ಮಳೆ ಅಂತ ಪಾಳು ಮನೆಯ ಕೆಳಗೆ ನಿಂತಿದ್ದ ದಂಪತಿ ಮೇಲೆ ಕುಸಿದ ಗೋಡೆ: ಮುಂದಾಗಿದ್ದು ಘೋರ ದುರಂತ

ಮಳೆ ಅಂತ ಪಾಳು ಮನೆಯ ಕೆಳಗೆ ನಿಂತಿದ್ದ ದಂಪತಿ ಮೇಲೆ ಕುಸಿದ ಗೋಡೆ: ಮುಂದಾಗಿದ್ದು ಘೋರ ದುರಂತ

ಬೆಳಗಾವಿ, ಮಾರ್ಚ್​ 17: ರಣ ರಣ ಬಿಸಿಲಿನ ನಡುವೆ ರಾಜ್ಯದಲ್ಲಿ ಆಲಿಕಲ್ಲು ಸಹಿತ ಮಳೆಯಾಗುತ್ತಿದೆ (Rain). ಆ ಮೂಲಕ ಬಿಸಿಲಿಂದ ಬೆಂಡಾಗಿದ್ದ ಭೂಮಿಗೆ ವರುಣ ತಂಪೆರದಿದ್ದಾನೆ. ಸುಡುಬೇಸಿಗೆ ನಡುವೆ ಅಕಾಲಿಕ ಮಳೆ ಶುರುವಾಗಿದೆ. ಈ ಅಕಾಲಿಕ ಮಳೆಗೆ ದುರಂತಗಳು ಸಂಭವಿಸಿದೆ. ಮಳೆ ಹೆಚ್ಚಾದ ಹಿನ್ನೆಲೆ ಪಾಳು ಮನೆಯ ಕೆಳಗೆ ನಿಂತಿದ್ದ ದಂಪತಿ ಮೇಲೆ ಗೋಡೆ ಕುಸಿದುಬಿದ್ದು ಪತ್ನಿ ಸಾವನ್ನಪ್ಪಿದ್ದು (death), ಪತಿ ಬಚಾವ್ ಆಗಿರುವಂತಹ ಘಟನೆ ಬೆಳಗಾವಿ ತಾಲೂಕಿನ ಹೊಸೂರು ಗ್ರಾಮದಲ್ಲಿ ನಡೆದಿದೆ.

ನಡೆದಿದ್ದೇನು?

ದಂಪತಿ ಕೋಳಿಗಳನ್ನು ಮಾರಾಟ ಮಾಡಲು ಬೈಕ್ ಮೇಲೆ ಹೊರಟಿದ್ದರು. ಮಳೆ ಹೆಚ್ಚಾದ ಹಿನ್ನೆಲೆ ಪಾಳು ಮನೆಯ ಕೆಳಗೆ ನಿಂತಿದ್ದಾರೆ. ಈ ವೇಳೆ ಗೋಡೆ ಕುಸಿದುಬಿದ್ದು ಪತ್ನಿ ಪರ್ವಿನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.  ಪತಿ ಶರೀಫ್​ಗೆ ಗಂಭೀರ ಗಾಯವಾಗಿದ್ದು, ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: ಧಾರವಾಡದಲ್ಲಿ ಭಾರೀ ಮಳೆ: ಕಲ್ಲಘಟಗಿ ರಸ್ತೆ ತುಂಬೆಲ್ಲಾ ಆಲಿಕಲ್ಲು, ಫುಲ್ ಟ್ರಾಫಿಕ್ ಜಾಮ್

ಮೃತ ಪರ್ವಿನ್ ಬೇಪಾರಿ(34) ವಂಟಮೂರಿ ಗ್ರಾಮದ ನಿವಾಸಿ. ಮೃತರ ಕುಟುಂಬಕ್ಕೆ ಪರಿಹಾರ ನೀಡುವಂತೆ ಕುಟುಂಬದವರು ಆಗ್ರಹಿಸಿದ್ದಾರೆ. ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸಿಡಿಲು ಬಡಿದು ರೈತ ಸಾವು

ಸಿಡಿಲು ಬಡಿದು ರೈತ ಸಾವನ್ನಪ್ಪಿರುವಂತಹ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಮೆಣಸಗಿ ಗ್ರಾಮದಲ್ಲಿ ನಡೆದಿದ. ರೈತ ನಿಂಗಪ್ಪ(58) ಮೃತ ದುರ್ದೈವಿ. ಜಮೀನಿಗೆ ಹೋಗಿ ವಾಪಸಾಗುವಾಗ ಅವಘಡ ಸಂಭವಿಸಿದೆ. ರೋಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

15 ವರ್ಷದ ಬಾಲಕ ಸಾವು

ಇನ್ನು ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಜರಕುಂಟಿ ಗ್ರಾಮದಲ್ಲಿ ಸಿಡಿಲು ಬಡಿದು 15 ವರ್ಷದ ಬಾಲಕ ಮಂಜುನಾಥ್ ಸಾವನಪ್ಪಿದ್ದಾನೆ. ನಿನ್ನೆ ಜಮೀನಿನಲ್ಲಿ ಕೆಲಸ ಮಾಡುವಾಗ ಸಿಡಿಲಿಗೆ ಬಲಿಯಾಗಿದ್ದಾನೆ.

