ಸಿಎಂ ಆಗಾಯ್ತು, ಚಿತ್ರರಂಗದ ಈ ಸಂಪ್ರದಾಯ ಬದಲಿಸ್ತಾರಾ ದಳಪತಿ ವಿಜಯ್? – Kannada News | CM Vijay: Will Thalapathy Revive Early Morning Shows for Tamil Cinema?
ತಮಿಳುನಾಡು ರಾಜಕೀಯದಲ್ಲಿ ಹೊಸ ಇತಿಹಾಸ ಸೃಷ್ಟಿಯಾಗಿದೆ. ಮೇ 10ರಂದು ನಟ ದಳಪತಿ ವಿಜಯ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಬೆಳವಣಿಗೆಯಿಂದ ತಮಿಳು ಚಿತ್ರರಂಗದಲ್ಲಿ ಹೊಸ ಸಂಚಲನ ಮೂಡಿದ್ದು, ವಿಶೇಷವಾಗಿ ಚಿತ್ರಮಂದಿರಗಳ ಮಾಲೀಕರಲ್ಲಿ ದೊಡ್ಡ ಆಸೆ ಚಿಗುರೊಡೆದಿದೆ. ವಿಜಯ್ ಕೂಡ ಸಿನಿಮಾ ರಂಗದ ಹಿನ್ನೆಲೆ ಹೊಂದಿರುವುದರಿಂದ, ಒಂದು ದೊಡ್ಡ ಬದಲಾವಣೆ ಬಗ್ಗೆ ಎಲ್ಲರ ಚಿತ್ತ ನೆಟ್ಟಿದೆ. ತಮಿಳುನಾಡಿನಲ್ಲಿ ದೊಡ್ಡ ನಟರ ಸಿನಿಮಾಗಳಿಗೆ ಮುಂಜಾನೆ 4 ಅಥವಾ 5 ಗಂಟೆಗೆ ಶೋ ನೀಡುವ ಸಂಪ್ರದಾಯವಿತ್ತು. ಆದರೆ, 2023ರ ಪೊಂಗಲ್…