ಪುನೀತ್ ರಾಜ್ಕುಮಾರ್ ಅವರು ಇಂದು ನಮ್ಮ ಜೊತೆ ಇಲ್ಲ. ಆದರೆ, ಅವರ ಜನ್ಮದಿನವನ್ನು ಅಭಿಮಾನಿಗಳು ಆಚರಿಸುತ್ತಿದ್ದಾರೆ. ಇದೇ ವೇಳೆ ಕುಟುಂಬದವರು ಪುನೀತ್ ಸ್ಮಾರಕದ ಬಳಿ ತೆರಳಿ ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. ಈ ಮೂಲಕ ಅಪ್ಪುನ ನೆನಪಿಸಿಕೊಳ್ಳಲಾಗಿದೆ. ಈ ವಿಡಿಯೋ ವೈರಲ್ ಆಗಿದೆ. ಫ್ಯಾನ್ಸ್ ಈ ದೃಶ್ಯವನ್ನು ನೋಡಿ ಭಾವುಕರಾಗಿದ್ದಾರೆ. ಅಪ್ಪು ಇಂದು ನಮ್ಮ ಜೊತೆ ಇರಬೇಕಿತ್ತು ಎಂಬ ಅಭಿಪ್ರಾಯ ಹೊರಹಾಕಿದ್ದಾರೆ.
ಮುಯ್ಯಿ ನೀಡುವಾಗ ಸಾಮಾನ್ಯವಾಗಿ ಕೊಡುವ ದುಡ್ಡಿಗೆ ಒಂದು ರೂಪಾಯಿಯನ್ನು ಸೇರಿಸಿ ನೀಡುವ ಪದ್ಧತಿ ಇದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಹಿಂದಿನ ಕಾಲದಲ್ಲಿ ಮುಯ್ಯಿ ಪುಸ್ತಕಗಳನ್ನು ನಿರ್ವಹಿಸುವ ಪದ್ಧತಿಯಿತ್ತು. ಕೆಲವು ವಿವಾಹಗಳಲ್ಲಿ ಮುಯ್ಯಿ ಬರೆಯಲುಂದೇ ವ್ಯಕ್ತಿಗಳಿರುತ್ತಿದ್ದರು. ಈ ಪುಸ್ತಕಗಳನ್ನು ವಂಶಪಾರಂಪರ್ಯವಾಗಿ ಸಂರಕ್ಷಿಸಿ, ಸಂಬಂಧಗಳ ಇತಿಹಾಸ ಮತ್ತು ಸಹಕಾರದ ಸ್ಮರಣೆಯಾಗಿ ಬಳಸಲಾಗುತ್ತಿತ್ತು.
ಗುರೂಜಿಯವರು ಹೇಳುವಂತೆ, ಮುಯ್ಯಿ ನೀಡುವಾಗ ಸಾಮಾನ್ಯವಾಗಿ ಒಂದು ರೂಪಾಯಿಯನ್ನು ಸೇರಿಸಿ (ಉದಾಹರಣೆಗೆ 101, 501, 1001) ನೀಡುವ ಪದ್ಧತಿ ಇದೆ. ಇದಕ್ಕೆ ಒಂದು ವಿಶಿಷ್ಟ ಅರ್ಥವಿದೆ. ಸೊನ್ನೆಯು ಅಂತ್ಯದ ಸಂಕೇತವಲ್ಲ, ಅದು ಪರಿಪೂರ್ಣತೆ ಅಥವಾ ಬೆಳವಣಿಗೆಯ ಕೊರತೆಯನ್ನು ಸೂಚಿಸಬಹುದು ಎಂಬ ಭಾವನೆ ಇದೆ. ಆದರೆ “ಒಂದು” ಪ್ರಾರಂಭ, ಅಭಿವೃದ್ಧಿ, ಸೂರ್ಯನ ಸಂಕೇತವಾಗಿದೆ. “ನೀವು ನೂರು ಮುಗಿಸಿ ಒಂದಕ್ಕೆ ಹೋಗುತ್ತಿದ್ದೀರಿ, ನಿಮ್ಮ ಜೀವನದಲ್ಲಿ ಶುಭವಾಗಲಿ, ಮುನ್ನಡೆಯಿರಿ” ಎಂಬ ಆಶಯವನ್ನು ಈ ಒಂದು ರೂಪಾಯಿ ಸೂಚಿಸುತ್ತದೆ. ಇದು ಶುಭ ಹಾರೈಕೆಯ ಒಂದು ಸಂಕೇತವಾಗಿದೆ.
ಆದ್ದರಿಂದ ‘ಸೊನ್ನೆ’ ಅಪೂರ್ಣತೆಯನ್ನು ಸೂಚಿಸುತ್ತದೆ. ಈ ಒಂದು ರೂಪಾಯಿ ನಿಮ್ಮ ಜೀವನದಲ್ಲಿ ಶುಭವಾಗಲಿ, ಮುನ್ನಡೆಯಿರಿ ಎಂಬ ಆಶಯವನ್ನು ಬಿಂಬಿಸುತ್ತದೆ. ಇದು ಸಂಪ್ರದಾಯದ ಆರ್ಥಿಕ ಸಹಕಾರ ಮತ್ತು ಶುಭ ಹಾರೈಕೆಯ ಸಂಕೇತವಾಗಿದೆ. ಹೀಗೆ, ಮುಯ್ಯಿ ಪದ್ಧತಿಯು ನಮ್ಮ ಸಂಪ್ರದಾಯದಲ್ಲಿ ಆರ್ಥಿಕ ಸಹಕಾರ, ಸಂಬಂಧಗಳ ಬಲವರ್ಧನೆ ಮತ್ತು ಶುಭ ಹಾರೈಕೆಗಳ ಆಳವಾದ ಅರ್ಥವನ್ನು ಒಳಗೊಂಡಿದೆ ಎಂದು ಗುರೂಜಿ ಸಲಹೆ ನೀಡಿದ್ದಾರೆ.
ಡಾ.ಬಸವರಾಜ್ ಗುರೂಜಿ, ವೈದಿಕ ಜ್ಯೋತಿಷಿ (9972848937)
ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಬೆಂಗಳೂರು, ಮಾರ್ಚ್ 17: ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳ ವೈದ್ಯಕೀಯ ಶಿಕ್ಷಣದ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಹಳ್ಳಿಗಳ ವಿದ್ಯಾರ್ಥಿಗಳಿಗೆ ಗುಣಮಟ್ಟದ ನೀಟ್ (NEET) ತರಬೇತಿ ನೀಡಲು ವಿಶೇಷ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ (Dr Sharanaprakash R Patil) ವಿಧಾನ ಪರಿಷತ್ತಿನಲ್ಲಿ ಭರವಸೆ ನೀಡಿದ್ದಾರೆ.