ಇದನ್ನೂ ಓದಿ: ಬೆಳಗಾವಿಯಲ್ಲಿ ದಿಢೀರ್ ಆಲಿಕಲ್ಲು ಸಹಿತ ಮಳೆ ಅಬ್ಬರ: ವಾಹನ ಸವಾರರು ಪರದಾಟ

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಯಂಬಳ್ಳಿ ಗ್ರಾಮದಲ್ಲಿ ಸಿಡಿಲು ಬಡಿದು ಪವನ್ ವಿದ್ಯುತ್ ಯಂತ್ರವೊಂದು ಧಗಧಗಿಸಿ ಉರಿದಿದೆ. ಇನ್ನು ನಿನ್ನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನಲ್ಲಿ ಬೃಹತ್ ಮರ ಬಿದ್ದು ರಸ್ತೆ ಸಂಚಾರ ಅಸ್ತವ್ಯಸ್ತವಾಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಭಯೋತ್ಪಾದನೆ ಆರೋಪದಡಿ ಭಾರತದಲ್ಲಿ 6 ಉಕ್ರೇನಿಯನ್ನರು, ಓರ್ವ ಅಮೆರಿಕನ್ ಬಂಧನ

ನವದೆಹಲಿ, ಮಾರ್ಚ್ 17: ಭಯೋತ್ಪಾದನಾ ಚಟುವಟಿಕೆಗಳನ್ನು ನಡೆಸುತ್ತಿದ್ದ ಆರೋಪದ ಮೇಲೆ ಭಾರತದ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್​ಐಎ) ಅಧಿಕಾರಿಗಳು 6 ಉಕ್ರೇನಿಯನ್ನರು ಮತ್ತು ಒಬ್ಬ ಅಮೇರಿಕನ್ ಪ್ರಜೆಯನ್ನು ಬಂಧಿಸಿದ್ದಾರೆ. ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಶುಕ್ರವಾರ 3 ವಿಮಾನ ನಿಲ್ದಾಣಗಳಲ್ಲಿ 7 ವಿದೇಶಿ ಪ್ರಜೆಗಳನ್ನು UAPA ಅಡಿಯಲ್ಲಿ ಬಂಧಿಸಿತ್ತು. ಆರೋಪಿಗಳು ಪ್ರಸ್ತುತ ಎನ್​ಐಎ ವಶದಲ್ಲಿದ್ದಾರೆ. ಅವರನ್ನು ಇಂದು ಪಟಿಯಾಲ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು.

ಜನಾಂಗೀಯ ಸಶಸ್ತ್ರ ಗುಂಪುಗಳಿಗೆ ಡ್ರೋನ್ ಯುದ್ಧದಲ್ಲಿ ತರಬೇತಿ ನೀಡುವ ಪಿತೂರಿಯ ತನಿಖೆಗಾಗಿ ದೆಹಲಿ ನ್ಯಾಯಾಲಯವು ಭಯೋತ್ಪಾದನಾ ನಿಗ್ರಹ ಸಂಸ್ಥೆಗೆ 11 ದಿನಗಳ ಕಾಲಾವಕಾಶ ನೀಡಿದ ನಂತರ ಒಬ್ಬ ಅಮೆರಿಕನ್, 6 ಮಂದಿ ಉಕ್ರೇನಿಯನ್ ಪ್ರಜೆಗಳು ಸೇರಿದಂತೆ 7 ವಿದೇಶಿ ಪ್ರಜೆಗಳು NIA ಕಸ್ಟಡಿಯಲ್ಲಿದ್ದಾರೆ. NIA 15 ದಿನಗಳ ಕಾಲಾವಕಾಶ ಕೋರಿತ್ತು. ಆದರೆ ನ್ಯಾಯಾಲಯವು 11 ದಿನಗಳ ಕಾಲಾವಕಾಶ ನೀಡಿತ್ತು. ಆ ಆರೋಪಿಗಳನ್ನು ಮಾರ್ಚ್ 27ರಂದು ಮತ್ತೆ ಕೋರ್ಟ್ ಮುಂದೆ ಹಾಜರುಪಡಿಸಲಾಗುವುದು.

ಇದನ್ನೂ ಓದಿ: ದೆಹಲಿ ಸ್ಫೋಟಕ್ಕೂ ಬೆಂಗಳೂರು ಜೈಲಿನಲ್ಲಿ ಉಗ್ರ ಮೊಬೈಲ್ ಬಳಸಿದ್ದಕ್ಕೂ ಇದೆಯಾ ನಂಟು? ಎನ್​ಐಎ ತೀವ್ರ ತನಿಖೆ

ಅಮೆರಿಕನ್ ಪ್ರಜೆ ಮ್ಯಾಥ್ಯೂ ವ್ಯಾನ್‌ಡೈಕ್ ಅವರನ್ನು ಕೋಲ್ಕತ್ತಾದಿಂದ ಬಂಧಿಸಲಾಯಿತು. ಮೂವರು ಉಕ್ರೇನಿಯನ್ನರನ್ನು ಲಕ್ನೋದಿಂದ ಮತ್ತು ಇತರ ಮೂವರನ್ನು ದೆಹಲಿಯಿಂದ ಬಂಧಿಸಲಾಗಿದೆ. ಅವರನ್ನು ಹುರ್ಬಾ ಪೆಟ್ರೋ, ಸ್ಲೈವಿಯಾಕ್ ತಾರಸ್, ಇವಾನ್ ಸುಕ್ಮನೋವ್ಸ್ಕಿ, ಸ್ಟೆಫನ್‌ಕಿವ್ ಮರಿಯನ್, ಹೊಂಚರುಕ್ ಮ್ಯಾಕ್ಸಿಮ್ ಮತ್ತು ಕಾಮಿನ್ಸ್ಕಿ ವಿಕ್ಟರ್ ಎಂದು ಗುರುತಿಸಲಾಗಿದೆ.

ಆರೋಪಿಗಳು ಪ್ರತಿ 48 ಗಂಟೆಗಳಿಗೊಮ್ಮೆ ವೈದ್ಯಕೀಯ ಪರೀಕ್ಷೆಗೆ ಒಳಗಾಗಬೇಕೆಂದು ನ್ಯಾಯಾಲಯವು ನಿರ್ದೇಶಿಸಿದೆ. ಒಂದು ದಿನ ಬಿಟ್ಟು ಮತ್ತೊಂದು ದಿನ 20 ನಿಮಿಷಗಳ ಕಾಲ ವಕೀಲರು ಅಥವಾ ಸಂಬಂಧಿಕರೊಂದಿಗೆ ವರ್ಚುವಲ್ ಸಭೆಗಳನ್ನು ನಡೆಸಲು ಅವರಿಗೆ ಅವಕಾಶ ನೀಡಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಅಪ್ಪು ಅಭಿಮಾನಿಗಳ ಪುಣ್ಯದ ಕೆಲಸ: ಮನಸಾರೆ ಹೊಗಳಿದ ನಟ ಪ್ರಥಮ್

ನಟ ಪುನೀತ್ ರಾಜ್​ಕುಮಾರ್ (Puneeth Rajkumar) ಹೆಸರಿನಲ್ಲಿ ಅವರ ಅಭಿಮಾನಿಗಳು ಪುಣ್ಯದ ಕೆಲಸಗಳನ್ನು ಮಾಡುತ್ತಿದ್ದಾರೆ. ಅದನ್ನು ನಟ ಪ್ರಥಮ್ ಮೆಚ್ಚಿಕೊಂಡಿದ್ದಾರೆ. ಇಂದು (ಮಾರ್ಚ್ 17) ಅಪ್ಪು ಹುಟ್ಟುಹಬ್ಬ. ಆ ಪ್ರಯುಕ್ತ ಅಪಾರ ಸಂಖ್ಯೆಯ ಅಭಿಮಾನಿಗಳು, ಕುಟುಂಬದವರು, ಅನೇಕ ಸೆಲೆಬ್ರಿಟಿಗಳು ಸಮಾಧಿ ಸ್ಥಳಕ್ಕೆ ಭೇಟಿ ನೀಡಿ ನಮನ ಸಲ್ಲಿಸಿದ್ದಾರೆ. ನಟ ಪ್ರಥಮ್ (Pratham) ಅವರು ಈ ವೇಳೆ ಮಾತನಾಡಿದರು. ‘ಅಭಿಮಾನಿಗಳು ನೇತ್ರದಾನ ಮಹಾದಾನ ಎಂಬ ಈ ಕೆಲಸವನ್ನು ನಾಲ್ಕು ವರ್ಷಗಳಿಂದ ಶ್ರಮವಹಿಸಿ ಮಾಡುತ್ತಿದ್ದಾರೆ. ಅಪ್ಪು ಸರ್ ಹೆಸರಲ್ಲಿ ಇದು ಅದ್ಭುತವಾದ ಕೆಲಸ. ಇಂಥ ಒಳ್ಳೆಯ ಕೆಲಸ ಮಾಡುವ ಅಭಿಮಾನಿಗಳ ಬಗ್ಗೆ ನನಗೆ ಯಾವಾಗಲೂ ಖುಷಿ ಆಗುತ್ತದೆ. ಯಾರಿಗೋ ಬೈಯ್ಯಿರಿ, ಹೊಡೆಯಿರಿ ಅಂತ ಪುನೀತ್ ರಾಜ್​ಕುಮಾರ್ ಅಭಿಮಾನಿಗಳು ಹೇಳಲ್ಲ’ ಎಂದಿದ್ದಾರೆ ನಟ, ‘ಬಿಗ್ ಬಾಸ್ ಕನ್ನಡ 4’ ವಿನ್ನರ್ ಪ್ರಥಮ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ನಿಮಗೆ ಹೈ ಬಿಪಿ ಇದ್ಯಾ? ಹಾಗಿದ್ರೆ ಸ್ಟ್ರೋಕ್ ಆಗದಂತೆ ತಡೆಯಲು ಈ ರೀತಿ ಮಾಡಿ

