Google Fellowship 2026: ಗೂಗಲ್ನಿಂದ ಫೆಲೋಶಿಪ್ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ; 10 ಲಕ್ಷ ರೂ. ಸ್ಟೈಫಂಡ್ ಪಡೆಯುವ ಅವಕಾಶ
ಗೂಗಲ್‌ನಂತಹ ಜಾಗತಿಕ ಸಂಸ್ಥೆಯಲ್ಲಿ ಕೆಲಸ ಮಾಡುವುದು ಪ್ರತಿಯೊಬ್ಬ ವಿದ್ಯಾರ್ಥಿಯ ಕನಸು. ಈಗ ಆ ಕನಸನ್ನು ನನಸಾಗಿಸಿಕೊಳ್ಳಲು ಒಂದು ಸುವರ್ಣಾವಕಾಶ ಒದಗಿಬಂದಿದೆ. ಗೂಗಲ್ ವಿಶೇಷ ಫೆಲೋಶಿಪ್ ಪ್ರೋಗ್ರಾಂ ಅನ್ನು ಪ್ರಕಟಿಸಿದ್ದು, ಇದರಲ್ಲಿ ಭಾಗವಹಿಸುವವರಿಗೆ ಬರೋಬ್ಬರಿ 10 ಲಕ್ಷ ರೂಪಾಯಿಗಳವರೆಗೆ ಸ್ಟೈಫಂಡ್ ಪಡೆಯುವ ಅವಕಾಶವಿದೆ. ವಾಷಿಂಗ್ಟನ್ ಡಿಸಿಯಲ್ಲಿ ನಡೆಯಲಿರುವ ಈ ವಿಶೇಷ ಫೆಲೋಶಿಪ್ ಕಾರ್ಯಕ್ರಮವು ಕೇವಲ ಅನುಭವವನ್ನು ಮಾತ್ರವಲ್ಲದೆ, ಆರ್ಥಿಕವಾಗಿಯೂ ವಿದ್ಯಾರ್ಥಿಗಳಿಗೆ ದೊಡ್ಡ ಬೆಂಬಲ ನೀಡಲಿದೆ. ಪದವಿ ಓದುತ್ತಿರುವ ವಿದ್ಯಾರ್ಥಿಗಳಿಂದ ಹಿಡಿದು ಪಿಎಚ್‌ಡಿ ಸಂಶೋಧಕರವರೆಗೆ ಯಾರು ಬೇಕಾದರೂ ಇದಕ್ಕೆ ಅರ್ಜಿ…