿ ಸಮಸ್ಯೆಗಳನ್ನು ಎದುರಿಸಿದಂತೆ ಈಗಲೂ ಕೂಡ ಎಲ್ಲರೂ ಒಗ್ಗಟ್ಟಾಗಿ ಇರಬೇಕು ಎಂದರು.
ಕಲಬುರ್ಗಿ, ಮಾರ್ಚ್ 23: ಜಿಲ್ಲೆಯ ವಿಶ್ವವಿದ್ಯಾಲಯದ ಖಜಾನೆಗೆ ಕನ್ನ ಬಿದ್ದಿದ್ದು, ಸಿಬ್ಬಂದಿಗೆ ಸಂಬಳ ನೀಡುವ ಜವಾಬ್ದಾರಿ ಹೊತ್ತ ಅಕೌಂಟಂಟ್ನಿಂದಲೇ ಈ ವಂಚನೆ (Fraud) ನಡೆದಿದೆ. ಆತ ತನ್ನ ವೈಯಕ್ತಿಕ ಖಾತೆಗೆ ಲಕ್ಷಾಂತರ ಹಣ ವರ್ಗಾಯಿಸಿಕೊಂಡಿದ್ದಾನೆ ಎಂದು ಆರೋಪಿಸಲಾಗಿದ್ದು, ಈ ಬಗ್ಗೆ ಯಾವುದೇ ದೂರು ದಾಖಲಾಗದೇ ಇರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ಅನುಮಾನಕ್ಕೆ ಎಡೆಮಾಡಿಕೊಟ್ಟ ಕುಲಪತಿಗಳ ಹೇಳಿಕೆ!
ಕಲಬುರ್ಗಿ ವಿವಿಯ ಎಲ್ಲಾ ಸಿಬ್ಬಂದಿಗೆ ಸಂಬಳ ಕೊಡಬೇಕಾದ ಅಕೌಂಟೆಂಟ್ ಶರಣು, ತನ್ನ ವೈಯಕ್ತಿಕ ಖಾತೆಗೆ ಲಕ್ಷಾಂತರ ರೂಪಾಯಿ ವರ್ಗಾವಣೆ ಮಾಡಿಕೊಂಡಿದ್ದು ವಿವಾದಕ್ಕೆ ಕಾರಣವಾಗಿದೆ. ಅದಕ್ಕೂ ಹೆಚ್ಚಾಗಿ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯು ಈ ಬಗ್ಗೆ ದೂರು ದಾಖಲಿಸದೆ ಕುಳಿತಿರುವುದು ಹಲವು ಪ್ರಶ್ನೆಗಳನ್ನು ಹುಟ್ಟಿಹಾಕಿದೆ.
ಅಕೌಂಟಂಟ್ ಶರಣು ತನಗೆ ಬೇಕಾದ ವ್ಯಕ್ತಿಗಳಿಗೆ ಹೆಚ್ಚುವರಿ ಟಿಎ,ಡಿಎ ಹಾಕಿದ್ದೇನೆ ಎಂದು ವಿವಿಯ ಖಾತೆಯಿಂದ ಲಕ್ಷ ಲಕ್ಷ ಹಣ ಸಂದಾಯ ಮಾಡಿದ್ದ. ಬಳಿಕ ಅವರಿಗೆ ಪೋನ್ ಮಾಡಿ ಆ ಹಣವನ್ನು ವಾಪಸ್ ತನ್ನ ವಯುಕ್ತಿಕ ಖಾತೆಗೆ ಹಾಕಿಕೊಂಡು ಮೋಸ ಮಾಡಿದ್ದ. ಆ ಮೋಸದ ಹಣವೇ ಅಂದಾಜು ಬರೋಬ್ಬರಿ ಒಂದು ಕೋಟಿವರೆಗೂ ಆಗಬಹುದು ಎಂದು ಈ ಮೊದಲು ವಿವಿ ಕುಲಪತಿಗಳೇ ಹೇಳಿದ್ದರು. ವಿವಿಯ ಲೆಕ್ಕ ಪತ್ರ ಸಮೀತಿ ಅಡಿಟ್ ವೇಳೆ ಈ ಅಕ್ರಮ ಹಣದ ವರ್ಗಾವಣೆ ಬಹಿರಂಗರ ಗೊಂಡಿತ್ತು. ಹೀಗಿದ್ದರೂ ಈ ಬಗ್ಗೆ ಯಾವುದೇ ದೂರು ದಾಖಲಾಗದೇ ಇರುವುದು ಅನುಮಾನಗಳಿಗೆ ಕಾರಣವಾಗಿತ್ತು.
