RTO ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಎಸ್ಪಿ ಪ್ರಶ್ನೆಗಳಿಗೆ ಪ್ರಾದೇಶಿಕ ಸಾರಿಗೆ ಆಯುಕ್ತರೇ ತಬ್ಬಿಬ್ಬು! – Kannada News | Lokayukta Raid on Bengaluru South District RTO Office: Illegal Sand Mining Exposed in Haveri

RTO ಕಚೇರಿ ಸಿಬ್ಬಂದಿಗೆ ಲೋಕಾಯುಕ್ತ ಶಾಕ್​​Image Credit source: Tv9 Kannada

ರಾಮನಗರ, ಜೂನ್​​ 12: ಬೆಂಗಳೂರು ದಕ್ಷಿಣ ಜಿಲ್ಲಾ RTO ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿ ವಿರುದ್ಧ ಸಾಕಷ್ಟು ದೂರುಗಳು ಬಂದ ಹಿನ್ನೆಲೆಯಲ್ಲಿ ರೇಡ್​​ ನಡೆದಿದೆ. ಲೋಕಾಯುಕ್ತ ಎಸ್ಪಿ ಪಿ.ವಿ.ಸ್ನೇಹಾ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, RTO ಕಚೇರಿಯಲ್ಲಿ ಅಧಿಕಾರಿಗಳು ಇಂಚಿಂಚೂ ಪರಿಶೀಲನೆ ನಡೆಸಿದ್ದಾರೆ. ಕಳೆದ ಒಂದು ವರ್ಷದ ಅವಧಿಯಲ್ಲಿ 3ನೇ ಬಾರಿ ನಡೆದ ಲೋಕಾಯುಕ್ತ ದಾಳಿ ಇದಾಗಿದೆ.

ಮುಖ್ಯಾಂಶಗಳು

  • ಬೆಂಗಳೂರು ದಕ್ಷಿಣ ಜಿಲ್ಲಾ RTO ಕಚೇರಿ ಸಿಬ್ಬಂದಿಗೆ ಲೋಕಾಯುಕ್ತ ಶಾಕ್​​
  • ಲೋಕಾಯುಕ್ತ ಎಸ್​ಪಿ ಪಿ.ವಿ.ಸ್ನೇಹಾ ನೇತೃತ್ವದಲ್ಲಿ ಕಚೇರಿ ಮೇಲೆ ದಾಳಿ
  • ಒಂದು ವರ್ಷದ ಅವಧಿಯಲ್ಲಿ 3ನೇ ಬಾರಿ ನಡೆದ ಲೋಕಾಯುಕ್ತ ದಾಳಿ

ತಾಯಿಯ ಬದಲು ಮಗಳು ಕೆಲಸ!

ಇನ್ನು ಲೋಕಾಯುಕ್ತ ಅಧಿಕಾರಿಗಳ ದಾಳಿ ವೇಳೆ ಆರ್​​ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳು ಕೆಲಸ ಮಾಡುತ್ತಿರುವುದು ಬೆಳಕಿಗೆ ಬಂದಿದೆ. 3 ತಿಂಗಳು ಕಳೆದರೂ ಸ್ಮಾರ್ಟ್ ಕಾರ್ಡ್​​ ವಿತರಿಸದೇ ಕಚೇರಿಯಲ್ಲೇ ಶೇಖರಣೆ ಮಾಡಿರುವುದು ಗೊತ್ತಾಗಿದೆ. ಏಜೆಂಟ್​ಗಳ ಮೂಲಕ ಬಂದರೇ ಮಾತ್ರ RTO ಕಚೇರಿಯಲ್ಲಿ ಕೆಲಸ ನಡೆಯುತ್ತೆ ಎಂಬ ಆರೋಪವೂ ಇದ್ದು, ಏಜೆಂಟ್​ಗಳ ನಡುಗೆ ಹೊಡೆದಾಟ ನಡೆದರೂ ಪ್ರಾದೇಶಿಕ ಸಾರಿಗೆ ಆಯುಕ್ತರು ದೂರು ನೀಡಿಲ್ಲ. ಕಚೇರಿಯಲ್ಲಿ ಗುತ್ತಿಗೆ ನೌಕರರ ದರ್ಬಾರ್ ನಡೆಯುತ್ತಿದ್ದು, ಎಸ್​​ಪಿ ಸ್ನೇಹಾ ಪ್ರಶ್ನೆಗಳಿಗೆ ಆರ್​​ಟಿಒ ಟಿ.ಎ.ಸತೀಶ್ ಬಾಬು ತಬ್ಬಿಬ್ಬಾಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಬೆಂಗಳೂರು-ಚನ್ನಪಟ್ಟಣ ನಡುವೆ BMTC ಎಸಿ ಬಸ್; ಎಲ್ಲೆಲ್ಲಿ ಸ್ಟಾಪ್? ಟಿಕೆಟ್ ದರ ಎಷ್ಟು ಗೊತ್ತಾ?

ಹಾವೇರಿಯಲ್ಲೂ ಲೋಕಾಯುಕ್ತ ರೆಡ್​​

ಅಕ್ರಮ ಮರಳು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಗಳ ಮೇಲೆ ಹಾವೇರಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ರಾಣೇಬೆನ್ನೂರು ತಾಲ್ಲೂಕಿನ ನಿಟಪಳ್ಳಿ, ಚಂದಾಪುರ, ಬೆಲೂರು , ಐರಣಿ ಹರನಗಿರಿ, ಕೋಟಿಹಾಳ ಮತ್ತು ಚಿಕ್ಕಕುರವತ್ತಿ ಗ್ರಾಮದ ಬಳಿ ಸೇರಿ ಒಟ್ಟು 8 ಸ್ಥಳಗಳಲ್ಲಿ ಏಕಕಾಲಕ್ಕೆ ರೇಡ್​​ ನಡೆದಿದೆ. ಲೋಕಾಯುಕ್ತ ಪೊಲೀಸ್ ಡಿವೈಎಸ್ಪಿ ಮಧುಸೂದನ್ ನೇತ್ರತ್ವದಲ್ಲಿ ದಾಳಿ ನಡೆದಿದ್ದು, ಸುಮಾರು 12,779 ಮೆಟ್ರಿಕ್ ಟನ್ ಮರಳು, 2 ಜೆಸಿಬಿ ಹಾಗೂ 4 ತೆಪ್ಪಗಳನ್ನ ವಶಕ್ಕೆ ಪಡೆಯಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 3:08 pm, Fri, 12 June 26

Source link

ಪರಿಷತ್ ಚುನಾವಣೆ: ಅಡ್ಡ ಮತದಾನದ ಭೀತಿಯಲ್ಲಿ ಜೆಡಿಎಸ್, ಕಾಂಗ್ರೆಸ್ ಹೈ ಅಲರ್ಟ್: ರೆಸಾರ್ಟ್ ರಾಜಕೀಯ ಶುರುವಾಗೋ ಸಾಧ್ಯತೆ – Kannada News | Karnataka MLC Election 2026: Cross Voting Fears Grip Congress and JDS Ahead of June 18 Polls; Resort Politics Likely

ರೆಸಾರ್ಟ್ ರಾಜಕೀಯ ಶುರುವಾಗೋ ಸಾಧ್ಯತೆImage Credit source: tv9

ಬೆಂಗಳೂರು, ಜೂನ್ 12: ಜೂನ್ 18ರಂದು ನಡೆಯಲಿರುವ ಕರ್ನಾಟಕ ವಿಧಾನಪರಿಷತ್ ಚುನಾವಣೆಯ (Karnataka MLC Election) ಕಾವು ಜೋರಾಗಿದ್ದು, ಮೂರೂ ಪ್ರಮುಖ ರಾಜಕೀಯ ಪಕ್ಷಗಳಿಗೆ ಇದು ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ. ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಅಡ್ಡ ಮತದಾನ ಮತ್ತು ಕುದುರೆ ವ್ಯಾಪಾರದ ಭೀತಿ ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಜೆಡಿಎಸ್ (JDS) ಅನ್ನು ಆವರಿಸಿದೆ. ಶಾಸಕರನ್ನು ಹಿಡಿದಿಟ್ಟುಕೊಂಡು ಒಗ್ಗಟ್ಟು ಪ್ರದರ್ಶಿಸಲು ಎರಡೂ ಪಕ್ಷಗಳು ರೆಸಾರ್ಟ್ ರಾಜಕೀಯದ ಮೊರೆ ಹೋಗುವ ಸಾಧ್ಯತೆ ದಟ್ಟವಾಗಿದೆ. ವಿಧಾನಪರಿಷತ್ ಚುನಾವಣೆಯಲ್ಲಿ ಪ್ರತಿ ಶಾಸಕರ ಮತವೂ ನಿರ್ಣಾಯಕವಾಗಿದ್ದು, ಯಾವುದೇ ರೀತಿಯ ಮತ ವಿಭಜನೆ ಅಥವಾ ಅಡ್ಡ ಮತದಾನವನ್ನು ತಡೆಯುವುದು ಪಕ್ಷಗಳಿಗೆ ಸವಾಲಾಗಿದೆ.