ಇತ್ತೀಚಿನ ವರ್ಷಗಳಲ್ಲಿ ಹೈ ಬಿಪಿ ಪ್ರಕರಣಗಳು ಹೆಚ್ಚುತ್ತಿವೆ. ಆಹಾರ ಪದ್ಧತಿ ಸರಿಯಾಗಿ ಇಲ್ಲದಿರುವುದು ಮತ್ತು ಅಸ್ವಸ್ಥ ಜೀವನಶೈಲಿ ಈ ರೀತಿ ಸಮಸ್ಯೆ ಹೆಚ್ಚಳಕ್ಕೆ ಪ್ರಮುಖ ಕಾರಣಗಳಾಗಿವೆ. ಸಾಮಾನ್ಯವಾಗಿ ರಕ್ತದೊತ್ತಡದ ಮಟ್ಟ 120/80 ಎಂಎಂಎಚ್ಜಿ (mmHg) ಇರಬೇಕು ಎಂದು ವೈದ್ಯರು ಹೇಳುತ್ತಾರೆ. ಆದರೆ ಇದು ನಿರಂತರವಾಗಿ 140/90 ಎಂಎಂಎಚ್ಜಿ ಅಥವಾ ಅದಕ್ಕಿಂತ ಹೆಚ್ಚಿದ್ದರೆ, ಅದನ್ನು ಹೈಪರ್‌ಟೆನ್ಶನ್ ಎಂದು ಕರೆಯಲಾಗುತ್ತದೆ. ಈ ಮಟ್ಟದಲ್ಲಿ ಬಿಪಿ ದೀರ್ಘಕಾಲ ಇದ್ದರೆ ಸ್ಟ್ರೋಕ್ ಅಪಾಯ ಬಹಳ ಹೆಚ್ಚುತ್ತದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗಾದರೆ ಹೈ ಬಿಪಿ (High Blood Pressure) ಇರುವವರಲ್ಲಿ ಸ್ಟ್ರೋಕ್ ಅಪಾಯ ಹೆಚ್ಚಾಗುವುದಕ್ಕೆ ಕಾರಣವೇನು, ಇದರ ಲಕ್ಷಣಗಳು ಹೇಗಿರುತ್ತವೆ, ಜೊತೆಗೆ ಬಿಪಿ ನಿಯಂತ್ರಣಕ್ಕೆ ಏನು ಮಾಡಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಸ್ಟ್ರೋಕ್ ಅಪಾಯ ಹೆಚ್ಚಾಗುವುದಕ್ಕೆ ಕಾರಣವೇನು?

ವೈದ್ಯರ ಪ್ರಕಾರ, ದೀರ್ಘಕಾಲ ಹೈ ಬಿಪಿ ಇದ್ದರೆ ಮೆದುಳಿಗೆ ರಕ್ತವನ್ನು ಸಾಗಿಸುವ ನರಗಳಿಗೆ ಹಾನಿಯಾಗುತ್ತದೆ. ಇದರಿಂದ ನರಗಳಲ್ಲಿ ಬ್ಲಾಕೇಜ್ ಉಂಟಾಗಬಹುದು. ಈ ಸಂದರ್ಭದಲ್ಲಿ ಮೆದುಳಿಗೆ ಸರಿಯಾದ ಆಮ್ಲಜನಕ ಸಿಗದೇ ಸ್ಟ್ರೋಕ್ ಸಂಭವಿಸಬಹುದು. ಕೆಲವು ಸಂದರ್ಭಗಳಲ್ಲಿ ರಕ್ತದೊತ್ತಡ ಹೆಚ್ಚಾಗಿ ಮೆದುಳಿನ ನರಗಳು ಸಿಡಿಯುವ ಸಾಧ್ಯತೆಯೂ ಇದೆ, ಇದು ಜೀವಕ್ಕೆ ಅಪಾಯಕಾರಿಯಾಗಬಹುದು. ಆದರೆ ಲಕ್ಷಣಗಳು ಆರಂಭಿಕ ಹಂತದಲ್ಲಿ ಸ್ಪಷ್ಟ ಲಕ್ಷಣಗಳು ಕಾಣಿಸಿಕೊಳ್ಳುವುದಿಲ್ಲ. ರೋಗ ಗಂಭೀರವಾದ ನಂತರ ಮಾತ್ರ ಸಮಸ್ಯೆ ತಿಳಿದುಬರುತ್ತದೆ. ಅದಕ್ಕಾಗಿಯೇ ಹೈ ಬಿಪಿಯನ್ನು ಸೈಲೆಂಟ್ ಕಿಲ್ಲರ್ ಎಂದು ಕರೆಯಲಾಗುತ್ತದೆ.

ಇದನ್ನೂ ಓದಿ: ನೀವು ಮಾಡುವ ಈ ತಪ್ಪುಗಳೇ ರಕ್ತದೊತ್ತಡ ಹೆಚ್ಚಾಗಲು ಕಾರಣ?

ರಕ್ತದೊತ್ತಡ ಹೆಚ್ಚಾದಾಗ ಕಂಡುಬರುವ ಲಕ್ಷಣಗಳು:

  • ತಲೆನೋವು (ವಿಶೇಷವಾಗಿ ತಲೆಯ ಹಿಂಭಾಗದಲ್ಲಿ)
  • ತಲೆ ಸುತ್ತುವುದು
  • ಉಸಿರಾಟದಲ್ಲಿ ತೊಂದರೆ
  • ನಿರಂತರ ದಣಿವು

ಬಿಪಿ ನಿಯಂತ್ರಣಕ್ಕೆ ಏನು ಮಾಡಬೇಕು?

ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡಲು ಆರೋಗ್ಯಕರ ಜೀವನಶೈಲಿಯನ್ನು ಅನುಸರಿಸುವುದು ಅಗತ್ಯ. ಪ್ರತಿದಿನ ಕನಿಷ್ಠ ಅರ್ಧ ಗಂಟೆ ವ್ಯಾಯಾಮ ಮಾಡಬೇಕು. ಆಹಾರದಲ್ಲಿ ಉಪ್ಪಿನ ಪ್ರಮಾಣ ಕಡಿಮೆ ಮಾಡಬೇಕು. ದಿನಕ್ಕೆ ಕನಿಷ್ಠ 7 ಗಂಟೆ ನಿದ್ರೆ ಮಾಡಬೇಕು ಮತ್ತು ಮಾನಸಿಕ ಒತ್ತಡವನ್ನು ಕಡಿಮೆ ಮಾಡಿಕೊಳ್ಳಬೇಕು. ಜೊತೆಗೆ ನಿಯಮಿತವಾಗಿ ಬಿಪಿ ತಪಾಸಣೆ ಮಾಡಿಸುವುದರಿಂದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಧಾರವಾಡದಲ್ಲಿ ಭಾರೀ ಮಳೆ: ಕಲ್ಲಘಟಗಿ ರಸ್ತೆ ತುಂಬೆಲ್ಲಾ ಆಲಿಕಲ್ಲು, ಫುಲ್ ಟ್ರಾಫಿಕ್ ಜಾಮ್

ಧಾರವಾಡ, (ಮಾರ್ಚ್ 17): ಕಾಶ್ಮೀರ, ಶಿಮ್ಲಾದಲ್ಲಿ ಹಿಮಪಾತದಿಂದಾಗಿ ಹೇಗೆ ಮಂಜುಗಡ್ಡೆ ರಸ್ತೆ ತುಂಬೆಲ್ಲಾ ಬಿದ್ದಿರುತ್ತೋ ಹಾಗೇ ಧಾರವಾಡ ಜಿಲ್ಲೆಯ ಕಲ್ಲಘಟಗಿಯಲ್ಲೂ ಸಹ ಆಲಿಕಲ್ಲು ಬಿದ್ದಿದೆ. ಮಳೆಯಿಂದಾಗಿ ರಸ್ತೆಯಲೆಲ್ಲಾ ಆಲಿಕಲ್ಲು ಬಿದ್ದಿದ್ದು, ವಾಹನ ಸಂಚಾರಕ್ಕೆ ಅಸ್ತವ್ಯಸ್ತವಾಗಿ ಫುಲ್ ಟ್ರಾಫಿಕ್ ಜಾಮ್ ಉಂಟಾಗಿದೆ. ರಾಶಿ ರಾಶಿ ಆಲಿಕಲ್ಲು ಹೇಗೆ ಬಿದ್ದಿದೆ ಎನ್ನುವುದನ್ನು ವಿಡಿಯೋನಲ್ಲಿ ನೋಡಿ.

Source link

ಅಮೆರಿಕ, ಇಸ್ರೇಲ್ ನಮ್ಮೆದುರು ಮಂಡಿಯೂರಬೇಕು; ಇರಾನ್‌ ಸುಪ್ರೀಂ ನಾಯಕ ಪಟ್ಟು

ಟೆಹ್ರಾನ್, ಮಾರ್ಚ್ 17: ಇರಾನ್‌ನ ಹೊಸ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಅವರು ಮಧ್ಯಪ್ರಾಚ್ಯದಲ್ಲಿ ಯುದ್ಧವನ್ನು ನಿಲ್ಲಿಸುವ ಸಾಧ್ಯತೆಯನ್ನು ತಳ್ಳಿಹಾಕಿದ್ದಾರೆ. ಅಮೆರಿಕ ಮತ್ತು ಇಸ್ರೇಲ್ ನಮ್ಮ ಮುಂದೆ ಮಂಡಿಯೂರಬೇಕು, ಆ ಎರಡೂ ದೇಶಗಳು ಸೋಲನ್ನು ಒಪ್ಪಿಕೊಳ್ಳಬೇಕು. ಶಾಂತಿ ಮಾತುಕತೆಯ ಸಮಯ ಮುಗಿದುಹೋಗಿದೆ ಎಂದು ಅವರು ಘೋಷಿಸಿದ್ದಾರೆ. ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಮೊಜ್ತಬಾ ಖಮೇನಿ ಗಂಭೀರವಾಗಿ ಗಾಯಗೊಂಡಿದ್ದಾರೆ ಮತ್ತು ವಿರೂಪಗೊಂಡಿದ್ದಾರೆ ಎಂದು ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಹೇಳಿದ ಬೆನ್ನಲ್ಲೇ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.

ರಾಯಿಟರ್ಸ್ ಉಲ್ಲೇಖಿಸಿದ ಇರಾನಿನ ಅಧಿಕಾರಿಯೊಬ್ಬರ ಪ್ರಕಾರ, ಸುಪ್ರೀಂ ನಾಯಕ ಮೊಜ್ತಬಾ ಖಮೇನಿ ಯುಎಸ್ ಮತ್ತು ಇಸ್ರೇಲ್ ವಿರುದ್ಧ ಟೆಹ್ರಾನ್‌ನ ಸೇಡು ಬಹಳ ಗಂಭೀರವಾದುದು ಎಂದು ಕಠಿಣ ಎಚ್ಚರಿಕೆ ನೀಡಿದ್ದಾರೆ. ಹಾಗೇ, ಮೊಜ್ತಬಾ ಅವರು “ಶಾಂತಿಗೆ ಇದು ಸರಿಯಾದ ಸಮಯವಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಇರಾನ್ ಸುಪ್ರೀಂ ನಾಯಕ ಖಮೇನಿ ಬಳಸುತ್ತಿದ್ದ ವಿಮಾನವನ್ನು ಧ್ವಂಸ ಮಾಡಿದ ಇಸ್ರೇಲ್

