IND-W vs SL-W: ಭಾರತ- ಲಂಕಾ ನಡುವಿನ 4ನೇ ಟಿ20 ಪಂದ್ಯ ಎಲ್ಲಿ ಯಾವಾಗ ಎಷ್ಟು ಗಂಟೆಗೆ ಆರಂಭ? – Kannada News | India vs Sri Lanka Women 4th T20: Date, Time, Venue and How to Watch

ಭಾರತ ಹಾಗೂ ಶ್ರೀಲಂಕಾ (India Women vs Sri Lanka Women) ಮಹಿಳಾ ತಂಡಗಳ ನಡುವಿನ ಐದು ಪಂದ್ಯಗಳ ಟಿ20 ಸರಣಿಯ 4ನೇ ಪಂದ್ಯಕ್ಕಾಗಿ ಉಭಯ ತಂಡಗಳು ಸಜ್ಜಾಗಿವೆ. ಮುಂದಿನ ವರ್ಷ ನಡೆಯಲಿರುವ ಮಹಿಳಾ ಟಿ20 ವಿಶ್ವಕಪ್‌ ದೃಷ್ಟಿಯಿಂದ ಈ ಸರಣಿಯನ್ನು ಗಂಭೀರವಾಗಿ ಪರಿಗಣಿಸಿದ್ದ ಹರ್ಮನ್​ ಪಡೆ ನಿರೀಕ್ಷಿತ ಪ್ರದರ್ಶನ ನೀಡಿ ಸರಣಿಯನ್ನು ವಶಪಡಿಸಿಕೊಂಡಿದೆ. ಈಗಾಗಲೇ ಆಡಿರುವ ಮೊದಲ ಮೂರು ಪಂದ್ಯಗಳಲ್ಲಿ ಮೂರನ್ನೂ ತಂಡ ಗೆದ್ದಿದೆ. ಮೊದಲ ಪಂದ್ಯದಲ್ಲಿ 8 ವಿಕೆಟ್‌ಗಳಿಂದ ಮತ್ತು ಎರಡನೇ ಪಂದ್ಯದಲ್ಲಿ 7 ವಿಕೆಟ್‌ಗಳಿಂದ ಆ ನಂತರ ತಿರುವನಂತಪುರದಲ್ಲಿ ನಡೆದ ಮೂರನೇ ಪಂದ್ಯವನ್ನು ಭಾರತೀಯ ಮಹಿಳಾ ತಂಡ 8 ವಿಕೆಟ್‌ಗಳಿಂದ ಗೆದ್ದುಕೊಂಡಿದೆ. ಇದೀಗ 4ನೇ ಪಂದ್ಯದ ಮೇಲೂ ಹರ್ಮನ್​ ಪಡೆ ಕಣ್ಣಿಟ್ಟಿದೆ.

ಭಾರತ ಮತ್ತು ಶ್ರೀಲಂಕಾ ಮಹಿಳಾ ತಂಡಗಳ ನಡುವಿನ ನಾಲ್ಕನೇ ಟಿ20 ಪಂದ್ಯ ಯಾವಾಗ ನಡೆಯಲಿದೆ?

ಭಾರತ ಮತ್ತು ಶ್ರೀಲಂಕಾ ಮಹಿಳಾ ತಂಡಗಳ ನಡುವಿನ ನಾಲ್ಕನೇ ಟಿ20 ಪಂದ್ಯ ಡಿಸೆಂಬರ್ 28 ರ ಭಾನುವಾರ ನಡೆಯಲಿದೆ.

ಭಾರತ ಮತ್ತು ಶ್ರೀಲಂಕಾ ಮಹಿಳಾ ತಂಡಗಳ ನಡುವಿನ ನಾಲ್ಕನೇ ಟಿ20 ಪಂದ್ಯ ಎಲ್ಲಿ ನಡೆಯಲಿದೆ?

ತಿರುವನಂತಪುರಂನ ಗ್ರೀನ್‌ಫೀಲ್ಡ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾರತ ಮತ್ತು ಶ್ರೀಲಂಕಾ ಮಹಿಳಾ ತಂಡದ ನಡುವಿನ ನಾಲ್ಕನೇ ಟಿ20 ಪಂದ್ಯ ನಡೆಯಲಿದೆ.

ಭಾರತ ಮತ್ತು ಶ್ರೀಲಂಕಾ ಮಹಿಳಾ ತಂಡಗಳ ನಡುವಿನ ನಾಲ್ಕನೇ ಟಿ20 ಪಂದ್ಯ ಯಾವಾಗ ಪ್ರಾರಂಭವಾಗುತ್ತದೆ?

ಭಾರತ ಮತ್ತು ಶ್ರೀಲಂಕಾ ಮಹಿಳಾ ತಂಡಗಳ ನಡುವಿನ ನಾಲ್ಕನೇ ಟಿ20 ಪಂದ್ಯ ಸಂಜೆ 7:00 ಗಂಟೆಗೆ ಆರಂಭವಾಗಲಿದ್ದು, ಟಾಸ್ ಸಂಜೆ 6:30 ಕ್ಕೆ ನಡೆಯಲಿದೆ.

ಭಾರತ ಮತ್ತು ಶ್ರೀಲಂಕಾ ಮಹಿಳಾ ತಂಡಗಳ ನಡುವಿನ ನಾಲ್ಕನೇ ಟಿ20 ಪಂದ್ಯವನ್ನು ಟಿವಿಯಲ್ಲಿ ಎಲ್ಲಿ ನೋಡಬಹುದು?

ಭಾರತ ಮತ್ತು ಶ್ರೀಲಂಕಾ ಮಹಿಳಾ ತಂಡದ ನಡುವಿನ ನಾಲ್ಕನೇ ಟಿ20 ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಟಿವಿಯಲ್ಲಿ ವೀಕ್ಷಿಸಬಹುದು.

ಭಾರತ ಮತ್ತು ಶ್ರೀಲಂಕಾ ಮಹಿಳಾ ತಂಡದ ನಡುವಿನ ನಾಲ್ಕನೇ ಟಿ20 ಪಂದ್ಯವನ್ನು ಮೊಬೈಲ್‌ನಲ್ಲಿ ಎಲ್ಲಿ ವೀಕ್ಷಿಸಬಹುದು?

ಜಿಯೋ-ಹಾಟ್‌ಸ್ಟಾರ್ ಅಪ್ಲಿಕೇಶನ್ ಬಳಸಿ ಭಾರತ ಮತ್ತು ಶ್ರೀಲಂಕಾ ಮಹಿಳಾ ತಂಡಗಳ ನಡುವಿನ ನಾಲ್ಕನೇ ಟಿ20 ಪಂದ್ಯವನ್ನು ನಿಮ್ಮ ಮೊಬೈಲ್ ಫೋನ್‌ನಲ್ಲಿ ವೀಕ್ಷಿಸಬಹುದು.

ಉಭಯ ತಂಡಗಳು

ಭಾರತ ತಂಡ: ಸ್ಮೃತಿ ಮಂಧಾನ, ಶೆಫಾಲಿ ವರ್ಮಾ, ಜೆಮಿಮಾ ರಾಡ್ರಿಗಸ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ರಿಚಾ ಘೋಷ್ (ವಿಕೆಟ್ ಕೀಪರ್), ದೀಪ್ತಿ ಶರ್ಮಾ, ಅಮಂಜೋತ್ ಕೌರ್, ವೈಷ್ಣವಿ ಶರ್ಮಾ, ಕ್ರಾಂತಿ ಗೌಡ್, ರೇಣುಕಾ ಸಿಂಗ್ ಠಾಕೂರ್, ಶ್ರೀ ಚರಣಿ, ಜಿ ಕಮಲಿನಿ, ಹರ್ಲೀನ್ ಡಿಯೋಲ್, ಅರುಂಧಾ ರೆಡ್ಡಿ, ಸ್ನೇಹ್ ರೆಡ್ಡಿ.

