Headlines

ಅಬ್ರಾರ್ ಅಹ್ಮದ್​ನ ಕಾವ್ಯ ಮಾರನ್ ಖರೀದಿಸಿದ್ಯಾಕೆ? ಮೌನ ಮುರಿದ ಹೆಡ್ ಕೋಚ್

ಇಂಗ್ಲೆಂಡ್​ನಲ್ಲಿ ನಡೆಯುವ ದಿ ಹಂಡ್ರೆಡ್ (The Hundred) ಲೀಗ್ ಪ್ರಸ್ತುತ ಭಾರತದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ಇದಕ್ಕೆ ಕಾರಣ, ದಿ ಹಂಡ್ರೆಡ್ ಲೀಗ್​ನಲ್ಲಿ ಫ್ರಾಂಚೈಸಿಯನ್ನು ಖರೀದಿಸಿರುವ ಭಾರತದ ಕಾವ್ಯ ಮಾರನ್ (Kavya Maran). ವಾಸ್ತವವಾಗಿ ಮುಂಬರುವ ದಿ ಹಂಡ್ರೆಡ್ ಲೀಗ್​ಗೆ ನಿನ್ನೆ ಹರಾಜು ನಡೆಯಿತು. ಈ ಹರಾಜಿನಲ್ಲಿ ಕಾವ್ಯ ಮಾರನ್ ಒಡೆತನದ ಸನ್​ರೈಸರ್ಸ್​ ಲೀಡ್ಸ್ (Sunrisers Leeds) ಫ್ರಾಂಚೈಸಿ ಪಾಕಿಸ್ತಾನದ ಸ್ಪಿನ್ನರ್ ಅಬ್ರಾರ್ ಅಹ್ಮದ್ (Abrar Ahmed) ಅವರನ್ನು ಖರೀದಿ ಮಾಡಿತು. ಪಹಲ್ಗಾಮ್ ದಾಳಿಯ ಬಳಿಕ ಪಾಕಿಸ್ತಾನದೊಂದಿಗೆ…

Read More

ಗ್ಯಾಸ್ ಬೆನ್ನಲ್ಲೇ ಬೆಂಗಳೂರಿನ ಜನರಿಗೆ ಕಾದಿದೆ ಮತ್ತೊಂದು ಶಾಕ್!

ಬೆಂಗಳೂರು, ಮಾರ್ಚ್​​ 13: ಇಸ್ರೇಲ್​, ಅಮೆರಿಕ ಮತ್ತು ಇರಾನ್​ ಯುದ್ಧದ ಕಿಚ್ಚು ಈಗಾಗಲೇ ಭಾರತದ ಅಡುಗೆ ಮನೆಯ ಬಾಗಿಲು ತಟ್ಟಿದೆ. ಯುದ್ಧದ ಎಫೆಕ್ಟ್​​ಗೆ ರಾಜ್ಯದಲ್ಲಿ ಕಮರ್ಷಿಯಲ್​ ಗ್ಯಾಸ್​​​ನ ಅಭಾವ ಸೃಷ್ಟಿಯಾಗಿದೆ. ಈ ಮಧ್ಯೆ ಹೋಟೆಲ್​​ ನಂತರ ಇದೀಗ ಅಡುಗೆ ಎಣ್ಣೆ (cooking oil) ಅಂಗಡಿಯ ಸರದಿ. ಗ್ಯಾಸ್​​ನಂತೆ ಅಡುಗೆ ಆಯಿಲ್ ಅಂಗಡಿಗಳು ಬಂದ್ ಆಗುವ ಸಾಧ್ಯತೆ ಇದೆ. ಆ ಮೂಲಕ ಸಿಟಿ ಜನರಿಗೆ ಮತ್ತೊಂದು ಶಾಕ್​​ ಎದುರಾಗಿದೆ. ಕಳೆದ ನಾಲ್ಕೈದು ದಿನಗಳಿಂದ ಕಮರ್ಷಿಯಲ್​ ಸಿಲಿಂಡರ್​ಗಳ ಪೂರೈಕೆಯಲ್ಲಿ ವ್ಯತ್ಯಯ…