ಇದಕ್ಕೂ ಮೊದಲು, ಅವರ ತಂದೆಯಾದ ಅಯತೊಲ್ಲಾ ಖಮೇನಿಯ ಮರಣದ ನಂತರ ಇರಾನ್‌ನ ಹೊಸ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಮಧ್ಯಪ್ರಾಚ್ಯದಾದ್ಯಂತ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ತಮ್ಮ ಮೊದಲ ಸಾರ್ವಜನಿಕ ಭಾಷಣದಲ್ಲಿ, ಖಮೇನಿ ಅವರ ಮರಣದ ನಂತರ ಮಧ್ಯಪ್ರಾಚ್ಯದಾದ್ಯಂತ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಬಲವಾದ ಸಂದೇಶವನ್ನು ನೀಡಿದ್ದರು. ಈ ಭಾಷಣವು ಅಮೆರಿಕ ಮತ್ತು ಇಸ್ರೇಲ್ ಕಡೆಗೆ ಇರಾನ್​ನ ಕಠಿಣ ನಿಲುವನ್ನು ಒತ್ತಿಹೇಳಿತ್ತು. ಇರಾನ್ ಅನುಭವಿಸಿದ ಹಾನಿಗಳಿಗೆ ಪ್ರತಿಯಾಗಿ ಇಸ್ರೇಲ್ ಮತ್ತು ಅಮೆರಿಕ ಬೆಲೆ ತೆರಬೇಕಾಗುತ್ತದೆ ಎಂದು ಮೊಜ್ತಬಾ ಹೇಳಿದ್ದರು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

IPL 2026: ಹೇಜಲ್​ವುಡ್ ಎಷ್ಟು ಪಂದ್ಯಗಳಿಗೆ ಅಲಭ್ಯ? ಅವರನ್ನು ಬದಲಿಸುವವರ್ಯಾರು?

Source link

ಕೋಟ್ಯಂತರ ರೂ ಆದಾಯವಿರುವ ದೇಗುಲದಲ್ಲಿ ಅಭಿವೃದ್ಧಿ ಶೂನ್ಯ: ರಾಜ್ಯದ ಶ್ರೀಮಂತ ದೇಗುಲಕ್ಕೆ ಇದೆಂಥಾ ಸ್ಥಿತಿ?

ಮಂಗಳೂರು, ಮಾರ್ಚ್​​ 17: ಕುಕ್ಕೆ ಸುಬ್ರಹ್ಮಣ್ಯ‌ ದೇವಸ್ಥಾನ (Kukke Shree Subrahmanya Temple) ರಾಜ್ಯದ ಶ್ರೀಮಂತ ದೇಗುಲಗಳಲ್ಲಿ ಒಂದು. ಕೋಟ್ಯಂತರ ರೂ ಆದಾಯ ತಂದು ಕೊಡುವ ಈ ದೇವಸ್ಥಾನಕ್ಕೆ ಬರುವ ಭಕ್ತರಿಗೆ ಮಾತ್ರ ಸೂಕ್ತ ಮೂಲಭೂತ ಸೌಲಭ್ಯಗಳಿಲ್ಲ ಎಂಬುದು‌ ದಶಕಗಳ‌ ಆರೋಪ.‌ ಸಂಪತ್ತು ಇದ್ದರೂ ಇಚ್ಛಾಶಕ್ತಿ, ಕ್ರಿಯಾಶಕ್ತಿ‌ ಇಲ್ಲದ ಪರಿಣಾಮ ಇಲ್ಲಿ ಸರಿಯಾದ ವ್ಯವಸ್ಥೆ ಇಲ್ಲದೆ ಭಕ್ತರು ಪರದಾಡುವಂತಾಗಿದೆ.

ಭಕ್ತರ ಆರೋಪವೇನು?

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಯಾರಿಗೆ ತಾನೆ ಗೊತ್ತಿಲ್ಲ ಹೇಳಿ. ಪ್ರಸಿದ್ಧ ನಾಗ ಕ್ಷೇತ್ರ ಅಂತಾನೆ ಕರೆಸಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿರುವ ಈ ದೇವಸ್ಥಾನಕ್ಕೆ ಜಿಲ್ಲೆ, ಹೊರ ಜಿಲ್ಲೆ, ಹೊರ ರಾಜ್ಯಗಳಿಂದಲೂ ಸಾಕಷ್ಟು ಸಂಖ್ಯೆಯಲ್ಲಿ ಭಕ್ತರು ಬರ್ತಾರೆ. ಆದರೆ ಇತಿಹಾಸ ಪ್ರಸಿದ್ಧವಾಗಿರುವ ಈ ದೇವಸ್ಥಾನದಲ್ಲಿ ವ್ಯವಸ್ಥೆಗಳು ಮಾತ್ರ ಇನ್ನು ಇತಿಹಾಸ ಕಾಲದ್ದೆ ಇದೆ ಎಂಬುದು ಭಕ್ತರ ಆರೋಪ.

