ಭಾರತದ ಧಾರ್ಮಿಕ ಸ್ವಾತಂತ್ರ್ಯದ ಕುರಿತ USCIRF ವರದಿಗೆ 275 ನಿವೃತ್ತ ನ್ಯಾಯಾಧೀಶರು, ಅಧಿಕಾರಿಗಳಿಂದ ವಿರೋಧ
ಬೆಂಗಳೂರು, ಮಾರ್ಚ್ 21: ಭಾರತದ ಬಗ್ಗೆ ಅಮೆರಿಕದ ಸ್ವತಂತ್ರ ಸಂಸ್ಥೆಯಾದ USCIRF (ಯುನೈಟೆಡ್ ಸ್ಟೇಟ್ಸ್ ಕಮಿಷನ್ ಫಾರ್ ಇಂಟರ್ನ್ಯಾಷನಲ್ ರಿಲಿಜಿಯಸ್ ಫ್ರೀಡಮ್) ನೀಡಿದ ವರದಿಯನ್ನು ಭಾರತದ ನಿವೃತ್ತ ನ್ಯಾಯಮೂರ್ತಿಗಳು, ಅಧಿಕಾರಿಗಳು, ಮಿಲಿಟರಿ ಸಿಬ್ಬಂದಿ ಸೇರಿದಂತೆ ಒಟ್ಟು 275 ಜನರು ತೀವ್ರವಾಗಿ ವಿರೋಧಿಸಿದ್ದಾರೆ. ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯ ಕುಸಿತವಾಗಿದೆ ಎಂದು USCIRF ಹೇಳಿತ್ತು. ಭಾರತದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ಮೇಲೆ ಒತ್ತಡ ಹೆಚ್ಚಾಗಿದೆ. ಅದರಲ್ಲೂ ವಿಶೇಷವಾಗಿ ಮುಸ್ಲಿಮರು ಮತ್ತು ಕ್ರೈಸ್ತರ ಮೇಲೆ ಒತ್ತಡ ಹೆಚ್ಚಾಗುತ್ತಿದೆ ಎಂದು USCIRF ವರದಿಯಲ್ಲಿ ಉಲ್ಲೇಖಿಸಲಾಗಿತ್ತು….