Headlines

ಸ್ಪೀಕರ್ ಸಿಟ್ಟಿಗೆ​​ ಮೂವರು ಅಧಿಕಾರಿಗಳ ತಲೆದಂಡ: ಖಾದರ್​​ ಮನವೊಲಿಕೆ ಬಳಿಕ ಸದನ ಪುನಾರಂಭ

ಬೆಂಗಳೂರು, ಮಾರ್ಚ್​​ 16: ವಿಧಾನ ಸಭೆ ಅಧಿವೇಶನದ ವೇಳೆ ಶಾಸಕರ ಪ್ರಶ್ನೆಗಳಿಗೆ ಸಚಿವರು ಸರಿಯಾಗಿ ಉತ್ತರ ನೀಡದ ಕಾರಣ ಗರಂ ಆಗಿ ಸದನ ಮುಂದೂಡಿದ್ದಲ್ಲದೆ ಪೀಠದಿಂದಲೇ ಎದ್ದು ಹೊರ ನಡೆದ ಯು.ಟಿ. ಖಾದರ್​​ ಅವರನ್ನು ಸಿಎಂ ಸಿದ್ದರಾಮಯ್ಯ ಅಂತಿಮವಾಗಿ ಮನವೊಲಿಸಿದ್ದಾರೆ. ಸ್ಪೀಕರ್ ಸಿಟ್ಟಿಗೆ ಕಂದಾಯ, ಅಲ್ಪಸಂಖ್ಯಾತ ಹಾಗೂ ಪಿಡಬ್ಲ್ಯುಡಿ ಇಲಾಖೆಗಳ ಒಟ್ಟು ಮೂವರು ಅಧಿಕಾರಿಗಳ ತಲೆದಂಡವಾಗಿದೆ.  ಜೊತೆಗೆ ಸಮರ್ಪಕ ಉತ್ತರ ಕೊಡದ 3-4 ಇಲಾಖೆ ಕಾರ್ಯದರ್ಶಿಗಳಿಗೆ ನೋಟಿಸ್ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಉತ್ತರ ಒದಗಿಸದ…

Read More

ನೈಸ್ ರಸ್ತೆಯಲ್ಲಿ ದಿನಕ್ಕೆ 10 ಕೋಟಿ ರೂ. ಟೋಲ್ ಸಂಗ್ರಹಿಸಿ ಮಜಾ ಮಾಡ್ತಾರೆ, ಸೌಕರ್ಯ ಕೊಡಲ್ಲ: ಶಾಸಕ ಸೋಮಶೇಖರ್ ಆಕ್ರೋಶ

ಬೆಂಗಳೂರು, ಮಾರ್ಚ್​ 16: ನೈಸ್ ರಸ್ತೆಯ (NICE Road) ನಿರ್ವಹಣೆ ಹಾಗೂ ಅದಕ್ಕೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಬಜೆಟ್ ಅಧಿವೇಶನದಲ್ಲಿ ಶಾಸಕ ಎಸ್​ಟಿ ಸೋಮಶೇಖರ್ (ST Somashekhar) ರಾಜ್ಯ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ಹೊಸೂರು ರಸ್ತೆಯಿಂದ ಮಾಗಡಿ ರಸ್ತೆ ವರೆಗೆ ನೈಸ್ ರಸ್ತೆಯನ್ನು ಸರ್ಕಾರ ತಕ್ಷಣವೇ ವಶಕ್ಕೆ ಪಡೆಯಬೇಕು ಎಂದು ಅವರು ಸದನದಲ್ಲಿ ಆಗ್ರಹಿಸಿದರು. ಈ ಹಿಂದೆ ಇದೇ ವಿಷಯದ ಕುರಿತು ಪ್ರಶ್ನೆ ಎತ್ತಿದಾಗ ತನಿಖೆಗೆ ಆದೇಶ ನೀಡಲಾಗಿದ್ದರೂ, ನೈಸ್ ರಸ್ತೆಯ ಸೇತುವೆಗಳ ಸ್ಥಿತಿಗೆ ಸಂಬಂಧಿಸಿದಂತೆ…

