ಬಿಕ್ಲು ಶಿವ ಕೊಲೆ ಕೇಸ್​​: ಬೈರತಿ ಬಸವರಾಜ್​​ಗಾಗಿ​ ತಲಾಶ್, ಪುಣೆಯಲ್ಲಿ ತಲೆಮರೆಸಿಕೊಂಡ್ರಾ ಬಿಜೆಪಿ ಶಾಸಕ? – Kannada News | Biklu Shiva Murder Case: CID Searches for Byrati Basavaraj; Is the BJP MLA Hiding in Pune

ಬೆಂಗಳೂರು, ಡಿಸೆಂಬರ್​ 20: ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ  (Biklu Shiva) ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ, ಬಿಜೆಪಿ ಶಾಸಕ ಬೈರತಿ ಬಸವರಾಜ್​​ಗೆ (Byrati Basavaraj) ಬಂಧನ ಭೀತಿ ಎದುರಾಗಿದೆ. ಶುಕ್ರವಾರ ಹೈಕೋರ್ಟ್​​ ತನಿಖೆಗೆ ನೀಡಿದ್ದ ತಡೆ ತೆರವು ಮತ್ತು ನಿರೀಕ್ಷಣಾ ಜಾಮೀನು ಅರ್ಜಿ ವಜಾ ಮಾಡಿದೆ. ಇದರ ಬೆನ್ನಲ್ಲೇ ಬೈರತಿ ಬಸವರಾಜ್ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಸಂಪರ್ಕಕ್ಕೆ ಸಿಗುತ್ತಿಲ್ಲ. ಬಂಧನ ಭೀತಿ ಹಿನ್ನಲ್ಲೆ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ. ಸದ್ಯ ಪೊಲೀಸರು ತಲಾಶ್​​ ನಡೆಸಿದ್ದಾರೆ.

2025 ಜುಲೈ 15ರಂದು ರಾತ್ರಿ ಬೆಂಗಳೂರಿನ ಭಾರತಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ಹಲಸೂರು ಲೇಕ್ ಬಳಿ ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವನ ಬರ್ಬರ ಕೊಲೆ ನಡೆದಿತ್ತು. ಕೊಲೆಯಾದ ಬಿಕ್ಲು ಶಿವ ತಾಯಿ, ಮಾಜಿ ಸಚಿವ ಬೈರತಿ ಬಸವರಾಜ್ ಸೇರಿ ಹಲವರ ವಿರುದ್ಧ ದೂರು ನೀಡಿದ್ದರು. ಈ ಪ್ರಕರಣದಲ್ಲಿ ಬೈರತಿ ಬಸವರಾಜ್ ಎ5 ಆರೋಪಿಯಾಗಿ ಎರಡು ಬಾರಿ ವಿಚಾರಣೆ ಎದುರಿಸಿದ್ದಾರೆ. ವಿಚಾರಣೆ ವೇಳೆ ಕೊಲೆಗೂ ನನಗೂ ಯಾವುದೇ ಸಂಬಂಧ ಇಲ್ಲ, ಕೊಲೆ ಆರೋಪಿಗಳು ಯಾರು ನನಗೆ ಪರಿಚಯವೇ ಇಲ್ಲ ಅಂತ ಹೇಳಿದ್ದರು.

ಇದನ್ನೂ ಓದಿ: ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಭೈರತಿ ಬಸವರಾಜುಗೆ ಸಂಕಷ್ಟ, ಬಂಧನ ಭೀತಿ

ಇದರ ಬೆನ್ನಲ್ಲೇ ಬಲವಂತದ ಕ್ರಮಕೈಗೊಳ್ಳದಂತೆ ಪೊಲೀಸರಿಗೆ ಕೋರ್ಟ್​​​​​ ಅಂದು ಸೂಚನೆ ಕೊಟ್ಟಿತ್ತು. ಆದರೆ ಶುಕ್ರವಾರ ಹೈಕೋರ್ಟ್​ನಲ್ಲಿ ಬಲವಂತದ ಕ್ರಮಕ್ಕೆ ನೀಡಿದ್ದ ತೆರವು ಮಾಡಿದ್ದಲ್ಲದೇ, ಬೈರತಿ ಬಸವರಾಜ್ ಪರ ವಕೀಲರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿ, ಡಿ.22ಕ್ಕೆ ವಿಚಾರಣೆ ಮುಂದೂಡಿದೆ. ಇತ್ತ ಅಲರ್ಟ್ ಆದ ಸಿಐಡಿ ಅಧಿಕಾರಿಗಳು ಬೈರತಿ ಬಸವರಾಜ್​​ಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.

ಬೈರತಿ ಬಸವರಾಜ್ ಬಂಧನಕ್ಕಾಗಿ ಮೂರು ವಿಶೇಷ ತಂಡಗಳಿಂದ ತಲಾಶ್: ಪುಣೆಯಲ್ಲಿ ಓಡಾಟ ಪತ್ತೆ

ಯಾವಾಗ ಹೈಕೋರ್ಟ್ ನಿರೀಕ್ಷಣಾ ಜಾಮೀನು ವಜಾ ಆದ ವಿಚಾರ ಗೊತ್ತಾಗುತ್ತಿದ್ದಂತೆ ಬೈರತಿ ಬಸವರಾಜ್​ ತಮ್ಮ ಮೊಬೈಲ್ ಸ್ವಿಚ್ ಆಫ್​ ಮಾಡಿಕೊಂಡು ನಾಪತ್ತೆಯಾಗಿದ್ದಾರೆ. ಬೆಳಗಾವಿಯ ಚಳಿಗಾಲದ ಅಧಿವೇಶನಕ್ಕೆ ಹೋಗಿದ್ದ ಬೈರತಿ ಬಸವರಾಜ್, ಅಲ್ಲಿಂದಲೇ ನಾಪತ್ತೆಯಾಗಿದ್ದಾರೆ. ಸಿಐಡಿ ಅಧಿಕಾರಿಗಳ ತಂಡ ಬೈರತಿ ಬಸವರಾಜ್ ಉಳಿದುಕೊಂಡಿದ್ದ ಜಾಗಕ್ಕೆ ಹೋಗಿ ಅಲ್ಲಿನ ಸಿಸಿಟಿವಿ, ಯಾವ ರಸ್ತೆಯ ಮೂಲಕ ಯಾವ ಕಡೆಗೆ ಹೋಗಿದ್ದಾರೆ ಅನ್ನೋದನ್ನು ಸೇರಿದಂತೆ ಬೇರೆ ಬೇರೆ ಆಯಾಮದಲ್ಲಿ ಮತ್ತು ರಾಜ್ಯಕ್ಕೆ ಸಂಪರ್ಕಿಸುವ ಟೋಲ್‌ಗಳ ಸಿಸಿಟಿಯನ್ನು ಪರಿಶೀಲನೆ ಮಾಡಿದ್ದಾರೆ.

ಈ ವೇಳೆ ಬೈರತಿ ಬಸವರಾಜ್ ಗೋವಾ ಅಥವಾ ಮಹಾರಾಷ್ಟ್ರಕ್ಕೆ ಹೋಗಿರುವ ಮಾಹಿತಿ ಲಭ್ಯವಾಗಿತ್ತು. ತನಿಖೆ ಮುಂದುವರೆಸಿದ ಅಧಿಕಾರಿಗಳಿಗೆ ಬೈರತಿ ಬಸವರಾಜ್ ಕೊನೆಯದಾಗಿ ಮಹಾರಾಷ್ಟ್ರದ ಪುಣೆಯಲ್ಲಿ ಲೈವ್ ಲೊಕೇಶನ್ ಪತ್ತೆಯಾಗಿದ್ದು, ಆನಂತರ ಮೊಬೈಲ್​ ಸ್ವಿಚ್ ಆಫ್​​ ಮಾಡಿಕೊಂಡು ನಾಪತ್ತೆಯಾಗಿದ್ದಾರೆ ಎನ್ನುವುದು ಗೊತ್ತಾಗಿದೆ.

ಇದನ್ನೂ ಓದಿ: ಬಿಕ್ಲು ಶಿವ ಕೊಲೆ ಪ್ರಕರಣ: ಬಿಜೆಪಿ ಶಾಸಕ ಭೈರತಿ ಬಸವರಾಜ್​ಗೆ ಮಧ್ಯಂತರ ರಿಲೀಫ್

ಬಿಕ್ಲು ಶಿವಪ್ರಕಾಶ್ ಕೊಲೆ ಆರೋಪಿಗಳು ನನಗೆ ಪರಿಚಯನೇ ಇಲ್ಲ ಅಂದಿದ್ದ ಬೈರತಿ ಬಸವರಾಜ್​​ಗೆ ಈಗ ಸಂಕಷ್ಟ ಎದುರಾಗಿದೆ. ಸಿಐಡಿ ಅಧಿಕಾರಿಗಳ ತನಿಖೆಯಲ್ಲಿ ಆರೋಪಿಗಳ ಜೊತೆಗೆ ಬೈರತಿ ಬಸವರಾಜ್ ಸಂಪರ್ಕದಲ್ಲಿ ಇರುವುದು ಪತ್ತೆಯಾಗಿದ್ದು, ಕೆಲ ಮಹತ್ಚದ ಸಾಕ್ಷ್ಯಧಾರ ಲಭ್ಯವಾಗಿದೆ ಎನ್ನಲಾಗುತ್ತಿದೆ. ಬೈರತಿ ಬಸವರಾಜ್ ಪೊಲೀಸರಿಗೆ ಸುಳ್ಳು ಮಾಹಿತಿ ನೀಡಿರುವುದು ಗೊತ್ತಾಗಿದೆ. ಹಾಗಾಗಿ ಯಾವುದೇ ಕ್ಷಣದಲ್ಲಿ ಮಾಜಿ ಸಚಿವ ಬೈರತಿ ಬಸವರಾಜ್ ಬಂಧನವಾಗುವ ಸಾಧ್ಯತೆ ಇದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

