ಮದುವೆ ಮನೆಯಲ್ಲಿ ಕಳ್ಳತನಕ್ಕೆ ಬಂದಾಗಲೇ ಪೊಲೀಸರ ಬಲೆಗೆ ಬಿದ್ದ ಖರ್ನಾಕ್ ಕಳ್ಳ: ಜೈಲಿನಿಂದಲೇ ಬಂದಿದ್ದವ ಮತ್ತೆ ಸೆರೆಮನೆಗೆ
ಬೆಂಗಳೂರು, ಮಾರ್ಚ್ 18: ಮದುವೆ ಮನೆಗಳಲ್ಲಿ ಸರಣಿ ಕಳ್ಳತನ ನಡೆಸುತ್ತಿದ್ದ ಕುಖ್ಯಾತ ಆರೋಪಿಯೋರ್ವನನ್ನು ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ. ಬಾಬು ಅಲಿಯಾಸ್ ಪಲ್ಸರ್ ಬಾಬು ಬಂಧಿತ ಆರೋಪಿಯಾಗಿದ್ದು, ಪ್ಯಾಲೇಸ್ ಗ್ರೌಂಡ್‌ನಲ್ಲಿ ನಡೆದ ಮದುವೆಯೊಂದರಲ್ಲಿ ಕಳ್ಳತನಕ್ಕೆ ಬಂದಾಗಲೇ ಪೊಲೀಸರು ಆತನನ್ನು ರೆಡ್ ಹ್ಯಾಂಡ್ ಆಗಿ ಅರೆಸ್ಟ್ ಮಾಡಿದ್ದಾರೆ. ಮದುವೆ ಮನೆಗಳಲ್ಲಿ ಚಿಕ್ಕ ಮಕ್ಕಳನ್ನು ಗುರಿಯಾಗಿಸಿಕೊಂಡು ಚಿನ್ನಾಭರಣ, ಮೊಬೈಲ್ ಸೇರಿದಂತೆ ಬೆಲೆಬಾಳುವ ವಸ್ತುಗಳನ್ನು ದೋಚುತ್ತಿದ್ದ ಈ ಖತರ್ನಾಕ್ ಕಳ್ಳನ ಬಂಧನದಿಂದ ಹಲವು ಪ್ರಕರಣಗಳು ಬೆಳಕಿಗೆ ಬಂದಿವೆ. ಈ ಪಲ್ಸರ್ ಬಾಬು ದೊಡ್ಡ…