ಶ್ರೀಲಂಕಾ ತಂಡ: ಚಾಮರಿ ಅಟಪಟ್ಟು (ನಾಯಕಿ), ಹಾಸಿನಿ ಪೆರೇರಾ, ವಿಶ್ಮಿ ಗುಣರತ್ನೆ, ಹರ್ಷಿತಾ ಸಮರವಿಕ್ರಮ, ನೀಲಾಕ್ಷಿಕಾ ಡಿ ಸಿಲ್ವಾ, ಕವಿಶಾ ದಿಲ್ಹಾರಿ, ಇಮೇಶಾ ದುಲಾನಿ, ಕೌಶಿನಿ ನುತ್ಯಾಂಗನಾ, ಮಲ್ಶಾ ಶೆಹಾನಿ, ಇನೋಕಾ ರಣವೀರ, ಶಶಿನಿ ಗಿಮ್ಹಾನಿ, ನಿಮೇಶ್ ಮದುಶಾನಿ, ಕಾವ್ಯಾ ಕವಿಂದಿ, ರಶ್ಮಿಕಾ ಸೆವ್ವಂದಿ, ಮಾಲ್ಕಿ ಮಾದರ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ಸುಳ್ಳು ಧರ್ಮನಿಂದನೆ ಆರೋಪಗಳು; 6 ತಿಂಗಳಲ್ಲಿ 71 ಹಲ್ಲೆ ಘಟನೆಗಳು – Kannada News | Bangladesh, 71 attacks on Hindus in 6 months, Malaysian MPs condemn violence against minorities

ಢಾಕಾ, ಡಿಸೆಂಬರ್ 27: ಇತ್ತೀಚಿನ ದಿನಗಳಲ್ಲಿ ಬಾಂಗ್ಲಾದೇಶದಲ್ಲಿ (Bangladesh) ಅಲ್ಪಸಂಖ್ಯಾತರ ಮೇಲೆ ದಾಳಿಯಾಗುವುದು (Attack on minorities) ತೀರಾ ಸಾಮಾನ್ಯವಾಗಿ ಹೋಗಿದೆ. ಆ ದೇಶದ ಅಲ್ಪಸಂಖ್ಯಾತ ಮಾನವ ಹಕ್ಕು ಸಂಸ್ಥೆಯಾದ ಎಚ್​ಆರ್​ಸಿಬಿಎಂ (HRCBM) ಪ್ರಕಾರ, ಕಳೆದ ವರ್ಷದ ಡಿಸೆಂಬರ್​ನಿಂದ ಈ ವರ್ಷದ ಜೂನ್​ವರೆಗೆ ಆರು ತಿಂಗಳಲ್ಲಿ ಧರ್ಮನಿಂದನೆ ಆರೋಪದ ಮೇಲೆ ಹಿಂದೂಗಳ ಮೇಲೆ ಹಲ್ಲೆಯಾಗಿರುವ 71ಕ್ಕೂ ಹೆಚ್ಚು ಘಟನೆಗಳು ಸಂಭವಿಸಿವೆಯಂತೆ.

ಬಾಂಗ್ಲಾದೇಶದ ವಿವಿಧ ಪ್ರದೇಶಗಳಲ್ಲಿರುವ ರಂಗಪುರ್, ಚಾಂದಪುರ್, ಚತ್ತೋಡಗ್ರಾಮ್, ದಿನಾಜ್​ಪುರ್, ಲಾಲ್ಮೋನಿರ್ಹತ್, ಸುನಾಮ್​ಗಂಜ್, ಖುಲ್ನಾ, ಕಾಮಿಲ್ಲಾ, ಗಾಜಿಪುರ್, ತಾಂಗೇಲ್, ಸೈಲತ್ ಸೇರಿದಂತೆ 30ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ದಾಖಲಾದ ಪ್ರಕರಣಗಳನ್ನು ಆಧರಿಸಿ ಈ ವರದಿಯು ಅಂಕಿ ಅಂಶ ನೀಡಿದೆ. ಗಮನಾರ್ಹ ಅಂಶ ಎಂದರೆ ಅಲ್ಲೋ ಇಲ್ಲೋ ಕೆಲವೇ ಕಡೆ ಮಾತ್ರ ಇಂಥ ಘಟನೆಗಳು ನಡೆದಿಲ್ಲ. ಬದಲಾಗಿ, ಬಾಂಗ್ಲಾದೇಶದ ಹೆಚ್ಚಿನ ಪ್ರದೇಶಗಳಲ್ಲಿ, ಮತ್ತು ಬಾರಿ ಬಾರಿ ಈ ಹಲ್ಲೆ ಘಟನೆಗಳು ಸಂಭವಿಸಿವೆ. ಇದನ್ನು ಗಮನಿಸಿದಾಗ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರಿಗೆ ಅಭದ್ರತೆಯ ಸ್ಥಿತಿ ಇರುವುದು ಕಾಣುತ್ತದೆ ಎಂಬುದು ಮಾನವ ಹಕ್ಕುಗಳ ಈ ವರದಿಯು ಹೇಳುತ್ತದೆ.

ಇದನ್ನೂ ಓದಿ: ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯ ಹತ್ಯೆ; ದುರುಳರ ಹಿಂಸಾಚಾರಕ್ಕೆ 29 ವರ್ಷದ ಸಾಮ್ರಾಟ್ ಬಲಿ

ಇತ್ತೀಚೆಗೆ ದೀಪ್ ಚಂದ್ರ ದಾಸ್ ಎಂಬ ಹಿಂದೂ ವ್ಯಕ್ತಿಯನ್ನು ಧರ್ಮನಿಂದನೆ (Blasphemy charges) ಆರೋಪದ ಮೇಲೆ ಹಲ್ಲೆ ಮಾಡಿ ಸಜೀವವಾಗಿ ಸುಟ್ಟುಹಾಕಿದ್ದರು. ಆದರೆ, ದೀಪು ಚಂದ್ರ ದಾಸ್ ಯಾವುದೇ ಧರ್ಮನಿಂದನೆ ಮಾಡಿಲ್ಲ ಎಂಬುದು ಬೆಳಕಿಗೆ ಬಂದಿತ್ತು. ಮಾನವ ಹಕ್ಕು ಆಯೋಗದ ವರದಿ ಕೂಡ ಅದು ತಿಳಿಸಿದ 71 ಪ್ರಕರಣಗಳಲ್ಲಿ ಹೆಚ್ಚಿನವುಗಳು ಸುಳ್ಳು ಆರೋಪವೇ ಆಗಿವೆ ಎಂದಿದೆ.

ಬಾಂಗ್ಲಾದೇಶೀ ಹಿಂದೂಗಳಿಗೆ ಮಲೇಷ್ಯನ್ ಸಂಸದರ ಬೆಂಬಲ

ದೀಪುಚಂದ್ರ ದಾಸ್​ನನ್ನು ಸಜೀವವಾಗಿ ಸುಟ್ಟುಹಾಕಿದ ಪ್ರಕರಣವು ಮಲೇಷ್ಯಾ ಸಂಸತ್​ನಲ್ಲಿ ಸದ್ದು ಮಾಡಿದೆ. ಅಲ್ಲಿಯ ಅನೇಕ ಸಂಸದರು ಬಾಂಗ್ಲಾದೇಶದ ಹಿಂದೂ ಸಮುದಾಯಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಪಕ್ಷಾತೀತವಾಗಿ ಸಂಸದರು ಬೆಂಬಲ ಕೊಡುತ್ತಿದ್ದಾರೆ ಎಂದು ಸಂಸದ ಆರ್.ಎಸ್.ಎನ್. ರಾಯರ್ ಅವರು ಹೇಳಿದ್ದಾರೆ. ಹಾಗೆಯೇ, ಬಾಂಗ್ಲಾದೇಶೀ ವೀಸಾ ನೀಡಲು ಮತ್ತು ಮಲೇಷ್ಯಾಗೆ ಬಾಂಗ್ಲಾದೇಶಿಗರ ಪ್ರವೇಶಕ್ಕೆ ನಿರ್ಬಂಧ ಏರುವುದು ಸೇರಿದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ಅನೇಕ ಸಂಸದರು ಸರ್ಕಾರಕ್ಕೆ ಮನವಿ ಮಾಡುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಕಠಿಣ ಶಿಕ್ಷೆಯಾಗಲಿ; ಬಾಂಗ್ಲಾದೇಶದಲ್ಲಿ ಹಿಂದೂಗಳ ಹತ್ಯೆ, ಅಲ್ಪಸಂಖ್ಯಾತರ ಹಿಂಸಾಚಾರಕ್ಕೆ ಭಾರತ ಖಂಡನೆ

‘ಧಾರ್ಮಿಕ ಗುರುತಿನ ಕಾರಣಕ್ಕೆ ಯಾವುದೇ ವ್ಯಕ್ತಿಯ ಮೇಲೂ ಹಿಂಸಾಚಾರ ಆಗಬಾರದು. ಅಲ್ಪಸಂಖ್ಯಾತರ ಹಕ್ಕು ಮತ್ತು ಸುರಕ್ಷತೆಯನ್ನು ಸದಾ ಕಾಪಾಡಬೇಕು. ಆ ರೀತಿಯ ದ್ವೇಷ ಮತ್ತು ಅಸಹನೆಗೆ ಯಾವುದೇ ಸಮಾಜದಲ್ಲೂ ಜಾಗ ಇರಬಾರದು’ ಎಂದು ಮಲೇಷ್ಯಾ ಸಂಸದರಾದ ರಾಯರ್ ಅಭಿಪ್ರಾಯಪಟ್ಟಿದ್ದಾರೆ.

