ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್ನ ವಿಮಾನ ನಿಲ್ದಾಣ ಟರ್ಮಿನಲ್ ಉದ್ಘಾಟನೆ – Kannada News | PM Modi inaugurates Indias First Nature Themed Airport Terminal In Guwahati
ಗುವಾಹಟಿ, ಡಿಸೆಂಬರ್ 20: ಪ್ರಧಾನಿ ನರೇಂದ್ರ ಮೋದಿ (PM Modi in Guwahati) ಇಂದು ಅಸ್ಸಾಂನ ಗುವಾಹಟಿಯಲ್ಲಿ ಲೋಕಪ್ರಿಯ ಗೋಪಿನಾಥ್ ಬಾರ್ಡೋಲೋಯ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಿದರು. ಇದು ಅಸ್ಸಾಂನ ಮೂಲಸೌಕರ್ಯ ಬೆಳವಣಿಗೆಯಲ್ಲಿ ಪ್ರಮುಖ ಮೈಲಿಗಲ್ಲಾಗಿದೆ. ಈ ಟರ್ಮಿನಲ್ ಉದ್ಘಾಟನೆಯ ನಂತರ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ಇಂದು ಅಭಿವೃದ್ಧಿಯ ಆಚರಣೆಯ ದಿನ. ಇದು ಅಸ್ಸಾಂ ಮಾತ್ರವಲ್ಲದೆ ಇಡೀ ಈಶಾನ್ಯದ ಅಭಿವೃದ್ಧಿಯ ಆಚರಣೆಯಾಗಿದೆ. ಅಸ್ಸಾಂ ಯಾವ ರೀತಿ ಅಭಿವೃದ್ಧಿಯ ಹಬ್ಬವನ್ನು ಆಚರಿಸುತ್ತಿದೆ ಎಂದು…