‘ಧುರಂಧರ್ 2’ ಅಬ್ಬರಕ್ಕೆ ಹೆದರಿದ ಅಕ್ಷಯ್ ಕುಮಾರ್? ‘ಭೂತ್ ಬಂಗ್ಲ’ ಬಿಡುಗಡೆ ಮುಂದೂಡಿಕೆ ಸಾಧ್ಯತೆ
ಬಾಲಿವುಡ್‌ನಲ್ಲಿ ನಟ ರಣವೀರ್ ಸಿಂಗ್ (Ranveer Singh) ಅವರು ಹೊಸ ಬಾಕ್ಸ್ ಆಫೀಸ್ ಸುಲ್ತಾನ್ ಆಗಿದ್ದಾರೆ. ಅವರು ಅಭಿನಯಿಸಿದ ‘ಧುರಂಧರ್: ದಿ ರಿವೆಂಜ್’ (Dhurandhar: The Revenge) ಚಿತ್ರವು ಥಿಯೇಟರ್‌ಗಳಲ್ಲಿ ಸುನಾಮಿ ಎಬ್ಬಿಸಿದೆ. ಈ ಚಿತ್ರದ ಅಭೂತಪೂರ್ವ ಯಶಸ್ಸು ಈಗ ಅಕ್ಷಯ್ ಕುಮಾರ್ ಅವರ ಮುಂಬರುವ ಹಾರರ್-ಕಾಮಿಡಿ ಚಿತ್ರ ‘ಭೂತ್ ಬಂಗ್ಲ’ (Bhooth Bangla) ಮೇಲೆ ಪ್ರಭಾವ ಬೀರಲಾರಂಭಿಸಿದೆ. ಹಾಗಾಗಿ ‘ಭೂತ್ ಬಂಗ್ಲ’ ಚಿತ್ರದ ಬಿಡುಗಡೆ ದಿನಾಂಕ ಮುಂದೂಡಿಕೆ ಆಗುವ ಸಾಧ್ಯತೆ ಇದೆ ಎಂಬ ಗಾಸಿಪ್ ಕೇಳಿಬರುತ್ತಿದೆ….