ಪೊಲೀಸ್ ಠಾಣೆ ಮೆಟ್ಟಿಲೇರಿದ ಜನಿವಾರ ದಂಗಲ್: ವಿವಾದ ಬೆನ್ನಲ್ಲೇ ಮೂವರು ವಶಕ್ಕೆ – Kannada News | Bangaluru; Janivara CET Controversy: Three Taken into Custody by Madiwala Police
ಬೆಂಗಳೂರು, ಏಪ್ರಿಲ್ 24: ಕರ್ನಾಟಕದಲ್ಲಿ ಮತ್ತೆ ಜನಿವಾರ ದಂಗಲ್ (Janivara Row) ಮುನ್ನೆಲೆಗೆ ಬಂದಿದೆ. ಸಿಇಟಿ ಪರೀಕ್ಷಾರ್ಥಿಗಳ ಜನಿವಾರ ತೆಗೆಸಲು ನಿಯಮ ಇಲ್ಲದಿದ್ದರೂ ತೆಗೆಸಿರೋದಕ್ಕೆ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಬೆನ್ನಲ್ಲೇ ಇದೀಗ ಮಡಿವಾಳ ಠಾಣೆಯ ಪೊಲೀಸರಿಂದ ಮೂವರನ್ನು ವಶಕ್ಕೆ ಪಡೆಯಲಾಗಿದೆ. ವಿದ್ಯಾರ್ಥಿ ನೀಡಿದ ದೂರಿನ ಅನ್ವಯ ಕೇಸ್ ದಾಖಲಿಸಿಕೊಂಡು ಪರೀಕ್ಷಾ ಪರಿವೀಕ್ಷಕರಾದ ಸರಿತಾ, ಗಿರಿಜಾ ಹಾಗೂ ಪರೀಕ್ಷೆ ಕೇಂದ್ರದ ಉಸ್ತುವಾರಿ ಸುಧಾಕರ್ರನ್ನು ವಶಕ್ಕೆ ಪಡೆಯಲಾಗಿದೆ. ಬಿಎನ್‌ಎಸ್ ಸೆಕ್ಷನ್ 299, 302ರಡಿ ಕೇಸ್ ದಾಖಲಾಗಿದೆ. ಇನ್ನು ವಿವಾದ ಕುರಿತಾಗಿ…