Headlines

ಕೊಹ್ಲಿಯನ್ನು ಕೆಣಕಿ ಸಿಕ್ಕಿಹಾಕಿಕೊಂಡ ಸಾಯಿ!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಅಂತಿಮ ಪಂದ್ಯವು ಆಟಗಾರರ ವಾಕ್ಸಮರಕ್ಕೆ ಸಾಕ್ಷಿಯಾಗಿತ್ತು. ಮೊದಲಿಗೆ ಮೊಹಮ್ಮದ್ ಸಿರಾಜ್ ಹಾಗೂ ವೆಂಕಟೇಶ್ ಅಯ್ಯರ್ ನಡುವೆ ಮಾತಿನ ಚಕಮಕಿ ನಡೆದರೆ, ಆ ಬಳಿಕ ವಿರಾಟ್ ಕೊಹ್ಲಿಯನ್ನು ಕೆಣಕುವ ಪ್ರಯತ್ನಕ್ಕೆ ಸಾಯಿ ಸುದರ್ಶನ್ ಕೈ ಹಾಕಿದರು. ಆರ್​ಸಿಬಿ ಬ್ಯಾಟಿಂಗ್ ವೇಳೆ ಫ್ರಂಟ್ ಫೀಲ್ಡಿಂಗ್​ನಲ್ಲಿದ್ದ ಸಾಯಿ ಸುದರ್ಶನ್ ಭರ್ಜರಿಯಾಗಿ…

Read More

ರಾತ್ರಿ ಊಟ ಬಿಟ್ಟು ಮಲಗುವ ಅಭ್ಯಾಸ ನಿಮಗಿದ್ಯಾ? ಹಾಗಿದ್ರೆ ಈ ಆರೋಗ್ಯ ಸಮಸ್ಯೆಗಳು ಬರುತ್ತೆ ಹುಷಾರ್! – Kannada News | Why You Should Not Sleep Without Dinner Every Day

ಇತ್ತೀಚಿನ ದಿನಗಳಲ್ಲಿ ಹಲವರು ತೂಕ ಇಳಿಸಿಕೊಳ್ಳಬೇಕು ಎಂಬ ಉದ್ದೇಶದಿಂದ ಅಥವಾ ಕೆಲಸದ ಒತ್ತಡ, ದಣಿವಿನ ಕಾರಣದಿಂದ ರಾತ್ರಿ ಊಟ (Dinner) ಮಾಡದೇ ಮಲಗುತ್ತಾರೆ. ಕೆಲವರಿಗೆ ಇದು ಆರೋಗ್ಯಕರ ಕ್ರಮವೆಂದು ಅನಿಸಿದರೂ, ಆರೋಗ್ಯ ತಜ್ಞರ ಅಭಿಪ್ರಾಯ ವಿಭಿನ್ನವಾಗಿದೆ. ಹೌದು ರಾತ್ರಿ ಹೊತ್ತು ಖಾಲಿ ಹೊಟ್ಟೆಯಲ್ಲಿ ಮಲಗುವುದರಿಂದ ದೇಹದ ಮೇಲೆ ಕೆಟ್ಟ ಪರಿಣಾಮಗಳನ್ನು ಉಂಟುಮಾಡಬಹುದು ಎಂದು ವೈದ್ಯರು ಎಚ್ಚರಿಸುತ್ತಾರೆ. ಹಾಗಾದರೆ ನಮಗೆ ಒಳ್ಳೆಯದು ಎಂದು ಅನಿಸುವ ಈ ಅಭ್ಯಾಸದಿಂದ ಯಾವ ರೀತಿಯ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು, ಜೊತೆಗೆ ಆರೋಗ್ಯ ಕಾಪಾಡಿಕೊಳ್ಳಲು…

Read More

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆ ಅಬ್ಬರ: ಬೆಳಗಾವಿ ಜಿಲ್ಲೆಯಲ್ಲಿ ಮೈದುಂಬಿ ಹರಿಯುತ್ತಿರುವ ನದಿಗಳು – Kannada News | Belagavi Rivers Rejuvenate: Heavy Rainfall in Western Ghats Triggers Inflow Into Malaprabha and Ghataprabha