ಘಟನೆ ನಡೆದಾಗ ಕೋಟ್ಯಂತರ ರೂಪಾಯಿ ವಹಿವಾಟು ನಡೆದಿದೆ ಎಂದಿದ್ದ ಕುಲಪತಿಗಳು ಈಗ ತನಿಖೆಯಲ್ಲಿ ಕೇವಲ 24 ಲಕ್ಷ ರೂಪಾಯಿ ಅಕ್ರಮ ವರ್ಗಾವಣೆ ನಡೆದಿದೆ ಎಂದು ಹೇಳಿದ್ದಾರೆ ಎಂಬುದು ತಿಳಿದು ಬಂದಿದೆ. ಅಕೌಂಟಂಟ್ ಶರಣು ಈಗಾಗಲೇ ಕೆಲಸಿದಿಂದ ವಜಾಗೊಂಡಿದ್ದಾನೆ.ಆದರೆ ತನಿಖೆಯಲ್ಲಿ ಕುಲಸಚಿವರ ಹೇಳಿಕೆಗಳಿಂದ ಅನುಮಾನ ಹುಟ್ಟಿದೆ ಎಂದು ಅಧಿಕಾರಿಗಳು ಹೇಳುತ್ತಾರೆ.
ನವದೆಹಲಿ, ಮಾರ್ಚ್ 23: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಜಾಗತಿಕವಾಗಿ ಆಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆತಂಕ ವ್ಯಕ್ತಪಡಿಸಿದ್ದಾರೆ. ಸಂಸತ್ನಲ್ಲಿ ಇಂದು ಪ್ರಧಾನಿಗಳು ಪಶ್ಚಿಮ ಏಷ್ಯಾ ಯುದ್ಧ ಹಾಗೂ ತೈಲ ಬಿಕ್ಕಟ್ಟಿನ ಕುರಿತು ಮಾತನಾಡುತ್ತಾ, ತಮ್ಮ ಸರ್ಕಾರ ಈ ಬಿಕ್ಕಟ್ಟು ಎದುರಿಸಲು ಮಾಡುತ್ತಿರುವ ಪ್ರಯತ್ನಗಳನ್ನು ವಿವರಿಸಿದ್ದಾರೆ. ಹಾರ್ಮುಜ್ ಸ್ಟ್ರೇಟ್ಗೆ ತಡೆಯಾಗಿರುವುದರಿಂದ ತೈಲ ಮತ್ತು ಅನಿಲ ಪೂರೈಕೆಯನ್ನು ಸಾಧ್ಯವಿರುವೆಡೆಯೆಲ್ಲಾ ಪಡೆಯಲಾಗುತ್ತಿದೆ ಎಂದು ಹೇಳಿದ್ದಾರೆ.
ಯುದ್ಧ ನಡೆಯುತ್ತಿರುವ ಪ್ರದೇಶದಲ್ಲಿ ಭಾರತದ ಜಾಗತಿಕ ವ್ಯಾಪಾರದ ಪ್ರಮುಖ ಮಾರ್ಗ ಇದೆ. ಭಾರತಕ್ಕೆ ಬೇಕಾದ ತೈಲ ಮತ್ತು ಅನಿಲ ಪೂರೈಕೆಯ ಮೂಲವೂ ಇಲ್ಲಿದೆ ಎಂದು ನರೇಂದ್ರ ಮೋದಿ ತಿಳಿಸಿದ್ದಾರೆ.
‘ಹಾರ್ಮುಜ್ ಜಲಸಂಧಿಯಲ್ಲಿ ಹಡಗುಗಳ ಸಂಚಾರ ಕಠಿಣವಾಗಿದೆ. ಕಚ್ಛಾ ತೈಲ ಮತ್ತು ರಸಗೊಬ್ಬರ ಪೂರೈಕೆ ಮೇಲೆ ಪರಿಣಾಮ ಬಿದ್ದಿದೆ. ಸರ್ಕಾರವು ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದು, ಹೆಚ್ಚಿನ ವ್ಯತ್ಯಯ ಆಗದಂತೆ ಎಚ್ಚರ ವಹಿಸುತ್ತಿದೆ. ಜನರು ಅನುಭವಿಸುತ್ತಿರುವ ಕಷ್ಟವನ್ನು ಕಡಿಮೆ ಮಾಡುವುದು ಸರ್ಕಾರದ ಆದ್ಯತೆಯಾಗಿದೆ’ ಎಂದು ಮೋದಿ ವಿವರಿಸಿದ್ದಾರೆ.