ಮುಖ್ಯಾಂಶಗಳು

  • ಜೂನ್ 18ರ ವಿಧಾನಪರಿಷತ್ ಚುನಾವಣೆ ಹಿನ್ನೆಲೆ ಜೋರಾದ ರಾಜಕೀಯ ಚಟುವಟಿಕೆ
  • ಶಾಸಕರ ಹಿಡಿದಿಟ್ಟುಕೊಳ್ಳಲು ಕಾಂಗ್ರೆಸ್, ಜೆಡಿಎಸ್ ತಂತ್ರಗಾರಿಕೆ
  • ರೆಸಾರ್ಟ್ ರಾಜಕೀಯ ಶುರುವಾಗುವ ಸಾಧ್ಯತೆ

ಜೆಡಿಎಸ್ ಶಾಸಕರ ಸೆಳೆಯಲು ಕಾಂಗ್ರೆಸ್ ತಂತ್ರ

ವಿಶೇಷವಾಗಿ ಕಾಂಗ್ರೆಸ್ ಪಕ್ಷವು ತಮ್ಮ ಐದನೇ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಲು ಜೆಡಿಎಸ್ ಶಾಸಕರ ಮತಗಳನ್ನು ಸೆಳೆಯುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ಶಾಸಕರನ್ನು ಒಗ್ಗೂಡಿಸಿ, ಅವರಿಗೆ ಒಗ್ಗಟ್ಟಿನ ಸಂದೇಶ ರವಾನಿಸಲು ರೆಸಾರ್ಟ್‌ಗೆ ಸ್ಥಳಾಂತರಿಸುವ ಕುರಿತು ಜೆಡಿಎಸ್ ವಲಯದಲ್ಲಿ ಗಂಭೀರ ಚರ್ಚೆ ನಡೆದಿದೆ. ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರು ಈ ಕುರಿತು ಅಂತಿಮ ನಿರ್ಧಾರ ತೆಗೆದುಕೊಳ್ಳಲು ಇಂದು (ಜೂನ್ 12) ಸಂಜೆ ಶಾಸಕರ ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ರೆಸಾರ್ಟ್ ಪಾಲಿಟಿಕ್ಸ್ ಬಗ್ಗೆ ಪ್ರಮುಖ ನಿರ್ಧಾರ ಪ್ರಕಟವಾಗುವ ನಿರೀಕ್ಷೆಯಿದೆ.

ಇದೇ ರೀತಿ, ಕಾಂಗ್ರೆಸ್ ನಾಯಕರು ಕೂಡ ತಮ್ಮ ಶಾಸಕರ ಮೇಲೆ ತೀವ್ರ ನಿಗಾ ವಹಿಸಿದ್ದಾರೆ. ಮೈತ್ರಿ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಲು ಬಿಜೆಪಿ ಮತ್ತು ಜೆಡಿಎಸ್ ನಾಯಕರು ತೆರೆಮರೆಯ ಕಸರತ್ತು ನಡೆಸುತ್ತಿದ್ದಾರೆ ಎಂಬ ವರದಿಗಳ ಬೆನ್ನಲ್ಲೇ, ಕಾಂಗ್ರೆಸ್ ಶಾಸಕರು ಯಾರಿಗೂ ಸಂಪರ್ಕಕ್ಕೆ ಸಿಗದಂತೆ ನೋಡಿಕೊಳ್ಳುವ ಬಗ್ಗೆಯೂ ಚರ್ಚೆಗಳು ನಡೆಯುತ್ತಿವೆ. ಅಡ್ಡ ಮತದಾನವಾಗದಂತೆ ತಡೆಯುವುದು ಮತ್ತು ಗೆಲ್ಲುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯಲ್ಲಿ ಕುತ್ತು ಬಾರದಂತೆ ನೋಡಿಕೊಳ್ಳುವುದು ಕಾಂಗ್ರೆಸ್‌ನ ಪ್ರಮುಖ ಆದ್ಯತೆಯಾಗಿದೆ.

ಇದನ್ನೂ ಓದಿ: ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ

ಈ ಚುನಾವಣೆಯಲ್ಲಿ ಕಾಂಗ್ರೆಸ್ ಐದನೇ ಅಭ್ಯರ್ಥಿಯನ್ನು ಗೆಲ್ಲಿಸುವ ಗುರಿ ಹೊಂದಿದ್ದರೆ, ಜೆಡಿಎಸ್ ಕೂಡ ತನ್ನ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಲು ಶ್ರಮಿಸುತ್ತಿದೆ. ಬಿಜೆಪಿ ಕೂಡ ಈ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿದ್ದು, ತಮ್ಮ ಶಾಸಕರನ್ನು ಹಿಡಿದಿಟ್ಟುಕೊಳ್ಳುವ ಜವಾಬ್ದಾರಿ ಅದರ ಮೇಲೂ ಇದೆ. ಆದರೆ, ಪ್ರಮುಖವಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ನೇರ ಹಣಾಹಣಿಯ ವಾತಾವರಣ ಸೃಷ್ಟಿಯಾಗಿದ್ದು, ಈ ಎರಡೂ ಪಕ್ಷಗಳ ನಾಯಕರ ಮೇಲೆ ಶಾಸಕರನ್ನು ಸುರಕ್ಷಿತವಾಗಿರಿಸುವ ದೊಡ್ಡ ಜವಾಬ್ದಾರಿ ಇದೆ. ಒಟ್ಟಾರೆಯಾಗಿ, ಪರಿಷತ್ ಚುನಾವಣೆಯಲ್ಲಿ ಕುದುರೆ ವ್ಯಾಪಾರದ ಆತಂಕ ಮತ್ತು ಅಡ್ಡ ಮತದಾನದ ಭೀತಿಯನ್ನು ಎದುರಿಸಲು ರೆಸಾರ್ಟ್ ರಾಜಕೀಯ ಮತ್ತೆ ಮುನ್ನೆಲೆಗೆ ಬರುವ ಸಾಧ್ಯತೆ ಇದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

NEET UG Re Exam 2026 Date: ಜೂನ್ 21 ನೀಟ್ ಯುಜಿ ಮರು ಪರೀಕ್ಷೆ, ವಿದ್ಯಾರ್ಥಿಗಳಿಗೆ 15 ನಿಮಿಷ ಹೆಚ್ಚುವರಿ ಸಮಯ – Kannada News | NEET UG 2026 Re Exam to be held on 21st June; Hall Ticket to release on 14 June; Read more details

ನವದೆಹಲಿ, ಜೂನ್ 21:  ನೀಟ್ ಯುಜಿ(NEET UG) 2026ರ ಮರು ಪರೀಕ್ಷೆಯು ಜೂನ್ 21ರಂದು ನಡೆಯಲಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ವಿದ್ಯಾರ್ಥಿಗಳಿಗಾಗಿ ಎನ್​ಟಿಎ ವಿಶೇಷ ಕ್ರಮಗಳನ್ನು ಘೋಷಿಸಿದೆ. ಅಭ್ಯರ್ಥಿಗಳಿಗೆ ಹೆಚ್ಚುವರಿ 15 ನಿಮಿಷಗಳನ್ನು ನೀಡಲಾಗುತ್ತದೆ. ಮಧ್ಯಾಹ್ನ 2 ಗಂಟೆಯಿಂದ ಸಂಜೆ 5.15 ರವರೆಗೆ ಪರೀಕ್ಷೆ ನಡೆಯಲಿದೆ. ನೀಟ್ ಯುಜಿ ಪರೀಕ್ಷೆಗೆ ಹಾಜರಾಗಲು ಪ್ರವೇಶ ಪತ್ರಗಳನ್ನು ಜೂನ್ 14 ರಂದು ಬಿಡುಗಡೆ ಮಾಡಲಾಗುವುದು. ರಫ್​ ವರ್ಕ್​ಗೆ ಕೂಡ ಹೆಚ್ಚು ಸ್ಥಳಾವಕಾಶವನ್ನು ಪೇಪರ್​ನಲ್ಲಿ ನೀಡಲಾಗುತ್ತದೆ.

ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡಿದ ನಂತರ, ಅಭ್ಯರ್ಥಿಗಳು ಅಧಿಕೃತ NTA ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಅವುಗಳನ್ನು ಪಡೆಯಲು ಸಾಧ್ಯವಾಗುತ್ತದೆ. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ – neet.nta.nic.in ನಲ್ಲಿ ನೀಟ್ ಯುಜಿ ಮರು-ಪರೀಕ್ಷೆಯ ಹಾಲ್ ಟಿಕೆಟ್ ಅನ್ನು ಪರಿಶೀಲಿಸಬಹುದು ಮತ್ತು ಡೌನ್‌ಲೋಡ್ ಮಾಡಬಹುದು.

ಪರೀಕ್ಷೆಯ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಎದುರಾಗುವ ಅತಿ ದೊಡ್ಡ ಸವಾಲೆಂದರೆ ಸಮಯದ ಅಭಾವ. ಇದನ್ನು ಮನಗಂಡಿರುವ ಎನ್‌ಟಿಎ, ಈ ಬಾರಿ ಅಭ್ಯರ್ಥಿಗಳಿಗೆ ಪ್ರಶ್ನೆಗಳನ್ನು ಸರಿಯಾಗಿ ಓದಿ, ಯೋಚಿಸಿ ಉತ್ತರಿಸಲು ಅನುಕೂಲವಾಗುವಂತೆ ಹೆಚ್ಚುವರಿ ಸಮಯವನ್ನು ನೀಡಲು ನಿರ್ಧರಿಸಿದೆ. ಈ ಕ್ರಮದಿಂದಾಗಿ ವಿದ್ಯಾರ್ಥಿಗಳು ಯಾವುದೇ ಆತಂಕ ಅಥವಾ ತರಾತುರಿಯಿಲ್ಲದೆ ನಿರಾಳವಾಗಿ ಪರೀಕ್ಷೆ ಬರೆಯಬಹುದು.

ಮತ್ತಷ್ಟು ಓದಿ: NEET-UG 2026: ನೀಟ್ ಯುಜಿ ಪರೀಕ್ಷೆ; ಹೇಳಿಕೆ ಆಧಾರಿತ ಉದ್ದನೆಯ ಪ್ರಶ್ನೆಗಳಿಂದ ವಿದ್ಯಾರ್ಥಿಗಳು ಹೈರಾಣು!

ಇತ್ತೀಚಿನ ಗೊಂದಲಗಳಿಗೆ ತೆರೆ ಎಳೆದು, ಪ್ರತಿಯೊಬ್ಬ ಅರ್ಹ ಮತ್ತು ಪ್ರತಿಭಾವಂತ ವಿದ್ಯಾರ್ಥಿಗೂ ಸಮಾನ ಹಾಗೂ ನ್ಯಾಯಯುತವಾದ ಅವಕಾಶ ಸಿಗಬೇಕು ಎಂಬ ಜವಾಬ್ದಾರಿಯಿಂದ ಈ ಮರು ಪರೀಕ್ಷೆಯನ್ನು ಆಯೋಜಿಸಲಾಗಿದೆ. ಎನ್‌ಟಿಎ ಕೈಗೊಂಡಿರುವ ಈ ಕಟ್ಟುನಿಟ್ಟಿನ ಹಾಗೂ ಪಾರದರ್ಶಕ ಕ್ರಮಗಳು ದೇಶದ ವೈದ್ಯಕೀಯ ಶಿಕ್ಷಣ ವ್ಯವಸ್ಥೆಯ ಮೇಲಿನ ನಂಬಿಕೆಯನ್ನು ಮತ್ತಷ್ಟು ಗಟ್ಟಿಗೊಳಿಸಿವೆ.

ಜೂನ್ 21 ರಂದು ನಡೆಯಲಿರುವ ಈ ಪರೀಕ್ಷೆಯು ಕೇವಲ ಮರು ಪರೀಕ್ಷೆಯಲ್ಲ, ಬದಲಿಗೆ ವಿದ್ಯಾರ್ಥಿಗಳ ಪರಿಶ್ರಮಕ್ಕೆ ಸಿಗಲಿರುವ ನ್ಯಾಯಯುತ ವೇದಿಕೆಯಾಗಿದೆ. ಎನ್‌ಟಿಎ ತಂದಿರುವ ಈ ಹೊಸ ಸುಧಾರಣೆಗಳು ವಿದ್ಯಾರ್ಥಿಗಳ ಮೇಲಿನ ಮಾನಸಿಕ ಒತ್ತಡವನ್ನು ಗಣನೀಯವಾಗಿ ಕಡಿಮೆ ಮಾಡಿದ್ದು, ದೇಶದ ಭವಿಷ್ಯದ ವೈದ್ಯರು ಅತ್ಯುನ್ನತ ಯಶಸ್ಸು ಸಾಧಿಸಲು ಹಾದಿ ಸುಗಮಗೊಳಿಸಿದೆ.

ಪರೀಕ್ಷಾ ಪ್ರವೇಶ ಪ್ರತಿಯನ್ನು ಡೌನ್​ಲೋಡ್ ಮಾಡುವುದು ಹೇಗೆ?

  • ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು, ಮೊದಲು ನೀವು NTA ಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬೇಕು.
  • ಇದರ ನಂತರ, ಅಭ್ಯರ್ಥಿಗಳು ವೆಬ್‌ಸೈಟ್‌ನ ಮುಖಪುಟದಲ್ಲಿ ಅಭ್ಯರ್ಥಿ ಚಟುವಟಿಕೆ ವಿಭಾಗದ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ.
  • ಈಗ ನೀವು NEET UG ಮರು-ಪರೀಕ್ಷೆಯ ಪ್ರವೇಶ ಕಾರ್ಡ್ 2026 ಲಿಂಕ್ ಅನ್ನು ಕ್ಲಿಕ್ ಮಾಡಬೇಕು.
  • ಲಿಂಕ್ ಅನ್ನು ಕ್ಲಿಕ್ ಮಾಡಿದ ನಂತರ, ಲಾಗಿನ್ ವಿವರಗಳನ್ನು ನಮೂದಿಸಬೇಕಾಗುತ್ತದೆ.
  • ಲಾಗಿನ್ ವಿವರಗಳನ್ನು ನಮೂದಿಸಿದ ನಂತರ, ಪ್ರವೇಶ ಪತ್ರವು ಪರದೆಯ ಮೇಲೆ ತೆರೆಯುತ್ತದೆ.
  • ಅಂತಿಮವಾಗಿ, ಅದರ ಮುದ್ರಣವನ್ನು ತೆಗೆದುಕೊಳ್ಳಲು ಮರೆಯದಿರಿ.

