Headlines

ಕರ್ನಾಟಕ ಹವಾಮಾನ: 10 ಜಿಲ್ಲೆಗಳಲ್ಲಿ ನಾಳೆ ಸಾಧಾರಣ ಮಳೆ; ಉತ್ತರ ಕರ್ನಾಟದಲ್ಲಿ ಬಿಸಿಲಿನಬ್ಬರ – Kannada News | Karnataka weather alert moderate rain likely in 10 districts tomorrow

ಬೆಂಗಳೂರು, ಮೇ 08: ರಾಜ್ಯದ ಹಲವೆಡೆ ಬಿಸಿಲಿನ ಅಬ್ಬರದ ನಡುವೆಯೂ ಕರಾವಳಿ ಸೇರಿ ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಅಥವಾ ಮಧ್ಯಮ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಮುಂದಿನ ಮೂರು ದಿನಗಳ ಕಾಲ ಕರ್ನಾಟಕದಲ್ಲಿ ಮಳೆ ಮುಂದುವರಿಯಲಿದ್ದು, ಮೇ 11ರ ವರೆಗೂ ಕೆಲವೆಡೆ ಗುಡುಗು ಸಹಿತ ಮಳೆಯನ್ನು ಅಂದಾಜಿಸಲಾಗಿದೆ. ಅದಾಗಿಯೂ ಕರಾವಳಿ ಸೇರಿ ಉತ್ತರ ಒಳನಾಡು ಭಾಗದ ಜಿಲ್ಲೆಗಳಲ್ಲಿ ತೀವ್ರ ತಾಪಮಾನ ಕಂಡುಬರಲಿದೆ ಎನ್ನಲಾಗಿದೆ. ಎಲ್ಲೆಲ್ಲಿ ಮಳೆ? #ಮಳೆ #ಮುನ್ನೆಚ್ಚರಿಕೆ…

Read More

ರಿಷಭ್ ಪಂತ್ ಸೇರಿ 3 ಸ್ಟಾರ್ ಆಟಗಾರರಿಗೆ ಸಂಜೀವ್ ಗೋಯೆಂಕಾ ಕೋಕ್?

ಐಪಿಎಲ್ 2026ರ ಸೀಸನ್ ಲಕ್ನೋ ಸೂಪರ್ ಜೈಂಟ್ಸ್ (LSG) ಪಾಲಿಗೆ ಸಂಪೂರ್ಣ ನಿರಾಸೆ ಮೂಡಿಸಿದೆ. ಟೂರ್ನಿಯುದ್ದಕ್ಕೂ ತಡಕಾಡಿದ ಲಕ್ನೋ ತಂಡ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನಕ್ಕೆ ತೃಪ್ತಿಪಡಬೇಕಾಗಿ ಬಂತು. ಇಡೀ ಸೀಸನ್‌ನಲ್ಲಿ ಆಡಿದ 14 ಪಂದ್ಯಗಳ ಪೈಕಿ ಕೇವಲ 4ರಲ್ಲಿ ಮಾತ್ರ ಜಯಗಳಿಸಿದರೆ, ಬರೋಬ್ಬರಿ 10 ಪಂದ್ಯಗಳಲ್ಲಿ ಹೀನಾಯ ಸೋಲು ಅನುಭವಿಸಿತು. ಆರಂಭದಲ್ಲಿ ಸತತ ಎರಡು ಪಂದ್ಯಗಳನ್ನು ಗೆದ್ದರೂ, ಆ ನಂತರ ಸತತ 6 ಪಂದ್ಯಗಳಲ್ಲಿ ಸೋತಿದ್ದು ತಂಡದ ಪತನಕ್ಕೆ ಕಾರಣವಾಯಿತು. ಈ ಕಳಪೆ ಪ್ರದರ್ಶನದ ಬೆನ್ನಲ್ಲೇ ತಂಡದ…