World Meditation Day: ವಿಶ್ವಸಂಸ್ಥೆಯಲ್ಲಿ ವಿಶ್ವ ಧ್ಯಾನ ದಿನದ ಪ್ರಯುಕ್ತ ಜಗತ್ತಿಗೆ ಧ್ಯಾನದ ಮಹತ್ವ ಸಾರಿದ ರವಿಶಂಕರ್ ಗುರೂಜಿ – Kannada News | United Nations Observes Second World Meditation Day Gurudev Sri Sri Ravi Shankar Delivers Keynote Address

ನವದೆಹಲಿ, ಡಿಸೆಂಬರ್ 20: ವಿಶ್ವಸಂಸ್ಥೆಯ ಹಲವು ಸದಸ್ಯ ರಾಷ್ಟ್ರಗಳು ಎರಡನೇ ವಿಶ್ವ ಧ್ಯಾನ ದಿನವನ್ನು ಆಚರಿಸಲು ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಒಟ್ಟುಗೂಡಿವೆ. ಜಾಗತಿಕ ಶಾಂತಿ, ಮಾನಸಿಕ ಆರೋಗ್ಯ ಮತ್ತು ನಾಯಕತ್ವಕ್ಕೆ ಧ್ಯಾನದ ಅಗತ್ಯವನ್ನು ಅವು ಪುನರುಚ್ಚರಿಸಿವೆ. ಜಾಗತಿಕ ಶಾಂತಿ ಮತ್ತು ಸಾಮರಸ್ಯಕ್ಕಾಗಿ ಧ್ಯಾನ ಎಂಬ ಶೀರ್ಷಿಕೆಯ ಈ ಕಾರ್ಯಕ್ರಮದಲ್ಲಿ ಗುರುದೇವ ಶ್ರೀ ಶ್ರೀ ರವಿಶಂಕರ್ ಅವರ ಪ್ರಾಸ್ತಾವಿಕ ಭಾಷಣ ಮತ್ತು ಧ್ಯಾನದ ಮಾರ್ಗದರ್ಶನವಿತ್ತು. ಇದು ಭಾರತದ ನಾಗರಿಕತೆಯ ಪರಂಪರೆಯಲ್ಲಿ ಬೇರೂರಿರುವ ಧ್ಯಾನವೆಂಬ ಅಭ್ಯಾಸವನ್ನು ವಿಶ್ವದ ಪ್ರಮುಖ ರಾಜತಾಂತ್ರಿಕ ವೇದಿಕೆಯ ಕೇಂದ್ರಕ್ಕೆ ತಂದಿತು.

ಭಾರತ, ಶ್ರೀಲಂಕಾ, ಅಂಡೋರಾ, ಮೆಕ್ಸಿಕೊ, ನೇಪಾಳ ಸೇರಿದಂತೆ ಹಲವು ಸದಸ್ಯ ರಾಷ್ಟ್ರಗಳ ಶಾಶ್ವತ ಪ್ರತಿನಿಧಿಗಳು ಹಾಗೂ ವಿಶ್ವಸಂಸ್ಥೆಯ ವಿವಿಧ ಸಂಸ್ಥೆಗಳು ಒಟ್ಟಾಗಿ ಸೇರಿ ಪ್ರಸ್ತುತ ಕಾಲದ ಜಾಗತಿಕ ಸಾಮಾಜಿಕ, ರಾಜಕೀಯ ಮತ್ತು ಮಾನಸಿಕ ಆರೋಗ್ಯಗಳ ಸವಾಲುಗಳಿಗೆ ಪರಿಹಾರಕ್ಕೆ ಪ್ರಾಚೀನ ಧ್ಯಾನ ಪದ್ಧತಿಯು ಹೇಗೆ ಸಹಾಯಕವೆಂದು ಚರ್ಚಿಸಿದರು.

ಅಮೆರಿಕದ ನ್ಯೂಯಾರ್ಕ್​ನಲ್ಲಿನ ವಿಶ್ವಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ಎರಡನೇ ವಿಶ್ವ ಧ್ಯಾನ ದಿನದ ಅಂಗವಾಗಿ ಆಯೋಜಿಸಲಾದ ‘ಜಾಗತಿಕ ಶಾಂತಿ ಮತ್ತು ಸೌಹಾರ್ದತೆಗಾಗಿ ಧ್ಯಾನ’ ಕಾರ್ಯಕ್ರಮದಲ್ಲಿ ವಿಶ್ವಸಂಸ್ಥೆಯ ಸದಸ್ಯ ರಾಷ್ಟ್ರಗಳು ಮತ್ತು ಅದರ ಅಂಗ ಸಂಸ್ಥೆಗಳು ಭಾಗವಹಿಸಿದ್ದವು. ಈ ವೇಳೆ ಜಾಗತಿಕ ಶಾಂತಿ, ಮಾನಸಿಕ ಸುಸ್ಥಿತಿ ಮತ್ತು ನಾಯಕತ್ವದಂತಹ ವಿಷಯಗಳಲ್ಲಿ ಧ್ಯಾನದ ಮಹತ್ತರವಾದ ಪಾತ್ರವನ್ನು ಗುರುತಿಸಲಾಯಿತು. ಈ ಸಂದರ್ಭದಲ್ಲಿ ಆರ್ಟ್​ ಆಫ್ ಲಿವಿಂಗ್​ನ ಸಂಸ್ಥಾಪಕ ಹಾಗೂ ಜಾಗತಿಕ ಆಧ್ಯಾತ್ಮಿಕ ಗುರು ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರು ಪ್ರಧಾನ ಭಾಷಣ ಮಾಡಿದ್ದಾರೆ. ಧ್ಯಾನದ ಮಾರ್ಗದರ್ಶನವನ್ನು ನಡೆಸಿಕೊಡುವ ಮೂಲಕ, ಭಾರತದ ನಾಗರಿಕತೆಯ ಪರಂಪರೆಯಲ್ಲಿ ಬೇರೂರಿರುವ ಧ್ಯಾನ ಪದ್ಧತಿಯನ್ನು ವಿಶ್ವದ ಅತ್ಯಂತ ಮಹತ್ವದ ರಾಜತಾಂತ್ರಿಕ ವೇದಿಕೆಯ ಮೂಲಕ ಮುನ್ನೆಲೆಗೆ ತಂದಿದ್ದಾರೆ.

ಇದನ್ನೂ ಓದಿ: ಧ್ಯಾನ ಫ್ಯಾಷನ್ ಅಲ್ಲ, ಇಂದಿನ ಸಮಾಜದ ಅಗತ್ಯ; ಜಿನೀವಾದಲ್ಲಿ ರವಿಶಂಕರ್ ಗುರೂಜಿ ಅಭಿಮತ

ತಮ್ಮ ಭಾಷಣದ ಆರಂಭದಲ್ಲೇ ಗುರುದೇವ ರವಿಶಂಕರ್ ಅವರು ಒಂದು ಸರಳವಾದ ಮತ್ತು ಅರ್ಥಪೂರ್ಣವಾದ ಕಥೆಯನ್ನು ಹಂಚಿಕೊಂಡರು. ‘ಒಮ್ಮೆ ತತ್ವಜ್ಞಾನಿಗಳ ಗುಂಪೊಂದು ಧ್ಯಾನದ ಸಾರವನ್ನು ವಿವರಿಸಲು ಧ್ಯಾನಗುರುವೊಬ್ಬರನ್ನು ಕೇಳಿತು. ಅದಕ್ಕೆ ಗುರುಗಳು, ನೀವು ಅತ್ಯಂತ ಮೌಲ್ಯವಾದ ವಸ್ತುವನ್ನು ಒಂದು ಪಾತ್ರೆಯಲ್ಲಿ ತಂದುಕೊಡಿ ಎಂದರು. ಅವರು ನೀರು, ಮಣ್ಣು, ಎಣ್ಣೆ, ಜೇನು ಮತ್ತು ಹಾಲು ತುಂಬಿದ ಪಾತ್ರೆಗಳೊಂದಿಗೆ ಮರಳಿದರು. ಅವುಗಳನ್ನೆಲ್ಲ ಒಂದೇ ಪಾತ್ರೆಯಲ್ಲಿ ಸುರಿದಾಗ, ಅವರ ಪಾತ್ರೆಗಳು ಖಾಲಿಯಾದವು. ಇದೇ ಧ್ಯಾನ’ ಎಂದು ಗುರುದೇವ ರವಿಶಂಕರ್ ಹೇಳಿದ್ದಾರೆ.

ಈ ಕಥೆಯನ್ನು ವಿವರಿಸಿದ ಗುರುದೇವ ರವಿಶಂಕರ್, ತತ್ವಶಾಸ್ತ್ರಗಳು ಮನಸ್ಸೆಂಬ ಪಾತ್ರೆಯನ್ನು ತುಂಬುತ್ತವೆ. ಆದರೆ ಧ್ಯಾನವು ಚಿಂತನೆಯಾಚೆ ಕರೆದೊಯ್ದು ಅಂತರಂಗದಲ್ಲಿ ಸ್ಪಷ್ಟತೆ ಮತ್ತು ಶಾಂತಿ – ನೆಮ್ಮದಿಯನ್ನು ಅನುಭವಿಸಲು ಅವಕಾಶ ಮಾಡಿಕೊಡುತ್ತದೆ. ಮಾನಸಿಕ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿರುವ ಇಂದಿನ ಜಗತ್ತಿನಲ್ಲಿ, ಧ್ಯಾನವನ್ನು ಅತ್ಯಂತ ತುರ್ತಾಗಿ ಅಭ್ಯಾಸ ಮಾಡಬೇಕಾಗಿದೆ ಎಂದು ಅವರು ಉಲ್ಲೇಖಿಸಿದರು. ವಿಶ್ವದಾದ್ಯಂತ ಸುಮಾರು 500ಕ್ಕೂ ಹೆಚ್ಚು ವಿಶ್ವವಿದ್ಯಾಲಯಗಳು ಈಗಾಗಲೇ ಶಿಕ್ಷಣ ಮತ್ತು ಆರೋಗ್ಯ ವ್ಯವಸ್ಥೆಗಳಲ್ಲಿ ಧ್ಯಾನವನ್ನು ಅಳವಡಿಸಿಕೊಳ್ಳುತ್ತಿರುವುದನ್ನೂ ಅವರು ಪ್ರಸ್ತಾಪಿಸಿದರು.