ನೀಟ್ ಯುಜಿ ಪರೀಕ್ಷೆಯು ಜೂನ್ 21 ರಂದು ದೇಶಾದ್ಯಂತ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ.  ಸುಮಾರು 2.2 ಮಿಲಿಯನ್ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಪ್ರವೇಶ ಪತ್ರವನ್ನು ನೀಡಿದ ನಂತರ ಅದರಲ್ಲಿ ನೀಡಲಾದ ಪ್ರಮುಖ ಮಾರ್ಗಸೂಚಿಗಳನ್ನು ಎಲ್ಲಾ ಅಭ್ಯರ್ಥಿಗಳು ಎಚ್ಚರಿಕೆಯಿಂದ ಓದಲು ಸೂಚಿಸಲಾಗಿದೆ. ಅಲ್ಲದೆ, ಪರೀಕ್ಷಾ ದಿನದಂದು ಅಗತ್ಯ ದಾಖಲೆಗಳೊಂದಿಗೆ ಪ್ರವೇಶ ಪತ್ರವನ್ನು ಕೊಂಡೊಯ್ಯಿರಿ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ – Kannada News | Mallikarjun Kharge Receives Rajya Sabha Victory Certificate at Vidhana Soudha

ಬೆಂಗಳೂರು, ಜೂನ್​​ 12: ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಸಭಾ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದು, ಇಂದು (ಜೂನ್​​ 12) ವಿಧಾನಸೌಧದಲ್ಲಿ ತಮ್ಮ ಗೆಲುವಿನ ಪ್ರಮಾಣಪತ್ರವನ್ನು ಸ್ವೀಕರಿಸಿದರು. ಚುನಾವಣಾ ಅಧಿಕಾರಿ ವಿಶಾಲಾ ಅವರು ಖರ್ಗೆಯವರಿಗೆ ಪ್ರಮಾಣಪತ್ರವನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಮಾಧ್ಯಮದವರಿಗೆ ಹಾಗೂ ಸಾರ್ವಜನಿಕರಿಗೆ ಧನ್ಯವಾದಗಳನ್ನು ಅರ್ಪಿಸಿದರು. ಪ್ರಮಾಣಪತ್ರ ಸ್ವೀಕರಿಸುವ ವೇಳೆ ಅಪಾರ ಸಂಖ್ಯೆಯ ಬೆಂಬಲಿಗರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು: ತಾಯಿ ಸೇರಿ ಐವರು ಆಸ್ಪತ್ರೆಗೆ ದಾಖಲು

ಬೀದರ್, ಜೂ.12: ಮಾವಿನ ಹಣ್ಣು ತಿಂದು ಅಸ್ವಸ್ಥಗೊಂಡಿದ್ದ ಬೀದರ್ ಮೂಲದ ಇಬ್ಬರು ಸಹೋದರಿಯರು ಚಿಕಿತ್ಸೆ ಫಲಿಸದೆ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಬೀದರ್ ಜಿಲ್ಲೆ ಔರಾದ್ ತಾಲೂಕಿನ ಶೆಂಬೆಳ್ಳಿ ಗ್ರಾಮದ ನಿವಾಸಿಗಳು ಆಗಿರುವ ಭವಾನಿ ವೈಜಿನಾಥ ಮೇತ್ರೆ (17) ಮತ್ತು ಸಂಧ್ಯಾರಾಣಿ ಮೇತ್ರೆ (14) ಮೃತಪಟ್ಟ ದುರ್ದೈವಿ ಬಾಲಕಿಯರು ಎಂದು ಹೇಳಲಾಗಿದೆ. ಮನೆಯಲ್ಲಿ ಊಟದ ಬಳಿಕ ಎಲ್ಲರೂ ಸೇರಿ ಮಾವಿನಹಣ್ಣು ತಿಂದಿದ್ದಾರೆ. ಸ್ವಲ್ಪ ಹೊತ್ತಿನ ನಂತರ ತಾಯಿ ಇಂದುಮತಿ ಹಾಗೂ ಐವರು ಹೆಣ್ಣುಮಕ್ಕಳು ಅಸ್ವಸ್ಥಗೊಂಡಿದ್ದಾರೆ ಎಂದು ಹೇಳಲಾಗಿದೆ. ಮಾವು ತಿಂದ ಬಳಿಕ ವಾಂತಿ ಭೇದಿ ಕಾಣಿಸಿಕೊಂಡು ಎಲ್ಲರಲ್ಲೂ ವಾಂತಿ ಭೇದಿ ಕಾಣಿಸಿಕೊಂಡು ಅಸ್ವಸ್ಥಗೊಂಡಿದ್ದಾರೆ. ಎಲ್ಲರನ್ನೂ ತಕ್ಷಣ ಹೈದರಾಬಾದ್​ನ ಖಾಸಗಿ ಆಸ್ಪತ್ರೆಗೆ ದಾಖಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಭವಾನಿ ಮೇತ್ರೆ, ಸಂಧ್ಯಾರಾಣಿ ಮೇತ್ರೆ ಸಾವನ್ನಪ್ಪಿದ್ದಾರೆ. ಇನ್ನು ಮತ್ತೊಬ್ಬ ಸಹೋದರಿ ವಿಜಯಶ್ರೀ(19)ಗೆ ಚಿಕಿತ್ಸೆ ಮುಂದುವರಿದೆ. ಇನ್ನು ತಾಯಿ ಮತ್ತು ವಿಜಯಶ್ರೀ ಚೇತರಿಕೆಗೊಂಡಿದ್ದಾರೆ ಎಂದು ಹೇಳಲಾಗಿದೆ. ಇದೀಗ ಭವಾನಿ ಮೇತ್ರೆ, ಸಂಧ್ಯಾರಾಣಿ ಮೇತ್ರೆ ಅವರ ದೇಹವನ್ನು ಮರಣೋತ್ತರ ಪರೀಕ್ಷೆ ಕಳಿಸಲಾಗಿದೆ. ಈ ವರದಿ ಬಂದ ನಂತರವೇ ಸತ್ಯಾಂಶ ಬಹಿರಂಗವಾಗಲಿದೆ. ಈ ಪ್ರಕರಣದ ಬಗ್ಗೆ ಹೈದರಾಬಾದ್​ನ ನಾರಾಯಣಗುಡ ಠಾಣೆಯಲ್ಲಿ ದೂರು ದಾಖಲಾಗಿದೆ. ಇನ್ನು ಈ ಘಟನೆ ಮೂರು ದಿನದ ಹಿಂದೆಯೇ ನಡೆದಿದೆ ಎಂದು ಹೇಳಲಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ: ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ – Kannada News | Grant Discrimination Row: Former CM Siddaramaiah Clarifies Fund Allocation Criteria for Backward Class Institutions

ಬೆಂಗಳೂರು, ಜೂನ್​​ 12: ಕರ್ನಾಟಕದ ಹಿಂದುಳಿದ ವರ್ಗಗಳ ಇಲಾಖೆಯಿಂದ ಅನುದಾನ ಹಂಚಿಕೆಯಲ್ಲಿ ತಾರತಮ್ಯ ನಡೆದಿದೆ ಎಂಬ ಆರೋಪಗಳು ಕೇಳಿಬಂದ ಬೆನ್ನಲ್ಲೇ ಈ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ನೀಡಲಾಗಿದ್ದ ಮನವಿಗಳನ್ನು ಪರಿಶೀಲಿಸಿ ಸುಮಾರು 155 ಹಿಂದುಳಿದ ವರ್ಗಗಳ ಸಂಘ – ಸಂಸ್ಥೆಗಳಿಗೆ 71.85 ಕೋಟಿ ರೂ. ವೆಚ್ಚದಲ್ಲಿ ಸಮುದಾಯ ಭವನ ಮತ್ತು ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕೆ ಪೂರ್ವಭಾವಿ ಮಂಜೂರಾತಿಯನ್ನು ಇಲಾಖೆ ನೀಡಿದೆ. ಇದೇನು ಫಲಾನುಭವಿಗಳ ಅಂತಿಮ ಪಟ್ಟಿ ಅಲ್ಲ ಎಂದವರು ತಿಳಿಸಿದ್ದಾರೆ.

ಎಕ್ಸ್​​ ಪೋಸ್ಟ್​​ ಮೂಲಕ ಮಾಹಿತಿ

ಇಲಾಖೆಗೆ ಸಲ್ಲಿಸಲಾಗಿರುವ ಮನವಿಗಳಲ್ಲಿ ಕುರುಬ ಸಮುದಾಯಕ್ಕೆ ಸೇರಿರುವ ಮನವಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದ ಕಾರಣಕ್ಕೆ ಆ ಸಮುದಾಯಕ್ಕೆ ಹೆಚ್ಚಿನ ಅನುದಾನ ಸಂದಾಯವಾಗಿದೆಯೇ ಹೊರತು ಉದ್ದೇಶಪೂರ್ವಕವಾಗಿ ಯಾವುದೇ ಬಗೆಯ ತಾರತಮ್ಯ ಮಾಡಲಾಗಿಲ್ಲ. ಬೇರೆ ಬೇರೆ ಹಿಂದುಳಿದ ಜಾತಿಗಳು ನೀಡಿರುವ ಮನವಿಗಳನ್ನು ಕೂಡಾ ಪರಿಶೀಲಿಸಿ, ಅವುಗಳಿಗೆ ಮುಂದಿನ ದಿನಗಳಲ್ಲಿ ಅನುದಾನವನ್ನು ಬಿಡುಗಡೆ ಮಾಡಲಾಗುವುದು.

