Headlines

ಹೈದರಾಬಾದ್​​ನ ಅಲ್ಲು ಸಿನಿಮಾಸ್​​​ನಲ್ಲಿ ಕನ್ನಡದ ಇಬ್ಬರು ನಿರ್ದೇಶಕರ ಫೋಟೋ

ಅಲ್ಲು ಅರ್ಜುನ್ ಅವರು (Allu Arjun) ಸಿನಿಮಾ ಕ್ಷೇತ್ರದಲ್ಲಿ ಹೊಸ ಹೆಜ್ಜೆ ಇಟ್ಟಿದ್ದಾರೆ. ‘ಅಲ್ಲು ಸಿನಿಮಾಸ್’ ಮಲ್ಟಿಪ್ಲೆಕ್ಸ್​​ನ ಹೈದರಾಬಾದ್​​ನಲ್ಲಿ ಆರಂಭಿಸಿದ್ದಾರೆ. ಐಷಾರಾಮಿ ಆಸನ ವ್ಯವಸ್ಥೆ ಹಾಗೂ ಅದ್ಭುತ ಸಿನಿಮಾ ವೀಕ್ಷಣೆ ಅನುಭವ ನೀಡುವ ಈ ಮಲ್ಟಿಪ್ಲೆಕ್ಸ್ ಗುರುವಾರ (ಮಾರ್ಚ್ 12) ಉದ್ಘಾಟನೆ ಆಯಿತು. ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅವರು ಇದನ್ನು ಲೋಕಾರ್ಪಣೆ ಮಾಡಿದರು. ಈ ಥಿಯೇಟರ್​​ನ ವಾಲ್​​ ಆಫ್ ಫೇಮ್​ ಅಲ್ಲಿ ಇಬ್ಬರು ಕನ್ನಡದ ನಿರ್ದೇಶಕರ ಫೋಟೋ ಇದೆ ಎಂಬುದು ವಿಶೇಷ. ಈ ಸಂದರ್ಭದ ವಿಡಿಯೋ…

Read More

ಚಿತ್ರಮಂದಿರಗಳಲ್ಲಿ ಬ್ಯಾನ್, ಈಗ ಒಟಿಟಿಯಿಂದಲೂ ಹೊರಕ್ಕೆ, ಯಾವುದು ಈ ‘ಸಟ್ಲುಜ್’ ಸಿನಿಮಾ? – Kannada News | Diljit Dosanjh’s Satluj Removed From Zee5 In India Two Days After Release

ಭಾರತದಲ್ಲಿ ಸಿನಿಮಾ (Cinema) ಬ್ಯಾನ್ ಎನ್ನುವುದು ಸಾಮಾನ್ಯ ಎಂಬಂತಾಗಿದೆ. ಸಣ್ಣ-ಪುಟ್ಟ ವಿಷಯಕ್ಕೂ ಸಿನಿಮಾಗಳ ಮೇಲೆ ಕೆಲ ಸಂಘಟನೆಯವರು, ನೆಟ್ಟಿಗರು ಆಗಾಗ್ಗೆ ಬ್ಯಾನ್ ಹೇರುತ್ತಲೇ ಇರುತ್ತಾರೆ. ಆದರೆ ಅದೆಲ್ಲ ವರ್ಕೌಟ್ ಆಗುವುದಿಲ್ಲ. ಸಿಬಿಎಫ್​​ಸಿ ಪ್ರಮಾಣ ಪತ್ರ ಪಡೆದ ಯಾವ ಸಿನಿಮಾ ಸಹ ಬಿಡುಗಡೆ ಆಗದೇ ಇರುವುದಿಲ್ಲ. ಆದರೆ ಇಲ್ಲೊಂದು ಸಿನಿಮಾ ಕಳೆದ ಮೂರು ವರ್ಷಗಳಿಂದಲೂ ಸಿಬಿಎಫ್​​ಸಿಯ ಪ್ರಮಾಣ ಪತ್ರಕ್ಕಾಗಿ ಹೋರಾಡಿ, ಕೊನೆಗೆ ಸಿನಿಮಾ ಬಿಡುಗಡೆ ಆಗುವುದಿಲ್ಲವೆಂದು ಕೈಚೆಲ್ಲಿ, ಬಳಿಕ ಒಟಿಟಿಯಲ್ಲಿ ಬಿಡುಗಡೆ ಮಾಡಿತ್ತು. ಆದರೆ ಒಟಿಟಿಯಲ್ಲಿ ಸಿನಿಮಾ ರಿಲೀಸ್…

Read More

ಶುಕ್ರವಾರವೂ ಅಬ್ಬರಿಸಿದ ‘ಧುರಂಧರ್ 2’ ಸಿನಿಮಾ; ಕನ್ನಡದಲ್ಲಿ ಗಳಿಕೆ ಎಷ್ಟು?