Read More

Bengaluru Air Quality: ಬೆಂಗಳೂರು ಜೊತೆಗೆ ಮಂಗಳೂರಿನ ಏರ್ ಕ್ವಾಲಿಟಿಯಲ್ಲೂ ಸುಧಾರಣೆ

ಬೆಂಗಳೂರು, ಏಪ್ರಿಲ್ 03: ಕೆಲ ದಿನಗಳಿಂದ ಬೆಂಗಳೂರು ಸೇರಿದಂತೆ ಬಳ್ಳಾರಿ, ಮಂಗಳೂರಿನ ವಾಯುಗುಣಮಟ್ಟವೂ  (Bengaluru Air Quality) ಹದಗೆಟ್ಟಿತ್ತು. ಆದರೆ ಇಂದು ಸ್ವಲ್ಪ ಮಟ್ಟಿಗೆ ಏರ್ ಕ್ವಾಲಿಟಿ ಸುಧಾರಿಸಿದ್ದು, ನಿಟ್ಟುಸಿರು ಬಿಡುವಂತಾಗಿದೆ. ಆದರೂ ವಾಯು ಗುಣಮಟ್ಟ ಎಲ್​ಲೆಡೆಯೂ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಉಡುಪಿ, ಮಂಗಳೂರು ಸೇರಿದಂತೆ ಇಂದು ಹಲವೆಡೆ ವಾಯು ಗುಣಮಟ್ಟ ಸುಧಾರಿಸಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 134ಕ್ಕೆ ತಲುಪಿದೆ. ಬೆಂಗಳೂರಿನ AQI…

Read More

ಮಹಾಲಿಂಗಪುರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ: 13.34 ಲಕ್ಷ ಮೌಲ್ಯದ ಚಿನ್ನಾಭರಣ, ಮೊಬೈಲ್ ವಶ! – Kannada News

ಮಹಾಲಿಂಗಪುರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ಬಾಗಲಕೋಟೆ, ಜೂನ್ 03: ಜಿಲ್ಲೆಯ ರಬಕವಿಬನಹಟ್ಟಿ ತಾಲ್ಲೂಕಿನ ಮಹಾಲಿಂಗಪುರ ಠಾಣಾ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಒಟ್ಟು 13.34 ಲಕ್ಷ ರೂಪಾಯಿ ಮೌಲ್ಯದ ಕಳುವಾಗಿದ್ದ ಚಿನ್ನಾಭರಣ ಹಾಗೂ ಮೊಬೈಲ್‌ಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಮುಖ್ಯಾಂಶಗಳು ಮಹಾಲಿಂಗಪುರ ಪೊಲೀಸರಿಂದ 13.34 ಲಕ್ಷ ರೂಪಾಯಿ ಮೌಲ್ಯದ ಭರ್ಜರಿ ಮಾಲು ರಿಕವರಿ. ಸಿಇಐಆರ್ ಪೋರ್ಟಲ್ ಮೂಲಕ ಕಳುವಾಗಿದ್ದ 30 ಮೊಬೈಲ್ ಫೋನ್‌ಗಳ ಯಶಸ್ವಿ ಪತ್ತೆ. ಪೊಲೀಸ್ ಸಿಬ್ಬಂದಿಯ ಭರ್ಜರಿ ಕಾರ್ಯಕ್ಷಮತೆಗೆ ಎಸ್‌ಪಿ ಸಿದ್ದಾರ್ಥ ಗೋಯಲ್ ಬಹುಮಾನ ಘೋಷಣೆ….

Read More

Virat Kohli: ನಿಜವಾಗ್ಲೂ ಖುಷಿಯಾಯ್ತು… ಅರ್ಹ ಆಟಗಾರನಿಗೆ POTT ಪ್ರಶಸ್ತಿ ಸಿಕ್ಕಿದೆ..!