ಇದನ್ನೂ ಓದಿ: ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ; ಅಷ್ಟಕ್ಕೂ ಆಗಿದ್ದೇನು?

ಕುರುಬ ಜನಾಂಗದ ಜೊತೆಗೆ ಮಡಿವಾಳ, ಲಿಂಗಾಯಿತ, ಒಕ್ಕಲಿಗ, ಬೆಸ್ತ, ಬಲಿಜ, ಗೊಲ್ಲ, ಜೆಟ್ಟಿ, ಕುಂಬಾರ, ಅರಸು, ಹೆಳವ, ಸವಿತಾ ಸಮಾಜ, ಉಪ್ಪಾರ, ಗಾಣಿಗ, ಕುರುಹಿನ ಶೆಟ್ಟಿ, ಹಾಲಕ್ಕಿ, ರೆಡ್ಡಿ ಈ ಜನಾಂಗದವರ ಸಮುದಾಯ ಭವನ ಮತ್ತು ವಿದ್ಯಾರ್ಥಿ ನಿಲಯಗಳ ಕಟ್ಟಡಗಳ ನಿರ್ಮಾಣಕ್ಕೆ ಪೂರ್ವಭಾವಿ ಆದೇಶವನ್ನು ಹೊರಡಿಸಲಾಗಿದೆ. ಈ ಆದೇಶವು ಅನುದಾನದ ಬಿಡುಗಡೆಯ ಆದೇಶ ಅಲ್ಲ. ಅನುದಾನ ಬಿಡುಗಡೆಗೆ ಸಂಘ ಸಂಸ್ಥೆಗಳು ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳ ಮುಖಾಂತರ ಜಮೀನು /ನಿವೇಶನ ಅವರ ಹೆಸರಿನಲ್ಲಿ ಇರುವ ಬಗ್ಗೆ ಸ್ಥಳೀಯ ಪುರಸಭೆ / ಪಂಚಾಯತಿಯಿಂದ ಕಟ್ಟಡ ಲೈಸೆನ್ಸ್‌, ಸಂಘ ಸಂಸ್ಥೆಯ 3 ವರ್ಷದ ಆಡಿಟ್‌ ವರದಿ ಇತ್ಯಾದಿ ದಾಖಲಾತಿಗಳನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಕಳುಹಿಸಬೇಕಾಗುತ್ತದೆ.

ಅನುದಾನ ಬಿಡುಗಡೆ ಮಾಡಲು ಸರ್ಕಾರದಿಂದ ಮಾರ್ಗ ಸೂಚಿಗಳನ್ನು ಹೊರಡಿಸಲಾಗಿದೆ. ಈ ಮಾರ್ಗಸೂಚಿಗಳ ಅನುಸಾರ ಅನುದಾನವನ್ನು 3 ಹಂತದಲ್ಲಿ ಪ್ರಗತಿಯನ್ನು ಪರಿಶೀಲನೆ ಮಾಡಿ ಅನುದಾನ ಬಿಡುಗಡೆ ಮಾಡಲಾಗುವುದು. ಕಾಮಗಾರಿಯ ಪ್ರಗತಿಯನ್ನು ಪ್ರತಿವರ್ಷ ಪರಿಶೀಲಿಸಿ ಅದರ ಆಧಾರದಲ್ಲಿ ಮಂಜೂರಾಗಿರುವ ಹಣವನ್ನು ಬಿಡುಗಡೆ ಮಾಡಲಾಗುವುದು. ಇದು ನಿರಂತರವಾಗಿ ನಡೆಯುತ್ತಿರುವ ಪ್ರಕ್ರಿಯೆಯಾಗಿದೆ. ಈ ರೀತಿ ಅನುದಾನವನ್ನು ಬಿಡುಗಡೆ ಮಾಡುವಾಗ ಸರ್ಕಾರದ ಆದೇಶಕ್ಕೆ ಪ್ರವರ್ಗ 1 ಮತ್ತು ಪ್ರವರ್ಗ 2A ನಲ್ಲಿ ಬರುವ ಜಾತಿಗಳಿಗೆ ಶೇ.70ರಷ್ಟು ಮತ್ತು ಪ್ರವರ್ಗ 3A ಮತ್ತು 3Bನಲ್ಲಿ ಬರುವ ಜಾತಿಗಳಿಗೆ ಶೇ.30ರಷ್ಟು ಅನುದಾನವನ್ನು ಮಂಜೂರು ಮಾಡಲಾಗುವುದು. ಪ್ರವರ್ಗ 1 ಮತ್ತು 2A ಹೆಚ್ಚಿನ ಸಂಖ್ಯೆಯಲ್ಲಿ ಜಾತಿಗಳು ಇರುವ ಕಾರಣಕ್ಕಾಗಿ ಕೆಲವು ಸಮುದಾಯಗಳಿಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಲಾಗಿದೆ ಎಂದವರು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 2:08 pm, Fri, 12 June 26

Source link

ಹೆಸರು ಪ್ರಸ್ತಾಪವಾದರೆ ಕ್ರಿಮಿನಲ್ ಆಗಲ್ಲ: ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ಫಸ್ಟ್ ರಿಯಾಕ್ಷನ್ – Kannada News | Priyank Kharge’s First Reaction to Chinnayya’s Allegations Against Prakash Raj in Dharmasthala Case

ಬೆಂಗಳೂರು, ಜೂನ್ 12: ಧರ್ಮಸ್ಥಳ ಬುರುಡೆ ಗ್ಯಾಂಗ್ ಪ್ರಕರಣಕ್ಕೆ ಸಂಬಂಧಿಸಿ ಮಾಸ್ಕ್​ಮ್ಯಾನ್ ಚಿನ್ನಯ್ಯ ಸಲ್ಲಿಸಿರುವ ರಿಟ್ ಅರ್ಜಿಯಲ್ಲಿ ನಟ ಪ್ರಕಾಶ್ ರಾಜ್ ಹೆಸರು ಉಲ್ಲೇಖವಾಗಿರುವುದು ಸಾಕಷ್ಟು ಕುತೂಹಲ ಕೆರಳಿಸಿದೆ. ಈ ಬಗ್ಗೆ ಗೃಹಸಚಿವ ಪ್ರಿಯಾಂಕ್ ಖರ್ಗೆ ಅವರು ಪ್ರತಿಕ್ರಿಯಿಸಿದ್ದು, ಚಿನ್ನಯ್ಯನ ಮಾತಿನ ಸತ್ಯಾಸತ್ಯತೆಯನ್ನು ಪರಿಶೀಲಿಸಬೇಕಿದೆ ಎಂದು ತಿಳಿಸಿದ್ದಾರೆ. ಎಷ್ಟು ಸತ್ಯ ಹೇಳುತ್ತಿದ್ದಾರೆ, ಎಷ್ಟು ಸುಳ್ಳಿದೆ ಗೊತ್ತಿಲ್ಲ ಎಂದು ಖರ್ಗೆ ಹೇಳಿದ್ದಾರೆ. ಪ್ರಕರಣವು ನ್ಯಾಯಾಲಯದಲ್ಲಿದ್ದು, ವಿಶೇಷ ತನಿಖಾ ದಳ (ಎಸ್ಐಟಿ)ಗೆ ಕೋರ್ಟ್ ಕೆಲವು ಪ್ರಶ್ನೆಗಳನ್ನು ಕೇಳಿದೆ. ಎಸ್ಐಟಿ ಮುಖ್ಯಸ್ಥರು ಆ ಪ್ರಶ್ನೆಗಳಿಗೆ ನ್ಯಾಯಾಲಯಕ್ಕೆ ಉತ್ತರ ನೀಡುತ್ತಾರೆ. ಅದನ್ನು ನಾವು ಸಾರ್ವಜನಿಕವಾಗಿ ಚರ್ಚೆ ಮಾಡಲು ಸಾಧ್ಯವಿಲ್ಲ ಎಂದು ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದ್ದಾರೆ. ನ್ಯಾಯಾಲಯಕ್ಕೆ ಉತ್ತರ ನೀಡಿದ ಬಳಿಕ ಮಾಹಿತಿ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಮಾಧ್ಯಮಗಳಲ್ಲಿ ಮತ್ತು ನ್ಯಾಯಾಲಯದಲ್ಲಿ ಸಲ್ಲಿಕೆಯಾಗಿರುವ ಮಾಹಿತಿ ಪ್ರಕಾರ 200 ಕೋಟಿ ರೂಪಾಯಿಗಳ ಆರೋಪದ ಕುರಿತು ಪ್ರಸ್ತಾಪವಾಗಿದೆ. ಇದು ಸಣ್ಣ ಮೊತ್ತವಲ್ಲ. ಆದರೆ ಅದು ಎಷ್ಟು ನಿಜವೋ ಎಷ್ಟು ಸುಳ್ಳೋ ಗೊತ್ತಿಲ್ಲ” ಎಂದು ಖರ್ಗೆ ಹೇಳಿದ್ದಾರೆ. ಅದೇ ವ್ಯಕ್ತಿ (ಚಿನ್ನಯ್ಯ) ಹಿಂದಿನ ಮತ್ತು ಈಗಿನ ಈ ಎಲ್ಲ ಹೇಳಿಕೆಗಳನ್ನು ನೀಡಿರುವುದರಿಂದ, ಅವುಗಳಲ್ಲಿ ಎಷ್ಟು ಸತ್ಯಾಂಶವಿದೆ ಎಂಬುದನ್ನು ಪರಿಶೀಲಿಸುವುದು ಮುಖ್ಯ. ಯಾವುದೇ ಹೆಸರು ಪ್ರಸ್ತಾಪವಾದ ತಕ್ಷಣವೇ ಎಲ್ಲರೂ ಕ್ರಿಮಿನಲ್‌ಗಳಲ್ಲ. ಎಸ್ಐಟಿ ಮುಖ್ಯಸ್ಥರು ಮೊದಲು ನ್ಯಾಯಾಲಯಕ್ಕೆ ಉತ್ತರ ನೀಡಬೇಕು. ಆ ಬಗ್ಗೆ ಮಾಧ್ಯಮದಲ್ಲಿ ಚರ್ಚಿಸುವುದು ಸರಿಯಲ್ಲ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​: ರಸ್ತೆ ಮಾರ್ಗವಾಗಿ ಕೊಲ್ಲೂರಿಗೆ ಪ್ರಯಾಣ – Kannada News | Tamil Nadu CM Joseph Vijay Lands in Mangaluru; Minister UT Khader Welcomes Him Ahead of Kollur Mookambika Temple Visit