ವಿಧಾನ ಪರಿಷತ್‌ನ ಪ್ರಶ್ನೋತ್ತರ ಅವಧಿಯಲ್ಲಿ ಸೋಮವಾರ ಕಾಂಗ್ರೆಸ್ ಸದಸ್ಯ ಐವನ್ ಡಿಸೋಜಾ ಅವರ ಪ್ರಶ್ನೆಗೆ ಸಚಿವರು ಉತ್ತರಿಸಿದರು. ನೀಟ್ ಪದ್ಧತಿಯು ಗ್ರಾಮೀಣ ವಿದ್ಯಾರ್ಥಿಗಳನ್ನು ವೈದ್ಯಕೀಯ ಶಿಕ್ಷಣದಿಂದ ವಂಚಿಸುತ್ತಿದೆ. ಕೇವಲ 3 ಲಕ್ಷ ರೂಪಾಯಿ ಸಹಾಯಧನದಿಂದ ಬಡ ವಿದ್ಯಾರ್ಥಿಗಳು ಕೋಚಿಂಗ್ ಪಡೆಯಲು ಸಾಧ್ಯವೇ ಎಂದು ಐವನ್ ಡಿಸೋಜಾ ಆತಂಕ ವ್ಯಕ್ತಪಡಿಸಿದ್ದಾರೆ.
ಇದಕ್ಕೆ ಸ್ಪಷ್ಟನೆ ನೀಡಿದ ಸಚಿವ ಪಾಟೀಲ್, ನೀಟ್ ವ್ಯವಸ್ಥೆಯಿಂದ ರಾಜ್ಯದ ವೈದ್ಯಕೀಯ ಸೀಟುಗಳ ಸಂಖ್ಯೆಯೇನೂ ಕಡಿಮೆಯಾಗಿಲ್ಲ. ನಾವು ನೀಟ್ ಪದ್ಧತಿಯನ್ನು ರದ್ದುಗೊಳಿಸಲು ನಿರ್ಧರಿಸಿದ್ದೆವು. ಆದರೆ ಸುಪ್ರೀಂ ಕೋರ್ಟ್ ಈ ಪದ್ಧತಿಯ ಪರವಾಗಿ ತೀರ್ಪು ನೀಡಿದೆ. ಆದ್ದರಿಂದ, ರಾಜ್ಯದ ಬಡ ಮತ್ತು ಗ್ರಾಮೀಣ ವಿದ್ಯಾರ್ಥಿಗಳು ಈ ಸ್ಪರ್ಧಾತ್ಮಕ ಪರೀಕ್ಷೆಯನ್ನು ಸಮರ್ಥವಾಗಿ ಎದುರಿಸಲು ಸರ್ಕಾರವು ಹಂತ ಹಂತವಾಗಿ ಪರಿಣಾಮಕಾರಿ ಕೋಚಿಂಗ್ ವ್ಯವಸ್ಥೆಯನ್ನು ಜಾರಿಗೆ ತರಲಿದೆ ಎಂದು ಭರವಸೆ ನೀಡಿದರು.
ವೈದ್ಯಕೀಯ ಶಿಕ್ಷಣ ಪಡೆಯಲು ನೀಟ್ ಪರೀಕ್ಷೆ ಕಡ್ಡಾಯವಾದಾಗಿನಿಂದ, ಕರ್ನಾಟಕದ ಗ್ರಾಮೀಣ ಮತ್ತು ಬಡ ವಿದ್ಯಾರ್ಥಿಗಳಿಗೆ ದೊಡ್ಡ ಮಟ್ಟದ ಸವಾಲು ಎದುರಾಗಿದೆ. ನಗರ ಪ್ರದೇಶದ ವಿದ್ಯಾರ್ಥಿಗಳು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಖಾಸಗಿ ತರಬೇತಿ ಕೇಂದ್ರಗಳಲ್ಲಿ ಕೋಚಿಂಗ್ ಪಡೆಯುತ್ತಿದ್ದರೆ, ಗ್ರಾಮೀಣ ಪ್ರದೇಶದ ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳು ಸರಿಯಾದ ಮಾರ್ಗದರ್ಶನವಿಲ್ಲದೆ ವೈದ್ಯಕೀಯ ಸೀಟು ಪಡೆಯಲು ಪರದಾಡುತ್ತಿದ್ದಾರೆ. ಇದೇ ಕಾರಣಕ್ಕೆ ರಾಜ್ಯ ಸರ್ಕಾರವು ನೀಟ್ ಪದ್ಧತಿಯನ್ನು ವಿರೋಧಿಸಿ ರದ್ದುಗೊಳಿಸಲು ಈ ಹಿಂದೆ ಚಿಂತನೆ ನಡೆಸಿತ್ತು. ಆದರೆ, ನೀಟ್ ಪರೀಕ್ಷೆಯ ಬಗ್ಗೆ ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ಆದೇಶ ನೀಡಿರುವ ಹಿನ್ನೆಲೆಯಲ್ಲಿ, ಈಗ ಪರೀಕ್ಷೆಯನ್ನು ಎದುರಿಸುವುದೊಂದೇ ವಿದ್ಯಾರ್ಥಿಗಳ ಮುಂದಿರುವ ದಾರಿಯಾಗಿದೆ.
ಹೀಗಾಗಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ನೆರವಾಗುವ ದೃಷ್ಟಿಯಿಂದ ಕರ್ನಾಟಕ ಸರ್ಕಾರವು ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿಯೇ ವಿಶೇಷ ತರಬೇತಿ ನೀಡುವುದು ಮತ್ತು ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡುವ ಯೋಜನೆಗಳನ್ನು ರೂಪಿಸುತ್ತಿದೆ. ಸಚಿವರು ಈಗ ನೀಡಿರುವ ಉಚಿತ ತರಬೇತಿ ಭರವಸೆಯು ಗ್ರಾಮೀಣ ವಿದ್ಯಾರ್ಥಿಗಳಲ್ಲಿ ಹೊಸ ಭರವಸೆ ಮೂಡಿಸಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿಕ್ಲಿಕ್ ಮಾಡಿ
ಮೈಸೂರು, ಮಾ.17: ರಾಜ್ಯದಲ್ಲಿ ಸರ್ಕಾರಿ ಅಧಿಕಾರಿಗಳು ಲಂಚ ಸ್ವೀಕಾರ ಮಾಡುತ್ತಿರುವ ಹಾಗೂ ಅಕ್ರಮ ಆಸ್ತಿಗಳನ್ನು ಹೊಂದಿರುವ ಪ್ರಕರಣಗಳು ಆಗ್ಗಾಗೆ ಬೆಳಕಿಗೆ ಬರುತ್ತಿದೆ. ಅಧಿಕಾರಿಗಳು ಹಣ ಸ್ವೀಕಾರ ಮಾಡುತ್ತಿರುವಾಗ ಲೋಕಾಯುಕ್ತ ಕೈ ಸಿಕ್ಕಿ ಬಿದ್ದಿರುವ ಅದೆಷ್ಟೋ ಪ್ರಕರಣಗಳು ಹೆಚ್ಚಾಗುತ್ತಿರುವ ಬೆನ್ನಲ್ಲೇ ಇದೀಗ ಮತ್ತೊಂದು ಮಹಿಳಾ ಅಧಿಕಾರಿ ಲೋಕ ಬಲೆಗೆ ಬಿದ್ದಿದ್ದಾರೆ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯೊಬ್ಬರು (PDO), ಬಂಧನದಿಂದ ತಪ್ಪಿಸಿಕೊಳ್ಳಲು ಹರಿತವಾದ ಆಯುಧದಿಂದ ಕೈ ಕೊಯ್ದುಕೊಂಡು ಆತ್ಮಹತ್ಯೆಯ ನಾಟಕವಾಡಿದ ಘಟನೆ ಜಿಲ್ಲೆಯ ಹುಣಸೂರು ತಾಲೂಕಿನ ಮುಳ್ಳೂರು ಗ್ರಾ.ಪಂ. ಕಚೇರಿಯಲ್ಲಿ ನಡೆದಿದೆ.
ಮುಳ್ಳೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿದ್ದ ಸ್ವಾಮಿ ಎಂಬುವವರು ನಿಧನರಾದ ಬಳಿಕ, ಅವರ ಪುತ್ರ ಮಹದೇವ್ ಅವರಿಗೆ ಅನುಕಂಪದ ಆಧಾರದ ಮೇಲೆ ಕೆಲಸ ಸಿಕ್ಕಿತ್ತು. ಮೃತ ಸ್ವಾಮಿ ಅವರ ಎರಡು ವರ್ಷದ ಬಾಕಿ ಸಂಬಳ ಸುಮಾರು 4 ಲಕ್ಷ ರೂಪಾಯಿ ಬಿಡುಗಡೆ ಮಾಡಲು ಪಿಡಿಒ ಮಂಜುಳಾ ಅವರು 50 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು.ಲಂಚ ನೀಡಲು ಇಚ್ಛಿಸದ ಮಹದೇವ್ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ, ಕಚೇರಿಯಲ್ಲಿ ಮುಂಗಡವಾಗಿ 25 ಸಾವಿರ ರೂ. ಹಣ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಮಂಜುಳಾ ಅವರನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.
ಲೋಕಾಯುಕ್ತ ಬಲೆಗೆ ಬೀಳುತ್ತಿದ್ದಂತೆ ಕಂಗಾಲಾದ ಮಂಜುಳಾ, ಕಚೇರಿಯಲ್ಲೇ ಹರಿತವಾದ ಆಯುಧದಿಂದ ಕೈ ಕೊಯ್ದುಕೊಂಡು ರಾದ್ಧಾಂತ ಮಾಡಿದ್ದಾರೆ. ಅಧಿಕಾರಿಗಳ ಮುಂದೆಯೇ ಹೈಡ್ರಾಮಾ ಸೃಷ್ಟಿಸಿ ತನಿಖೆಗೆ ಅಡ್ಡಿಪಡಿಸಲು ಯತ್ನಿಸಿದ್ದಾರೆ. ಗಾಯಗೊಂಡ ಪಿಡಿಒ ಮಂಜುಳಾ ಅವರನ್ನು ತಕ್ಷಣವೇ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಚಿಕಿತ್ಸೆಯ ನಂತರ ಲೋಕಾಯುಕ್ತ ಪೊಲೀಸರು ವಿಚಾರಣೆ ಮುಂದುವರಿಸಲಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿಕ್ಲಿಕ್ ಮಾಡಿ
ಪವನ್ ಕಲ್ಯಾಣ್ (Pawan Kalyan), ತೆಲುಗು ರಾಜ್ಯಗಳಲ್ಲಿ ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ನಟ. ಆಂಧ್ರ ಡಿಸಿಎಂ ಆಗಿದ್ದರೂ ಸಹ ಸಿನಿಮಾಗಳಲ್ಲಿ ನಟಿಸುತ್ತಿರುವ ಪವನ್ ಕಲ್ಯಾಣ್ ಅವರ ಹೊಸ ಸಿನಿಮಾ ‘ಉಸ್ತಾದ್ ಭಗತ್ ಸಿಂಗ್’ ಮಾರ್ಚ್ 19ರಂದು ಬಿಡುಗಡೆ ಆಗಲಿದೆ. ಸಿನಿಮಾನಲ್ಲಿ ಪವನ್ ಕಲ್ಯಾಣ್ ಜೊತೆಗೆ ಕನ್ನಡದ ನಟಿ ಶ್ರೀಲೀಲಾ ಸಹ ನಟಿಸಿದ್ದಾರೆ. ಇತ್ತೀಚೆಗಷ್ಟೆ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಅದ್ಧೂರಿಯಾಗಿ ನೆರವೇರಿತು. ಕಾರ್ಯಕ್ರಮದಲ್ಲಿ ಪವನ್ ಕಲ್ಯಾಣ್, ಶ್ರೀಲೀಲಾ, ರಾಶಿ ಖನ್ನಾ ಇನ್ನೂ ಹಲವರು ಭಾಗಿ ಆಗಿದ್ದರು. ಈ ವೇಳೆ ಪವನ್ ಕಲ್ಯಾಣ್ ಮಾತನಾಡಿ ತಮಗೆ ಶ್ರೀಲೀಲಾ ಜೊತೆ ನನ್ನನ್ನು ಒಂದೇ ಫ್ರೇಮ್ನಲ್ಲಿ ತೋರಿಸಬೇಡಿ ಎಂದು ನಿರ್ದೇಶಕರ ಬಳಿ ಹೇಳಿಬಿಟ್ಟಿದ್ದೆ ಎಂದರು. ಅದಕ್ಕೆ ಕಾರಣವೇನು?