ಇನ್ನಷ್ಟು ಅಂತರರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಶನಿವಾರವರೇ ನಡೆಯಿತು ಎಲಿಮಿನೇಷನ್; ಪ್ರಮುಖ ಸ್ಪರ್ಧಿಯೇ ಔಟ್ – Kannada News | BBK12 Shock: Unexpected Saturday Elimination, Suraj Out Early

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಈ ವಾರ ಕಿಚ್ಚ ಸುದೀಪ್ ಇರಲಿಲ್ಲ. ಈ ಬೇಸರದ ಮಧ್ಯೆಯೇ ಶನಿವಾರದ ಎಪಿಸೋಡ್​​ನಲ್ಲಿ ಒಬ್ಬರನ್ನು ಹೊರಕ್ಕೆ ಕಳುಹಿಸಲಾಗಿದೆ. ಈ ವಾರ ಡಬಲ್ ಎಲಿಮಿನೇಷನ್ ನಡೆಯಲಿದೆ ಎಂದು ಬಿಗ್ ಬಾಸ್ ಮೊದಲೇ ಘೋಷಣೆ ಮಾಡಿದ್ದರು. ಎಲ್ಲರೂ ಭಾನುವಾರ ಈ ಎಲಿಮಿನೇಷನ್ ನಡೆಯುತ್ತದೆ ಎಂದುಕೊಂಡಿದ್ದರು. ಆದರೆ ಶನಿವಾರವೇ ಒಂದು ಎಲಿಮಿನೇಷನ್ ನಡೆದಿದೆ. ಸೂರಜ್ ಅವರು ಬಿಗ್ ಬಾಸ್ ಮನೆಯಿಂದ ಔಟ್ ಆಗಿದ್ದಾರೆ. ಈ ವಿಷಯ ಮನೆಯವರಿಗೆ ಶಾಕಿಂಗ್ ಎನಿಸಿದೆ.

ಬಿಗ್ ಬಾಸ್​​ನಲ್ಲಿ ಈ ವಾರ ಕಾವ್ಯಾ ಹೊರತುಪಡಿಸಿ ಉಳಿದ 10 ಸ್ಪರ್ಧಿಗಳು ನಾಮಿನೇಟ್ ಆಗಿದ್ದರು. ಈ ಪೈಕಿ ಹಂತ ಹಂತವಾಗಿ ಒಬ್ಬೊಬ್ಬರನ್ನು ಸೇವ್ ಮಾಡುತ್ತಾ ಬರಲಾಯಿತು. ಮೊದಲು ಭಾಗ್ಯಲಕ್ಷ್ಮೀ ತಂಡದವರು ಬಂದು ಗಿಲ್ಲಿಯನ್ನು ಸೇವ್ ಮಾಡಿದರು. ಆ ಬಳಿಕ ಪ್ರೇಮ್ ಅವರು ಬಂದು, ಅಶ್ವಿನಿ ಅವರನ್ನು ಸೇವ್ ಮಾಡಿದರು. ನಂತರ ಚಟುವಟಿಕೆ ನೀಡಲಾಗಿತ್ತು. ಇದರಲ್ಲಿ ರಘು ಸೇವ್ ಆದರು.

ಇನ್ನು, ಬೆಳಿಗ್ಗೆ ಏಳ್ಳುತ್ತಿದ್ದಂತೆ ಮನೆಯವರಿಗೆ ಒಂದು ಶಾಕ್ ಇತ್ತು. ಎಲ್ಲರಿಗೂ ಗಾರ್ಡನ್ ಏರಿಯಾಗೆ ಬರುವಂತೆ ಬಿಗ್ ಬಾಸ್ ಸೂಚನೆ ನೀಡಿದರು. ಅದರಂತೆಯೇ ಎಲ್ಲರೂ ಬಂದರು. ಈ ವೇಳೆ ಮುಖ್ಯದ್ವಾರದ ಬಳಿ ಒಂದು ತಿರುಗುವ ವಸ್ತುವನ್ನು ಇಡಲಾಗಿತ್ತು. ಇದರ ಮೇಲೆ ನಾಲ್ಕು ಜನರನ್ನು ನಿಲ್ಲಿಸಲಾಯಿತು. ಈ ವೇಳೆ ಕಡಿಮೆ ಮತ ಪಡೆದ ಸೂರಜ್ ಅವರನ್ನು ಹೊರಕ್ಕೆ ಕಳುಹಿಸಲಾಗಿದೆ. ಇದು ಶಾಕಿಂಗ್ ಎನಿಸಿದೆ.

ಇದನ್ನೂ ಓದಿ: ಬಿಗ್ ಬಾಸ್ ಆದೇಶಕ್ಕೆ ನಲುಗಿ ಹೋದ ಗಿಲ್ಲಿ ನಟ; ಇದಕ್ಕೆ ಕಾರಣ ರಘು-ಸೂರಜ್?

ಸೂರಜ್ ಅವರು ಇತ್ತೀಚೆಗೆ ಡಲ್ ಆಗಿದ್ದರು. ಅವರಿಂದ ಎಲ್ಲರೂ ಹೆಚ್ಚಿನದ್ದನ್ನು ನಿರೀಕ್ಷೆ ಮಾಡಿದ್ದರು. ಆದರೆ, ಇದರಲ್ಲಿ ಅವರು ಯಶಸ್ಸು ಕಂಡಿಲ್ಲ. ಅಲ್ಲದೆ, ರಾಶಿಕಾ ಹಾಗೂ ಅವರ ನಡುವಿನ ಗೆಳೆತನ ಮುಳುವಾಗಬಹುದು ಎಂದು ಸುದೀಪ್ ಮೊದಲೇ ಎಚ್ಚರಿಕೆ ನೀಡಿದ್ದರೂ ಅದನ್ನು ಅವರು ನಿರ್ಲಕ್ಷಿಸಿದ್ದರು. ಈಗ ಅವರು ದೊಡ್ಡ ದಂಡ ತೆತ್ತಬೇಕಾದ ಪರಿಸ್ಥಿತಿ ಬಂದಿದೆ. ಭಾನುವಾರದ ಎಪಿಸೋಡ್​​ನಲ್ಲಿ ಇನ್ನೂ ಒಬ್ಬರು ಎಲಿಮಿನೇಟ್ ಆಗುತ್ತಿದ್ದು, ಅದು ಸ್ಪಂದನಾ ಎಂದು ಹೇಳಲಾಗುತ್ತಾ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO: ಎಗ್ಗಿಲ್ಲದೆ ಬಸ್​​ಗಳಲ್ಲಿ ಗೂಡ್ಸ್ ಸಾಗಾಟ – Kannada News | Chitradruga Bus Incident: private buses continued Transports goods material to various places From Bengaluru

