ವಿವಿಧ ಕೇಸ್ಗಳನ್ನ ಭೇದಿಸಿದ ದಾವಣಗೆರೆ ಪೊಲೀಸ್: 20.38 ಕೋಟಿ ರೂ ಮಾಲು ವಾರಸುದಾರರಿಗೆ ಹಸ್ತಾಂತರ – Kannada News | Davangere: Police return stolen property worth 20.38 crore to rightful owners
ಕಳುವಾಗಿದ್ದ ವಸ್ತು ಮಾಲೀಕರಿಗೆ ಹಸ್ತಾಂತರ ದಾವಣಗೆರೆ, ಡಿಸೆಂಬರ್ 19: ಸದ್ಯ ಇಯರ್ ಎಂಡ್ ಮೂಡ್ನಲ್ಲಿರುವ ಜನರು ಹೊಸ ವರ್ಷವನ್ನು ಸ್ವಾಗತಿಸುವುದಕ್ಕೆ ಸಜ್ಜಾಗುತ್ತಿದ್ದಾರೆ. ಇದಕ್ಕಾಗಿ ನಾನಾ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಈ ವರ್ಷ ದಾವಣಗೆರೆ ಪೊಲೀಸರಿಗೆ (Davangere Police) ಒಂದು ರೀತಿ ಸುವರ್ಣ ಕಾಲವೆಂದರೆ ತಪ್ಪಾಗಲಿಕ್ಕಿಲ್ಲ. ಇಡೀ ರಾಜ್ಯವನ್ನು ಬೆಚ್ಚಿಬಿಳಿಸಿದ್ದ ನ್ಯಾಮತಿ ಬ್ಯಾಂಕ್ ದರೋಡೆ ಕೇಸ್, ಕ್ಷಣದಲ್ಲಿ ಚಿನ್ನ ಕಣ್ಮರೆ ಮಾಡುವ ಬಾಂಡ್ ಬಾಜಾ ಗ್ಯಾಂಗ್ ಸೇರಿ ಹಲವು ಪ್ರಕರಣಗಳನ್ನು ಭೇದಿಸಿದ್ದಾರೆ. ಅಷ್ಟೇ ಅಲ್ಲದೆ 20.38 ಕೋಟಿ ರೂ. ಮೌಲ್ಯದ…