ಕಾರ್ಯಕ್ರಮ ಆರಂಭಕ್ಕೂ ಮುನ್ನ, ನಿರೂಪಕಿ ಸುಮಾ ಕನಕಾಲ ಅವರು ಪವನ್ ಅವರೊಟ್ಟಿಗೆ ಮಾತನಾಡುತ್ತಾ, ನೀವು ಸಖತ್ ಆಗಿ ಡ್ಯಾನ್ಸ್ ಮಾಡಿದ್ದೀರಿ, ಶ್ರೀಲೀಲಾ ಡ್ಯಾನ್ಸ್ ಸಹ ಟ್ರೈಲರ್ನಲ್ಲಿ ಅಲ್ಲಲ್ಲಿ ಕಾಣಿಸಿದೆ ಎಂದರು. ಅದಕ್ಕೆ ಪವನ್ ಕಲ್ಯಾಣ್, ‘ನಾನು ನಿರ್ದೇಶಕರ ಬಳಿ ಕಡ್ಡಾಯವಾಗಿ ಹೇಳಿಬಿಟ್ಟಿದ್ದೆ, ನನ್ನನ್ನು ಶ್ರೀಲೀಲಾ ಜೊತೆಗೆ ಡ್ಯಾನ್ಸ್ ಮಾಡಿಸಬೇಡಿ, ನಾನು ಒಬ್ಬನೇ ಡ್ಯಾನ್ಸ್ ಮಾಡಬೇಕು ಅಥವಾ ಶ್ರೀಲೀಲಾ ಒಬ್ಬರೇ ಡ್ಯಾನ್ಸ್ ಮಾಡಬೇಕು, ಹಾಡುಗಳಲ್ಲಿ ನನ್ನ ಶ್ರೀಲೀಲಾ ಜೊತೆ ತೋರಿಸಲೇಬೇಡಿ. ಏಕೆಂದರೆ ಶ್ರೀಲೀಲಾ ಅದ್ಭುತವಾದ ಡ್ಯಾನ್ಸರ್, ಡ್ಯಾನ್ಸ್ನಲ್ಲಿ ಅವರು ನನ್ನನ್ನು ಸುಲಭವಾಗಿ ಡಾಮಿನೇಟ್ ಮಾಡಿಬಿಡುತ್ತಾರೆ’ ಎಂದರು ಪವನ್ ಕಲ್ಯಾಣ್.
ಶ್ರೀಲೀಲಾ ಅದ್ಭುತವವಾದ ಡ್ಯಾನ್ಸರ್ ಎಂಬುದರಲ್ಲಿ ಅನುಮಾನವೇ ಇಲ್ಲ. ಹಲವಾರು ಮಂದಿ ನಟರು ಈ ವಿಷಯವನ್ನು ಒಪ್ಪಿಕೊಂಡು, ಶ್ರೀಲೀಲಾರ ಪ್ರತಿಭೆಯನ್ನು ಕೊಂಡಾಡಿದ್ದಾರೆ. ಇದೀಗ ಪವನ್ ಕಲ್ಯಾಣ್ ಸಹ ತಮ್ಮದೇ ಶೈಲಿಯಲ್ಲಿ ಶ್ರೀಲೀಲಾ ಡ್ಯಾನ್ಸ್ ಅನ್ನು ಕೊಂಡಾಡಿದ್ದಾರೆ.
ಅದೇ ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರೀಲೀಲಾ, ಪವನ್ ಕಲ್ಯಾಣ್ ಅವರ ಗುಣಗಾನ ಮಾಡುತ್ತಾ ಅವರನ್ನು ‘ಅಜ್ಞಾತವಾಸಿ’ ಎಂದು ಕರೆದರು. ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾನಲ್ಲಿ ನಟಿಸುವಾಗ ನಾನು ಬೇರೆ ಬೇರೆ ಭಾಷೆಯ ಸಿನಿಮಾಗಳಲ್ಲಿಯೂ ನಟಿಸುತ್ತಿದ್ದೆ, ಅಲ್ಲೆಲ್ಲ ಪವನ್ ಅವರು ಹೇಗೆ ಎಂದೆಲ್ಲ ಕೇಳುತ್ತಿದ್ದರು, ಆಗ ನಾನು, ‘ಪವನ್ ಕಲ್ಯಾಣ್ ಒಂದು ರೀತಿ ಅಜ್ಞಾತವಾಸಿ’ ಎಂದೆ. ಹಾಗೆಂದರೇನು ಎಂದು ಕೇಳಿದರು, ಚಾಟ್ಜಿಪಿಟಿ ಮಾಡಿಕೊಳ್ಳಿ ಎಂದು ಅವರಿಗೆ ಹೇಳಿದೆ. ನಿಮ್ಮಿಂದ ಸಾಕಷ್ಟು ಕಲಿತೆ, ಎಲ್ಲದರಲ್ಲೂ ಧನಾತ್ಮಕವಾಗಿ ಇರುವುದು ಕಲಿತೆ, ನಿಮ್ಮಿಂದ ಪರಿಸರ ಪ್ರೇಮ ಕಲಿತೆ. ಸಮಾಜದ ಬಗ್ಗೆ ಕಾಳಜಿ ಇರಬೇಕು ಎಂಬುದನ್ನು ಕಲಿತೆ. ನೀವು ಸಿನಿಮಾಗಳಲ್ಲಿ ನಟಿಸುವುದರಿಂದ ಸಿನಿಮಾ ರಂಗಕ್ಕೆ ಒಳ್ಳೆಯದಾಗುತ್ತದೆ. ನೀವು ಹೆಚ್ಚು ಹೆಚ್ಚು ಸಿನಿಮಾಗಳಲ್ಲಿ ನಟಿಸುತ್ತಿರಬೇಕು’ ಎಂದರು ಶ್ರೀಲೀಲಾ.
‘ಉಸ್ತಾದ್ ಭಗತ್ ಸಿಂಗ್’ ಸಿನಿಮಾವನ್ನು ಪವನ್ ಅವರ ಆಪ್ತ ಹರೀಶ್ ಶಂಕರ್ ನಿರ್ದೇಶನ ಮಾಡಿದ್ದಾರೆ. ಸಿನಿಮಾನಲ್ಲಿ ಶ್ರೀಲೀಲಾ ಜೊತೆಗೆ ರಾಶಿ ಖನ್ನಾ ಸಹ ಇದ್ದಾರೆ. ಈ ಸಿನಿಮಾನಲ್ಲಿ ವಿಂಟೇಜ್ ಪವನ್ ಕಲ್ಯಾಣ್ ಅವರನ್ನು ಕಾಣುತ್ತೀರಿ ಎಂದು ನಿರ್ದೇಶಕ ಹರೀಶ್ ಭರವಸೆ ಕೊಟ್ಟಿದ್ದಾರೆ. ಸಿನಿಮಾವನ್ನು ಮೈತ್ರಿ ಮೂವಿ ಮೇಕರ್ಸ್ ನಿರ್ಮಾಣ ಮಾಡಿದ್ದು, ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗಲಿದೆ.
