20 ವರ್ಷದ ಹಿಂದೆಯೇ 16,700 ರೂ ಕಟ್ಟಿದ್ರೂ ಇದುವರೆಗೂ ಇ ಖಾತಾ ಸಿಕ್ಕಿಲ್ಲ, ಇದು ಅಧಿಕಾರಿಗಳ ಕಾರ್ಯವೈಖರಿ
ಬೆಂಗಳೂರು, (ಮಾರ್ಚ್ 12): ಹಿಂದಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಈಗಿನ ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಯಾವುದೇ ಆಸ್ತಿ ವಹಿವಾಟು ನೋಂದಣಿಗೆ ಇ-ಖಾತಾ ಕಡ್ಡಾಯಗೊಳಿಸಿದೆ. ಇದರಿಂದ ಹಲವು ಸಮಸ್ಯೆಗಳು ಸಹ ಉಂಟಾಗಿದ್ದು, ಇ ಖಾತಾಕ್ಕಾಗಿ ಸಾರ್ವಜನಿಕರು ಪರದಾಡುತ್ತಿದ್ದಾರೆ. ಜಿಬಿಎ ಅಧಿಕಾರಿಗಳು ಮಾತ್ರ ಜನರ ಸಮಸ್ಯೆ ಏನು ಎನ್ನುವುದನ್ನೂ ತಿಳಿದುಕೊಳ್ಳುವ ಗೋಚಿಗೂ ಹೋಗಲ್ಲ. ಇದಕ್ಕೆ ಪೂರಕವೆಂಬಂತೆ ಬೆಂಗಳೂರಿನ ರಂಗನಾಯಕಿ ಮಹಿಳೆಯೊಬ್ಬರು ಇ ಖಾತಾಕ್ಕಾಗಿ ಇಪ್ಪತ್ತು ವರ್ಷಗಳಿಂದ ಹಿಂದೆ ಅಂದ್ರೆ 2006ರಲ್ಲಿ 16,700 ರೂಪಾಯಿ ಶುಲ್ಕ ಕಟ್ಟಿದ್ದಾರೆ….