T20 World Cup 2026: ಟಿ20 ವಿಶ್ವಕಪ್​ನ ಫೈನಲ್​ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡವನ್ನು ಬಗ್ಗು ಬಡಿದು ಟೀಮ್ ಇಂಡಿಯಾ ಮೂರನೇ ಬಾರಿಗೆ ಟಿ20 ವಿಶ್ವಕಪ್ ಕಿರೀಟವನ್ನು ಮುಡಿಗೇರಿಸಿಕೊಂಡಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ಅಗ್ರ ಕ್ರಮಾಂಕದ ಮೂವರು ಅರ್ಧಶತಕ ಬಾರಿಸಿದ್ದರು. ಅದರಲ್ಲೂ ವಿಸ್ಫೋಟಕ ಇನಿಂಗ್ಸ್ ಆಡಿದ ಸಂಜು ಸ್ಯಾಮ್ಸನ್ 46 ಎಸೆತಗಳಲ್ಲಿ 8 ಭರ್ಜರಿ ಸಿಕ್ಸರ್ ಹಾಗೂ 5 ಫೋರ್​ಗಳೊಂದಿಗೆ 89 ರನ್ ಚಚ್ಚಿದ್ದರು….

Read More

ಒಂದೇ ಬೈಕ್‌ನಲ್ಲಿ 5 ಜನ ಸವಾರಿ! 31 ಸಾವಿರ ರೂ. ದಂಡ ಹಾಕಿದ ಪೊಲೀಸರು – Kannada News | UP Bike Stunt: 5 Youths on Single Bike Goes Viral, Police Impose 31,000 Fine

ಉತ್ತರ ಪ್ರದೇಶ, ಡಿ.26: ಉತ್ತರ ಪ್ರದೇಶದ (UP bike stunt) ರಾಷ್ಟ್ರೀಯ ಹೆದ್ದಾರಿಯಲ್ಲಿ ಒಂದೇ ಬೈಕ್​​ನಲ್ಲಿ 5 ಜನ ಹೋಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ರಸ್ತೆ ಸಂಚಾರ ನಿಯಮವನ್ನು ಉಲ್ಲಂಘಿಸಿ, ಐದು ಹುಡುಗರು ಒಂದೇ ಬೈಕ್​​ನಲ್ಲಿ ಹೋಗಿದ್ದಾರೆ. ಇದೀಗ ಈ ರೀತಿಯ ಸಂಚಾರ ಸಾರ್ವಜನಿಕರಲ್ಲಿ ಹಾಗೂ ವಾಹನ ಸವಾರರಲ್ಲಿ ಭೀತಿ ಹುಟ್ಟಿಸಿದೆ. ಹಾಪುರದ ರಾಷ್ಟ್ರೀಯ ಹೆದ್ದಾರಿ 9 ರಲ್ಲಿ ಈ ಘಟನೆ ನಡೆದಿದೆ. ಈ ವಿಡಿಯೋದಲ್ಲಿ 5 ಜನ ಯುವಕರು ಅಪಾಯಕಾರಿ ಸವಾರಿ…

Read More

TV9 Kannada News Live: ಬಂಗಾಳದಲ್ಲಿ ಗೋ ಹತ್ಯೆ ನಿಷೇಧಕ್ಕೆ ಹಿಂದೂಗಳದ್ದೇ ತರಕಾರು, ಕಾನ್ ಫಿಲ್ಮ್ ಫೆಸ್ಟಿವಲ್‌ಗೆ ಆರಾಧ್ಯ ಬಚ್ಚನ್ ಎಂಟ್ರಿ, ಇವು ಈ ಹೊತ್ತಿನ ಟಾಪ್ ಸುದ್ದಿಗಳು – Kannada News | Cow Slaughter Debate, Aishwarya’s Cannes Moment and Kohli Head Clash Dominate News Cycle Today’s Biggest Headlines Across India