ಇದನ್ನೂ ಓದಿ: World Meditation Day: ಡಿ. 21 ವಿಶ್ವ ಧ್ಯಾನ ದಿನ; ಅಶಾಂತ ಜಗತ್ತಿಗೆ ಧ್ಯಾನವೇ ಶಾಂತಿಯ ದಾರಿ: ರವಿಶಂಕರ್ ಗುರೂಜಿ

ಉಕ್ರೇನ್‌ನಲ್ಲಿನ 8,000ಕ್ಕೂ ಹೆಚ್ಚು ಸೈನಿಕರು ಆಘಾತ ಮತ್ತು ಒತ್ತಡದಿಂದ ಹೊರಬರಲು ಧ್ಯಾನವನ್ನು ಕಲಿತಿದ್ದಾರೆ. ಅದು ಅವರ ಮನೋಬಲವನ್ನು ಮರುಸ್ಥಾಪಿಸಿತು ಎಂದು ಹೇಳಿದ ರವಿಶಂಕರ್ ಗುರೂಜಿ, ಧ್ಯಾನವು ಕೇವಲ ಶಾಲಾ ತರಗತಿಗಳಲ್ಲಿ ಚಿಕಿತ್ಸೆಗಳಲ್ಲಿ ಮಾತ್ರವಲ್ಲದೇ, ಯುದ್ಧಭೂಮಿಯಲ್ಲೂ ಇದರ ಪಾತ್ರ ಮಹತ್ವದ್ದಾಗಿದೆ ಎಂದು ಒತ್ತಿ ಹೇಳಿದರು.

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು ಡಿಸೆಂಬರ್ 21ರಂದು ವಿಶ್ವ ಧ್ಯಾನ ದಿನವೆಂದು ಅಧಿಕೃತವಾಗಿ ಘೋಷಿಸಿ, ಧ್ಯಾನವನ್ನು ಭಾವನಾತ್ಮಕ ಸ್ಥೈರ್ಯ, ಮಾನಸಿಕ ಆರೋಗ್ಯ ಮತ್ತು ಶಾಂತಿ ಸಾಮರಸ್ಯಕ್ಕೆ ನೆರವಾಗುವ ವಿಶ್ವವ್ಯಾಪಿ ಅನುಸರಿಸಬಹುದಾದ ಪದ್ಧತಿಯಾಗಿ ಗುರುತಿಸಿತ್ತು. ಭಾರತಕ್ಕೆ ದೀರ್ಘಕಾಲದಿಂದ ಪರಿಚಿತವಾಗಿರುವ ಈ ಧ್ಯಾನದ ಪರಂಪರೆ, ಇಂದಿನ ಜಾಗತಿಕ ಸವಾಲುಗಳನ್ನು ಎದುರಿಸಲು ಉಪಯುಕ್ತ ಸಾಧನವಾಗಿ ಜಾಗತಿಕ ಸ್ವೀಕಾರ ಪಡೆಯುತ್ತಿರುವುದನ್ನು ಈ ಘೋಷಣೆ ಪ್ರತಿಬಿಂಬಿಸುತ್ತದೆ.

ಪ್ರತಿನಿಧಿಗಳನ್ನು ಸ್ವಾಗತಿಸಿದ ವಿಶ್ವಸಂಸ್ಥೆಯ ಭಾರತದ ಶಾಶ್ವತ ಪ್ರತಿನಿಧಿ ರಾಯಭಾರಿ ಪಿ. ಹರೀಶ್, ಆರ್ಥಿಕ ಅನಿಶ್ಚಿತತೆ, ರಾಜಕೀಯ ಅಸ್ಥಿರತೆ ಮತ್ತು ನಿರಂತರ ಸಂಘರ್ಷಗಳಿಂದ ಒತ್ತಡದಲ್ಲಿರುವ ಜಗತ್ತಿನ ಸ್ಥಿತಿಗತಿಗಳನ್ನು ವಿವರಿಸಿದರು. ಸ್ಪಷ್ಟತೆ, ಆತ್ಮಜ್ಞಾನ ಮತ್ತು ಸಮತೋಲನದ ನಿರ್ಧಾರ ಸಾಮರ್ಥ್ಯವನ್ನು ಬೆಳೆಸುವ ಧ್ಯಾನವನ್ನು ಅವರು ಬಣ್ಣಿಸಿದರು. ರಾಜತಾಂತ್ರಿಕತೆ ಮತ್ತು ನಾಯಕತ್ವದಲ್ಲಿಯೂ ಇದರ ಮಹತ್ವವನ್ನು ಸೂಚಿಸಿದರು.

ವಿವಿಧ ಪ್ರದೇಶಗಳ ಪ್ರತಿನಿಧಿಗಳು ಇದೇ ಅಭಿಪ್ರಾಯವನ್ನು ಹಂಚಿಕೊಂಡರು. ಅಂಡೋರಾದ ರಾಯಭಾರಿ ಜೋನ್ ಫೋರ್ನರ್ ರೋವಿರಾ, ತಮ್ಮ ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಧ್ಯಾನವನ್ನು ಅಳವಡಿಸಿಕೊಂಡ ನಂತರ ವಿದ್ಯಾರ್ಥಿಗಳ ಏಕಾಗ್ರತೆ ಮತ್ತು ಭಾವನಾತ್ಮಕ ಸಾಮರಸ್ಯದಲ್ಲಿ ಕಂಡ ಸುಧಾರಣೆಯನ್ನು ಹಂಚಿಕೊಂಡರು. ಮೆಕ್ಸಿಕೋದ ಉಪ ಶಾಶ್ವತ ಪ್ರತಿನಿಧಿ ರಾಯಭಾರಿ ಅಲಿಸಿಯಾ ಗುಡಲುಪೆ ಬುವೆನೊಸ್ಟ್ರೋ ಮಾಸಿಯು, ಜಾಗತಿಕ ಸೌಹಾರ್ದತೆಗೆ ಆಂತರಿಕ ಶಾಂತಿಯೇ ಅಡಿಪಾಯ ಎಂದು ಹೇಳಿದರು. ನೇಪಾಳದ ರಾಯಭಾರಿ ಲೋಕ್ ಬಹಾದುರ್ ಥಾಪಾ, ಹಿಮಾಲಯ ಪ್ರದೇಶದ ನಾಗರಿಕತೆಯಲ್ಲಿ ಧ್ಯಾನದ ಆಳವಾದ ಬೇರುಗಳನ್ನು ನೆನಪಿಸಿ, ಹವಾಮಾನ ಬದಲಾವಣೆಗಳಿಂದ ಹಿಡಿದು ತಪ್ಪು ತಿಳುವಳಿಕೆಯಂತಹ ಜಾಗತಿಕ ಸಂಕಷ್ಟಗಳನ್ನು ಎದುರಿಸಲು ಧ್ಯಾನ ಸಹಾಯಕ ಎಂದರು.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಗಣ್ಯರಲ್ಲಿ ಮಹರ್ಷಿ ಅಂತಾರಾಷ್ಟ್ರೀಯ ವಿಶ್ವವಿದ್ಯಾಲಯದ ಡಾ. ರಾಬರ್ಟ್ ಶ್ನೈಡರ್, ಯೋಗಮಾತಾ ಫೌಂಡೇಶನ್‌ನ ಯೋಗಮಾತಾ ಕೈಕೊ ಐಕಾವಾ, ಬ್ರಹ್ಮಕುಮಾರಿ ವಿಶ್ವ ಆಧ್ಯಾತ್ಮಿಕ ವಿಶ್ವವಿದ್ಯಾಲಯದ ಆಡಳಿತ ಮತ್ತು ಆಧ್ಯಾತ್ಮಿಕ ಮುಖ್ಯಸ್ಥೆ ಬಿ.ಕೆ. ಮೋಹಿನಿ ಪಂಜಾಬಿ, ಜೀವನ ವಿಜ್ಞಾನ ಫೌಂಡೇಶನ್ ನೇಪಾಳದ ಎಲ್.ಪಿ. ಭಾನು ಶರ್ಮಾ, ರಟ್ಗರ್ಸ್ ವಿಶ್ವವಿದ್ಯಾಲಯದ ಡಾ. ಲಸಂತ ಚಂದನ ಗುಣತಿಲಕೆ ಹಾಗೂ ವಿಜ್ಞಾನಿ, ‘ಶಾಂತಿಗೆ ವಿಜ್ಞಾನಿಗಳ ಜಾಗತಿಕ ಒಕ್ಕೂಟ’ದ ಅಧ್ಯಕ್ಷ ಮತ್ತು ಟ್ರಾನ್ಸೆಂಡೆಂಟಲ್ ಮೆಡಿಟೇಶನ್ ಚಳವಳಿಯ ನಾಯಕ ಡಾ. ಜಾನ್ ಹ್ಯಾಗೆಲಿನ್ ಸೇರಿದ್ದರು.

ಈ ಕಾರ್ಯಕ್ರಮದ ಅಂತ್ಯದಲ್ಲಿ ಗುರುದೇವ ರವಿಶಂಕರ್ ಅವರು, ರಾಯಭಾರಿಗಳು ಮತ್ತು ಪ್ರತಿನಿಧಿಗಳಿಗೆ 20 ನಿಮಿಷಗಳ ಕಾಲ ಧ್ಯಾನವನ್ನು ಅಭ್ಯಾಸ ಮಾಡಿಸಿದರು. ಇದರಿಂದ ವಿಶ್ವಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ಅಪರೂಪದ ನಿಶ್ಶಬ್ದ ಕ್ಷಣವೊಂದು ಮೂಡಿತು. ಪ್ರಾಚೀನ ಪರಂಪರೆಯಿಂದ ಹುಟ್ಟಿದ ಈ ಪದ್ಧತಿಯು ಇಂದಿಗೂ ಜಾಗತಿಕ ವೇದಿಕೆಯಲ್ಲಿ ಹೊಸ ಅರ್ಥವನ್ನು ಪಡೆದುಕೊಳ್ಳುತ್ತಿರುವುದಕ್ಕೆ ಈ ಮೌನದ ಕ್ಷಣ ಸಾಕ್ಷಿಯಾಯಿತು.