ಬೆಂಗಳೂರು, (ಡಿಸೆಂಬರ್ 27): ಚಿತ್ರದುರ್ಗದ ಗೊರ್ಲುತ್ತು ಕ್ರಾಸ್ ಬಳಿ ಸೀ ಬರ್ಡ್ ಬಸ್ ದುರಂತ ಪ್ರಕರಣ (Chitradruga Bus Incident) ಪ್ರಯಾಣಿಕರನ್ನೇ ಬೆಚ್ಚಿ ಬೀಳಿಸಿದೆ. ಆದ್ರೆ ಇಷ್ಟೆಲ್ಲ ಅವಾಂತರವಾದ್ರೂ ಇನ್ನೂ ಕೂಡ ಆರ್ ಟಿ ಓ ಅಧಿಕಾರಿಗಳು ಎಚ್ಚೆತ್ತುಕೊಳ್ತಿಲ್ಲ. ಬೆಂಗಳೂರಿನಿಂದ ಬೇರೆ ಬೇರೆ ಸ್ಥಳಗಳಿಗೆ ಹೋಗುವಂತಹ ಖಾಸಗಿ ಬಸ್ ಗಳಲ್ಲಿ (private buses) ಪರ್ಮಿಷನ್ ಇಲ್ಲದೆ ಗೂಡ್ಸ್ ಮೆಟಿರಿಯಲ್ ಸಾಗಾಟ ಮಾಡಲಾಗ್ತಿದೆ. ಬಸ್ ಗಳ ಟಾಪ್ ಹಾಗೂ ಲಗೇಜ್ ಬಾಕ್ಸ್ ಗಳಲ್ಲಿ ಎಲ್ಲಿ ನೋಡಿದ್ರೂ ಕೂಡ ಗೂಡ್ಸ್ ಮೆಟಿರಿಯಲ್ ತುಂಬಿಕೊಂಡು ಹೋಗ್ತಾರೆ, ಪ್ರಯಾಣಿಕರ ಲಗೇಜ್ ಇಡೋದಕ್ಕೂ ಜಾಗ ಇಲ್ಲದಂತದ ಪರಿಸ್ಥಿತಿ ಎದುರಾಗಿದೆ ಅಂತ ಪ್ರಯಾಣಿಕರು ಆರೋಪ ಮಾಡ್ತಿದ್ದಾರೆ. ರಾಜಾರೋಷವಾಗಿ ಎಷ್ಟೇ ಗೂಡ್ಸ್ ಮೆಟಿರಿಯಲ್ ತುಂಬಿದ್ರೂ ಆರ್ ಟಿ ಓ ಅಧಿಕಾರಿಗಳು ಕ್ರಮ ಕೈಗೊಳ್ಳದೆ ಕೇರ್ ಲೆಸ್ ಆಗಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

IND vs PAK: 2026 ರಲ್ಲಿ ಕನಿಷ್ಠ 3 ಬಾರಿ ಮುಖಾಮುಖಿಯಾಗಲಿವೆ ಭಾರತ- ಪಾಕ್ – Kannada News | India vs Pakistan 2026: T20 World Cup, U19, Women’s Match Dates and Details

ಭಾರತ ಮತ್ತು ಪಾಕಿಸ್ತಾನ (India vs Pakistan) ನಡುವಿನ ಪಂದ್ಯಕ್ಕಾಗಿಯೇ ಕೋಟ್ಯಾಂತರ ಅಭಿಮಾನಿಗಳು ಕಾಯುತ್ತಿರುತ್ತಾರೆ. 2025 ರಲ್ಲಿ ಭಾರತ ಮತ್ತು ಪಾಕಿಸ್ತಾನ ಏಷ್ಯಾಕಪ್‌ನಲ್ಲಿ ಮೂರು ಬಾರಿ ಮುಖಾಮುಖಿಯಾಗಿದ್ದವು. ಈ ಮೂರು ಪಂದ್ಯಗಳಲ್ಲಿ ಭಾರತ, ಪಾಕಿಸ್ತಾನವನ್ನು ಸೋಲಿಸಿತ್ತು. ಇತ್ತ ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ ಭಾರತ ತಂಡವು ಪಾಕಿಸ್ತಾನವನ್ನು ಏಕಪಕ್ಷೀಯವಾಗಿ ಸೋಲಿಸಿತ್ತು. ಇದೀಗ 2026 ರ ಹೊಸ ವರ್ಷದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಯಾವಾಗ ನಡೆಯಲಿದೆ ಎಂಬುದನ್ನು ನಾವು ನಿಮಗೆ ಹೇಳಲಿದ್ದೇವೆ.

2026 ರ ಟಿ20 ವಿಶ್ವಕಪ್

2026 ರ ಆರಂಭದಲ್ಲೇ ಭಾರತ ಮತ್ತು ಪಾಕಿಸ್ತಾನ ತಂಡಗಳು ಟಿ20 ವಿಶ್ವಕಪ್‌ನಲ್ಲಿ ಮುಖಾಮುಖಿಯಾಗಲಿವೆ. ಈ ಪಂದ್ಯ ಫೆಬ್ರವರಿ 15 ರಂದು ಕೊಲಂಬೊ ಮೈದಾನದಲ್ಲಿ ನಡೆಯಲಿದೆ. ಸೂರ್ಯಕುಮಾರ್ ಯಾದವ್ ನೇತೃತ್ವದಲ್ಲಿ ಟೀಂ ಇಂಡಿಯಾ ಮೈದಾನಕ್ಕಿಳಿಯಲಿದ್ದು, ಮತ್ತೊಮ್ಮೆ ಪಾಕಿಸ್ತಾನವನ್ನು ಮಣಿಸುವ ಇರಾದೆಯಲ್ಲಿದೆ. ಭಾರತ ಮತ್ತು ಪಾಕಿಸ್ತಾನ ಒಂದೇ ಗುಂಪಿನಲ್ಲಿದ್ದು, ಈ ಗುಂಪಿನ ಎರಡು ತಂಡಗಳಿಗೆ ಮುಂದಿನ ಸುತ್ತಿನಲ್ಲಿ ಅವಕಾಶ ಸಿಗಲಿದೆ.

2026 ರ ಅಂಡರ್ 19 ವಿಶ್ವಕಪ್

ಅಂಡರ್-19 ವಿಶ್ವಕಪ್ ಜಿಂಬಾಬ್ವೆ ಮತ್ತು ನಮೀಬಿಯಾದಲ್ಲಿ ನಡೆಯಲಿದೆ. ಈ ಪಂದ್ಯಾವಳಿ ಫೆಬ್ರವರಿ-ಮಾರ್ಚ್‌ನಲ್ಲಿ ನಡೆಯಲಿದೆ. ಈ ಪಂದ್ಯಾವಳಿಗೆ ಟೀಂ ಇಂಡಿಯಾವನ್ನು ಘೋಷಿಸಲಾಗಿದೆ. ಈ ಪಂದ್ಯಾವಳಿಯಲ್ಲಿ ಆಯುಷ್ ಮ್ಹಾತ್ರೆ ಟೀಂ ಇಂಡಿಯಾವನ್ನು ಮುನ್ನಡೆಸಲಿದ್ದಾರೆ. ಗುಂಪು ಹಂತದಲ್ಲಿ ಭಾರತ ಪಾಕಿಸ್ತಾನವನ್ನು ಎದುರಿಸುವುದಿಲ್ಲ. ಆದರೆ ಸೆಮಿಫೈನಲ್ ಅಥವಾ ಫೈನಲ್‌ನಲ್ಲಿ ಉಭಯ ತಂಡಗಳು ಪರಸ್ಪರ ಮುಖಾಮುಖಿಯಾಗುವ ಸಾಧ್ಯತೆಯಿದೆ. ಭಾರತದ ಮೊದಲ ಪಂದ್ಯ ಜನವರಿ 15 ರಂದು ಯುನೈಟೆಡ್ ಸ್ಟೇಟ್ಸ್ ವಿರುದ್ಧ ನಡೆಯಲಿದೆ.

ಜೂನ್ 14 ರಂದು ಮತ್ತೆ ಮುಖಾಮುಖಿ

ಇಂಗ್ಲೆಂಡ್ 2026 ರ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಅನ್ನು ಆಯೋಜಿಸುತ್ತಿದೆ. ಈ ಪಂದ್ಯಾವಳಿಯಲ್ಲಿ ಭಾರತ ಮತ್ತು ಪಾಕಿಸ್ತಾನ ಪರಸ್ಪರ ಮುಖಾಮುಖಿಯಾಗಲಿವೆ. ಜೂನ್ 12 ರಿಂದ ಪಂದ್ಯಾವಳಿ ಆರಂಭವಾಗಲಿದೆ. ಈ ಪಂದ್ಯಾವಳಿಯಲ್ಲಿ ಭಾರತ ಮತ್ತು ಪಾಕಿಸ್ತಾನ ಪರಸ್ಪರ ಮುಖಾಮುಖಿಯಾಗಲಿವೆ. ಈ ಪಂದ್ಯದ ವೇಳಾಪಟ್ಟಿಯನ್ನು ಬಹಿರಂಗಪಡಿಸಲಾಗಿಲ್ಲ. ಇತ್ತೀಚಿನ ಏಕದಿನ ವಿಶ್ವಕಪ್‌ನಲ್ಲಿ ಭಾರತ, ಪಾಕಿಸ್ತಾನವನ್ನು ಸೋಲಿಸಿತ್ತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್! – Kannada News | New Year 2026: Liquor To Be Sold From 6 AM On December 31st Says bengaluru police commissioner Seemant Kumar Singh

