ಕನ್ನಡಿಗರು ಉದ್ಯೋಗಕ್ಕಾಗಿ, ಬಡ್ತಿಗಾಗಿ ಕೇಂದ್ರದ ಮುಂದೆ ಭಿಕ್ಷೆಗೆ ನಿಂತಿಲ್ಲ: ರೈಲ್ವೆ ಪರೀಕ್ಷೆ ಮುಂದೂಡಿದಕ್ಕೆ ಸಿಎಂ ಕೆಂಡಾಮಂಡಲ
ಬೆಂಗಳೂರು, ಮಾರ್ಚ್ 17: ರೈಲ್ವೆ ನೇಮಕಾತಿ ಪರೀಕ್ಷೆಯಲ್ಲಿ ಕನ್ನಡ ಭಾಷೆ ತೆಗೆದ ವಿಚಾರವಾಗಿ ರಾಜ್ಯದ ವಿವಿಧೆಡೆ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ ಮಾಡಲಾಗಿದೆ. ಕನ್ನಡಿಗರಿಗೆ ಅನ್ಯಾಯ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ. ಇತ್ತ ಹುಬ್ಬಳ್ಳಿಯಲ್ಲಿ ರೈಲ್ವೆ ನೇಮಕಾತಿ ಕಚೇರಿಗೆ ಮುತ್ತಿಗೆ ಹಾಕಲಾಯಿತು. ಬಳಿಕ ವಿವಿಧ ಸಂಘಟನೆಗಳ ಹೋರಾಟಕ್ಕೆ ಮಣಿದ ರೈಲೆ ಇಲಾಖೆ ಇಂದಿನ ಪರೀಕ್ಷೆಯನ್ನು ಮುಂದೂಡಿದೆ. ಈ ಕುರಿತಾಗಿ ಸಿಎಂ ಸಿದ್ದರಾಮಯ್ಯ (Siddaramaiah) ನೈರುತ್ಯ ರೈಲ್ವೆ ಇಲಾಖೆ ನಡೆಯನ್ನು ಖಂಡಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಮಧ್ಯೆಪ್ರವೇಶಿಸಿ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದಾರೆ….