Headlines

ಪರಿಷತ್ ಚುನಾವಣೆ: ಅಡ್ಡ ಮತದಾನದ ಭೀತಿಯಲ್ಲಿ ಜೆಡಿಎಸ್, ಕಾಂಗ್ರೆಸ್ ಹೈ ಅಲರ್ಟ್: ರೆಸಾರ್ಟ್ ರಾಜಕೀಯ ಶುರುವಾಗೋ ಸಾಧ್ಯತೆ – Kannada News | Karnataka MLC Election 2026: Cross Voting Fears Grip Congress and JDS Ahead of June 18 Polls; Resort Politics Likely

ರೆಸಾರ್ಟ್ ರಾಜಕೀಯ ಶುರುವಾಗೋ ಸಾಧ್ಯತೆImage Credit source: tv9 ಬೆಂಗಳೂರು, ಜೂನ್ 12: ಜೂನ್ 18ರಂದು ನಡೆಯಲಿರುವ ಕರ್ನಾಟಕ ವಿಧಾನಪರಿಷತ್ ಚುನಾವಣೆಯ (Karnataka MLC Election) ಕಾವು ಜೋರಾಗಿದ್ದು, ಮೂರೂ ಪ್ರಮುಖ ರಾಜಕೀಯ ಪಕ್ಷಗಳಿಗೆ ಇದು ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ. ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಅಡ್ಡ ಮತದಾನ ಮತ್ತು ಕುದುರೆ ವ್ಯಾಪಾರದ ಭೀತಿ ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಜೆಡಿಎಸ್ (JDS) ಅನ್ನು ಆವರಿಸಿದೆ. ಶಾಸಕರನ್ನು ಹಿಡಿದಿಟ್ಟುಕೊಂಡು ಒಗ್ಗಟ್ಟು ಪ್ರದರ್ಶಿಸಲು ಎರಡೂ ಪಕ್ಷಗಳು ರೆಸಾರ್ಟ್ ರಾಜಕೀಯದ…

Read More

NEET UG Re Exam 2026 Date: ಜೂನ್ 21 ನೀಟ್ ಯುಜಿ ಮರು ಪರೀಕ್ಷೆ, ವಿದ್ಯಾರ್ಥಿಗಳಿಗೆ 15 ನಿಮಿಷ ಹೆಚ್ಚುವರಿ ಸಮಯ – Kannada News | NEET UG 2026 Re Exam to be held on 21st June; Hall Ticket to release on 14 June; Read more details

ನವದೆಹಲಿ, ಜೂನ್ 21:  ನೀಟ್ ಯುಜಿ(NEET UG) 2026ರ ಮರು ಪರೀಕ್ಷೆಯು ಜೂನ್ 21ರಂದು ನಡೆಯಲಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ವಿದ್ಯಾರ್ಥಿಗಳಿಗಾಗಿ ಎನ್​ಟಿಎ ವಿಶೇಷ ಕ್ರಮಗಳನ್ನು ಘೋಷಿಸಿದೆ. ಅಭ್ಯರ್ಥಿಗಳಿಗೆ ಹೆಚ್ಚುವರಿ 15 ನಿಮಿಷಗಳನ್ನು ನೀಡಲಾಗುತ್ತದೆ. ಮಧ್ಯಾಹ್ನ 2 ಗಂಟೆಯಿಂದ ಸಂಜೆ 5.15 ರವರೆಗೆ ಪರೀಕ್ಷೆ ನಡೆಯಲಿದೆ. ನೀಟ್ ಯುಜಿ ಪರೀಕ್ಷೆಗೆ ಹಾಜರಾಗಲು ಪ್ರವೇಶ ಪತ್ರಗಳನ್ನು ಜೂನ್ 14 ರಂದು ಬಿಡುಗಡೆ ಮಾಡಲಾಗುವುದು. ರಫ್​ ವರ್ಕ್​ಗೆ ಕೂಡ ಹೆಚ್ಚು ಸ್ಥಳಾವಕಾಶವನ್ನು ಪೇಪರ್​ನಲ್ಲಿ ನೀಡಲಾಗುತ್ತದೆ….

Read More

ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ – Kannada News | Mallikarjun Kharge Receives Rajya Sabha Victory Certificate at Vidhana Soudha

ಬೆಂಗಳೂರು, ಜೂನ್​​ 12: ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಸಭಾ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದು, ಇಂದು (ಜೂನ್​​ 12) ವಿಧಾನಸೌಧದಲ್ಲಿ ತಮ್ಮ ಗೆಲುವಿನ ಪ್ರಮಾಣಪತ್ರವನ್ನು ಸ್ವೀಕರಿಸಿದರು. ಚುನಾವಣಾ ಅಧಿಕಾರಿ ವಿಶಾಲಾ ಅವರು ಖರ್ಗೆಯವರಿಗೆ ಪ್ರಮಾಣಪತ್ರವನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಮಾಧ್ಯಮದವರಿಗೆ ಹಾಗೂ ಸಾರ್ವಜನಿಕರಿಗೆ ಧನ್ಯವಾದಗಳನ್ನು ಅರ್ಪಿಸಿದರು. ಪ್ರಮಾಣಪತ್ರ ಸ್ವೀಕರಿಸುವ ವೇಳೆ ಅಪಾರ ಸಂಖ್ಯೆಯ ಬೆಂಬಲಿಗರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು: ತಾಯಿ ಸೇರಿ ಐವರು ಆಸ್ಪತ್ರೆಗೆ ದಾಖಲು

ಬೀದರ್, ಜೂ.12: ಮಾವಿನ ಹಣ್ಣು ತಿಂದು ಅಸ್ವಸ್ಥಗೊಂಡಿದ್ದ ಬೀದರ್ ಮೂಲದ ಇಬ್ಬರು ಸಹೋದರಿಯರು ಚಿಕಿತ್ಸೆ ಫಲಿಸದೆ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಬೀದರ್ ಜಿಲ್ಲೆ ಔರಾದ್ ತಾಲೂಕಿನ ಶೆಂಬೆಳ್ಳಿ ಗ್ರಾಮದ ನಿವಾಸಿಗಳು ಆಗಿರುವ ಭವಾನಿ ವೈಜಿನಾಥ ಮೇತ್ರೆ (17) ಮತ್ತು ಸಂಧ್ಯಾರಾಣಿ ಮೇತ್ರೆ (14) ಮೃತಪಟ್ಟ ದುರ್ದೈವಿ ಬಾಲಕಿಯರು ಎಂದು ಹೇಳಲಾಗಿದೆ. ಮನೆಯಲ್ಲಿ ಊಟದ ಬಳಿಕ ಎಲ್ಲರೂ ಸೇರಿ ಮಾವಿನಹಣ್ಣು ತಿಂದಿದ್ದಾರೆ. ಸ್ವಲ್ಪ ಹೊತ್ತಿನ ನಂತರ ತಾಯಿ ಇಂದುಮತಿ ಹಾಗೂ ಐವರು ಹೆಣ್ಣುಮಕ್ಕಳು ಅಸ್ವಸ್ಥಗೊಂಡಿದ್ದಾರೆ ಎಂದು ಹೇಳಲಾಗಿದೆ….

Read More

ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ: ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ – Kannada News | Grant Discrimination Row: Former CM Siddaramaiah Clarifies Fund Allocation Criteria for Backward Class Institutions

ಬೆಂಗಳೂರು, ಜೂನ್​​ 12: ಕರ್ನಾಟಕದ ಹಿಂದುಳಿದ ವರ್ಗಗಳ ಇಲಾಖೆಯಿಂದ ಅನುದಾನ ಹಂಚಿಕೆಯಲ್ಲಿ ತಾರತಮ್ಯ ನಡೆದಿದೆ ಎಂಬ ಆರೋಪಗಳು ಕೇಳಿಬಂದ ಬೆನ್ನಲ್ಲೇ ಈ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ನೀಡಲಾಗಿದ್ದ ಮನವಿಗಳನ್ನು ಪರಿಶೀಲಿಸಿ ಸುಮಾರು 155 ಹಿಂದುಳಿದ ವರ್ಗಗಳ ಸಂಘ – ಸಂಸ್ಥೆಗಳಿಗೆ 71.85 ಕೋಟಿ ರೂ. ವೆಚ್ಚದಲ್ಲಿ ಸಮುದಾಯ ಭವನ ಮತ್ತು ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕೆ ಪೂರ್ವಭಾವಿ ಮಂಜೂರಾತಿಯನ್ನು ಇಲಾಖೆ ನೀಡಿದೆ. ಇದೇನು ಫಲಾನುಭವಿಗಳ ಅಂತಿಮ ಪಟ್ಟಿ ಅಲ್ಲ ಎಂದವರು ತಿಳಿಸಿದ್ದಾರೆ. ಎಕ್ಸ್​​ ಪೋಸ್ಟ್​​…

Read More

ಹೆಸರು ಪ್ರಸ್ತಾಪವಾದರೆ ಕ್ರಿಮಿನಲ್ ಆಗಲ್ಲ: ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ಫಸ್ಟ್ ರಿಯಾಕ್ಷನ್ – Kannada News | Priyank Kharge’s First Reaction to Chinnayya’s Allegations Against Prakash Raj in Dharmasthala Case

ಬೆಂಗಳೂರು, ಜೂನ್ 12: ಧರ್ಮಸ್ಥಳ ಬುರುಡೆ ಗ್ಯಾಂಗ್ ಪ್ರಕರಣಕ್ಕೆ ಸಂಬಂಧಿಸಿ ಮಾಸ್ಕ್​ಮ್ಯಾನ್ ಚಿನ್ನಯ್ಯ ಸಲ್ಲಿಸಿರುವ ರಿಟ್ ಅರ್ಜಿಯಲ್ಲಿ ನಟ ಪ್ರಕಾಶ್ ರಾಜ್ ಹೆಸರು ಉಲ್ಲೇಖವಾಗಿರುವುದು ಸಾಕಷ್ಟು ಕುತೂಹಲ ಕೆರಳಿಸಿದೆ. ಈ ಬಗ್ಗೆ ಗೃಹಸಚಿವ ಪ್ರಿಯಾಂಕ್ ಖರ್ಗೆ ಅವರು ಪ್ರತಿಕ್ರಿಯಿಸಿದ್ದು, ಚಿನ್ನಯ್ಯನ ಮಾತಿನ ಸತ್ಯಾಸತ್ಯತೆಯನ್ನು ಪರಿಶೀಲಿಸಬೇಕಿದೆ ಎಂದು ತಿಳಿಸಿದ್ದಾರೆ. ಎಷ್ಟು ಸತ್ಯ ಹೇಳುತ್ತಿದ್ದಾರೆ, ಎಷ್ಟು ಸುಳ್ಳಿದೆ ಗೊತ್ತಿಲ್ಲ ಎಂದು ಖರ್ಗೆ ಹೇಳಿದ್ದಾರೆ. ಪ್ರಕರಣವು ನ್ಯಾಯಾಲಯದಲ್ಲಿದ್ದು, ವಿಶೇಷ ತನಿಖಾ ದಳ (ಎಸ್ಐಟಿ)ಗೆ ಕೋರ್ಟ್ ಕೆಲವು ಪ್ರಶ್ನೆಗಳನ್ನು ಕೇಳಿದೆ. ಎಸ್ಐಟಿ ಮುಖ್ಯಸ್ಥರು…

Read More

ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​: ರಸ್ತೆ ಮಾರ್ಗವಾಗಿ ಕೊಲ್ಲೂರಿಗೆ ಪ್ರಯಾಣ – Kannada News | Tamil Nadu CM Joseph Vijay Lands in Mangaluru; Minister UT Khader Welcomes Him Ahead of Kollur Mookambika Temple Visit

ಮಂಗಳೂರು, ಜೂನ್ 12: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಕರ್ನಾಟಕಕ್ಕೆ ಭೇಟಿ ನೀಡುತ್ತಿರುವ ವಿಜಯ್ ಅವರಿಗೆ ವಿಮಾನ ನಿಲ್ದಾಣದಲ್ಲಿ ರಾಜ್ಯ ಸರ್ಕಾರದ ಪರವಾಗಿ ಆರೋಗ್ಯ ಸಚಿವ ಯುಟಿ ಖಾದರ್ ಪುಷ್ಪಗುಚ್ಛ ನೀಡಿ ಆತ್ಮೀಯವಾಗಿ ಸ್ವಾಗತಿಸಿದರು. ವಿಜಯ್ ಭೇಟಿಯ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸರೊಂದಿಗೆ ತಮಿಳುನಾಡು ಪೊಲೀಸರು ಸಹ ಸೇರಿ ಹೈ-ಸೆಕ್ಯೂರಿಟಿ ಒದಗಿಸಿದ್ದಾರೆ. ವಿಮಾನ ನಿಲ್ದಾಣದಿಂದ ಹೊರಬಂದ ವಿಜಯ್ ಅವರನ್ನು…

Read More

ಈಗಲೂ ಭಾರತವೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ: ವಿಶ್ವಬ್ಯಾಂಕ್ ವರದಿ – Kannada News | India Remains Fastest Growing Economy: World Bank Report Highlights Strong GDP Growth

ನವದೆಹಲಿ, ಜೂನ್ 12: ಜಾಗತಿಕ ಮಟ್ಟದಲ್ಲಿ ಅನಿಶ್ಚಿತತೆ ಮತ್ತು ಸವಾಲುಗಳಿದ್ದರೂ, ಭಾರತವು ವಿಶ್ವದಲ್ಲೇ ಅತಿ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿ (India’s GDP growth) ಮುಂದುವರಿಯಲಿದೆ ಎಂದು ವಿಶ್ವಬ್ಯಾಂಕ್‌ನ ಇತ್ತೀಚಿನ ‘ಗ್ಲೋಬಲ್ ಎಕನಾಮಿಕ್ ಪ್ರಾಸ್ಪೆಕ್ಟ್ಸ್’ (World Bank Global Economic Prospects) ವರದಿ ತಿಳಿಸಿದೆ. ಭಾರತದ ಈ ಉತ್ತಮ ಬೆಳವಣಿಗೆಗೆ ಕೆಲ ಪ್ರಮುಖ ಕಾರಣಗಳನ್ನು ಈ ವರದಿಯಲ್ಲಿ ಉಲ್ಲೇಖಿಸಲಾಗಿದೆ. ವಿಶ್ವಬ್ಯಾಂಕ್ ವರದಿಯಲ್ಲಿರುವ ಪ್ರಮುಖ 5 ಅಂಶಗಳು ಇಲ್ಲಿ ಪ್ರಸ್ತಾಪಿಸಲಾಗಿದೆ. 1) ಭಾರತವೇ ನಂಬರ್ ಒನ್ ಆರ್ಥಿಕತೆ ಪ್ರಸಕ್ತ…

Read More

Meenakshi Natarajan: ರಾಜ್ಯಸಭಾ ನಾಮಪತ್ರ ತಿರಸ್ಕಾರ ಪ್ರಶ್ನಿಸಿ ಮೀನಾಕ್ಷಿ ನಟರಾಜನ್ ಸಲ್ಲಿಸಿದ್ದ ಅರ್ಜಿ ಸುಪ್ರೀಂಕೋರ್ಟ್​​ನಲ್ಲಿ ವಜಾ – Kannada News | Supreme Court Upholds Meenakshi Natarajan’s Rajya Sabha Nomination Rejection