ಯುದ್ಧದಿಂದಾಗಿ ಭಾರತ ಮಾತ್ರವಲ್ಲ, ಜಾಗತಿಕವಾಗಿಯೂ ತೈಲ ಹಾಗೂ ಅನಿಲ ಬಿಕ್ಕಟ್ಟು ಪರಿಸ್ಥಿತಿ ಉದ್ಭವವಾಗಿದೆ. ಇದು ಎಲ್ಲಾ ದೇಶಗಳಿಗೂ ಸವಾಲಿನ ಸ್ಥಿತಿ ತಂದಿದೆ. ಇರಾನ್ ಯುದ್ಧ ಸದ್ಯಕ್ಕೆ ಮುಗಿಯುವ ಲಕ್ಷಣ ಕಾಣುತ್ತಿಲ್ಲ. ಈ ಹೊತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯರನ್ನುದ್ದೇಶಿಸಿ ಮಾತನಾಡಿದ್ದಾರೆ. ಬಿಕ್ಕಟ್ಟು ಉದ್ಭವಗೊಂಡ ಬಳಿಕ ಮೊದಲ ಬಾರಿಗೆ ಪ್ರಧಾನಿಗಳು ಸಂಸತ್ನಲ್ಲಿ ಆ ಬಗ್ಗೆ ಮಾತನಾಡಿರುವುದು.
ದೇಶದ ಜನರನ್ನು ಉದ್ದೇಶಿಸಿ ಮೋದಿ ಅವರು ಈ ಮೊದಲು ಮಾತನಾಡದೇ ಹೋದರೂ ತೈಲ ಮತ್ತು ಅನಿಲ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ನಿರಂತರ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ತೈಲ ಮತ್ತು ಗ್ಯಾಸ್ ಪೂರೈಕೆಗೆ ಇರಾನ್ ಜೊತೆಗೂ ಮಾತನಾಡುತ್ತಿದ್ದಾರೆ. ಇತರ ಪರ್ಯಾಯ ಮಾರುಕಟ್ಟೆಗಳನ್ನೂ ಮುಟ್ಟುತ್ತಿದ್ದಾರೆ.
ಈ ಬಿಕ್ಕಟ್ಟಿನ ಪರಿಸ್ಥಿತಿ ಎದುರಿಸಲು ಪ್ರಧಾನಿಯವರು ಸಚಿವರು ಹಾಗೂ ಕಾರ್ಯದರ್ಶಿಗಳ ಒಂದು ತಂಡವನ್ನು ರಚಿಸಲು ನಿರ್ದೇಶನ ನೀಡಿದ್ದಾರೆ. ಎಲ್ಪಿಜಿ ಲಭ್ಯತೆ ಹೆಚ್ಚಿಸಲು ವಿವಿಧ ಮಾರ್ಗೋಪಾಯಗಳನ್ನು ಹುಡುಕಲಾಗುತ್ತಿದೆ.
