ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮೀ ಹಣ – Kannada News | Gruhalakshmi Schemes 24th Instalment Credited to Belagavi Beneficiaries
ಬೆಳಗಾವಿ, ಡಿಸೆಂಬರ್ 30: ಹೊಸ ವರ್ಷದ ಸಂದರ್ಭದಲ್ಲಿ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಯೋಜನೆಯ 24ನೇ ಕಂತಿನ 2,000 ರೂ. ಬೆಳಗಾವಿ ಜಿಲ್ಲೆಯ ಹಲವು ಮಹಿಳೆಯರ ಖಾತೆಗೆ ಸಂದಾಯವಾಗಿದೆ. ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯದಲ್ಲಿ ವಿಳಂಬವಾಗುತ್ತಿರುವ ಬಗ್ಗೆ ಟಿವಿ9 ನಿರಂತರವಾಗಿ ವರದಿ ಪ್ರಸಾರ ಮಾಡಿತ್ತು. ಇನ್ನು ಹಣ ಪಡೆದ ಫಲಾನುಭವಿಗಳು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ. ಹಣ ಹಾಕೋದು ವಿಳಂಬವಾದ ಹಿನ್ನೆಲೆ ಮಹಿಳೆಯರಲ್ಲಿ ಅಸಮಾಧಾನವಿತ್ತು. ಆದರೆ ಈಗ ಹೊಸ ವರ್ಷದ ಹೊತ್ತಲ್ಲಿ ಹಣ…