ಕೋಲಾರ, ಮಾ.17: ಜಿಲ್ಲೆಯ ಜಯನಗರ ಬಡಾವಣೆಯಲ್ಲಿ ಇಂದು ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮನೆಯ ಅಡುಗೆ ಕೋಣೆಯೊಳಗೆ ಬೃಹತ್ ಗಾತ್ರದ ನಾಗರಹಾವೊಂದು ಪ್ರತ್ಯಕ್ಷವಾಗಿದ್ದು, ಮನೆಯವರನ್ನು ಬೆಚ್ಚಿಬೀಳಿಸಿದೆ. ಕೋಲಾರದ ಜಯನಗರ ಬಡಾವಣೆಯ ನಿವಾಸಿ ಮಂಜುನಾಥ್ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ. ಎಂದಿನಂತೆ ಅಡುಗೆ ಕೆಲಸಕ್ಕಾಗಿ ಅಡುಗೆ ಮನೆಗೆ ಹೋದಾಗ, ಅಲ್ಲಿದ್ದ ಸಾಮಗ್ರಿಗಳ ನಡುವೆ ನಾಗರಹಾವು ಅಡಗಿ ಕುಳಿತಿರುವುದು ಪತ್ತೆಯಾಗಿದೆ. ಹಾವನ್ನು ಕಂಡು ಮನೆಯವರು ದಿಕ್ಕಾಪಾಲಾಗಿ ಓಡಿದ್ದು, ಕೂಡಲೇ ಸ್ಥಳೀಯ ಉರಗ ರಕ್ಷಕರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಖ್ಯಾತ ಉರಗ ರಕ್ಷಕ ನಾಗರಾಜ್, ಸುಮಾರು ಅರ್ಧ ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಹಾವನ್ನು ಸುರಕ್ಷಿತವಾಗಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಅಡುಗೆ ಮನೆಯ ಪುಟ್ಟ ಜಾಗದಲ್ಲಿ ಕುಳಿತಿದ್ದ ಹಾವನ್ನು ಚಾಕಚಕ್ಯತೆಯಿಂದ ಹಿಡಿದಾಗ ಮನೆಯವರು ನಿಟ್ಟುಸಿರು ಬಿಟ್ಟಿದ್ದಾರೆ. ರಕ್ಷಿಸಲಾದ ನಾಗರಹಾವನ್ನು ಉರಗ ರಕ್ಷಕ ನಾಗರಾಜ್ ಅವರು ಜನವಸತಿ ಪ್ರದೇಶದಿಂದ ದೂರವಿರುವ ಅರಣ್ಯ ಪ್ರದೇಶಕ್ಕೆ ಸುರಕ್ಷಿತವಾಗಿ ಬಿಟ್ಟು ಬಂದಿದ್ದಾರೆ.
ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ಮೇಲೆ ಸೋಮವಾರ (ಮಾರ್ಚ್ 16, 2026) ರಾತ್ರಿ ಪಾಕಿಸ್ತಾನ್ ನಡೆಸಿದ ವೈಮಾನಿಕ ದಾಳಿಯಲ್ಲಿ 400 ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಕಾಬೂಲ್‌ನಲ್ಲಿರುವ ಓಮಿದ್ ಮಾದಕ ವ್ಯಸನ ಮುಕ್ತಿ ಕೇಂದ್ರ (Omid Addiction Treatment Hospital) ಎಂಬ 2,000 ಹಾಸಿಗೆಗಳ ಆಸ್ಪತ್ರೆಯನ್ನು ಗುರಿಯಾಗಿಸಿ ಈ ದಾಳಿ ನಡೆಸಲಾಗಿದೆ. ಈ ಭೀಕರ ದಾಳಿಯಿಂದಾಗಿ ನಾನೂರಕ್ಕೂ ಅಧಿಕ ಮಂದಿ ಮೃತಪಟ್ಟರೆ, ಸುಮಾರು 250ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಅಫ್ಘಾನ್ ಕ್ರಿಕೆಟಿಗರ ಆಕ್ರೋಶ
ಪಾಕಿಸ್ತಾನ್ ಸೇನೆ ನಡೆಸಿದ ಈ ಭೀಕರ ದಾಳಿಯನ್ನು ಅಫ್ಘಾನಿಸ್ತಾನ್ ತಂಡದ ಪ್ರಮುಖ ಆಟಗಾರರು ಸೋಷಿಯಲ್ ಮೀಡಿಯಾ ಮೂಲಕ ಖಂಡಿಸಿದ್ದಾರೆ. ಅಲ್ಲದೆ ಪಾಕ್ ಕ್ರಮವನ್ನು “ಯುದ್ಧಾಪರಾಧ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಶೀದ್ ಖಾನ್: “ನಾಗರಿಕ ವಸತಿಗಳು ಅಥವಾ ವೈದ್ಯಕೀಯ ಕೇಂದ್ರಗಳನ್ನು ಗುರಿಯಾಗಿಸುವುದು ಯುದ್ಧಾಪರಾಧ. ರಂಝಾನ್ ಸಮಯದಲ್ಲಿ ಇಂತಹ ಅಮಾನುಷ ಕೃತ್ಯ ಎಸಗಿರುವುದು ಅಸಹ್ಯಕರ,” ಎಂದು ಅಫ್ಘಾನ್ ತಂಡದ ಸ್ಟಾರ್ ಆಟಗಾರ ರಶೀದ್ ಖಾನ್ ಕಿಡಿಕಾರಿದ್ದಾರೆ.
ಮೊಹಮ್ಮದ್ ನಬಿ: “ಚಿಕಿತ್ಸೆ ಪಡೆಯುತ್ತಿದ್ದ ಯುವಕರನ್ನು ಕೊಲೆ ಮಾಡಲಾಗಿದೆ. ಆಸ್ಪತ್ರೆಯ ಹೊರಗೆ ಕಾಯುತ್ತಿದ್ದ ತಾಯಂದಿರ ಆಕ್ರಂದನ ಕೇಳುವವರಿಲ್ಲ,” ಎಂದು ಮೊಹಮ್ಮದ್ ನಬಿ ಬೇಸರ ವ್ಯಕ್ತಪಡಿಸಿದ್ದಾರೆ.