ಬೆಂಗಳೂರು, ಡಿಸೆಂಬರ್ 27):  2025ಕ್ಕೆ ಗುಡ್​​ಬೈ ಹೇಳಿ 2026 ಅನ್ನು ಅದ್ಧೂರಿಯಾಗಿ ಬರಮಾಡಿಕೊಳ್ಳಲು ಜನ ಸಿದ್ಧರಾಗಿದ್ದಾರೆ. ಈ ಹೊಸ ವರ್ಷಾಚರಣೆಯ (New Year 2026) ಹಿನ್ನೆಲೆಯಲ್ಲಿ ಡಿಸೆಂಬರ್ 31ರಂದು ಮದ್ಯ ಮಾರಾಟದ ಅವಧಿಯನ್ನು ವಿಸ್ತರಿಸಿ ನಗರ ಪೊಲೀಸ್ ಕಮಿಷನರ್ ಸೀಮಾಂತ್‌ಕುಮಾರ್ ಸಿಂಗ್ (Seemant Kumar Singh) ಅವರು ಮಹತ್ವದ ಆದೇಶ ಹೊರಡಿಸಿದ್ದಾರೆ. ಈ ಆದೇಶದಂತೆ, ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಮದ್ಯ ಮಾರಾಟಕ್ಕೆ ನಿಗದಿತ ಸಮಯವನ್ನು ಬೆಳಿಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 1 ಗಂಟೆಯವರೆಗೆ ವಿಸ್ತರಿಸಲಾಗಿದೆ. ಎಣ್ಣೆ ಪ್ರಿಯರಿಗಾಗಿ ಹೊಸ ವರ್ಷ ಆಗಮನಕ್ಕಾಗಿ ಹಿಂದಿನ ದಿನ ಅಂದರೆ ಡಿಸೆಂಬರ್ 31ರ ಬೆಳಗ್ಗೆ ಸೂರ್ಯೋದಯ ಆಗುವ ಮುನ್ನವೇ ಬಾರ್​​​​​ಗಳು ಓಪನ್ ಆಗಿರುತ್ತವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಹುಬ್ಬಳ್ಳಿ ಮರ್ಯಾದೆ ಹತ್ಯೆ: ಮೇಲ್ಜಾತಿ ಯುವತಿಯನ್ನ ಮದ್ವೆಯಾಗಿದ್ದಕ್ಕೆ ಲಿಂಗದೀಕ್ಷೆ ಪಡೆದಿದ್ದ ದಲಿತ ಕುಟುಂಬ – Kannada News | Hubballi Honour Killing Case: vivekananda Dalit Family Follows Basava tatva Said By Minister Santosh Lad

ಹುಬ್ಬಳ್ಳಿ, (ಡಿಸೆಂಬರ್ 27): ಇದೇ ಡಿಸೆಂಬರ್ 21ರಂದು ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಇನಾಂವೀರಾಪುರ ಗ್ರಾಮದಲ್ಲಿ ನಡೆದ ಮರ್ಯಾದೆ ಹತ್ಯೆ (Hubballi Honour Killing Case) ದೇಶವೇ ಬೆಚ್ಚಿಬೀಳಿಸಿದೆ. ಇನಾಂವೀರಾಪುರ ಗ್ರಾಮದ ದಲಿತ ಸಮುದಾಯದ (Dalit Family )ವಿವೇಕಾನಂದ (vivekananda) ಎನ್ನುವ ಯುವಕನನ್ನು ಮೇಲ್ಜಾತಿಯ ಯುವತಿ ಮಾನ್ಯ ಪ್ರೀತಿಸಿ ಮದ್ವೆಯಾಗಿದ್ದು, ಇದು ಮಾನ್ಯಳ ಕುಟುಂಬಸ್ಥರ ಆಕ್ರೋಶಕ್ಕೆ ಕಾರಣವಾಗಿತ್ತು. ಹೀಗಾಗಿ ಮಾನ್ಯಳ ತಂದೆ, ಯುವಕನ ಮನೆಗೆ ನುಗಿದ್ದು, ಆರು ತಿಂಗಳು ಗರ್ಭಿಣಿ ಎನ್ನುವುದನ್ನು ನೋಡದೇ ಮಾನ್ಯಳನ್ನು ಕೊಚ್ಚಿ ಕೊಂದಿದ್ದಾನೆ. ಆದ್ರೆ, ಇದೀಗ ಹೊಸ ಅಂಶವೊಂದು ಬೆಳಕಿಗೆ ಬಂದಿದೆ. ಮೇಲ್ಜಾತಿ ಯುವತಿಯನ್ನು ಮದುವೆ ಆಗಿರುವುದಕ್ಕೆ ವಿವೇಕಾಂನದ ದಲಿತ ಸಮುದಾಯವಾಗಿದ್ದರೂ ಸಹ ಲಿಂಗದೀಕ್ಷೆ ಪಡೆದುಕೊಂಡಿದ್ದು, ಬಸವ ತತ್ವ ಪಾಲನೆ ಮಾಡುತ್ತಿತ್ತು ಎನ್ನುವುದನ್ನು ಸ್ವತಃ ಸಚಿವ ಸಂತೋಷ್ ಲಾಡ್ ಸ್ಫೋಟಕ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ.

ಬಸವತತ್ವ ಪಾಲಿಸುತ್ತಿರುವ ದಲಿತ ಕುಟುಂಬ

ಹೌದು.. ಇಂದು (ಡಿಸೆಂಬರ್ 27) ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್, ಹುಬ್ಬಳ್ಳಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿವೇಕಾನಂದ ಕುಟುಂಬಸ್ಥರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ನಂತರ ಕುಟುಂಬಕ್ಕೆ ತಮ್ಮ ವ್ಯಯಕ್ತಿಕವಾಗಿ ಎರಡುವರೆ ಲಕ್ಷ ಪರಿಹಾರ ನೀಡಿದರು. ಬಳಿಕ ಘಟನೆ ನಡೆದ ಇನಾಂವೀರಾಪುರ ಗ್ರಾಮಕ್ಕೆ ತೆರಳಿ ವಿವೇಕಾನಂದ ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬಕ್ಕೆ ಧೈರ್ಯ ತುಂಬಿದರು. ಇನ್ನು ಇದೇ ವೇಳೆ ವಿವೇಕಾನಂದ ಕುಟುಂಬ ಬಸವತತ್ವ ಪಾಲಿಸುತ್ತಿದ್ದಿದ್ದನ್ನು ನೋಡಿ ಅಚ್ಚರಿಯಾಗಿದ್ದಾರೆ.

ಇದನ್ನೂ ನೋಡಿ: ಹುಬ್ಬಳ್ಳಿ ಮರ್ಯಾದೆ ಹತ್ಯೆ: ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ

ಈ ಬಗ್ಗೆ ಮಾತನಾಡಿದ ಸಂತೋಷ್ ಲಾಡ್, ದಲಿತ ಸಮುದಾಯದ ಕುಟುಂಬ, ತಮ್ಮ ಮನೆಯಲ್ಲಿ ಬಸವಣ್ಣ ಮತ್ತು ಅಂಬೇಡ್ಕರ ಭಾವಚಿತ್ರ ಇಟ್ಟುಕೊಂಡಿದ್ದಾರೆ. ಬಸವತತ್ವ ಪಾಲನೆ ಮಾಡಿದ್ದಾರೆ. ಇಂತಹ ಕುಟುಂಬದ ಯುವಕನನ್ನು ಮದುವೆಯಾಗಿದ್ದಕ್ಕೆ ತಂದೆಯೇ ಬರ್ಬರ ಕೊಲೆ ಮಾಡಿದ್ದು ದುರ್ದೈವದ ಸಂಗತಿಯಾಗಿದೆ. ಮನುಷ್ಯತ್ವ ಬಿಟ್ಟು ಯಾರು ಬದುಕಬಾರದು ಎಂದರು.