‘ಧುರಂಧರ್ 2’ ಸಿನಿಮಾ (Dhurandhar 2) ದಿನವೂ ಬಾಕ್ಸ್ ಆಫೀಸ್​​ನಲ್ಲಿ ಅಬ್ಬರಿಸುತ್ತಿದೆ. ಈ ಚಿತ್ರ ಸಾಕಷ್ಟು ನಿರೀಕ್ಷೆಗಳೊಂದಿಗೆ ರಿಲೀಸ್ ಆಯಿತು. ಈ ಸಿನಿಮಾ ನಿರೀಕ್ಷೆಯನ್ನು ಹುಸಿ ಮಾಡಿಲ್ಲ. ಸಿನಿಮಾ ಅಬ್ಬರಿಸುತ್ತಿದೆ. ಚಿತ್ರ ಬಾಕ್ಸ್ ಆಫೀಸ್​​ನಲ್ಲಿ ಒಳ್ಳೆಯ ಕಲೆಕ್ಷನ್ ಮಾಡುತ್ತಿದೆ. ಸಿನಿಮಾ ಒಟ್ಟಾರೆ ಎಷ್ಟು ಕೋಟಿ ರೂಪಾಯಿ ಕಲೆಕ್ಷನ್ ಮಾಡುತ್ತದೆ ಎಂಬ ಕುತೂಹಲ ಮೂಡಿದೆ. ಇನ್ನೂ ಎರಡು ತಿಂಗಳ ಕಾಲ ಸಿನಿಮಾ ಪ್ರಸಾರ ಕಾಣುವ ನಿರೀಕ್ಷೆ ಇದೆ. ವಿಕೇಂಡ್​​ ಶೋಗಳು ಹೌಸ್​​ಫುಲ್ ಆಗಿವೆ. ಮಾರ್ಚ್ 19ರಂದು ‘ಧುರಂಧರ್ 2’…

Read More

ಕುಡಿದ ಮತ್ತಿನಲ್ಲಿ ತಂದೆಯನ್ನು ಕೊಂದು, ತನ್ನ ಮಣಿಕಟ್ಟನ್ನೇ ಕೊಯ್ದುಕೊಂಡ ವ್ಯಕ್ತಿ

ಮೀರತ್, ಮಾರ್ಚ್​ 15: ಕುಡಿದ ಮತ್ತಲ್ಲಿ ತಂದೆಯನ್ನು ಕೊಂದಿದ್ದಲ್ಲದೇ ತನ್ನ ಮಣಿಕಟ್ಟನ್ನೇ ವ್ಯಕ್ತಿ ಕೊಯ್ದುಕೊಂಡಿರುವ ಘಟನೆ ಉತ್ತರ ಪ್ರದೇಶದ ಮೀರತ್​​ನಲ್ಲಿ ನಡೆದಿದೆ. ಸಿವಿಲ್ ಲೈನ್ಸ್ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ಇಟ್ಟಿಗೆಯಿಂದ ತಂದೆಯ ತಲೆಗೆ ಹೊಡೆದು ಹತ್ಯೆ ಮಾಡಿದ್ದಾನೆ. ಪೊಲೀಸರ ಪ್ರಕಾರ, ದಾಳಿಯ ನಂತರ ಆರೋಪಿಯು ಚಾಕುವಿನಿಂದ ತನ್ನ ಮಣಿಕಟ್ಟನ್ನು  ತಾನೇ ಕೊಯ್ದುಕೊಂಡಿದ್ದಾನೆ. ಪೊಲೀಸರು ಸ್ಥಳಕ್ಕೆ ಬಂದಾಗ ಆತನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ತಂದೆ ಮತ್ತು ಮಗ ಒಟ್ಟಿಗೆ ಮದ್ಯಪಾನ ಮಾಡುತ್ತಿದ್ದಾಗ ಅವರ ನಡುವೆ ವಾಗ್ವಾದ ನಡೆಯಿತು ಎಂದು ಪೊಲೀಸರು ತಿಳಿಸಿದ್ದಾರೆ….

