ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟ: ತುಂಗಾ, ಭದ್ರಾ ಅಬ್ಬರಕ್ಕೆ ಹೊಲ-ಗದ್ದೆಗಳು ಜಲಾವೃತ – Kannada News | Chikkamagaluru Heavy Rain: Fields and Farmlands Inundated as Tunga and Bhadra Rivers Swell
ಚಿಕ್ಕಮಗಳೂರು, ಆಗಸ್ಟ್ 03: ಕಾಫಿನಾಡ ಮಲೆನಾಡು ಭಾಗದಲ್ಲಿ ಮಳೆ (Rain) ಅಬ್ಬರ ಮುಂದುವರೆದಿದ್ದು, ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ತುಂಗಾ-ಭದ್ರಾ ನದಿಗಳಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು, ಪ್ರವಾಹದ ಭೀತಿ ಎದುರಾಗಿದೆ. ಶೃಂಗೇರಿಯ ಗಾಂಧಿ ಮೈದಾನ ಇಡೀ ಜಲಾವೃತವಾಗಿತ್ತು. ಭದ್ರೆಯ ಅಬ್ಬರಕ್ಕೆ ಹೊಲ-ಗದ್ದೆ ತೋಟಗಳು ಜಲಾವೃತವಾಗಿವೆ. ನಾಲ್ಕು ದಿನದ ಹಿಂದೆ ಮಳೆಗಾಗಿ ಆಕಾಶ ನೋಡುತ್ತಿದ್ದ ಮಲೆನಾಡಿಗರು ಸುರಿಯುತ್ತಿರುವ ಮಳೆ ಕಂಡು ಆತಂಕಕ್ಕೀಡಾಗಿದ್ದಾರೆ. ನದೀತೀರದ ತೋಟಗಳು ಜಲಾವೃತ: ಲಕ್ಷಾಂತರ ರೂ ಹಾನಿ ಕಾಫಿನಾಡ ಮಲೆನಾಡು ಭಾಗದಲ್ಲಿ ಮಳೆ…