ಬೆಂಗಳೂರು, ಮಾ.23: ಸಿಲಿಕಾನ್ ಸಿಟಿಯ ಬಿಟಿಎಂ ರಸ್ತೆಯಲ್ಲಿ (BTM Road) ಸಂಚಾರಿ ನಿಯಮಗಳನ್ನು ಗಾಳಿಗೆ ತೂರಿದ ಯುವಕರ ಗುಂಪೊಂದು ಅತಿರೇಖಾದ ವರ್ತನೆ ತೋರಿದ್ದಾರೆ. ಸ್ಕೂಟರ್‌ನಲ್ಲಿ ಮೂವರು ಯುವಕರು ಹೆಲ್ಮೆಟ್ ಇಲ್ಲದೆ ‘ಟ್ರಿಪಲ್ ರೈಡಿಂಗ್’ ಮಾಡುತ್ತಿರುವುದಲ್ಲದೆ, ಚಲಿಸುವ ವಾಹನದಲ್ಲೇ ಬಿಯರ್ ಕುಡಿಯುತ್ತಾ ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಮೂವರು ಯುವಕರು ಯಾವುದೇ ಭಯವಿಲ್ಲದೆ ಸ್ಕೂಟರ್‌ನಲ್ಲಿ ತೆರಳುತ್ತಿದ್ದು, ಹಿಂಬದಿ ಕುಳಿತಿದ್ದ ಯುವಕ ಬಿಯರ್ ಬಾಟಲಿ ಹಿಡಿದು ಮದ್ಯಪಾನ ಮಾಡುತ್ತಾ ವಿಕೃತವಾಗಿ ಕೈ ಸನ್ನೆಗಳನ್ನು ಮಾಡುತ್ತಿದ್ದಾನೆ. ಈ ಯುವಕರು ಟ್ರಿಪಲ್ ರೈಡಿಂಗ್, ಹೆಲ್ಮೆಟ್ ರಹಿತ ಪ್ರಯಾಣ ಮತ್ತು ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನದಂತಹ ಗಂಭೀರ ಅಪರಾಧಗಳನ್ನು ಎಸಗಿದ್ದಾರೆ. ಇವರ ಈ ಬೇಜವಾಬ್ದಾರಿ ವರ್ತನೆ ಸ್ವತಃ ಅವರಿಗಷ್ಟೇ ಅಲ್ಲದೆ, ರಸ್ತೆಯಲ್ಲಿ ಹೋಗುವ ಇತರ ಸಾರ್ವಜನಿಕರಿಗೂ ಪ್ರಾಣಾಪಾಯ ತಂದೊಡ್ಡುವಂತಿತ್ತು. ಈ ದೃಶ್ಯವನ್ನು ಹಿಂದಿನಿಂದ ಬರುತ್ತಿದ್ದ ಕಾರಿನ ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಹಿಡಿಯಲಾಗಿದ್ದು, @karnatakaportf ಎಂಬ ಎಕ್ಸ್ (X) ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವಿಡಿಯೋವನ್ನು ಬೆಂಗಳೂರು ಸಂಚಾರಿ ಪೊಲೀಸರಿಗೆ ಟ್ಯಾಗ್ ಮಾಡಲಾಗಿದ್ದು, ಕಠಿಣ ಕ್ರಮಕ್ಕೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.ವಿಡಿಯೋ ಗಮನಿಸಿರುವ ಬೆಂಗಳೂರು ಸಂಚಾರಿ ಪೊಲೀಸರು (BTP), ವಾಹನ ಸಂಖ್ಯೆಯನ್ನು ಆಧರಿಸಿ ಎಫ್‌ಐಆರ್ ದಾಖಲಿಸಲು ಮತ್ತು ಆರೋಪಿಗಳನ್ನು ಪತ್ತೆಹಚ್ಚಲು ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ದಾವಣಗೆರೆ, ಮಾರ್ಚ್ 23: ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡದ ಕಾರಣ ದಾವಣಗೆರೆ (Davanagere) ದಕ್ಷಿಣ ಉಪಚುನಾವಣೆಯಲ್ಲಿ ಬಂಡಾಯದ ಬಿಸಿ ಎದುರಿಸುತ್ತಿರುವ ಕಾಂಗ್ರೆಸ್ (Congress), ಇವುಗಳೆಲ್ಲದರ ನಡುವೆಯೂ ಸೋಮವಾರ ಒಗ್ಗಟ್ಟು ಪ್ರದರ್ಶನ ಮಾಡಿತು. ಮಾಜಿ ಸಚಿವ, ಶಾಸಕ ಶಾಮನೂರು ಶಿವಶಂಕರಪ್ಪ ಮೊಮ್ಮಗ ಸಮರ್ಥ್ ಶಾಮನೂರು (Samarth Shamanur) ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಇದೇ ವೇಳೆ, ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಸಚಿವರು ಒಗ್ಗಟ್ಟು ಪ್ರದರ್ಶಿಸಿದರು. ಅಲ್ಪಸಂಖ್ಯಾತ ನಮ್ಮ ಜತೆಗಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರೆ, ಮುಸ್ಲಿಮರು ಟಿಕೆಟ್ ಕೇಳಿದ್ದರಲ್ಲಿ ತಪ್ಪಿಲ್ಲ. ಆದರೆ ನಾವು ಒಗ್ಗಟ್ಟಾಗಿದ್ದೇವೆ, ಚುನಾವಣೆ ಗೆಲ್ಲುತ್ತೇವೆ ಎಂದು ಡಿಕೆ ಶಿವಕುಮಾರ್ ಹೇಳಿದರು.
