ನಗರದಲ್ಲಿ ಹೆಚ್ಚಿದ ಡಿಜಿಟಲ್ ಅರೆಸ್ಟ್ ಸ್ಕ್ಯಾಮ್; ನಿವೃತ್ತ ಸಂಶೋಧಕನಿಗೆ 5 ಕೋಟಿ ರೂ. ವಂಚನೆ!
ಬೆಂಗಳೂರು, ಮಾರ್ಚ್ 23: ನಗರದಲ್ಲಿ ಡಿಜಿಟಲ್ ಅರೆಸ್ಟ್ (Digital Arrest) ಹೆಸರಿನ ವಂಚನೆ ಜಾಲ ಬೆಳೆಯುತ್ತಲೇ ಇದೆ. ಕೆಲ ದಿನಗಳ ಹಿಂದೆಯಷ್ಟೇ ವೃದ್ಧ ಉದ್ಯಮಿಗೆ ಇದೇ ರೀತಿ 15 ಕೋಟಿ ರೂ. ವಂಚಿಸಲಾಗಿತ್ತು. ಇದೀಗ ಮತ್ತೊಮ್ಮೆ ಅದೇ ರೀತಿಯ ಸೈಬರ್ ವಂಚನೆಯ ಪ್ರಕರಣ ಬೆಳಕಿಗೆ ಬಂದಿದೆ. ನಗರದ ನಿವೃತ್ತ ಸಂಶೋಧಕರೊಬ್ಬರಿಗೆ ಬರೋಬ್ಬರಿ 5 ಕೋಟಿ ರೂ. ಸೈಬರ್ ವಂಚನೆ ಮಾಡಿದ್ದು, ವೃದ್ಧನನ್ನು ಬೆದರಿಸಿ ಹಣ ವರ್ಗಾಯಿಸಿಕೊಳ್ಳಲಾಗಿದೆ ಎನ್ನಲಾಗಿದೆ. ಮಾನವ ಕಳ್ಳಸಾಗಾಣಿಗೆ ಮಾಡಿದ್ದೀರೆಂದು ನಕಲಿ ಎಫ್ಐಆರ್ ಕಳಿಸಿದ ವಂಚಕರು 94…