ಸಿಎಂ ಆಗುತ್ತಿರುವ ಡಿ.ಕೆ ಶಿವಕುಮಾರ್‌ಗೆ ಒಳ್ಳೆಯದಾಗಲಿ ಎಂದು ದರ್ಗಾದಲ್ಲಿ ಪ್ರಾರ್ಥನೆ
ಬೆಂಗಳೂರು, ಮೇ 30: ಚನ್ನಪಟ್ಟಣದ ಆಖೀಲ್ ಶಾ ಖಾದ್ರಿ ದರ್ಗಾದಲ್ಲಿ ಚನ್ನಪಟ್ಟಣ ನಗರಸಭೆ ಅಧ್ಯಕ್ಷರು, ಸದಸ್ಯರು ಹಾಗೂ ಕಾಂಗ್ರೆಸ್ ಮುಖಂಡರು ಸೇರಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಕರ್ನಾಟಕದಲ್ಲಿ ನಡೆಯಲಿರುವ ಸಚಿವ ಸಂಪುಟ ರಚನೆ ಹಾಗೂ ನಾಯಕತ್ವ ಬದಲಾವಣೆಯ ಕುರಿತು ಈ ಪ್ರಾರ್ಥನೆ ಹಮ್ಮಿಕೊಳ್ಳಲಾಗಿತ್ತು. ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುತ್ತಿರುವ ಡಿಕೆ ಶಿವಕುಮಾರ್‌ಗೆ ಒಳಿತಾಗಲಿ ಎಂದು ಪ್ರಾರ್ಥಿಸಲಾಯಿತು. ಜಮೀರ್ ಅಹ್ಮದ್ ಖಾನ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ದೊರಕಲಿ ಹಾಗೂ ಚನ್ನಪಟ್ಟಣ ಶಾಸಕರಾದ ಸಿ.ಪಿ. ಯೋಗೇಶ್ವರ್ ಅವರಿಗೆ ಸಚಿವ ಸ್ಥಾನ ಸಿಗಲಿ…