ನವದೆಹಲಿ, ಜೂನ್ 12: ರಾಜ್ಯಸಭಾ ಚುನಾವಣೆಯ ನಾಮಪತ್ರ ತಿರಸ್ಕಾರ ಪ್ರಶ್ನಿಸಿ ಕಾಂಗ್ರೆಸ್ ನಾಯಕಿ ಮೀನಾಕ್ಷಿ ನಟರಾಜನ್(Meenakshi Natarajan) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಮೇಲ್ನೋಟಕ್ಕೆ ಇದು ಹಿನ್ನಡೆಯಾಗಿ ಕಂಡರೂ, ಈ ತೀರ್ಪಿನ ಹಿಂದೆ ಪ್ರಜಾಪ್ರಭುತ್ವದ ಆಶಯಗಳನ್ನು ಎತ್ತಿಹಿಡಿಯುವ ಮತ್ತು ಕಾನೂನು ಪ್ರಕ್ರಿಯೆಯನ್ನು ಮತ್ತಷ್ಟು ಬಲಪಡಿಸುವ ಕೆಲವು ಅತ್ಯಂತ ಸಕಾರಾತ್ಮಕ ಭರವಸೆಗಳಿವೆ. ವಿಚಾರಣೆ ನಡೆಸುವಾಗ, ಚುನಾವಣಾ ಅಧಿಕಾರಿಯೊಬ್ಬರು ಅಭ್ಯರ್ಥಿಯ ನಾಮಪತ್ರವನ್ನು ತಿರಸ್ಕರಿಸಿದರೆ, ಚುನಾವಣಾ ಆಯೋಗವನ್ನು ಸಂಪರ್ಕಿಸುವುದು ಸೂಕ್ತ ಪರಿಹಾರ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಅಭಿಪ್ರಾಯಪಟ್ಟಿದೆ. ನಟರಾಜನ್…

Read More

ಡಾಲರ್ ಎದುರು ರುಪಾಯಿ ಮೌಲ್ಯ 67 ಪೈಸೆ ಜಿಗಿತ; 10 ದಿನದಲ್ಲಿ 100 ಪೈಸೆ ಮೌಲ್ಯ ಹೆಚ್ಚಳ – Kannada News | US Dollar vs Rupee, Indian currency value rises on Friday, know the reasons why

ಡಾಲರ್ ವರ್ಸಸ್ ರುಪಾಯಿImage Credit source: Shutterstock ನವದೆಹಲಿ, ಜೂನ್ 12: ಡಾಲರ್ ಎದುರು ಸತತ ಕುಸಿಯುತ್ತಾ ಬಂದಿರುವ ಭಾರತದ ಕರೆನ್ಸಿ (Indian Rupee) ಶುಕ್ರವಾರದ (ಜೂನ್ 12) ವಹಿವಾಟಿನಲ್ಲಿ ಮೌಲ್ಯ ಹೆಚ್ಚಿಸಿಕೊಂಡಿದೆ. ಇಂದು ರೂಪಾಯಿ ಮೌಲ್ಯವು ಭಾರಿ ಚೇತರಿಕೆ ಕಂಡಿದ್ದು, ಬರೋಬ್ಬರಿ 67 ಪೈಸೆ ಏರಿಕೆಯೊಂದಿಗೆ 95.18 ರೂ. ಮಟ್ಟದಲ್ಲಿ ವಹಿವಾಟು ಆರಂಭಿಸಿದೆ. ಒಂದು ಹಂತದಲ್ಲಿ 100 ರೂ ಗಡಿ ದಾಟಬಹುದು ಎನ್ನುವ ಸ್ಥಿತಿ ಇತ್ತು. ಮೇ ತಿಂಗಳ ಮೂರನೇ ವಾರದಲ್ಲಿ ಡಾಲರ್ ಎದುರು ಭಾರತೀಯ…

Read More