ಡಿಸೆಂಬರ್ 21ರಂದು ವಿಶ್ವ ಧ್ಯಾನ ದಿನಾಚರಣೆ ನಡೆಯಲಿದೆ. ನ್ಯೂಯಾರ್ಕ್‌ನಿಂದಲೇ ಗುರುದೇವ ರವಿಶಂಕರ್ ಅವರು ತಮ್ಮ ಯೂಟ್ಯೂಬ್ ಚಾನೆಲ್ ಮೂಲಕ ವಿಶ್ವದಾದ್ಯಂತದ ಧ್ಯಾನವನ್ನು ನೇರ ಪ್ರಸಾರದಲ್ಲಿ ಮಾರ್ಗದರ್ಶನ ಮಾಡಲಿದ್ದು, ಭಾರತ ಸೇರಿದಂತೆ ಜಗತ್ತಿನ ವಿವಿಧ ಭಾಗಗಳಿಂದ ಲಕ್ಷಾಂತರ ಜನರು ಈ ಸಮೂಹ ಧ್ಯಾನದಲ್ಲಿ ಭಾಗವಹಿಸಲಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ತಮಿಳು ಚಿತ್ರರಂಗದಲ್ಲಿ ರಾಜಕೀಯ: ವಿಜಯ್ ಕೊನೆ ಸಿನಿಮಾ ಟಾರ್ಗೆಟ್ – Kannada News | Movie politics in Tamil Nadu, Parashakti vs Jana Nayagan

ತಮಿಳುನಾಡಿನಲ್ಲಿ ಚಿತ್ರರಂಗಕ್ಕೂ (Movie) ರಾಜಕೀಯಕ್ಕೂ ಬಹಳ ಆಪ್ತ ಬಂಧ. ಸ್ವಾತಂತ್ರ್ಯ ಬಂದಾಗಿನಿಂದಲೂ ತಮಿಳು ಚಿತ್ರರಂಗದಲ್ಲಿರುವವರೇ ತಮಿಳುನಾಡಿನ ರಾಜಕೀಯದಲ್ಲೂ ಅಬ್ಬರಿಸಿದ್ದಾರೆ. ಅಣ್ಣಾದೊರೈ, ಶಿವಾಜಿ ಗಣೇಶನ್, ಕರುಣಾನಿಧಿ, ಎಂಜಿಆರ್, ಜಯಲಲಿತಾ, ವಿಜಯ್​ಕಾಂತ್, ಶರತ್​​ಕುಮಾರ್ ಇನ್ನೂ ಹಲವಾರು ಮಂದಿ ಸಿನಿಮಾ ಸೆಲೆಬ್ರಿಟಿಗಳು ತಮಿಳುನಾಡು ರಾಜಕೀಯದಲ್ಲಿ ತೊಡಗಿಕೊಂಡಿದ್ದಾರೆ. ಈಗಲೂ ಸಹ ಈ ಪದ್ಧತಿ ಚಾಲ್ತಿಯಲ್ಲಿದ್ದು, ಇತ್ತೀಚೆಗಷ್ಟೆ ನಟ ದಳಪತಿ ವಿಜಯ್ ಅವರು ರಾಜಕೀಯಕ್ಕೆ ಕಾಲಿರಿಸಿದ್ದಾರೆ. ಆದರೆ ತಮಿಳುನಾಡಿನಲ್ಲಿ ಅರ್ಧ ಶತಮಾನದಿಂದಲೂ ಸಿನಿಮಾಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳುವ ರೂಢಿ ಇದೆ, ಈಗಲೂ ಅದೇ ನಡೆಯುತ್ತಿದೆ.

ವಿಜಯ್ ಅವರು ತಮ್ಮ ಕೊನೆಯ ಸಿನಿಮಾ ‘ಜನ ನಾಯಗನ್’ ಬಿಡುಗಡೆ ದಿನಾಂಕ ಘೋಷಿಸಿದ್ದಾರೆ. ಸಿನಿಮಾ ಜನವರಿ 09 ರಂದು ಬಿಡುಗಡೆ ಆಗಲಿದೆ. ಈ ಸಿನಿಮಾ ಅನ್ನು ತಮ್ಮ ರಾಜಕೀಯ ಪಯಣಕ್ಕೆ ಚಿಮ್ಮುಹಲಗೆಯಾಗಿ ವಿಜಯ್ ಬಳಸಲಿದ್ದಾರೆ. ತಾವೆಂಥಹ ಜನನಾಯಕ ಎಂಬುದನ್ನು ಹೇಳಲೆಂದೇ ಈ ಸಿನಿಮಾ ಮಾಡಿದ್ದಾರೆ. ಆದರೆ ಇದೀಗ ವಿಜಯ್ ಅವರ ಈ ಸಿನಿಮಾ ರಾಜಕೀಯಕ್ಕೆ ಸಿನಿಮಾದ ಮೂಲಕವೇ ಉತ್ತರ ನೀಡಲು ಎದುರಾಳಿಗಳು ಸಜ್ಜಾಗಿದ್ದಾರೆ.

ತಮಿಳಿನ ಮತ್ತೊಬ್ಬ ಜನಪ್ರಿಯ ನಟ ಶಿವಕಾರ್ತಿಕೇಯನ್ ನಟನೆಯ ‘ಪರಾಶಕ್ತಿ’ ಸಿನಿಮಾ ಜನವರಿ 14ರಂದು ಬಿಡುಗಡೆ ಆಗಬೇಕಿತ್ತು. ಆದರೆ ವಿಜಯ್ ಅವರ ‘ಜನ ನಾಯಗನ್’ಗೆ ಪೆಟ್ಟು ಕೊಡಬೇಕೆಂದು, ಜನವರಿ 10ರಂದೇ ಸಿನಿಮಾ ಬಿಡುಗಡೆ ಮಾಡುವುದಾಗಿ ನಿರ್ಮಾಪಕ ಆಕಾಶ್ ಭಾಸ್ಕರನ್ ಘೋಷಿಸಿದ್ದಾರೆ. ಅಂದಹಾಗೆ ಆಕಾಶ್ ಅವರು ಡಿಎಂಕೆ ಪಕ್ಷದ ಪ್ರಮುಖ ನಾಯಕರ ನಿಕಟ ಸಂಬಂಧಿ ಆಗಿದ್ದಾರೆ.

ಇದನ್ನೂ ಓದಿ:ವಿಜಯ್ ಅಭಿಮಾನಿಗಳ ಓಲೈಸಲು ಹೋಗಿ ಚಿರಂಜೀವಿ ಅಭಿಮಾನಿಗಳ ಎದುರು ಹಾಕಿಕೊಂಡ ಕೀರ್ತಿ ಸುರೇಶ್

‘ಜನ ನಾಯಗನ್’ ರೀತಿ ‘ಪರಾಶಕ್ತಿ’ ಸಿನಿಮಾ ಸಹ ರಾಜಕೀಯ ವಿಷಯವನ್ನು ಹೊಂದಿರುವ ಸಿನಿಮಾ ಆಗಿದೆ. 1952 ಬಿಡುಗಡೆ ಆಗಿದ್ದ ‘ಪರಾಶಕ್ತಿ’ ಸಿನಿಮಾ ತಮಿಳುನಾಡು ರಾಜಕೀಯದಲ್ಲಿ ಹೊಸ ಅಲೆಯನ್ನೇ ಎಬ್ಬಿಸಿತ್ತು, ಸಾಮಾಜಿಕ ಕ್ರಾಂತಿಗೆ ಕಾರಣವಾಗಿತ್ತು. ಇದೀಗ ಈ ಸಿನಿಮಾಕ್ಕೂ ‘ಪರಾಶಕ್ತಿ’ ಎಂದೇ ಹೆಸರಿಟ್ಟು, ಹಿಂದಿ ಹೇರಿಕೆ, ಜಾತಿ ಪದ್ಧತಿ ಇತರೆ ರಾಜಕೀಯ ವಿಷಯಗಳನ್ನು ಸಿನಿಮಾನಲ್ಲಿ ಅಳವಡಿಸಲಾಗಿದೆ ಎನ್ನಲಾಗುತ್ತಿದೆ. ಇದೇ ಕಾರಣಕ್ಕೆ ಇದೀಗ ಈ ಸಿನಿಮಾವನ್ನು ವಿಜಯ್ ಅವರ ಸಿನಿಮಾದ ಜೊತೆಗೆ ಬಿಡುಗಡೆ ಮಾಡಲಾಗುತ್ತಿದ್ದು, ವಿಜಯ್ ಅವರಿಗೆ ಸ್ಪರ್ಧೆ ನೀಡಲಾಗುತ್ತಿದೆ.