ನವೀನ್-ಉಲ್-ಹಕ್: “ಇಸ್ರೇಲ್ ಮತ್ತು ಪಾಕಿಸ್ತಾನ ಸರ್ಕಾರದ ನಡುವೆ ಯಾವುದೇ ವ್ಯತ್ಯಾಸ ಕಾಣುತ್ತಿಲ್ಲ,” ಎಂದು ಅಫ್ಘಾನ್ ವೇಗಿ ನವೀನ್ ಉಲ್ ಹಕ್ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮೂಲಕ ಆಕ್ರೋಶ ಹೊರಹಾಕಿದ್ದಾರೆ.
ಅಝ್ಮತುಲ್ಲಾ ಒಮರ್ಝಾಹಿ: ಅಮಾಯಕ ಜೀವಗಳ ಬಲಿದಾನಕ್ಕೆ ನ್ಯಾಯ ಸಿಗಬೇಕು ಎಂದು ಅಫ್ಘಾನಿಸ್ತಾನ್ ತಂಡದ ಆಲ್ರೌಂಡರ್ ಅಝ್ಮತುಲ್ಲಾ ಒಮರ್ಝಾಹಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ಸರ್ಕಾರಗಳ ಪ್ರತಿಕ್ರಿಯೆ
ಪಾಕಿಸ್ತಾನದ ಸಮರ್ಥನೆ: ಪಾಕಿಸ್ತಾನದ ರಕ್ಷಣಾ ಸಚಿವಾಲಯವು ಆಸ್ಪತ್ರೆಯನ್ನು ಗುರಿಯಾಗಿಸಿಕೊಂಡಿಲ್ಲ ಎಂದು ವಾದಿಸಿದೆ. ಭಯೋತ್ಪಾದಕರ ಅಡಗುದಾಣಗಳು ಮತ್ತು ಶಸ್ತ್ರಾಸ್ತ್ರ ಸಂಗ್ರಹಣಾ ಕೇಂದ್ರಗಳ ಮೇಲೆ ಮಾತ್ರ “ನಿಖರ ದಾಳಿ” ನಡೆಸಿರುವುದಾಗಿ ಹೇಳಿಕೊಂಡಿದೆ.
ಅಫ್ಘಾನಿಸ್ತಾನದ ಎಚ್ಚರಿಕೆ: ಇದು ಮಾನವೀಯತೆಯ ವಿರುದ್ಧದ ಅಪರಾಧವಾಗಿದ್ದು, ಪಾಕಿಸ್ತಾನದೊಂದಿಗಿನ ರಾಜತಾಂತ್ರಿಕ ಸಂಬಂಧಗಳು ಮಿತಿ ಮೀರಿವೆ ಮತ್ತು ಇದಕ್ಕೆ ತಕ್ಕ ಪ್ರತಿಕಾರ ತೀರಿಸಿಕೊಳ್ಳಲಾಗುವುದು ಎಂದು ತಾಲಿಬಾನ್ ವಕ್ತಾರ ಜಬೀವುಲ್ಲಾ ಮುಜಾಹಿದ್ ಎಚ್ಚರಿಸಿದ್ದಾರೆ.
ಅಫ್ಘಾನಿಸ್ತಾನ್ ಮೇಲೆ ಪಾಕಿಸ್ತಾನ್ ನಡೆಸಿದ ಈ ದಾಳಿಯು ಫೆಬ್ರವರಿ 2026 ರಿಂದ ಉಭಯ ದೇಶಗಳ ನಡುವೆ ನಡೆಯುತ್ತಿರುವ ಗಡಿ ಸಂಘರ್ಷದ ಒಂದು ಭಾಗವಾಗಿದ್ದು, ಪರಿಸ್ಥಿತಿ ಈಗ “ಮುಕ್ತ ಯುದ್ಧ”ಕ್ಕೆ ಆಹ್ವಾನ ನೀಡಿದಂತಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
ನವದೆಹಲಿ, ಮಾರ್ಚ್ 17: ಇರಾನ್ ಯುದ್ಧದ ಪರಿಣಾಮ ತೈಲ ಬೆಲೆಗಳು ಏರಿಕೆ ಆಗುತ್ತಿದ್ದು, ಜಾಗತಿಕವಾಗಿ ಪೆಟ್ರೋಲ್, ಡೀಸಲ್ ಇತ್ಯಾದಿ ಪೆಟ್ರೋಲಿಯಂ ಉತ್ಪನ್ನಗಳ ಬೆಲೆಯೂ ಏರಿಕೆ ಆಗುತ್ತಿದೆ. ಭಾರತದಲ್ಲಿ ಪೆಟ್ರೋಲ್, ಡೀಸಲ್ ಬೆಲೆ (Petrol and Diesel Rates) ಏರಿಕೆ ಮಾಡುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ. ಇದೇ ವೇಳೆ, ಖಾಸಗಿ ಪೆಟ್ರೋಲಿಯಂ ಕಂಪನಿಯಾದ ಶೆಲ್ ಸತತವಾಗಿ ಪೆಟ್ರೋಲ್, ಡೀಸಲ್ ಬೆಲೆ ಏರಿಸಿದೆ. ಮೂರು ದಿನಗಳ ಹಿಂದೆ ದರ ಪರಿಷ್ಕರಣೆ ಮಾಡಿದ್ದ ಶೆಲ್ 2 ರೂ ಹೆಚ್ಚಿಸಿದೆ. ಹತ್ತು ದಿನದಲ್ಲಿ ಶೆಲ್ನಲ್ಲಿ ಪೆಟ್ರೋಲ್ ಬೆಲೆ 4.50 ರೂ ಹೆಚ್ಚಳ ಆಗಿರುವುದು ತಿಳಿದುಬಂದಿದೆ. ಆದರೆ, ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳಾದ ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ, ಹಿಂದೂಸ್ತಾನ್ ಪೆಟ್ರೋಲಿಯಂ ಸಂಸ್ಥೆಗಳು ಪೆಟ್ರೋಲ್ ಬೆಲೆ ಏರಿಕೆ ಮಾಡಿಲ್ಲ.