Read More

ಸೋತ ಬಳಿಕ ಬಾಂಗ್ಲಾದೇಶ್ ವಿರುದ್ಧ ದೂರು ದಾಖಲಿಸಿದ ಪಾಕಿಸ್ತಾನ್

ಬಾಂಗ್ಲಾದೇಶ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಪಾಕಿಸ್ತಾನ್ ತಂಡ 1-2 ಅಂತರದಿಂದ ಸೋತಿದೆ. ಈ ಹೀನಾಯ ಸೋಲಿನ ಬೆನ್ನಲ್ಲೇ ಪಾಕ್ ತಂಡವು ಮ್ಯಾಚ್ ರೆಫರಿ ನೀಯಮೂರ್ ರಶೀದ್ ಅವರಿಗೆ ಅಧಿಕೃತ ದೂರು ನೀಡಿದ್ದಾರೆ. ಈ ದೂರಿನಲ್ಲಿ ಬಾಂಗ್ಲಾದೇಶ್ ತಂಡವು ರಿವ್ಯೂ ತೆಗೆದುಕೊಳ್ಳಲು ಈ ಮಿತಿಗಿಂತ ಹೆಚ್ಚು ಸಮಯ ತೆಗೆದುಕೊಂಡಿದೆ ಎಂದು ಆರೋಪಿಸಲಾಗಿದೆ. ಮಾರ್ಚ್ 15, 2026 ರಂದು ಢಾಕಾದಲ್ಲಿ ನಡೆದ ಬಾಂಗ್ಲಾದೇಶ್ ವಿರುದ್ಧದ ಪಂದ್ಯದ ಕೊನೆಯ ಓವರ್‌ನಲ್ಲಿ ಪಾಕಿಸ್ತಾನಕ್ಕೆ ಗೆಲ್ಲಲು 2 ಎಸೆತಗಳಲ್ಲಿ 12 ರನ್‌ಗಳ…

Read More

ಯುದ್ಧ ಕುರಿತು ಸುಳ್ಳು ಸುದ್ದಿ ಹರಡಿದ ಆರೋಪ: ಯುಎಇಯಲ್ಲಿ 19 ಭಾರತೀಯರು ಸೇರಿ 35 ಮಂದಿ ಬಂಧನ

ದುಬೈ, ಮಾರ್ಚ್ 16: ಇರಾನ್-ಅಮೆರಿಕ ಯುದ್ಧಕ್ಕೆ (Iran war) ಸಂಬಂಧಿಸಿದ ಘಟನೆಗಳು ಮತ್ತು ಮಾಹಿತಿಯನ್ನು ತಪ್ಪಾಗಿ ಹಂಚಿಕೊಂಡ ಆರೋಪದ ಮೇಲೆ 35 ವ್ಯಕ್ತಿಗಳನ್ನು ಯುಎಇ ಆಡಳಿತ ಬಂಧಿಸುತ್ತಿದೆ. ಈ 35 ಜನರಲ್ಲಿ ಅರ್ಧಕ್ಕಿಂತ ಹೆಚ್ಚು ಮಂದಿ ಭಾರತೀಯರೇ ಇದ್ದಾರೆ. ವರದಿಗಳ ಪ್ರಕಾರ ಒಟ್ಟು 19 ಮಂದಿ ಭಾರತೀಯರನ್ನು ವಶಕ್ಕೆ ಪಡೆಯಲಾಗಿದೆ. ಈ ಎಲ್ಲಾ 35 ಮಂದಿಯನ್ನು ತ್ವರಿತ ವಿಚಾರಣೆಗೆ ಒಳಪಡಿಸಲಾಗಲಿದೆ. ಆರಂಭಿಕ ತನಿಖೆಯಲ್ಲಿ ಗೊತ್ತಾದ ಮಾಹಿತಿ ಪ್ರಕಾರ, ಈ 35 ಜನರು ಯುದ್ಧದ ವಿಚಾರಗಳನ್ನು ತಪ್ಪಾಗಿ ಬಿಂಬಿಸುವಂತೆ…