Read More

‘ಉಸ್ತಾದ್ ಭಗತ್ ಸಿಂಗ್’ ಪ್ರೀ ರಿಲೀಸ್ ಇವೆಂಟ್​​ಗೆ ದಿನಾಂಕ ನಿಗದಿ

ಪವನ್ ಕಲ್ಯಾಣ್ (Pawan Kalyan) ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗಲಿದೆ. ಪವನ್ ಕಲ್ಯಾಣ್, ಆಂಧ್ರ ಪ್ರದೇಶದ ಡಿಸಿಎಂ ಆದ ಬಳಿಕ ಬಿಡುಗಡೆ ಆಗುತ್ತಿರುವ ಅವರ ಮೂರನೇ ಸಿನಿಮಾ ಇದಾಗಿದೆ. ರಣ್ವೀರ್ ಸಿಂಗ್ ನಟನೆಯ ‘ಧುರಂಧರ್ 2’ ಸಿನಿಮಾದ ಎದುರು ‘ಉಸ್ತಾದ್ ಭಗತ್ ಸಿಂಗ್’ ಬಿಡುಗಡೆ ಆಗುತ್ತಿದ್ದು, ‘ಧುರಂಧರ್ 2’ಗೆ ಪೈಪೋಟಿ ನೀಡಲು ಭಾರಿ ಪ್ರಚಾರವನ್ನೇ ಚಿತ್ರತಂಡ ಮಾಡಬೇಕಿದೆ. ಆದರೆ ಈ ವರೆಗೂ ಸಿನಿಮಾದ ಮುಖ್ಯ ಆಕರ್ಷಣೆಯಾಗಿರುವ ಪವನ್ ಕಲ್ಯಾಣ್ ಪ್ರಚಾರಕ್ಕೆ…

Read More

‘ಶ್ರೀ ಗಂಧದ ಗುಡಿ’ ಧಾರಾವಾಹಿಯಿಂದ ಹೊರ ನಡೆದ ಸಂಜನಾ ಬುರ್ಲಿ; ಮುಂದೇನು?

ಸಂಜನಾ ಬುರ್ಲಿ (Sanjana Burli) ಅವರು ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯನ್ನು ಅರ್ಧಕ್ಕೆ ತೊರೆದು ಶಾಕ್ ಕೊಟ್ಟಿದ್ದರು. ಆ ಬಳಿಕ ‘ಶ್ರೀ ಗಂಧದ ಗುಡಿ’ ಧಾರಾವಾಹಿಯ ಭಾಗ ಆಗಿದ್ದರು. ಶಾಕಿಂಗ್ ವಿಷಯ ಏನೆಂದರೆ, ಈಗ ಅವರು ಈ ಸೀರಿಯಲ್​​ನಿಂದಲೂ ಹೊರ ನಡೆದಿದ್ದಾರೆ. ಇದು ಅನೇಕರಿಗೆ ಅಚ್ಚರಿ ಮೂಡಿಸಿದೆ. ಧಾರಾವಾಹಿಯ ಕಥೆ ಏನು ಎಂಬ ಆತಂಕ ಮೂಡಿದ್ದು, ಅದಕ್ಕೆ ಉತ್ತರವೂ ಸಿಕ್ಕಿದೆ. ‘ಶ್ರೀ ಗಂಧದ ಗುಡಿ’ ಧಾರಾವಾಹಿ ತಮಿಳು ಸೀರಿಯಲ್​​ನ ರಿಮೇಕ್. ಈ ಸೀರಿಯಲ್​​ನಲ್ಲಿ ಶಿಶಿರ್, ಸಂಜನಾ ಮೊದಲಾದವರು ನಟಿಸಿದ್ದಾರೆ….

Read More

ಪಾರ್ಟಿಗೆಂದು ಹೋದವ ಸಿಕ್ಕಿದ್ದು ಶವವಾಗಿ: ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಿದ್ಯಾರು?

ಚಾಮರಾಜನಗರ, ಮಾರ್ಚ್​​ 13: ಗೆಳೆಯನ ಜೊತೆ ಬೈಕ್​​ ಏರಿ ಪಾರ್ಟಿಗೆ ಹೋಗಿದ್ದ ವ್ಯಕ್ತಿಯೋರ್ವ ಬರ್ಬರವಾಗಿ ಕೊಲೆಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣಕ್ಕೆ ಹೊಂದಿಕೊಂಡಂತಿರುವ ದೊಡ್ಡಕೆರೆ ಏರಿ ಬಳಿ ನಡೆದಿದೆ. ಗುಂಡ್ಲುಪೇಟೆಯ ಮೂಖಹಳ್ಳಿ ಗ್ರಾಮದ ನಂಜುಂಡಸ್ವಾಮಿ (23) ಮೃತ ವ್ಯಕ್ತಿಯಾಗಿದ್ದು, ಕತ್ತು ಕೊಯ್ದು ಹತ್ಯೆ ಮಾಡಿರುವ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ. ಅಜಯ್​ ಎಂಬಾತ ನಂಜುಂಡಸ್ವಾಮಿಯನ್ನು ಪಾರ್ಟಿಗೆಂದು ಕರೆದೊಯ್ದಿದ್ದ ಎನ್ನಲಾಗಿದ್ದು, ಅಲ್ಲಿ ನಡೆದಿದ್ದಾರೂ ಏನು ಎಂಬ ಪ್ರಶ್ನೆ ಈಗ ಉದ್ಭವಿಸಿದೆ. ನಂಜುಂಡಸ್ವಾಮಿ ಬೆಂಗಳೂರು, ನಂಜನಗೂಡು ಹೀಗೆ ಹಲವೆಡೆ…

Read More

ರಾಜ್ಯದ 30 ಮಂದಿ ಕೈದಿಗಳಿಗೆ ಜೈಲಿಂದ ಬಿಡುಗಡೆ ಭಾಗ್ಯ: ಸನ್ನಡತೆ ಆಧಾರದಲ್ಲಿ ರಿಲೀಸ್​​

ಬೆಂಗಳೂರು, ಮಾರ್ಚ್​​ 13: ರಾಜ್ಯದ ವಿವಿಧ ಕಾರಾಗೃಹಗಳಲ್ಲಿ ಶಿಕ್ಷೆ ಅನುಭವಿಸುತ್ತಿರುವ 30 ಜೀವಾವಧಿ ಕೈದಿಗಳನ್ನು ಉತ್ತಮ ನಡೆಗುಣದ ಆಧಾರದ ಮೇಲೆ ಮುಂಗಡವಾಗಿ ಬಿಡುಗಡೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಪರಿಶೀಲನಾ ಸಮಿತಿ (Life Convict Review – LCR) ಶಿಫಾರಸಿನ ಮೇರೆಗೆ ರಾಜ್ಯ ಸರ್ಕಾರ ಈ ಕುರಿತು ಆದೇಶ ಹೊರಡಿಸಿದ್ದು, ಸಂವಿಧಾನದ ಆರ್ಟಿಕಲ್​​ 161 ಅನ್ವಯ ರಾಜ್ಯಪಾಲರ ಅನುಮೋದನೆಯೂ ಇದಕ್ಕೆ ದೊರೆತಿದೆ. ವಿವಿಧ ಕೇಂದ್ರ ಕಾರಾಗೃಹಗಳಿಂದ ಬಂದ 54 ಪ್ರಕರಣಗಳನ್ನು ಪರಿಶೀಲಿಸಿದ LCR ಸಮಿತಿ, ಅವುಗಳಲ್ಲಿ 30 ಜೀವಾವಧಿ…

Read More

ದೇಶದ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ನವೀಕರಿಸಬಹುದಾದ ಇಂಧನದ್ದೇ ಅಗ್ರ ಪಾಲು!