ಅದಾದ ಒಂದೇ ವಾರಕ್ಕೆ ಅಜಿತ್ ನಟನೆಯ ಹಳೆಯ ಹಿಟ್ ಸಿನಿಮಾವನ್ನು ಮರು ಬಿಡುಗಡೆ ಮಾಡಲಾಗುತ್ತಿದ್ದು, ಒಟ್ಟಾರೆ ವಿಜಯ್ ಅವರ ಸಿನಿಮಾಕ್ಕೆ ಹೆಚ್ಚು ಚಿತ್ರಮಂದಿರಗಳು ಸಿಗದಂತೆ, ಹೆಚ್ಚು ಜನರ ಅಟೆನ್ಷನ್ ಸಿಗದಂತೆ ಮಾಡುವ ಪ್ರಯತ್ನಗಳು ನಡೆಯುತ್ತಿವೆ. ತಮಿಳುನಾಡು ಚಿತ್ರರಂಗದಲ್ಲಿ ಮತ್ತೊಮ್ಮೆ ಸಿನಿಮಾ ರಾಜಕೀಯ ಶುರುವಾಗಿದೆ. ಗೆಲುವು ಯಾರಿಗೆ ಆಗುತ್ತದೆ ನೋಡಬೇಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದ ಎಸ್​​​ಪಿ – Kannada News | Teacher Couple Assaults Specially Abled Children; Strict Action Will Be Taken, Says SP

ಬಾಗಲಕೋಟೆ, ಡಿಸೆಂಬರ್​ 20: ನಗರದಲ್ಲಿ ಬುದ್ಧಿಮಾಂದ್ಯ ಬಾಲಕನ ಮೇಲೆ ಶಿಕ್ಷಕ ದಂಪತಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಎಸ್​ಪಿ ಸಿದ್ದಾರ್ಥ ಗೋಯಲ್‌ ಪ್ರತಿಕ್ರಿಯಿಸಿದ್ದು, ಬಾಗಲಕೋಟೆಯಲ್ಲಿ ದಿವ್ಯಜ್ಯೋತಿ ಬುದ್ಧಿಮಾಂದ್ಯ ಮಕ್ಕಳ ಶಾಲೆ ಇದೆ. ಅಕ್ಷಯ್ ಇಂದುಲ್ಕರ್ ಹಾಗೂ ಆನಂದಿ ದಂಪತಿ ಶಾಲೆ‌ ನಡೆಸುತ್ತಾರೆ. ಬಾಲಕನ‌ ಮೇಲೆ‌ ಹಲ್ಲೆ ಮಾಡುವ ದೃಶ್ಯ ಸಿಕ್ಕಿದೆ. ಮೂರು ತಿಂಗಳ ಹಿಂದೆ ನಡೆದ ಘಟನೆ ಇದು. ಮೊದಲು ಆ ಶಾಲೆಯಲ್ಲಿ ಓರ್ವ ಮಹಿಳೆ ಕೆಲಸ ಮಾಡುತ್ತಿದ್ದರು, ಅವರನ್ನು ‌ಕೆಲಸದಿಂದ ತೆಗೆದ ಮೇಲೆ ವಿಡಿಯೋ ಬಹಿರಂಗಪಡಿಸಿದ್ದಾರೆ. ಬಾಲಕನ ತಂದೆ, ತಾಯಿ ನವನಗರ ಠಾಣೆಗೆ ದೂರು ನೀಡಿದ್ದಾರೆ. ಹಲ್ಲೆ ಮಾಡಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

Railway Jobs: ನಿರುದ್ಯೋಗಿಗಳಿಗೆ ಗುಡ್​ ನ್ಯೂಸ್​​; ರೈಲ್ವೆಯ ಐಸೋಲೇಟೆಡ್ ಕೆಟಗರೀಸ್​ನಲ್ಲಿ ಉದ್ಯೋಗವಕಾಶ! – Kannada News | RRB Isolated Categories: 311 Posts Notification! Apply Dec 30 Jan 29 for Railway Jobs 2025

ರೈಲ್ವೆ ನೇಮಕಾತಿ ಮಂಡಳಿಯು ನಿರುದ್ಯೋಗಿಗಳಿಗೆ ಮತ್ತೊಂದು ಗುಡ್ ನ್ಯೂಸ್​ ತಂದಿದೆ. ಐಸೋಲೇಟೆಡ್ ಕೆಟಗರೀಸ್ ವಿಭಾಗದಲ್ಲಿ 311 ಉದ್ಯೋಗಗಳಿಗೆ ಶೀಘ್ರದಲ್ಲೇ ಅಧಿಸೂಚನೆಯನ್ನು ಬಿಡುಗಡೆ ಮಾಡಲಿದೆ. ಈ ಕುರಿತು ಒಂದು ಸಣ್ಣ ಸೂಚನೆಯನ್ನು ನೀಡಲಾಗಿದೆ.

ವರದಿಗಳ ಪ್ರಕಾರ, ಆನ್‌ಲೈನ್ ಅರ್ಜಿ ಪ್ರಕ್ರಿಯೆಯು ಡಿಸೆಂಬರ್ 30 ರಿಂದ ಪ್ರಾರಂಭವಾಗಲಿದೆ. ಜನವರಿ 29 ರಂದು ರಾತ್ರಿ 11.59 ರವರೆಗೆ ಆನ್‌ಲೈನ್ ಅರ್ಜಿಗಳನ್ನು ಸ್ವೀಕರಿಸಲಾಗುತ್ತದೆ. ಅಭ್ಯರ್ಥಿಗಳ ವಯಸ್ಸಿನ ಮಿತಿ 18 ರಿಂದ 40 ವರ್ಷಗಳ ನಡುವೆ ಇರಬೇಕು ಎಂದು ಮಂಡಳಿ ಸ್ಪಷ್ಟಪಡಿಸಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಅಗತ್ಯವಿರುವ ಅರ್ಹತೆಗಳ ಸಂಪೂರ್ಣ ವಿವರಗಳೊಂದಿಗೆ ಶೀಘ್ರದಲ್ಲೇ ಅಧಿಕೃತ ಪ್ರಕಟಣೆಯನ್ನು ಹೊರಡಿಸಲಾಗುವುದು. ಆಯ್ಕೆಯಾದವರಿಗೆ ಹುದ್ದೆಗೆ ಅನುಗುಣವಾಗಿ ತಿಂಗಳಿಗೆ ರೂ. 19,900 ರಿಂದ ರೂ. 44,900 ರವರೆಗೆ ವೇತನವನ್ನು ನೀಡಲಾಗುತ್ತದೆ.

ಇದನ್ನೂ ಓದಿ: ಬ್ಯಾಂಕ್ ಆಫ್ ಇಂಡಿಯಾದಲ್ಲಿ 514 ಕ್ರೆಡಿಟ್ ಆಫೀಸರ್ ಹುದ್ದೆಗೆ ನೇಮಕಾತಿ

ಈ ಅಧಿಸೂಚನೆಯ ಮೂಲಕ, ರೈಲ್ವೆ ಮಂಡಳಿಯು ವಿವಿಧ ರೈಲ್ವೆ ಪ್ರದೇಶಗಳಲ್ಲಿ ಹಿರಿಯ ಪ್ರಚಾರ ನಿರೀಕ್ಷಕ, ಪ್ರಯೋಗಾಲಯ ಸಹಾಯಕ ಗ್ರೇಡ್ -3, ಮುಖ್ಯ ಕಾನೂನು ಸಹಾಯಕ, ಜೂನಿಯರ್ ಅನುವಾದಕ, ಸಿಬ್ಬಂದಿ ಮತ್ತು ಕಲ್ಯಾಣ ನಿರೀಕ್ಷಕ, ಸಾರ್ವಜನಿಕ ಅಭಿಯೋಜಕ, ವೈಜ್ಞಾನಿಕ ಮೇಲ್ವಿಚಾರಕ ಹುದ್ದೆಗಳನ್ನು ಭರ್ತಿ ಮಾಡುತ್ತದೆ. ಅಂತಿಮ ಆಯ್ಕೆಯು 2 ಹಂತಗಳಲ್ಲಿ ಆನ್‌ಲೈನ್ ಲಿಖಿತ ಪರೀಕ್ಷೆಗಳು, ಅನುವಾದ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಇತ್ಯಾದಿಗಳನ್ನು ಆಧರಿಸಿರುತ್ತದೆ ಎಂದು RRB ಘೋಷಿಸಿದೆ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಓಂ’ ಸಿನಿಮಾಕ್ಕೆ ಸೆನ್ಸಾರ್ ಸಮಸ್ಯೆ: ಮುಂದೆ ನಡೆದಿದ್ದೇನು? ವಿವರಿಸಿದ ಉಪ್ಪಿ – Kannada News | Upendra talks about Om movie censor problem and how it cleared

ಕನ್ನಡ ಚಿತ್ರರಂಗದ (Sandalwood) ಕಲ್ಟ್ ಸಿನಿಮಾಗಳಲ್ಲಿ ‘ಓಂ’ ಸಹ ಒಂದು. ಕನ್ನಡ ಚಿತ್ರರಂಗದ ದಿಕ್ಕು ಬದಲಿಸಿದ ಸಿನಿಮಾಗಳಲ್ಲಿ ‘ಓಂ’ ಸಹ ಒಂದು. ನಟನೆ, ನಿರ್ದೇಶಕ, ಸಂಗೀತ, ನಿರೂಪಣೆ ಎಲ್ಲ ವಿಭಾಗಗಳಲ್ಲಿಯೂ ಹೊಸತನ ತುಂಬಿಕೊಂಡಿದ್ದ ಸಿನಿಮಾ ಅದಾಗಿತ್ತು. ಹಲವಾರು ದಾಖಲೆಗಳನ್ನು ಮಡಿಲಲ್ಲಿ ತುಂಬಿಕೊಂಡಿರುವ ‘ಓಂ’ ಸಿನಿಮಾ ಬಗ್ಗೆ ಈಗಾಗಲೇ ಹಲವಾರು ಮಂದಿ ಹಲವಾರು ಬಾರಿ ಮಾತನಾಡಿದ್ದಾರೆ. ಓಂ ಸಿನಿಮಾದ ನಿರ್ದೇಶಕ ಉಪೇಂದ್ರ ಸಹ ‘ಓಂ’ ಕುರಿತಾಗಿ ಹಲವು ಬಾರಿ ಮಾತನಾಡಿದ್ದಾರೆ. ‘ಓಂ’ ಸಿನಿಮಾದ ಹಿಂದಿನ ಕತೆ ಹೇಳಿದ್ದಾರೆ. ಆದರೆ ಸಿನಿಮಾಕ್ಕೆ ಸೆನ್ಸಾರ್ ಸಮಸ್ಯೆ ಆಗಿದ್ದು, ಆ ನಂತರ ಏನಾಯ್ತು ಎಂಬುದನ್ನು ಇದೀಗ ಉಪ್ಪಿ ಹಂಚಿಕೊಂಡಿದ್ದಾರೆ.