ಮಂಗಳೂರು, ಜೂನ್ 12: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಕರ್ನಾಟಕಕ್ಕೆ ಭೇಟಿ ನೀಡುತ್ತಿರುವ ವಿಜಯ್ ಅವರಿಗೆ ವಿಮಾನ ನಿಲ್ದಾಣದಲ್ಲಿ ರಾಜ್ಯ ಸರ್ಕಾರದ ಪರವಾಗಿ ಆರೋಗ್ಯ ಸಚಿವ ಯುಟಿ ಖಾದರ್ ಪುಷ್ಪಗುಚ್ಛ ನೀಡಿ ಆತ್ಮೀಯವಾಗಿ ಸ್ವಾಗತಿಸಿದರು. ವಿಜಯ್ ಭೇಟಿಯ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸರೊಂದಿಗೆ ತಮಿಳುನಾಡು ಪೊಲೀಸರು ಸಹ ಸೇರಿ ಹೈ-ಸೆಕ್ಯೂರಿಟಿ ಒದಗಿಸಿದ್ದಾರೆ. ವಿಮಾನ ನಿಲ್ದಾಣದಿಂದ ಹೊರಬಂದ ವಿಜಯ್ ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದರು. ಭದ್ರತಾ ದೃಷ್ಟಿಯಿಂದ ವಿಮಾನ ನಿಲ್ದಾಣದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿತ್ತು.

ಕೊಲ್ಲೂರು ಮೂಕಾಂಬಿಕೆ ದರ್ಶನಕ್ಕೆ ಪ್ರಯಾಣ

ಮಂಗಳೂರು ಏರ್‌ಪೋರ್ಟ್‌ನಿಂದ ವಿಜಯ್ ನೇರವಾಗಿ ರಸ್ತೆ ಮಾರ್ಗದ ಮೂಲಕ ಉಡುಪಿ ಜಿಲ್ಲೆಯ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯಕ್ಕೆ ತೆರಳಿದರು. ಮಂಗಳೂರಿನಿಂದ ಸುಮಾರು 125 ಕಿ.ಮೀ ದೂರದ ಕೊಲ್ಲೂರಿಗೆ ರಸ್ತೆ ಮೂಲಕವೇ ಪ್ರಯಾಣ ಬೆಳೆಸಲಿರುವ ಅವರು, ಸಂಜೆ ಹೊತ್ತಿಗೆ ದೇವಸ್ಥಾನಕ್ಕೆ ತಲುಪಲಿದ್ದಾರೆ. ಅಲ್ಲಿ ಶ್ರೀ ಮೂಕಾಂಬಿಕಾ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಈಗಲೂ ಭಾರತವೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ: ವಿಶ್ವಬ್ಯಾಂಕ್ ವರದಿ – Kannada News | India Remains Fastest Growing Economy: World Bank Report Highlights Strong GDP Growth

ನವದೆಹಲಿ, ಜೂನ್ 12: ಜಾಗತಿಕ ಮಟ್ಟದಲ್ಲಿ ಅನಿಶ್ಚಿತತೆ ಮತ್ತು ಸವಾಲುಗಳಿದ್ದರೂ, ಭಾರತವು ವಿಶ್ವದಲ್ಲೇ ಅತಿ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿ (India’s GDP growth) ಮುಂದುವರಿಯಲಿದೆ ಎಂದು ವಿಶ್ವಬ್ಯಾಂಕ್‌ನ ಇತ್ತೀಚಿನ ‘ಗ್ಲೋಬಲ್ ಎಕನಾಮಿಕ್ ಪ್ರಾಸ್ಪೆಕ್ಟ್ಸ್’ (World Bank Global Economic Prospects) ವರದಿ ತಿಳಿಸಿದೆ. ಭಾರತದ ಈ ಉತ್ತಮ ಬೆಳವಣಿಗೆಗೆ ಕೆಲ ಪ್ರಮುಖ ಕಾರಣಗಳನ್ನು ಈ ವರದಿಯಲ್ಲಿ ಉಲ್ಲೇಖಿಸಲಾಗಿದೆ. ವಿಶ್ವಬ್ಯಾಂಕ್ ವರದಿಯಲ್ಲಿರುವ ಪ್ರಮುಖ 5 ಅಂಶಗಳು ಇಲ್ಲಿ ಪ್ರಸ್ತಾಪಿಸಲಾಗಿದೆ.

1) ಭಾರತವೇ ನಂಬರ್ ಒನ್ ಆರ್ಥಿಕತೆ

ಪ್ರಸಕ್ತ ಹಣಕಾಸು ವರ್ಷದಲ್ಲಿ (FY27) ಭಾರತದ ಆರ್ಥಿಕ ಬೆಳವಣಿಗೆಯ ದರವು (GDP) ಶೇಕಡಾ 6.6 ರಷ್ಟಿರಲಿದೆ ಎಂದು ವಿಶ್ವಬ್ಯಾಂಕ್ ಅಂದಾಜಿಸಿದೆ. ಹೆಚ್ಚಿನ ಇಂಧನ ಬೆಲೆಗಳು ಮತ್ತು ಇತರ ಉತ್ಪಾದನಾ ವೆಚ್ಚಗಳಿಂದಾಗಿ ಇದು ಕಳೆದ ವರ್ಷದ ಬೆಳವಣಿಗೆಗಿಂತ (ಶೇ. 7.7) ಸ್ವಲ್ಪ ಕಡಿಮೆಯಾಗಿದ್ದರೂ, ಜಗತ್ತಿನ ಬೇರೆಲ್ಲಾ ಪ್ರಮುಖ ದೇಶಗಳಿಗಿಂತ ಭಾರತದ ಆರ್ಥಿಕ ಬೆಳವಣಿಗೆಯ ವೇಗವೇ ಹೆಚ್ಚಾಗಿರಲಿದೆ.