ಶೆಲ್ ಸಂಸ್ಥೆ ಭಾರತದಲ್ಲಿ ಮಾತ್ರವಲ್ಲ, ಜಾಗತಿಕವಾಗಿಯೂ ಪೆಟ್ರೋಲ್ ಬೆಲೆ ಏರಿಕೆ ಆಗಿದೆ. ಸಿಂಗಾಪುರದಲ್ಲಿ ಗರಿಷ್ಠ ಮಟ್ಟಕ್ಕೆ ಪೆಟ್ರೋಲ್ ಬೆಲೆ ಏರಿದೆ. 2022ರ ಉಕ್ರೇನ್ ರಷ್ಯಾ ಯುದ್ಧದ ತಾರಕ ಸ್ಥಿತಿಯಲ್ಲಿ ಸಿಂಗಾಪುರದಲ್ಲಿ ಪೆಟ್ರೋಲ್ ಬೆಲೆ ಗರಿಷ್ಠ ಮಟ್ಟಕ್ಕೆ ಹೋಗಿತ್ತು. ಈಗ ಇರಾನ್ ಯುದ್ಧದ ಸಂದರ್ಭದಲ್ಲಿ ಪೆಟ್ರೋಲ್ ಬೆಲೆ ಆ ಮಟ್ಟವನ್ನು ಮುಟ್ಟಿದೆ.
ಭಾರತದಲ್ಲಿ ಶೆಲ್ ಸಂಸ್ಥೆ ಮಾರ್ಚ್ 14ರಂದು ದರ ಪರಿಷ್ಕರಣೆ ಮಾಡಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಮತ್ತು ಡೀಸಲ್ ದರ ಹಾಗೂ ವಿಪವರ್ ಡೀಸಲ್ ಮತ್ತು ಪೆಟ್ರೋಲ್ ದರಗಳ ವಿವರ ಈ ಕೆಳಕಂಡಂತಿದೆ:
ಜೋಗಿ ಪ್ರೇಮ್ (Prem) ನಿರ್ದೇಶನದ ‘ಕೆಡಿ’ ಸಿನಿಮಾ ಈಗ ಸುದ್ದಿ ಆಗಿದೆ. ಇದಕ್ಕೆ ಕಾರಣ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡು. ಈ ಹಾಡಿನಲ್ಲಿ ನೋರಾ ಫತೇಹಿ ಹಾಗೂ ಸಂಜಯ್ ದತ್ ನಟಿಸಿದ್ದರು. ಈ ಹಾಡಿಗೆ ಸಾಕಷ್ಟು ವಿರೋಧ ವ್ಯಕ್ತವಾಯಿತು. ಅನೇಕ ಸೆಲೆಬ್ರಿಟಿಗಳು ಈ ಹಾಡಿನ ಸಾಹಿತ್ಯವನ್ನು ಟೀಕಿಸಿದರು. ಈ ಬೆನ್ನಲ್ಲೇ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡನ್ನು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ಮೂಲಕ ತೆಗೆದುಹಾಕಲಾಗಿದೆ ಎನ್ನಲಾಗಿತ್ತು. ಆದರೆ, ಇದು ನಿಜವಲ್ಲ.
ಪ್ರೇಮ್ ಅವರು ‘ಕೆಡಿ’ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಏಪ್ರಿಲ್ 30ರಂದು ಸಿನಿಮಾ ತೆರೆಗೆ ಬರುತ್ತಿದೆ. ಈ ಚಿತ್ರದ ಹಾಡಿಗೆ ರಾಜ್ಯದ ಜನತೆ ಮಾತ್ರವಲ್ಲ ಬಾಲಿವುಡ್ ಮಂದಿಯೂ ಕ್ಯಾತೆ ತೆಗೆದಿದ್ದರು. ಅರ್ಜುನ್ ಜನ್ಯ ಸಂಗೀತ ಸಂಯೋಜನೆಯ ಈ ಚಿತ್ರದ ಹಾಡಿಗೆ ಪ್ರೇಮ್ ಸಾಹಿತ್ಯ ಬರೆದಿದ್ದಾರೆ. ಐಶ್ವರ್ಯಾ ರಂಗರಾಜನ್ ಕನ್ನಡದಲ್ಲಿ ಹಾಡಿದ್ದಾರೆ. ಹಿಂದಿಯಲ್ಲಿ ರಖೀಬ್ ಆಲಂ ಅವರು ಸಾಹಿತ್ಯ ಬರೆದಿದ್ದು, ಮಂಗ್ಲಿ ಧ್ವನಿ ನೀಡಿದ್ದಾರೆ.
‘ಸರ್ಸೆ..’ ಹಾಡಿನಲ್ಲಿ ನೋರಾ ಅವರು ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಹಾಡಿನಲ್ಲಿ ಸಾಕಷ್ಟು ಅಶ್ಲೀಲ ಸಾಹಿತ್ಯ ಇದೆ. ಈ ಹಾಡನ್ನು ಕೇಳಿದ್ದ ಖ್ಯಾತ ಗಾಯಕ ಅರ್ಮಾನ್ ಮಲ್ಲಿಕ್, ‘ಗೀತರಚನಕಾರರು ಇಷ್ಟು ಕೀಳು ಮಟ್ಟಕ್ಕೆ ಇಳಿದಿದ್ದನ್ನು ನೋಡಲು ಬೇಸರ ಆಗುತ್ತದೆ’ ಎಂದಿದ್ದರು. ಈ ವಿರೋಧದ ಬೆನ್ನಲ್ಲೇ ಹಾಡು ಕೆಲ ಹೊತ್ತು ಯೂಟ್ಯೂಬ್ನಿಂದ ಮಾಯ ಆಗಿತ್ತು . ಈಗ ಹಾಡು ಮತ್ತೆ ಮರಳಿದೆ. ಇದು ಚಿತ್ರಕ್ಕೆ ಸಾಕಷ್ಟು ಹಿನ್ನಡೆಯನ್ನು ಉಂಟು ಮಾಡಿದೆ. ರಿಲೀಸ್ಗೆ ಕೆಲವೇ ವಾರಗಳು ಇರುವಾಗ ದೊಡ್ಡ ಹಿನ್ನಡೆಯನ್ನು ಅನುಭವಿಸಿದೆ.
ಪ್ರೇಮ್ ಅವರು ಈ ಮೊದಲು ಈ ರೀತಿಯ ಸಾಕಷ್ಟು ವಿವಾದಗಳನ್ನು ಮಾಡಿಕೊಂಡಿದ್ದರು. ಅವರ ನಟನೆಯ ‘ಪ್ರೇಮ್ ಅಡ್ಡ’ ಸಿನಿಮಾ 2012ರಲ್ಲಿ ರಿಲೀಸ್ ಆಯಿತು. ಈ ಚಿತ್ರದ ‘ಮೇಲುಕೋಟೆ ಹುಡುಗಿ ಒಬ್ಬಳು’ ಹಾಡು ಸಾಕಷ್ಟು ವಿವಾದ ಸೃಷ್ಟಿ ಮಾಡಿತ್ತು. ಅದರಲ್ಲಿರೋ ಲಿರಿಕ್ಸ್ಗೆ ಮೇಲುಕೋಟೆಯ ಜನರು ವಿರೋಧ ಹೊರಹಾಕಿದ್ದರು.
