ನ್ಯೂಝಿಲೆಂಡ್ ವಿರುದ್ಧದ ಸರಣಿಗೆ ಭಾರತ ತಂಡ ಪ್ರಕಟ – Kannada News | India Squad For New Zealand Series
ಭಾರತ ಮತ್ತು ನ್ಯೂಝಿಲೆಂಡ್ ನಡುವಣ 8 ಪಂದ್ಯಗಳ ಸರಣಿಯು ಜನವರಿ 11 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಮೊದಲಿಗೆ ಏಕದಿನ ಪಂದ್ಯಗಳನ್ನಾಡಲಾಗುತ್ತಿದ್ದು, ಇದಾದ ಬಳಿಕ ಟಿ20 ಸರಣಿ ಜರುಗಲಿದೆ. ಇದೀಗ ಟಿ20 ಸರಣಿಗಾಗಿ 15 ಸದಸ್ಯರುಗಳ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಈ ತಂಡದ ನಾಯಕನಾಗಿ ಸೂರ್ಯಕುಮಾರ್ ಯಾದವ್ ಕಾಣಿಸಿಕೊಂಡರೆ, ಉಪನಾಯಕನಾಗಿ ಅಕ್ಷರ್ ಪಟೇಲ್ ಕಣಕ್ಕಿಳಿಯಲಿದ್ದಾರೆ. ಇದಕ್ಕೂ ಮುನ್ನ ನಡೆದ ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಶುಭ್ಮನ್ ಗಿಲ್ ಉಪನಾಯಕನಾಗಿ ಕಾಣಿಸಿಕೊಂಡಿದ್ದರು. ಇದೀಗ ಅವರನ್ನು ಟಿ20 ತಂಡದಿಂದ…