ಇನಾಂವೀರಾಪುರ ಗ್ರಾಮದ ಲಿಂಗಾಯತ ಸಮುದಾಯದ ಮಾನ್ಯಾ ಮತ್ತು ಅದೇ ಗ್ರಾಮದ ದಲಿತ ಸಮುದಾಯದ ವಿವೇಕಾನಂದ್ ಕಳೆದ ಜೂನ್ ನಲ್ಲಿ ಮದುವೆಯಾಗಿದ್ದರು. ಇದು ಮಾನ್ಯಾ ತಂದೆ ಪ್ರಕಾಶಗೌಡ ಸಿಟ್ಟಿಗೆ ಕಾರಣವಾಗಿತ್ತು. ಹೀಗಾಗಿ ಡಿಸೆಂಬರ್ 21 ರಂದು ಆರು ತಿಂಗಳ ಗರ್ಭಿಣಿ ಮಗಳನ್ನು ಕೊಲೆ ಮಾಡಿದ್ದ.ಜೊತೆಗೆ ವಿವೇಕಾನಂದ ಕುಟುಂಬದ ಮೇಲೆ ಕೂಡಾ ಮಾರಣಾಂತಿಕ ಹಲ್ಲೆಯಾಗಿತ್ತು.

ಗ್ರಾಮದಲ್ಲಿ ಭಯದ ವಾತಾರವಣ

ಘಟನೆ ನಡೆದು ಒಂದು ವಾರವಾದರೂ ಸಹ ಇನಾಂವೀರಾಪುರ ಗ್ರಾಮದಲ್ಲಿ ಭಯದ ವಾತಾರವಣ ಕಡಿಮೆಯಾಗಿಲ್ಲ. ಇತ್ತ ವಿವೇಕಾನಂದ ಕುಟುಂಬ ಆಸ್ಪತ್ರೆಯಲ್ಲಿದ್ದರೆ, ಆರೋಪಿ ಪ್ರಕಾಶಗೌಡ್ ಮತ್ತು ಆತನ ಅನೇಕ ಸಂಬಂಧಿಗಳು ಜೈಲಿನಲ್ಲಿದ್ದಾರೆ. ಇನ್ನು ಅನೇಕರು ಗ್ರಾಮ ಬಿಟ್ಟು ಹೋಗಿದ್ದು, ಪ್ರಕಾಶಗೌಡ ಮನೆಗೆ ವಾರದಿಂದ ಬಿದ್ದಿರೋ ಬೀಗ ತಗೆದಿಲ್ಲ. ಇನ್ನೊಂದೆಡೆ ಗ್ರಾಮದಲ್ಲಿ ಪೊಲೀಸ್ ಬಂದೋಬಸ್ತ್​​ ಮುಂದುರೆದಿದೆ. ಹೀಗಾಗಿ ಗ್ರಾಮದ ಜನರು ಯಾರು ಕೂಡ ಈ ಘಟನೆ ಬಗ್ಗೆ ಮಾತನಾಡುತ್ತಿಲ್ಲ. ಅಲ್ಲದೇ ಹೊರಗಡೆ ಬರಲು ಸಹ ಭಯ ಪಡುವಂತಹ ಸ್ಥಿತಿ ನಿರ್ಮಾಣವಾಗಿದೆ.

ಒಟ್ಟಿನಲ್ಲಿ ಇನಾಂವೀರಾಪುರ ಗ್ರಾಮದಲ್ಲಿ ಇನ್ನು ಆತಂಕದ ವಾತಾವರಣವಿದೆ. ಈ ನಿಟ್ಟಿನಲ್ಲಿ ಪೊಲೀಸರು ವಿವೇಕಾನಂದ ಕುಟುಂಬಕ್ಕೆ ಸೂಕ್ತ ಬಂದೂಬಸ್ತ್​​ ನೀಡಬೇಕಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಭಾರತ ತಂಡ ಪ್ರಕಟ; ವೈಭವ್​ ಸೂರ್ಯವಂಶಿಗೆ ನಾಯಕತ್ವ – Kannada News | India U19 Squad for SA Tour: Vaibhav Suryavanshi to Lead as World Cup Prep Begins

ಮುಂದಿನ ಜನವರಿ ತಿಂಗಳಿಂದ ಆರಂಭವಾಗಲಿರುವ 19 ವರ್ಷದೊಳಗಿನವರ ವಿಶ್ವಕಪ್​ಗಾಗಿ (U19 World Cup) ಬಿಸಿಸಿಐ 15 ಸದಸ್ಯರ ಟೀಂ ಇಂಡಿಯಾ ತಂಡವನ್ನು ಪ್ರಕಟಿಸಿದೆ. ಈ ಐಸಿಸಿ (ICC) ಟೂರ್ನಿಯಲ್ಲಿ ಆಯುಷ್ ಮ್ಹಾತ್ರೆ ನಾಯಕನಾಗಿ ತಂಡವನ್ನು ಮುನ್ನಡೆಸಿದರೆ, ವಿಹಾನ್ ಮಲ್ಹೋತ್ರಾ ಉಪನಾಯಕನ ಜವಾಬ್ದಾರಿ ತೆಗೆದುಕೊಳ್ಳಲಿದ್ದಾರೆ. ನಿರೀಕ್ಷೆಯಂತೆಯೇ ಸ್ಫೋಟಕ ಬ್ಯಾಟ್ಸ್‌ಮನ್ ವೈಭವ್ ಸೂರ್ಯವಂಶಿ (Vaibhav Suryavanshi) ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ವಿಶ್ವಕಪ್ ಜೊತೆಗೆ ಟೀಂ ಇಂಡಿಯಾ ಮುಂದಿನ ವರ್ಷದ ಆರಂಭದಲ್ಲಿ ಮೂರು ಪಂದ್ಯಗಳ ಏಕದಿನ ಸರಣಿಗಾಗಿ ದಕ್ಷಿಣ ಆಫ್ರಿಕಾ ಪ್ರವಾಸ ಮಾಡಲಿದೆ. ಅಂಡರ್-19 ವಿಶ್ವಕಪ್‌ಗೆ ಆಯ್ಕೆಯಾದ ಅದೇ ತಂಡ ಈ ಸರಣಿಯಲ್ಲೂ ಆಡಲಿದೆ.

ವೈಭವ್​ಗೆ ನಾಯಕತ್ವ

ಅಂಡರ್-19 ಏಕದಿನ ವಿಶ್ವಕಪ್‌ಗೆ ಮುಂಚಿತವಾಗಿ ಈ ಸರಣಿ ಯುವ ಭಾರತ ತಂಡಕ್ಕೆ ನಿರ್ಣಾಯಕವಾಗಿದೆ. ಆಯುಷ್ ಮ್ಹಾತ್ರೆ ಮತ್ತು ವಿಹಾನ್ ಮಲ್ಹೋತ್ರಾ ಈ ಸರಣಿಯಲ್ಲಿ ಆಡುವುದಿಲ್ಲ ಎಂದು ಬಿಸಿಸಿಐ ಘೋಷಿಸಿದೆ. ಇಬ್ಬರೂ ಗಾಯಗಳಿಂದ ಬಳಲುತ್ತಿದ್ದು, ಅವರಿಗೆ ವಿಶ್ರಾಂತಿ ನೀಡಲಾಗಿದೆ ಎಂದು ಬಿಸಿಸಿಐ ತಿಳಿಸಿದೆ. ಪರಿಣಾಮವಾಗಿ, ಈ ಪ್ರವಾಸದಲ್ಲಿ ವೈಭವ್ ಸೂರ್ಯವಂಶಿ ತಂಡವನ್ನು ಮುನ್ನಡೆಸಿದರೆ, ಆರನ್ ಜಾರ್ಜ್ ಅವರನ್ನು ಉಪನಾಯಕರನ್ನಾಗಿ ನೇಮಿಸಿದೆ. ಮೂರು ಪಂದ್ಯಗಳು ಕ್ರಮವಾಗಿ ಜನವರಿ 3, 5 ಮತ್ತು 7 ರಂದು ವಿಲೋಮೋರ್ ಪಾರ್ಕ್‌ನಲ್ಲಿ ನಡೆಯಲಿವೆ.

