ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ವಿವಾದಿತ ಕಥಾಹಂದರ ಹೊಂದಿದೆ ಎಂಬ ಕಾರಣಕ್ಕೆ ‘ದಿ ಕೇರಳ ಸ್ಟೋರಿ 2’ (The Kerala Story 2) ಸಿನಿಮಾಗೆ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ಈಗ ಈ ಸಿನಿಮಾವನ್ನು ಬಿಜೆಪಿಯ ಕೆಲವು ಶಾಸಕರು ವೀಕ್ಷಿಸಿದ್ದಾರೆ. ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಮಂತ್ರಿಮಾಲ್ನಲ್ಲಿ ಸಿನಿಮಾ ವೀಕ್ಷಣೆ ಮಾಡಲಾಗಿದೆ. ವಿಪಕ್ಷ ನಾಯಕರಾದ ಆರ್. ಅಶೋಕ್ (R Ashok), ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಬಿಜೆಪಿ ಶಾಸಕರು ಮತ್ತು ಪರಿಷತ್ ಸದಸ್ಯರು ಸಿನಿಮಾ ನೋಡಿದ್ದಾರೆ. ರಾಜ್ಯ ಬಿಜೆಪಿಯಿಂದ ಸಿನಿಮಾ ವೀಕ್ಷಣೆಗಾಗಿ ವ್ಯವಸ್ಥೆ ಮಾಡಲಾಗಿತ್ತು. ಈ ಸಿನಿಮಾಗೆ ಕಾಮಾಕ್ಯ…