ಇದನ್ನೂ ಓದಿ: ಕುಕ್ಕೆ ಹಾಗೂ ಕೊಲ್ಲೂರು ದೇವಾಲಯಗಳಿಗೆ ಹೋಗುವ ಭಕ್ತರಿಗೆ ಗುಡ್​​​ ನ್ಯೂಸ್ ನೀಡಿದ ಸಿದ್ದರಾಮಯ್ಯ

ದೇವಳದ ಸಮಗ್ರ ಅಭಿವೃದ್ಧಿಗಾಗಿ ಮಾಸ್ಟರ್ ಪ್ಲ್ಯಾನ್ ಯೋಜನೆ ಜಾರಿಗೊಳಿಸಿ 17 ವರ್ಷವಾದರೂ ಇನ್ನು ಕೂಡ ಪೂರ್ಣವಾಗಿಲ್ಲ ಎಂಬದು ಇಲ್ಲಿನ ವ್ಯವಸ್ಥೆಗೆ ಹಿಡಿದ ಕೈಗನ್ನಡಿಯಾಗಿದೆ. ಒಟ್ಟು 604 ಕೋಟಿ ರೂ ಕಾಮಗಾರಿಯಲ್ಲಿ ಈಗಾಗಲೇ ಎರಡು ಹಂತವನ್ನೂ ಪೂರ್ಣಗೊಳಿಸಿದ್ದು, ಈಗ ಮೂರನೇ ಹಂತದ ಕಾಮಗಾರಿಗಳ ಯೋಜನೆ, ಅಂದಾಜುಪಟ್ಟಿ ಸಿದ್ದಗೊಳಿಸಿ ಪಿಡಬ್ಲ್ಯುಡಿ ಇಲಾಖೆಯಿಂದ ಅನುಮೋದನೆ ಪಡೆದು ಸರ್ಕಾರಕ್ಕೆ ಸಲ್ಲಿಸಲಾಗಿದ್ದರು ಸಹ ಇನ್ನು ಸಹ ಗ್ರೀನ್ ಸಿಗ್ನಲ್ ಸಿಕ್ಕಿಲ್ಲ.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಂಬಂಧಿಸಿದಂತೆ 600 ಕೋಟಿ ರೂ ಎಫ್​​ಡಿ ಇದ್ದರೂ, ವಾರ್ಷಿಕ 150 ಕೋಟಿಗೂ ಹೆಚ್ಚು ಆದಾಯವಿದ್ದರು ಸಹ ಈ ಹಣವನ್ನು ದೇವಳದ ಅಭಿವೃದ್ಧಿ ಕಾರ್ಯಗಳಿಗೆ ಬಳಸಬೇಕೆಂದರೆ ಸರ್ಕಾರದ, ಹಣಕಾಸು ಇಲಾಖೆಯ‌ ಅನುಮೋದನೆ ಕಡ್ಡಾಯವಾಗಿದೆ. ಹೀಗಾಗಿ ಅಧಿಕಾರಿಗಳು, ಜನಪ್ರತಿನಿಧಿಗಳಿಗೆ ಇಚ್ಛಾಶಕ್ತಿ, ಕ್ರಿಯಾಶಕ್ತಿ ಇಲ್ಲದೆ, ಅವೈಜ್ಞಾನಿಕ ತೀರ್ಮಾನಗಳಿಂದ ಅಭಿವೃದ್ಧಿಗೆ ಹಿನ್ನಡೆಯಾಗುತ್ತಿದೆ ಎಂಬ ಆರೋಪವಿದೆ.

ಏನೆಲ್ಲಾ ನಿರ್ಮಾಣವಾಗಬೇಕು?

ದೇವಳದಲ್ಲಿ ಸರ್ಪ ಸಂಸ್ಕಾರ ಸೇವೆ ಬಹಳಷ್ಟು ಪ್ರಸಿದ್ಧಿ ಪಡೆದಿದ್ದು ಪ್ರಸ್ತುತ ದಿನವೊಂದಕ್ಕೆ 175 ಭಕ್ತರಿಗೆ ಮಾತ್ರ ಸೇವೆ ನಡೆಸಲು ಅವಕಾಶವಿದ್ದು, ಎರಡು ತಿಂಗಳ ಕಾಲ ಬುಕ್ಕಿಂಗ್​ಗೆ ಕಾಯಬೇಕಾದ ಪರಿಸ್ಥಿತಿಯಿದೆ. ಹೀಗಾಗಿ ಸರ್ಪ ಸಂಸ್ಕಾರ ಯಾಗಶಾಲೆಯ ನಿರ್ಮಾಣವಾಗಬೇಕಿದೆ. ಒಂದು ಸಾವಿರ ಮಂದಿ ಆಶ್ಲೇಷ ಬಲಿ ಪೂಜೆ ಸಲ್ಲಿಸಲು ಪೂಜಾ ಮಂದಿರವೂ ನಿರ್ಮಾಣವಾಗಬೇಕಿದೆ. ಸದ್ಯ 25 ವರ್ಷ ಹಿಂದಿನ ಭೋಜನಶಾಲೆಯಿದ್ದು ಇನ್ನು ಮುಂದೆ ಏಕಕಾಲದಲ್ಲಿ ಐದು ಸಾವಿರ ಮಂದಿ ಕೂತು ಊಟ ಮಾಡುವ ಭೋಜನ ಶಾಲೆ ನಿರ್ಮಾಣವಾಗಬೇಕಿದೆ.

