ಕಾಂಗ್ರೆಸ್ ಸರ್ಕಾರದ ಕುಮ್ಮಕ್ಕಿನಿಂದ ಕರ್ನಾಟಕದಲ್ಲಿ ಅಕ್ರಮವಾಗಿ ಎಸ್ಐಆರ್: ಪ್ರಲ್ಹಾದ್ ಜೋಶಿ ಆರೋಪ – Kannada News | Karnataka SIR Scam: Union Minister Pralhad Joshi Accuses Congress Govt of Backing Illegal Voter List Revision
ಬೆಂಗಳೂರು, ಜುಲೈ 6: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ನಿಯಮ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟದ ನಾಯಕರು ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಬೆಂಗಳೂರಿನಲ್ಲಿ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ ದೂರು ಸಲ್ಲಿಕೆಯಾಗಿದ್ದು, ಕೇಂದ್ರ ಸಚಿವರಾದ ಹೆಚ್ಡಿ ಕುಮಾರಸ್ವಾಮಿ, ಪ್ರಲ್ಹಾದ್ ಜೋಶಿ, ವಿಪಕ್ಷ ನಾಯಕರಾದ ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ, ಸಂಸದ ಗೋವಿಂದ ಕಾರಜೋಳ, ಶಾಸಕ ಡಾಕ್ಟರ್ ಅಶ್ವತ್ಥ್ ನಾರಾಯಣ ಮತ್ತು ವಿಧಾನ ಪರಿಷತ್…