ಪುನೀತ್ ರಾಜ್ಕುಮಾರ್ (Puneeth Rajkumar) ಅವರಿಗೆ ಇಂದು (ಮಾರ್ಚ್ 17) ಜನ್ಮದಿನ. ನಟನೆ, ಗಾಯನ, ಸಿನಿಮಾ ನಿರ್ಮಾಣ ಮಾತ್ರವಲ್ಲದೇ ಅವರು ನಿರೂಪಕನಾಗಿಯೂ ಜನಪ್ರಿಯತೆ ಪಡೆದುಕೊಂಡಿದ್ದು ಗೊತ್ತೇ ಇದೆ. ‘ಕನ್ನಡದ ಕೋಟ್ಯಧಿಪತಿ’ ಶೋನ ಅವರು ನಡೆಸಿಕೊಟ್ಟಿದ್ದರು. ಈ ಶೋ ನಡೆಸಿಕೊಟ್ಟಿದ್ದಕ್ಕೆ ಅವರಿಗೆ ಒಳ್ಳೆಯ ಸಂಭಾವನೆ ಸಿಕ್ಕಿತ್ತು. ಇದನ್ನು ಅವರು ಧರ್ಮದ ಕೆಲಸಕ್ಕೆ ಬಳಸಿಕೊಂಡಿದ್ದರು.
‘ಕನ್ನಡದ ಕೋಟ್ಯಧಿಪತಿ’ ಕಾರ್ಯಕ್ರಮದಿಂದ ಪುನೀತ್ ಅವರಿಗೆ ಸಿಕ್ಕಿದ್ದು ಬರೋಬ್ಬರಿ 8 ಕೋಟಿ ರೂಪಾಯಿ ಸಂಭಾವನೆ ಆಗಿತ್ತು. ಈ ಬಗ್ಗೆ ಭಗವಾನ್ ಹೇಳಿದ್ದರು. ಪುನೀತ್ ಅವರು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾ ಬಂದವರು. ಮೈಸೂರಿನಲ್ಲಿ ಶಕ್ತಿಧಾಮ ಬಗ್ಗೆ ಅವರಿಗೆ ವಿಶೇಷ ಕಾಳಜಿ ಇತ್ತು. ತಮ್ಮ ಕೈಗೆ ಸಂಭಾವನೆ ರೂಪದಲ್ಲಿ ಬಂದ ಆ 8 ಕೋಟಿ ರೂಪಾಯಿಯನ್ನು ಮಕ್ಕಳ ಶಿಕ್ಷಣಕ್ಕಾಗಿ ಅಪ್ಪು ಮೀಸಲಿಟ್ಟರು.
ಡಾ. ರಾಜ್ಕುಮಾರ್ ಕುಟುಂಬದ ಜೊತೆ ನಿರ್ದೇಶಕ ದೊರೆ-ಭಗವಾನ್ ಅವರಿಗೆ ಮೊದಲಿನಿಂದಲೂ ಒಡನಾಟ ಇದೆ. ಪುನೀತ್ ರಾಜ್ಕುಮಾರ್ ಅವರನ್ನು ಹತ್ತಿರದಿಂದ ಕಂಡಂತಹ ವ್ಯಕ್ತಿಗಳಲ್ಲಿ ಅವರು ಕೂಡ ಪ್ರಮುಖರು. ಟಿವಿ9ಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಭಗವಾನ್ ಅವರು ಕೆಲವು ಮುಖ್ಯ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಶಕ್ತಿಧಾಮದ ಮಕ್ಕಳ ಶಿಕ್ಷಣಕ್ಕಾಗಿ ಪುನೀತ್ ರಾಜ್ಕುಮಾರ್ ಅವರು ತಮ್ಮ 8 ಕೋಟಿ ರೂಪಾಯಿ ಸಂಭಾವನೆಯನ್ನು ಮೀಸಲಿಟ್ಟರು ಎಂಬ ವಿಚಾರವನ್ನು ಭಗವಾನ್ ತೆರೆದಿಟ್ಟಿದ್ದಾರೆ.
‘ಕನ್ನಡದ ಕೋಟ್ಯಧಿಪತಿ ಪುನೀತ್ ಅವರಿಗೆ 8 ಕೋಟಿ ರೂಪಾಯಿ ಸಂಭಾವನೆ ಬಂತು. ಅದನ್ನು ಶಕ್ತಿಧಾಮಕ್ಕೆ ಅವರು ಕೊಟ್ಟಿದ್ದರು. ಶಕ್ತಿಧಾಮದಲ್ಲಿ ನೂರಾರು ಮಕ್ಕಳು ಇದ್ದಾರೆ. ಎಲ್ಲರೂ ಬೇರೆ ಬೇರೆ ಶಾಲೆಗೆ ಹೋಗುತ್ತಾರೆ. ಮಕ್ಕಳಿಗಾಗಿ ಶಕ್ತಿಧಾಮದಲ್ಲಿಯೇ ಒಂದು ಶಾಲೆಯನ್ನು ಕಟ್ಟಿಸಬಹುದಲ್ಲ ಎಂಬ ಆಲೋಚನೆ ಪುನೀತ್ ಅವರದ್ದಾಗಿತ್ತು. ಹೀಗಾಗಿ, ನಂತರ ಶಾಲೆ ಆರಂಭಿಸಲಾಯಿತು’ ಎಂದು ಭಗವಾನ್ ಹೇಳಿದ್ದರು.
‘ಶಕ್ತಿಧಾಮ’ದ ಶಾಲೆ ಕೇವಲ ಹೆಣ್ಣುಮಕ್ಕಳಿಗೆ ಮಾತ್ರ. ಶಕ್ತಿಧಾಮದ ಮಕ್ಕಳು ಈ ಶಾಲೆಯಲ್ಲೇ ಓದಬೇಕು ಎಂಬುದು ಪುನೀತ್ ಶರತ್ತಾಗಿತ್ತು. ಹೊರಗಡೆಯಿಂದ ಬರುವ ಬಡ ಹೆಣ್ಣುಮಕ್ಕಳಿಗೂ ಪ್ರವೇಶ ನೀಡಬೇಕು ಎಂದು ಪುನೀತ್ ತಿಳಿಸಿದ್ದರು.