2) ಮತ್ತೆ ವೇಗ ಪಡೆದುಕೊಳ್ಳಲಿರುವ ಭಾರತದ ಆರ್ಥಿಕತೆ

ಪ್ರಸ್ತುತ ಕಂಡುಬರುತ್ತಿರುವ ಜಾಗತಿಕ ಮಂದಗತಿ ತಾತ್ಕಾಲಿಕವಾಗಿದ್ದು, ಮುಂದಿನ ಹಣಕಾಸು ವರ್ಷದಲ್ಲಿ (FY28) ಭಾರತದ ಆರ್ಥಿಕತೆಯು ಶೇಕಡಾ 7.2 ರಷ್ಟು ಪ್ರಗತಿ ಸಾಧಿಸುವ ಮೂಲಕ ಮತ್ತೆ ಚೇತರಿಸಿಕೊಳ್ಳಲಿದೆ. ದೇಶೀಯ ಬೇಡಿಕೆ ಮತ್ತು ರಫ್ತು ವಲಯದಲ್ಲಿನ ಸುಧಾರಣೆ ಇದಕ್ಕೆ ಕಾರಣವಾಗಲಿದೆ.

ಇದನ್ನೂ ಓದಿ: ಡಾಲರ್ ಎದುರು ರುಪಾಯಿ ಮೌಲ್ಯ 67 ಪೈಸೆ ಜಿಗಿತ; 10 ದಿನದಲ್ಲಿ 100 ಪೈಸೆ ಮೌಲ್ಯ ಹೆಚ್ಚಳ

3) ದೇಶೀಯ ಬೇಡಿಕೆಯು ಆರ್ಥಿಕತೆಗೆ ಬಲ

ದೇಶದೊಳಗಿನ ಆರ್ಥಿಕ ಚಟುವಟಿಕೆಗಳು ಉತ್ತಮವಾಗಿವೆ. ವಿಶೇಷವಾಗಿ ಗ್ರಾಮೀಣ ಭಾಗಗಳಲ್ಲಿ ಜನರ ವೈಯಕ್ತಿಕ ಬಳಕೆ ಮತ್ತು ಖರೀದಿ ಸಾಮರ್ಥ್ಯ ಬಲವಾಗಿದೆ. ಜೊತೆಗೆ ನಗರ ಪ್ರದೇಶಗಳಲ್ಲೂ ಬೇಡಿಕೆ ಚೇತರಿಸಿಕೊಳ್ಳುತ್ತಿದ್ದು, ಇದು ಭಾರತದ ಆರ್ಥಿಕ ವಿಸ್ತರಣೆಗೆ ಪ್ರಮುಖ ಆಧಾರವಾಗಿದೆ.

4) ಗ್ರಾಹಕರಿಗೆ ನೆರವಾಗಲಿರುವ ಸರ್ಕಾರದ ನೀತಿಗಳು

ಸರಕು ಮತ್ತು ಸೇವಾ ತೆರಿಗೆ (GST) ದರಗಳಲ್ಲಿನ ಕಡಿತವು ಗ್ರಾಹಕರ ಬೇಡಿಕೆಯನ್ನು ಮತ್ತಷ್ಟು ಹೆಚ್ಚಿಸಬಹುದು ಎಂದು ವರದಿ ಹೇಳಿದೆ. ಇಂಧನ ತೆರಿಗೆ ಕಡಿತ ಸೇರಿದಂತೆ ಹಣದುಬ್ಬರವನ್ನು ನಿಯಂತ್ರಿಸಲು ಸರ್ಕಾರ ತೆಗೆದುಕೊಂಡಿರುವ ಕ್ರಮಗಳು ಜನಸಾಮಾನ್ಯರಿಗೆ ಮತ್ತು ವ್ಯವಹಾರಗಳಿಗೆ ಸಹಕಾರಿಯಾಗಲಿವೆ.

5) ಮುಕ್ತ ವ್ಯಾಪಾರ ಒಪ್ಪಂದಗಳಿಂದ ರಫ್ತು ವಲಯಕ್ಕೆ ಲಾಭ

ಅಮೆರಿಕದ ಸುಂಕಗಳ ಕಡಿತ ಮತ್ತು ಹೊಸ ಮುಕ್ತ ವ್ಯಾಪಾರ ಒಪ್ಪಂದಗಳ (Free-Trade Agreements) ಅನುಷ್ಠಾನದಿಂದಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಮಂದಗತಿಯಿದ್ದರೂ ಭಾರತದ ರಫ್ತು ವಲಯಕ್ಕೆ ದೊಡ್ಡ ಮಟ್ಟದ ಹಿನ್ನಡೆಯಾಗುವುದಿಲ್ಲ. ಇದು ದೇಶದ ಭವಿಷ್ಯದ ಆರ್ಥಿಕ ಬೆಳವಣಿಗೆಗೆ ಪೂರಕವಾಗಲಿದೆ.

ಇದನ್ನೂ ಓದಿ: ಕೀನಾ ಏರ್​ಪೋರ್ಟ್ ಗುತ್ತಿಗೆ: ಅದಾನಿಗೆ ಸಿಗಬೇಕಿದ್ದ ಗುತ್ತಿಗೆ ಚೀನೀ ಕಂಪನಿ ಪಾಲಾಯ್ತು

ಈ ಮೇಲಿನವು ವಿಶ್ವಬ್ಯಾಂಕ್​ನ ವರದಿಯಲ್ಲಿ ತಿಳಿಸಲಾದ ಕೆಲ ಪ್ರಮುಖ ವಿಚಾರಗಳಾಗಿವೆ. ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆ, ಹೆಚ್ಚಿನ ಇಂಧನ ಬೆಲೆಗಳಂತಹ ಜಾಗತಿಕ ಸವಾಲುಗಳ ನಡುವೆಯೂ ಭಾರತದ ಬಲವಾದ ದೇಶೀಯ ಬಳಕೆ, ಸರ್ಕಾರದ ಆರ್ಥಿಕ ನೀತಿಗಳು ಮತ್ತು ವ್ಯಾಪಾರ ಅವಕಾಶಗಳು ದೇಶದ ಆರ್ಥಿಕತೆಯನ್ನು ಮುಂಚೂಣಿಯಲ್ಲಿಡಲಿವೆ ಎಂದು ಈ ವರದಿಯಲ್ಲಿ ವಿಶ್ವಾಸ ವ್ಯಕ್ತಪಡಿಸಲಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Meenakshi Natarajan: ರಾಜ್ಯಸಭಾ ನಾಮಪತ್ರ ತಿರಸ್ಕಾರ ಪ್ರಶ್ನಿಸಿ ಮೀನಾಕ್ಷಿ ನಟರಾಜನ್ ಸಲ್ಲಿಸಿದ್ದ ಅರ್ಜಿ ಸುಪ್ರೀಂಕೋರ್ಟ್​​ನಲ್ಲಿ ವಜಾ – Kannada News | Supreme Court Upholds Meenakshi Natarajan’s Rajya Sabha Nomination Rejection

ನವದೆಹಲಿ, ಜೂನ್ 12: ರಾಜ್ಯಸಭಾ ಚುನಾವಣೆಯ ನಾಮಪತ್ರ ತಿರಸ್ಕಾರ ಪ್ರಶ್ನಿಸಿ ಕಾಂಗ್ರೆಸ್ ನಾಯಕಿ ಮೀನಾಕ್ಷಿ ನಟರಾಜನ್(Meenakshi Natarajan) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಮೇಲ್ನೋಟಕ್ಕೆ ಇದು ಹಿನ್ನಡೆಯಾಗಿ ಕಂಡರೂ, ಈ ತೀರ್ಪಿನ ಹಿಂದೆ ಪ್ರಜಾಪ್ರಭುತ್ವದ ಆಶಯಗಳನ್ನು ಎತ್ತಿಹಿಡಿಯುವ ಮತ್ತು ಕಾನೂನು ಪ್ರಕ್ರಿಯೆಯನ್ನು ಮತ್ತಷ್ಟು ಬಲಪಡಿಸುವ ಕೆಲವು ಅತ್ಯಂತ ಸಕಾರಾತ್ಮಕ ಭರವಸೆಗಳಿವೆ.
ವಿಚಾರಣೆ ನಡೆಸುವಾಗ, ಚುನಾವಣಾ ಅಧಿಕಾರಿಯೊಬ್ಬರು ಅಭ್ಯರ್ಥಿಯ ನಾಮಪತ್ರವನ್ನು ತಿರಸ್ಕರಿಸಿದರೆ, ಚುನಾವಣಾ ಆಯೋಗವನ್ನು ಸಂಪರ್ಕಿಸುವುದು ಸೂಕ್ತ ಪರಿಹಾರ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಅಭಿಪ್ರಾಯಪಟ್ಟಿದೆ.

