ಮೊದಲ ಗೆಲುವನ್ನು 11 ಮಂದಿಗೆ ಅರ್ಪಿಸಿದ RCB
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಶುಭಾರಂಭ ಮಾಡಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ನ ಉದ್ಘಾಟನಾ ಪಂದ್ಯದಲ್ಲಿ ಎಸ್ಆರ್ಹೆಚ್ ತಂಡವನ್ನು ಬಗ್ಗು ಬಡಿದು ಆರ್‌ಸಿಬಿ ಗೆಲುವಿನ ಖಾತೆ ತೆರೆದಿದೆ. “ಈ ಗೆಲುವನ್ನು ನಾವು ಕಳೆದುಕೊಂಡ ಆ 11 ಅಭಿಮಾನಿಗಳಿಗೆ ಅರ್ಪಿಸುತ್ತೇವೆ” ಎಂದಿದ್ದಾರೆ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್. 2026ರ ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ 6 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿದ…