ಸಂಜು ಸ್ಯಾಮ್ಸನ್ಗಿಂತಲೂ ಈತ ಟೂರ್ನಮೆಂಟ್ ಆಟಗಾರ ಪ್ರಶಸ್ತಿಗೆ ಅರ್ಹ ಎಂದ ಡಿವಿಲಿಯರ್ಸ್
2026 ರ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಭಾರತ ತಂಡವು ನ್ಯೂಜಿಲೆಂಡ್ ತಂಡವನ್ನು 96 ರನ್‌ಗಳಿಂದ ಸೋಲಿಸಿ ಚಾಂಪಿಯನ್ ಆಯಿತು. ಕೊನೆಯ ಮೂರು ಪಂದ್ಯಗಳಲ್ಲಿ ಹ್ಯಾಟ್ರಿಕ್ ಅರ್ಧಶತಕ ಬಾರಿಸಿದ್ದ ಸಂಜು ಸ್ಯಾಮ್ಸನ್ ತಂಡವನ್ನು ಚಾಂಪಿಯನ್ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಹೀಗಾಗಿ ಅವರಿಗೆ ಟೂರ್ನಮೆಂಟ್ ಆಟಗಾರ ಪ್ರಶಸ್ತಿಯೂ ಲಭಿಸಿತು. ಆದರೆ ಜಸ್ಪ್ರೀತ್ ಬುಮ್ರಾ ಈ ಪ್ರಶಸ್ತಿಗೆ ಅರ್ಹರಾಗಿದ್ದರು ಎಂದು ಎಬಿ ಡಿವಿಲಿಯರ್ಸ್ ಅಭಿಪ್ರಾಯ ಪಟ್ಟಿದ್ದಾರೆ. ಈ ಬಗ್ಗೆ ಅಭಿಪ್ರಾಯ ಹಂಚಿಕೊಂಡಿರುವ ಎಬಿ ಡಿವಿಲಿಯರ್ಸ್, ‘ಈ ಪ್ರಶಸ್ತಿಗಾಗಿ ಸಂಜು ಸ್ಯಾಮ್ಸನ್ ಮತ್ತು…