ಬೆಳಗಾವಿ, ಜುಲೈ 6: ಪಶ್ಚಿಮ ಘಟ್ಟ ಪ್ರದೇಶ ಮತ್ತು ಖಾನಾಪುರ ತಾಲೂಕಿನಾದ್ಯಂತ ಕಳೆದ ನಾಲ್ಕು ದಿನಗಳಿಂದ ನಿರಂತರವಾಗಿ ಧಾರಾಕಾರ ಮಳೆಯಾಗುತ್ತಿದ್ದು, ಬೆಳಗಾವಿ ಜಿಲ್ಲೆಯ ಬತ್ತಿ ಹೋಗಿದ್ದ ನದಿಗಳಿಗೆ ಜೀವಕಳೆ ಬಂದಿದೆ. ಮಲಪ್ರಭಾ ನದಿಯು ಕಳೆದ ನಾಲ್ಕು ದಿನಗಳ ಹಿಂದೆ ಸಂಪೂರ್ಣವಾಗಿ ಒಣಗಿತ್ತು. ಆದರೆ, ಈಗ ಪಶ್ಚಿಮ ಘಟ್ಟದಲ್ಲಿನ ಮಳೆಯಿಂದಾಗಿ ನದಿಯು ಮೈದುಂಬಿ ಹರಿಯುತ್ತಿದ್ದು, 1,500 ರಿಂದ 2,000 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಮಲಪ್ರಭಾ ನದಿಯು ಸವದತ್ತಿ ಬಳಿ ಇರುವ ನವಿಲುತೀರ್ಥ ಜಲಾಶಯವನ್ನು ಸೇರುತ್ತದೆ. ಈ ಹಿಂದೆ…

Read More

Viral: ಮನೆಯೊಳಗೆ ಸೂರ್ಯನ ಬೆಳಕು ಬೀಳುತ್ತೆ; ವಿಚಿತ್ರ ಕಾರಣ ಕೊಟ್ಟು 80,000 ರೂ ಬಾಡಿಗೆ ಕೇಳಿದ ಮನೆ ಮಾಲೀಕ – Kannada News | Bengaluru: Woman shocked after hearing strange reason from Bengaluru homeowner

ಬೆಂಗಳೂರು, ಫೆಬ್ರವರಿ 16: ಬೆಂಗಳೂರಿನಲ್ಲಿ (Bengaluru) ಕಡಿಮೆ ಬಾಡಿಗೆಯುಳ್ಳ ಮನೆ ಸಿಗುವುದೇ ಕಷ್ಟ. ಹೌದು, ಉದ್ಯೋಗ ಗಿಟ್ಟಿಸಿಕೊಂಡು ಬಾಡಿಗೆ ಮನೆ ಮಾಡಿ ನೆಮ್ಮದಿಯಿಂದ ಇರೋಣ ಅಂದ್ರೆ ಮನೆ ಮಾಲೀಕರ ಡಿಮ್ಯಾಂಡ್ ಹೆಚ್ಚಾಗಿದೆ. ನೀವೇನಾದ್ರೂ ಬೆಂಗಳೂರಿನಲ್ಲಿ ಮನೆ ಹುಡುಕುತ್ತಿದ್ರೆ ಮನೆ ಮಾಲೀಕರ ಡಿಮ್ಯಾಂಡ್ ನೋಡಿಯೇ ತಲೆ ಗ್ರಿರ್ ಎನ್ನುತ್ತೆ. ಇದೀಗ ಬೆಂಗಳೂರಿನ ಮನೆ ಮಾಲೀಕರು ಆಸೆ ಬುರುಕರು ಎನ್ನುವುದಕ್ಕೆ ಈ ಪೋಸ್ಟ್‌ಯೇ ಸಾಕ್ಷಿ. ಬೆಂಗಳೂರಿನಲ್ಲಿ ಬಾಡಿಗೆ ಮನೆ ನೋಡಲು ಹೋದ ಮಹಿಳೆಗೆ ಮನೆ ಮಾಲೀಕರು ನೈಸರ್ಗಿಕ ಬೆಳಕು ಮತ್ತು…

