ಡಾಲರ್ ಎದುರು 96 ದಾಟಿ ಸಾರ್ವಕಾಲಿಕ ಕೆಳಮಟ್ಟಕ್ಕೆ ಕುಸಿದ ರೂಪಾಯಿ; ಭಾರತೀಯ ಕರೆನ್ಸಿಯ ಐತಿಹಾಸಿಕ ಕಳಪೆ ಸಾಧನೆ – Kannada News | Rupee Hits Record Low: Drops 20 Paise to cross 96 Against US Dollar
ನವದೆಹಲಿ, ಮೇ 18: ಜಾಗತಿಕ ಆರ್ಥಿಕ ಮಾರುಕಟ್ಟೆಯಲ್ಲಿನ ತಲ್ಲಣಗಳು ಮತ್ತು ವಿದೇಶಿ ಸಾಂಸ್ಥಿಕ ಹೂಡಿಕೆದಾರರು ಭಾರತೀಯ ಮಾರುಕಟ್ಟೆಯಿಂದ ಸತತವಾಗಿ ಬಂಡವಾಳವನ್ನು ಹಿಂತೆಗೆದುಕೊಳ್ಳುತ್ತಿರುವುದು ದೇಶೀಯ ಕರೆನ್ಸಿಯ ಮೇಲೆ ತೀವ್ರ ನಕಾರಾತ್ಮಕ ಪರಿಣಾಮ ಬೀರಿದೆ. ಸೋಮವಾರದ ಆರಂಭಿಕ ವಹಿವಾಟಿನಲ್ಲಿ ಅಮೆರಿಕನ್ ಡಾಲರ್ ಎದುರು ಭಾರತೀಯ ರೂಪಾಯಿ ಮೌಲ್ಯವು (Indian Rupee value) ತೀವ್ರ ಕುಸಿತವನ್ನು ಕಾಣುವ ಮೂಲಕ ಇತಿಹಾಸದಲ್ಲೇ ಅತ್ಯಂತ ಕನಿಷ್ಠ ಮಟ್ಟವನ್ನು ತಲುಪಿದೆ. ಸೋಮವಾರದ ಫಾರೆಕ್ಸ್ ವಹಿವಾಟು ವೇಳೆ ಡಾಲರ್ ಎದುರು ರುಪಾಯಿ 96.27 ಮಟ್ಟಕ್ಕೆ ಕುಸಿದಿತ್ತು. ಇದು…