2024 ರಲ್ಲಿ ಟೀಂ ಇಂಡಿಯಾ ಪರ ಪಾದಾರ್ಪಣೆ ಮಾಡಿದ ವೈಭವ್ ಸೂರ್ಯವಂಶಿ ಅವರ ಮೊದಲ ನಾಯಕತ್ವ ಇದಾಗಿದೆ. ಅವರ ನಾಯಕತ್ವದಲ್ಲಿ, ಭಾರತೀಯ ತಂಡವು ಜನವರಿ 3 ರಂದು ಪ್ರಾರಂಭವಾಗುವ ಈ ಸರಣಿಯಲ್ಲಿ ಮೂರು ಏಕದಿನ ಪಂದ್ಯಗಳನ್ನು ಆಡಲಿದೆ. ಈ ಸರಣಿಯು ವಿಶ್ವಕಪ್‌ಗೆ ತಯಾರಿ ನಡೆಸಲು ಸಹಾಯ ಮಾಡುತ್ತದೆ. ವೈಭವ್‌ಗೆ ಇದು ವಿಶೇಷ ಅವಕಾಶವಾಗಿದ್ದು, ಅಲ್ಲಿ ಅವರು ತಮ್ಮ ಬ್ಯಾಟಿಂಗ್ ಪರಾಕ್ರಮವನ್ನು ಪ್ರದರ್ಶಿಸಲು ಮತ್ತು ನಾಯಕತ್ವದ ಪಟ್ಟುಗಳನ್ನು ಕಲಿಯಲು ಸಾಧ್ಯವಾಗುತ್ತದೆ. ಈ ಏಕದಿನ ಸರಣಿಯು ವಿಶ್ವಕಪ್‌ಗೆ ಮೊದಲು ನಡೆಯಲಿದ್ದು, ಜನವರಿ ಮೊದಲ ವಾರದಲ್ಲಿ ಆರಂಭವಾಗಲಿದೆ.

ದಕ್ಷಿಣ ಆಫ್ರಿಕಾ ಪ್ರವಾಸಕ್ಕಾಗಿ ಭಾರತ ತಂಡ: ವೈಭವ್ ಸೂರ್ಯವಂಶಿ (ನಾಯಕ), ಆರನ್ ಜಾರ್ಜ್ (ಉಪನಾಯಕ), ವೇದಾಂತ್ ತ್ರಿವೇದಿ, ಅಭಿಗ್ಯಾನ್ ಕುಂಡು (ವಿಕೆಟ್ ಕೀಪರ್), ಹರ್ವಂಶ್ ಸಿಂಗ್ (ವಿಕೆಟ್ ಕೀಪರ್), ಆರ್.ಎಸ್. ಅಂಬ್ರಿಸ್, ಕನಿಷ್ಕ್ ಚೌಹಾಣ್, ಖಿಲನ್ ಎ. ಪಟೇಲ್, ಮೊಹಮ್ಮದ್ ಅನನ್, ಹೆನಿಲ್ ಪಟೇಲ್, ಡಿ. ದೀಪೇಶ್, ಕಿಶನ್ ಕುಮಾರ್ ಸಿಂಗ್, ಉಧವ್ ಮೋಹನ್, ಯುವರಾಜ್ ಗೋಹಿಲ್, ರಾಹುಲ್ ಕುಮಾರ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 9:40 pm, Sat, 27 December 25

Source link

ಬಿಗ್ ಬಾಸ್ ಆದೇಶಕ್ಕೆ ನಲುಗಿ ಹೋದ ಗಿಲ್ಲಿ ನಟ; ಇದಕ್ಕೆ ಕಾರಣ ರಘು-ಸೂರಜ್? – Kannada News | Bigg Boss Kannada 12: Gilli Nata Captaincy Twist and Family Week Voting Shock

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ (BBK 12) ಗಿಲ್ಲಿ ನಟ ಅವರು ಈ ವಾರ ತಾವೇ ಕ್ಯಾಪ್ಟನ್ ಎಂದು ಬೀಗಿದ್ದರು. ಈ ವಾರ ಫ್ಯಾಮಿಲಿ ವೀಕ್ ಆಗಿತ್ತು. ಈ ಪೈಕಿ ಬಹುತೇಕರು ಗಿಲ್ಲಿ ಕ್ಯಾಪ್ಟನ್ ಆಗಬೇಕು ಎಂದು ಬಯಸಿದ್ದರು. ಗಿಲ್ಲಿಗೆ ಹೆಚ್ಚು ವೋಟ್ ಬಿದ್ದಿದ್ದರಿಂದ ಅವರು ತಾವೇ ಕ್ಯಾಪ್ಟನ್ ಎಂದುಕೊಂಡಿದ್ದರು. ಆದರೆ, ಬಿಗ್ ಬಾಸ್ ಕೊಟ್ಟ ಟ್ವಿಸ್ಟ್​​ಗೆ ಗಿಲ್ಲಿ ನಲುಗಿ ಹೋದರು. ಆ ಬಗ್ಗೆ ಇಲ್ಲಿದೆ ವಿವರ.

ಈ ವಾರ ಗಿಲ್ಲಿ ನಟ ಅವರಿಗೆ ತುಂಬಾನೇ ಹೈಪ್ ಸಿಕ್ಕಿತು. ಮನೆಯಿಂದ ಬಂದ ಸ್ಪರ್ಧಿಗಳ ಕುಟುಂಬದವರು ಗಿಲ್ಲಿಯನ್ನು ಮೆಚ್ಚಿಕೊಂಡರು. ಹೀಗಾಗಿ, ಅವರಿಗೆ ಕ್ಯಾಪ್ಟನ್ ಆಗಬೇಕು ಎಂದು ಸಾಕಷ್ಟು ವೋಟ್​​ಗಳು ಬಿದ್ದವು. ಅತ್ಯಧಿಕ ವೋಟ್ ಪಡೆದಿದ್ದರಿಂದ ತಾವೇ ಕ್ಯಾಪ್ಟನ್ ಎಂದು ಅವರು ಭಾವಿಸಿದ್ದರು. ಉಳಿದ ಸ್ಪರ್ಧಿಗಳಿಗೂ ಅದೇ ರೀತಿಯ ಊಹೆ ಇತ್ತು. ಆದರೆ, ಆ ಊಹೆ ತಪ್ಪಾಗಿದೆ.

‘ಅತಿ ಹೆಚ್ಚು ವೋಟ್ ಪಡೆದ ಗಿಲ್ಲಿ ಎಂದು ಪಾಸ್ ಕೊಟ್ಟ ಬಿಗ್ ಬಾಸ್ ಅಶ್ವಿನಿ ಹೆಸರನ್ನು ಕೂಡ ಸೇರಿಸಿದರು. ಆ ಬಳಿಕ ಗಿಲ್ಲಿ ಶಾಕ್ ಆಗಿ ಕೈ ಎತ್ತಿದರು. ‘ಅವರಿಗೆ ಬಂದಿದ್ದು ಕೇವಲ ಎರಡು ವೋಟ್ ಮಾತ್ರ ಅಲ್ಲವೇ’ ಎಂದು ಪ್ರಶ್ನೆ ಮಾಡಿದರು. ಆದರೆ, ಬಿಗ್ ಬಾಸ್ ಇದಕ್ಕೆ ಸೊಪ್ಪು ಹಾಕಿಲ್ಲ. ‘ಅಶ್ವಿನಿ ಹಾಗೂ ಗಿಲ್ಲಿ ಕ್ಯಾಪ್ಟನ್ಸಿ ಟಾಸ್ಕ್​​ಗೆ ಆಯ್ಕೆ ಆಗಿದ್ದಾರೆ’ ಎಂದು ಘೋಷಿಸಿದರು. ಗಿಲ್ಲಿ ಆಟವನ್ನು ಗೆದ್ದು ಕ್ಯಾಪ್ಟನ್ ಆದರು.

ಇದನ್ನೂ ಓದಿ: ಟಾಸ್ಕ್ ಆಡಿಯೇ ಕ್ಯಾಪ್ಟನ್ ಆದ ಗಿಲ್ಲಿ; ಆರಂಭದಲ್ಲೇ ನಿಯಮ ಮುರಿದಿದ್ದಕ್ಕೆ ಬಿಗ್ ಬಾಸ್ ಎಚ್ಚರಿಕೆ

ಬಿಗ್ ಬಾಸ್​​ಗೆ ಟಾಸ್ಕ್ ಕೊಡೋಕೆ ರಘು ಹಾಗೂ ಸೂರಜ್ ಆಡಿದ ಮಾತು ಕಾರಣವೇ ಎನ್ನುವ ಪ್ರಶ್ನೆ ಮೂಡಿದೆ. ಈ ಮೊದಲು ಮಾತನಾಡಿದ ರಘು, ‘ಗಿಲ್ಲಿ ಇವತ್ತು ಮಲಗೋದಿಲ್ಲ. ಈಗಾಗಲೇ ನಾಲ್ಕು ವೋಟ್ ಸಿಕ್ಕಿದೆ. ಅವನು ಗೇಮ್ ಆಡಿಯಂತೂ ಕ್ಯಾಪ್ಟ್ ಆಗಲ್ಲ, ಹೀಗಾದರೂ ಮಾಡೋಣ ಅಂತ’ ಎಂದು ರಘು ಹೇಳಿದ್ದರು. ‘ಬಿಗ್ ಬಾಸ್​ ಪ್ಲ್ಯಾನ್ ಹಾಕಿದಾರೆ’ ಎಂದು ಸೂರಜ್ ಹೇಳಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 9:41 pm, Sat, 27 December 25