Read More

ಕನ್ನಡದಿಂದ ಬಣ್ಣದ ಬದುಕು ಆರಂಭಿಸಿದ ನಟಿ ‘ರಾಮಾಯಣ’ದಲ್ಲಿ ಶೂರ್ಪನಖಿ

‘ರಾಮಾಯಣ’ ಚಿತ್ರ ಬಾಲಿವುಡ್‌ನಲ್ಲಿ ಅತ್ಯಂತ ಪ್ರತಿಷ್ಠಿತ ಚಿತ್ರ. ಹಿಂದಿ ಪ್ರೇಕ್ಷಕರು ಮಾತ್ರವಲ್ಲದೆ ತೆಲುಗು ಮತ್ತು ಕನ್ನಡ ಪ್ರೇಕ್ಷಕರು ಕೂಡ ಈ ಚಿತ್ರಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ. ಈ ಚಿತ್ರದಲ್ಲಿ ನಾಯಕ ರಣಬೀರ್ ಕಪೂರ್ ರಾಮನ ಪಾತ್ರದಲ್ಲಿ, ಸಾಯಿ ಪಲ್ಲವಿ ಸೀತೆಯ ಪಾತ್ರದಲ್ಲಿ ನಟಿಸಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಈ ಚಿತ್ರದಲ್ಲಿ ರಾವಣನ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಈ ಚಿತ್ರದಿಂದ ಈಗಾಗಲೇ ಬಿಡುಗಡೆಯಾಗಿರುವ ಪೋಸ್ಟರ್‌ಗಳು ಚಿತ್ರದ ಮೇಲಿನ ನಿರೀಕ್ಷೆಗಳನ್ನು ಹೆಚ್ಚಿಸಿವೆ. ಇತ್ತೀಚೆಗೆ, ಈ ಚಿತ್ರದ ಟೀಸರ್ ಬಿಡುಗಡೆಯಾಯಿತು. ರಾಮಾಯಣ ಚಿತ್ರದ ಟೀಸರ್…

Read More

Viral: 9 ಟು 5 ಲೈಫ್ ಬೇಡಪ್ಪಾ: ಬೆಂಗಳೂರಲ್ಲಿ 60 ಸಾವಿರ ಸಂಬಳದ ಕೆಲಸಕ್ಕೆ 22ರ ಯುವತಿ ದಿಢೀರ್ ರಿಸೈನ್! – Kannada News

ಬೆಂಗಳೂರಲ್ಲಿ 60 ಸಾವಿರ ಸಂಬಳದ ಕೆಲಸಕ್ಕೆ 22ರ ಯುವತಿ ದಿಢೀರ್ ರಿಸೈನ್! Image Credit source: dikshaaonly instagram account ಬೆಂಗಳೂರು, ಜೂನ್ 06: ಇಂದಿನ ದಿನಗಳಲ್ಲಿ ಕೈತುಂಬಾ ಸಂಬಳ ಕೊಡುವ ಐಟಿ ಅಥವಾ ಕಾರ್ಪೊರೇಟ್ ಕೆಲಸ ಸಿಗುವುದೇ ಕಷ್ಟ. ಇಂತಹ ಸಂದರ್ಭದಲ್ಲಿ ಬೆಂಗಳೂರಿನಲ್ಲಿರುವ (Bengaluru) 22 ವರ್ಷದ ದೀಕ್ಷಾ ಎಂಬ ಯುವತಿ, ತನಗಿದ್ದ ತಿಂಗಳ 60 ಸಾವಿರ ರೂ. ಆದಾಯದ ಮಾರ್ಕೆಟಿಂಗ್ ಕೆಲಸಕ್ಕೆ ಯಾವುದೇ ಪರ್ಯಾಯ ಯೋಜನೆ ಇಲ್ಲದೆ ರಾಜೀನಾಮೆ ನೀಡಿ ಎಲ್ಲರ ಗಮನ ಸೆಳೆದಿದ್ದಾಳೆ….