ನವದೆಹಲಿ, ಮೇ 23: ಬಿಜೆಪಿ ಅಧಿಕಾರದ ಗದ್ದುಗೆ ಏರಿರುವ ರಾಜ್ಯಗಳಲ್ಲಿ ಮೊದಲಿಗೆ ಸರ್ಕಾರ ಮಾಡುವ ಕೆಲಸವೇ ಗೋ ಹತ್ಯೆ(Cattle Slaughter) ನಿಷೇಧ. ಯಾರ ಒಪ್ಪಿಗೆ ಇರಲಿ ಬಿಡಲಿ ಜಾನುವಾರು ವಧೆಯನ್ನು ತಡೆಯುವುದೇ ಅವರ ಪ್ರಮುಖ ಗುರಿಯಾಗಿದೆ. ಹಾಗೆಯೇ ಸುವೇಂದು ಅಧಿಕಾರಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ತಕ್ಷಣವೇ ಜಾನುವಾರು ವಧೆ ನಿಷೇಧವನ್ನು ಜಾರಿಗೆ ತಂದಿದ್ದಾರೆ. ಬೇರೆ ರಾಜ್ಯಗಳಲ್ಲಿ ಮುಸ್ಲಿಮರು ಇದಕ್ಕೆ ಆಕ್ಷೇಪ ಎತ್ತಿದ್ದರೂ ಕೂಡ, ಪಶ್ಚಿಮ ಬಂಗಾಳದಲ್ಲಿ ಇದಕ್ಕೆ ಮುಸ್ಲಿಂ ಸಂಘಟನೆಗಳು ಸೇರಿದಂತೆ ಎಲ್ಲರೂ ಒಪ್ಪಿಗೆ…

Read More

ಬೆಂಗಳೂರಿನಲ್ಲಿ ಚಾಕಲೇಟ್ ನೀಡಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ ಪ್ರಾಧ್ಯಾಪಕ ಅಬ್ದುಲ್​​ಗೆ ಚಪ್ಪಲಿ ಏಟು

ಬೆಂಗಳೂರು, ಮಾ.26: ನೆಲಮಂಗಲ ತಾಲೂಕಿನ ಬೇಗೂರು ಸಿದ್ಧಾರ್ಥ ಮೆಡಿಕಲ್ ಕಾಲೇಜಿನಲ್ಲಿ ಅಧ್ಯಾಪಕರೊಬ್ಬರು ವಿದ್ಯಾರ್ಥಿನಿಯೊಬ್ಬಳಿಗೆ ತರಗತಿಯಲ್ಲೇ ಪ್ರಪೋಸ್ ಮಾಡಿರುವ ಘಟನೆ ನಡೆದಿದೆ. ಪ್ರಾಧ್ಯಾಪಕ ಅಬ್ದುಲ್ ಎಂಬಾತ ಚಾಕಲೇಟ್ ನೀಡಿ ವಿದ್ಯಾರ್ಥಿನಿಗೆ ಪ್ರೀತಿ ನಿವೇದನೆ ಮಾಡಿದ್ದಾನೆ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ವಿದ್ಯಾರ್ಥಿನಿ ಪ್ರಾಂಶುಪಾಲರೊಂದಿಗೆ ಮಾತನಾಡುವಂತೆ ತಿಳಿಸಿದ್ದಾಳೆ. ಈ ಘಟನೆಯಿಂದ ರೊಚ್ಚಿಗೆದ್ದ ವಿದ್ಯಾರ್ಥಿಗಳು ಪ್ರಾಧ್ಯಾಪಕ ಅಬ್ದುಲ್‌ನನ್ನು ಕಾಲೇಜು ಆವರಣದಲ್ಲಿ ಅಟ್ಟಾಡಿಸಿ ಚಪ್ಪಲಿಯಿಂದ ಹಲ್ಲೆ ನಡೆಸಿದ್ದಾರೆ. ಈ ವೇಳೆ ಅಬ್ದುಲ್ ಸ್ಥಳದಿಂದ ಕಾಲ್ಕಿತ್ತಿದ್ದಾನೆ. ಪ್ರಸ್ತುತ ಪ್ರಾಧ್ಯಾಪಕ ಅಬ್ದುಲ್ ತಲೆಮರೆಸಿಕೊಂಡಿದ್ದು, ನೆಲಮಂಗಲ ಗ್ರಾಮಾಂತರ ಪೊಲೀಸರು…

Read More

ಬಾಲಿವುಡ್​ ಖಾನ್​​ಗಳ ಬುಡ ಅಲ್ಲಾಡಿಸುತ್ತಿರುವ ಮೂವರು ಸ್ಟಾರ್ ನಟರು – Kannada News | Ranbir, Ranveer and Vicky Kaushal giving tough fight to Bollywood Khans

