ಮದುವೆಯಾಗ್ತೀನೆಂದು ನಂಬಿಸಿ 4 ವರ್ಷ ಲಿವ್-ಇನ್ ಸಂಬಂಧದಲ್ಲಿದ್ದು ಕೈಕೊಟ್ಟ ಪೊಲೀಸ್, ಮಹಿಳೆ ಆತ್ಮಹತ್ಯೆ
ಆಗ್ರಾ,ಮಾರ್ಚ್ 13: ಮದುವೆ(Marriage)ಯಾಗುವುದಾಗಿ ನಂಬಿಸಿ 4 ವರ್ಷ ಲಿವ್-ಇನ್ ಸಂಬಂಧದಲ್ಲಿದ್ದು ಪೊಲೀಸ್ ಕಾನ್ಸ್ಟೆಬಲ್ ಕೈಕೊಟ್ಟಿದ್ದಕ್ಕೆ ಮನನೊಂದು ಮಹಿಳೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ವರ್ಷಗಳ ಕಾಲ ಆತ ದೈಹಿಕ ಹಾಗೂ ಮಾನಸಿಕ ಶೋಷಣೆಯಾಗಿದೆ ಎಂದು ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾಜ್‌ಗಂಜ್ ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡುತ್ತಿರುವ ಜೆ.ವಿ. ಗೌತಮ್ ನಾಲ್ಕು ವರ್ಷಗಳಿಂದ ತನ್ನೊಂದಿಗೆ ಲಿವ್-ಇನ್ ಸಂಬಂಧದಲ್ಲಿದ್ದರು ಎಂದು ಮಹಿಳೆ ಹೇಳಿದ್ದಾಳೆ. ಮದುವೆಯಾಗುವ ಭರವಸೆ ನೀಡಿದ್ದ ತಾನು ಆತನೊಂದಿಗೆ ಪತ್ನಿಯಂತೆಯೇ ಸಂಸಾರ ನಡೆಸಿದ್ದೇನೆ ಬಳಿಕ…