Source link

ಪ್ರಶಸ್ತಿಗಳು ಪದವಿಗಳಲ್ಲ… ವ್ಯಕ್ತಿಯ ಹೆಸರಿಗೆ ಭಾರತ ರತ್ನ, ಪದ್ಮಪ್ರಶಸ್ತಿಗಳನ್ನು ಸೇರಿಸುವಂತಿಲ್ಲ: ಬಾಂಬೆ ಹೈಕೋರ್ಟ್ – Kannada News | Bharat Ratna, Padma Awards Not Titles, Can’t Be Used As Prefix, Suffix: Bombay High Court

ನವದೆಹಲಿ, ಡಿಸೆಂಬರ್ 27: ಭಾರತ ರತ್ನ, ಪದ್ಮವಿಭೂಷಣ, ಪದ್ಮಭೂಷಣ, ಪದ್ಮಶ್ರೀ ಇತ್ಯಾದಿ ನಾಗರಿಕ ಪ್ರಶಸ್ತಿಗಳು (civilian awards) ಅಧಿಕೃತ ಪದವಿಗಳಲ್ಲ (titles). ಅವುಗಳನ್ನು ಪ್ರಶಸ್ತಿವಿಜೇತರ ಹೆಸರಿನ ಹಿಂದೆ ಅಥವಾ ಮುಂದೆ ಜೋಡಿಯಾಗಿ ಬಳಸಲು ಆಗುವುದಿಲ್ಲ ಎಂದು ಬಾಂಬೆ ಹೈಕೋರ್ಟ್ ಸ್ಪಷ್ಟಪಡಿಸಿದೆ. ಪದ್ಮಶ್ರೀ ಡಾ. ಶರದ್ ಎಂ ಹರ್ಡೀಕರ್ ಅವರನ್ನೊಳಗೊಂಡ ರಿಟ್ ಅರ್ಜಿಯೊಂದರ ವಿಚಾರಣೆ ವೇಳೆ ಬಾಂಬೆ ಹೈಕೋರ್ಟ್​ನ ಏಕಸದಸ್ಯ ಪೀಠದ ನ್ಯಾಯಾಧೀಶ ಸೋಮಶೇಖರ್ ಸುಂದರೇಶನ್ ಈ ತೀರ್ಪು ನೀಡಿದ್ದಾರೆ.

ಹೈಕೋರ್ಟ್​ನಿಂದ ಬಂದ ಈ ತೀರ್ಪು ಹೊಸದಲ್ಲ. ಈ ಹಿಂದೆ ಸಾಂವಿಧಾನಿಕ ಪೀಠವೊಂದು ನೀಡಿದ ತೀರ್ಪನ್ನು ಪುನರುಚ್ಚರಿಸಿದೆ. 1995ರಲ್ಲಿ ಸುಪ್ರೀಂಕೋರ್ಟ್​ನ ಸಾಂವಿಧಾನಿಕ ಪೀಠವು ನಾಗರಿಕ ಪ್ರಶಸ್ತಿಗಳನ್ನು ವ್ಯಕ್ತಿಯ ಹೆಸರಿನೊಂದಿಗೆ ಬಳಸಬಾರದು ಎಂದು ತೀರ್ಪು ಕೊಟ್ಟಿತ್ತು. ಬಾಂಬೆ ಹೈಕೋರ್ಟ್​ನ ಏಕಸದಸ್ಯ ಪೀಠವು ಆ ಸಾಂವಿಧಾನಿಕ ಪೀಠದ ತೀರ್ಪನ್ನು ಉಲ್ಲೇಖಿಸುತ್ತಾ, ನಾಗರಿಕ ಪ್ರಶಸ್ತಿಗಳನ್ನು ವ್ಯಕ್ತಿಯ ಹೆಸರಿನೊಂದಿಗೆ ಬಳಸುವುದು ಕಾನೂನಿನ ಮಾನ್ಯತೆ ಇರುವುದಿಲ್ಲ ಎಂದು ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿ: ಸೊಮಾಲಿಲ್ಯಾಂಡ್​ಗೆ ಮಾನ್ಯತೆ ಕೊಟ್ಟ ವಿಶ್ವದ ಏಕೈಕ ದೇಶ ಇಸ್ರೇಲ್; ಯಾವುದಿದು ಆಫ್ರಿಕನ್ ನಾಡು?

ಡಾ. ತ್ರಂಬಕ್ ವಿ ದಾಪಕೇಕರ್ ವರ್ಸಸ್ ಪದ್ಮಶ್ರೀ ಡಾ. ಶರದ್ ಎಂ ಹರ್ಡೀಕರ್ ಪ್ರಕರಣದ ವಿಚಾರಣೆ ವೇಳೆ ನ್ಯಾ| ಸೋಮಶೇಖರ್ ಸುಂದರೇಶನ್ ಅವರು ಮೇಲಿನ ವಿಚಾರ ಪ್ರಸ್ತಾಪಿಸಿದರು. ಶರದ್ ಹರ್ಡೀಕರ್ ಅವರ ಹೆಸರಿನ ಜೊತೆ ಪದ್ಮಶ್ರೀ ಅನ್ನು ಸೇರಿಸಿರುವುದಕ್ಕೆ ನ್ಯಾಯಾಧೀಶರು ಆಕ್ಷೇಪಿಸಿದರು.

ನಾಗರಿಕ ಪ್ರಶಸ್ತಿಗಳನ್ನು ಗೌರವ ಪದವಿಗಳಂತೆ ಬಳಸಬಾರದು. ಹಾಗೆ ಬಳಸಲು ಕಾನೂನಿನಲ್ಲಿ ಅನುಮತಿ ಇಲ್ಲ. ಕೋರ್ಟ್ ವಿಚಾರಗಳಲ್ಲಿ ಇದನ್ನು ಬಳಸಬಾರದು ಎಂದು ಜಡ್ಜ್ ತಮ್ಮ ತೀರ್ಪಿನಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಭಾರತ ವಿರೋಧಿ ಶಕ್ತಿಗಳೊಂದಿಗೆ ರಾಹುಲ್ ಗಾಂಧಿ? ಜರ್ಮನಿಗೆ ಹೋಗಿದ್ದು ಯಾಕೆ? ಬಿಜೆಪಿ ಟೀಕೆ

ಹಾಗಾದರೆ ವ್ಯಕ್ತಿಯ ಜೊತೆ ಪ್ರಶಸ್ತಿ ಹೆಸರು ಬಳಸಲೇ ಬಾರದಾ?

ನಟ ಡಾ. ರಾಜಕುಮಾರ್ ಅವರನ್ನು ಪದ್ಮಭೂಷಣ ಡಾ. ರಾಜಕುಮಾರ್ ಎಂದು ಕರೆಯುವುದು ರೂಢಿ. ಆದರೆ, ಅಧಿಕೃತ ದಾಖಲೆಗಳಲ್ಲಿ ಅವರ ಹೆಸರರಿನ ಜೊತೆ ಪದ್ಮಭೂಷಣ, ನಟ ಇತ್ಯಾದಿ ವಿಶೇಷಣಗಳು ಇರುವಂತಿಲ್ಲ. ಇಲ್ಲಿ ವಿಶ್ವವಿದ್ಯಾಲಯಗಳಲ್ಲಿ ಸಿಗುವ ಡಾಕ್ಟರೇಟ್ ಪದವಿಗಳನ್ನು ಹೆಸರಿನ ಜೊತೆ ಬಳಸಲು ಅಡ್ಡಿ ಇಲ್ಲ. ಆದರೆ, ಪ್ರಶಸ್ತಿಗಳ ಹೆಸರು ಬಳಸುವಂತಿಲ್ಲ. ಹಾಗೆಯೇ, ಮಾಧ್ಯಮಗಳಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಹೀಗೆ ಬಳಸಲು ಅಡ್ಡಿ ಇರುವುದಿಲ್ಲ. ಅಧಿಕೃತ ದಾಖಲೆಗಳಲ್ಲಿ ಮಾತ್ರ ಇದನ್ನು ಬಳಸಬಾರದು ಎಂಬುದು ಕೋರ್ಟ್​ನ ತೀರ್ಪಿನ ಇಂಗಿತ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Exit mobile version