ಇದನ್ನೂ ಓದಿ: ಕರ್ನಾಟಕದ ದೇವಾಲಯಗಳ ಆದಾಯದಲ್ಲಿ ಭಾರೀ ಏರಿಕೆ: ದಕ್ಷಿಣ ಕನ್ನಡದ ಈ ದೇಗುಲ ಫಸ್ಟ್​

ಸದ್ಯ ದೇವಳದಲ್ಲಿ ವಸತಿ ವ್ಯವಸ್ಥೆ ಸರಿಯಾಗಿ ಇಲ್ಲದ ಕಾರಣ ಸೀಸನ್ ಸಮಯದಲ್ಲಿ ಭಕ್ತರು ರಥಬೀದಿಯಲ್ಲೆ ಮಲಗಬೇಕಾದ ಪರಿಸ್ಥಿತಿಯಿದೆ. ಹೀಗಾಗಿ 604 ಕೋಟಿ ರೂ ಗಳ‌ ಮಾಸ್ಟರ್ ಪ್ಲ್ಯಾನ್​ನಲ್ಲಿ ಪಾರಂಪರಿಕ ರಥಬೀದಿ, 800 ಕೊಠಡಿಗಳ ವಸತಿಗೃಹ, ಶೌಚಾಲಯ, ಗೆಸ್ಟ್ ಹೌಸ್, ಸುತ್ತು ಪೌಳಿ‌ ದುರಸ್ತಿ ಸೇರಿದಂತೆ ಅನೇಕ‌ ಅಭಿವೃದ್ಧಿ ಕಾರ್ಯಗಳು ಆಗಬೇಕಾಗಿದೆ. ಸದ್ಯ ಈ ಬಾರಿಯ ಬಜೆಟ್​ನಲ್ಲಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಪ್ರಾಧಿಕಾರ ರಚಿಸುವ ಬಗ್ಗೆ ಸರ್ಕಾರ ಘೋಷಣೆ ಮಾಡಿದ್ದು, ಇನ್ನಾದರೂ ಸಮರ್ಪಕವಾಗಿ ಅಭಿವೃದ್ಧಿ ಕಾರ್ಯಗಳು ಆಗುತ್ತಾ ಅಂತಾ ಕಾದು ನೋಡಬೇಕಾಗಿದೆ‌.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಮಂಗಳೂರಿನಲ್ಲಿ ಕಾರಿನಿಂದ ಗುದ್ದಿ ಕೊಲೆಗೆ ಯತ್ನ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಮಂಗಳೂರು, (ಮಾರ್ಚ್ 17): ಹಣದ ವಿಚಾರಕ್ಕೆ ಸಂಬಂಧಿಸಿದಂತೆ ಕಾರಿನಿಂದ ಗುದ್ದಿ ವ್ಯಕ್ತಿಯನ್ನು ಹತ್ಯೆ ಯತ್ನ ನಡೆದಿರುವ ಘಟನೆ ಮಂಗಳೂರಿನ ಆರ್ಯಸಮಾಜ ರಸ್ತೆಯಲ್ಲಿ ನಡೆದಿದೆ. ಭೂವ್ಯವಹಾರಕ್ಕೆ ಸಂಬಂಧಿಸಿ ಹಣದ ವ್ಯಾಜ್ಯದ ಕೋಪದಲ್ಲಿ ಮಂಗಳೂರಿನ ಪಳ್ನೀರ್ ನಿವಾಸಿ ಮಹಮ್ಮದ್ ಶರೀಫ್ ಎನ್ನುವಾತ ಕಾರಿನಿಂದ ಮೋಹನ್ ದಾಸ್ ಶೆಟ್ಟಿಗೆ ಗುದ್ದಿದ್ದು, ಭೀಕರ ದೃಶ್ಯ ಸಿಸಿಟಿವಿಯಲ್ಲಿ‌ ಸೆರೆಯಾಗಿದೆ.

ಸುರತ್ಕಲ್‌ನ ಕಾನ ಮತ್ತು ವಾಮಂಜೂರಿನಲ್ಲಿ ಆರೋಪಿ ಮಹಮ್ಮದ್ ಶರೀಫ್ ಸುಮಾರು 2 ಕೋಟಿ ರೂ. ಹಣವನ್ನು ಹೂಡಿಕೆ ಮಾಡಿದ್ದ. ಆದರೆ ಮೋಹನ್ ದಾಸ್ ಶೆಟ್ಟಿ ಮೋಸ ಮಾಡಿರುವ ಸಿಟ್ಟಿನಲ್ಲಿ ಆತ ಸ್ಕೂಟರ್​​ನಲ್ಲಿ ತೆರಳುವಾಗ ಮಹಮ್ಮದ್ ಶರೀಫ್ ಕಾರಿನಿಂದ ಗುದ್ದಿ ಕೊಲೆ ಯತ್ನ ನಡೆಸಿದ್ದಾನೆ. ಈ ಸಂಬಂಧ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದ್ದು, ಸದ್ಯ ಮಹಮ್ಮದ್ ಶರೀಫ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

IPL 2026: ಈ ಐಪಿಎಲ್‌ನಲ್ಲಿ ರೋಹಿತ್ ‘ಇಂಪ್ಯಾಕ್ಟ್’ ಹೇಗಿರಲಿದೆ? ಸ್ಪಷ್ಟನೆ ನೀಡಿದ ಹೆಡ್​ ಕೋಚ್

Source link

Exit mobile version