Read More

Viral: ಬಾಸ್‌ನಿಂದ ಕಾಲ್ ಬಂದದ್ದೇ ತಡ ಮೆಟ್ರೋದೊಳಗೆ ಲ್ಯಾಪ್ ಟಾಪ್ ತೆರೆದು ಕೆಲಸ ಮಾಡಲು ಕುಳಿತ ಯುವಕ

ದೆಹಲಿ, ಮಾರ್ಚ್ 16: ಕೆಲಸದ ಸ್ಥಳಗಳಲ್ಲಿ ಕೆಲ ಉದ್ಯೋಗಿಗಳು (employees) ಅನುಭವಿಸುವ ಒತ್ತಡ ಹೇಳಲಾಗದು. ಕೆಲಸ ಮಾಡದೇ ಇದ್ದರೆ ವಿಧಿಯಿಲ್ಲ ಎನ್ನುವ ಕಾರಣಕ್ಕೆ ಎಷ್ಟೇ ಕಷ್ಟವಾದ್ರೂ ಉದ್ಯೋಗ ಬಿಡಲ್ಲ. ಇದಕ್ಕೆ ಉದಾಹರಣೆಯಂತಿದ್ದಾನೆ ಈ ಯುವಕ. ಜನದಟ್ಟಣೆಯಿಂದ ತುಂಬಿದ ದೆಹಲಿ (Delhi) ಮೆಟ್ರೋದ ಬೋಗಿಯೊಳಗೆ ಯುವಕನೊಬ್ಬ ಲ್ಯಾಪ್ ಟಾಪ್ ತೆರೆದು ನೆಲದ ಮೇಲೆ ಕುಳಿತು ಕೆಲಸ ಮಾಡುತ್ತಿದ್ದಾನೆ. ಈ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಶಾಕ್ ಆಗಿದ್ದಾರೆ. @kuxh101 ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಪೋಸ್ಟ್‌ನಲ್ಲಿ…

Read More

ಮತ್ತೊಂದು ಮದುವೆಗೆ ತ್ರಿಷಾ ಹಾಜರಿ; ಕೇಡು ಬಯಸಿದ ನಟನ ಮಗಳ ಜೊತೆ ನಟಿ ಪೋಸ್

ನಟಿ ತ್ರಿಷಾ ಅವರು ಇತ್ತೀಚೆಗೆ ಸುದ್ದಿ ಆಗಿದ್ದರು. ಇದಕ್ಕೆ ಕಾರಣ ಅವರು ವಿವಾಹದಲ್ಲಿ ಭಾಗಿ ಆಗಿದ್ದು. ಚೆನ್ನೈನಲ್ಲಿ ನಡೆದ ವಿವಾಹದಲ್ಲಿ ದಳಪತಿ ವಿಜಯ್ ಜೊತೆ ತ್ರಿಷಾ ಹಾಜರಿ ಹಾಕಿದ್ದರು. ಇದು ಚರ್ಚೆ ಹುಟ್ಟುಹಾಕಿತ್ತು. ಈಗ ತ್ರಿಷಾ ಮತ್ತೊಂದು ವಿವಾಹದಲ್ಲಿ ಪಾಲ್ಗೊಂಡಿದ್ದಾರೆ. ಹಾಗಂತ ಈ ಮದುವೆಯಲ್ಲಿ ವಿಜಯ್ ಹಾಜರಿ ಹಾಕಿಲ್ಲ. ತಮ್ಮ ಆಪ್ತ ಬಳಗದವರ ಜೊತೆ ತ್ರಿಷಾ ಕಾಣಿಸಿಕೊಂಡಿದ್ದಾರೆ. ಸೆಲೆಬ್ರಿಟಿ ಸ್ಟೈಲಿಸ್ಟ್ ಎಕಾ ಲಖಾನಿ ಅವರು ನಿರ್ಮಾಪಕ ರವಿ ಭಾಗ್ಚಂದ್ಕಾ ಜೊತೆ ಮದುವೆ ಆದರು. ಮುಂಬೈನಲ್ಲಿ ಮಾರ್ಚ್ 14ರಂದು…