ಬಾಲಿವುಡ್ (Bollywood) ಚಿತ್ರರಂಗದಲ್ಲಿ ಕಳೆದ ಮೂರು ದಶಕಗಳಿಂದ ಶಾರುಖ್ ಖಾನ್, ಸಲ್ಮಾನ್ ಖಾನ್ ಮತ್ತು ಆಮೀರ್ ಖಾನ್ ಅವರದ್ದೇ ಪಾರುಪತ್ಯ. ‘ದಿ ಥ್ರೀ ಖಾನ್ಸ್’ ಎಂದೇ ಅವರು ಖ್ಯಾತರು. ಆದರೆ ಸಮಯ ಬದಲಾಗುತ್ತಲೇ ಇರುತ್ತದೆ. ಇದೀಗ ಖಾನ್​​ಗಳ ಸ್ಥಾನವನ್ನು ಬೇರೆಯವರು ತುಂಬುವ ಸಮಯ ಸನಿಹ ಬಂದಂತೆ ತೋರುತ್ತಿದೆ. ಈಗಿನ ಕಾಲಘಟ್ಟದಲ್ಲಿ ಈ ‘ಮೂವರು ಖಾನ್’ಗಳ ಜನಪ್ರಿಯತೆಗೆ ಸರಿಸಮನಾಗಿ ಹೊಸ ತಲೆಮಾರಿನ ನಟರು ಬೆಳೆಯುತ್ತಿದ್ದಾರೆಯೇ ಎಂಬ ಚರ್ಚೆ ಶುರುವಾಗಿದೆ. ಮೂವರು ಖಾನ್​​ಗಳಿಗೆ ಭಾರಿ ಪೈಪೋಟಿಯನ್ನು ನೀಡುತ್ತಿರುವ ಬಾಲಿವುಡ್ ನಟರೆಂದರೆ…

Read More

ವಿದೇಶದಲ್ಲಿ ನಡೆಯುವ ಟಿ20 ಲೀಗ್​ನಲ್ಲಿ ತಂಡ ಖರೀದಿಸಿದ ರಾಹುಲ್ ದ್ರಾವಿಡ್ – Kannada News | Rahul Dravid Co Owner of European T20 League Team; R. Ashwin Captains Dublin Guardians

ತಮ್ಮ ಕೋಚಿಂಗ್​ ಅಡಿಯಲ್ಲಿ ಟೀಂ ಇಂಡಿಯಾವನ್ನು 2024 ರ ಟಿ20 ವಿಶ್ವಕಪ್ ಚಾಂಪಿಯನ್ ಮಾಡಿದ್ದ ಕನ್ನಡಿಗ ರಾಹುಲ್​ ದ್ರಾವಿಡ್ (Rahul Dravid) ಅದಾದ ಬಳಿಕ ಮುಖ್ಯ ಕೋಚ್ ಹುದ್ದೆಗೆ ರಾಜೀನಾಮೆ ನೀಡಿದ್ದರು. ಅದಾದ ನಂತರ ಐಪಿಎಲ್ (IPL) ರಾಜಸ್ಥಾನ್ ರಾಯಲ್ಸ್ ತಂಡದ ಮುಖ್ಯ ಕೋಚ್ ಆಗಿದ್ದ ದ್ರಾವಿಡ್ ಆ ಹುದ್ದೆಗೂ ವಿದಾಯ ಹೇಳಿದ್ದರು. ಪ್ರಸ್ತುತ ಕ್ರಿಕೆಟ್​ನಿಂದ ವಿರಾಮ ತೆಗೆದುಕೊಂಡಿರುವ ದ್ರಾವಿಡ್, ತಮ್ಮ ಮಕ್ಕಳಿಗೆ ಕ್ರಿಕೆಟ್ ಪಾಠ ಹೇಳಿಕೊಡುತ್ತಿದ್ದಾರೆ ಎಂಬ ಸುದ್ದಿ ಇದೆ. ಇದೆಲ್ಲದರ ನಡುವೆ ಮತ್ತೆ ಕ್ರಿಕೆಟ್…

Read More