Read More

ಪ್ರಜ್ವಲ್ ವಿಡಿಯೋ ವೈರಲ್ ಪ್ರಕರಣ: ಪ್ರಮುಖರ ಹೆಸರೇ ಚಾರ್ಜ್​​ಶೀಟ್​​ನಿಂದ ಮಿಸ್ಸಿಂಗ್​​?

ಹಾಸನ, ಮಾರ್ಚ್​​ 18: ಪ್ರಜ್ವಲ್ ರೇವಣ್ಣ ವಿಡಿಯೋ ವೈರಲ್ ಪ್ರಕರಣ ಸಂಬಂಧ ಎಸ್​ಐಟಿ ಚಾರ್ಜ್​​ಶೀಟ್​​ ಬಗ್ಗೆ ವಕೀಲ ಹಾಗೂ ಬಿಜೆಪಿ ಮುಖಂಡ ದೇವರಾಜೇಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಕೇಸ್​​ನ ಆರನೇ ಆರೋಪಿಯೂ ಆಗಿರುವ ದೇವರಾಜೇಗೌಡ, ಪ್ರಕರಣದಲ್ಲಿ ಯಾರ್ಯಾರು ಇದ್ದಾರೆ ಎಂಬುದು ಜಗತ್ತಿಗೆ ಗೊತ್ತಿದೆ. ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಎಬ್ಬಿಸಿದ ಪ್ರಕರಣ ಇದು. ಪ್ರಮುಖ ಆರೋಪಿ ಸ್ಥಾನದಲ್ಲಿರುವ ಪ್ರೀತಂಗೌಡ, ಡಿ.ಕೆ. ಶಿವಕುಮಾರ್, ಶ್ರೇಯಸ್‌ ಪಟೇಲ್, ಕ್ವಾಲಿಟಿ ಬಾರ್ ಶರತ್, ಹಲವು ರಾಜಕಾರಣಿಗಳ ಹೆಸರಿಲ್ಲ. ಶಿವಲಿಂಗೇಗೌಡ…

Read More

ಮಗಳಾಗಿ ಬಂದೆ, ಸೊಸೆಯಾಗಿದ್ದೀನಿ: ಪ್ರಶಸ್ತಿ ಸ್ವೀಕರಿಸಿ ಭಾವುಕರಾದ ರಶ್ಮಿಕಾ

ರಶ್ಮಿಕಾ ಮಂದಣ್ಣ (Rashmika Mandanna) ಇತ್ತೀಚೆಗಷ್ಟೆ ವಿಜಯ್ ದೇವರಕೊಂಡ ಅವರೊಟ್ಟಿಗೆ ಬಲು ಅದ್ಧೂರಿಯಾಗಿ ಮದುವೆ ಆಗಿದ್ದಾರೆ. ಮದುವೆ ಆದ ಬಳಿಕ ಇದು ಅವರಿಗೆ ಮೊದಲ ಹಬ್ಬ. ಆದರೆ ಈ ಯುಗಾದಿ ಹಬ್ಬ ಅವರಿಗೆ ಬಹು ವಿಶೇಷವೂ ಹೌದು. ರಶ್ಮಿಕಾ ಮಂದಣ್ಣ ಅವರು ನಟನೆಗೆ ಮೊಟ್ಟ ಮೊದಲ ಬಾರಿಗೆ ರಾಜ್ಯ ಪ್ರಶಸ್ತಿಯನ್ನು ಪಡೆದಿದ್ದಾರೆ. ರಶ್ಮಿಕಾ ಅವರಿಗೆ ತೆಲಂಗಾಣ ಸರ್ಕಾರ ನೀಡುವ ಗದರ್ ಪ್ರಶಸ್ತಿ ಲಭಿಸಿದ್ದು, ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಪ್ರಶಸ್ತಿ ಸ್ವೀಕರಿಸಿ ಭಾವುಕರಾಗಿ ಮಾತನಾಡಿದ್ದಾರೆ. ಸಿಎಂ ರೇವಂತ್…

Read More

ಪತ್ನಿ ಹೆರಿಗೆಗೆಂದು ತವರು ಮನೆಗೆ ಹೋಗಿದ್ದಾಗ ಹಳೇ ಪ್ರೇಯಿಸಿ ಜತೆ ಪತಿ ಆತ್ಮಹತ್ಯೆ – Kannada News | A Married Man Commits Suicide By Jumping into malaprabha river With Old Lover at Belagavi