ಉಪೇಂದ್ರ ಅವರು ಇದೀಗ ಶಿವಣ್ಣ, ರಾಜ್ ಬಿ ಶೆಟ್ಟಿ ಜೊತೆಗೆ ‘45’ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಸಿನಿಮಾದ ಪ್ರಚಾರ ಕಾರ್ಯ ಚಾಲ್ತಿಯಲ್ಲಿದೆ. ಟಿವಿ9ಗೆ ವಿಶೇಷ ಸಂದರ್ಶನ ನೀಡಿರುವ ಉಪೇಂದ್ರ, ಅರ್ಜುನ್ ಜನ್ಯಾ ಮತ್ತು ರಾಜ್ ಬಿ ಶೆಟ್ಟಿ, ‘45’ ಸಿನಿಮಾದ ಜೊತೆಗೆ ಇನ್ನೂ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ ಉಪೇಂದ್ರ ಅವರು ‘ಓಂ’ ಸಿನಿಮಾಕ್ಕೆ ಸೆನ್ಸಾರ್ ಸಮಸ್ಯೆ ಆಗಿದ್ದ ಕತೆಯನ್ನು ಹಂಚಿಕೊಂಡಿದ್ದಾರೆ.

‘ಓಂ’ ಸಿನಿಮಾಕ್ಕೆ ಸೆನ್ಸಾರ್ ಸಮಸ್ಯೆ ಆಗಿತ್ತು. ಅವರು ಕೆಲವು ದೃಶ್ಯಗಳನ್ನು ತೆಗೆಯಲು ಹೇಳಿದ್ದರು. ಅವುಗಳನ್ನು ಮರಳಿ ಶೂಟ್ ಮಾಡಬೇಕೆಂದರೆ ತುಸು ಸಮಯ ಹಿಡಿಯುತ್ತದೆ. ಆದರೆ ಅದಾಗಲೇ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಮಾಡಿ ಆಗಿತ್ತು. ಪಾರ್ವತಮ್ಮ ರಾಜ್​ಕುಮಾರ್ ಅವರಿಗೆ ಸಿನಿಮಾ ಅನ್ನು ಹೇಳಿದ ದಿನಕ್ಕೆ ಬಿಡುಗಡೆ ಮಾಡಲೇ ಬೇಕು. ಜನರಿಗೆ ಮಾತು ತಪ್ಪು ಬಾರದು ಎಂಬುದು ಅವರ ಉದ್ದೇಶ. ಆದರೆ ಸೆನ್ಸಾರ್ ಸಮಸ್ಯೆ ಆಗಿರುವುದರಿಂದ ಸಮಸ್ಯೆ ಆಗಿತ್ತು.

ಇದನ್ನೂ ಓದಿ:ಶಿವಣ್ಣನಂಥ ಗೆಳೆಯ ಸಿಕ್ಕಿದ್ದು ಪುಣ್ಯ: ಉಪೇಂದ್ರ

ಸೆನ್ಸಾರ್​​ನವರು ಕೆಲವು ದೃಶ್ಯಗಳನ್ನು ತೆಗೆಯಲು ಹೇಳಿದರು. ಅವುಗಳನ್ನು ತೆಗೆದರೆ ಸರ್ಟಿಫಿಕೇಟ್ ಕೊಡುತ್ತೇನೆ ಎಂದರು. ಪಾರ್ವತಮ್ಮನವರು ಅವರು ಹೇಳಿದ ದೃಶ್ಯಗಳನ್ನು ತೆಗೆದು ಸರ್ಟಿಫಿಕೇಟ್ ಪಡೆದುಕೊಳ್ಳಿ, ನಿಗದಿತ ಸಮಯಕ್ಕೆ ಬಿಡುಗಡೆ ಮಾಡೋಣ ಎಂದರು. ನಾನು ಕೆಲವು ಸಣ್ಣ ಪುಟ್ಟ ದೃಶ್ಯಗಳನ್ನು ತೆಗೆಯಲು ಒಪ್ಪಿಕೊಂಡೆ ಆದರೆ ದೊಡ್ಡ ಅಥವಾ ಮುಖ್ಯವಾದ ದೃಶ್ಯಗಳನ್ನು ತೆಗೆಯಲು ನನಗೆ ಮನಸ್ಸಾಗಲಿಲ್ಲ. ಕೊನೆಗೆ ಪಾರ್ವತಮ್ಮನವರ ಬಳಿ ಒಮ್ಮೆ ವರದಣ್ಣನವರು ಅಪ್ಪಾಜಿ ಅವರು ನೋಡಲಿ ಆ ನಂತರ ತೆಗೆಯುತ್ತೇನೆ ಎಂದು ಹೇಳಿದರಂತೆ.

ಅದರಂತೆ ವರದಣ್ಣ ಮತ್ತು ರಾಜ್​ಕುಮಾರ್ ಅವರು ಒಟ್ಟಿಗೆ ‘ಓಂ’ ಸಿನಿಮಾ ನೋಡಿದರಂತೆ. ಸಿನಿಮಾ ನೋಡಿದವರು ಈ ಸಿನಿಮಾದಿಂದ ಯಾವ ಸಣ್ಣ ದೃಶ್ಯವನ್ನೂ ತೆಗೆಯುವಂತೆ ಇಲ್ಲ, ನಾವು ತಡವಾಗಿ ಸೆನ್ಸಾರ್ ಪಡೆದರು ಪರವಾಗಿಲ್ಲ, ಯಾವ ದೃಶ್ಯವನ್ನೂ ತೆಗೆಯುವುದು ಬೇಡ ಎಂದುಬಿಟ್ಟರಂತೆ. ದೃಶ್ಯಗಳನ್ನು ಕಟ್ ಮಾಡಬೇಕಲ್ಲ ಎಂದು ಅಂಜಿಕೆಯಿಂದ, ಬೇಸರದಿಂದ ಇದ್ದ ಉಪೇಂದ್ರ ಅವರಿಗೆ ಇದು ಭಾರಿ ದೊಡ್ಡ ಖುಷಿ ನೀಡಿತಂತೆ. ಅವರ ಮಾತಿನಂತೆ ಯಾವುದೇ ಮುಖ್ಯ ಕಟ್​​ಗಳು ಇಲ್ಲದೆ ಸಿನಿಮಾ ಬಿಡುಗಡೆ ಸಹ ಆಗಿದ್ದು ಇತಿಹಾಸ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ವಿಮಾನ ನಿಲ್ದಾಣ ಟರ್ಮಿನಲ್ ಉದ್ಘಾಟನೆ – Kannada News | PM Modi inaugurates Indias First Nature Themed Airport Terminal In Guwahati

ಗುವಾಹಟಿ, ಡಿಸೆಂಬರ್ 20: ಪ್ರಧಾನಿ ನರೇಂದ್ರ ಮೋದಿ (PM Modi in Guwahati) ಇಂದು ಅಸ್ಸಾಂನ ಗುವಾಹಟಿಯಲ್ಲಿ ಲೋಕಪ್ರಿಯ ಗೋಪಿನಾಥ್ ಬಾರ್ಡೋಲೋಯ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಿದರು. ಇದು ಅಸ್ಸಾಂನ ಮೂಲಸೌಕರ್ಯ ಬೆಳವಣಿಗೆಯಲ್ಲಿ ಪ್ರಮುಖ ಮೈಲಿಗಲ್ಲಾಗಿದೆ. ಈ ಟರ್ಮಿನಲ್ ಉದ್ಘಾಟನೆಯ ನಂತರ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ಇಂದು ಅಭಿವೃದ್ಧಿಯ ಆಚರಣೆಯ ದಿನ. ಇದು ಅಸ್ಸಾಂ ಮಾತ್ರವಲ್ಲದೆ ಇಡೀ ಈಶಾನ್ಯದ ಅಭಿವೃದ್ಧಿಯ ಆಚರಣೆಯಾಗಿದೆ. ಅಸ್ಸಾಂ ಯಾವ ರೀತಿ ಅಭಿವೃದ್ಧಿಯ ಹಬ್ಬವನ್ನು ಆಚರಿಸುತ್ತಿದೆ ಎಂದು ಇಡೀ ದೇಶ ನೋಡುತ್ತಿದೆ” ಎಂದು ಹೇಳಿದ್ದಾರೆ.

ಸುಮಾರು 4,000 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಹೊಸದಾಗಿ ಉದ್ಘಾಟನೆಗೊಂಡ ಟರ್ಮಿನಲ್ ಭಾರತದ ಮೊದಲ ಪ್ರಕೃತಿ ಪ್ರೇರಿತ ವಿಮಾನ ನಿಲ್ದಾಣದ ಟರ್ಮಿನಲ್ ಆಗಿದೆ. ಅಸ್ಸಾಂ ಪ್ರದೇಶದ ನೈಸರ್ಗಿಕ ಭೂದೃಶ್ಯವನ್ನು ಪ್ರತಿಬಿಂಬಿಸುವಂತೆ ವಿನ್ಯಾಸಗೊಳಿಸಲಾದ ಈ ಟರ್ಮಿನಲ್ ಪ್ರಯಾಣಿಕರ ನಿರ್ವಹಣಾ ಸಾಮರ್ಥ್ಯವನ್ನು ಗಣನೀಯವಾಗಿ ಹೆಚ್ಚಿಸುತ್ತದೆ ಮತ್ತು ಸಂಪರ್ಕವನ್ನು ಸುಧಾರಿಸುತ್ತದೆ. ಹಾಗೇ, ಅಸ್ಸಾಂ ಮತ್ತು ನೆರೆಯ ರಾಜ್ಯಗಳಲ್ಲಿ ಪ್ರವಾಸೋದ್ಯಮ, ವ್ಯಾಪಾರ ಮತ್ತು ಆರ್ಥಿಕ ಚಟುವಟಿಕೆಯನ್ನು ಹೆಚ್ಚಿಸುತ್ತದೆ ಎಂದು ನಿರೀಕ್ಷಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕರ್ನಾಟಕದಾದ್ಯಂತ ನಾಳೆಯಿಂದ ಡಿ 24ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ – Kannada News | National Pulse Polio Campaign to Be Held Across Karnataka from December 21 to 24

ಬೆಂಗಳೂರು, ಡಿಸೆಂಬರ್​ 20: ದೇಶವನ್ನು ಪೋಲಿಯೋ ಮುಕ್ತವನ್ನಾಗಿಸುವ ನಿಟ್ಟಿನಲ್ಲಿ ಕರ್ನಾಟಕದಾದ್ಯಂತ (Karnataka) ನಾಳೆಯಿಂದ ಡಿ. 24ರ ವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ–2025 (National Pulse Polio Programme) ಆರಂಭವಾಗಲಿದೆ. ಐದು ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸುವಂತೆ ಕರ್ನಾಟಕ ಆರೋಗ್ಯ ಇಲಾಖೆ ಪೋಷಕರಿಗೆ ಮನವಿ ಮಾಡಿದೆ.

