ವಿಧಾನಸೌಧಕ್ಕೆ ಬಂದಿದ್ದ ವ್ಯಕ್ತಿ ಬ್ಯಾಗ್ನಲ್ಲಿ 6 ಲಕ್ಷ ಹಣ ಪತ್ತೆ: ದುಡ್ಡು ತಂದಿದ್ಯಾಕೆ?
ಬೆಂಗಳೂರು, (ಮಾರ್ಚ್ 25): ಇತ್ತೀಚೆಗಷ್ಟೇ ವಿಧಾನಸೌಧದಲ್ಲಿ (Vidhan Soudha) ಲಕ್ಷಾಂತರ ಹಣ ಮತ್ತು ಚಿನ್ನಾಭರಣ ಕಳ್ಳತನವಾಗಿತ್ತು ಪ್ರಕರಣ ನಡೆದಿದ್ದು, ಈ ಪ್ರಕರಣ ಮಾಸುವ ಮುನ್ನವೇ ವಿಧಾನಸೌಧದಲ್ಲಿ ಮತ್ತೊಂದು ಮನಿ ಬ್ಯಾಗ್ ಕೇಸ್ ಬೆಳಕಿಗೆ ಬಂದಿದೆ. ಹೌದು… ವಿಧಾನಸೌಧಕ್ಕೆ ಬಂದಿದ್ದ ವ್ಯಕ್ತಿ ಬ್ಯಾಗ್ನಲ್ಲಿ 6 ಲಕ್ಷ ರೂಪಾಯಿ ಪತ್ತೆಯಾಗಿದೆ. ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ್ ಅವರನ್ನು ಭೇಟಿಯಾಗಲು ವಿಧಾನಸೌಧಕ್ಕೆ ಆಗಮನಿಸಿದ್ದು, ಈ ವೇಳೆ ಪೊಲೀಸರು ಯುವಕನ ಬ್ಯಾಗ್ ಪರಿಶೀಲನೆ ವೇಳೆ ಬರೋಬ್ಬರಿ ಆರು ಲಕ್ಷ ರೂಪಾಯಿ ಹಣ ಪತ್ತೆಯಾಗಿದೆ….