Read More

ಬೆಂಗಳೂರಿನಲ್ಲಿ ಟೆಕ್ ಉದ್ಯೋಗಗಳಿಗೆ ಮುಗಿಬೀಳುತ್ತಿದ್ದಾರೆ ಜನ! ರಿಕ್ರೂಟರ್ ಎಕ್ಸ್ ಪೋಸ್ಟ್ ವೈರಲ್

ಬೆಂಗಳೂರು, ಮಾರ್ಚ್​ 16: ಐಟಿ ಸಿಟಿಗೆ ಉದ್ಯೋಗ ಹುಡುಕಿ ಬರುವವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಆದರೆ ಕೆಲಸ ಅರಸಿ ಬರುವ ಆಕಾಂಕ್ಷಿಗಳ ಮಧ್ಯೆ ಸ್ಪರ್ಧೆ ತೀವ್ರವಾಗಿದ್ದು, ಈ ಬಗ್ಗೆ ಬೆಂಗಳೂರಿನ (Bengaluru) ರಿಕ್ರೂಟರ್ ಒಬ್ಬರು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. 15 ದಿನಗಳಲ್ಲಿ ಸಾವಿರಾರು ಮಂದಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ್ದರ ಕುರಿತು ಪೋಸ್ಟ್ ಮಾಡಿರುವ ಅವರು, ಒಂದು ಕೆಲಸ ದಕ್ಕಿಸಿಕೊಳ್ಳಲು ಎದುರಾಗುವ ಸ್ಪರ್ಧೆ ಇದುವೇ ಎಂದು ಬರೆದುಕೊಂಡಿದ್ದಾರೆ. 15 ದಿನಗಳಲ್ಲಿ 30 ಸಾವಿರಕ್ಕೂ ಹೆಚ್ಚು…

Read More

ಮ್ಯಾಚ್ ಫಿಕ್ಸಿಂಗ್ ಅನುಮಾನ ಹುಟ್ಟುಹಾಕಿದ ಪಾಕ್ ವೇಗಿ

ಪಾಕಿಸ್ತಾನದ ನ್ಯಾಷನಲ್ ಟಿ20 ಕಪ್‌ ಟೂರ್ನಿಯಲ್ಲಿ ಅಸಾದ್ ಅಖ್ತರ್ (Asad Akhtar) ಎಸೆದ ಎಸೆತವು ಇದೀಗ ಮ್ಯಾಚ್ ಫಿಕ್ಸಿಂಗ್ ಅನುಮಾನಕ್ಕೆ ಕಾರಣವಾಗಿದೆ. ಪೇಶಾವರದ ಅರ್ಬಾಬ್ ನಿಯಾಜ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಲಾಹೋರ್ ಹಾಗೂ ಕರಾಚಿ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಕರಾಚಿ ತಂಡದ ವೇಗಿ ಅಸಾದ್ ಅಖ್ತರ್ ಎಸೆತವು ಇದೀಗ ಅನುಮಾನಕ್ಕೆ ಕಾರಣವಾಗಿದೆ. ಏಕೆಂದರೆ ಈ ಅಸಾದ್  ಚೆಂಡೆಸೆದಾಗ ಅವರ ಕಾಲು ಕ್ರೀಸ್‌ಗಿಂತ ಸುಮಾರು ಒಂದು ಅಡಿಗಿಂತಲೂ ಹೆಚ್ಚು ಮುಂದೆ ಹೋಗಿತ್ತು. ಅಂದರೆ ಮೇಲ್ನೋಟಕ್ಕೆ…