ಪೋಲಿಯೋ ಮಾರಕರೋಗವಾಗಿದ್ದು, ಮಕ್ಕಳಲ್ಲಿ ಶಾಶ್ವತ ಅಂಗವೈಕಲ್ಯವನ್ನು ಉಂಟುಮಾಡಬಹುದು. ಈ ರೋಗಕ್ಕೆ ಯಾವುದೇ ಚಿಕಿತ್ಸೆ ಇಲ್ಲದಿದ್ದರು ಲಸಿಕೆ ಮೂಲಕ ಇದನ್ನು ಸಂಪೂರ್ಣವಾಗಿ ತಡೆಗಟ್ಟಲು ಸಾಧ್ಯವಿದೆ. ಎರಡು ಹನಿ ಲಸಿಕೆ ನಿಮ್ಮ ಮಗುವಿನ ಭವಿಷ್ಯವನ್ನು ನಿರ್ಧರಿಸಲಿದೆ ಎಂಬ ಘೋಷವಾಕ್ಯದಡಿ ಸರ್ಕಾರ ಅಭಿಯಾನಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿದೆ.

ಕರ್ನಾಟಕ ಆರೋಗ್ಯ ಇಲಾಖೆ ಟ್ವೀಟ್​

ಹತ್ತಿರದ ಸರ್ಕಾರಿ ಆಸ್ಪತ್ರೆಗಳು, ಅಂಗನವಾಡಿಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸೇರಿದಂತೆ ಬಸ್​​​, ರೆಲ್ವೆ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳಲ್ಲಿ ಲಸಿಕೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಮೊದಲ ದಿನ ಕೇಂದ್ರಗಳಲ್ಲಿ ಲಸಿಕೆ ನೀಡಲಾಗುತ್ತದೆ. ಬಳಿಕ ಎರಡು ದಿನ ಆರೋಗ್ಯ ಇಲಾಖೆ ಕಾರ್ಯಕರ್ತರು ಮನೆಮನೆಗೆ ಭೇಟಿ ನೀಡಿ ಲಸಿಕೆ ಪಡೆಯದ ಮಕ್ಕಳಿಗೆ ಲಸಿಕೆ ನೀಡುತ್ತಾರೆ.

ಜಿಬಿಎಗೆ 11 ಲಕ್ಷಕ್ಕೂ ಹೆಚ್ಚು ಲಸಿಕೆ ಹಾಕಿಸುವ ಗುರಿ ನೀಡಿದ ಆರೋಗ್ಯ ಇಲಾಖೆ 

ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದಡಿಯಲ್ಲಿ ಕರ್ನಾಟಕ ಆರೋಗ್ಯ ಇಲಾಖೆಯೂ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ತನ್ನ ಐದು ನಿಗಮಗಳ ಮೂಲಕ ಒಟ್ಟು 11,34,988 ಮಕ್ಕಳಿಗೆ ಲಸಿಕೆ ಹಾಕುವ ಗುರಿ ನೀಡಿದೆ.

ಇದನ್ನೂ ಓದಿ: ಮೊಟ್ಟೆ ತಿಂದರೆ ಕ್ಯಾನ್ಸರ್ ಬರುತ್ತಾ? ಮೊಟ್ಟೆ ರಹಸ್ಯ ಬಿಚ್ಚಿಟ್ಟ ತಜ್ಞ ವೈದ್ಯರು, ಎಲ್ಲಾ ಗೊಂದಲಗಳಿಗೆ ತೆರೆ!

ಇನ್ನು ಈ ಕುರಿತಾಗಿ ಟ್ವೀಟ್​ ಮಾಡಿರುವ ಜಿಬಿಎ, ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ–2025 ಅನ್ನು ಡಿಸೆಂಬರ್ 21ರಿಂದ 24, 2025ರವರೆಗೆ ಹಮ್ಮಿಕೊಂಡಿದ್ದು, ಐದು ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸುವಂತೆ ಪೋಷಕರಿಗೆ ಮನವಿ ಮಾಡಿದೆ.

ಜಿಬಿಎ ಟ್ವೀಟ್​

ಜೀವದ ಎರಡು ಹನಿಗಳಿಂದ ಪೋಲಿಯೋ ವಿರುದ್ಧ ವಿಜಯ ಸಾಧಿಸುವುದನ್ನು ಮುಂದುವರಿಸೋಣ. ನಿಮ್ಮ ಹತ್ತಿರದ ಪೋಲಿಯೋ ಬೂತ್, ಯುಪಿಎಚ್‌ಸಿ ಹಾಗೂ ನಮ್ಮ ಕ್ಲಿನಿಕ್‌ಗಳ ಮಾಹಿತಿ ಪಡೆಯಲು QR ಕೋಡ್ ಅನ್ನು ಸ್ಕ್ಯಾನ್ ಮಾಡಿ, ಅಥವಾ https://gba.karnataka.gov.in/polio/ ಭೇಟಿ ನೀಡಬಹುದಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಮಮತಾ ಬ್ಯಾನರ್ಜಿ ಸರ್ಕಾರ ನುಸುಳುಕೋರರನ್ನು ರಕ್ಷಿಸಲು ಎಸ್‌ಐಆರ್ ಅನ್ನು ವಿರೋಧಿಸುತ್ತಿದೆ; ಪ್ರಧಾನಿ ಮೋದಿ ಆರೋಪ – Kannada News | Mamata Banerjees TMC government opposing SIR to help infiltrators in Bengal PM Modi says

ಕೊಲ್ಕತ್ತಾ, ಡಿಸೆಂಬರ್ 20: ಪ್ರಧಾನಿ ನರೇಂದ್ರ ಮೋದಿ ಇಂದು (ಶನಿವಾರ) ತೃಣಮೂಲ ಕಾಂಗ್ರೆಸ್ (ಟಿಎಂಸಿ) ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆಡಳಿತವು ನುಸುಳುಕೋರರನ್ನು ರಕ್ಷಿಸಲು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅನ್ನು ವಿರೋಧಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ನಾಡಿಯಾ ಜಿಲ್ಲೆಯ ತಾಹೆರ್‌ಪುರದಲ್ಲಿ ದೂರವಾಣಿ ಮೂಲಕ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪಿಎಂ ಮೋದಿ, ನುಸುಳುಕೋರರು ಬಂಗಾಳದಲ್ಲಿ ಟಿಎಂಸಿಯ ಬೆಂಬಲವನ್ನು ಪಡೆದಿದ್ದಾರೆ ಎಂದು ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯು ಟಿಎಂಸಿಯ ‘ಮಹಾ ಜಂಗಲ್ ರಾಜ್’ ಅನ್ನು ಕೊನೆಗೊಳಿಸಲಿದೆ ಎಂದು ಪ್ರತಿಪಾದಿಸಿದ ಪ್ರಧಾನಿ ಮೋದಿ, ಬಂಗಾಳದಲ್ಲಿ ಭ್ರಷ್ಟಾಚಾರ, ಸ್ವಜನಪಕ್ಷಪಾತ ಮತ್ತು ಓಲೈಕೆಯ ರಾಜಕೀಯ ಆಳ್ವಿಕೆ ನಡೆಸುತ್ತಿದೆ ಎಂದು ಹೇಳಿದ್ದಾರೆ. ಟಿಎಂಸಿ ಬಿಜೆಪಿಯನ್ನು ವಿರೋಧಿಸಬಹುದು. ಆದರೆ ಬಿಹಾರದ ಚುನಾವಣಾ ಫಲಿತಾಂಶಗಳು ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಬಾಗಿಲು ತೆರೆದಿವೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕೊಲ್ಕತ್ತಾದಲ್ಲಿ ಮೆಸ್ಸಿ ಕಾರ್ಯಕ್ರಮದಲ್ಲಿ ನಡೆದ ಗಲಭೆಗೆ ಬಂಗಾಳದ ಕ್ರೀಡಾ ಸಚಿವ ರಾಜೀನಾಮೆ

“ಬಿಹಾರವು ಬಂಗಾಳದಲ್ಲಿ ಬಿಜೆಪಿಯ ಗೆಲುವಿಗೆ ದಾರಿ ಮಾಡಿಕೊಟ್ಟಿದೆ. ಬಿಹಾರದ ಜಂಗಲ್ ರಾಜ್ ಅನ್ನು ತೊಡೆದುಹಾಕಲಾಯಿತು. ಈಗ ನಾವು ಪಶ್ಚಿಮ ಬಂಗಾಳದಲ್ಲಿ ‘ಮಹಾ ಜಂಗಲ್ ರಾಜ್’ ಅನ್ನು ತೊಡೆದುಹಾಕಬೇಕಿದೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಕೆಟ್ಟ ಹವಾಮಾನದಿಂದಾಗಿ ನಾಡಿಯಾವನ್ನು ತಲುಪಲು ಸಾಧ್ಯವಾಗದಿದ್ದಕ್ಕಾಗಿ ಕ್ಷಮೆ ಯಾಚಿಸಿದ ಪ್ರಧಾನಿ ಮೋದಿ, ಬಿಜೆಪಿ ಯಾವುದೇ ಬೆಲೆ ತೆತ್ತಾದರೂ ಪಶ್ಚಿಮ ಬಂಗಾಳದ ಅಭಿವೃದ್ಧಿಯನ್ನು ಮಾಡುತ್ತದೆ ಎಂದು ಹೇಳಿದರು. ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕುವಂತೆ ಜನರಿಗೆ ಮನವಿ ಮಾಡಿದ ಅವರು ಬಂಗಾಳಕ್ಕೆ ಅದರಲ್ಲೂ ವಿಶೇಷವಾಗಿ ಹಿಂದುಳಿದಿರುವ ಪ್ರದೇಶಗಳಿಗೆ ಸಂಪರ್ಕವನ್ನು ಒದಗಿಸಲು ಬಿಜೆಪಿ ಬಯಸುತ್ತದೆ ಎಂದು ಹೇಳಿದ್ದಾರೆ.