ನವದೆಹಲಿ, ಮಾರ್ಚ್​ 13: ಭಾರತದ ಸ್ಥಾಪಿತ ವಿದ್ಯುತ್ ಸಾಮರ್ಥ್ಯದಲ್ಲಿ ಪ್ರಸ್ತುತ ಪಳೆಯುಳಿಕೆಗಿಂತ ಪಳೆಯುಳಿಕೆಯೇತರ, ನವೀಕರಿಸಬಹುದಾದ ಇಂಧನ ಪಾಲೇ ಹೆಚ್ಚಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ (Pralhad Joshi) ಜೋಶಿ ತಿಳಿಸಿದ್ದಾರೆ. ಎಷ್ಟಿದೆ ನವೀಕರಿಸಬಹುದಾದ ಇಂಧನ? ದೇಶದ ಒಟ್ಟು ವಿದ್ಯುತ್ ಉತ್ಪಾದನೆಯಲ್ಲಿ ಪಳೆಯುಳಿಕೆಯೇತರ ಇಂಧನ ಶೇ.52.3ರಷ್ಟಿದ್ದರೆ, ನವೀಕರಿಸಬಹುದಾದ ಇಂಧನ ಶೇ.50.6ರಷ್ಟಿದೆ. ಪಳೆಯುಳಿಕೆ ಇಂದಿನ ಮೂಲದಿಂದ ಶೇ.47.7ರಷ್ಟು ವಿದ್ಯುತ್ ಉತ್ಪಾದನಾ ಸಾಮರ್ಥ್ಯ ಕಂಡುಬಂದಿದೆ. 2026ರ ಜನವರಿ ಅಂತ್ಯದವರೆಗೆ ಭಾರತ 52,536.49 ಮೆಗಾವ್ಯಾಟ್ ಸ್ಥಾಪಿತ ವಿದ್ಯುತ್…

Read More

Brain Teaser: ನೀವು ಗಣಿತದಲ್ಲಿ ಪಂಟರಾಗಿದ್ರೆ ಈ ಲೆಕ್ಕ ಬಿಡಿಸಿ ಜಾಣರು ಎನಿಸಿಕೊಳ್ಳಿ

ಈಗಂತೂ ಆಪ್ಟಿಕಲ್‌ ಇಲ್ಯೂಷನ್‌ (Optical Illusion), ಬ್ರೈನ್‌ ಟೀಸರ್‌ನಂತಹ ಒಗಟಿನ ಆಟಗಳು ಟ್ರೆಂಡಿಂಗ್‌ನಲ್ಲಿವೆ. ಒಂದಕ್ಕಿಂತ ಒಂದು ಒಗಟಿನ ಚಿತ್ರಗಳು ಟ್ರಿಕ್ಕಿಯಾಗಿದ್ದು, ಬಿಡಿಸುವುದು ಕಷ್ಟಕರ. ಆದರೆ ನಿಮ್ಮ ಬುದ್ಧಿವಂತಿಕೆಗೆ ಸವಾಲೊಡ್ಡುವಂತಹ ಇಂತಹ ಆಟಗಳನ್ನು ಆಡುವ ಮಜಾನೇ ಬೇರೆ. ಇದೀಗ ಗಣಿತದ ಲೆಕ್ಕವನ್ನು ನೀಡಲಾಗಿದ್ದು, ನೀವು ಲೆಕ್ಕ ಬಿಡಿಸೋದರಲ್ಲಿ ಪಂಟರಾಗಿದ್ದರೆ ಈ ಒಗಟು ಬಿಡಿಸಿ ಸರಿಯಾದ ಉತ್ತರ ಹೇಳಿ. ಒಗಟಿನ ಪ್ರಶ್ನೆ ಹೀಗಿದೆ ನೋಡಿ ನೋಡೋದಕ್ಕೆ ಸುಲಭ ಎನಿಸಿದರೂ ಉತ್ತರ ಹುಡುಕುವ ಅಷ್ಟು ಸುಲಭವಲ್ಲ. ಈ ಬ್ರೈನ್ ಟೀಸರ್ ಒಗಟಿನ…

