ಕೆಲಸ ಮಾಡ್ತಿದ್ದ ಅಂಗಡಿಗೇ ಕನ್ನ: ಕದ್ದ ಆಭರಣ ಮಾರಿ ಮಹಾಕಾಳೇಶ್ವರನಿಗೆ ಪೂಜೆ ಸಲ್ಲಿಸಿದ್ದವರು ಲಾಕ್!
ಬೆಂಗಳೂರು, ಮಾರ್ಚ್ 18: ಆನ್‌ಲೈನ್ ಜೂಜಿನ (Online Gambling) ವ್ಯಸನಕ್ಕೆ ಒಳಗಾಗಿ, ತಾವೇ ಕೆಲಸ ಮಾಡುತ್ತಿದ್ದ ಆಭರಣ ಪಾಲಿಷ್ ಅಂಗಡಿಯಲ್ಲಿ ವ್ಯಕ್ತಿಗಳಿಬ್ಬರು ಕಳ್ಳತನ ನಡೆಸಿದ ಘಟನೆ ಬೆಂಗಳೂರಿನಲ್ಲಿ (Bangalore) ನಡೆದಿದೆ. ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಬೆಳ್ಳಿ ಆಭರಣಗಳನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತರನ್ನು ನರೇಂದ್ರ ಮತ್ತು ಕುಲ್ದೀಪ್ ಎಂದು ಗುರುತಿಸಲಾಗಿದೆ. ನರೇಂದ್ರ ಕಳೆದ ಒಂದು ತಿಂಗಳಿನಿಂದ ಧನಲಕ್ಷ್ಮೀ ರೋಡಿಯಂ ಎಂಬ ಆಭರಣ…