ಇದಕ್ಕೂ ಮೊದಲು, ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ರಣಘಾಟ್‌ನಲ್ಲಿ ಪ್ರಧಾನಿ ಮೋದಿ ಬಹು ಅಭಿವೃದ್ಧಿ ಕಾರ್ಯಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಇದರಲ್ಲಿ ಸುಮಾರು 3,200 ಕೋಟಿ ರೂ. ಮೌಲ್ಯದ ಎರಡು ರಾಷ್ಟ್ರೀಯ ಹೆದ್ದಾರಿ ಯೋಜನೆಗಳು ಕೂಡ ಸೇರಿವೆ. ಇದರಲ್ಲಿ NH-34 ರ 66.7 ಕಿಮೀ ಉದ್ದದ ಬಾರಾಜಗುಲಿ-ಕೃಷ್ಣನಗರ ವಿಭಾಗದ 4 ಪಥ ನಿರ್ಮಾಣ ಯೋಜನೆಯೂ ಒಂದು. NH-34 ರ 17.6 ಕಿಮೀ ಉದ್ದದ ಬಾರಾಜಸತ್-ಬಾರಾಜಗುಲಿ ವಿಭಾಗದ 4 ಪಥ ನಿರ್ಮಾಣಕ್ಕೂ ಅವರು ಶಂಕುಸ್ಥಾಪನೆ ನೆರವೇರಿಸಿದರು.

ಇದನ್ನೂ ಓದಿ: ಪಶ್ಚಿಮ ಬಂಗಾಳದ ಎಸ್​ಐಆರ್​ ಕರಡಿನಲ್ಲಿ 58 ಲಕ್ಷ ಹೆಸರುಗಳು ಡಿಲೀಟ್

ಈ ಯೋಜನೆಗಳು ಕೋಲ್ಕತ್ತಾವನ್ನು ಸಿಲಿಗುರಿಯೊಂದಿಗೆ ಸಂಪರ್ಕಿಸಲು ಸಹಾಯ ಮಾಡುತ್ತದೆ ಮತ್ತು ಜನರ ಪ್ರಯಾಣದ ಸಮಯವನ್ನು ಸುಮಾರು 2 ಗಂಟೆಗಳ ಕಾಲ ಕಡಿಮೆ ಮಾಡುತ್ತದೆ. ಈ ಯೋಜನೆಗಳು ಈ ಪ್ರದೇಶದಲ್ಲಿ ಆರ್ಥಿಕ ಚಟುವಟಿಕೆಗಳನ್ನು ಸುಧಾರಿಸಲು ಮತ್ತು ಪ್ರವಾಸೋದ್ಯಮವನ್ನು ಉತ್ತೇಜಿಸಲು ಸಹಾಯ ಮಾಡುತ್ತವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಗಿಲ್ಲಿ ಪ್ರೀತಿಯಿಂದ ಕೈ ಕೊಟ್ಟರು ಕ್ಯಾರೇ ಎನ್ನದೇ ಹೋದ ಕಾವ್ಯಾ; ಫ್ಯಾನ್ಸ್​​ಗೆ ಬೇಸರ – Kannada News | Bigg Boss Kannada 12: Kavya’s Snub to Gilli Sparks Controversy Fans React

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಕಾವ್ಯಾ (Kavya) ಹಾಗೂ ಗಿಲ್ಲಿ ಗೆಳೆತನದ ಬಗ್ಗೆ ಹೊಸದಾಗಿ ಹೇಳಬೇಕಾಗಿಲ್ಲ. ಇಬ್ಬರ ಮಧ್ಯೆ ಆಗಾಗ ಕಿರಿಕ್​​ಗಳು ಆಗುತ್ತಲೇ ಇರುತ್ತವೆ. ನಂತರ ಇವರು ಮತ್ತೆ ಒಂದಾಗುತ್ತಾರೆ. ಇದು ಸಾಕಷ್ಟು ಬಾರಿ ರಿಪೀಟ್ ಆಗಿದೆ. ಈಗ ಕಾವ್ಯಾ ಅವರು ನಡೆದುಕೊಂಡ ರೀತಿ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಗಿಲ್ಲಿ ಅಭಿಮಾನಿಗಳಿಗೆ ಈ ನಡೆ ಸಾಕಷ್ಟು ಬೇಸರ ಮೂಡಿಸಿದೆ. ಅಷ್ಟಕ್ಕೂ ಅಲ್ಲಿ ನಡೆದಿದ್ದು ಏನು? ಆ ಬಗ್ಗೆ ಇಲ್ಲಿದೆ ವಿವರ.

ಬಿಗ್ ಬಾಸ್ ಚಟುವಟಿಕೆ ಒಂದನ್ನು ಆಯೋಜನೆ ಮಾಡಿದ್ದರು. ಇದರ ಅನುಸಾರ ಮನೆಯ ಪ್ರತಿ ಸ್ಪರ್ಧಿ ಮತ್ತೋರ್ವ ಸ್ಪರ್ಧಿಯನ್ನು ಕರೆದು ಅವರಿಂದ ತಮಗೆ ಆದ ನೋವನ್ನು ಹೇಳಬೇಕು. ಅವರು ಯಾವಾಗ ಸಿಟ್ಟಲ್ಲಿ ಮಾತನಾಡಿದ್ದು ಎಂಬುದನ್ನು ಹೇಳಿ, ಚಾಕೋಲೇಟ್ ನೀಡಿ ಸಿಹಿಯಾಗಿ ಮಾತನಾಡುವಂತೆ ಕೋರಬೇಕು. ಈ ವೇಳೆ ಗಿಲ್ಲಿ ಅವರು ಕಾವ್ಯಾ ಬಗ್ಗೆ ಹೇಳಿದರು.

ಕಾವ್ಯಾ ಅವರಿಂದ ಆದ ಒಂದು ಬೇಸರದ ಘಟನೆಯನ್ನು ನೆನಪಿಸಿಕೊಂಡರು ಗಿಲ್ಲಿ. ಆ ಸಂದರ್ಭದಲ್ಲಿ ಕಾವ್ಯಾ ಸಿಹಿಯಾಗಿ ಮಾತನಾಡಬಹುದಿತ್ತು ಎಂದು ಅಭಿಪ್ರಾಯಪಟ್ಟರು. ಇದನ್ನು ಕಾವ್ಯಾ ಕೇಳಿಸಿಕೊಂಡರು. ಹೋಗುವಾಗ ಶೇಕ್​ ಹ್ಯಾಂಡ್ ಮಾಡಲು ಗಿಲ್ಲಿ ಮುಂದಾದರು. ಆದರೆ, ಇದಕ್ಕೆ ಕಾವ್ಯಾ ಒಪ್ಪಲೇ ಇಲ್ಲ. ಅವರು ಕೈ ಕುಲುಕದೇ ನೇರವಾಗಿ ಅಲ್ಲಿಂದ ಕೆಳಗಿಳಿದು ಬಂದರು. ಈ ವಿಡಿಯೋ ಚರ್ಚೆಗೆ ಕಾರಣ ಆಗಿದೆ. ‘ಗಿಲ್ಲಿ ಗೆಳೆತನವನ್ನು ಕಡೆಗಣಿಸಬೇಡಿ. ಮುಂದೊಂದು ದಿನ ಅವರ ಕಾಲ್​ಶೀಟ್ ಪಡೆಯಲು ಸಾಲಲ್ಲಿ ನಿಲ್ಲಬೇಕಾಗುತ್ತದೆ’ ಎಂದೆಲ್ಲ ಫ್ಯಾನ್ಸ್ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ‘ನಿನಗೆ ಮಾನ-ಮಾರ್ಯಾದೆ ಏನೂ ಇಲ್ಲ’; ಗಿಲ್ಲಿಗೆ ಗಂಭೀರವಾಗಿಯೇ ಹೇಳಿದ ಕಾವ್ಯಾ

ಇನ್ನೊಂದು ತಿಂಗಳಲ್ಲಿ ‘ಬಿಗ್ ಬಾಸ್’ ಫಿನಾಲೆ ನಡೆಯಲಿದೆ. ಈ ಬಾರಿ ಶೋನ ಗೆಲ್ಲೋದು ಯಾರು ಎನ್ನುವ ಪ್ರಶ್ನೆ ಮೂಡಿದೆ. ಈಗಾಗಲೇ 13 ಮಂದಿ ಮನೆಯಲ್ಲಿ ಇದ್ದಾರೆ. ಈ ವಾರ ಯಾವುದೇ ಎಲಿಮಿನೇಷನ್ ಇಲ್ಲ. ಹೀಗಾಗಿ, ರಜತ್ ಹಾಗೂ ಚೈತ್ರಾ ಅವರು ಬಿಗ್ ಬಾಸ್ ಮನೆಯಿಂದ ಹೊರಕ್ಕೆ ಬರುತ್ತಾರೆ ಎಂದು ಹೇಳಲಾಗುತ್ತಾ ಇದೆ. ಡಿಸೆಂಬರ್ 21ರ ಎಪಿಸೋಡ್​ನಲ್ಲಿ ಈ ಬಗ್ಗೆ ಗೊತ್ತಾಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 12:13 pm, Sat, 20 December 25

Source link

Exit mobile version