Read More

ರಾಜ್ಯದ ಹಲವು ಜಿಲ್ಲೆಗಳಲ್ಲಿ ಜನರ ನೆಮ್ಮದಿ ಕಸಿದ ಮಳೆರಾಯ: ಮನೆಗಳಿಗೆ ನುಗ್ಗಿದ ನೀರು, ಕುಸಿದ ಸೇತುವೆ

ಕೇರಳಂಗೆ ಮುಂಗಾರು ಪ್ರವೇಶವಾಗಿದ್ದು, ರಾಜ್ಯದಲ್ಲೂ ಮಳೆ ಚುರುಕುಗೊಂಡಿದೆ. ನಿನ್ನೆಯಷ್ಟೇ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಆರ್ಭಟ ಜೋರಾಗಿದ್ದು, ಅಲ್ಲಲ್ಲಿ ಭಾರೀ ಸಮಸ್ಯೆಗಳು ಕಂಡು ಬಂದಿವೆ. ಜೂನ್ 9ರವರೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿಯೊಂದಿಗೆ ಮಳೆಯಾಗುವ ನಿರೀಕ್ಷೆಯಿದೆ. ಕೇರಳಂನ ಕಾಸರಗೋಡು ಜಿಲ್ಲೆಯಾದ್ಯಂತ ಭಾರೀ ಮಳೆ ಆಗಿದೆ. ಅಡೂರು ಎಂಬಲ್ಲಿ ನಿರಂತರ ಮಳೆಗೆ ಮಣ್ಣು ಕುಸಿದು ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಮನೆ ಸಮೀಪ ಆಟವಾಡುತ್ತಿದ್ದಾಗ ಆವರಣದ ಗೋಡೆ ಏಕಾಏಕಿ ಕುಸಿದು ಬಿದ್ದಿದೆ. ಮಣ್ಣಿನಡಿ…

Read More

Gold Rate Today: ಚಿನ್ನ, ಬೆಳ್ಳಿ ಬೆಲೆ ಏರಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 8th February 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಫೆಬ್ರುವರಿ 8: ಈ ವಾರ ಹೆಚ್ಚಿನ ದಿನ ಕುಸಿತ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ವಾರಾಂತ್ಯದಲ್ಲಿ ಹೆಚ್ಚಳಗೊಂಡಿವೆ. ಚಿನ್ನದ ಬೆಲೆ (Gold Rate) ಗ್ರಾಮ್​ಗೆ ಮುನ್ನೂರಕ್ಕೂ ಹೆಚ್ಚು ರೂಗಳಷ್ಟು ಏರಿಕೆ ಕಂಡಿದೆ. ಆಭರಣ ಚಿನ್ನದ ಬೆಲೆ ಮತ್ತೆ 14,000 ರೂ ಗಡಿ ದಾಟಿ ಹೋಗಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಬೆಲೆ ಏರಿಕೆ ಆಗಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ 10 ರೂ ಹೆಚ್ಚಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,43,550…

Read More

ಬೆಳಗಾವಿ: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ! – Kannada News | Belagavi Shocker: Man brutally murdered in Kittur; investigation begins

ಬೆಳಗಾವಿ: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ! ಬೆಳಗಾವಿ, ಫೆಬ್ರವರಿ 22: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಹಿರೇನಂದಿಹಳ್ಳಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಗ್ರಾಮದ ಸಮೀಪದ ಮೆಕ್ಕೆಜೋಳ ಗದ್ದೆಯಲ್ಲಿ ಕಲ್ಮೇಶ್ ಕೋಟಿ (50) ಅವರ ಶವ ಪತ್ತೆಯಾಗಿದ್ದು,ಕಿತ್ತೂರಿನ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಹತ್ಯೆಗೆ ಕಾರಣವೇನು? ತುಮಕೂರಿನಲ್ಲಿ ಹೋಮ್ ಕೇರ್‌ನಲ್ಲಿ ಕೆಲಸ ಮಾಡುತ್ತಿದ್ದ ಕಲ್ಮೇಶ್, ಸುಮಾರು ಹತ್ತು ದಿನಗಳ ಹಿಂದಷ್ಟೇ ಗ್ರಾಮಕ್ಕೆ ಬಂದಿದ್ದರು. ನಾಲ್ಕು ದಿನಗಳ…

Read More

ದಾಖಲೆ ವಿಶ್ವ ದಾಖಲೆ… ತನ್ನದೇ ವರ್ಲ್ಡ್​ ರೆಕಾರ್ಡ್ ಮುರಿದ ಸ್ಮೃತಿ ಮಂಧಾನ – Kannada News | Smriti Mandhana Breaks Her Own World Record