ನಟರಾಜನ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ, ಅಭ್ಯರ್ಥಿಗಳು ಕನಿಷ್ಠ ಎರಡು ವರ್ಷಗಳ ಶಿಕ್ಷೆ ವಿಧಿಸಬಹುದಾದ ಕ್ರಿಮಿನಲ್ ಪ್ರಕರಣಗಳನ್ನು ಮಾತ್ರ ಬಹಿರಂಗಪಡಿಸಬೇಕಾಗುತ್ತದೆ ಮತ್ತು ಪ್ರಸ್ತುತ ಪ್ರಕರಣದಲ್ಲಿ ಸಮನ್ಸ್ ಮಾತ್ರ ಜಾರಿ ಮಾಡಲಾಗಿದೆ ಎಂದು ವಾದಿಸಿದರು.
ಮಧ್ಯಪ್ರದೇಶದ ರಾಜ್ಯಸಭಾ ಚುನಾವಣೆಗೆ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾಧಿಕಾರಿ ತಪ್ಪಾಗಿ ತಿರಸ್ಕರಿಸಿದ್ದಾರೆ ಎಂದು ಅವರು ವಾದಿಸಿದರು. ಜನತಾ ಪ್ರಾತಿನಿಧ್ಯ ಕಾಯ್ದೆಯಡಿ ಕ್ರಿಮಿನಲ್ ಪ್ರಕರಣವನ್ನು ಬಹಿರಂಗಪಡಿಸದ ಕಾರಣ ಅವರು ಅದನ್ನು ತಪ್ಪಾಗಿ ತಿರಸ್ಕರಿಸಿದ್ದಾರೆ.

ಮಧ್ಯಪ್ರದೇಶ ವಿಧಾನಸಭಾ ಅಧಿಕಾರಿಯೊಬ್ಬರ ಪ್ರಕಾರ, ಬಿಜೆಪಿ ಅಭ್ಯರ್ಥಿ ಮಹೇಶ್ ಕೆವಾತ್ ಅವರು ತೆಲಂಗಾಣದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ತಮ್ಮ ಚುನಾವಣಾ ಅಫಿಡವಿಟ್‌ನಲ್ಲಿ ಬಹಿರಂಗಪಡಿಸಲು ನಟರಾಜನ್ ವಿಫಲರಾಗಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿದ್ದಾರೆ.

ಮತ್ತಷ್ಟು ಓದಿ: ಕಾಂಗ್ರೆಸ್​ ಎಡವಟ್ಟಿನಿಂದ ಮಧ್ಯಪ್ರದೇಶದ ಎಲ್ಲ ರಾಜ್ಯಸಭಾ ಸ್ಥಾನಗಳೂ ಬಿಜೆಪಿ ತೆಕ್ಕೆಗೆ

ಕಾನೂನಿನ ಸ್ಪಷ್ಟತೆ ಮತ್ತು ವ್ಯವಸ್ಥೆಯ ಮೇಲಿನ ನಂಬಿಕೆ
ಸುಪ್ರೀಂ ಕೋರ್ಟ್ ಈ ಅರ್ಜಿಯನ್ನು ವಜಾಗೊಳಿಸುವ ಮೂಲಕ ದೇಶದ ಚುನಾವಣಾ ನಿಯಮಗಳು ಮತ್ತು ಉನ್ನತ ನ್ಯಾಯಾಂಗದ ಮಾರ್ಗಸೂಚಿಗಳು ಎಷ್ಟು ಸ್ಪಷ್ಟ ಹಾಗೂ ದೃಢವಾಗಿವೆ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ಚುನಾವಣಾ ನಿಯಮಾವಳಿಗಳ ನಿಖರವಾದ ಪಾಲನೆಯು ಪ್ರಜಾಪ್ರಭುತ್ವದ ಅಡಿಪಾಯವನ್ನು ಗಟ್ಟಿಗೊಳಿಸುತ್ತದೆ. ಸುಪ್ರೀಂ ಕೋರ್ಟ್‌ನ ಈ ತೀರ್ಪು ಭವಿಷ್ಯದ ಎಲ್ಲಾ ಅಭ್ಯರ್ಥಿಗಳಿಗೆ ತಮ್ಮ ನಾಮಪತ್ರ ಸಲ್ಲಿಕೆಯ ವೇಳೆ ತಾಂತ್ರಿಕ ಮತ್ತು ಕಾನೂನು ಅಂಶಗಳನ್ನು ಮತ್ತಷ್ಟು ಪಾರದರ್ಶಕವಾಗಿ ನಿರ್ವಹಿಸಲು ಒಂದು ಸ್ಪಷ್ಟವಾದ ದಿಕ್ಸೂಚಿಯಾಗಿದೆ.

ತಾಂತ್ರಿಕ ಬಿಕ್ಕಟ್ಟಿಗೆ ಮುಕ್ತಿ ಮತ್ತು ಚುನಾವಣೆಗೆ ಚುರುಕು
ಈ ಕಾನೂನು ಹೋರಾಟಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ತಾರ್ಕಿಕ ಅಂತ್ಯ ಸಿಕ್ಕಿರುವುದರಿಂದ, ಮಧ್ಯಪ್ರದೇಶದ ರಾಜ್ಯಸಭಾ ಚುನಾವಣಾ ಪ್ರಕ್ರಿಯೆಯಲ್ಲಿ ಎದುರಾಗಿದ್ದ ತಾಂತ್ರಿಕ ಗೊಂದಲಗಳು ಈಗ ಸಂಪೂರ್ಣವಾಗಿ ನಿವಾರಣೆಯಾಗಿವೆ. ನ್ಯಾಯಾಲಯದ ಈ ತ್ವರಿತ ತೀರ್ಪಿನಿಂದಾಗಿ ಚುನಾವಣಾ ಆಯೋಗವು ಯಾವುದೇ ಅಡೆತಡೆಯಿಲ್ಲದೆ ಮುಂದಿನ ಪ್ರಕ್ರಿಯೆಗಳನ್ನು ಸುಗಮವಾಗಿ ಮತ್ತು ನಿಗದಿತ ಸಮಯದೊಳಗೆ ನಡೆಸಲು ಹಾದಿ ಸುಗಮವಾಗಿದೆ.

ಈ ತೀರ್ಪು ಕಾಂಗ್ರೆಸ್ ಪಕ್ಷಕ್ಕೆ ತನ್ನ ಪ್ರಾದೇಶಿಕ ಮತ್ತು ರಾಷ್ಟ್ರೀಯ ನಾಯಕತ್ವದ ಸಮೀಕರಣಗಳನ್ನು ಮರುರೂಪಿಸಿಕೊಳ್ಳಲು ಒಂದು ಹೊಸ ಪ್ರೇರಣೆಯನ್ನು ನೀಡಿದೆ. ಈ ಬೆಳವಣಿಗೆಯಿಂದಾಗಿ ಮುಂಬರುವ ದಿನಗಳಲ್ಲಿ ಇತರ ಯುವ ಅಥವಾ ಪ್ರಭಾವಿ ನಾಯಕರಿಗೆ ಸಂಸತ್ತನ್ನು ಪ್ರವೇಶಿಸಲು ಹೊಸ ಅವಕಾಶಗಳು ಸೃಷ್ಟಿಯಾಗಲಿವೆ. ಮೀನಾಕ್ಷಿ ನಟರಾಜನ್ ಅವರು ಪ್ರಸ್ತುತ ತೆಲಂಗಾಣ ಕಾಂಗ್ರೆಸ್‌ನ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ (AICC) ಉಸ್ತುವಾರಿಯಾಗಿಯೂ ಮಹತ್ವದ ಜವಾಬ್ದಾರಿ ನಿರ್ವಹಿಸುತ್ತಿರುವುದರಿಂದ, ಅವರು ಈಗ ರಾಜ್ಯಸಭೆಯ ದೈನಂದಿನ ಕಲಾಪಗಳ ಒತ್ತಡವಿಲ್ಲದೆ ಮುಂಬರುವ ನಿರ್ಣಾಯಕ ವಿಧಾನಸಭಾ ಚುನಾವಣೆಗಳ ಸಂಘಟನೆಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಳ್ಳಲು ಮುಕ್ತವಾದ ಹಾದಿ ಸಿಕ್ಕಂತಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Exit mobile version