ಬೆಳಗಾವಿ, (ಜನವರಿ 28): ಪತ್ನಿ ಹೆರಿಗೆಗೆಂದು ತವರು ಮನೆಗೆ ಹೋಗಿದ್ದಾಗ ಪತಿ ತನ್ನ ಹಳೇ ಪ್ರೇಯಸಿ ಜೊತೆ ನದಿಗೆ ಹಾರಿ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಬೆಳಗಾವಿ (Belagavi) ಜಿಲ್ಲೆ ರಾಮದುರ್ಗ ತಾಲೂಕಿನ ಮಲ್ಲಾಪುರ ಬಳಿ ನಡೆದಿದೆ. ಮಲ್ಲಾಪುರದ ಜಗದೀಶ್ ಕವಳೇಕರ(27), ಗಂಗಮ್ಮ(26) ಆತ್ಮಹತ್ಯೆ ಆತ್ಮಹತ್ಯೆಗೆ ಶರಣಾದ ಜೋಡಿ. ಮೊದಲಿನಿಂದಲೂ ಜಗದೀಶ್ ಹಾಗೂ ಗಂಗಮ್ಮ ಪರಸ್ಪರ ಪ್ರೀತಿಸುತ್ತಿದ್ದರು. ಆದ್ರೆ, ಜಗದೀಶ್​​ ಬೇರೆ ಯುವತಿ ಜೊತೆ ಮದುವೆಯಾಗಿದ್ದು, ಸದ್ಯ ಪತ್ನಿ ಗರ್ಭಿಣಿ. ಹೀಗಾಗಿ ಆಕೆ ತವರು ಮನೆಗೆ ಹೋಗಿದ್ದಾಗ…

Read More

ಹಾರ್ಮುಜ್ ಜಲಸಂಧಿಗೆ ಅಮೆರಿಕದಿಂದಲೂ ತಡೆ; ಸಂಧಾನಕ್ಕಾಗಿ ರಷ್ಯಾ ಕೂಡ ಸಿದ್ಧ

ನವದೆಹಲಿ, ಏಪ್ರಿಲ್ 12: ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್​ನಲ್ಲಿ ಇರಾನ್ ಮತ್ತು ಅಮೆರಿಕ ನಡುವಿನ ಸಂಧಾನ ಮಾತುಕತೆಗಳು ಮುರಿದುಬಿದ್ದ ಬೆನ್ನಲ್ಲೇ ಡೊನಾಲ್ಡ್ ಟ್ರಂಪ್ ಅವರು ಹಾರ್ಮುಜ್ ಜಲಸಂಧಿ (Hormuz Strait) ಮೇಲೆ ಕಣ್ಣು ಇರಿಸಿದ್ದಾರೆ. ಈ ಜಲಸಂಧಿಯನ್ನು ಪೂರ್ಣವಾಗಿ ತಡೆಯುವಂತೆ ಅಮೆರಿಕದ ನೌಕಾಪಡೆಗೆ ತಿಳಿಸಿದ್ದೇನೆ. ಈ ಕ್ಷಣದಿಂದಲೇ ಹಾರ್ಮುಜ್ ಜಲಸಂಧಿಯಿಂದ ಯಾವುದೇ ಹಡಗು ಹೊರಹೋಗದಂತೆ, ಹಾಗೂ ಹೊರಗಿನಿಂದ ಯಾವ ಹಡಗೂ ಒಳಗೆ ಹೋಗದಂತೆ ತಡೆಯುವ ಪ್ರಕ್ರಿಯೆ ನಡೆಯಲಿದೆ ಎಂದು ಟ್ರಂಪ್ ಘೋಷಿಸಿದ್ದಾರೆ. ಪಾಕಿಸ್ತಾನದ ಮಧ್ಯಸ್ತಿಕೆಯಲ್ಲಿ ಇರಾನ್ ಮತ್ತು ಅಮೆರಿಕ…

Read More