2024 ರಲ್ಲಿ ಟೆಸ್ಟ್, ಟಿ20 ಮತ್ತು ಏಕದಿನ ಕ್ರಿಕೆಟ್​ನಲ್ಲಿ ಒಟ್ಟು 35 ಇನಿಂಗ್ಸ್ ಆಡಿದ್ದ ಸ್ಮೃತಿ ಮಂಧಾನ ಒಟ್ಟು 1659 ರನ್ ಕಲೆಹಾಕಿದ್ದರು. ಈ ಮೂಲಕ ಮಹಿಳಾ ಅಂತಾರಾಷ್ಟ್ರೀಯ ಕ್ರಿಕೆಟ್​​ನಲ್ಲಿ ಒಂದೇ ವರ್ಷ 1600+ ರನ್ ಕಲೆಹಾಕಿದ ವಿಶ್ವದ ಮೊದಲ ಆಟಗಾರ್ತಿ ಎನಿಸಿಕೊಂಡಿದ್ದರು. Source link

Read More

ರಾಜ್ಯದಲ್ಲಿ ಮತ್ತೆ ಬಸ್ ಟಿಕೆಟ್‌ ದರ ಹೆಚ್ಚಾಗುತ್ತಾ? ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದೇನು?

ಬೆಂಗಳೂರು, ಮಾ.21: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗಿದ್ದರೂ ರಾಜ್ಯದಲ್ಲಿ ಬಸ್ ಟಿಕೆಟ್‌ ದರವನ್ನು ಹೆಚ್ಚಿಸುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಟಿಕೆಟ್ ದರ ಏರಿಸಲು ಸದ್ಯಕ್ಕೆ ಅಧಿಕಾರವಿಲ್ಲ ಎಂದು ತಿಳಿಸಿರುವ ಸಚಿವರು, ದರ ಹೆಚ್ಚಳದ ನಿರ್ಧಾರವನ್ನು ತಿರಸ್ಕರಿಸಿದ್ದಾರೆ. ಇಂಧನ ಬೆಲೆ ಏರಿಕೆಗೆ ಜಾಗತಿಕ ಯುದ್ಧದ ಪರಿಸ್ಥಿತಿಯೇ ಕಾರಣ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಯುದ್ಧ ನಿಂತರೆ ಬೆಲೆಗಳು ತಾನಾಗಿಯೇ ಕಡಿಮೆಯಾಗುತ್ತವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ…

Read More

ಟಿಸಿಎಸ್​ ಮತಾಂತರ, ಲೈಂಗಿಕ ಕಿರುಕುಳ ಪ್ರಕರಣ; ಕಠಿಣ ತನಿಖೆಗೆ ಟಾಟಾ ಕಂಪನಿ​ ಆದೇಶ

ನವದೆಹಲಿ, ಏಪ್ರಿಲ್ 13: ಟಾಟಾ ಸನ್ಸ್ ಅಧ್ಯಕ್ಷ ಎನ್. ಚಂದ್ರಶೇಖರನ್ ಇಂದು ಟಿಸಿಎಸ್ ನಾಸಿಕ್‌ನಲ್ಲಿ ನಡೆದ ಲೈಂಗಿಕ ಕಿರುಕುಳ ಆರೋಪಗಳನ್ನು ಟೀಕಿಸಿದ್ದಾರೆ. “ಈ ಘಟನೆ ಗಂಭೀರವಾಗಿದ್ದು, ಕಳವಳಕಾರಿ ಮತ್ತು ದುಃಖಕರದ್ದಾಗಿದೆ” ಎಂದು ಬೇಸರ ಹೊರಹಾಕಿದ್ದಾರೆ. ಟಿಸಿಎಸ್​ (Tata Consultancy Services) ಕಂಪನಿಯ ಹಿರಿಯ ಕಾರ್ಯನಿರ್ವಾಹಕರ ನೇತೃತ್ವದಲ್ಲಿ ಈ ಘಟನೆಯ ಬಗ್ಗೆ ತನಿಖೆ ನಡೆಸುವುದಾಗಿ ಘೋಷಿಸಿದ್ದಾರೆ. ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಬಹುರಾಷ್ಟ್ರೀಯ ಕಂಪನಿಯ ಕಚೇರಿಯಲ್ಲಿ 8 ಮಹಿಳಾ ಉದ್ಯೋಗಿಗಳಿಂದ ಲೈಂಗಿಕ ಕಿರುಕುಳ ಮತ್ತು ಬಲವಂತದ ಧಾರ್ಮಿಕ ಮತಾಂತರದ ಆರೋಪಗಳು ಕೇಳಿಬಂದಿತ್ತು….

Read More