ಸಿದ್ದರಾಮಯ್ಯ ಹೇಳಿದ್ದೇನು?
ಕಾಂಗ್ರೆಸ್ ಪಕ್ಷವು ಜಾತಿ, ಧರ್ಮದ ಆಧಾರದ ಮೇಲೆ ರಾಜಕೀಯ ಮಾಡುವುದಿಲ್ಲ. ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಪಕ್ಷ ಬಲಿಷ್ಠವಾಗಿದ್ದು, ಇದು ಎಲ್ಲರನ್ನೂ ಒಳಗೊಳ್ಳುವ, ಸಮಗ್ರ ಅಭಿವೃದ್ಧಿಯಲ್ಲಿ ನಂಬಿಕೆ ಇಟ್ಟಿರುವ ಪಕ್ಷವಾಗಿದೆ. ಶಾಮನೂರು ಶಿವಶಂಕರಪ್ಪ ಮತ್ತು ಎಸ್.ಎಸ್. ಮಲ್ಲಿಕಾರ್ಜುನ್ ಪಕ್ಷಕ್ಕೆ ದಾವಣಗೆರೆಯಲ್ಲಿ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.
ಸಿದ್ದರಾಮಯ್ಯ ಮಾತಿನ ವಿಡಿಯೋ
ಕಾಂಗ್ರೆಸ್ ನುಡಿದಂತೆ ನಡೆಯುವ ಪಕ್ಷ. ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುವುದೇ ಪಕ್ಷದ ಆದ್ಯತೆ. ಸುಳ್ಳು ಭರವಸೆಗಳನ್ನು ನೀಡುವ ಬದಲು, ಏನು ಹೇಳುತ್ತೇವೋ ಅದನ್ನೇ ಕಾರ್ಯರೂಪಕ್ಕೆ ತರುತ್ತೇವೆ. ಕಳೆದ ಅವಧಿಯಲ್ಲಿ ನೀಡಿದ ಭರವಸೆಗಳಲ್ಲಿ ಅರ್ಧಕ್ಕಿಂತ ಹೆಚ್ಚು ಈಡೇರಿಸಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು. ಮೂರು ವರ್ಷಗಳ ಅಧಿಕಾರಾವಧಿಯಲ್ಲಿ, ನಾಲ್ಕನೇ ಬಜೆಟ್ ಅನ್ನು ಮಂಡಿಸಲಾಗಿದೆ. ಬಜೆಟ್ ಅನ್ನು ಪರಿಶೀಲಿಸಿದರೆ, ಪಕ್ಷವು ತನ್ನ ಮಾತುಗಳನ್ನು ಉಳಿಸಿಕೊಂಡಿದೆ ಎಂಬುದು ಸ್ಪಷ್ಟವಾಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು.
ಡಿಕೆ ಶಿವಕುಮಾರ್ ಹೇಳಿದ್ದೇನು?
ತಾತ ಶಿವಶಂಕರಪ್ಪನವರಂತೆ ಈಗ ಅವರ ಮೊಮ್ಮಗನೂ ಜನಸೇವೆ ಮಾಡಲು ಮುಂದೆ ಬಂದಿದ್ದಾರೆ. ಅವರೂ ಗೆದ್ದೇ ಗೆಲ್ಲುತ್ತಾರೆ ಎಂದು ಡಿಕೆ ಶಿವಕುಮಾರ್ ಹೇಳಿದರು. ದಾವಣಗೆರೆ ನಗರದ ಅಭಿವೃದ್ಧಿಯ ಕುರಿತು ಮಾತನಾಡಿದ ಡಿಕೆ ಶಿವಕುಮಾರ್, ಇದು ಬೆಂಗಳೂರಿಗಿಂತಲೂ ಉತ್ತಮವಾಗಿ ಯೋಜಿತವಾಗಿರುವ ನಗರ. ನೂರಾರು ಕೋಟಿ ರೂಪಾಯಿಗಳ ಅಭಿವೃದ್ಧಿ ಪ್ಯಾಕೇಜ್‌ಗಳನ್ನು ಈಗಾಗಲೇ ಮಂಜೂರು ಮಾಡಲಾಗಿದೆ. ರಸ್ತೆ ಅಗಲೀಕರಣ ಸೇರಿದಂತೆ ವಿವಿಧ ಕಾಮಗಾರಿಗಳು ಉತ್ತಮವಾಗಿ ನಡೆಯುತ್ತಿವೆ. ದಾವಣಗೆರೆಯನ್ನು ರಾಜ್ಯದ ಒಂದು ಪ್ರಮುಖ ವೈದ್ಯಕೀಯ ಮತ್ತು ಶಿಕ್ಷಣ ಕೇಂದ್ರವನ್ನಾಗಿ ರೂಪಿಸುವಲ್ಲಿ ಶಿವಶಂಕರಪ್ಪನವರ ಕುಟುಂಬ ಮತ್ತು ಅವರ ಸಂಸ್ಥೆಗಳ ಕೊಡುಗೆ ಅಪಾರ ಎಂದು ಅವರು ಸ್ಮರಿಸಿದರು.
ದಾವಣಗೆರೆ ಈಗ ಶಿಕ್ಷಣ ಕೇಂದ್ರವಾಗಿಯೂ ಮಾರ್ಪಟ್ಟಿದೆ. ಹೊರ ರಾಜ್ಯ, ನಗರ ಮತ್ತು ಹಳ್ಳಿಗಳಿಂದ ಬಂದು ಇಲ್ಲಿ ವಿದ್ಯಾಭ್ಯಾಸ ಮಾಡುವವರಿಗೆ ಶಿವಶಂಕರಪ್ಪನವರ ಸಂಸ್ಥೆಗಳು ಹೊಸ ರೂಪ ನೀಡಿವೆ ಎಂದು ಡಿಕೆ ಶಿವಕುಮಾರ್ ಉಲ್ಲೇಖಿಸಿದರು.
ಡಿಕೆ ಶಿವಕುಮಾರ್ ಮಾತಿನ ವಿಡಿಯೋ
ಪಕ್ಷದೊಳಗಿನ ಅಸಮಾಧಾನ ಮತ್ತು ಬಂಡಾಯದ ಕುರಿತ ಪ್ರಶ್ನೆಗಳಿಗೆ ಉತ್ತರಿಸಿದ ಡಿಕೆ ಶಿವಕುಮಾರ್, ರಾಜಕೀಯದಲ್ಲಿ ಆಕಾಂಕ್ಷಿಗಳು ತಮ್ಮ ಹಕ್ಕುಗಳನ್ನು ಕೇಳುವುದು ಸಹಜ. ಮುಸ್ಲಿಂ ಮುಖಂಡರು ಟಿಕೆಟ್ ಕೇಳಿದ್ದರಲ್ಲಿ ತಪ್ಪಿಲ್ಲ. ಎಲ್ಲರೊಂದಿಗೆ ಮಾತನಾಡಿ ಸಮಸ್ಯೆಗಳನ್ನು ಬಗೆಹರಿಸಲಾಗುವುದು. ನಮ್ಮ ಪಕ್ಷ ಒಂದು ಕುಟುಂಬದಂತೆ ಕಾರ್ಯನಿರ್ವಹಿಸುತ್ತದೆ. ಒಬ್ಬರು ಮಾತ್ರ ನಾಮಪತ್ರ ಸಲ್ಲಿಸಿದ್ದು, ಅವರು ಶಿವಶಂಕರಪ್ಪನವರ ಆಪ್ತರು ಮತ್ತು ಪಟ್ಟ ಶಿಷ್ಯರು. ಅವರನ್ನು ಮನವೊಲಿಸಲಾಗುವುದು. ಇನ್ನುಳಿದವರೊಂದಿಗೂ ಮಾತುಕತೆ ನಡೆಸಲಾಗುತ್ತಿದೆ. ಅಭಿವೃದ್ಧಿ ಕಾರ್ಯಗಳು, ಸಾಮಾಜಿಕ ಚಿಂತನೆ ಮತ್ತು ಎಲ್ಲಾ ಸಮಾಜಕ್ಕೂ ನ್ಯಾಯ ಒದಗಿಸುವುದು ನಮ್ಮ ಪಕ್ಷದ ಮೂಲ ಸಿದ್ಧಾಂತ. ಇದೇ ನಮ್ಮ ಚುನಾವಣಾ ವಿಷಯ ಎಂದು ಅವರು ಸ್ಪಷ್ಟಪಡಿಸಿದರು.