ಓದುತ್ತಿದ್ದ ಶಾಲಾ ಕಟ್ಟಡದಿಂದ ಜಿಗಿದು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ: ಕಾರಣ?
ಬೀದರ್, ಮಾರ್ಚ್ 11: ಶಾಲಾ ಕಟ್ಟಡದಿಂದ ಜಿಗಿದು 16 ವರ್ಷದ ಬಾಲಕಿ ಆತ್ಮಹತ್ಯೆ (death) ಮಾಡಿಕೊಂಡಿರುವಂತಹ ಘಟನೆ ಬೀದರ್ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಭೆಮಳಖೇಡ ಗ್ರಾಮದಲ್ಲಿ ನಡೆದಿದೆ. ಮದಿಯಾ ನಶೀರ್ ಪಾಷಾ ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಭೆಮಳಖೇಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಹಪಾಠಿ ಲವ್ ಮಾಡುವಂತೆ ಕಿರುಕುಳ ನೀಡಿದ್ದಕ್ಕೆ ಮದಿಯಾ ನಶೀರ್ ಪಾಷಾ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಟಿವಿ9ಗೆ ಮೃತ ಮದಿಯಾ ಚಿಕ್ಕಪ್ಪ ಎಂ.ಡಿ.ಯೂಸುಫ್ ಹೇಳಿಕೆ ನೀಡಿದ್ದಾರೆ….