Read More

ಸರ್ಕಾರದ ಧೋರಣೆಗೆ ಸ್ಪೀಕರ್​​ ಗರಂ: ಕಲಾಪ ಮುಂದೂಡಿ ಪೀಠದಿಂದ ಎದ್ದು ಹೊರನಡೆದ ಖಾದರ್​​

ಬೆಂಗಳೂರು, ಮಾರ್ಚ್​​ 16: ವಿಧಾನ ಸಭೆ ಅಧಿವೇಶನದ ವೇಳೆ ಶಾಸಕರ ಪ್ರಶ್ನೆಗಳಿಗೆ ಸಚಿವರು ಸರಿಯಾಗಿ ಉತ್ತರ ನೀಡದ ಕಾರಣ ಗರಂ ಆದ ಸ್ಪೀಕರ್​​ ಯು.ಟಿ. ಖಾದರ್​​ ಸಮಯ ಹೇಳದೆ ಕಲಾಪವನ್ನು ಮುಂದೂಡಿರುವ ಪ್ರಸಂಗ ನಡೆದಿದೆ. ಸಚಿವರ ನಡೆಗೆ ಬೇಸರ ವ್ಯಕ್ತಪಡಿಸಿದ ಸ್ಪೀಕರ್​​ ಉತ್ತರ ಕೊಡದಿರಲು ಕಾರಣ ಹೇಳುವವರೆಗೂ ಸದನ ನಡೆಸಲ್ಲ ಎಂದು ಕಲಾಪ ಮೊಟಕು ಮಾಡಿ ಪೀಠದಿಂದ ತೆರಳಿದ್ದಾರೆ. ಲಿಖಿತ ರೂಪದ 230 ಪ್ರಶ್ನೆಗಳ ಪೈಕಿ 84 ಪ್ರಶ್ನೆಗಳಿಗೆ ಉತ್ತರ ಮಂಡನೆ ವೇಳೆ ಈ ಪ್ರಸಂಗ ನಡೆದಿದೆ….

Read More

ಹಾರ್ಮುಜ್​ನಿಂದ ಎರಡು ಭಾರತೀಯ ಗ್ಯಾಸ್ ಟ್ಯಾಂಕರ್ ಸಾಗಲು ಅನುಮತಿ; ಇದು ಮಾತುಕತೆಯ ಫಲ ಎಂದ ಸಚಿವ ಜೈಶಂಕರ್

ನವದೆಹಲಿ, ಮಾರ್ಚ್ 16: ಹಾರ್ಮುಜ್ ಜಲಸಂಧಿಯನ್ನು ಬ್ಲಾಕ್ ಮಾಡಿದ್ದ ಇರಾನ್ ಮೊನ್ನೆಯಷ್ಟೇ ಎರಡು ಭಾರತೀಯ ಗ್ಯಾಸ್ ಟ್ಯಾಂಕರ್​ಗಳು (Indian flagged gas tankers) ಸಾಗಲು ಅನುಮತಿ ಕೊಟ್ಟಿದೆ. ಈ ವಿಚಾರದ ಬಗ್ಗೆ ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್ ಜೈಶಂಕರ್ ಪ್ರತಿಕ್ರಿಯಿಸಿದ್ದಾರೆ. ಭಾರತೀಯ ಹಡಗುಗಳಿಗೆ ಇರಾನ್ ಅನುಮತಿಸಿರುವುದರ ಹಿಂದೆ ಯಾವುದೇ ಒಪ್ಪಂದ ಇಲ್ಲ. ಇದು ಎರಡು ದೇಶಗಳ ನಡುವಿನ ಸಂಬಂಧದ ಫಲ, ಮಾತುಕತೆಯ ಫಲ ಎಂದು ಜೈಶಂಕರ್ ಸ್ಪಷ್ಟಪಡಿಸಿದ್ದಾರೆ. ಇರಾನ್ ಜೊತೆ ಭಾರತ ಒಪ್ಪಂದ ಮಾಡಿಕೊಂಡಿದೆ….

Read More