Read More

ಕುರ್ಚಿ ಕಿತ್ತಾಟದ ನಡುವೆ ಮುಂದಿನ ರಾಜಕೀಯ ಜೀವನದ ಬಗ್ಗೆ ಸಿಎಂ ಸಿದ್ದರಾಮಯ್ಯ ಖಡಕ್ ಮಾತು!

ಮೈಸೂರು, ಮಾರ್ಚ್ 13: ಕರ್ನಾಟಕ ಕಾಂಗ್ರೆಸ್‌ನಲ್ಲಿ (Congress) ಅಧಿಕಾರ ಹಂಚಿಕೆ ಕುರಿತ ಚರ್ಚೆಗಳು ಜೋರಾಗಿರುವ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಮ್ಮ ರಾಜಕೀಯ ಜೀವನದ ಕುರಿತು ಮಹತ್ವದ ಹೇಳಿಕೆ ನೀಡಿದ್ದಾರೆ. ನನ್ನ ಉಸಿರು ಇರುವವರೆಗೂ ರಾಜಕೀಯದಲ್ಲೇ ಇರುತ್ತೇನೆ ಮತ್ತು ಜನರ ಸೇವೆ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ಜಿಲ್ಲೆಯ ವರುಣಾ ಕ್ಷೇತ್ರ ವ್ಯಾಪ್ತಿಯ ವರಕೋಡು ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜಕೀಯ ಜೀವನದ ಬಗ್ಗೆ ಮನಬಿಚ್ಚಿ ಮಾತನಾಡಿದರು. ರಾಜಕೀಯದಲ್ಲಿ ಗೆಲುವು-ಸೋಲು ಸಹಜವಾದದ್ದು ಎಂದು…

Read More

ವಿದ್ಯಾರ್ಥಿನಿಯರು ಬಟ್ಟೆ ಬದಲಾಯಿಸುವಾಗ ಕದ್ದು ನೋಡಿದ ಆರೋಪದಲ್ಲಿ ಥಳಿಸಿದ ಸ್ಥಳೀಯರು: ಹೃದಯಾಘಾತದಿಂದ ಯುವಕ ಸಾವು

ಬಾಗಲಕೋಟೆ, ಮಾರ್ಚ್ 13: ಬಾಗಲಕೋಟೆ (Bagalkot) ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ಸರ್ಕಾರಿ ಹೆಣ್ಣುಮಕ್ಕಳ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮದ ವೇಳೆ ನಡೆದ ಗಲಾಟೆಯಿಂದ ಯುವಕನೊಬ್ಬ ಸಾವಿಗೀಡಾಗಿರುವುದು ತಡವಾಗಿ ಬೆಳಕಿಗೆ ಬಂದಿದೆ. ಮೃತ ಯುವಕನನ್ನು ಸಾವಳಗಿ ಗ್ರಾಮದ ಸುದೀಪ್ ಪಾಂಗೆ (19) ಎಂದು ಗುರುತಿಸಲಾಗಿದೆ. ಮಾರ್ಚ್ 11ರ ರಾತ್ರಿ ಸಾವಳಗಿ ಗ್ರಾಮ ಪಂಚಾಯಿತಿ ಕಟ್ಟಡದ ಆವರಣದಲ್ಲಿ ಇರುವ ಸಾವಳಗಿ ಸರ್ಕಾರಿ ಹೆಣ್ಣುಮಕ್ಕಳ ಶಾಲೆಯಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯುತ್ತಿತ್ತು. ಈ ವೇಳೆ ಸುದೀಪ್ ಪಾಂಗೆ ಶಾಲೆಯ ಮೇಲ್ಛಾವಣಿ ಮೇಲೆ…

Read More